ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ಕಾರ್ಕಳ ತಾಲೂಕಿನ ಕುಕ್ಕುಂದೂರು ವಲಯ ಮಟ್ಟದ ನೂತನ ಸಂಘವನ್ನು ಪೊಸನೊಟ್ಟು ಅಂಬೇಡ್ಕರ್ ಭವನದಲ್ಲಿ ಉದ್ಘಾಟಿಸಲಾಯಿತು. ನೂತನ ಸಂಘದ ಉದ್ಘಾಟನೆಯನ್ನು ಕುಕ್ಕುಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶಶಿಕಲಾ ಅವರು ದೀಪವನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವೇದಿಕೆಯಲ್ಲಿ ಸಮುದಾಯದ ಹಿರಿಯರು ಸುಧಾಕರ ಹಾಗೂ ಗೋಪ ಅವರು ಡೋಲು ಬಾರಿಸುವ ಮೂಲಕ ಸಂಘಟನೆಗೆ ಚಾಲನೆ ನೀಡಿದರು. ಪ್ರಾಸ್ತಾವಿಕ ಸಂಘಟನೆಯ ಬಲವರ್ಧನೆ ಕುರಿತು ಹಾಗೂ ಸಂಘನೆ ಬೆಳೆದು ಬಂದ ಹಾದಿಯ ಕುರಿತು ಜಿಲ್ಲಾ ಸಮಿತಿ ಮಾಜಿ ಅಧ್ಯಕ್ಷರಾದ ಬೊಗ್ರ ಕೊರಗ ಕೊಕ್ಕರ್ಣೆ ಇವರು ಮಾಹಿತಿ ನೀಡಿದರು. ನಂತರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಚುನಾವಣಾ ಅಧಿಕಾರಿಯಾಗಿ ಒಕ್ಕೂಟದ ನಿಕಟ ಪೂರ್ವ ಕೋಶಾಧಿಕಾರಿ ಸತೀಶ್ ಪೆರ್ಡೂರು ಹಾಗೂ ಗೆಳೆಯರ ಬಳಗ ತಂಡದ ಅಧ್ಯಕ್ಷರು ಚಂದ್ರ ಕಳ್ತೂರು ನೆರವೇರಿಸಿದರು. ಅಧ್ಯಕ್ಷರಾಗಿ ಶಶಿಕಲಾ ಪಡ್ಯ, ಉಪಾಧ್ಯಕ್ಷರು ಸುಧಾಕರ ಕುಕ್ಕುಂದೂರು, ಕಾರ್ಯದರ್ಶಿ ಗೀತಾ ಪೊಸನೊಟ್ಟು, ಕೋಶಾಧಿಕಾರಿ ವಸಂತ, ಜೊತೆ ಕಾರ್ಯದರ್ಶಿ ಲಿಖಿತ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಸಹಕಾರ ಸಂಘವು 2024-25 ನೇ ಸಾಲಿನಲ್ಲಿ 3.55 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ತನ್ನ ಸದಸ್ಯರಿಗೆ ಶೇ 17 ಲಾಭಾಂಶ (ಡಿವಿಡೆಂಟ್) ಘೋಷಿಸಿದೆ. ಆಳ್ವಾಸ್ ಕೃಷಿಸಿರಿ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಸಂಘದ 2024-25 ನೇ ಸಾಲಿನ 9ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಕಟಿಸಲಾಯಿತು. ವಾರ್ಷಿಕ ವರದಿ ವಾಚಿಸಿದ ಸಂಘದ ಕಾರ್ಯ ನಿರ್ವಹಣಾಧಿಕಾರಿ ಅರ್ಪಿತಾ ಶೆಟ್ಟಿ, ಸಂಘವು ಈ ಸಾಲಿನಲ್ಲಿ 170 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, ಕಳೆದ ವಿತ್ತೀಯ ವರ್ಷಕ್ಕಿಂತ ಈ ವರ್ಷ 19 ಲಕ್ಷದಷ್ಟು ಹೆಚ್ಚಿನ ಲಾಭ ಗಳಿಸಿದೆ. ಶೇ 99.62 ಸಾಲ ವಸೂಲಾತಿ ಮಾಡಿದೆ. 2016ರ ಜುಲೈ 10 ರಂದು ಸಂಘ ಆರಂಭಗೊಂಡಿದ್ದು, ಪ್ರಸ್ತುತ 5543 ಸದಸ್ಯರಿದ್ದಾರೆ ಎಂದು ಮಾಹಿತಿ ನೀಡಿದರು. ಆಳ್ವಾಸ್ ಸಹಕಾರಿ ಸಂಘದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ನಮ್ಮ ಆಳ್ವಾಸ್ ಸಹಕಾರಿ ಸಂಘ ಮುಂದಿನ ವರ್ಷ ತನ್ನ ದಶಮಾನೋತ್ಸವದ ಹಿರಿಮೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಮೂರನೇ ಹಂತದಲ್ಲಿ ಅರ್ಜಿದಾರರು ತಮಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕುಂದಾಪುರ ಹಾಗೂ ನೇತಾಜಿ ಸರ್ಕಾರಿ ಪ್ರೌಢಶಾಲೆ ಕಾಳಾವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 14ರ ವಯೋಮಿತಿಯ ವಿಭಾಗದಲ್ಲಿ ಎಸ್ ವಿ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಯುವಕ ಹಾಗೂ ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಯೋಜನೆಯನ್ನು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಹಯೋಗದೊಂದಿಗೆ Elevate (Minorities) -2025 ರಲ್ಲಿನ ಮಾರ್ಗಸೂಚಿಗಳೊಂದಿಗೆ ಜಾರಿಗೊಳಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://eitbt.karnataka.gov.in/en ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 080-2223100 ಅಥವಾ ಇ-ಮೇಲ್ elevate.ktech@ka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ಹೊಸಬದುಕು ಆಶ್ರಮಕ್ಕೆ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೊ. ಆಪರೇಟಿವ್ ಕಲ್ಯಾಣಪುರ ಶಾಖೆ ವತಿಯಿಂದ ಸೋಲಾಪುರ ಚಾದರ ಹಾಗೂ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ ಉದ್ಘಾಟಿಸಿ, ಮಾತನಾಡಿ, ಸಹಕಾರಿ ಸಂಘವೊಂದು ಸಾಮಾಜಿಕವಾಗಿ ಸೇವಾ ಕಾರ್ಯ ನಿಜಕ್ಕೂ ಶ್ಲಾಘನೀಯ. ಸಮಾಜದಲ್ಲಿ ಸರಕಾರದ ಸೌಲಭ್ಯಗಳು ಕಟ್ಟಕಡೆಯ ವ್ಯಕ್ತಿಗಳಿಗೂ ತಲುಪಬೇಕೆಂಬ ಮಹದಾಸೆ ನಾವೆಲ್ಲರೂ ಕಾಣುತ್ತದೆ ಆದರೆ ಪ್ರಸ್ತುತ ದಿನಗಳಲ್ಲಿ ಅದು ಶ್ರೀಮಂತರ ಪಾಲಾಗುತ್ತಿದೆ. ಈ ನಿಟ್ಟಿನಲ್ಲಿ ಬಡ ಹಾಗೂ ಮಧ್ಯಮವರ್ಗ ಜನಸಾಮಾನ್ಯರು ಸಮಾಜದಲ್ಲಿ ಸೇವಾಮನೋಭಾವನೆಯಲ್ಲಿ ಕಾರ್ಯನಿರ್ವಹಿಸುವುದನ್ನು ಕಾಣುತ್ತಿದ್ದೇವೆ,ತುಳಿತ್ತಕ್ಕೊಳಗಾದವರಿಗೆ ನೆರವು ಹಾಗೂ ಆಶ್ರಮಗಳಿಗೆ ಧ್ಯೆರ್ಯ ತುಂಬಿ ಸಮಾಜದ ಉನ್ನತಿಯಲ್ಲಿ ತೊಡಗಿಕೊಳ್ಳೋಣ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಕಳಿಬೈಲುನ ಆಡಳಿತ ಮೊಕ್ತೇಸರರಾದ ಎಂ. ಸಿ. ಚಂದ್ರಶೇಖರ ವಹಿಸಿದ್ದರು. ಈ ಸಂದರ್ಭದಲ್ಲಿ ಮಿಲಾಗ್ರಿಸ್ ಕ್ರೆಡಿಟ್ ಕೊ. ಸೊಸೈಟಿ ಕಲ್ಯಾಣಪುರ ಶಾಖೆ ವತಿಯಿಂದ ಪರಿಕರಗಳನ್ನು ಹಸ್ತಾಂತರಿಸಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮ ಜಗತ್ತನ್ನು ಸೃಷ್ಟಿಸುತ್ತಾನೆ. ನಂತರ, ಗುರುವೆಂಬ ಪರಬ್ರಹ್ಮ ಮಕ್ಕಳ ಬದುಕಿಗೆ ದೀವಿಗೆಯಾಗುತ್ತಾನೆ ಎಂದು ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಮಾಧವಿ ಎಸ್. ಭಂಡಾರಿ ನುಡಿದರು. ಅವರು ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಗುರುವಂದನೆ ಸ್ವೀಕರಿಸಿ ಮಾತನಾಡಿದರು. ನಮ್ಮ ಬದುಕಿನಲ್ಲಿ ಹೆತ್ತ ತಾಯಿ ಮೊದಲ ಗುರು. ಸತ್ಯ, ಧರ್ಮ, ನ್ಯಾಯ ನೀತಿಯ ಬಗ್ಗೆ ಮನೆಯಲ್ಲಿ ಮಕ್ಕಳಿಗೆ ತಿಳಿಸಿಕೊಡುವವಳು ತಾಯಿ. ತದನಂತರ ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿರುತ್ತದೆ. ಗುರುವು ತ್ರಿಮೂರ್ತಿಗಳ ಸ್ವರೂಪ ಎಂದು ವಿವರಿಸಿದರು.ಇನ್ನು ಶಿಕ್ಷಕರು ಕೂಡ ಮಕ್ಕಳ ಜೊತೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳಬೇಕು. ಮಕ್ಕಳಿಗೆ ಜೀವನದ ಮೌಲ್ಯ ಕಲಿಸಿಕೊಡಬೇಕು ಎಂದು ಕಿವಿಮಾತು ನುಡಿದರು. ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ, ಶಿಕ್ಷಕರನ್ನು ಶಿಲ್ಪಿಗಳೆಂದು ಕರೆಯುತ್ತಾರೆ. ಸಮಾಜವನ್ನು ತಿದ್ದುವವರು ಶಿಕ್ಷಕರು. ತಾವು ಕಲಿಸಿದ ವಿದಾರ್ಥಿಗಳು ಉನ್ನತ ಸ್ಥಾನಕ್ಕೆ ಹೋದಾಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಮನೆಯೊಂದರಲ್ಲಿ ಹಣವನ್ನು ಪಣವನ್ನಾಗಿರಿಸಿ ಅಂದರ್ ಬಾಹರ್ ಇಸ್ವೀಟ್ ಜುಗಾರಿ ಆಟುತ್ತಿದ್ದ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ದಾಳಿ ನಡೆಸಿ ಹನ್ನೊಂದು ಮಂದಿ ಜುಗಾರಿಕೋರರನ್ನು ಬಂಧಿಸಿದ ಘಟನೆ ಇತ್ತಿಚಿಗೆ ನಡೆದಿದೆ. ನೀಲಾವರ ಗ್ರಾಮದ ಮನೆಯಲ್ಲಿ ಹಣವನ್ನು ಪಣವನ್ನಾಗಿಟ್ಟು ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಟ ಆಡುತ್ತಿರು ಮಾಹಿತಿ ಆಧರಿಸಿ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕ ಅಶೋಕ್ ಮಾಳಾಬಗಿ ಮತ್ತು ಸಿಬ್ಬಂದಿಗಳು ಶುಕ್ರವಾರ ರಾತ್ರಿ7:30ರ ವೇಳೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳಾದ ನೀಲಾವರದ ಸದಾಶಿವ ದೇವಾಡಿಗ (48), 52 ಹೇರೂರಿನ ಪ್ರಸನ್ನ(43) ರಜಾಕ್(55), ಚೇರ್ಕಾಡಿಯ ಭಾಸ್ಕರ(48), ಕೊಡವೂರಿನ ಅಶೋಕ(47), ಉದ್ದಿನಹಿತ್ಲು ಕೊಡವೂರು ಗ್ರಾಮ, ತೆಂಕನಿಡಿಯೂರಿನ ಹರೀಶ್ ನಾಯ್ಕ(35), ಪುತ್ತೂರು ಗ್ರಾಮದ ಚಂದ್ರಹಾಸ (40), ಬೇಳೂರು ಗ್ರಾಮದ ರವಿಕುಮಾರ(57), ಚೇರ್ಕಾಡಿಯ ಶಶಿಕಾಂತ (36), ಕುಕ್ಕುಂಜೆಯ ಆನಂದ ಕೋಟ್ಯಾನ (63), ಚೇರ್ಕಾಡಿಯ ಸಂಪತ್ (37) ಎಂಬರುಗಳನ್ನು ವಶಕ್ಕೆ ಪಡೆದಿದ್ದಾರೆ, ಆರೋಪಿಗಳು ಅಂದರ್ ಬಾಹರ್ ಇಸ್ಫಿಟ್ ಜುಗಾರಿ ಆಡುತ್ತಿರುವ ಬಗ್ಗೆ ತಮ್ಮ ತಪ್ಪನ್ನು ಒಪ್ಪಿಕೊಂಡಿರುತ್ತಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.07: ತಾಲೂಕಿನ ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಈಜಲು ತೆರಳಿದ್ದ ನಾಲ್ವರು ಯುವಕರಲ್ಲಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿದ್ದ ಓರ್ವನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಗಳೂರಿಂದ ಬಂದಿದ್ದ 10 ಮಂದಿ ಯುವಕರ ತಂಡವು ಕುಂಭಾಸಿಯ ಲಾಡ್ಜಿನಲ್ಲಿ ತಂಗಿದ್ದರು. ಇಂದು ಮಧ್ಯಾಹ್ನ 9 ಮಂದಿ ಯುವಕರು ಸಮುದ್ರ ಸ್ನಾನ ಮಾಡಲೆಂದು ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಇಳಿದಿದ್ದಾರೆ. ಈ ವೇಳೆ ನಾಲ್ವರು ಸಮುದ್ರದ ಅಲೆಗೆ ಸಿಲುಕಿ ನಾಪತ್ತೆಯಾದ್ದರು. ಅಲೆಯಲ್ಲಿ ಕೊಚ್ಚಿ ಹೋಗಿದ್ದು ಓರ್ವನನ್ನು ತಕ್ಷಣ ಸ್ಥಳೀಯರು ಹಾಗೂ ಜೊತೆಗೆ ಇದ್ದ ಯುವಕರು ಸೇರಿ ಎತ್ತಿ ಮೇಲಕ್ಕೆ ತಂದಿದ್ದಾರೆ. ಗಂಭೀರ ಗೊಂಡಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಸ್ಥಳೀಯರ ಸಹಕಾರದಿಂದ ಇಬ್ಬರ ಮೃತದೇಹವನ್ನು ಪತ್ತೆ ಹಚ್ಚಲಾಯಿತು. ಇನ್ನೋರ್ವನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನೂರಾರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಬಂಧಿತರು. ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್‌ಐ ಹಾಗೂ ಸಿಬ್ಬಂದಿ ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಬಳಿ ಕಾಯುತ್ತಿದ್ದಾಗ ಪೊಲೀಸರ ಹತ್ಯೆಗೆ ಯತ್ನಿಸಲಾಗಿತ್ತು. ಕಳೆದ ತಿಂಗಳು ಆ.5 ಮುಂಜಾನೆ ಹೆಜಮಾಡಿ ಟೋಲ್ ಗೇಟ್ ಬಳಿ ಪೊಲೀಸರು ಖಚಿತ ವರ್ತಮಾನದಂತೆ ವಾಹನ ತಪಾಸಣೆಯಲ್ಲಿದ್ದಾಗ ಫಾರ್ಚುನರ್ ಕಾರು ಬಂದಿದ್ದು ಅದರಲ್ಲಿ ಐದಾರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಲಾಗಿತ್ತು. ಕಾರಿನ ಚಾಲಕನ ಬಳಿ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ, ಆರೋಪಿಗಳು ನಮ್ಮನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬರುತ್ತೀರಾ? ಎಂದು ಕೇಳಿ ಪೊಲೀಸರ ಮೇಲೆ ಕಾರನ್ನು ಚಲಾಯಿಸಿ ಕೊಲೆಗೆ ಪ್ರಯತ್ನಿಸಿದ್ದಾರೆ. ಬಳಿಕ ಪೊಲೀಸರು ಕಾರಿನಲ್ಲಿದ್ದ ಶಾರೋಜ್ ಸುರತ್ಕಲ್ ಎಂಬಾತನನ್ನು ವಶಕ್ಕೆ ಪಡೆದಿದ್ದು…
