Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ರಾಷ್ಟ್ರೀಯ ಹೆದ್ದಾರಿಯ ಸನಿಹದಲ್ಲಿರುವ ಮಣೂರು ಶ್ರೀ ಮಹಾಲಿಂಗೇಶ್ವರ ಪಂಚಮುಖಿ ಹೇರಂಭ ಮಹಾಗಣಪತಿ ದೇಗುಲದ ವಾರ್ಷಿಕ ರಥೋತ್ಸವ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು. ರಥೋತ್ಸವವು ಕೋಟ ರಾಷ್ಟ್ರೀಯ ಹೆದ್ದಾರಿಯ ಮೂಲಕ ಅಮೃತೇಶ್ವರಿ ದೇಗುಲದ ಸಮೀಪ ತೆರಳಿ ಮುಂದುವರಿಯಿತು. ಭಕ್ತ ಸಮುದಾಯ ಮಹಾಲಿಂಗೇಶ್ವರನ ತೇರನೆಳೆದು ಸಂಭ್ರಮಿಸಿಕೊoಡರು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ವೈಭವದ ರಥೋತ್ಸವ ಸುಮಾರು ಒಂದು ವರೆ ಕಿ.ಮೀ ಸಂಚರಿಸಿದ ರಥೋತ್ಸವದಲ್ಲಿ ಕೀಲು ಕುದುರೆ, ವಿವಿಧ ರೀತಿಯ ಗೊಂಬೆಗಳು, ಸ್ತಬ್ಧ ಚಿತ್ರಗಳು, ಕೇರಳ ಚೆಂಡೆ, ವಾದ್ಯಘೋಷಗಳು, ತಟ್ಟಿರಾಯ ಹೀಗೆ ನಾನಾ ರೀತಿಯ ವಿಶೇಷತೆಗಳು ರಥೋತ್ಸವದಲ್ಲಿ ಕಂಡುಬoತು. ದೇಗುಲದ ಅಧ್ಯಕ್ಷ ಸತೀಶ್ ಹೆಚ್ ಕುಂದರ್,ಟ್ರಸ್ಟಿಗಳಾದ ರವಿ ಐತಾಳ್,ಅಶೋಕ್ ಶೆಟ್ಟಿ, ದಿವ್ಯ ಪ್ರಭು,ಅಚ್ಯುತ್ ಹಂದೆ,ಸುಫಲ ಶೆಟ್ಟಿ,ದಿನೇಶ್ ಆಚಾರ್, ಚಂದ್ರ ಹರ್ತಟ್ಟು,ಜೀರ್ಣೋದ್ಧಾರ ಸಮಿತಿಯ ಪ್ರಮುಖರಾದ ಅರುಣಾಚಲ ಮಯ್ಯ,ವಿಷ್ಣುಮೂರ್ತಿ ಮಯ್ಯ, ಮಹೇಶ್ ಹೊಳ್ಳ, ಗೋಪಾಲ ಪೈ, ರಾಜೇಂದ್ರ ಉರಾಳ, ಸೇರಿದಂತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಭಾರತೀಯ ಜೀವ ವಿಮಾ ನಿಗಮ ಮೈಕ್ರೋ ಇನ್ಸೂರೆನ್ಸ್ ವಿಭಾಗುಡುಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು ಇವರ ಆಶ್ರಯದಲ್ಲಿ ವಿಮಾ ಗ್ರಾಮ 2024-25 ಅಂಗವಾಗಿ ಕೋಟದ ಕಾಸನಗುಂದು ಅಂಗನವಾಡಿಗೆ ಸೋಲಾರ್ ದಾರಿದೀಪ ಹಾಗೂ ವಾಟರ್ ಫಿಲ್ಟರ್‌ನ್ನು ಕೊಡುಗೆಯಾಗಿ ನೀಡಿದ್ದು ಅದನ್ನು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ಗಣೇಶ ಬಿ. ಲೋಕಾರ್ಪಣೆಗೊಳಿಸಿದರು. ಭಾರತೀಯ ಜೀವವಿಮಾ ಸಂಸ್ಥೆಯ ದಿನೇಶ್ ಪ್ರಭು ಸೋಲಾರ್ ದೀಪವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್, ಕೋಟ ಗ್ರಾಮಪಂಚಾಯತ್ ಮಾಜಿ ಸದಸ್ಯ ಚಂದ್ರ ಪೂಜಾರಿ, ಲೆಕ್ಕಪರಿಶೋಧಕ ಶೇಖರ್, ಸ್ಥಳೀಯ ಕೃಷಿಕ ರಾಘವೇಂದ್ರ ಮಡಿವಾಳ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿ ಸರೋಜ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷೆ ಸ್ಮಿತಾ ರಾಘವೇಂದ್ರ, ಅಂಗನವಾಡಿ ಕಾರ್ಯಕರ್ತೆ ನೇತ್ರಾ, ಸಹಾಯಕಿ ಜಲಜ ಮತ್ತಿತರರು ಉಪಸ್ಥಿತರಿದ್ದರು. ಗ್ರಾ.ಯೋ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯುವ ಜನಾಂಗ ಸಂಘಟನೆಯ ಮೂಲಕ ಸಮಾಜ ಕಟ್ಟುವ ಕಾಯಕದಲ್ಲಿ ನಿರತರಾಗಿದ್ದಾರೆ ಇದಕ್ಕೆ ಮಣೂರು ಫ್ರೆಂಡ್ಸ್ ಸಾಕ್ಷಿ ಎಂದು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಹೇಳಿದರು. ಅವರು ಮಣೂರು ಮಹಾಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಗೀತಾನಂದ ವೇದಿಕೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಇದರ ರಜತ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಬ್ಬ ಹರಿದಿನಗಳನ್ನು ವೇದಿಕೆಯಾಗಿರಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡ ಸಾಧಕರನ್ನು ಗುರುತಿಸುವ ಕಾರ್ಯ ಅತ್ಯಂತ ಪ್ರಶಂಸನೀಯ, ಸಮಾಜದ ಬಗ್ಗೆ ಆಗಾಗ ತುಡಿತ ಹೊಂದಿ ತಮ್ಮೂರ ಅಭಿವೃದ್ಧಿಗೆ ಶ್ರಮಿಸುವ ಸಂಘಟನೆಗಳು ಮತ್ತಷ್ಟು ಹುಟ್ಟಿಕೊಳ್ಳಲಿ ರಜತ ಸಂಭ್ರಮದಲ್ಲಿರುವ ಮಣೂರು ಫ್ರೆಂಡ್ಸ್ ಕಾರ್ಯದಲ್ಲಿ ಸದಾ ಕೈಜೋಡಿಸುವುದಾಗಿ ಅಭಯ ನೀಡಿದರು. ಈ ಸಂದರ್ಭದಲ್ಲಿ ಅಕ್ಷರ ಸಂತ ಡಾ. ಹರೇಕಳ ಹಾಜಬ್ಬ ಅವರಿಗೆ ರಜತ ಸಂಭ್ರಮ ಪುರಸ್ಕಾರ ನೀಡಿ ಗೌರವಿಸಲಾಯಿತು. ಸ್ಥಳೀಯರಾದ ರವೀಂದ್ರ ಪೈ ಅವರಿಗೆ ಸಾಧಕ ಪುರಸ್ಕಾರ, ನಿಧಿ ಪೈಗೆ ಪ್ರತಿಭಾ ಪುರಸ್ಕಾರ, ಸ್ಥಳೀಯ ಸಾಧಕರಾದ ಕಂಬಳ ಕ್ಷೇತ್ರದ ರಘುರಾಮ ಶೆಟ್ಟಿ,ಶಿವರಾಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಾರ್ವಕಾಲಿಕ ಸಾಧನೆಯೊಂದಿಗೆ 785 ಕೋಟಿ ರೂ. ವ್ಯವಹಾರ ನಡೆಸಿದ್ದು, 1.50 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಿ. ವೆಂಕಟೇಶ ಶೆಣೈ ತಿಳಿಸಿದ್ದಾರೆ. ಬುಧವಾರ ಸಂಘದ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಸಹಕಾರಿಯು ಒಟ್ಟು ಮೂರು ಶಾಖೆಗಳ ಮೂಲಕ 104 ಕೋಟಿ ರೂ. ಠೇವಣಿ ಸಂಗ್ರಹಿಸಿದೆ. ಸಾಲ ಮತ್ತು ಮುಂಗಡ 89.44 ಕೋಟಿ ರೂ., ಪಾಲು ಬಂಡವಾಳ 2.76 ಕೋಟಿ ರೂ., ವಿವಿಧ ಸಹಕಾರಿ ಬ್ಯಾಂಕ್‌ಗಳಲ್ಲಿ 30.93 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಮೀಸಲು ನಿಧಿ 6.55 ಕೋಟಿ ಮತ್ತು ಅನುತ್ಪಾದಕ ಸಾಲಗಳಿಗೆ 87.37 ಲಕ್ಷ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದರು. 1920 ರಲ್ಲಿ ಕಾರ್ಯಾರಂಭವಾದ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಎಲ್ಲ ಶಾಖೆಗಳು ಪ್ರಸ್ತುತ ಗಣಕೀಕೃತಗೊಂಡು ಕೋರ್ ಸಿಸ್ಟಂ ಸಾಫ್ಟ್‌ವೇರ್ ಅಳವಡಿಸಿದೆ. ಕಳೆದ ವರ್ಷ ಸದಸ್ಯರಿಗೆ ಶೇ.17…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಸ ಮೈಲುಗಲ್ಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನ ಆಶ್ರಯದಲ್ಲಿ ಎಳೆಯ ಮನಸ್ಸುಗಳನ್ನು ಒಗ್ಗೂಡಿಸುವ ‘ಕ್ರಿಯೇಟಿವ್ ಚಿಲಿಪಿಲಿ-2026’ ಮೂರು ದಿನಗಳ ಬೇಸಿಗೆ ಶಿಬಿರವು ಉದ್ಘಾಟನೆಗೊಂಡಿತು. ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್ .ಎಲ್. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಪಾಠ ಪ್ರವಚನಗಳ ಜೊತೆಗೆ ಬದುಕಿನ ಮೌಲ್ಯಗಳನ್ನು ಕಲಿಯಬೇಕು. ಮಕ್ಕಳು ತಮ್ಮ ಸುಂದರ ಬಾಲ್ಯವನ್ನು ಮೊಬೈಲ್‌ನಿಂದ ದೂರವಿದ್ದು ತಮ್ಮ ಬದುಕನ್ನು ಸವಿಯಬೇಕೆಂಬ ಸದಾಶಯವನ್ನಿಟ್ಟುಕೊಂಡು ಈ ಚಿಲಿಪಿಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತೇವೆ. ಮಾತ್ರವಲ್ಲದೆ ಕ್ರಿಯೇಟಿವ್ ಸಂಸ್ಥೆಯ ಹೊಸ ಪರಿಕಲ್ಪನೆಯಾದ ಎಳೆಯ ಮನಸ್ಸುಗಳಿಗೆ ಮುಂದೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆಯನ್ನು ಎದುರಿಸಲು ಮತ್ತು ನಮ್ಮ ಸಂಸ್ಕೃತಿ, ದೇಶಾಭಿಮಾನವನ್ನು ಹೊಂದಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲನ್ನು ಪ್ರಾರಂಭಿಸುತ್ತಿದ್ದೇವೆ. ಇದರ ಮೊದಲ ಹೆಜ್ಜೆಯಾಗಿ ಇಂದು ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಎಂದು ನುಡಿದರು. ಸಹ ಸಂಸ್ಥಾಪಕರಲ್ಲಿ ಓರ್ವರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ 2026ನೇ ಸಾಲಿನ ‘ಯುವ’ ಅಂತರ್-ಕಾಲೇಜು ಸಾಂಸ್ಕೃತಿಕ ಮತ್ತು ವ್ಯವಹಾರ ನಿರ್ವಹಣೆ ಸ್ಪರ್ಧೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ತಂಡವು ಸಮಗ್ರ ಪುರಸ್ಕಾರವನ್ನು ಗಳಿಸಿದೆ. ನಿಖಿಲ್ ಮತ್ತು ವೇದಾಂತ ಬ್ಯುಸಿನೆಸ್ ಕ್ವಿಜ್‌ನಲ್ಲಿ ಪ್ರಥಮ ಸ್ಥಾನ ಪಡೆದ ತಂಡದ ಸದಸ್ಯರನ್ನು ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿಯವರು, ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಪೊಲೀಸ್‌ ಧ್ವಜ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಪೊಲೀಸ್‌ ವತಿಯಿಂದ ಪೊಲೀಸ್‌ ಧ್ವಜ ದಿನಾಚರಣೆಯನ್ನು ಉಡುಪಿಯ ಚಂದು ಮೈದಾನದಲ್ಲಿ ಆಚರಿಸಲಾಯಿತು. ಪೊಲೀಸ್‌ ಧ್ವಜ ದಿನಾಚರಣೆಯ ಗೌರವ ವಂದನೆಯನ್ನು ಉಡುಪಿ ನಿವೃತ್ತ ಮಹಿಳಾ ಪೊಲೀಸ್‌ ನಿರೀಕ್ಷಕರಾದ ಸುಜಾತ ಸಾಲಿಯಾನ್‌ ಅವರು ಸ್ವೀಕಾರ ಮಾಡಿದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಹರಿರಾಮ್‌ ಶಂಕರ ಐಪಿಎಸ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಸುಧಾಕರ ಎಸ್‌ ನಾಯ್ಕ್‌ ಅವರು ಹಾಜರಿದ್ದರು. ಇದೇ ಸಮಯದಲ್ಲಿ 2025-26ನೇ ಸಾಲಿನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಂದ ವೈದ್ಯಕೀಯ ಧನ ಸಹಾಯಕ್ಕಾಗಿ ಸ್ವೀಕರಿಸಲಾದ ಅರ್ಜಿಗಳಲ್ಲಿ ರೂ 13,08,050/- ಗಳನ್ನು ವೈದ್ಯಕೀಯ ಧನ ಸಹಾಯವನ್ನು ವಿತರಿಸಲಾಯಿತು. ಪಥಸಂಚಲನದ ನೇತೃತ್ವವನ್ನು ಉಡುಪಿ ಆರ್‌ಪಿಐ, ಡಿಎಆರ್‌ ರವಿ ಕುಮಾರ್‌ ಅವರು ವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಉಡುಪಿ ಡಿಎಆರ್‌ ಯೋಗೀಶ್‌ ನಾಯ್ಕ ಅವರು ನಿರ್ವಹಿಸದರು. ಜಿಲ್ಲೆಯ ಎಲ್ಲಾ ಪೊಲೀಸ್‌ ಅಧಿಕಾರಿಗಳು ಹಾಗೂ ನಿವೃತ್ತ ಪೊಲೀಸ್‌ ಅಧಿಕಾರಿ/ಸಿಬ್ಬಂಧಿಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವಜನರಲ್ಲಿ ಮಾದಕ ದ್ರವ್ಯ ಸೇವನೆಯಿಂದ ಭವಿಷ್ಯದಲ್ಲಿ ಆಗುವ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಅವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ನಾಲ್ಕನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ದ್ರವ್ಯಗಳ ಸೇವೆನೆಯಿಂದ ಮನುಷ್ಯನಲ್ಲಿ ದೈಹಿಕ, ಮಾನಸಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ನಷ್ಟವಾಗುವುದಲ್ಲದೇ ಹಲವಾರು ರೀತಿಯ ಗಂಭೀರ ಕಾಯಿಲೆಗಳು ಉಂಟಾಗುವುದರ ಜೊತೆಗೆ ಮನುಷ್ಯನ ಶಾರೀರಿಕ ಆರೋಗ್ಯದ ಜೊತೆಗೆ ಮಾನಸಿಕ ಅಸಮತೋಲನ ಉಂಟಾಗಿ ಆರೋಗ್ಯ ಹದಗೆಡುತ್ತದೆ. ಮಾದಕ ವ್ಯಸನಗಳಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಯುವಜನರಿಗೆ ಅರಿವು ಮೂಡಿಸಬೇಕು. ಶಾಲಾ ಮತ್ತು ಕಾಲೇಜುಗಳಲ್ಲಿ ಮಾದಕ ದ್ರವ್ಯ ಮುಕ್ತ ವಾತಾವರಣವನನ್ನು ಸೃಷ್ಠಿಸಲು ಒತ್ತು ನೀಡಬೇಕು ಎಂದರು. ಜಿಲ್ಲೆಯ ಪ್ರತೀಯೊಂದು ಔಷಧ ಅಂಗಡಿಗಳಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಹಾಲ್ಕಲ್ ಪೆಟ್ರೋಲ್ ಬಂಕ್ ಬಳಿ ಬೈಕ್‌ಗೆ ಮಿನಿಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಸವಾರ ಸಹಿತ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಲ್ಲು ಕತ್ತರಿಸುವ ಕೆಲಸ ಮಾಡುವ ಮುದೂರು ನಿವಾಸಿ ಗಣೇಶ ಅವರು ಸ್ನೇಹಿತ ಸತೀಶ್ ಜತೆ ಬೈಕ್ ನಲ್ಲಿ ಹಾಲ್ಕಲ್ ಪೆಟ್ರೋಲ್ ಬಂಕ್ ಗೆ ಪೆಟ್ರೋಲ್ ತರಲು ಮತ್ತೋರ್ವ ಸಹ ಸವಾರ ಧರ್ಮೇಂದ್ರ ಅವರೊಡನೆ ತೆರಳುವ ಸಂದರ್ಭ ಮಿನಿ ಲಾರಿ ನೇರವಾಗಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡರು. ಗಾಯಳುಗಳಲ್ಲಿ ಸತೀಶ್‌ ಹಾಗೂ ಧರ್ಮೇಂದ್ರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಸ್ತಾನದಲ್ಲಿ ನಡೆದ ಯುವಕನ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಕೊಲ್ಲೂರು ಕೆಳಮನೆಯ ದೇವಿ ಪ್ರಸಾದ್ ಶೆಟ್ಟಿ ಯಾನೆ ದೀಕ್ಷಿತ್ (33), ಹಿರಿಯಡ್ಕದ ಸುಜಿತ್ (27), ಕಾಟಿಪಳ್ಳದ ಸುದೀಪ್ (22), ಕೃಷ್ಣಾಪುರ ಶ್ರೀಷಾ ಆನಂದ ಶೆಟ್ಟಿ (35), ಕೈಕಂಬ ಮಿಥುನ್ ಕೈಕಂಬ (20), ಕೆಮ್ಮಣ್ಣು ಸುಹಾಸ್ (31) ಹಾಗೂ ಹೂಡೆ ಮನೋಜ್ ವಿ. ಕೊಟ್ಯಾನ್ (34) ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸಿದ್ದಾಪುರ ಗ್ರಾಮದ ಮೋಹನ ದಾಸ್ ಶೆಟ್ಟಿ ಅವರ ಪುತ್ರ ತೇಜಸ್ ಎಂಬವರನ್ನು 2025 ನವೆಂಬರ್ 19ರಂದು ಮಧ್ಯಾಹ್ನ ಸಾಸ್ತಾನದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಎದುರು ಅಪಹರಣ ಮಾಡಲಾಗಿತ್ತು. ಅಪಹರಣಕ್ಕೊಳಗಾದ ಘಟನೆಗೆ ಸಂಬಂಧಿಸಿದಂತೆ ತೇಜಸ್ ಸ್ನೇಹಿತ ಪ್ರಜ್ವಲ್ ಮಧ್ಯಾಹ್ನ ಫೋನ್ ಮೂಲಕ ಮೋಹನ್ ದಾಸ್ ಶೆಟ್ಟಿಯವರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ತೆರಳಿದಾಗ ತೇಜಸ್‌ನ ಕಾರು…

Read More