Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಯೋಧ್ಯ ಪಬ್ಲಿಕೇಷನ್ಸ್ ಅವರು ನಡೆಸಿದ ಇಂಗ್ಲೀಷ್ ಒಲಿಂಪಿಯಾಡ್ ಪರೀಕ್ಷೆ – 2026ರಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅಮೋಘ್ ಎ. ಪೈ ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನನದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಅಮೃತ್  2.0  ಕುಡಿಯುವ ನೀರಿನ ಯೋಜನೆ ಅನುಷ್ಠಾನ ಸಹಿತ ಕುಡಿಯುವ ನೀರಿನ ಶಾಶ್ವತ ಯೋಜನೆ ಅನುಷ್ಠಾನ ದ ಮೂಲಕ 24/7 ಮಾದರಿಯಲ್ಲಿ ನಾಗರಿಕರಿಗೆ ನೀರು ಪೂರೈಕೆಗೆ ಕ್ರಮ ವಹಿಸಲು ಗಮನ ಸೆಳೆಯುವ ಸೂಚನೆ ಮೂಲಕ ನಿಯಮ 73 ರಡಿ ಸದನದ ಗಮನ ಸೆಳೆದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವರಾದ ಬಿ.ಎಸ್. ಸುರೇಶ್ ಅವರು ಪ್ರಸ್ತುತ ಪಟ್ಟಣಕ್ಕೆ ನದಿ ಮೂಲದಿಂದ ಶಾಶ್ವತವಾದ ನೀರು ಸರಬರಾಜು ಯೋಜನೆ ಇಲ್ಲದಿರುವುದರಿಂದ ಪ್ರಸ್ತುತ ಕೊಳವೆ ಬಾವಿ ಮತ್ತು ತೆರೆದ ಬಾವಿಗಳಿಂದ ಸುಮಾರು 0.60 MLD ಯಷ್ಟು ನೀರು ಸರಬರಾಜು ಮಾಡಲಾಗುತ್ತಿದೆ. ಅಮೃತ್ 2.0 ಯೋಜನೆಯಡಿಯಲ್ಲಿ  ಬೈಂದೂರು ಪಟ್ಟಣಕ್ಕೆ  ರೂ. 47.25 ಕೋಟಿಗಳ ಮೊತ್ತವನ್ನು ನಿಗದಿ ಪಡಿಸಿರುವುರಿಂದ ಲಭ್ಯವಿದ್ದ ಅನುದಾನಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳಿಗೆ ಪ್ರೊಡಕ್ಷನ್ ಪ್ರೊಸೆಸ್ ಮಾಡೆಲ್ ಮೇಕಿಂಗ್ಸ್ – Prod-vaganza ಸ್ಪರ್ಧೆಯನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ವಸ್ತುಗಳ ಉತ್ಪಾದನಾ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಹಾಗೂ ಉತ್ಪಾದನಾ ಪ್ರಕ್ರಿಯೆಯ ವಿವಿಧ ಆಯಾಮಗಳ ಮೇಲೆ ಬೆಳಕು ಚೆಲ್ಲುವ ಹಿನ್ನೆಲೆಯಿಂದಾಗಿ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.  ಒಟ್ಟು 12 ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ತಮ್ಮ ಆಯ್ಕೆಯ ವಸ್ತುಗಳ ಉತ್ಪಾದನಾ ಪ್ರಕ್ರಿಯೆಗಳ ಕುರಿತು ತಂಡಗಳು ಸವಿಸ್ತಾರವಾಗಿ ಪ್ರಸ್ತುತಪಡಿಸಿದರು.  ಕಾರ್ಯಕ್ರಮದಲ್ಲಿ ಸ್ಪರ್ಧೆಯ ತೀರ್ಪುಗಾರರಾಗಿ ಸತೀಶ್ ಶೆಟ್ಟಿ ಪ್ರಾಧ್ಯಾಪಕರು ವಾಣಿಜ್ಯ ವಿಭಾಗ, ಶ್ರೇಯಸ್ ಪ್ರಾಧ್ಯಾಪಕರು ವಾಣಿಜ್ಯ ವಿಭಾಗ ಹಾಗೂ ಕಾರ್ಯಕ್ರಮದ ಅತಿಥಿ ಮತ್ತು ತೀರ್ಪುಗಾರರಾಗಿ ಪ್ರಾಕ್ತನ ವಿದ್ಯಾರ್ಥಿ ನಿರಂಜನ್ ಶೆಟ್ಟಿ, ಜೊತೆಗೆ ಕಾರ್ಯಕ್ರಮ ಸಂಯೋಜಕರಾದ ಅವಿತಾ ಕೊರಿಯಾ ಪ್ರಾಧ್ಯಾಪಕರು ನಿರ್ವಹಣಾ ವಿಭಾಗ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ನಂದಾ ರೈ ಮತ್ತು ನಿರ್ವಹಣಾ ವಿಭಾಗದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ವತಿಯಿಂದ ಬಿಜೂರು ಗ್ರಾಮದ ಶ್ರೀ ಮಕ್ಕಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಾಂದ್ರಮಾನ ಯುಗಾದಿಯನ್ನು ಆಚರಿಸಲಾಯಿತು. ಪಂಚಾಂಗ ಶ್ರವಣ ಮಾಡಿ ಯುಗಾದಿಯ ಆಚರಣೆಯ ಕುರಿತು ವಿಶೇಷ ಉಪನ್ಯಾನ ನೀಡಿದ ವೇದಮೂರ್ತಿ ಯೋಗೀಶ್ ಭಟ್ ಅವರನ್ನು ಸನ್ಮಾನಿಸಲಾಯಿತು. ವಲಯದ ಮಹಿಳಾ ವೇದಿಕೆಯ ಸದಸ್ಯರು ವಿಷ್ಣು ಸಹಶ್ರನಾಮ ಪಠಿಸಿದರು. ವಲಯಾಧ್ಯಕ್ಷ ಯು. ಸಂದೇಶ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಮಕ್ಕಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಶ್ವರರಾದ ವೇದಮೂರ್ತಿ ಗುರುರಾಜ್ ಭಟ್, ಕೊಲ್ಲೂರು ಶ್ರೀ ಮುಕಾಂಬಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ನಾಗರಾಜ ಭಟ್, ದೀಟಿ ಸೀತಾರಾಮ್ ಮಯ್ಯ, ರತ್ನಾಕರ ಉಡುಪ, ಜಗದೀಶ ರಾವ್ ಹೆಚ್, ಗಣೇಶ್ ಮಯ್ಯ, ಯುವ ವೇದಿಕೆಯ ಅಧ್ಯಕ್ಷ ಪದ್ಮನಾಭ ಹೆಬ್ಬಾರ್, ಅರುಣ್ ಶಾನುಭಾಗ್, ಮಹಿಳಾ ವೇದಿಕೆಯ ಅಧ್ಯಕ್ಷೆ ವೀಣಾ ಹೆಬ್ಬಾರ್, ಗುರುರಾಜ್ ಹೆಬ್ಬಾರ್, ಯೋಗೀಶ್ ಕಾರಂತ್ ಮಹಿಳಾ ವೇದಿಕೆಯ ಕಾರ್ಯದರ್ಶಿ ವಿಧ್ಯಾ ಅಡಿಗ ಉಪಸ್ಥಿತರಿದ್ದರು. ವಾರ್ಷಿಕ ಅಧೀವೇಶನದ ಲೆಕ್ಕಾಚಾರವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತಲ್ಲೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ  ಮಂಗಳವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ, ಕನ್ಯಾನದ ನಮ್ಮ ಭೂಮಿಯ ಸಕ್ರಿಯ ಕಾರ್ಯಕರ್ತ, ಗಾಣಿಗ ಸಮುದಾಯದ ಮುಖಂಡ ಶ್ರೀನಿವಾಸ ಗಾಣಿಗ (68) ಅವರು ಗಂಭೀರ ಗಾಯಗೊಂಡು ನಿಧನರಾಗಿದ್ದಾರೆ. ಮಂಗಳವಾರ ರಾತ್ರಿ ಕಾರ್ಯಕ್ರಮವೊಂದನ್ನು ಮುಗಿಸಿ ಕುಂದಾಪುರದಿಂದ ತಮ್ಮ ಬೈಕಿನಲ್ಲಿ ಕಟ್ ಬೆಲ್ತೂರು ಕಡೆಗೆ ತೆರಳುತ್ತಿದ್ದರು. ರಾತ್ರಿ 8 ಗಂಟೆಯ ಸುಮಾರಿಗೆ ತಲ್ಲೂರು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ರಾಂಗ್ ಸೈಡ್ʼನಲ್ಲಿ ಅತೀ ವೇಗವಾಗಿ ಬಂದ ಬೈಕ್ ಇವರ ಬೈಕಿನ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಶ್ರೀನಿವಾಸ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಸ್ಥಳೀಯರು ತಕ್ಷಣವೇ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ತೀವ್ರ ರಕ್ತಸ್ರಾವದಿಂದಾಗಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಮ್ಮ ಭೂಮಿ ಸಂಸ್ಥೆಯಲ್ಲಿ 15 ವರ್ಷಕ್ಕೂ ಹೆಚ್ಚುಕಾಲ ಸಕ್ರಿಯವಾಗಿದ್ದ ಅವರು ಪಂಚಾಯತ್ ರಾಜ್ ಹತ್ಕೋತ್ತಾಯ ಆಂದೋಲನದಲ್ಲಿ ಸಕ್ರಿಯರಾಗಿದ್ದರು. ಪಂಚಾಯತ್ ರಾಜ್ ವಿಷಯದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಅಲ್ಲೈಡ್ ಹೆಲ್ತ್ ವಿಭಾಗದ ವತಿಯಿಂದ ವಿಶ್ವ ಮೂತ್ರಪಿಂಡ ದಿನವನ್ನು ಇಲ್ಲಿನ ಚಿನ್ಮಯಿ ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಎಲ್ಲರಿಗೂ ಮೂತ್ರಪಿಂಡದ ಆರೋಗ್ಯ, ಜನರ ಬಗ್ಗೆ ಕಾಳಜಿ ವಹಿಸುವುದು, ಗ್ರಹವನ್ನು ರಕ್ಷಿಸುವುದು ಎಂಬ ವಿಷಯದ ಅಡಿಯಲ್ಲಿ  ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನರ್ಸಿಂಗ್ ಸೂಪರಿಂಟೆಂಡೆಂಟ್ ಐಡಾ ಅಲ್ಮೇಡಾ, ಕ್ವಾಲಿಟಿ ಮುಖ್ಯಸ್ಥ ಪ್ರದೀಪ್ ಕುಮಾರ್, ಉಪನ್ಯಾಸಕಿ ಅಂಜಲಿ ಮತ್ತು ರಕ್ಷಿತಾ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ನಿರ್ವಹಿಸಿದರು. ಮೂತ್ರಪಿಂಡದ ಆರೈಕೆ ಮತ್ತು ತಡೆಗಟ್ಟುವ ಕ್ರಮಗಳ ಮಹತ್ವವನ್ನು ಎತ್ತಿ ತೋರಿಸಲು ವಿವಿಧ ಚಟುವಟಿಕೆಗಳು, ಕಿರು ನಾಟಕ ಮತ್ತು ಮಾಹಿತಿ ವಿನಿಯಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು 2ನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳು ನಡೆಸಿಕೊಟ್ಟರು. ಕಾರ್ಯಕ್ರಮವನ್ನು ರಕ್ಷಿತಾ ಮತ್ತು ನಿಕಿತಾ ನಿರ್ವಹಿಸಿದರು. ಚಿರಂಜೀವಿ ಅವರ ವಂದನಾರ್ಪಣೆಯೊಂದಿಗೆ ಮುಕ್ತಾಯಗೊಂಡಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬಿದ್ಕಲ್‌ಕಟ್ಟೆ ಯಲ್ಲಿ ಸೇಫ್ಟಿ ಮಾಸಾಚರಣೆ ಅಂಗವಾಗಿ ಅಗ್ನಿಶಾಮಕ ಠಾಣೆ ಕುಂದಾಪುರ ಇವರಿಂದ ಐಟಿಐ ತರಬೇತಿದಾರರಿಗೆ ಫೈಯರ್ & ಸೇಫ್ಟಿ ಕಾರ್ಯಾಗಾರ  ನಡೆಯಿತು. ಅಗ್ನಿಶಾಮಕ ಠಾಣೆಯ ಲೀಡಿಂಗ್ ಫೈರ್ ಫೈಟರ್ ಬಾಲಕೃಷ್ಣ ವಿವಿಧ ವಿಧದ ಅಗ್ನಿ ಹಾಗೂ ಅದಕ್ಕೆ ಸರಿಯಾದ ಅಗ್ನಿನಂದಕ ಮತ್ತು ಅಗ್ನಿನಂದಕಗಳ ಹೊರತಾಗಿಯೂ ಸಾಮಾನ್ಯ ಜನರು ಹೇಗೆ ಬೆಂಕಿಯನ್ನು ನಿಗ್ರಹಿಸಬೇಕು ಎನ್ನುವ ಬಗ್ಗೆ ಸಮಗ್ರ ಮಾಹಿತಿ ನೀಡಿದರು . ಸಿಬ್ಬಂದಿಗಳಾದ ಕೆಎಲ್ ಹೊಸರಿತ್, ದೀಪಕ್, ಬಸವರಾಜ್ , ಅಭಿಷೇಕ್ ಅಗ್ನಿ ನಂದಿಸುವ ವಿವಿಧ ವಿಧಾನಗಳ ಪ್ರಾತ್ಯಕ್ಷಿಕೆ ನೀಡಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಪ್ರಸನ್ನ ಆಚಾರ್ಯ ಬಸವ ನಾಯ್ಕ್ , ಪ್ರತಾಪ್ ಕುಮಾರ್ , ಅಜಿತ್ ಆಚಾರ್, ಸುಚಿತ್ರ, ಪ್ರಫುಲ್ಲಾ ಕೆ. ಎನ್. , ಸುಮಂಗಲ, ರೂಪ ದೇವಿ ಕಚೇರಿ ಸಿಬ್ಬಂದಿಗಳಾದ ಸುಮಾರಾಣಿ, ಮನೋಜ್ ಕುಮಾರ್ ಉಪಸ್ಥಿತರಿದ್ದರು. ಐಟಿಐನ ತರಬೇತಿ ಅಧಿಕಾರಿ ಗಣೇಶ್ ಹೆಚ್. ಸಂಯೋಜಿಸಿ, ಸರ್ವರನ್ನು ಸ್ವಾಗತಿಸಿದರು. ಪ್ಲೇಸ್ಮೆಂಟ್ ಆಫೀಸರ್ ಮನೋಹರ್ ಶೆಟ್ಟಿ ವಂದಿಸಿದರು. ಪ್ರಾಚಾರ್ಯ ಹರೀಶ್ ಅವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರಕಾರದ ಪಂಚಾಯತ್ ರಾಜ್ ಮಂತ್ರಾಲಯದಿಂದ ’ಸುಸ್ಥಿರ ಅಭಿವೃದ್ಧಿ ಗುರಿಗಳು’ ಎನ್ನುವ ವಿಷಯದ ಮೇಲೆ 9 ವಿಭಾಗಗಳಲ್ಲಿ ನ್ಯಾಷನಲ್ ಪಂಚಾಯತ್  ಆವಾರ್ಡ್ ನೀಡುತ್ತಿದ್ದು, ’ಆರೋಗ್ಯಕರ ಗ್ರಾಮ ಪಂಚಾಯತ್’ ವಿಭಾಗದಲ್ಲಿ ರಾಜ್ಯದಿಂದ ವಂಡ್ಸೆ ಗ್ರಾಮ ಪಂಚಾಯತ್ ಕೇಂದ್ರ ಸರಕಾರಕ್ಕೆ  ನಾಮ ನಿರ್ದೇಶನಗೊಂಡಿದೆ. ಈ ದೇಶದಲ್ಲಿ ಒಟ್ಟು 2.68ಲಕ್ಷ ಗ್ರಾಮ ಪಂಚಾಯತ್‌ಗಳಿದ್ದು ಅಂತಿಮ 55ರ ಪಟ್ಟಿಯಲ್ಲಿ ವಂಡ್ಸೆ ಗ್ರಾಮ ಪಂಚಾಯತ್ ಒಳಗೊಂಡಿದೆ. ಈಗಾಗಲೇ ಘನತ್ಯಾಜ್ಯ ವಿಲೇವಾರಿ ಘಟಕದ ಮೂಲಕ ರಾಜ್ಯ, ದೇಶದ ಗಮನ ಸಳೆದಿರುವ ವಂಡ್ಸೆ ಗ್ರಾಮ ಪಂಚಾಯತ್ ರಾಜ್ಯದಲ್ಲಿ ಪ್ರಥಮ ಬಾರಿಗೆ ಸಮುದಾಯ ಉಪಶಮನ ಆರೈಕೆ ಕೇಂದ್ರವನ್ನು ನಿರಾಮಯ ಸೊಸೈಟಿಯ ಮೂಲಕ ಅನುಷ್ಟಾನ ಮಾಡುವುದರರೊಂದಿಗೆ ರಾಜ್ಯದ ಗಮನ ಸೆಳೆದಿದೆ. ಅಂತಿಮ ಪ್ರಶಸ್ತಿ ಸುತ್ತಿಗಾಗಿ ಪರಿಶೀಲನೆ ಮಾಡಲು ಕೇಂದ್ರ ಸರಕಾರದ ಪಂಚಾಯತ್ ರಾಜ್ ಮಂತ್ರಾಲಯದ ಹಿರಿಯ ಅಧಿಕಾರಿಗಳಾದ ಪಿನಾಕಿ ತಹಬಿಲ್ದಾರ್ ಮತ್ತು ಡಾ. ಮಮತಾ ಅಧಿಕಾರಿಗಳ ತಂಡ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೈಂದೂರು – ಕುಂದಾಪುರ ರಾ.ಹೆ 66ರ ತಲ್ಲೂರು ಸೇತುವೆಯ ತಡೆಗೋಡೆಗೆ ಮಹಾರಾಷ್ಟ್ರ ಮೂಲದ ಗೂಡ್ಸ್‌ ವಾಹನ ಢಿಕ್ಕಿಯಾದಾಗ ಅದರ ಹಿಂದೆ ಬರುತ್ತಿದ್ದ ಕಾರು ಅದಕ್ಕೆ ಢಿಕ್ಕಿಯಾದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಕಾರಿನಲ್ಲಿದ್ದ ಚಾಲಕ ಸಹಿತ ಪ್ರಯಾಣಿಕರು, ಗೂಡ್ಸ್ ವಾಹನ ಚಾಲಕ ಎಲ್ಲರೂ ಗಾಯಗೊಂಡು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೂಡ್ಸ್‌ ವಾಹನ ವೇಗವಾಗಿ ಬಂದು ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದೆ. ಹಿಂದಿನಿಂದ ಬಂದು ಢಿಕ್ಕಿಯಾದ ಕಾರಿನ ಏರ್ ಬ್ಯಾಗ್ ತೆಗೆದುಕೊಂಡಿದೆ. ಅಪಘಾತದ ತೀವ್ರತೆಗೆ ಕಾರು ಹಾಗೂ ಗೂಡ್ಸ್‌ ವಾಹನಗಳೆರಡು ನಜ್ಜು ಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆ ಎಸ್.ಐ ಅನೂವ್ ನಾಯಕ್ ಹಾಗೂ ಸಿಬಂದಿ ಭೇಟಿ ನೀಡಿದರು. ಸಂಚಾರ ದಟ್ಟಣೆ ವೇಳೆ ಅಪಘಾತ ನಡೆದ ಕಾರಣ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿದ್ದವು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಹಿಳಾ ಮಂಡಲ ಪಾಂಡೇಶ್ವರ ಸಾಸ್ತಾನ ಇಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕ ಮಹಿಳೆಯರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ, ಆಟೋಟ ಸ್ಪರ್ಧೆ, ಬಹುಮಾನ ವಿತರಣೆ ಕಾರ್ಯಕ್ರಮ ಭಾನುವಾರ ಜರಗಿತು. ಮಹಿಳಾ ಮಂಡಲದ ಅಧ್ಯಕ್ಷೆ ಸುಮಿತ್ರಾ ಸುಧಾಕರ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಮಹಿಳಾ ಮಂಡಲದ ಮಾಜಿ.ಜಿ.ಪಂ ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಹಿಂದೆ ಈ ಮಹಿಳಾ ಮಂಡಲದಲ್ಲಿ ತಾವು ಅಧ್ಯಕ್ಷರಾಗಿದ್ದ ಸಮಯದ ನೆನಪಿನ ಬುತ್ತಿಯನ್ನು ತೆರೆದಿಟ್ಟು, ಮಹಿಳಾ ಮಂಡಲದ ಕಾರ್ಯ ಚಟುವಟಿಕೆಗಳ ಕುರಿತು ಶ್ಲಾಘಿಸಿ, ಶುಭ ಹಾರೈಸಿದರು. ಮುಖ್ಯ ಅಭ್ಯಾಗತರಾಗಿ ಸಂತ ಅಂತೋನಿ ಇಗರ್ಜಿ ಚರ್ಚ್‌ನ ಮಹಿಳಾ ಸಂಘಟನೆಯ ಅಧ್ಯಕ್ಷೆ ಪ್ರೀತಿ ಮರಿಯಾ ಲೂವಿಸ್, ಸಾಲಿಗ್ರಾಮ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಸುಲತಾ ಹೆಗ್ಡೆ ,ಪಾಂಡೇಶ್ವರ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ಗಂಗಾಧರ್ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದ ಜ್ಯೂಡಿತ್ ಪಿಕಾರ್ಡೋ ಮತ್ತು ಸೇವಾ ಕಾರ್ಯದಲ್ಲಿ ನಿರತರಾದ ಲಿಲ್ಲಿ ರೋಡ್ರಿಗಸ್ ಅವರುಗಳನ್ನು ಸನ್ಮಾನಿಸಲಾಯಿತು. ಮಹಿಳಾ ಮಂಡಲದ ವಿಮಲ ಮಹಿಳಾ ದಿನಾಚರಣೆಯ…

Read More