ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇದೇ ಜ. 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತ ಗಣರಾಜ್ಯೋತ್ಸವ ದಿನಾಚರಣೆಯು ದೇಶಪ್ರೇಮ, ದೇಶಭಕ್ತಿ ಹಾಗೂ ಭಾರತ ಸಂವಿಧಾನ ಆಚರಣೆಯ ಪ್ರತೀಕವಾಗಿದ್ದು, ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಗಣರಾಜ್ಯೋತ್ಸವವನ್ನು ಆಚರಿಸಬೇಕು. ಇಲಾಖೆಯ ಅಧಿಕಾರಿಗಳಿಗೆ ನೀಡಿರುವ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ, ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದರು. ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಜನವರಿ 26 ರಂದು ಬೆಳಿಗ್ಗೆ 9 ಕ್ಕೆ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಗುವುದು. ಶಿಷ್ಟಾಚಾರದ ನಿಯಮಗಳಂತೆ ಭಾರತ ಗಣರಾಜ್ಯೋತ್ಸವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅವೈಜ್ಞಾನಿಕ ಲೈಟ್ ಫಿಶಿಂಗ್ ಮತ್ತು ಬುಲ್ಟ್ರಾಲ್ ಮೀನುಗಾರಿಕೆಯನ್ನು ಕೂಡಲೇ ನಿಷೇಧಿಸುವಂತೆ ಒತ್ತಾಯಿಸಿ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರ ತ್ರಾಸಿಯ ಕಡಲ ಕಿನಾರೆಯಲ್ಲಿ ಸಾವಿರಾರು ದೋಣಿಗಳನ್ನು ಲಂಗರು ಹಾಕಿ, ಕರಾವಳಿಯ 3 ಜಿಲ್ಲೆಗಳ 3 ಸಾವಿರಕ್ಕೂ ಮಿಕ್ಕಿ ಮೀನುಗಾರರಿಂದ ಬೃಹತ್ ಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಯಿತು. ಈ ವೇಳೆ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾತನಾಡಿ, ಕಳೆದ ಒಂದುವರೆ ವರ್ಷದಿಂದ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಒಂದೇ ಒಂದು ಮೀನುಗಾರಿಕೆ ಮನೆಗಳು ಮಂಜೂರಾಗಿಲ್ಲ. ಕಳೆದ ವರ್ಷ ಮಂಜೂರಾಗಿದ್ದ ಮನೆಗಳನ್ನು ಕೂಡ ತಡೆ ಹಿಡಿಯಲಾಗಿದೆ. ಕಳೆದ 3-4 ವರ್ಷಗಳಿಂದ ಮರವಂತೆ ಹೊರ ಬಂದರು ಮಂಜೂರಾದ ಅನುದಾನ ವಿವಿಧ ಕಾರಣಗಳಿಂದ ಬಳಕೆಯಾಗಿಲ್ಲ. ಗಂಗೊಳ್ಳಿ ಬಂದರು ಜೆಟ್ಟಿ ಪುನರ್ ನಿರ್ಮಾಣವಾಗಿಲ್ಲ ನಾಡದೋಣಿಯವರ ಕಷ್ಟ ಅರ್ಥಮಾಡಿಕೊಳ್ಳಬೇಕಾದುದು ಸರಕಾರದಿಂದ ಹಿಡಿದು ಸಮಾಜದ ಕರ್ತವ್ಯ. ಅವೈಜ್ಞಾನಿಕವಾಗಿ ನಡೆಯುತ್ತಿರುವ ಲೈಟ್ ಫಿಶಿಂಗ್ ಸಮಸ್ಯೆ ಬಗ್ಗೆ ಅಧಿಕಾರಿಗಳು ಹಾಗೂ ಸರಕಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತ್ರಿವರ್ಣ ಕಲಾ ಕೇಂದ್ರ ವತಿಯಿಂದ ಕುಂದಾಪುರದ ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಂದ ಪರಂಪರಾ-2 ಚಿತ್ರಕಲಾ ಪ್ರದರ್ಶನ ಜ.12ರ ಆದಿತ್ಯವಾರದಿಂದ 14ರ ತನಕ ನಡೆಯಲಿದೆ. ಬೆಳಿಗ್ಗೆ 10.00 ರಿಂದ ಸಂಜೆ 7.30ರ ತನಕ ಕುಂದಾಪುದ ಹಳೆ ಬಸ್ ನಿಲ್ದಾಣದ ಬಳಿ ಇರುವ ಸುಪ್ರಭ ಕಾಂಪ್ಲೆಕ್ಸ್ನ ಆರ್ಟ್ ಗ್ಯಾಲರಿಯಲ್ಲಿ ಕಲಾಪ್ರದರ್ಶನ ಸಾರ್ವಜನಿಕ ವಿಕ್ಷೇಣೆಗೆ ಲಭ್ಯವಿರಲಿದೆ. ಉದ್ಘಾಟನಾ ಸಮಾರಂಭ:ದಿನಾಂಕ 12.01.2025 ಅದಿತ್ಯವಾರ ಬೆಳಿಗ್ಗೆ 10.00ಕ್ಕೆ ಕುಂದಾಪುರದ ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ವಾಸುದೇವ ಯಡಿಯಾಳ ಅವರು ಉದ್ಘಾಟಿಸಲಿದ್ದಾರೆ. ಅತಿಥಿ ಅಭ್ಯಾಗತರಾಗಿ ಉಡುಪಿಯ ಚಿತ್ರಕಲಾ ಮಂದಿರ ಕಲಾ ವಿದ್ಯಾಲಯದ ನಿರ್ದೇಶಕರಾದ ಡಾ. ಯು. ಸಿ. ನಿರಂಜನ್, ಕುಂದಾಪುರದ ನಿವೃತ್ತ ಪ್ರಾಂಶುಪಾಲರಾದ ಡಾ. ಜಿ. ಹೆಚ್ ಪ್ರಭಾಕರ್ ಶೆಟ್ಟಿ ಮತ್ತು ಶ್ರೀ ವೆಂಕಟರಮಣ ಪಿ.ಯು. ಕಾಲೇಜಿನ ಸಂಸ್ಕೃತ ಉಪನ್ಯಾಸಕಿ ಮಮತಾ ರೈ ಉಪಸ್ಥಿತರಿರುವರು. ಪರಂಪರ ಕಲಾ ಪ್ರದರ್ಶನ:ಶತಶತಮಾನಗಳಿಂದ ಸಂಪದ್ಭರಿತ ಸುಧೀರ್ಘ ಇತಿಹಾಸಗಳುಳ್ಳ ದೇಶ ನಮ್ಮದು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗ ಕೋಟೇಶ್ವರ ಶಾಲಾ ಹಳೆ ವಿದ್ಯಾರ್ಥಿಗಳ ಸಾರಥ್ಯದಲ್ಲಿ ನಡೆಯುತ್ತಿರುವ ಶತಮಾನೋತ್ಸವ ಕಾರ್ಯಕ್ರಮದ ಶಾಲಾ ಆವರಣದಲ್ಲಿ ಗುರುವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ವಹಿಸಿ ಮಾತನಾಡಿ, ಸ್ಥಳೀಯ ಕೋಟೇಶ್ವರದ ಕೊಡಿ ಹಬ್ಬಗಳಂತೆ, ಶಾಲೆಯ ಶತಮಾನೋತ್ಸವದ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯುತ್ತಿರುವು ಸಂತಸದ ಸಂಗತಿ ಎಂದರು. ಶ್ರೀಧರ್ ವಿಟ್ಟಲ್ ಕಾಮತ್ ಅಧ್ಯಕ್ಷರು ಶತಮಾನೋತ್ಸವ ಸಮಿತಿ ಕೆಪಿಎಸ್ ಪ್ರಥಮಿಕ ವಿಭಾಗ ಉಡುಪಿ ಜಿಲ್ಲಾ ಉಪನಿರ್ದೇಶಕರು ಡಿ.ಡಿ.ಪಿ. ಗಣಪತಿ ಕೆ., ಕೋಟೇಶ್ವರ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ರಾಗಿಣಿ ದೇವಾಡಿಗ, ರಾಜೇಶ್ ಉಡುಪ ಅಧ್ಯಕ್ಷರು ಹಳೆ ವಿದ್ಯಾರ್ಥಿ ಸಂಘ ಹಾಗೂ ಶತಮಾನೋತ್ಸವ ಸಮಿತಿ ಕೆಪಿಎಸ್ ಪ್ರಾಥಮಿಕ ವಿಭಾಗ, ಉದ್ಯಮಿ ಹಾಗೂ ಶಾಲಾ ಹಳೆ ವಿದ್ಯಾರ್ಥಿ ದಿನೇಶ್ ಕಾಮತ್, ಡಾ. ಭಾಸ್ಕರ ಆಚಾರ್ಯ ಗೌರವ ಉಪಾಧ್ಯಕ್ಷರು, ಶತಮಾನೋತ್ಸವ ಸಮಿತಿ ಕೆಪಿಎಸ್ ಪ್ರಾಥಮಿಕ ವಿಭಾಗ ಪ್ರಕಾಶ್ ಶೆಟ್ಟಿ, ಪ್ರಾಂಶುಪಾಲರು ಕೆಪಿಎಸ್ ಕೋಟೇಶ್ವರ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಕ್ಕಳಗೆ ಪ್ರೀತಿ ಕೊಟ್ಟರೆ ಸಾಲದು. ಸಂಸ್ಜಾರ ಸಂಸ್ಕೃತಿ ನೀಡಬೇಕು. ಪೋಷಕರಿಂದ ಸಾಧ್ಯವಾಗದ್ದನ್ಬು ಸಾಂಸ್ಕೃತಿಕ ಸಂಸ್ಥೆಗಳು ಕಲಿಸುತ್ತದೆ. ಅಂತಹ ವಾತಾವರಣಕ್ಕೆ ತೆರೆದುಕೊಳ್ಳಲು ಅವಕಾಶ ಮಾಡಿಕೊಡಬೇಕಿದೆ ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಸಮಷ್ಟಿ ಪ್ರತಿಷ್ಠಾನ ರಿ. ಹಾಗೂ ಸ್ನೇಹ ತರಂಗ ಬೈಂದೂರು ಸಹಯೋಗದೊಂದಿಗೆ ಸುರಭಿ ರಿ. ಬೈಂದೂರು ಸಂಸ್ಥೆಯ ರಜತಯಾನ ತಿಂಗಳ ತಿರುಳು ಕಾರ್ಯಕ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಶಾರದಾ ವೇದಿಕೆಯಲ್ಲಿ ಹಮ್ಮಿಕೊಂಡ ೩ ದಿನಗಳ ಯಕ್ಷ – ಗೊಂಬೆ ವೈಭವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಉಡುಪಿ ಜಿಲ್ಲೆಯ ಕೊನೆಯ ತಾಲೂಕು ಬೈಂದೂರಿಗೆ ಕಲಾಮಾತೆ ಒಲಿದಿದ್ದಾಳೆ. ವರ್ಷಪೂರ್ತಿ ಹತ್ತಾರು ಸಾಂಸ್ಕೃತಿಕ ಚಟುವಟಿಕೆಗಳು ಇಲ್ಲಿ ನಡೆಯುತ್ತದೆ. ಶ್ರದ್ಧೆಯಿಂದ ಮಾಡುವ ಕಾರ್ಯಕ್ಕೆ ಭಗವಂತನ ಆಶೀರ್ವಾದ ಇದ್ದೇ ಇರುತ್ತದೆ ಎಂದರು. ನಿವೃತ್ತ ಬ್ಯಾಂಕ್ ಅಧಿಕಾರಿ ಗೋವಿಂದ ಎಂ. ಅಧ್ಯಕ್ಷತೆ ವಹಿಸಿದ್ದರು. ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ, ಮಾಹೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯುವ ಬಂಟರ ಸಂಘ ಕುಂದಾಪುರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕಾ ಸಾಧನಗಳ ವಿತರಣೆ ಕಾರ್ಯಕ್ರಮ, ಬಂಟ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭವು ಜ.11ರ ಶನಿವಾರ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಬೆಂಗಳೂರಿನ ಸೌತ್ ಫೀಲ್ಡ್ ಪೇಂಟ್ಸ್ ಆಡಳಿತ ನಿರ್ದೇಶಕರಾದ ಎಸ್. ಎಸ್. ಹೆಗ್ಡೆ ಉದ್ಘಾಟಿಸಲಿದ್ದಾರೆ. ಕುಂದಾಪುರದ ಹಿರಿಯ ಲೆಕ್ಕಪರಿಶೋಧಕರಾದ ಕೆ. ಸುಧಾಕರ ಹೆಗ್ಡೆ ಬಂಟ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ನಿತೀಶ್ ಶೆಟ್ಟಿ ಬಸ್ರೂರು ವಹಿಸಿಕೊಳ್ಳಲಿದ್ದಾರೆ. ಕೆ.ಎಂಸಿ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮುದಾಯದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕಾ ಸಾಧನಗಳ ವಿತರಣೆ ಕಾರ್ಯಕ್ರಮ, ಬಂಟ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಎ.ಜೆ. ಹಾಸ್ಪಿಟಲ್ ಆಡಳಿತ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ, ನ್ಯೂ ಮೆಡಿಕಲ್ ಸೆಂಟರ್ ಕುಂದಾಪುರದ ಆಡಳಿತ ನಿರ್ದೆಶಕ ಡಾ. ರಂಜನ್ ಶೆಟ್ಟಿ, ಭದ್ರಾವತಿ ಬಂಟರ ಸಂಘದ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ ನಡೆಯಲಿರುವ ಜೀರ್ಣಾಷ್ಟಬಂಧ ಪುರಸ್ಸರ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವದ ಪೂರ್ವಭಾವಿಯಾಗಿ ಮುಹೂರ್ತ ದರ್ಶನ ಸೇವೆ ದೇವಸ್ಥಾನದಲ್ಲಿ ಇತ್ತೀಚಿಗೆ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಫಲನ್ಯಾಸ ಪೂರ್ವಕ ಗುರುಗಣಪತಿ ಪೂಜೆ, ಸಂಕಲ್ಪ, ಪುಣ್ಯಾಹವಾಚನ, ಅಧಿವಾಸ ಹೋಮ, ಕಲಶಾಭಿಷೇಕ, ಮಹಾಪೂಜೆ ಮೊದಲಾದವುಗಳು ಪುರೋಹಿತರಾದ ರಾಘವೇಂದ್ರ ಅಡಿಗ ನೇತೃತ್ವದಲ್ಲಿ ನಡೆಯಿತು. ನಾಗದೇವರ ಪಾತ್ರಿ ರವಿರಾಜ್ ಭಟ್ ಅಂಪಾರು ಅವರಿಂದ ದರ್ಶನ ಸೇವೆ ನಡೆಯಿತು. ನಾಗಮಂಡಲೋತ್ಸವದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಲಿರುವ ಪ್ರಮುಖರಿಗೆ ಪ್ರಸಾದ ನೀಡಲಾಯಿತು. ಶ್ರೀ ನಾಗ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಗಣಪತಿ ಮೇಸ್ತ, ಗೌರವಾಧ್ಯಕ್ಷ ಸುರೇಶ ಖಾರ್ವಿ, ಕಾರ್ಯದರ್ಶಿ ಶ್ರೀಧರ ಮೇಸ್ತ, ಗುಜ್ಜಾಡಿ ಗ್ರಾಪಂ ಸದಸ್ಯ ಹರೀಶ ಮೇಸ್ತ, ಅಖಿಲ ಕರ್ನಾಟಕ ಚಾರೋಡಿ ಮೇಸ್ತ ಸಮಾಜದ ಅಧ್ಯಕ್ಷ ರಾಮಚಂದ್ರ ಶಿರೂರ್ಕರ್, ಬೆಣ್ಗೆರೆ ಶ್ರೀ ಸುಬ್ರಹ್ಮಣ್ಯೇಶ್ವರ ಯುತ್ ಕ್ಲಬ್ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯ ಪಡೆಯಲು ಸೇವಾ-ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 8277799990 ಗೆ ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ ಕುಂಭಾಶಿಯ ಶ್ರೀಧರ್ ಆಚಾರ್ ಮತ್ತು ಹೇಮಲತಾ ಅವರ ಪುತ್ರನಾದ ಸಚಿನ್ ಆಚಾರ್, ದ್ವಿತೀಯ ಬಿ.ಸಿ.ಎ. (ಬಿ) ಅವರು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಅವರಿಗೆಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ದೀಪಾ ಪೂಜಾರಿ ಅವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿದ್ಯಾರ್ಥಿಗಳು ಪಠ್ಯದಷ್ಟೇ ಆಸಕ್ತಿ ಪಠ್ಯೇತರ ಚಟುವಟಿಕೆಯಲ್ಲಿ ವಹಿಸಬೇಕು. ಅದರಲ್ಲೂ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮಾತ್ರವಲ್ಲದೆ ಅವರ ಮಾನಸಿಕ ವಿಕಸನಕ್ಕೂ ಪೂರಕವಾಗಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಸ್ಕೌಟ್ಸ್ ಮತ್ತು ಗೈಡ್ನ ದ.ಕ.ಜಿಲ್ಲಾ ಮುಖ್ಯ ಆಯುಕ್ತ ಡಾ. ಎಂ. ಮೋಹನ್ ಆಳ್ವ ನುಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳಿಗಾಗಿ ಸ್ವರಾಜ್ ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡೋತ್ಸವ-2025ನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸೌಹಾರ್ದ, ಸಾಮರಸ್ಯದ ಬದುಕನ್ನು ಕಲಿಸುವುದರ ಜೊತೆಗೆ ಹೋರಾಟ ಮನೋಭಾವವನ್ನು ಮೈಗೂಡಿಸಿಕೊಳ್ಳಲು ಸಹಕರಿಸುತ್ತದೆ. ಇದೇ ಮೊದಲ ಬಾರಿಗೆ ಇಂತಹ ಕ್ರೀಡಾ ಕೂಟ ಆಯೋಜನೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಏರ್ಪಡಿಸುವ ಉದ್ದೇಶವಿದೆ ಎಂದು ಆಶಯ ವ್ಯಕ್ತಪಡಿಸಿದರು. ಜಿಲ್ಲಾ ಸ್ಕೌಟ್ಸ್ ಆಯುಕ್ತ ಬಿ ಮೊಹಮ್ಮದ್ ತುಂಬೆ, ಜಿಲ್ಲಾ ಕಾರ್ಯದರ್ಶಿ ಪ್ರತಿಮ್…
