Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೊರಗ ಸಮುದಾಯದ ಹಾಡಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ವಿದ್ಯುತ್, ಆರೋಗ್ಯ ಸೇವೆ, ಸಂಪರ್ಕ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಮಂಗಳವಾರ ಮಣಿಪಾಲ ರಜತಾದ್ರಿಯ ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ-ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆ ಅನುಷ್ಠಾನ ಕುರಿತ ಅಂತರ್ ಇಲಾಖೆಯ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದರು. ಸರ್ಕಾರ ಆದಿವಾಸಿ ಹಾಗೂ ಬುಡಕಟ್ಟುಗಳ ಜನಾಂಗದವರ ಸಮಗ್ರ ಅಭಿವೃದ್ಧಿ ಸೇರಿದಂತೆ ಅವರುಗಳ ಕಲ್ಯಾಣ ಅಭಿವೃದ್ಧಿಗೆ ಜಾರಿಗೆ ತಂದಿರುವ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕು. ಕೊರಗ ಸಮುದಾಯದವರು ಹೆಚ್ಚಿನ ಜನರು ಅನಕ್ಷರಸ್ಥರೇ ಇರುವ ಹಿನ್ನಲೆಯಲ್ಲಿ ಅವರುಗಳಿಗೆ ಯೋಜನೆಗಳ ಅರಿವು ಮೂಡಿಸಿ ಫಲಾನುಭವಿಗಳಾಗಿಸುವ ಕೆಲಸ ಆಗಬೇಕು ಎಂದರು. ಸರ್ಕಾರವು ವಿಶೇಷ ದುರ್ಬಲ ಬುಡಕಟ್ಟು ಜನಾಂಗದವರು ಹೆಚ್ಚಾಗಿ ವಾಸಿಸುತ್ತಿರುವ ಗ್ರಾಮಗಳನ್ನು ಗುರುತಿಸಿ ಅವರಿಗೆ ಅವಶ್ಯವಿರುವ ಆರೋಗ್ಯ ಸೇವೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ರೈತ ಸಂಘದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಮಟ್ಟದ ಹೊನಲು ಬೆಳಕಿನ ಕಂಬಳೋತ್ಸವ ಮತ್ತು ರೈತರ ಸಮಾಗಮ ಕಾರ್ಯಕ್ರಮ ʼಬೈಂದೂರು ಕಂಬಳʼ ಜನವರಿ 7ರಂದು ನಡೆಯಲಿದ್ದು, ಕ್ಯಾರ್ತೂರಿನಲ್ಲಿ ಭರದ ತಯಾರಿ ನಡೆದಿದೆ. ಗಂಗಾನಾಡು ಗ್ರಾಮದ ಕ್ಯಾರ್ತೂರು ಶ್ರೀ ನರಸಿಂಹ ದೇವಸ್ಥಾನದ ಪಕ್ಕದ ವಿಶಾಲ ಗದ್ದೆ ಆಯೋಜಿಸಲಾಗಿರುವ ಬೈಂದೂರು ಕಂಬಳ ನಡೆಯಲಿದ್ದು ಅದಕ್ಕಾಗಿ ಸಿದ್ದತೆ ನಡೆಸಲಾಗಿದೆ. ಸಂಜೆ 5ರಿಂದ ಮೆರವಣಿಗೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕಂಬಳ ಜರುಗಲಿದೆ. ಕಂಬಳಕ್ಕಾಗಿಯೇ ಹೊಸತಾಗಿ ಎರಡು ಟ್ರ್ಯಾಕ್ ಇರುವ ಕಂಬಳಗದ್ದೆಯನ್ನು ನಿರ್ಮಾಣ ಮಾಡಲಾಗಿದೆ. ಕರ್ತೂರು ಪರಿಸರವನ್ನು ವಿದ್ಯುದಲಂಕಾರಗಳಿಂದ ಸಿಂಗರಿಸಲಾಗಿದ್ದು ಹಬ್ಬದ ಸಂಭ್ರಮ ಕಳೆಗಟ್ಟಿದೆ. ಗ್ರಾಮೀಣ ಭಾಗದಲ್ಲಿಯೂ ಕಂಬಳವನ್ನು ದೊಡ್ಡ ಮಟ್ಟದಲ್ಲಿ ಸಂಘಟಿಸಿ ಅದ್ಧೂರಿಯಾಗಿ ರೈತರ ಹಬ್ಬವಾಗಿ ಆಚರಿಸಬೇಕು ಎಂಬ ಸದುದ್ದೇಶದೊಂದಿಗೆ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಬೈಂದೂರು ಕಂಬಳದ ನೇತೃತ್ವ ವಹಿಸಿದ್ದು, ಇದಕ್ಕೆ ಬೈಂದೂರಿನ ಮರಾಠಿ ಹಾಗೂ ಗೊಂಡ ಸಮಾಜ, ಬೈಂದೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಒತ್ತಿನೆಣೆ ರಾಷ್ಟ್ರೀಯ ಹೆದ್ದಾರಿ 66ರ ಪಶ್ಚಿಮ ಬದಿಯ ರಸ್ತೆಯ ಅಂಚಿನಲ್ಲಿ ನಿಂತಿದ್ದ ಲಾರಿಗೆ ಭಟ್ಕಳ ಕಡೆಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿಯಾಗಿ ಸಹಪ್ರಯಾಣ ಮಾಡುತ್ತಿದ್ದ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ಬೈಂದೂರು ಕಡೆಯಿಂದ ಭಟ್ಕಳ ಕಡೆಗೆ ಮಾರುತಿ ಸ್ವಿಪ್ಟ್ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಚಾಲಕ ಹೇಮಂತ್ ಎಂಬುವವರು ತೀರಾ ಎಡ ಬದಿಗೆ ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿತ್ತು. ಪರಿಣಾಮ ಕಾರಿನಲ್ಲಿ ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಲಾವಣ್ಯ ಎಂಬುವವರಿಗೆ ತಲೆಗೆ ಗಂಭೀರ ಸ್ವರೂಪದದ ರಕ್ತಗಾಯವಾಗಿ ಪ್ರಜ್ಞೆ ತಪ್ಪಿದ್ದು ಕಾರಿನ ಚಾಲಕ ಹೇಮಂತನಿಗೆ ಸಣ್ಣಪುಟ್ಟ ತರಚಿದ ಗಾಯಗಳಾಗಿತ್ತು. ಗಾಯಾಳು ಲಾವಣ್ಯ ಅವರನ್ನುತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಮೃತಪಟ್ಟಿರುವುದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರತ್ತದೆ.

Read More

ಕುಂದಾಪ್ರ ಡಾಟ್ ಕಾಂಬೆಂಗಳೂರು: ಸ್ಯಾಂಡಲ್ವುಡ್ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಮಾಫಿಯಾ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್ ಆಗಿದೆ. ಮಾಫಿಯಾ ಈಗಾಗಲೇ ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ. ಇದೀಗ ಪ್ರಜ್ವಲ್ ರೊಮ್ಯಾಂಟಿಕ್ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ಪ್ರಜ್ವಲ್ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ತಾಯಿಯಾಗುತ್ತಿರುವ ಸಂಭ್ರಮವನ್ನು ಹಂಚಿಕೊಂಡಿದ್ದ ಅದಿತಿ ಇದೀಗ ಮಾಫಿಯಾ ಮೂಲಕ ಅಭಿಮಾನಿಗಳ ಮುಂದೆ ಬರಲಿ ಸಜ್ಜಾಗಿದ್ದಾರೆ. ಮಾಫಿಯಾ ಸಿನಿಮಾ ಮಮ್ಮಿ ಖ್ಯಾತಿಯ ನಿರ್ದೇಶಕ ಲೋಹಿತ್ ಸಾರಥ್ಯದಲ್ಲಿ ಮೂಡಿಬಂದಿದೆ. ಲೋಹಿತ್ ಮತ್ತು ಪ್ರಜ್ವಲ್ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದೆ. ಹಾಗಾಗಿ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಸದ್ಯ ರಿಲೀಸ್ ಆಗಿರುವ ‘ತುಂಬನೇ ಕೇಳಲಾರೆ…’ ಸಾಲುಗಳಿಂದ ಪ್ರಾರಂಭವಾಗುವ ಈ ರೊಮ್ಯಾಂಟಿಕ್ ಹಾಡು ಹರಿಚರಣ್ ಧ್ವನಿಯಲ್ಲಿ ಮೂಡಿ ಬಂದಿದೆ. ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯ ಈ ಹಾಡಿಗಿದೆ. ಪ್ರಜ್ವಲ್ ಮತ್ತು ಅದಿತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲೆ ಸಂಸ್ಕೃತಿಯು ಊರಿಗೊಂದು ಪ್ರಾತಿನಿದ್ಯವನ್ನು ನೀಡುತ್ತದೆ. ರಾಜ್ಯದ ವಿವಿಧ ಕಲಾಪ್ರಕಾರಗಳನ್ನು ಆಸ್ವಾದಿಸುವ ಜೊತೆಗೆ ಕಲಾವಿದರಿಂದ ಪ್ರೇರಣೆಗೊಂಡು ನಮ್ಮಲ್ಲಿಯ ಪ್ರತಿಭೆಗಳೂ ರಾಜ್ಯ ಮಟ್ಟಕ್ಕೆ ಹೋಗುವಂತಾಗಬೇಕು ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಲಾವಣ್ಯ ರಿ. ಬೈಂದೂರು, ಸುರಭಿ ರಿ. ಬೈಂದೂರು ಇವರ ಸಹಯೋಗದೊಂದಿಗೆ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಮೊಗೇರಿ ಗೋಪಾಲಕೃಷ್ಣ ಅಡಿಗ ರಂಗಮಂದಿರದಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಲಾ ಪ್ರಕಾರಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬೈಂದೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿದೆ. ನವೆಂಬರ್ 1ರಂದು ಬೈಂದೂರಿನಲ್ಲಿ ಕನ್ನಡ ಉತ್ಸವ ಜರುಗಬೇಕು ಇದಕ್ಕೂ ಇಲಾಖೆಯ ಸಹಕಾರ ಇರಲಿ ಎಂದರು. ಬೈಂದೂರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ ಪಿ. ನಾಯ್ಕ್, ಉಪಪ್ರಾಂಶುಪಾಲರಾದ ಪದ್ಮನಾಭ ಪಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಲಾವಣ್ಯ ಬೈಂದೂರು ಅಧ್ಯಕ್ಷ ಬಿ. ನರಸಿಂಹ ನಾಯಕ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಜ.03: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಜಿಲ್ಲೆಯ ಪಡುವರಿ ಸೋಮೇಶ್ವರ ಬೀಚ್-02, ತ್ರಾಸಿ-ಮರವಂತೆ ಬೀಚ್ 03, ಆಸರೆ ಬೀಚ್ 02, ಮಲ್ಪೆ ಬೀಚ್ 04, ಸೈಂಟ್ ಮೇರೀಸ್ ಐಲ್ಯಾಂಡ್-03, ಕಾಪು ಬೀಚ್ 02, ಪಡುಬಿದ್ರಿ ಮುಖ್ಯ ಬೀಚ್ 02 ಹಾಗೂ ಕುಂದಾಪುರ ಕೋಡಿ ಬೀಚ್-02 ಗಳಲ್ಲಿ ಒಟ್ಟು 20 ಜೀವ ರಕ್ಷಕ ಸಿಬ್ಬಂದಿಗಳಿಗೆ ಇಲಾಖೆಯ ವತಿಯಿಂದ ಜೀವ ರಕ್ಷಕ ತರಬೇತಿ ನೀಡಿ ಮುಂದಿನ ದಿನಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಉದ್ಯೋಗಾವಕಾಶ ಕಲ್ಪಿಸಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ಮುಂಚಿತವಾಗಿ ಆಯ್ಕೆ ಪ್ರಕ್ರಿಯೆಯು ಜನವರಿ 8 ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯ ಒಳಗೆ ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದ ಈಜುಕೊಳ ಇಲ್ಲಿ ನಡೆಯಲಿದ್ದು, 18 ರಿಂದ 35 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾದೊಂದಿಗೆ ಹಾಜರಾಗಿ ನೊಂದಾಯಿಸಿಕೊAಡು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಸಿಯ ಆನೆಗುಡ್ಡೆ ಶ್ರೀ ವಿನಾಯಕ ದೇವರ ಸನ್ನಿಧಿಯಲ್ಲಿ 21 ಸಾವಿರ ತೆಂಗಿನಕಾಯಿ ಮೂಡು ಗಣಪತಿ ಸೇವೆ ನಡೆಯಿತು. ಬ್ರಹ್ಮಾವರದ ನಿವಾಸಿ ಪ್ರಸ್ತುತ ಅಮೆರಿಕಾದಲ್ಲಿ ನೆಲೆಸಿರುವ ಡಾ.ಮೇಜರ್ ವಂದನ ಬಿರ್ತಿ ಮತ್ತು ಶ್ರೀ ಡಾ. ಮೇಜರ್ ಪ್ರವರ್ಧನ ಬಿರ್ತಿ ಅವರು 21 ಸಾವಿರ ತೆಂಗಿನಕಾಯಿ ಮೂಡು ಗಣಪತಿ ಸೇವೆ ಸಲ್ಲಿಸಿದರು. ದೇವಳದ ಆಡಳಿತ ಧರ್ಮದರ್ಶಿ ಕೆ. ರಮಣ ಉಪಾಧ್ಯಾಯ, ವಿಶ್ರಾಂತ ಧರ್ಮದರ್ಶಿ, ಸೂರ್ಯನಾರಾಯಣ ಉಪಾಧ್ಯಾಯ, ಕೆ.ನಿರಂಜನ ಉಪಾಧ್ಯಾಯ, ಕೆ. ವಿಠಲ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ಶ್ರೀಶ ಉಪಾಧ್ಯಾಯ, ಮ್ಯಾನೇಜರ್ ನಟೇಶ್ ಕಾರಂತ್, ಹಾಗೂ ದೇವಳದ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗದವರು, ಅರ್ಚಕರು ಉಪಸ್ಥಿತರಿದ್ದರು. ರವಿರಾಜ್ ಉಪಾಧ್ಯಾಯ, ಸುಬ್ರಹ್ಮಣ್ಯ ಉಪಾಧ್ಯಾಯ, ಶ್ರೀಧರ್ ಉಪಾಧ್ಯಾಯ ಅವರು ವಿಶೇಷ ಪೂಜಾ ಕೈಂಕರ್ಯದಲ್ಲಿ ಸಹಕರಿಸಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೆನರಾ ಬ್ಯಾಂಕ್ನ ನಿವೃತ್ತ ಮ್ಯಾನೇಜರ್ ಕೋಟೇಶ್ವರದ ಕೆ. ಪಾಂಡುರಂಗ ಭಟ್ (81) ಅವರು ಮಂಗಳವಾರ ನಿಧನರಾಗಿದ್ದಾರೆ. ಕುಂಭಾಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿದ್ದ ಪಾಂಡುರಂಗ ಭಟ್‌ ಅವರು ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಹಲವು ಸರಕಾರಿ ಶಾಲೆಗಳಿಗೂ ನೆರವು ನೀಡಿದ್ದರು. ಕೋಟೇಶ್ವರದ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನ, ಶ್ರೀರಾಮ ಸೇವಾ ಸಂಘ ಮೊದಲಾದ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಡ್ಕಲ್ ಇದರ ವಾರ್ಷಿಕೋತ್ಸವ ಸಮಾರಂಭ ́ಜಡ್ಕಲ್ ಸಂಭ್ರಮʼ ಇತ್ತೀಚಿಗೆ ಜರುಗಿತು. ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮೃದ್ಧ ಬೈಂದೂರು ಯೋಜನೆಯ ಬಗ್ಗೆ ಮಾತನಾಡಿದರು ಮತ್ತು ಈ ಯೋಜನೆಯಡಿಯಲ್ಲಿ ಜಡ್ಕಲ್ ಶಾಲೆಯಲ್ಲಿ ಈಗಾಗಲೇ ಕಂಪ್ಯೂಟರ್ ತರಬೇತಿ ಕೇಂದ್ರ, ಗ್ರಂಥಾಲಯ ಹಾಗೂ ಆಟದ ಸಾಮಗ್ರಿಗಳನ್ನು ವಿತರಿಸಲಾಗಿದೆ. ಸ್ವಯಂಸ್ಫೂರ್ತಿ ಫೌಂಡೇಶನ್ ವತಿಯಿಂದ ಸಮೃದ್ಧ ಬೈಂದೂರು ಯೋಜನೆಯ ಮೊದಲ ಕಾರ್ಯಕ್ರಮವನ್ನು ಜಡ್ಕಲ್, ಬಿಜೂರು ಮತ್ತು ಕಾಲ್ತೊಡು ಶಾಲೆಗಳಲ್ಲಿ ಉದ್ಘಾಟಿಸಿದನ್ನು ಮೆಲುಕು ಹಾಕಿದರು. ದಾನಿಗಳ ಮತ್ತು ಹಳೇ ವಿದ್ಯಾರ್ಥಿಗಳ ಸಹಾಯದಿಂದ ಸರ್ಕಾರಿ ಶಾಲೆಗಳು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು. ಹಳೇ ವಿದ್ಯಾರ್ಥಿ ನಾಗರಾಜ್ ಶೆಟ್ಟಿ ಜಡ್ಕಲ್ ಸ್ವಸ್ಥಿವಾಚನಗೈದರು. ಜಡ್ಕಲ್ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಶಿವರಾಮ್ ಬೆಳಾರಿ, ಜಡ್ಕಲ್ ಚರ್ಚ್ ಧರ್ಮಗುರು ರೆ.ಫಾ. ಥೋಮಸ್ ವಾರೆಕಾಟಿಲ್, ಉದ್ಯಮಿ ಉದಯ ಕುಮಾರ್ ಶೆಟ್ಟಿ ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ ನಾಯ್ಕ್ ಸದಸ್ಯರು ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರದ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಿಂದ ಪ್ರಸಾದ ರೂಪದಲ್ಲಿ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ಜನವರಿ 1 ರಿಂದ 15ರವರೆಗೆ ದೇಶದ ಗ್ರಾಮ ಗ್ರಾಮಗಳಿಗೂ ತಲುಪಿಸುವ ಸಂಕಲ್ಪ ಹೊಂದಲಾಗಿದೆ. ಈ ಸಂಕಲ್ಪದಂತೆ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಶಿರೂರಿನ ಆಲಂದೂರಿನಲ್ಲಿ ಅಯೋಧ್ಯೆಯ ಮಂತ್ರಾಕ್ಷತೆಯ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಿ, ಆಲಂದೂರು ಭಾಗದ ಮನೆ ಮನೆಗಳಿಗೆ ತೆರಳಿ ಪ್ರಸಾದ ವಿತರಿಸಿದರು.

Read More