ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗೆ ʼಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರʼ ಎಂಬ ವಿಷಯದ ಕುರಿತು ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿಯ ವೈದ್ಯಕೀಯ ನಿರ್ದೇಶಕರಾದ ಡಾ. ಪಿ.ವಿ. ಭಂಡಾರಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಪೋಷಕರಿಗೆ ʼಮಕ್ಕಳಿಗೆ ಒತ್ತಡವನ್ನು ಹೇರದೆ, ಅವರ ಬೇಕು ಬೇಡಗಳನ್ನು ಅರಿತು, ಸ್ನೇಹಿತರಂತೆ ವರ್ತಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ಮಕ್ಕಳಲ್ಲಿ ಇದ್ದ ಭಯದ ವಾತಾವರಣವನ್ನು ತೊಡೆದು ಹಾಕಿ, ಸ್ವಚ್ಛಂದವಾಗಿ ಓದುವ ಪರಿಸರವನ್ನು ನಿರ್ಮಿಸಬೇಕುʼ ಎಂದು ತಿಳಿಸಿದರು. ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಒಲಿಂಪಿಕ್ ಸಂಸ್ಥೆ ಜಿಲ್ಲಾಡಳಿತ, ದಕ್ಷಿಣ ಕನ್ನಡ ಮತ್ತು ಉಡುಪಿ ಇವರ ಸಹಯೋಗದಲ್ಲಿ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಕರ್ನಾಟಕ ಕ್ರೀಡಾಕೂಟ 2025ರ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್ ಚಿನ್ನದ ಪದಕ ಪಡೆಯುವುದರ ಮೂಲಕ ಅತ್ಯುತ್ತಮ ಸಾಧನೆಗೆ ಸಾಕ್ಷಿಯಾಗಿದ್ದಾನೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಟೇಶ್ವರ ನಿವಾಸಿ ಮಹಮ್ಮದ್ ಫರ್ಹಾನ್ (19) ಅವರು ಬುಧವಾರದಂದು ವಾಸ್ತವ್ಯದ ಬಾಡಿಗೆ ಮನೆಯ ರೂಮ್ನಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ. ಅವರು ತನಗಿರುವ ಆರೋಗ್ಯ ಸಮಸ್ಯೆ ಅಥವಾ ಇನ್ಯಾವುದೋ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಯಾಕೂಬ್ ಖಾದರ್ ಗುಲ್ವಾಡಿ ಅವರ ಚೊಚ್ಚಲ ನಿರ್ದೇಶನದ ಬ್ಯಾರಿ ಭಾಷೆಯ ‘ಟ್ರಿಪಲ್ ತಲಾಖ್’ ಸಿನಿಮಾಗೆ ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಚಿತ್ರ ಪ್ರಶಸ್ತಿ ಲಭಿಸಿದೆ. ಮುಂಬೈನ ಪ್ರಭನಾರಾಯಣ ಸುವರ್ಣ ಮತ್ತು ಯಾಕೂಬ್ ಖಾದರ್ ಗುಲ್ವಾಡಿ ಜೊತೆಯಾಗಿ ಈ ಸಿನಿಮಾ ನಿರ್ಮಿಸಿದ್ದರು. ಪಿ.ವಿ.ಆರ್ ಸ್ವಾಮಿ ಮತ್ತು ಸತೀಶ್ ಕುಮಾರ್ ಛಾಯಾಗ್ರಹಕರಾಗಿದ್ದರು. ಎಡಿಟರ್-ಕಲರೀಸ್ಟ್-ಮೋಹನ್ ಎಲ್ ರಂಗ ಕಹಳೆ, ಸೌಂಡ್ ಮಿಕ್ಸಿಂಗ್-ಮುನೀಬ್ ಅಹಮದ್, ಹಿನ್ನೆಲೆ ಸಂಗೀತ ಮತ್ತು ಸೌಂಡ್ ಎಫೆಕ್ಟ್-ಗಿರೀಶ್ ಬಿ.ಎಮ್, ವಸ್ತ್ರವಿನ್ಯಾಸ-ಇಸ್ಮಾಯಿಲ್ ಸರ್ಫುದ್ದೀನ್, ಕಲೆ- ಎ.ಕೆ.ಗುಲ್ವಾಡಿ, ಪಣಕನಹಳ್ಳಿ ಪ್ರಸನ್ನ ಮತ್ತು ರಿಝ್ವಾನ್ ಗುಲ್ವಾಡಿ ಸಹ ನಿರ್ದೇಶನ ಮಾಡಿದ್ದರು. ಕಲಾವಿದರಾಗಿ ರೂಪ ವರ್ಕಾಡಿ, ನವ್ಯ ಪೂಜಾರಿ, ಅಝರ್ ಶಾ, ಮಹಮ್ಮದ್ ಬಡ್ಡೂರ್, ಎಮ್. ಕೆ.ಮಠ, ವಿಶೇಷ ಪಾತ್ರದಲ್ಲಿ ಕುಂದಾಪುರದ ಹಿರಿಯ ವಕೀಲರಾದ ರವಿಕಿರಣ್ ಮುರ್ಡೇಶ್ವರ ಮತ್ತು ಎ.ಎಸ್.ಎನ್ ಹೆಬ್ಬಾರ್ ಸಹಿತ ಉಮರ್ ಯು.ಹೆಚ್, ಸುಬ್ರಹ್ಮಣ್ಯ ಶೆಟ್ಟಿ, ನಾರಾಯಣ ಸುವರ್ಣ, ಪ್ರಭಾ ಸುವರ್ಣ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪಠ್ಯದ ಜೊತೆಗಿನ ಪಠ್ಯೇತರ ಚಟುವಟಿಕೆಗಳು ಸಮಗ್ರ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಬಲ್ಲದು ಎಂದು ದಕ್ಷಿಣ ಕನ್ನಡ ಸ್ಕೌಟ್ಸ್ ಗೈಡ್ಸ್ ಜಿಲ್ಲಾ ಆಯುಕ್ತ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ನುಡಿದರು. ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಕೃಷಿ ಸಿರಿ ವೇದಿಕೆಯಲ್ಲಿ ಗುರುವಾರ ’ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪೋರಿʼ ಕಾರ್ಯಕ್ರಮದ ಸ್ಕೌಟ್ಸ್ ಮತ್ತು ಗೈಡ್ಸ್ ಮೇಳ, ರೋವರ್ಸ್ ಮತ್ತು ರೇಂಜರ್ಸ್ ಸಮಾಗಮವನ್ನು ಉದ್ಘಾಟಿಸಿ ಮಾತನಾಡಿದರು. ಬಾಲ್ಯದ ಕಲಿಕೆ ಉಜ್ವಲ ಭವಿಷ್ಯವನ್ನು ರೂಪಿಸುತ್ತದೆ. ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದಲ್ಲಿ ವಿದ್ಯೆ ಮತ್ತು ಬುದ್ಧಿಯ ಜೊತೆಗೆ ಪಠ್ಯೇತರ ವಿಚಾರಗಳಲ್ಲಿ ತೊಡಗಿಸಿಕೊಂಡಾಗ ಸುಂದರ ಮನಸನ್ನು ಕಟ್ಟಿಕೊಳ್ಳಲು ಸಾಧ್ಯ. ಅವಕಾಶಗಳ ಸದುಪಯೋಗ ಹಾಗೂ ಸಂಸ್ಕಾರದ ಗುಣವನ್ನು ಬೆಳೆಸಿಕೊಳ್ಳಿ. ದೇಶಪ್ರೇಮ, ರಾಷ್ಟ್ರ ಪ್ರೇಮದೊಂದಿಗೆ ಬದುಕೋಣ, ಆದರೆ ಅನ್ಯ ದೇಶದ ನಡುವೆ ಸಂಘರ್ಷ ಬೇಡ ಎಂದರು. ದೇಶ ಪ್ರೇಮದ ಜೊತೆಗೆ ಪರಿಸರ ಪ್ರೇಮವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ” ಈ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರನ್ನು ಆಯ್ಕೆ ಮಾಡಲಾಗಿದ್ದಾರೆ. ಅವರು ಇದುವರೆಗೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ. ಏಪ್ರಿಲ್ 11ರಂದು ಗೋವಾದಲ್ಲಿ ನಡೆಯಲಿರುವ ವೈಭವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಆಯ್ಕೆ ಸಮಿತಿಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಕೋ ಕ್ಲಬ್ ಕಾರ್ಯಕ್ರಮದಡಿಯಲ್ಲಿ ‘ಅಂಬರ ವಿಹಾರ’ ಆಕಾಶ ಕಾಯಗಳ ವೀಕ್ಷಣೆ ಕಾರ್ಯಕ್ರಮವು ಕಂಚಿಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ಡಿಎಮ್ಸಿ ಅಧ್ಯಕ್ಷರಾದ ಪ್ರಭಾಕರ್ ದೇವಾಡಿಗ ಅವರು ವಹಿಸಿದ್ದರು. ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಆಕಾಶ ಕಾಯಗಳ ಬಗ್ಗೆ ಮಕ್ಕಳ ಕುತೂಹಲದ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಪ್ರತ್ಯಕ್ಷವಾಗಿ ತಂತ್ರಜ್ಞಾನಧ ಮೂಲಕ ಪರಿಚಯಿಸಿ , ಮಕ್ಕಳಿಗೆ ಆಕಾಶ ಕಾಯಗಳ ಬಗ್ಗೆ ಒಂದಷ್ಟು ಮಾಹಿತಿ ನೀಡಿದರು. ನಂತರ ಟೆಲಿಸ್ಕೋಪ್ ಮೂಲಕ ಗ್ರಹಗಳ ವೀಕ್ಷಣೆ ಮಾಡಲಾಯಿತು. ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಇಲಾಖೆಯ ಅಧಿಕಾರಿಗಳು ಬೇರೆ ಬೇರೆ ಶಾಲೆಯ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷರಾದ ಲಲಿತಾ ದೇವೇಂದ್ರ ಶೇಟ್, ಸಂಪನ್ಮೂಲ ವ್ಯಕ್ತಿ ಉಪನ್ಯಾಸಕಿ ಶ್ರೀನಯನ ಮತ್ತು ನಿವೃತ್ತ ಮುಖ್ಯ ಶಿಕ್ಷಕರಾದ ಮಹಾಬಲೇಶ್ವರ ಐತಾಳ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಜ್ಞಾನ ಶಿಕ್ಷಕಿ ಗೀತಾ ಪ್ರಾಸ್ತಾವಿಕ ಮಾತನಾಡಿದರು. ವಿಜ್ಞಾನ ಶಿಕ್ಷಕಿ ಜ್ಯೋತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡುತ್ತಿರುವ ಸ್ವಯಂಸ್ಪೂರ್ತಿ ಫೌಂಡೇಶನ್ 3 ಶಾಲೆಗಳಿಗೆ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಕೊಡುಗೆಯಾಗಿ ನೀಡಲಿದೆ. ಈ ಭಾರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ, ಯಳಜಿತ ಹಾಗೂ ಮುಲ್ಲಿಬಾರು ಶಾಲೆಗಳಲ್ಲಿ ಕೌಶಲ್ಯ ಕೇಂದ್ರ ತೆರೆಯಲಾಗುತ್ತಿದೆ. ಜನವರಿ 24 ಹಾಗೂ 25ರಂದು ನಡೆಯುವ ಸಮಾರಂಭವನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಉದ್ಘಾಟಿಸಲಿದ್ದು, ಆಯಾ ಶಾಲಾ ವ್ಯಾಪ್ತಿಯ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸ್ವಯಂಸ್ಪೂರ್ತಿ ಫೌಂಡೇಶನ್ ಮುಖ್ಯಸ್ಥರಾಗಿರುವ ಸಿ.ಎಸ್. ನಾಗರಾಜ ಶೆಟ್ಟಿ ಅವರ ನೇತೃತ್ವದ ಸ್ವಯಂಸ್ಪೂರ್ತಿ ಫೌಂಡೇಶನ್ ಮೂಲಕ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರದಲ್ಲಿ ಕನಿಷ್ಠ ನಾಲ್ಕು ಕಂಪ್ಯೂಟರ್ಗಳು, ಕಂಪ್ಯೂಟರ್ ಟೇಬಲ್ – ಖುರ್ಚಿ, ಬುಕ್ ರ್ಯಾಕ್, ಕ್ರೀಡಾ ಸಾಮಾಗ್ರಿಗಳನ್ನು ಗ್ರಾಮೀಣ ಭಾಗದ ಶಾಲೆಗೆ ನೀಡಲಾಗುತ್ತಿದೆ. ಈತನಕ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 12ಕ್ಕೂ ಹೆಚ್ಚು ಶಾಲೆಗಳಿಗೆ ಕೌಶಲ್ಯ ಕೇಂದ್ರ ಒದಗಿಸಿಕೊಡಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದಿರೆ: ಅರೆವಾಹಕ ಚಿಪ್ಗಳು (ಸೆಮಿಕಂಡಕ್ಟಡ್ ಚಿಪ್) ಅತ್ಯಂತ ಅಗತ್ಯವಾಗಿದ್ದು ಅದನ್ನು ವಿದೇಶದಿಂದ ಆಮದು ಮಾಡಿಕೊಳ್ಳುವುದು ಇಲ್ಲಿ ತಯಾರಿಸುವುದಕ್ಕಿಂತ ಅಧಿಕವಾಗುತ್ತದೆ. ಪ್ರಸ್ತುತ ಭಾರತ ಸರಕಾರ ಅರೆವಾಹಕ ಚಿಪ್ಗಳನ್ನು ತಯಾರಿಸಲು ಎಪ್ಪತ್ತಾರು ಸಾವಿರ ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದು ಇದು ಮುಂಬರುವ ದಿನಗಳಲ್ಲಿ ಭಾರತ ತಂತ್ರಜ್ಞಾನದ ಮಹತ್ವದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಬೆಂಗಳೂರಿನ ಡಿಆರ್ಡಿಒ ಹಾಗೂ ಸಿತಾರ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರವಿ ಎಂ. ಆರ್. ಹೇಳಿದರು. ಕರ್ನಾಟಕ ಸರಕಾರದ ವಿಜನ್ ಗ್ರೂಪ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿಯ ಅನುದಾನದೊಂದಿಗೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಞ್ರಾನಿಕ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗವು ಆಯೋಜಿಸಿದ ಮೆಮ್ಸ್ ಕ್ಯಾರಕ್ಟರೈಸೇಶನ್ ಟೆಕ್ನಿಕ್ ಎಂಬ ನಾಲ್ಕು ದಿನಗಳ ಉಪನ್ಯಾಸಕರ ಕೌಶಲ್ಯಾಭಿವೃದ್ಧಿ (ಎಫ್ಡಿಪಿ) ಕಾರ್ಯಾಗಾರವನ್ನು ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಭಾರತದಲ್ಲಿ ಜ್ಞಾನದ ಸಂಪತ್ತು ಹೇರಳವಾಗಿದ್ದು, ಮೇಮ್ಸ್ ಹಾಗೂ ಸೆಮಿಕಂಡಕ್ಟರ್ಗೆ ಸಂಬಂದಿಸಿದ ನೂರೈವತ್ತುಕ್ಕೂ ಅಧಿಕ ಸಂಸ್ಥೆಗಳು ಬೆಂಗಳೂರಿನಲ್ಲಿವೆ. ನಾವು ಅನೇಕ ತಂತ್ರಜ್ಞಾನವನ್ನು ಕಂಡುಕೊಂಡಿದ್ದೇವೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾಟಕ ಮಾಧ್ಯಮದಿಂದ ಮಕ್ಕಳಿಗೆ ಇತಿಹಾಸ ಅರಿಯಲು ಸುಲಭ. ನಾಟಕಗಳು ರಂಜನೆಯ ಜೊತೆಗೆ ಚಿಂತನೆಯನ್ನು ಹಚ್ಚುತ್ತದೆ ಎಂದು ಲಯನ್ಸ್ ಕ್ಲಬ್ ಬೈಂದೂರು ಉಪ್ಪುಂದ ಇದರ ಅಧ್ಯಕ್ಷರಾದ ಸತೀಶ್ ಶೆಟ್ಟಿ ಅವರು ಹೇಳಿದರು. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರಿನಲ್ಲಿ ರೋಟರಿ ಕ್ಲಬ್ ಬೈಂದೂರು, ಲಯನ್ಸ್ ಕ್ಲಬ್ ಬೈಂದೂರು – ಉಪ್ಪುಂದ, ಸೀನಿಯರ್ ಚೇಂಬರ್ ಬೈಂದೂರು ಇವರ ಸಹಯೋಗದಲ್ಲಿ ನಿರ್ದಿಗಂತ ಮೈಸೂರು ತಂಡದ ನಾಟಕ ತಿಂಡಿಗೆ ಬಂದ ತುಂಡೇರಾಯ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ದೇವಾಡಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ವೆಂಕಟರಮಣ ದೇವಾಡಿಗ ಮತ್ತು ದಯಾನಂದ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಾಟಕ ತಂಡದ ನಿರ್ವಾಹಕರಾದ ಗಣೇಶ್ ಅವರನ್ನು ಗೌರವಿಸಲಾಯಿತು. ನೀನಾಸಂ ಪದವೀಧರ ಸತ್ಯನ್ ಕೊಡೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೈಂದೂರು ರೋಟರಿ ಕ್ಲಬ್ನ ಕಾರ್ಯದರ್ಶಿ ಸುನಿಲ್ ಹೆಚ್. ಜಿ ಸ್ವಾಗತಿಸಿ, ಶಾಲಾ ಪದವೀಧರ…
