ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲೆಯಿಂದ ಬಂದ ಇಬ್ಬರು ಮಕ್ಕಳು ಕೆರೆಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ಳಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದ್ರೋಳ್ಳಿ ಚಿಕ್ಕನಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ನಂದ್ರೋಳ್ಳಿ ನಿವಾಸಿ ಶೀಲಾ ಹಾಗೂ ಸತೀಶ್ ಮಡಿವಾಳ ಎಂಬವರ ಮಗ ಧನರಾಜ್ (13) ಹಾಗೂ ಮಗಳು ಛಾಯ (7) ಎಂದು ಗುರುತಿಸಲಾಗಿದೆ. ವಂಡ್ಸೆ ಶಾಲೆಯ ವಿದ್ಯಾರ್ಥಿಗಳಾದ ಧನರಾಜ್ ಹಾಗೂ ಛಾಯಾ ಶಾಲಾ ವಾಹನದಲ್ಲಿ ಮನೆಗೆ ಹಿಂದಿರುಗಿದ್ದು, ಈ ವೇಳೆ ನಿತ್ಯವೂ ಇಳಿಯುತ್ತಿದ್ದ ನಿಲ್ದಾಣದಲ್ಲಿ ಇಳಿದಿದ್ದು, ಅಲ್ಲಿಂದ ಅವರ ತಾಯಿ ಛಾಯಾ ಬಂದು ಮನೆಗೆ ಕರೆದೊಯ್ದಿದ್ದರು ಎನ್ನಲಾಗಿದೆ. ಈ ನಡುವೆ ಮಾರ್ಗಮಧ್ಯೆ ಇರುವ ಕೆರೆಯ ಬಳಿಗೆ ಮಕ್ಕಳು ಏಕೆ ತೆರಳಿದರು ಎಂಬ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ. ಮಕ್ಕಳ ರಕ್ಷಣೆಗೆ ಮುಂದಾದ ತಾಯಿ ಶೀಲಾ ಅಸ್ವಸ್ಥಗೊಂಡು, ಆಕೆಯನ್ನು ಸ್ಥಳೀಯರು ರಕ್ಷಿಸಿದ್ದು, ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ಪ್ರತಿವರ್ಷದಂತೆ ಕೊಡಮಾಡಿದ ಸಮವಸ್ತ್ರ, ನೋಟ್ ಪುಸ್ತಕ, ಕಲಿಕಾ ಪರಿಕರಗಳ ವಿತರಣೆ ಕಾರ್ಯಕ್ರಮ ಹಾಗೂ ಪೋಷಕರ ಸಭೆ ನಡೆಯಿತು. ಕೊಡುಗೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು, ಮಕ್ಕಳ ಕಲಿಕೆಯ ಬಗ್ಗೆ ಪೋಷಕರು ಗಮನ ಹರಿಸಬೇಕು, ವಿದ್ಯಾರ್ಥಿಗಳ ಕಲಿಕಾಮಟ್ಟ ಹೆಚ್ಚಿಸಲು ಶಿಕ್ಷಕರು ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಅಂತೆಯೇ ಪೋಷಕರು ಕೂಡಾ ತಮ್ಮ ಮೇಲಿನ ಜವಬ್ದಾರಿಯನ್ನು ಅರಿತು ಪಾಲಿಸಬೇಕು, ಮಗು ಶಿಸ್ತು ಸಂಸ್ಕಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರೆಪಿಸಬೇಕು. ಹಾಗೆ ಇದು ಮಳೆಗಾಲ ಮಕ್ಕಳ ಬಗ್ಗೆಯೂ ಕಾಳಜಿ ವಹಿಸಬೇಕು ಎಂದರು. ಈ ಸಂದರ್ಭದಲ್ಲಿ ನಾಡಪ್ರಭು ಕೆಂಪೆಗೌಡರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ನಾಡಪ್ರಭು ಕೆಂಪೆಗೌಡರ ದಿನಾಚರಣೆ ಆಚರಿಸಲಾಯಿತು. ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಅಂಬಿಕಾ, ರೇವತಿ, ಪಲ್ಲವಿ, ಆಶಾ ಅವರನ್ನು ಸನ್ಮಾನಿಸಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶೆಫ್ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನೂತನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಉದ್ಘಾಟನಾ ಸಮಾರಂಭ ಶನಿವಾರ ತಾಲೂಕಿನ ಹೇರಂಜಾಲುವಿನಲ್ಲಿ ಜರುಗಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಫ್ಯಾಕ್ಟರಿ ಕಟ್ಟೋದು ಅಷ್ಟು ಸುಲಭವಲ್ಲ. ಪುಟ್ಟ ಹಳ್ಳಿಯಿಂದ ದೆಹಲಿವರೆಗೂ ಉದ್ಯಮ ಹೊಂದಿರುವ ಗೋವಿಂದ ಪೂಜಾರಿ ಅವರ ಸಾಧನೆ ನಿಜಕ್ಕೂ ಮೆಚ್ಚುವಂತದ್ದು. ಮನುಷ್ಯ ಕಷ್ಟಪಟ್ಟು ಮುಂದೆ ಬಂದಿದ್ದರಷ್ಟೇ ಆತನಿಗೆ ಕಷ್ಟಪಟ್ಟವರ ಬೆಲೆ ಗೊತ್ತಿರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಉದ್ಯಮಗಳು ಸ್ಥಾಪನೆಯಾಗಬೇಕು. ಇಂಥ ಉದ್ಯಮಿಗಳನ್ನು ಬೆಂಬಲಿಸಬೇಕು ಎಂದು ಹೇಳಿದರು. ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ ಮಾತನಾಡಿ, ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಶ್ಲಾಘಿಸಿದರು. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಕೋಟಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜಕಾರಣ ಯಾರ ಮನೆಯ ಆಸ್ತಿ ಅಲ್ಲ. ಇದು ನಿಂತ ನೀರಲ್ಲ. ಸೋಲಿನಿಂದ ದೃತಿಗೆಡದೆ ಪಕ್ಷ ಸಂಘಟಿಸಿ, ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ಒಂದು ಕಾಲದಲ್ಲಿ ಮಂಗಳೂರು, ಉಡುಪಿ ಜಿಲ್ಲೆಗಳು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದವು. ಇದೀಗ ಕಾಂಗ್ರೆಸ್ ಸಂಕಷ್ಟ ಸ್ಥಿತಿಯಲ್ಲಿದೆ. ನಮ್ಮ ಪಕ್ಷದಲ್ಲಿ ನ್ಯೂನತೆಗಳಿವೆ. ಮೊದಲು ಅವು ಸರಿಯಾಗಬೇಕು. ಚುನಾವಣೆ ಒಳ್ಳೆತನದಿಂದ ನಡೆಯಲ್ಲ, ಒಳ್ಳೆಯ ಹೆಸರಿದ್ದರೂ ಚುನಾವಣೆಯಲ್ಲಿ ಪ್ರಯೋಜನವಿಲ್ಲ. ಸತ್ಯ ಒಂದು ದಿನ ಗೆದ್ದೆ ಗೆಲ್ಲುತ್ತೆ ಎಂದು ಹೇಳಿದರು. ಯುಪಿಯಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿಯಲ್ಲಿತ್ತು. ಈಗ ಯುಪಿಯಲ್ಲಿ ಆರು ಸಂಸದರು ಆಯ್ಕೆಯಾಗಿದ್ದಾರೆ. ಕಳೆದ ಬಾರಿ 4.50 ಲಕ್ಷ ಮತಗಳ ಲೀಡ್ ನಿಂದ ಗೆದ್ದಿದ್ದ ಮೋದಿ ಈ ಬಾರಿ ಕೇವಲ 1.45 ಲಕ್ಷದಿಂದ ಗೆದ್ದರು. ಇದರರ್ಥ ದೇಶದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ’ಸ್ವಾಯತ್ತ ಎಂಬುದು ಶಿಕ್ಷಣ ಸಂಸ್ಥೆಯ ಸ್ವಯಂ ಪರಿಕಲ್ಪನೆಗಳ ಸಾಕಾರಕ್ಕೆ ದೊರೆತ ಮಹತ್ತರ ಜವಾಬ್ದಾರಿ. ಇಲ್ಲಿ ಬೋಧಕರು ನಿರಂತರ ವಿದ್ಯಾರ್ಥಿಗಳಾಗಬೇಕು’ಎಂದು ಮಂಗಳೂರಿನ ಡಾ. ಶಿವರಾಮ ಕಾರಂತ ನಿಸರ್ಗ ಧಾಮದ ವಿಜ್ಞಾನ ವಿಭಾಗದ ನಿರ್ದೇಶಕ ಡಾ. ಕೆ.ವಿ. ರಾವ್ ಹೇಳಿದರು. ಆಳ್ವಾಸ್ ಕಾಲೇಜಿನಲ್ಲಿ (ಸ್ವಾಯತ್ತ) ನಡೆದ ಆಂತರಿಕ ಮೌಲ್ಯ ಖಾತರಿ ಕೋಶ (ಐಕ್ಯುಎಸಿ)ದ ಸಭೆಯಲ್ಲಿ ಅವರು ಮಾತನಾಡಿದರು. ʼಸಂಸ್ಥೆಗಳು ತಮ್ಮ ಸಾಮರ್ಥ್ಯ, ದೌರ್ಬಲ್ಯ, ಅವಕಾಶ ಹಾಗೂ ಅಪಾಯದ (ಸ್ವೊಟ್) ಬಗ್ಗೆ ಸ್ವಯಂ ವಿಮರ್ಶೆ ಮಾಡಿಕೊಂಡಾಗ ಪ್ರಗತಿ ಕಾಣಲು ಸಾಧ್ಯ. ದೂರದೃಷ್ಟಿ, ಸಮಯ ನಿರ್ಬಂಧಿತ ಗುರಿ, ನಿರಂತರ ಕಲಿಕೆ ಇರಬೇಕುʼ ಎಂದ ಅವರು, ’ಕಾಲೇಜು ಎಂದರೆ ಕೇವಲ ಕಟ್ಟಡವಲ್ಲ. ಅದೊಂದು ಜೀವಂತಿಕೆಯ ಅಸ್ತಿತ್ವ’ಎಂದರು. ʼಕೈಗಾರಿಕೆಗಳ ಜೊತೆ ಸಂಬಂಧ, ಔದ್ಯೋಗಿಕ ತರಬೇತಿ, ಕೌಶಲ ವೃದ್ಧಿ, ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯ. ಪಕ್ವತೆಯಲ್ಲಿ ಆಳ್ವಾಸ್ ಯಾವಾಗಲೂ ಮಾದರಿ’ಎಂದು ಬಣ್ಣಿಸಿದರು. ಯೆನೆಪೋಯಾ ಪರಿಗಣಿತ ವಿಶ್ವವಿದ್ಯಾಲಯ ಆಯುಷ್ ಸಂಶೋಧನಾ ಕೇಂದ್ರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪ್ರಥಮ ಬಿ.ಕಾಂ. ವಿದ್ಯಾರ್ಥಿಗಳಿಗೆ ನೂತನ ಬ್ಯಾಂಕಿಂಗ್ ಪದ್ಧತಿ ಮತ್ತು ಅನುಸರಿಸಿಕೆಯ ಕುರಿತು ಪ್ರಾಯೋಗಿಕ ಜ್ಞಾನ ನೀಡುವ ನಿಟ್ಟಿನಲ್ಲಿ ‘ಬ್ಯಾಂಕ್ ಬ್ಯಾಟಲ್ 2.0” ಎಂಬ ಅಂತರ್-ತರಗತಿವಾರು ಸ್ಪರ್ಧೆ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೋಟಾ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಇವರು ಮಾತನಾಡಿ, ಆಧುನಿಕ ಬ್ಯಾಂಕಿಂಗ್ ಪದ್ಧತಿಯ ಅಳವಡಿಕೆಯಿಂದ ಉದ್ಯೋಗ ಕೇಂದ್ರದ ಮೇಲೆ ಆಗುವ ಪರಿಣಾಮದ ಕುರಿತು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಸುನೀಲ್ ಎಸ್. ಮೊಗವೀರ, ಗ್ರಾಹಕ ಸೇವಾ ಸಹವರ್ತಿ, ಕೆನರಾ ಬ್ಯಾಂಕ್ ಭಟ್ಕಳ ಇವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಗಳಿಸುವಲ್ಲಿ, ವಾಣಿಜ್ಯ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿರಬೇಕು ಎಂದರು ಕಾರ್ಯಕ್ರಮದ ಸಂಯೋಜಕರಾದ ಶರತ್ ಕುಮಾರ್ ಹಾಗೂ ಅಕ್ಷಯ್ ಕುಮಾರ್ ಉಪಸ್ಥಿತರಿದ್ದರು. ಕೃತಕ ಬ್ಯಾಂಕ್ ನಿರ್ಮಾಣ ಹಾಗೂ ಬ್ಯಾಂಕಿಂಗ್ ವ್ಯವಹಾರ ನಿರ್ವಹಣೆಯ ಅರಿವಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಕಸಿ ಹಾಗೂ ಸಸಿ ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಮತ್ತು ಕೆದೂರು ಹಾಗೂ ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ (ರೂ.25), ಕಸಿಗೇರು (ರೂ.32), ಕಾಳುಮೆಣಸು (ರೂ.11) ಹಾಗೂ ತೆಂಗು (ರೂ.75) ಸಸಿಗಳನ್ನು ಉತ್ಪಾದಿಸಲಾಗಿದ್ದು, ಗಿಡಗಳನ್ನು ಖರೀದಿಸಲು ಸಂಬಂದಪಟ್ಟ ತೋಟಗಾರಿಕೆ ಕ್ಷೇತ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಶಿವಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಹಾಗೂ ಕಾಳುಮೆಣಸು ಗಿಡಗಳು ಲಭ್ಯವಿದ್ದು, ಮೊ.7892326323 ಅನ್ನು, ವಾರಂಬಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ, ಕಾಳುಮೆಣಸು ಹಾಗೂ ತೆಂಗು ಗಿಡಗಳು ಲಭ್ಯವಿದ್ದು, ಮೊ. 8527225123 ಅನ್ನು, ಕೆದೂರು ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಹಾಗೂ ಕಾಳುಮೆಣಸು ಗಿಡಗಳು ಲಭ್ಯವಿದ್ದು, ಮೊ.9482166313 ಅನ್ನು, ಕುಂಭಾಶಿ ತೋಟಗಾರಿಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್ನ ಸೇವೆಯ ಧ್ಯೇಯದಿಂದ ವ್ಯಕ್ತಿ ನಿರ್ಮಾಣ ಸಾಧ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡದ ಜಿಲ್ಲೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಹೇಳಿದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಶಿವರಾಮ ಕಾರಂತ ವೇದಿಕೆಯಲ್ಲಿ ಆಳ್ವಾಸ್ ರೋವರ್ಸ್ ಮತ್ತು ರೇಂಜರ್ಸ್ 2024-25ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಜೀವನಕ್ಕೆ ಬೇಕಾದ ಕೌಶಲಗಳನ್ನು ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಕಲಿಯಲು ಸಾಧ್ಯ. ಇಲ್ಲಿ ನಡೆಯುವ ಶಿಬಿರಗಳು ವಿದ್ಯಾರ್ಥಿಗಳ ಜೀವನಕ್ಕೆ ಅವಶ್ಯವಾದ ಪಾಠಗಳನ್ನು ಹೇಳಿಕೊಡುತ್ತವೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಆಯುಕ್ತ ಡಾ. ಮೋಹನ ಆಳ್ವ ಅವರ ಶ್ರಮದಿಂದ ಜಿಲ್ಲಾ ಘಟಕವು ಮುಂಚೂಣಿಯಲ್ಲಿದೆ. ಆಳ್ವಾಸ್ ಸಾಂಸ್ಕೃತಿಕ ಜಾಂಬೂರಿಯು ಇಡೀ ವಿಶ್ವವೇ ಮೂಡುಬಿದಿರೆಯತ್ತ ಮುಖ ಮಾಡುವಂತೆ ಮಾಡಿತ್ತು ಎಂದರು. ಪಠ್ಯದ ಕಲಿಕೆಯ ಜೊತೆಗೆ ಪಠ್ಯತರ ಚಟುವಟಿಕೆಗಳು ಜೀವನದಲ್ಲಿ ಬಹು ಮುಖ್ಯ ಪಾತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಸೈಬರ್ ಸೆಕ್ಯೂರಿಟಿಯ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರಾಷ್ಟಿçÃಯ ಶಿಕ್ಷಣ ನೀತಿ ವಿಷಯಾಧರಿತ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಟಿ.ವಿ. ದೇವರಾಜ್ ಅಡಿಷನಲ್ ಎಸ್. ಐ., ಸೈಬರ್ ಕ್ರೆöÊಮ್ ಡಿಪಾರ್ಟ್ಮೆಂಟ್ ಮಣಿಪಾಲ ಇವರು ವಿವಿಧ ರೀತಿಯ ಸೈಬರ್ ಅಪರಾಧವನ್ನು ತಡೆಗಟ್ಟುವುದು ಮತ್ತು ಅದರಿಂದ ತಪ್ಪಿಸಿಕೊಳ್ಳುವ ರೀತಿಯ ಬಗ್ಗೆ ಮಾತನಾಡುತ್ತಾ, ಹದಿಹರೆಯದ ವಿದ್ಯಾರ್ಥಿಗಳು ತಮ್ಮ ಬುದ್ಧಿಯ ಜೊತೆಗೆ ಬೆರಳುಗಳ ಮೇಲೆ ಕೂಡ ನಿಯಂತ್ರಣ ಪಡೆದುಕೊಳ್ಳುವ ಅಗತ್ಯ ಇದೆ ಎಂದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದು, ಮೊಬೈಲ್ ಬಳಕೆ ಹಾಗೂ ಸಾಮಾಜಿಕ ಜಾಲಾತಾಣಗಳಲ್ಲಿ ತೊಡಗಿಸಿಕೊಳ್ಳುವಾಗ ವಿದ್ಯಾರ್ಥಿಗಳು ಪ್ರಜ್ಞಾವಂತಿಕೆ ಮರೆಯಬಾರದು ಎಂದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಪ್ರಾಸ್ತಾವಿಸಿದರು. ಕಾರ್ಯಕ್ರಮದ ಸಂಯೋಜಕರಾದ ಜೋಸ್ಲಿನ್ ಅಲ್ಮೇಡಾ ಮತ್ತು ಪೂಜಾ ಕುಂದರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರೀನಾಭ ಸ್ವಾಗತಿಸಿ, ನೇಹಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಪುರಸಭಾ ವ್ಯಾಪ್ತಿಯ ಸರ್ಕಾರಿ ಜಾಗಗಳಾದ ಸ.ನಂ.112 ರ 0.01 ಎಕ್ರೆ ಜಾಗದ ವಡೇರಹೋಬಳಿ ಶಿವಪ್ರಸಾದ್ ರಿಕ್ಷಾ ನಿಲ್ದಾಣದಲ್ಲಿ 8 ರಿಂದ 9 ಆಟೋ ರಿಕ್ಷಾಗಳನ್ನು ನಿಲ್ಲಿಸಲು, ಸ.ನಂ. 141/1ಎ ರ 0.01.50 ಎಕ್ರೆ ಪ್ರದೇಶದ ವಿನಯಾ ನರ್ಸಿಂಗ್ ಹೋಂ ರಿಕ್ಷಾ ನಿಲ್ದಾಣದಲ್ಲಿ 8 ರಿಂದ 10 ಆಟೋ ರಿಕ್ಷಾಗಳನ್ನು ನಿಲ್ಲಿಸಲು, ಸ.ನಂ.141 ರ 0.02 ಎಕ್ರೆ ಪ್ರದೇಶದ ಹೊಸ ಬಸ್ ನಿಲ್ದಾಣ ರಿಕ್ಷಾ ನಿಲ್ದಾಣದಲ್ಲಿ 12 ರಿಂದ 13 ಆಟೋ ರಿಕ್ಷಾಗಳನ್ನು ನಿಲ್ಲಿಸಲು, ಸ.ನಂ.182/1ಎ3ಎ1ಡಿ ಸ.ನಂ.112ರ 0.05 ಎಕ್ರೆ, 0.02 ಎಕ್ರೆ ಪ್ರದೇಶದ ವಡೇರಹೋಬಳಿಯ ಶಾಸ್ರೀ ಸರ್ಕಲ್ ರಿಕ್ಷಾ ನಿಲ್ದಾಣದಲ್ಲಿ 25 ರಿಂದ 28 ಆಟೋ ರಿಕ್ಷಾಗಳನ್ನು ನಿಲ್ಲಿಸಲು, ಸ.ನಂ. 145 ರ 0.03.50 ಎಕ್ರೆ ಪ್ರದೇಶದ ಚಿನ್ಮಯಿ ಆಟೋ ರಿಕ್ಷಾ ನಿಲ್ದಾಣದಲ್ಲಿ 6 ರಿಂದ 7 ಆಟೋ ರಿಕ್ಷಾಗಳನ್ನು ನಿಲ್ಲಿಸಲು ಹಾಗೂ ಸ.ನಂ.141/1ಎ ರ 0.02 ಎಕ್ರೆ ಪ್ರದೇಶದ ಪಾರಿಜಾತ ಟ್ಯಾಕ್ಸಿ ನಿಲ್ದಾಣದಲ್ಲಿ…
