ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವವು ರಾಮಕೃಷ್ಣ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ದಂತ ವೈದ್ಯೆ ಪ್ರೀತಿ ನಾವಡ ತಮ್ಮ ಮಕ್ಕಳ ಹಕ್ಕುಗಳ ಸುರಕ್ಷತೆಯ ಬಗ್ಗೆ ತಿಳಿಸುತ್ತಾ, ನಮ್ಮ ಕ್ರಮಬದ್ಧ ಜೀವನವನ್ನು ಅವರು ಪ್ರತಿಬಿಂಬಿಸುತ್ತಾರೆ ಎಂದು ಹೇಳಿದರು. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ಮುಖ್ಯೋಪಾಧ್ಯಾಯಿನಿ ರೇಶ್ಮಾ ಡಿಸೋಜ ಮತ್ತು ವೆಂಕಟರಮಣ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿ. ಸೋಜಾ ಅವರು ವಾರ್ಷಿಕ ವರದಿ ವಾಚಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ ’ವಿರಾಸತ್’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಮನದುಂಬಿ ಬಣ್ಣಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.11 ರಿಂದ ಡಿ. 15ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’30ನೇ ವರ್ಷದ ’ಅಳ್ವಾಸ್ ವಿರಾಸತ್” ಅನ್ನು ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಮಂಗಳವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು. ಮುಸ್ಸಂಜೆಯಲ್ಲಿ ಪ್ರಕೃತಿ ರಮಣೀಯ ವಿಶಾಲ ಸಭಾಂಗಣದಲ್ಲಿ ತುಂಬಿದ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಕಾರ್ಯಕ್ರಮ. ಸಾಹಿತ್ಯ ಮತ್ತು ಸಂಸ್ಕೃತಿ ಜೊತೆಯಾಗಿ ಮೇಳೈಸಿದ ಕಾರ್ಯಕ್ರಮ. ನಮ್ಮ ಸಾಂಸ್ಕೃತಿಕ ಸಂಪತ್ತು ಹೆಚ್ಚಾದಾಗ ಮನಸ್ಸು ಅರಳುತ್ತದೆ ಎಲ್ಲರಿಗೂ ಸಂತೋಷ ನೀಡುವ ವ್ಯಕ್ತಿತ್ವವೇ ಆಳ್ವ ಎಂದು ಬಣ್ಣಿಸಿದರು. ಒಳ್ಳೆಯದನ್ನು ಒಪ್ಪಿಕೊಂಡು ಅಪ್ಪಿಕೊಳ್ಳಿ. ಆ ಹಾದಿಯಲ್ಲಿ ಸಮಾಜ, ದೇಶ ಬೆಳೆಯಬೇಕು. ನಾವೂ ಪ್ರಕೃತಿಯನ್ನು, ಹೃದಯವನ್ನು ಅರಳಿಸಬೇಕು. ಆಳ್ವಾಸ್ ಕೃಷಿ ಮೇಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ ಅಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಕೃಷಿ ಇಲಾಖೆಯ ವತಿಯಿಂದ ಡಿಸೆಂಬರ್ 12 ರಂದು ನಗರದ ಮಣಿಪಾಲ ರಜತಾದ್ರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಕಾರಣಾಂತರಗಳಿಂದ ಮುಂದೂಡಿ, ಡಿಸೆಂಬರ್ 13 ರಂದು ಮರು ನಿಗಧಿಪಡಿಸಲಾಗಿದೆ. ಸ್ಪರ್ಧೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು ಮನೆಯಲ್ಲಿಯೇ ತಯಾರಿಸಿ, ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಡಿ. 13 ರಂದು ಬೆಳಗ್ಗೆ 11 ಗಂಟೆಗೆ ಪ್ರದರ್ಶಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ, ತಯಾರಿಸುವ ಖಾದ್ಯ, ಬೇಕಾಗುವ ಸಾಮಾಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟಗಳು 2025ರ ಜ. 16 ರಿಂದ 23ರವರೆಗೆ ನಡೆಯಲಿದ್ದು, ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಕ್ರೀಡಾಪಟುಗಳು ಆಗಮಿಸಿ ಭಾಗವಹಿಸಲಿದ್ದಾರೆ. ಇದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯ ಒಲಂಪಿಕ್ಸ್ ಗೇಮ್ಸ್ಗಳನ್ನು ಉಡುಪಿ ಜಿಲ್ಲೆಯಲ್ಲಿ ಸಂಘಟಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ 13 ಕ್ಕೂ ಹೆಚ್ಚು ಕ್ರೀಡೆಗಳು 8 ದಿನಗಳ ಕಾಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಮಾಹೇಯ ವಿ.ವಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, 3500 ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು. ಕ್ರೀಡಾಕೂಟದಲ್ಲಿ ಸ್ಪರ್ಧಿಸಲು ಆಗಮಿಸುವ ಕ್ರೀಡಾಪಟುಗಳಿಗೆ, ಅಧಿಕಾರಿಗಳಿಗೆ ಹಾಗೂ ತೀರ್ಪುಗಾರರು ಸೇರಿದಂತೆ ಮತ್ತಿತರರಿಗೆ ತಂಗಲು ಅವಶ್ಯವಿರುವ ವಸತಿ ಸೌಕರ್ಯಗಳನ್ನು, ಊಟೋಪಚಾರದ ವ್ಯವಸ್ಥೆಗಳು ಸೇರಿದಂತೆ ಮತ್ತಿತರ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು. ಕ್ರೀಡಾಕೂಟಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ, ವಿಶ್ವ ವಿನಾಯಕ ಸಿ.ಬಿ.ಎಸ್.ಇ ಶಾಲೆಯ 19ನೇ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿ.ಎಮ್ ವಿದ್ಯಾಸಂಸ್ಥೆಗಳ ಆಡಳಿತ ಮುಖ್ಯಸ್ಥರಾದ ಪ್ರಕಾಶ್ಚಂದ್ರ ಶೆಟ್ಟಿಯವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯಲ್ಲಿ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಮೌಲ್ಯಗಳನ್ನು ಕಲಿಸಿದರೆ ಅಂತಹ ವಿದ್ಯಾರ್ಥಿಗಳು ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ ಎಂದು ತಿಳಿಸಿದರು. ಮಕ್ಕಳು ಮನೆಯಲ್ಲಿ ತಂದೆ ತಾಯಿಯಿಂದ ಸಂಸ್ಕಾರ ಕಲಿಯುತ್ತಾರೆ ತಂದೆ ತಾಯಿಗಳು ಹಾಗೂ ಗುರು ಹಿರಿಯರು ಮಕ್ಕಳಿಗೆ ಆದರ್ಶರೂಪವಾಗಿದ್ದರೆ ನಾವು ಉತ್ತಮ ಸಮಾಜವನ್ನು ಕಟ್ಟಬಹುದು ಎಂದು ತಿಳಿಸಿದರು. ಕಾರ್ಯಕ್ರಮದ ಗೌರವ ಅತಿಥಿಗಳಾದ ಡಾ. ಶರಣ್ಯ ಶೆಟ್ಟಿಯವರು ಮಾತನಾಡಿ ಮಕ್ಕಳ ಯೌವನಾವಸ್ಥೆಯಲ್ಲಿ ಮಕ್ಕಳ ಮನಸ್ಸನ್ನು ಅರಿತು ಮಕ್ಕಳಲ್ಲಿನ ಆತಂಕ ಭಯವನ್ನು ಹೋಗಲಾಡಿಸುವುದು ಶಿಕ್ಷಕರ ಹಾಗೂ ಪೋಷಕರ ಕರ್ತವ್ಯವಾಗಿದೆ. ಹದಿಹರೆಯದ ಮಕ್ಕಳ ಮಾನಸಿಕ ತುಮುಲಗಳನ್ನು ದೂರವಾಗಿಸಲು ಆತ್ಮೀಯ ಸಂವಹನದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವ ಕೆಲಸ ಪೋಷಕರಿಂದ ಆಗಬೇಕಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 3ರಿಂದ 7ನೇ ತರಗತಿ ವಿದ್ಯಾರ್ಥಿಗಳು ಡಿ.8ರಂದು ಈಡಿಗರ ಸಭಾಭವನ ಹೊಸನಗರ ಶಿಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಐಕೀ ಸ್ಕೂಲ್ ಆಫ್ ಮಾರ್ಟಿಯಲ್ ಆರ್ಟ್ಸ್ ಶೊಟೋಕಾನ್ ಕರಾಟೆ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವುದರೊಂದಿಗೆ ರಾಜ್ಯ ಮಟ್ಟದ ಕರಾಟೆ ಚಾಂಪಿಯನಶಿಪ್ ಟ್ರೋಫಿ ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಸಂಸ್ಥೆಯ ಆಡಳಿತಾಧಿಕಾರಿಧ್ವಯರಾದ ಕುಮಾರಿ ಶಮಿತಾ ರಾವ್ ಮತ್ತು ಕುಮಾರಿ ರೆನಿಟಾ ಲೋಬೊ, ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭಕೋರಿರುತ್ತಾರೆ. ವಿಜೇತರ ಯಾದಿ : ವೈಯಕ್ತಿಕ ವಿಭಾಗಪ್ರಥಮ ಸ್ಥಾನ1.ಸಮೃದ್ I2.ಸಿಂಧು I3.ಹಿಮಾನಿ I4.ಆರಾಧ್ಯ I5.ಆಧ್ಯಾಪ್ರಭು I6.ತನುಶ್ರೀ I7.ಧಕ್ಷಯ್ Iದ್ವಿತೀಯ ಸ್ಥಾನ8.ಧನ್ವಂತ II9.ಅನ್ವಿತಾ II10.ರಶ್ವಿ II11.ನಿಹಾಲ್ II12.ಬ್ರಾಹ್ಮೀ II13.ಸಮನ್ವಿ II14.ಸಿದ್ರಾ II15.ಸುಹಾಸ್ II16.ಸೈಫ್ IIತೃತೀಯ ಸ್ಥಾನ17.ಸಾಯಿಶ್ III18.ಗ್ರೀಷ್ಮ III19.ತನ್ವಿ III20.ಸ್ಪಂದನಾ III21.ಅಮೂಲ್ಯ III22.ತನ್ಮಯ್ III23.ಅಹಾನ್ III24.ಪ್ರಗತಿ III25.ಪ್ರಣತಿ III26.ದಶಮಿ III27.ದೀಪ್ತಾ III28.ಸಾಥ್ವಿಕ್ III29.ಮೆಹರಾನ್ III30.ಸಮೃದ್ಧಿ III31.ರಾಣಿ ಮನಸ್ವಿ III32.ನಿಧಿಕಾ III33.ಅಫಹ್ವಾನ್ III34.ಅಶ್ವಿನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಟೇಶ್ವರ ರಾಷ್ಟ್ರಿಯ ಹೆದ್ದಾರಿ 66ರ ಸಹನಾ ಹಾಲ್ ಎದುರುಗಡೆ ಪ್ಲಾಸ್ಟಿಕ್ ತಯಾರಿಸುವ ಕಚ್ಚಾ ವಸ್ತು ಸಾಗಿಸುತ್ತಿದ್ದ ಲಾರಿವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಹೊಡೆದು ಪಲ್ಟಿಯಾದ ಘಟನೆ ಡಿ.10ರ ಮಂಗಳವಾರದಂದು ಮುಂಜಾನೆ ನಡೆದಿದೆ. ಮಂಗಳೂರುನಿಂದ ಸೋಲಾಪುರಕ್ಕೆ ಪ್ಲಾಸ್ಟಿಕ್ ತಯಾರಿಸುವ ಕಚ್ಚಾ ವಸ್ತು ಸಾಗಿಸುತ್ತಿದ್ದ ಲಾರಿವು ಬೆಳಗಿನ ಜಾವ ಚಾಲಕ ನಿದ್ರೆ ಮಂಪರಿನಲ್ಲಿ ಡಿವೈಡರ್ಗೆ ಡಿಕ್ಕಿಹೊಡೆದು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದು ಲಾರಿ ಜಖಂಗೊಂಡಿದೆ. ಕುಂದಾಪುರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೋಟೇಶ್ವರದ ಹಾಲಾಡಿ ಮಾರ್ಗದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಗುಲ್ವಾಡಿ ಗ್ರಾಮದ ನಿವಾಸಿ ಶಶಿಧರ (56) ಮೃತಪಟ್ಟಿದ್ದಾರೆ. ಶಶಿಧರ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಚಾಲಕ ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಅತೀ ವೇಗ ಚಾಲನೆ ಮಾಡಿಕೊಂಡು ತೀರ ಎಡಕ್ಕೆ ಚಲಾಯಿಸಿ ರಸ್ತೆ ದಾಟಲು ನಿಂತಿದ್ದ ಶಶಿಧರ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭಿರ ಗಾಯಗೊಂಡಿದ್ದರು. ಅವರನ್ನು ಕೂಡಲೇ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷೀಸಿದ ವೈದ್ಯರು ಮೃತಪಟ್ಟಿರುದಾಗಿ ತಿಳಿಸುತ್ತಾರೆ. ಈ ಬಗ್ಗೆ ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಲಾ ಪ್ರಕಾರಗಳು ಮನುಷ್ಯನ ಬದುಕಿಗೆ ಸುಖ, ಸಂತೋಷ, ನೆಮ್ಮದಿಯನ್ನು ತಂದುಕೊಟ್ಟು ಆಯುಷ್ಯ ಮತ್ತು ಆರೋಗ್ಯವನ್ನು ವೃದ್ಧಿಸುವ ಸಾಧನವಾಗಿದೆ. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಘಟಿಸುತ್ತಿರುವ ಕಲಾಕ್ಷೇತ್ರ-ಕುಂದಾಪುರ ಟ್ರಸ್ಟ್ ಕುಂದಾಪುರದಲ್ಲಿ ಕಲಾಸಿರಿವಂತಿಕೆಯನ್ನು ಹಾಗೂ ಪ್ರೇಕ್ಷಕರ ಮನಸ್ಸನ್ನು ಪ್ರಫುಲ್ಲಗೊಳಿಸುತ್ತಿದ್ದಾರೆ ಎಂದು ಯಕ್ಷಗಾನ ಭಾಗವತ ರಾಘವೇಂದ್ರ ಮಯ್ಯ ಹೇಳಿದರು. ಅವರು ಕಲಾಕ್ಷೇತ್ರ ಕಛೇರಿಯಲ್ಲಿ ಇನಿದನಿ ಆಹ್ವಾನ ಪತ್ರಿಕೆ ಅನಾವರಣಗೊಳಿಸಿ ಮಾತನಾಡಿದರು. ಇನಿದನಿ ಎಂಬ ಸಂಗೀತ ಕಾರ್ಯಕ್ರಮವು ಕರಾವಳಿ ಜಿಲ್ಲೆಯಲ್ಲೇ ಅತೀದೊಡ್ಡ ಕಾರ್ಯಕ್ರಮವೆಂಬುವುದು ಕುಂದಾಪುರದವರಾದ ನಮಗೆ ಹೆಮ್ಮೆಯ ವಿಚಾರ ಜೊತೆಗೆ, ಯಕ್ಷಗಾನ ಭಾಗವತನಿಂದ ಇನಿದನಿಗೆ ಚಾಲನೆ ನೀಡಿರುವುದು ಅದು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಗೌರವವೆಂದು ನಾನು ಭಾವಿಸುತ್ತೇನೆ ಎಂದರು. ಅತಿಥಿಯಾಗಿದ್ದ ಡಾ. ಚಿಂತನಾ ರಾಜೇಶ್ ಮಾತನಾಡಿ, ಮಕ್ಕಳಲ್ಲಿ ಹಲವು ಪ್ರತಿಭೆಗಳಿದ್ದರೂ ಅದನ್ನು ಗುರುತಿಸದೆ ಕೇವಲ ಶಿಕ್ಷಣ ಕ್ಷೇತ್ರದಲ್ಲಿ ಮಾತ್ರ ಅವರನ್ನು ಮುನ್ನುಗ್ಗುವಂತೆ ಒತ್ತಾಯಿಸುತ್ತಿರುವುದು ಇತೀಚೆಗೆ ಕಾಣುತ್ತಿದ್ದೇವೆ ಇದು ಸರಿಯಲ್ಲ. ಕಲೆ ಮತ್ತು ಸಂಸ್ಕೃತಿಗಳು ವಿದ್ಯಾಭ್ಯಾಸಕ್ಕೆ ಪೂರಕ. ಇದು ಮಕ್ಕಳ ಭವಿಷ್ಯತ್ತಿಗೆ ಪರಿಣಾಮಕಾರಿ.ಇನಿದನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ಡಿ.10ರ ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು. ಡಿಸೆಂಬರ್ 11 ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳಿಗೂ ರಜೆಬುಧವಾರ ಖಾಸಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ.…
