Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಚಿನ್ಮಯಿ ಆಸ್ಪತ್ರೆಯ ಲೇಸರ್ ಎಂಡ್ ಕಾಸ್ಮೆಟೋಲಜಿ ವಿಭಾಗದಲ್ಲಿ ಹಾಲಿವುಡ್ ಸ್ಪೆಕ್ಟ್ರಾ ಎಂಬ ಅತ್ಯಾಧುನಿಕ ಲೇಸರ್ ಯಂತ್ರ ಅಳವಡಿಸಲಾಗಿದ್ದು ಅದರ ಉದ್ಘಾಟನೆಯನ್ನು ಐಎಂಎ ಕುಂದಾಪುರ ಘಟಕದ ಅಧ್ಯಕ್ಷೆ, ಖ್ಯಾತ ಪ್ರಸೂತಿ ತಜ್ಞೆ ಡಾ| ಪ್ರಮೀಳಾ ನಾಯಕ್ ಉದ್ಘಾಟಿಸಿ, ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ಸೇವೆಯನ್ನು ಶ್ಲಾಘಿಸಿದರು. ರೋಟರಿ ಜಿಲ್ಲಾ ಮಾಜಿ ಗವರ್ನರ್, ಖ್ಯಾತ ಉದ್ಯಮಿ ಅಭಿನಂದನ್ ಎ. ಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅಭಿನಂದನೆ ಸಲ್ಲಿಸಿದರು. ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ, ಖ್ಯಾತ ಚರ್ಮರೋಗ ತಜ್ಞ ಡಾ| ಉಮೇಶ ಪುತ್ರನ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತ್ವಚೆಯ ಆರೈಕೆಯಲ್ಲಿ ಲೇಸರ್ ಚಿಕಿತ್ಸೆ ಪರಿಣಾಮಕಾರಿಯಾಗಿದ್ದು, ಚರ್ಮದ ಸೌಂದರ್ಯ ವರ್ಧನೆಯಲ್ಲಿ ಅನುಕೂಲಕರ ವಾಗಿದೆ. ಎಂದು ನೂತನ ಲೇಸರ್ ಯಂತ್ರದ ಉಪಯುಕ್ತತೆಯನ್ನು ಡಾ| ಉಮೇಶ ಪುತ್ರನ್ ವಿವರಿಸಿದರು. ತಜ್ಞ ವೈದ್ಯರಾದ ಡಾ| ಬಾಲಕೃಷ್ಣ ಶೆಟ್ಟಿ, ಡಾ| ದಿನೇಶ ಶೆಟ್ಟಿ, ಡಾ| ಮೋಹನ ಕಾಮತ್, ಡಾ| ಶ್ರೀದೇವಿ ಕಟ್ಟೆ, ಡಾ| ಶೇಖರ, ಡಾ. ಲಕ್ಷ್ಮೀನಾರಾಯಣ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಂತರಾಷ್ಟ್ರೀಯ ಶಿಕ್ಷಕ ದಿನಾಚರಣೆ ಪ್ರಯುಕ್ತ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಗಂಗನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಪ್ರಭಾಕರ ಬಿಲ್ಲವ ಅವರಿಗೆ ಪ್ರದಾನ ಮಾಡಲಾಗಿದೆ. ಸವದತ್ತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಭಾಕರ ಬಿಲ್ಲವ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಗ್ರಾಮದ ಪ್ರತೀ ಮನೆಗಳ ಕಸಗಳನ್ನು ಸಂಗ್ರಹಿಸಿ ವಲೇ ಮಾಡಲು ಬೈಂದೂರು ಪಂಚಾಯತ್‌ ವ್ಯಾಪ್ತಿಯ ತಗ್ಗರ್ಸೆ ಗ್ರಾಮದ ಸ.ನಂ.176ರಲ್ಲಿ ಸುಮಾರು 8.06 ಎಕ್ರೆ ಸರ್ಕಾರಿ ಸ್ಥಳದಲ್ಲಿ ಸುಮಾರು 492.99 ಲಕ್ಷ ವೆಚ್ಚದಲ್ಲಿ ಘನತ್ಯಾಜ್ಯ ಸಂಸ್ಕರಣಾ ಮತ್ತು ವಿಲೇವಾರಿ ಘಟಕ ನಿರ್ಮಾಣವಾಗಲಿದೆ. ಇಲ್ಲಿ ಸಂಗ್ರಹಿಸಿದ ಕಸಗಳನ್ನು ವಿಂಗಡಿಸಿ (ಹಸಿ ಮತ್ತು ಒಣ) ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹೇಳಿದರು. ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಪಟ್ಟಣ ಪಂಚಾಯತ್‌ನ ಘಟಕ ನಿರ್ಮಾಣದ ಪ್ರಸ್ತಾವನೆಯಂತೆ ಯೋಜನೆಯ ಸಾಧಕ – ಬಾಧಕಗಳ ಚರ್ಚೆ ಕುರಿತು ನಡೆದ ಸಾರ್ವಜನಿಕ ಪರಿಸರ ಸಭೆಯಲ್ಲಿ ಮಾತನಡಿದರು. ಪ್ರಸ್ತುತ ಯೋಜನೆಯಲ್ಲಿ ಪರಿಸರ ಪರಿಣಾಮ ಮೌಲ್ಯ ಮಾಪನವು ಮುಖ್ಯವಾಗಿ ಪರಿಸರ ನಿರ್ವಹಣಾ ಯೋಜನೆಗೆ ಪ್ರಧಾನ ಒತ್ತು ನೀಡಲಾಗುತ್ತದೆ. ಸಭೆಗೆ ಆಗಮಿಸಿರುವ ಆಸಕ್ತ ಸ್ಥಳೀಯ ಸಾರ್ವಜನಿಕರ ಸಲಹೆ ಮತ್ತು ಅಭಿಪ್ರಾಯ ತಿಳಿದುಕೊಳ್ಳುವುದು ಒಂದು ಮುಖ್ಯ ಉದ್ದೇಶವಾಗಿರುವ ನೆಲೆಯಲ್ಲಿ ಈ ಸಭೆಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷದಂತೆ ಸದ್ಭಾವನಾ 2024 – ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನವೆಂಬರ್ 16 ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಪ್ರತಿವರ್ಷ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು, ಈ ಬಾರಿ ಕನ್ನಡ ನಾಡು ಕಂಡ ಶ್ರೇಷ್ಠ ಉದ್ಯಮಿ ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದೆ. ಪ್ರಶಸ್ತಿ 20 ಸಾವಿರ ಮೌಲ್ಯದ ಬೆಳ್ಳಿ ಫಲಕ, ನಗದು ಒಳಗೊಂಡಿದೆ. ಇದೇ ವೇಳೆ ಸ್ಥಳೀಯ ಸಾಧಕರಿಗೆ ವಿಶೇಷ ಅಭಿನಂದನೆಯನ್ನು ಸಲ್ಲಿಸಲಿದ್ದು , ವಿಶೇಷ ಪುರಸ್ಕಾರವನ್ನು ಪರಿಸರಸ್ನೇಹಿ ಸಂಘಟನೆ ಸ್ವಚ್ಛ ಬ್ರಿಗೇಡ್ ಕಾರ್ಕಳ ತಂಡಕ್ಕೆ ನೀಡಲಿದೆ. ಪ್ರತಿಭಾ ಪುರಸ್ಕಾರ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ವಿದ್ಯಾರ್ಥಿವೇತನ, ಸ್ಥಳೀಯ ಅಂಗನವಾಡಿಗೆ ಸಮವಸ್ತ್ರ, ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,  ಜಿಲ್ಲಾ ಏಡ್ಸ್  ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ರೆಡ್ ಕ್ರಾಸ್ ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಸಾರ್ವಜನಿಕ ಆಸ್ಪತ್ರೆ, ರೋಟರಿ ಕ್ಲಬ್ ಕುಂದಾಪುರ  ಸನ್ ರೈಸ್ ಇವರ ಸಹಯೋಗದಲ್ಲಿ “ವಿದ್ಯಾರ್ಥಿಗಳಲ್ಲಿ ಹೆಚ್.ಐ.ವಿ. ಏಡ್ಸ್ ವಿರುದ್ಧ ಜಾಗೃತಿ ಮತ್ತು ಅರಿವು ಮೂಡಿಸುವಿಕೆ” ಯು ಕುರಿತು ಬೀದಿನಾಟಕ ಪ್ರದರ್ಶನವು ಬುಧವಾರದಂದು ನಡೆಯಿತು. ಕಾರ್ಯಕ್ರಮವನ್ನು ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಇದರ ಅಧ್ಯಕ್ಷ ಜಯಕರ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕಾರ್ಯಕ್ರಮದ ಜಿಲ್ಲಾ ಮೇಲ್ವಿಚಾರಕರಾದ ಮಹಾಬಲೇಶ್ವರ, ಆಪ್ತ ಸಮಾಲೋಚಕರಾದ ಪ್ರಶಾಂತ್ ಶೆಟ್ಟಿ, ಆರ್ಟ್ ಕೇಂದ್ರ, ಕುಂದಾಪುರ ತಾಲುಕು ಆಸ್ಪತ್ರೆಯ ರಾಜು,  ಆಪ್ತ ಸಮಾಲೋಚಕರಾದ ನಳೀನಾಕ್ಷಿ, ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಇದರ ಅಧ್ಯಕ್ಷರಾದ ಪ್ರಶಾಂತ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಇಂಗ್ಲಿಷ್ ವಿಭಾಗ ಮತ್ತು ಐಕ್ಯೂಎಸಿ  ಇವರ ಸಹಯೋಗದಲ್ಲಿ “ಅಧ್ಯಯನದೊಂದಿಗೆ ಸಾಮಾಜಿಕ ಬದುಕಿನ ಸಮತೋಲನ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಳಾವರ ವರದರಾಜ ಎಂ. ಶೆಟ್ಟಿ ಪ್ರಥಮ ದರ್ಜೆ ಸರ್ಕಾರಿ ಕಾಲೇಜು ಕೊಟೇಶ್ವರ ಇಲ್ಲಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ನಾಯಕ್ ಮಾತನಾಡಿ, ವಿದ್ಯಾರ್ಥಿ ಜೀವನ ಎನ್ನುವುದು ನಮ್ಮ ಭವಿಷ್ಯದ ನಿರ್ಮಾಪಕ. ವಿದ್ಯಾರ್ಥಿ ಜೀವನದಲ್ಲಿ ನಿರಂತರ ಅಧ್ಯಯನಶೀಲತೆಯು ಸಾಮಾಜಿಕವಾಗಿ ಸವಾಲುಗಳನ್ನು ಎದುರಿಸಲು ಅನುಕೂಲ ಮಾಡಿಕೊಡುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲಾ ಕೌಶಲಗಳ ಕಲಿಯುವಿಕೆಯು ನಾವು ಸಾಮಾಜಿಕವಾಗಿ ಉತ್ತಮ ಸ್ಥಾನ ಪಡೆಯಲು ಸಹಕಾರಿಯಾಗುತ್ತದೆ. ಈಗಾಗಲೇ ಯುನೆಸ್ಕೋ ಕೂಡ ಕೆಲವು ಅಂಶಗಳನ್ನು ಈ ನೆಲೆಯಲ್ಲಿ ಪಟ್ಟಿ ಮಾಡಿದೆ. ಹಾಗಾಗಿ ಅನೇಕ ಸವಾಲುಗಳನ್ನು ಎದುರಿಸುವುದಕ್ಕೆ ವಿದ್ಯಾರ್ಥಿ ತಯಾರಾಗಬೇಕು. ಹಾಗಿದ್ದಾಗ ಉನ್ನತ ಯಶಸ್ಸನ್ನು ಪಡೆಯಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ವಹಿಸಿದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ವೀರ ಮಾರುತಿ ಸೇವಾ ಟ್ರಸ್ಟ್ ಮೂಡುಬಿದರೆ ಹಾಗೂ ಯೋಗಶ್ರೀ ಯೋಗ ಬಳಗ ಮಂಗಳೂರು ಇವರ ಸಹಯೋಗದಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಶ್ರೀನಿಧಿ ಪ್ರಕಾಶ್ ಗೌಡ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಮೀಸಲಾತಿಯಿಂದಾಗಿ ನಮ್ಮ ಸಮುದಾಯ ಹಂತ ಹಂತವಾಗಿ ಪ್ರಗತಿ ಸಾಧಿಸುತ್ತಿದೆ. ಮರಾಟಿ ಸಮುದಾಯ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಶಿಕ್ಷಣ, ಆರೋಗ್ಯ ಹಾಗೂ ಸಂಘಟನೆಯ ಬಗ್ಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದು ಬೈಂದೂರು ವಲಯ ಮರಾಟಿ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಭೋಜ ನಾಯ್ಕ್ ಹೇಳಿದರು. ಅವರು ಗೋಳಿಹೊಳೆ ಮಹಿಷಾಮರ್ಧಿನಿ ಸಭಾಭವನದಲ್ಲಿ ಇತ್ತೀಚಿಗೆ ಜರುಗಿದ ಬೈಂದೂರು ವಲಯ ಮರಾಟಿ ಸಮಾಜ ಸುಧಾರಕ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮರಾಟಿ ಸಮುದಾಯದವರು ಸಂಘ ಸದಸ್ಯರಾಗುವ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಕೈಜೋಡಿಸಬೇಕಿದೆ. ಸಂಘಕ್ಕೆ ಸ್ವಂತ ನಿವೇಶನ ಹಾಗೂ ಕಟ್ಟಡ ನಿರ್ಮಿಸುವ ಪ್ರಸ್ತಾಪವಿದ್ದು ಈ ಬಗ್ಗೆ ಕ್ರಮವಹಿಸಲಾಗುವುದು ಎಂದರು. ಸಂಘದ ಗೌರವಾಧ್ಯಕ್ಷರಾದ ನಾರಾಯಣ ನಾಯ್ಕ್ ಬಾಚುಗುಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿರ್ದೇಶಕರುಗಳು ಉಪಸ್ಥಿತರಿದ್ದರು. ಈ ವೇಳೆ ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಲಿಂಗ ನಾಯ್ಕ್ ಜೋಗಿಜೆಡ್ಡು, ಯಕ್ಷಗಾನ ಕಲಾವಿದ ನಾರಾಯಣ ನಾಯ್ಕ್ ದೆಮ್ಮೇರಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಇನ್ನೋವೇಶನ್ ಮತ್ತು ಎಂಟ್ರಪ್ರಿನಿಯರ್‌ಶಿಪ್ ಡೆವಲಪ್ಮೆಂಟ್ ಸೆಲ್ ಆಶ್ರಯದಲ್ಲಿ, ಭಾರತ ಕಂಡ ಶ್ರೇಷ್ಠ ಉದ್ಯಮಿ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಹಿನ್ನೆಲೆಯಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.      ಪ್ರಥಮ ಬಿ.ಕಾಂ. ವಿದ್ಯಾರ್ಥಿ ಕೃಷ್ಣ ಅವರು ರಚಿಸಿದ ಟಾಟ ಅವರ ಭಾವಚಿತ್ರಕ್ಕೆ ವಿದ್ಯಾರ್ಥಿಗಳೇ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಮಾತನಾಡಿ, ಟಾಟಾ ಅವರ ಮೌಲ್ಯಯುತ ಜೀವನ ಯುವ ಪೀಳಿಗೆಗೆ ದೇಶ ಕಟ್ಟುವಲ್ಲಿ ಮಾದರಿಯಾಗಲಿ ಎಂದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಆಶಯ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ಯಶವಂತ್ ಸ್ವಾಗತಿಸಿ, ಜ್ಯೋತಿಕಾ ವಂದಿಸಿ, ಚಂದನ ನಿರೂಪಿಸಿದರು. ರತನ್ ಟಾಟಾರವರ ಜೀವನ ಹಾಗೂ ನಡೆದು ಬಂದ ಹಾದಿಯನ್ನು ನಿದರ್ಶಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಸ್ತುತಿ ಪಡಿಸಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಸಹಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಅ.14ರ ಸೋಮವಾರ ಇಲ್ಲಿನ ಬಾರ್ ಮುಂಭಾಗದ ಫೈ ಓವರ್‌ ರಸ್ತೆಯಲ್ಲಿ ನಡೆದಿದೆ. ಅಬ್ದುಲ್ ಮುನೀರ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡಿರುವ ಸವಾರ ಅಬ್ದುಲ್ ನಝೀರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಉಪ್ಪುಂದದಿಂದ ಶಿರೂರಿಗೆ ಹೋಗುತ್ತಿದ್ದ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ರಸ್ತೆಯ ಮಧ್ಯದಲ್ಲಿರುವ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಅಬ್ದುಲ್ ಮುನೀರ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎನ್ನಲಾಗಿದೆ. ಈ ಘಟನೆಯ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More