ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಕೇದಾರ್ ಮರವಂತೆ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ರಕ್ಷಿತಾ ಭಟ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಶ್ರದ್ಧಾ ಮೊಗವೀರ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿಯ ವಿಶಿಷ್ಟ, ವಿಶೇಷ ಪರಂಪರೆ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಯ ಹರಿಕಾರ, ಸೂತ್ರಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣ ಕಾಮತ್ ಹೆಸರಿನಲ್ಲಿ ನೀಡುವ 2023-24ರ ಸಾಲಿನ ಪ್ರಶಸ್ತಿಯನ್ನು ಯಕ್ಷಗಾನದ ಹಿರಿಯ ಮದ್ದಲೆ ಕಲಾವಿದ ಏಳ್ಜಿತ್ ಸದಾನಂದ ಪ್ರಭು ಇವರಿಗೆ ನೀಡಲು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಸಮಿತಿ ಆಯ್ಕೆ ಮಾಡಿದೆ. ತೆಕ್ಕಟ್ಟೆ ರಾಮಚಂದ್ರ ಪ್ರಭು ಹಾಗೂ ಸರಸ್ವತಿ ದಂಪತಿಗಳ ಸುಪುತ್ರರಾಗಿ 1935ರಲ್ಲಿ ಜನಿಸಿದ ಶ್ರೀಯುತರು ಏಳ್ಜಿತ್ ನಲ್ಲಿ 5ನೇ ತರಗತಿಯ ವರೆಗೆ ಹಾಗೂ ಬೈಂದೂರು ಹೈಸ್ಕೂಲಿನಲ್ಲಿ 8ನೇ ತರಗತಿಯವರೆಗೆ ತಮ್ಮ ವಿದ್ಯಾಭ್ಯಾಸವನ್ನು ಪೂರೈಸಿದರು. ಬಾಲ್ಯದಿಂದಲೇ ಯಕ್ಷಗಾನದ ಗೀಳು ತಾಗಿಸಿಕೊಂಡು ತಮ್ಮ ದೊಡ್ಡಪ್ಪನವರಾದ ದಾಸಪ್ಪ ಪ್ರಭುಗಳಲ್ಲಿ ಮದ್ದಲೆಯ ಪ್ರಾಥಮಿಕ ಅಭ್ಯಾಸ ಪಡೆದರು. ನಂತರ ಗುರು ವೀರಭದ್ರ ನಾಯ್ಕ ರ ಯಜಮಾನಿಕೆಯಲ್ಲಿ ಪ್ರಸಿದ್ಧ ಮೃದಂಗ ವಾದಕರಾದ ಬೇಳಂಜೆ ತಿಮ್ಮಪ್ಪ ನಾಯ್ಕರ ಒಡನಾಟ ಮಾಡಿ ಮದ್ದಲೆ ಹಾಗೂ ಚಂಡೆ ಎರಡನ್ನೂ ಕಲಿತುಕೊಂಡರು. ತದನಂತರ ಕೊಲ್ಲೂರು ಮೇಳ, ಚಿಕ್ಕ ಹೊನ್ನೇಸರ ಮೇಳ, ಕೊಡವೂರು ಮೇಳಗಲ್ಲಿ ತಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ – ಉಪ್ಪುಂದದ ಕೊಡಿಹಬ್ಬ ಮಂಗಳವಾರ ಸಡಗರ, ಸಂಭ್ರಮದಿಂದ ಜರುಗಿತು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದ್ವಿತೀಯ ಜಾತ್ರೆ ಉಪ್ಪುಂದ ಕೊಡಿಹಬ್ಬವಾಗಿದ್ದು, ಇಲ್ಲಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವ ದಿನ ದೇವಳ ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಚಂಡ ಮದ್ದಳೆಗಳ ನಾದ, ನಾಸಿಕ್ ಬ್ಯಾಂಡ್, ಕೀಲು ಕುದುರೆ, ತಟ್ಟಿರಾಯ ರಥೋತ್ಸವದ ಮೆರಗು ಹೆಚ್ಚಿಸಿದ್ದವು. ರಥಬೀದಿಯಲ್ಲಿ ವ್ಯಾಪಾರ ಜೋರಾಗಿಯೇ ನಡೆಯುತ್ತಿದೆ. ಬಳಿಕ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಬಹಿರಂಗ ಹರಾಜು ಮಾಡಲಾಯಿತು. ಸಂಜೆ ನಡೆದ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ರಥ ಎಳೆದು ಸಂಭ್ರಮಿಸಲಿದ್ದಾರೆ. ರಾತ್ರಿ ದೇವರ ಅವಭ್ರತಸ್ನಾನ ನಡೆಯಲಿದೆ. ದೇವಳಕ್ಕೆ ಆಗಮಿಸುವ ಎಲ್ಲಾ ಮಾರ್ಗಗಳಲ್ಲಿ ಪೊಲೀಸರು ಬಂದೋವಸ್ತ್ ಮಾಡಿದ್ದರು. ಕುಂದಾಪುರ ಡಿವೈಎಸ್ಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ವಸುದೈವ ಕುಟುಂಬಕಂ ಪರಿಕಲ್ಪನೆಯ ಮೂಲಕ ಎಲ್ಲ ಭಾಷೆಗಳನ್ನು ಗೌರವಿಸುವ ಮತ್ತು ಪರಿಚಯಿಸುವ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ದಿನಾಂಕ : 25-11-2023 ರಂದು ಹಿರ್ಗಾನದ ಆದಿಲಕ್ಷ್ಮೀ ಮಹಾಲಕ್ಷ್ಮೀ ದೇವಸ್ಥಾನದ ಗೀತಾಂಜಲಿ ಸಭಾಭವನದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಖ್ಯಾತ ವಾಗ್ಮಿ ರಾಮಕೃಷ್ಣ ಕಾಲೇಜು ಮಂಗಳೂರು ಇದರ ಪ್ರಾಂಶುಪಾಲರಾದ ಶ್ರೀ ಬಾಲಕೃಷ್ಣ ಶೆಟ್ಟಿ ಅವರು ಮಾತನಾಡಿ ಜೀವನದ ಎಲ್ಲ ಹಂತಗಳಲ್ಲಿ ಹೋರಾಟ ಇರುತ್ತದೆ. ಕಠಿಣ ಪರಿಶ್ರಮ, ನಿರಂತರ ತೊಡಗಿಸಿಕೊಳ್ಳುವಿಕೆ, ಬಂದ ಸವಾಲುಗಳಿಗೆ ಎದೆಯೊಡ್ಡಿ ನಿಂತು ಎದುರಿಸಿ. ಆಗ ಯಶಸ್ಸು ಹಿಂಬಾಲಿಸಿ ಬರುತ್ತದೆ. ಸಾಧಕರ ಸಾಧನೆಗಳು ಕೇಳಲು ರೋಮಾಂಚನ ಉಂಟುಮಾಡುತ್ತದೆ. ಆದರೆ ಅದರ ಹಿಂದೆ ಬಹುದೊಡ್ಡ ತ್ಯಾಗವಿರುತ್ತದೆ. ಅದು ಕ್ರಿಯೇಟಿವ್ ನ ವಿದ್ಯಾರ್ಥಿಗಳಿಂದ ಸಾಧ್ಯವಾಗಲಿ ಎಂದು ಹಾರೈಸಿದರು. ಮತ್ತು ಕಳೆದ ವರ್ಷ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ “ಸಾಧಕ ಪುರಸ್ಕಾರ” ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕ್ರಿಯೇಟಿವ್ ಕಾಲೇಜಿನಲ್ಲಿ ವಾಸಂಗ ಮಾಡಿ ರಾಜ್ಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟೇಶ್ವರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸೋಮವಾರ ಸಡಗರ ಸಂಭ್ರಮದಿಂದ ಜರುಗಿತು. ಬೆಳಗ್ಗೆ ತಂತ್ರಿಗಳು ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳನ್ನು ನೆರವೇರಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು. ಸಂಜೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಳ್ಳುತ್ತದೆ. ದೇವಳದ ರಥೋತ್ಸವದ ಸಂದರ್ಭ ಗರುಡ ದರ್ಶನ ಆಗುವುದು ವಾಡಿಕೆ. ರಥೋತ್ಸವಕ್ಕೆ ಚಾಲನೆ ಸಿಗುತ್ತಿರುವಂತೆಯೇ ಗರುಡ ದರ್ಶನ ಆಗಿದ್ದು ರಥಕ್ಕೆ ಎರಡು ಸುತ್ತು ಬಂದು ನಿರ್ಗಮಿಸುತ್ತದೆ. ಗರುಡದರ್ಶನ ವೀಕ್ಷಿಸಲು ಸಹಸ್ರಾರು ಭಕ್ತರು ನೆರೆದಿದ್ದು ಗರುಡ ರಥಕ್ಕೆ ಸುತ್ತು ಹೊಡೆಯುತ್ತಿರುವಂತೆಯೇ ರೋಮಾಂಚನಗೊಂಡರು. ನವ ವಧುವರರು ವಾಡಿಕೆಯಂತೆ ಹಬ್ಬಕ್ಕೆ ಬಂದು ಕೊಡಿ (ಕಬ್ಬು) ಕೊಂಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಕರಾವಳಿಯ ಕಂಬಳದಲ್ಲಿ ಬೈಂದೂರು ಬೊಳಂಬಳ್ಳಿಯ ಶ್ರೀರಾಮ್ ಚೈತ್ರ ಪರಮೇಶ್ವರ್ ಭಟ್ ಅವರ ಕಾಂತಾರ ಖ್ಯಾತಿಯ ಕೋಣಗಳು ಚಿನ್ನದ ಪದಕ ಪಡೆದುಕೊಂಡಿವೆ. ಬೆಂಗಳೂರು ಕಂಬಳದ ಕನೆಹಲಗೆ ವಿಭಾಗದಲ್ಲಿ 6.5 ಕೋಲು ನಿಶಾನೆಗೆ ನೀರು ಹಾಯಿಸಿರುವ ಕೋಣಗಳು ಚಿನ್ನದ ಪದಕವನ್ನು ಪಡೆದಿವೆ. ಕೋಣಗಳನ್ನು ಗಣೇಶ್ ಉಳ್ಳೂರು ಓಡಿಸಿದ್ದರು. ಅಪ್ಪು ಹಾಗೂ ಕಿಟ್ಟು ಹೆಸರಿನ ಈ ಕೋಣಗಳನ್ನು ಕಾಂತಾರ ಸಿನಿಮಾದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಓಡಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.25: ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ದಕ್ಷ ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್ ಅವರು ಕಾನೂನುಬದ್ದವಾಗಿ ಕರ್ತವ್ಯನಿರ್ವಹಿಸಿದಕ್ಕೆ ಜಿಲ್ಲೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಎದುರೇ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಅವರು, ಅಧಿಕಾರಿಗಳ ಆತ್ಮ ಸ್ಥೈರ್ಯ ಕುಸಿಯುವಂತೆ ತರಾಟೆಗೆ ತೆಗೆದುಕೊಂಡಿರುವುದು ಮತ್ತು ಈ ಕುರಿತು ಸಭೆಯಲ್ಲಿ ಅಧಿಕಾರಿಗೆ ಮಾತನಾಡಲು ಬಿಡದೆ ಇರುವುದನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಆಡಳಿತದ 3 ವರ್ಷದ ಅವಧಿಯಲ್ಲಿ ಸುನೀಲ್ ಕುಮಾರವರು ಜಿಲ್ಲೆಯ ಆಯಕಟ್ಟಿನ ಸ್ಥಳಗಳಲ್ಲಿ ತನಗೆ ಬೇಕಾದ ಅಧಿಕಾರಿಗಳನ್ನು ಹಾಕಿಸಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿರುಮವನ್ನು ಜಿಲ್ಲೆಯ ಜನತೆ ಮರೆತಿಲ್ಲ. ಸುನೀಲ್ ಕುಮಾರರ ಸಚಿವರಾಗಿದ್ದಾಗ ಪೋಲಿಸ್ ಠಾಣೆಗಳು ಮಟ್ಕಾ ಬಿಡ್ಡರ, ಕ್ಲಬ್ ಮಾಲಿಕರ ಮತ್ತು ಸಮಾಜಘಾತಕ ಶಕ್ತಿಗಳ ಹತೋಟಿಯಲ್ಲಿದ್ದು , ಸಜ್ಜನರು ಮತ್ತು ಬಡವರಿಗೆ ನ್ಯಾಯ ಸಿಗುತ್ತಿರಲಿಲ್ಲ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಖುದ್ದು ದಕ್ಷ ಪೋಲಿಸ್ ಅಧಿಕಾರಿಯನ್ನು ಜಿಲ್ಲೆಗೆ ನೇಮಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆಯನ್ನು ತಾಳದೆ, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೈಂದೂರು ತಾಲೂಕಿನ ಮರವಂತೆಯಲ್ಲಿ ಹೊರ ಬಂದರು, ಗಂಗೊಳ್ಳಿ ಮೀನುಗಾರಿಕೆ ಬಂದರಿನ ಮರು ನಿರ್ಮಾಣ ಹಾಗೂ ಗಂಗೊಳ್ಳಿ ಮೀನುಗಾರಿಕಾ ಬಂದರು ಹಾಗೂ ಕೋಡಿ ಜೆಟ್ಟಿಯ ನ್ಯಾವಿಗೇಷನ್ ಚಾನೆಲ್ನಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ತಾಂತ್ರಿಕ ಸಮಸ್ಯೆಗಳಿಂದಾಗಿ ಕೈಗೊಳ್ಳದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಬಂದರು ಇಲಾಖೆ ಹಾಗೂ ಸಿ.ಆರ್.ಝಡ್ ನವರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಕಾಮಗಾರಿಗಳನ್ನು ತ್ವರಿತವಾಗಿ ಗುಣಮಟ್ಟದೊಂದಿಗೆ ಕೈಗೊಳ್ಳುವುದರೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು. ಕೃಷಿ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವ ನ.23ರಿಂದ 30ರ ತನಕ ನಡೆಯಲಿದೆ. ನ.28ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವೈಭವದ ಮನ್ಮಹಾರಥೋತ್ಸವ ನೆರವೇರಲಿದೆ. ಉತ್ಸವದ ಮೊದಲನೇ ದಿನ ಸಾಂಪ್ರದಾಯಿಕ ವಿಧಿ-ವಿಧಾನದ ಮೂಲಕ ಧ್ವಜಮರವನ್ನು ತಂದು ನೆಡುವುದರ ಮೂಲಕ ಅಂಕುರಾರ್ಪಣೆಯೊಂದಿಗೆ ಆರಂಭಗೊಂಡಿತು. ಎರಡನೇ ದಿನ ಗಜಾರೋಹಣ ಉತ್ಸವ, ಯಾಗಶಾಲೆಯಲ್ಲಿ ಪುಣ್ಯಾಹ ಜಾತ್ರೋತ್ಸವ ವೈಭವ ಹೋಮ, ರಾತ್ರಿ ಸಲಾಂ ಮಂಗಳಾರತಿ ದಿನ ಗಜಾರೋಹಣ, ಅಶ್ವಾರೋಹಣ ನಡೆಯುತ್ತದೆ. ಮೂರನೆಯ ದಿನ ಅಶ್ವಾರೋಹಣ, ಓಲಗ ಮಂಟಪದಲ್ಲಿ ಪೂಜೆ ನಗರೋತ್ಸವ ನಡೆಯುತ್ತದೆ. ನಾಲ್ಕನೆಯ ದಿನ ಮಯೂರ ವಾಹನ ಉತ್ಸವ, ರಾತ್ರಿ ರಂಗಪೂಜೆ ನಡೆಯುತ್ತದೆ. ಐದನೆಯ ದಿನ ಪುಷ್ಪಕ ಸಿಂಹಾರೋಹಣ ಉತ್ಸವ, ರಂಗಪೂಜೆ ಜರುಗುತ್ತದೆ. ಈ ದಿವಸ ಅಮ್ಮನವರು ಮೂಲಸ್ಥಾನವಾದ ಸಮುದ್ರ ದಂಡೆಯ ದೇವಿಕೆರೆ ತೊಪ್ಪಲು ಕಟ್ಟೆಗೆ ತೆರಳುತ್ತಾರೆ. ಆರನೆಯ ದಿನ ಮನ್ಮಹಾರಥೋತ್ಸವ, ಏಳನೆಯ ದಿನ ಓಕುಳಿ ಮತ್ತು ಚೂರ್ಣೋತ್ಸವ ನಡೆಯುತ್ತದೆ. ಎಂಟನೇ ದಿನ ಧ್ವಜಾವರೋಹಣ, ಅಂಕುರ ಪ್ರಸಾದ ವಿನಿಯೋಗ ರಾತ್ರಿ ನಗರೋತ್ಸವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ನಿಸರ್ಗ, ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಅಣಕು ಸಂಸತ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ. ವಿದ್ಯಾರ್ಥಿನಿಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ ಜಿ ಮತ್ತು ಉಪನ್ಯಾಸಕ ವೃಂದದವರು ಮತ್ತು ಇ ಎಲ್ ಸಿ ಕ್ಲಬಿನ ಮಾರ್ಗದರ್ಶಕ ಉಪನ್ಯಾಸಕಿ ಸಂಧ್ಯಾ ನಾಯಕ ಅಭಿನಂದಿಸಿರುತ್ತಾರೆ.
