Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮವಹಿಸುವುದು ಅಗತ್ಯವಾಗಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆ ಸಂ.ಎಫ್.ಇ.ಇ. 128.ಇ.ಪಿ.ಸಿ.2022 ದಿನಾಂಕ:10-05-2022ರಲ್ಲಿ ನೀಡಲಾದ ಮಾರ್ಗದರ್ಶನಗಳನ್ನು ಸರಿಯಾಗಿ ಕಾರ್ಯಗತಗೊಳಿಸಲು ಹಾಗೂ ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ನಿಗಧಿಪಡಿಸಿದ ಅವಧಿಯೊಳಗೆ ಸಮಾರಂಭವನ್ನು ಮುಕ್ತಾಯಗೊಳಿಸಬೇಕು. ಅಲ್ಲದೇ ವಿಪರೀತವಾಗಿ ಶಬ್ದ ಮಾಲಿನ್ಯ ಹಾಗೂ ಅಕ್ಕ ಪಕ್ಕದವರೆಗೆ ತೊಂದರೆ ಉಂಟಾಗದಂತೆ ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆ ತಯಾರಿಗೆ ಹಾಗೂ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದಲು ಅಡಚಣೆಯಾಗದಂತೆ ಸಾರ್ವಜನಿಕರು ಸಹಕರಿಸಬೇಕು. ಇದರ ಹೊರತಾಗಿಯೂ ಶಬ್ದ ಮಾಲಿನ್ಯದ ಕುರಿತು ದೂರುಗಳು ಸ್ವೀಕೃತವಾದಲ್ಲಿ ಪರಿಸರ (ಸಂರಕ್ಷಣೆ) ಕಾಯಿದೆ 1986 ನಿಯಮ 15 ರಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಚೇತನಾ ಪೌಂಡೇಶನ್ ಕರ್ನಾಟಕ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ರಿ. ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ನೀಡಲ್ಪಡುವ ಶ್ರೀ ಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿಗೆ ಪವಿತ್ರ ದೇವಾಡಿಗ ಆಯ್ಕೆಯಾಗಿರುತ್ತಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ 16 ಆದಿತ್ಯವಾರ ಬೆಳಿಗ್ಗೆ ಜಿಲ್ಲಾ ಕನ್ನಡ ಸಾಹಿತ್ಯ ಭವನ ವಿಜಯನಗರ 1ನೇ ಹಂತ ಮೈಸೂರು ಅಲ್ಲಿ ನಡೆಯಲಿರುವುದು. ಅವಳು ಮೂರ್ತಿಮನೆ ಮೊಗೇರಿ ನಾಗರಾಜ್ ದೇವಾಡಿಗ ಹಾಗೂ ಸೀತಾ ದೇವಾಡಿಗ ದಂಪತಿಯ ಪುತ್ರಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದಿಂದ ಭಾವೈಕ್ಯ – ವರ್ಷದ ನೆನೆಪು, ದಿ. ಡಾ. ಯಡ್ತರೆ ನರಸಿಂಹ ಶೆಟ್ಟಿ ಶತಮಾನದ ಸಂಸ್ಮರಣೆ ಹಾಗೂ ಯುವ ಬಂಟರ ಸಾಧಕರಿಗೆ ಅಭಿನಂದನ ಕಾರ್ಯಕ್ರಮವು ಇಲ್ಲಿನ ಆರ್. ಏನ್. ಸಭಾಂಗಣದ ಶ್ರೀ ಗಿಳಿಯಾರು ಕುಶಲ ಹೆಗ್ಡೆ ಸಭಾಭವನದಲ್ಲಿ ಫೆ.15 ಶನಿವಾರದಂದು ಸಂಜೆ ನಡೆಯಲಿದೆ. ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ಅವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಡೆಪ್ಯೂಟಿ ರಿ. ಡಾ. ಬಿ. ವಸಂತ್ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಮಂಗಳೂರು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ರಿ. ನಿರ್ದೇಶಕರಾದ ಬಿ. ಅರುಣ್ ಕುಮಾರ್ ಶೆಟ್ಟಿ ಸಂಸ್ಕರಣೆ ಮಾಡಲಿದ್ದಾರೆ. ಕುಂದಾಪುರದ ಉದ್ಯಮಿ ಎಚ್. ದಯಾನಂದ ಶೆಟ್ಟಿ ಕೃತಿ ಅನಾವರಣ ಮಾಡಲಿದ್ದಾರೆ. ಈ ವೇಳೆ ಕುಂದಾಪುರ ತಾಲೂಕು ಸಮಿತಿ ಬಂಟರ ಯಾನೆ ನಾಡವರ ಮಾತೃಸಂಘದ ಸಂಚಾಲಕರಾದ ಸಂಪತ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ನೀಡಿ, ಶ್ರೀ ದೇವಿಗೆ ಚಂಡಿಕಾ ಹೋಮ ಪೂಜೆ ಮಾಡಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆ. ಬಾಬು ಹೆಗ್ಡೆ, ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಶ್ರೀ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು. ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ, ಪಂಚಾಯತ್ ಸದಸ್ಯರು ಶಿವರಾಮ್ ಕೃಷ್ಣ ಭಟ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗುರುವಿಲ್ಲದ ವಿದ್ಯೆ, ಗುರಿ ಇಲ್ಲದ ಜೀವನ, ಅದು ನಿರರ್ಥಕ ಎಂಬ ಮಾತಿದೆ. ಶಿಕ್ಷಣ ಎನ್ನುವುದು ಪ್ರತಿಯೊಬ್ಬರ ಜೀವನದಲ್ಲಿ ತುಂಬಾ ಮುಖ್ಯ ಘಟ್ಟ ಹಾಗೆ ಪ್ರತಿಯೊಬ್ಬರೂ ತಮ್ಮ ಜೀವನದಲ್ಲೊಂದು ಗುರಿಯನ್ನು ಇಟ್ಟುಕೊಳ್ಳಬೇಕು ಹಾಗೂ ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಗುರಿ ಸಾಧನೆ ಹೇಗಿರಬೇಕು ಎಂಬುದನ್ನು ಒಂದು ಜೇಡರ ಹುಳುವಿನ ಕಥೆಯ ಮೂಲಕ ಮಕ್ಕಳಿಗೆ ಮನದಟ್ಟು ಮಾಡಿಸಿದರು. ನಿಮ್ಮೆಲ್ಲರಿಗೂ ಇಂದು ಉತ್ತಮ ರೀತಿಯ ಸಂಸ್ಕಾರಯುತ ಶಿಕ್ಷಣ ಈ ಸಂಸ್ಥೆಯಿಂದ ಸಿಗುತ್ತಿದೆ. ಅದರ ಸದುಪಯೋಗ ಪಡೆದುಕೊಂಡು ಛಲವಂತರಾದಾಗ ಮಾತ್ರ ನೀವು ನಿಮ್ಮ ಗುರಿಯನ್ನು, ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ ಹಾಗಾಗಿ ಇವತ್ತಿನಿಂದಲೇ ನೀವೆಲ್ಲರೂ ನಿಮ್ಮ ಗುರಿಯತ್ತ ಹೆಜ್ಜೆ ಹಾಕಲು ಪ್ರಯತ್ನಿಸಿ ಎಂದು ಲೆಫ್ಟಿನೆಂಟ್ ಕರ್ನಲ್ ಎಂ. ಕೃಷ್ಣ ಶೆಟ್ಟಿ ಅವರು ಹೇಳಿದರು. ಅವರು ಗಣರಾಜ್ಯೋತ್ಸವ ಶಿಬಿರದಲ್ಲಿ ಕರ್ನಾಟಕ ಮತ್ತು ಗೋವಾವನ್ನು ಪ್ರತಿನಿಧಿಸಿ ಸಾಧನೆ ಮಾಡಿದ ಸಿಎಸ್‌ಎಮ್‌ ನಿರ್ಭಯ್ ಯು. ಶೆಟ್ಟಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಇವರ ಸಾಧನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶಾರದಾ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳು ಅವರವರ ಮನೆಯಂಗಳದಲ್ಲಿ ಬೆಳೆದ ಬಣ್ಣ-ಬಣ್ಣದ ವಿವಿಧ ಹೂವುಗಳನ್ನು ತಂದು ವಿದ್ಯಾ ಸರಸ್ವತಿಯಾದ ತಾಯಿ ಶಾರದೆಗೆ ಭಕ್ತಿಭಾವದಿಂದ ಅರ್ಪಿಸಿದರು. ಕಾರ್ಯಕ್ರಮದ ಉದ್ದಕ್ಕೂ ವಿದ್ಯಾರ್ಥಿಗಳು ಭಕ್ತಿಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿ, ಮಂಗಳಕರವಾದ ವಾತಾವರಣವನ್ನು ಸೃಷ್ಟಿಸಿದರು. ಸಹಶಿಕ್ಷಕರಾದ ರಾಮಕೃಷ್ಣ ಉಡುಪರು ಶಾಸ್ತ್ರೋಕ್ತವಾಗಿ ಮಂತ್ರಗಳನ್ನು ಪಠಿಸಿ ತಾಯಿ ಶಾರದೆಯ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಮಕ್ಕಳಿಗೆ ತಾಯಿ ಸರಸ್ವತಿಯ ಮಹಿಮೆ ಮತ್ತು ವಿದ್ಯೆಯ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ ಎಂ., ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ್, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ತಾಯಿ ಶಾರದೆಯನ್ನು ಪೂಜಿಸಿ, “ಉತ್ತಮ ವಿದ್ಯೆ ಹಾಗೂ ಬುದ್ಧಿ ಪ್ರಾಪ್ತಿಯಾಗಲಿ” ಎಂಬ ಮಕ್ಕಳ ಮುಗ್ಧ ಮನಸ್ಸಿನ ಪ್ರಾರ್ಥನೆ, ಕಾರ್ಯಕ್ರಮವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನಿಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಘಟಕಗಳ  ವಿವರ:ಪಚ್ಚಿಲೆ ಕೃಷಿ, ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ, ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು, ಐಸ್ ಪ್ಲಾಯಂಟ್/ಕೋಲ್ಡ್ ಸ್ಟೋರೇಜ್ ನಿರ್ಮಾಣ, 10 ಟನ್ ಸಾಮರ್ಥ್ಯದ ಐಸ್ ಪ್ಲಾಯಂಟ್ / ಕೋಲ್ಡ್ ಸ್ಟೋರೇಜ್ ನಿರ್ಮಾಣ ಹಾಗೂ ಮನರಂಜನಾ ಮಿನುಗಾರಿಕೆ ಘಟಕಗಳಿಗೆ ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಫೆಬ್ರವರಿ 19 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಟೀಮ್ ಸಚಿನ್ ಲವರ್ಸ್‌ ತಂಡದ ವತಿಯಿಂದ ಕಾವ್ರಾಡಿ ಮುಳ್ಳುಗುಡ್ಡೆಯಲ್ಲಿ ಮದಗ ಪ್ರೀಮಿಯರ್ ಲೀಗ್ ಸೀಸನ್ 4 ಕ್ರಿಕೆಟ್ ಪಂದ್ಯಾಟ ನಡೆಯಿತು. ನಿವೃತ್ತ ಸೈನಿಕ ರವಿಚಂದ್ರ ಶೆಟ್ಟಿ ತೆಕ್ಕಟ್ಟೆ ಪಂದ್ಯಾಟವನ್ನು ಉದ್ಘಾಟಿಸಿದರು. ಸಚಿನ್ ಲವರ್ಸ್‌ ತಂಡದ ವತಿಯಿಂದ ಪ್ರಪ್ರಥಮ ಬಾರಿಗೆ ಮುದ್ರಿಸಿದ ಸಚಿನ್ ಲವರ್ಸ್‌ ಡೈರಿಯನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಮದಗ ಪ್ರೀಮಿಯರ್ ಲೀಗ್ ಸೀಜನ್ 4ರ ಸಂಘಟಕ ರಾಹುಲ್ ಹೆಗ್ಡೆ, ಕಾವ್ರಾಡಿ ಅಜಿತ್ ಕುಮಾರ್ ಶೆಟ್ಟಿ, ಗುರುಪ್ರಸಾದ್ ಶೆಟ್ಟಿ ನೈಲ್ಕೋಡ್, ಅನಿಲ್ ಕಾವ್ರಾಡಿ, ಹೇಮಂತ್ ಕಾವ್ರಾಡಿ, ಶ್ಯಾಮ್ ಗುಲ್ವಾಡಿ, ನಾಗರಾಜ್ ಮುಳ್ಳುಗುಡ್ಡೆ, ಅನಿಲ್ ಬಟರ್ಫ್ಲೈ, ಬೋಜ ಪೂಜಾರಿ, ಗುರುರಾಜ ಕಾವ್ರಾಡಿ, ಸ್ಥಳೀಯ ಮುಖಂಡರುಗಳಾದ ಪ್ರದೀಪ್ ಕುಮಾರ್ ಶೆಟ್ಟಿ, ಸುರೇಂದ್ರ ಶೆಟ್ಟಿ ಹಡಾಳಿ, ಎಂ.ಚಂದ್ರ, ಕ್ಯಾಂಪ್ಕೋ ಮ್ಯಾನೇಜರ್ ಶಿವಾನಂದ ಮಂಗಳೂರು ಉಪಸ್ಥಿತರಿದ್ದರು. ಈ ಸಂದರ್ಭ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಶ್ರೀರಾಮೇಶ್ವರ ಯುವಕ ತಂಡದ ಸದಸ್ಯರನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಹಡವು ಗ್ರಾಮದ ಪಡುಕೋಣೆ ನಿವಾಸಿ ಸೀತು (81) ಅವರು ಬೆಂಕಿ ಆಕಸ್ಮಿಕವಾಗಿ ತಾಗಿ ಮೃತಪಟ್ಟಿದ್ದಾರೆ. ಬಚ್ಚಲು ಮನೆಯಲ್ಲಿ ಬೆಂಕಿ ಉರಿಸಿ ನೀರು ಕಾಯಿಸುತ್ತಿರುವಾಗ ಆಕಸ್ಮಿಕವಾಗಿ ಸೀತು ಅವರ ಸೀರೆಗೆ ಬೆಂಕಿ ತಗಲಿದ ಪರಿಣಾಮ ಸುಟ್ಟ ಗಾಯವಾಗಿದ್ದು, ಚಿಕಿತ್ಸೆಗೆಂದು ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿ ವೈದ್ಯಕೀಯ ವೆಚ್ಚ ಭರಿಸಲಾಗದೇ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸೀತು ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26 ನೇ ಸಾಲಿನಲ್ಲಿ ಡಾ. ಬಾಬು ಜಗಜೀವನರಾಮ ಅವರ 118 ನೇ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡುವ ಬಗ್ಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನರಾಮ್ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿದೆ. ಜಿಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕು ಅಥವಾ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ,…

Read More