ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಐರೋಡಿ ಗ್ರಾಮದ ನಿವಾಸಿ ಕೃಷ್ಣ (49) ಅವರು ಬುಧವಾರದಂದು ಮನೆಯ ಪಕ್ಕದ ಕೊಟ್ಟಿಗೆಯ ಕಬ್ಬಿಣದ ಪಟ್ಟಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ. ಅವರು ಸುಮಾರು ಒಂದುವರೆ ವರ್ಷಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಉಸಿರಾಟದ ಸಮಸ್ಯೆಯಿದ್ದು ಕಾಲುಗಳು ಊದಿಕೊಂಡಿರುತ್ತದೆ. ಅದೇ ಬೇಸರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಗ್ರಾಮದ ಬೀಜಾಡಿ ಪೂಜಾ ಟೈಲ್ಸ್ ಎದುರಿನ ಹೆದ್ದಾರಿಯಲ್ಲಿ ಕುಂಭಾಶಿ – ಕುಂದಾಪುರ ಏಕಮುಖ ರಸ್ತೆಯ ಬಳಿ ಕಾರು ಬೈಕ್ಗೆ ಢಿಕ್ಕಿಯಾಗಿದೆ. ದೇವರಾಜ್ ಅವರ ಕಾರು ಕುಂದಾಪುರ ಕಡೆಗೆ ಹೋಗುತ್ತಿದ್ದಾಗ ಮುನ್ಸೂಚನೆ ನೀಡದೆ ಎಡಕ್ಕೆ ಚಲಾಯಿಸಿ ಏಕಮುಕ ರಸ್ತೆಯ ಅಂಚಿನಲ್ಲಿ ನಿಲ್ಲಿಸಿದ್ದ ಬೈಕ್ಗೆ ಢಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಗಾಯಗೊಂಡು ಕೋಟೇಶ್ವರ, ಮಣಿಪಾಲ ಆಸ್ಪತ್ರೆ ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ನಾಡು ನುಡಿಯ ಕುರಿತು ಅಭಿಮಾನವನ್ನು ಮೂಡಿಸುವ ಉದ್ದೇಶದಿಂದ “ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ”ಯು ಪ್ರತಿ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಅನೇಕ ಶತಮಾನಗಳ ಇತಿಹಾಸವನ್ನು ಹೊಂದಿದ ಕನ್ನಡ ನಾಡು ಹಾಗೂ ಕನ್ನಡ ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆಯಾಗಿದೆ ಎಂದು ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಕ್ಕೆ ಸ್ವಾಗತ ಕೋರಿ, ಚಂಡೆ ಬಾರಿಸುವ ಮೂಲಕ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಕನ್ನಡ ಪರಂಪರೆ ದೇಶದ ಪ್ರಾಚೀನ ಪರಂಪರೆಯಲ್ಲಿ ಒಂದಾಗಿದೆ ಸುಮಾರು 2000 ಕ್ಕೂ ಹೆಚ್ಚು ವರ್ಷಗಳ ಸುದೀರ್ಘ ಇತಿಹಾಸ ಹೊಂದಿದೆ. ಕನ್ನಡ ನುಡಿಯನ್ನು ಕಟ್ಟುವ ಉಳಿಸಿ ಬೆಳೆಸುವ ಕಾಯಕದಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದ ಅವರು 87ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20, 21 ಹಾಗೂ 22 ರಂದು ಮಂಡ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಉತ್ಸವ ನ. 11ರಿಂದ 18ರವರೆಗೆ ನಡೆಯಲಿದೆ. ನ.12ರಂದು ನಡೆಯುವ ಅದ್ಧೂರಿಯ ಮನ್ಮಹಾ ರಥೋತ್ಸವ ಅಂಗವಾಗಿ ಅದರ ಪೂರ್ವಬಾವಿ ಸಭೆ, ಶಾಸಕ ಗುರುರಾಜ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ದೇವಳದ ಸಭಾಂಗಣದಲ್ಲಿ ನಡೆಯಿತು. ಉಪ್ಪುಂದ ದೇವಳದ ಮನ್ಮಹಾ ರಥೋತ್ಸವ ತಾಲೂಕಿನ ಅತೀ ದೊಡ್ಡ ರಥೋತ್ಸವವಾಗಿದ್ದು, ಸುಮಾರು 35 ವರ್ಷಗಳ ಬಳಿಕ ಇಲ್ಲಿನ ದೇವಳದ ರಥೋತ್ಸವ ಕೋಟೇಶ್ವರ ಹಬ್ಬಕ್ಕಿಂತ ಮೊದಲು ಬಂದಿರುವುದರಿಂದ ಜಾತ್ರಗೆ ಬರುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗುತ್ತದೆ ಆದ್ದರಿಂದ ಜನರಿಗೆ ಯಾವುದೇ ಸಮಸ್ಯೆಗಳು ಉಂಟಾಗದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಮೆಸ್ಕಾಂ, ಅಗ್ನಿ ಶಾಮಕ ಇಲಾಖೆ, ಆರೋಗ್ಯ ಇಲಾಖೆಗಳು ಮುಂಜಾಗೃತ ಕ್ರಮ ಕೈಗೊಳ್ಳಬೇಕು, ಅಲ್ಲದೇ ಮುಂದಿನ ಶುಕ್ರವಾರದಿಂದ ಪ್ರತಿ ಶುಕ್ರವಾರ ಅನ್ನದಾನ ಸೇವೆ ಮಾಡಲು ಶೀಘ್ರ ಅಗತ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಸೂಚಿಸಿದರು. ರಥ ಬೀದಿ ಅಗಲೀಕರಣಗೊಳಿಸಿ:ಇಲ್ಲಿನ ದೇವಳದ ರಥೋತ್ಸವದ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಥವಾ ವೆಬ್ಸೈಟ್ https://sevasindhu.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಿಗಮಗಳ ವೆಬ್ಸೈಟ್ ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ ಸಂಖ್ಯೆ: 9482300400, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಬಿ ಬ್ಲಾಕ್, ರಜತಾದ್ರಿ ಮಣಿಪಾಲ ದೂ.ಸಂಖ್ಯೆ: 0820-2574884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ತೆಕ್ಕಟ್ಟೆ (ಪ್ರೌಢ ಶಾಲಾ ವಿಭಾಗ) ಇವರ ಆಶ್ರಯದಲ್ಲಿ ಗಾಂಧಿ ಮೈದಾನ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರೌಢ ಶಾಲಾ ಬಾಲಕ- ಬಾಲಕಿಯರ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಬಾಲಕರ ವಿಭಾಗದ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತದೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ ’ಜೀವನದಲ್ಲಿ ಒಮ್ಮೆಯಾದರೂ ರಕ್ತದಾನಿಯಾಗಿ, ಅದು ನೀವು ಸಮಾಜಕ್ಕೆ ನೀಡುವ ಅತ್ಯುತ್ತಮ ಸೇವೆಯಾಗುತ್ತದೆ’ ಎಂದು ಲಯನ್ಸ್ 317ಡಿ ಜಿಲ್ಲಾ ಸಂಪುಟ ಕಾರ್ಯದರ್ಶಿ ಗೀತಾ ರಾವ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ಆರೋಗ್ಯ ಕೇಂದ್ರ, ಮಂಗಳೂರಿನ ಕೆಎಂಸಿ ಆಸ್ಪತ್ರೆ, ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆ, ನಿಡ್ಡೋಡಿ ಲಯನ್ಸ್ ಕ್ಲಬ್, ಆಳ್ವಾಸ್ ಚಿಗುರು ವಿದ್ಯಾರ್ಥಿ ವೇದಿಕೆ, ಆಳ್ವಾಸ್ ಎನ್ಎಸ್ಎಸ್, ಆಳ್ವಾಸ್ ರೆಡ್ಕ್ರಾಸ್ ಸಹಯೋಗದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಎ.ವಿ. ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನವು ಶ್ರೇಷ್ಠ ದಾನವಾಗಿದ್ದು, ಅತ್ಯಂತ ಕಠಿಣ ಸಂದರ್ಭದಲ್ಲಿ ರಕ್ತದಾನ ಮಾಡಿ ನೆರವಾಗುವುದು ಅತ್ಯುತ್ತಮ ಸೇವೆಯಾಗಿದೆ ಎಂದರು. ಆಳ್ವಾಸ್ ಕಾಲೇಜು ಶಿಕ್ಷಣದ ಜೊತೆ ಸಂಸ್ಕೃತಿ ಮತ್ತು ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿದ್ದು, ಮಾನವೀಯ ಮೌಲ್ಯಗಳಿಗೆ ಒತತ್ತು ನೀಡುತ್ತಿದೆ. ರಕ್ತದಾನದಂತಹ ಸಮಾಜ ಕಾರ್ಯಗಳ ಮೂಲಕ ನವ ಪೀಳಿಗೆಗೆ ಮಾದರಿಯಾಗಿದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ನಿಡ್ಡೋಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಸ್ಪೂರ್ತಿ, ಮನೋಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಂಸ್ಥೆಯ ವಿದ್ಯಾರ್ಥಿಗಳಿಗೆ ವಿವಿದ ರೀತಿಯ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಕುರಿತು ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರು ” ಕ್ರಿಯೇಟಿವ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ಕೇವಲ ಕಲಿಕೆ ಮಾತ್ರವಲ್ಲದೆ ಕ್ರೀಡಾ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಪ್ರತಿ ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಇದರಲ್ಲಿ ಭಾಗವಹಿಸಬೇಕು. ಕ್ರೀಡೆಯಲ್ಲಿ ಗೆಲ್ಲುವುದಕ್ಕಿಂತ ಭಾಗವಹಿಸುವುದು ಮುಖ್ಯ”. ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕ ವರ್ಗದವರು, ನಿಲಯ ಪಾಲಕರು, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳನ್ನು ವಿವಿಧ ತಂಡಗಳನ್ನಾಗಿ ವಿಂಗಡಿಸಿ ಕ್ರಿಕೆಟ್, ವಾಲಿಬಾಲ್, ತ್ರೋಬಾಲ್, ಮುಂತಾದ ಕ್ರೀಡಾ ಚಟುವಟಿಕೆಗಳನ್ನು ನಡೆಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲೀಕರು ಅವರ ಗುರುತಿನ ಚೀಟಿ, ಶಾಶ್ವತ ಹಾಗೂ ತಾತ್ಕಲಿಕ ವಾಸ ಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಈ ವಿವರಗಳನ್ನು ಸಂಬಂಧಿಸಿದ ಸರ್ಕಾರಿ ಕಛೇರಿಗಳಿಗೆ ತಪ್ಪದೇ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಕ್ರಮ ಬಾಂಗ್ಲಾದೇಶೀಯ ವಲಸೆ ಕಾರ್ಮಿಕರಿಗೆ ಹಾಗೂ ನಾಗರೀಕರಿಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳ ಮೂಲಕ ಜಿಲ್ಲೆಯ ಜನರನ್ನು ಜಾಗೃತಗೊಳಿಸುವ ಕುರಿತ ಸಭೆಯಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಅಕ್ರಮವಾಗಿ ಬಾಂಗ್ಲಾ ದೇಶದ ನಾಗರಿಕರು ಜೀವನೋಪಾಯಕ್ಕಾಗಿ ಕಾರ್ಮಿಕರು ಜಿಲ್ಲೆಯಲ್ಲಿ ವಿವಿಧ ಕೆಲಸ ಕಾರ್ಯಗಳಲ್ಲಿ ತೊಡಗಿರುವ ಬಗ್ಗೆ ದೂರುಗಳು ಕೇಳಿಬರುತ್ತಿದೆ. ಅಲ್ಲದೇ ಸ್ಥಳೀಯವಾಗಿ ಕೆಲವು ದಾಖಲೆಗಳನ್ನು ಸೃಷ್ಠಿಸಿಕೊಂಡು ಕಾನೂನು ಬಾಹಿರವಾಗಿ ವಾಸವಿದ್ದರೆ, ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಎಚ್ಚರ ವಹಿಸಲು ನಿರ್ದೇಶನ ನೀಡಿದೆ. ಕಾರ್ಮಿಕ, ಕೈಗಾರಿಕೆ, ಮೀನುಗಾರಿಕೆ ಸೇರಿದಂತೆ ಮತ್ತಿತರ ಇಲಾಖೆಗಳ ಅಧಿಕಾರಿಗಳು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಸಂಸ್ಥೆಗಳು ದೇಶದ ಭವಿಷ್ಯದ ಭದ್ರ ಬುನಾದಿಗೆ ಕಾರಣವಾಗಿವೆ. ಹೆಚ್ಚು ಹೆಚ್ಚು ಉತ್ತಮ ಶಿಕ್ಷಣ ಸಂಸ್ಥೆಗಳು ಸ್ಥಾಪನೆಗೊಂಡು ಶಿಕ್ಷಣ ಸರ್ವರಿಗೂ ಸಿಗುವಂತಾಗಬೇಕು.ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಪೋಷಕರು ಉತ್ತಮ ಶಿಕ್ಷಣ ನೀಡಿದರೆ ಅದುವೇ ಅಮೂಲ್ಯ ಆಸ್ತಿಯಾಗುತ್ತದೆ.ಇಂದಿನ ಯುವ ಪೀಳಿಗೆಗೆ ನಮ್ಮ ನಾಡಿನ ಶ್ರೀಮಂತ ಸಂಸ್ಕೃತಿಯನ್ನು ಪರಿಚಯಿಸುವುದು ಅತ್ಯಗತ್ಯ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಕೋಟೇಶ್ವರ ಯಡಾಡಿ- ಮತ್ಯಾಡಿ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹೆಗ್ಗದ್ದೆ ಸ್ಟುಡಿಯೋ ಯೂಟ್ಯೂಬ್ ಚಾನಲ್ ಮುಖ್ಯಸ್ಥ ಸಂದೀಪ್ ಶೆಟ್ಟಿ ಹೆಗ್ಗದ್ದೆ ಮಾತನಾಡಿ ” ಮಕ್ಕಳು ಎಳವೆಯಲ್ಲಿಯೇ ಕನಸು ಕಾಣಬೇಕು ಮತ್ತು ನನಸಾಗಿಸಲು ಪ್ರಯತ್ನಿಸಬೇಕು”ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಮಾತನಾಡಿ ಮಕ್ಕಳಿಗೆ ನಮ್ಮ ನಾಡಿನ ಆಚಾರ ವಿಚಾರಗಳನ್ನು ತಿಳಿಸುವುದು ಇಂತಹ…
