Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಎಸ್‌ಇಇಟಿ – ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಈ ಪರೀಕ್ಷೆಯಲ್ಲಿ ಸಾಧನೆ ಮೆರೆದ ಜನತಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ವಿಶ್ಮಿತಾ ಹಾಗೂ ಧೀರಜ್ ಶೇಟ್ ಸಾಧನೆ ಮೆರೆದು ಸಿಎಸ್‌ ಎಕ್ಸಿಕ್ಯೂಟಿವ್ ಪ್ರೋಗ್ರಾಮ್‌ಗೆ ಅರ್ಹತೆ ಪಡೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ (ಪಿ.ಎಂ. ಸ್ವ-ನಿಧಿ) ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ನಗರ ಪ್ರದೇಶದಲ್ಲಿ 2020ರ ಮಾರ್ಚ್ 24ರ ಪೂರ್ವದಲ್ಲಿ ಬೀದಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಸ್ಥರು ಮತ್ತು ಮನೆ ಮನೆಗೆ ದಿನಪತ್ರಿಕೆ ವಿತರಣೆ, ಹಾಲು ವಿತರಣೆ ವೃತ್ತಿಯಲ್ಲಿ ತೊಡಗಿಸಿಕೊಂಡವರು ತಮ್ಮ ವ್ಯಾಪಾರ /ಆರ್ಥಿಕ ಚಟುವಟಿಕೆಗಳ ಅಭಿವೃದ್ಧಿ ಹಾಗೂ ಪುನರ್ ಸ್ಥಾಪನೆಗಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಹಂತದಲ್ಲಿ ತಲಾ ರೂ.10,000 ರೂ.20,000 ಮತ್ತು ರೂ.50,000 ಸಾಲ ಸೌಲಭ್ಯವನ್ನು 7% ಬಡ್ಡಿ ದರದಲ್ಲಿ ಬ್ಯಾಂಕ್ ಮುಖೇನ ಪಡೆಯಲು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೈಂದೂರು ಪಟ್ಟಣ ಪಂಚಾಯತ್ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೊಗವೀರ ಭವನದಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ‘ಜನತಾ ನವನೀತ-2024’ ಸೋಮವಾರ ಅತ್ಯಂತ ವೈಭವದಿಂದ ಜರುಗಿತು. ಸಮಾರಂಭವನ್ನು ಉದ್ಘಾಟನೆಗೈದ ಶಿಕ್ಷಕರು ಮತ್ತು ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಾಜೇಂದ್ರ ಭಟ್ ಕೆ.ಅವರು ಮಾತನಾಡಿ ಜೀವನದಲ್ಲಿ, ಪರೀಕ್ಷೆಯಲ್ಲಿ, ಬದುಕಿನಲ್ಲಿ ಸೋತವರ ಕಥೆಗಳು ನಮ್ಮನ್ನು ಪ್ರೇರೇಪಿಸುತ್ತಾ ಹೋಗುತ್ತವೆ. ಸೋತವರ ಕಥೆಗಳು ನಮಗೆ ಆದರ್ಶಗಳಾಗುತ್ತವೆ. ಗೆದ್ದಾಗ ಮಾತ್ರ ಸಂಭ್ರಮಿಸುವುದಲ್ಲ. ಸೋತಾಗಲೂ ಸಂಭ್ರಮಿಸಬೇಕು. ಸಣ್ಣ ಸಣ್ಣ ಸೋಲುಗಳನ್ನು ಎದುರಿಸುವುದನ್ನು ಅತ್ಯದ್ಭುತವಾಗಿ ಕಲಿಯಬೇಕು. ಅಂಕಗಳ ಜೊತೆಗೆ ಒಳ್ಳೆಯ ಮೌಲ್ಯ, ಆದರ್ಶಗಳನ್ನು ಮೈಗೂಡಿಸಿಕೊಂಡರೆ ಉತ್ತಮ ಮನುಷ್ಯರಾಗಲು ಸಾಧ್ಯ. ಸ್ವಾಭಿಮಾನದ ಮೂಲಕ ಬದುಕುವುದು ಹೇಗೆ ಎನ್ನುವುದನ್ನು ಪೋಷಕರಿಂದ ಕಲಿತುಕೊಳ್ಳಲು ಸಾಧ್ಯವಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ನಮ್ಮ ಕಾಲೇಜು ಹೆಚ್ಚು ಅಂಕಗಳಿಸುವ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಎಸೆಸ್ಸೆಲ್ಸಿಯಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರಥಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 7ನೇ ಬಾರಿಗೆ ಮಂಡಿಸಿರುವ ಬಜೆಟ್ ಸರ್ವ ವ್ಯಾಪಿ, ಸರ್ವಸ್ಪರ್ಶಿಯಾಗಿದ್ದು, ದೇಶವು ವಿಶ್ವದಲ್ಲಿ ಆರ್ಥಿಕವಾಗಿ ಅತೀ ವೇಗವಾಗಿ ಬೆಳೆಯಲು ಪೂರಕವಾದ ಬಡ್ಜೆಟ್ ಆಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಹಣದುಬ್ಬರ ಪ್ರಮಾಣವು ಕಳೆದ ವರ್ಷ 5.8% ಇದ್ದು, 4.5 % ಇಳಿಯುವಲ್ಲಿ ಈ ಬಡ್ಜೆಟ್ ಸಹಕಾರಿಯಾಗಲಿದೆ. ಅಲ್ಲದೇ ಪ್ರಸ್ತುತ ಈಗಿರುವ 3 ಟ್ರಿಲಿಯನ್ ಆರ್ಥಿಕ ವ್ಯವಹಾರವು 5 ಟ್ರಿಲಿಯನ್ ಅಷ್ಟಾಗುವ ಎಲ್ಲಾ ನಿರೀಕ್ಷೆಯಿದ್ದು ಜಿಡಿಪಿ ಪ್ರಮಾಣವು ಶೇ. 6.5 ರಿಂದ 7 ಕ್ಕೆ ಏರಿಕೆಯಾಗುವುದಾಗಿ ಆರ್ಥಿಕ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2030ರವರೆಗೆ ಭಾರತದಲ್ಲಿ ಪ್ರತಿ ವರ್ಷ 78 ಲಕ್ಷ ಯುವಕ/ಯುವತಿಯರಿಗೆ ಉದ್ಯೋಗ ದೊರೆಯುವಲ್ಲಿ ಈ ಬಾರಿಯ ಬಡ್ಜೆಟ್ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಕೈಗಾರಿಕಾ ಉತ್ಪನ್ನ ವಲಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಈ ಬಾರಿ ಕೃಷಿ ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ನೀರಜ್ ಚೋಪ್ರಾ ಸ್ಪೋರ್ಟ್ಸ್ ಕ್ಲಬ್ ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಅಂತರಾಷ್ಟ್ರೀಯ ಚದುರಂಗ ದಿನಾಚರಣೆ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ದೀಕ್ಷಿತ್ ಮೇಸ್ತ ಶುಭಾಂಶನೆಗೈದರು. ಸ. ವಿ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್ ಮತ್ತು ಲಾವಣ್ಯ ಅಂತರಾಷ್ಟ್ರೀಯ ಚದುರಂಗ ದಿನಾಚರಣೆಯ ಉದ್ದೇಶ ಹಾಗೂ ಮಹತ್ವದ ಬಗ್ಗೆ ಮಾತನಾಡಿದರು. ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಹಾಗೂ ನೀರಜ್ ಚೋಪ್ರಾ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರಿಗೆ ಚೆಸ್ ಪಂದ್ಯಾಟ ನಡೆಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮೆಯನ್ನು ಸೋಮವಾರ ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು. ಪುಟಾಣಿಗಳು ಸಂತರು, ಗುರುಗಳ ಪೋಷಾಕು ಧರಿಸಿ, ಗುರುವಿನ ಮಹತ್ವ, ಗುರುಪೂರ್ಣಿಮೆಯ ಅರ್ಥವನ್ನು ಭಾಷಣ, ನೃತ್ಯ, ಹಾಡುಗಳು ಮೂಲಕ ಪ್ರಸ್ತುತ ಪಡಿಸಿದರು. ಶಾಲಾ ಆಡಳಿತಾದಿಕಾರಿ ಚೈತ್ರ ಯಡಿಯಾಳ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ ಶಿಕ್ಷಕರು ತಮ್ಮ ವೃತ್ತಿ ಜೀವನಕ್ಕೆ ನ್ಯಾಯ ಒದಗಿಸಲು ಅನೇಕ ತ್ಯಾಗ ಮಾಡಿರುತ್ತಾರೆ ಅವರಿಗೆ ಗೌರವ, ಪ್ರೀತಿ, ತೋರುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು ಮತ್ತು ಪುರಾಣ ಪ್ರಸಿದ್ಧ ಗುರು ಶಿಷ್ಯರ ಕಥೆ ಹೇಳುವ ಮೂಲಕ ಗುರುವಿನ ಮಹಿಮೆ ತಿಳಿಸಿದರು. ವಿದ್ಯಾರ್ಥಿಗಳು ಶಿಕ್ಷಕರಿಗೆ ಆರತಿ ಬೆಳಗಿ, ಪುಷ್ಪಾರ್ಚನೆ ಮಾಡಿ ಆಶೀರ್ವಾದ ಪಡೆಯುವ ಮೂಲಕ ಆಚರಣೆಗೆ ಮತ್ತಷ್ಟು ಮೆರಗು ನೀಡಿದರು. ಮುಖ್ಯ ಅತಿಥಿಗಳಾಗಿ ಟ್ರಸ್ಟ್‌ನ ಅದ್ಯಕ್ಷರಾದ ಬಲಾಡಿ ಸಂತೋಷ ಕುಮಾರ ಶೆಟ್ಟಿ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು. ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆ ಅಂಪಾರು ಈ ಸಂಸ್ಥೆಯು ಕಳೆದ ಒಂದು ವರ್ಷದಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 97ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ತಿಮ್ಮಪ್ಪ ಹೆಗಡೆ, ಡಾ. ಕಾಶೀನಾಥ್ ಪೈ ಗಂಗೊಳ್ಳಿ,  ಗಿರೀಶ್ ನಾಗೇಶ್ ಪ್ರಭು, ಪ್ರಕಾಶ್ ಪ್ರಭು, ಉದಯ ಭಂಢಾರ್‌ಕಾರ್, ವೆಂಕಟರಮಣ ಬಿಡುವಾಳ್ ಮತ್ತು ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ಶ್ರೀ ವೀರ ವೆಂಕಟೇಶ ಭಜನಾ ಮಂಡಳಿ, ರಥಬೀದಿ, ಮಂಗಳೂರು ಇದರ ಹಿರಿಯ ಕಲಾವಿದ ತಿಮ್ಮಪ್ಪ ಹೆಗಡೆ ಅವರನ್ನು ತಂಡದ ಪರವಾಗಿ ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಶ್ರೀ ವೀರ ವೆಂಕಟೇಶ ಭಜನಾ ಮಂಡಳಿ, ರಥಬೀದಿ, ಮಂಗಳೂರು ಇದರ ಸದಸ್ಯರು ನಡೆಸಿಕೊಟ್ಟ ಭಜನಾ ಕಾರ್ಯಕ್ರಮ  ನೆರೆದ ಎಲ್ಲಾ ಪ್ರೇಕ್ಷಕರನ್ನು ಮಂತ್ರ ಮುಗ್ಧಗೊಳಿಸಿತು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ಅವರು ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯಕ್ಷಗಾನ ಹವ್ಯಾಸಿ ಕಲಾತಂಡದ ಮೂಲಕ ಹೊಸ ಕಲಾವಿದರ ಸೃಷ್ಠಿ ಸಾಧ್ಯ, ಯಕ್ಷಗಾನ ನಮಗೆ ಜ್ಞಾನ ವೃದ್ಧಿ ಜೊತೆಗೆ ಬದುಕಿಗೆ ಬೆಳಕು ಚೆಲ್ಲುವ ನೀತಿಗಳನ್ನು ಸಾರುತ್ತದೆ. ಮಕ್ಕಳಲ್ಲಿ ಯಕ್ಷಗಾನದ ಅಭಿರುಚಿ ಮೂಡಿಸುವ ಕೆಲಸವಾಗಬೇಕಿದೆ ಎಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ. ಕುಂದರ್ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆದ ಡಾ. ಶಿವರಾಮ ಕಾರಂತ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಯಕ್ಷಸುಮನಸ ಹವ್ಯಾಸಿ ಕಲಾರಂಗ ರಿ. ಕೋಟ ಇವರ ಸಹಯೋಗದಲ್ಲಿ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಯಕ್ಷಗಾನ ಪ್ರಸಾಧನ ಪ್ರಮುಖರು ದಿ. ಬಾಲಕೃಷ್ಣ ನಾಯಕ್ ಹಂದಾಡಿ, ಯಕ್ಷಗಾನ ಭಾಗವತರು ದಿ. ಸುಬ್ರಹ್ಮಣ್ಯ ಧಾರೇಶ್ವರ್, ವೈದ್ಯರು ಹಾಗೂ ಗಾಯಕ ದಿ. ಡಾ. ಸತೀಶ್ ಪೂಜಾರಿ ಅವರಿಗೆ ಸುಮನಸ ನಮನ ಸಲ್ಲಿಸಲಾಯಿತು. ವೇದಿಕೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಇಲ್ಲಿನ ಅರಮನೆ ಮೈದಾನದಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನದ ವತಿಯಿಂದ ಅ.17-18ರಂದು ನಡೆಯಲಿರುವ ಕುಂದಾಪ್ರ ಕನ್ನಡ ಹಬ್ಬದ ಪೂರ್ವಭಾವಿ ಸಭೆ ಕರಾವಳಿ ಸಿರಿ ಕ್ಲಬ್ ಬೆಂಗಳೂರು ನೇತೃತ್ವದಲ್ಲಿ ಶೇಫ್ಟಾಕ್ ಸಂಸ್ಥೆಯ ನಾರಾಯಣಗುರು ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮ ದಿಬ್ಬಣ ತಯಾರಿ ಬಗ್ಗೆ ಚರ್ಚಿಸಿ ಸಲಹೆಗಳನ್ನು ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಇತ್ತಿಚಿಗೆ ನಿಧನರಾದ ಕರಾವಳಿಯ ಡಾ|ಸತೀಶ್ ಪೂಜಾರಿ, ಅಶ್ವಿನಿ ಶೆಟ್ಟಿ ಹಾಗೂ ರಮಾನಂದ ಶೆಟ್ಟಿ ಅವರಿಗೆ ನಮನ ಸಲ್ಲಿಸಲಾಯಿತು. ಡಾಕ್ಟರೆಟ್ ಪಡೆದ ದೀಪಕ್ ಶೆಟ್ಟಿ ಬಾರ್ಕೂರು ಅವರನ್ನ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಶೇಫ್ಟಾಕ್ ಎಂಡಿ ಗೋವಿಂದ್ ಬಾಬು ಪೂಜಾರಿ, ಅಜಿತ್ ಶೆಟ್ಟಿ, ನರಸಿಂಹ ಬೀಜಾಡಿ ಮೊದಲಾದವರು ಇದ್ದರು. ಕರಾವಳಿ ಸಿರಿ ಕ್ಲಬ್ನ ಚೇತನ್, ಸುಮಂತ್, ರಕ್ಷಿತ್ ಶೆಟ್ಟಿ, ಆರ್ಯ ಕೃಷ್ಣ, ವಸಂತ್ ಸಂಗಮ್, ಗುರುರಾಜ್ ಸಂಗಮ್, ರಾಜೇಶ್ ಹಳಗೇರಿ, ರಂಜಿತ್ ಗಾಣಿಗ, ನಿತಿನ್ ಬಿಲ್ಲವ, ರಾಜೇಶ್ ಚೊಮ್ಮಿ, ಅಜಿತ್ ಹಾಗೂ ಕರಾವಳಿ ಸಿರಿಯ ತಂಡದ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಂಡಾರ್‌ಕರ್ಸ್ ಕಾಲೇಜು ರೇಡಿಯೋ ಕುಂದಾಪ್ರ ೮೯.೬ ಎಫ್. ಎಂ. ಹಾಗೂ ’ಕುಂದಪ್ರಭ’ಸಂಸ್ಥೆ ಆಶ್ರಯದಲ್ಲಿ ರೇಡಿಯೋ ಕುಂದಾಪ್ರ ಸಮುದಾಯ ಬಾನುಲಿ ಕೇಂದ್ರದಲ್ಲಿ ಏರ್ಪಡಿಸಿದ ಕುಂದಾಪ್ರ ಕನ್ನಡ ಹಾಡುಗಾರಿಕೆ – ಕವನ ವಾಚನ ಸ್ಪರ್ಧೆಯಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಸಂಭ್ರಮ ಪಟ್ಟರು. ಹೆಣೆ ನೀ ಮಿಡ್ಕುದ್ಯಾಕೆ? ಅಲ್ ಹಾಂಗಾಯ್ತಂಬ್ರ, ಮಳಿಗಾಲ ಬಂತ್ಕಾಣಿ, ನಮ್ ಭಾಷಿ ನಮ್ಗ್ ಬೇಕ್, ಕೇಳ್ಕಣಿ, ತಿಳ್ಕಣಿ, ದಮ್ಮಯ್ಯ ಹೊಡಿಬ್ಯಾಡ, ಹುಟ್ದಾರ್ಬಿ ಕಂಡದ್ದೆ ಗೋಳ್, ಹೊಯ್ ಏಗಳಿಕ್ ಬಂದದ್ದ್?, ಹೇಳುಕೆ ನಮ್ಗೆ ನಾಚ್ಕಿ ಆತ್ತಲೆ?, ಚಂದ್ ಗೋಂಪಿ ಊರ್ ಕುಂದಾಪ್ರ, ನೀ ಎಂತಾ ಚಂದು, ಹೊಸ್ತಿನ್ ಅಡ್ಗಿ ಉಂಬೂಕ್ ಚಂದ, ಊರೆಲ್ಲಾ ಅಡಿ ಮೇಲಾಯ್ತಂಬ್ರ, ಸ್ವರಚಿತ ಕವನಗಳು, ಹಾಡುಗಾರಿಕೆ, ವಾಚನ, ಮೆಚ್ಚುಗೆ ಪಡೆದವು. ಹಲವು ವಿದ್ಯಾರ್ಥಿಗಳು ರವಿ ಬಸ್ರೂರು ಅವರ ರಚನೆಯ ಹಾಡುಗಳನ್ನು ಹಾಡಿದರು. ಇನ್ನು ಕೆಲವರು ಡಾ| ಸತೀಶ ಪೂಜಾರಿ ಅವರ “ಎಂತಾ ಚಂದ ನಮ್ಮ್ ಭಾಷಿ” ಹಾಡುಗಳಿಂದ ಅವರನ್ನು ಸ್ಮರಿಸಿದರು.…

Read More