Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬದುಕಿನಲ್ಲಿ ಸಮಯದ ಅರಿವಿರಬೇಕಾದ್ದು ಅತ್ಯಗತ್ಯ. ವಿಳಂಬ ಪೃವತಿ ರೂಢಿಸಿಕೊಳ್ಳದೆ ಸಮಪಾಲನೆಯಿಂದ ಕಾರ್ಯಪ್ರವರ್ತರಾದರೆ ಯಶಸ್ಸು ಸಾಧ್ಯ ಎಂದು ದಿ ಹಿಂದೂ ಗ್ರೂಪ್ ಮಾರಾಟ ಮತ್ತು ವಿತರಣಾ ಉಪಾಧ್ಯಕ್ಷ ಶ್ರೀಧರ ಅರನಾಳ ಹೇಳಿದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದವತಿಯಿಂದ ಮಂಗಳವಾರ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ವಿಶೇಷ ಅತಿಥಿ ಉಪನ್ಯಾಸದಲ್ಲಿ ’ಒತ್ತಡ ಹಾಗೂ ಭಾವನೆಗಳ ನಿರ್ವಹಣೆಯ ತಂತ್ರಗಳು’ ವಿಷಯದ ಕುರಿತು ಮಾತನಾಡಿದರು. ಮಾತಾಡುವುದೂ ಒಂದು ಕಲೆ. ಆಡಬೇಕಾದ ಮಾತನ್ನು ಧ್ಯಾನವಿಟ್ಟು, ಸಂದರ್ಭವರಿತು, ಪರಿಣಾಮವನ್ನೂ ಮುಂದಾಲೋಚಿಸಿ, ಹದದಲ್ಲಿ ಮಾತನಾಡಬೇಕಾದದದ್ದು ಮುಖ್ಯ. ಸಮಯಕ್ಕೆ ಸರಿಯಾಗಿ ಕೆಲಸ ಪೂರ್ಣಗೊಳಿಸಲು ಉತ್ತಮ ಒತ್ತಡ ಮನು?ನಿಗೆ ಅನಿವಾರ್ಯವಿದೆ. ಆದರೆ ಒತ್ತಡ ಹೆಚ್ಚಾದಲ್ಲಿ ಆರೋಗ್ಯದ ಮೇಲೆ ನಕಾರಾತ್ಮಕವಾಗಿ ಪರಿಣಾಮ ಬೀರುತ್ತದೆ ಎಂದರು. ಹಾಗೆಯೇ ವ್ಯಕ್ತಿಯೂ ಸಂತೋ?ದಿಂದ ಕಾರ್ಯಮಗ್ನಾನಾಗಬೇಕೇ ಹೊರತು ಒತ್ತಡದಿಂದಲ್ಲ. ಮನು? ದೊರೆಯದ ವಸ್ತುಗಳ ಕುರಿತು ಚಿಂತಿಸುವ ಬದಲು ಅದನ್ನು ಹೇಗೆ ಮುಂದಿನ ದಿನದಲ್ಲಿ ಧಕ್ಕಿಸಿಕೊಳ್ಳಬಹುದು ಎಂಬುದರ ಕುರಿತು ಕಾರ‍್ಯಪ್ರವೃತ್ತರಾಗಬೇಕು ಎಂದರು. ನಂತರ ಪತ್ರಿಕಾರಂಗದ ಕುರಿತು ವಿದ್ಯಾರ್ಥಿಗಳೊಂದಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೇ.10ರಂದು ನಡೆಯುವ ಚುನಾವಣೆಯಲ್ಲಿ ಜನರೇ ದೇವರೆಂದು ಭಾವಿಸಿ, ಆಶೀರ್ವಾದವನ್ನು ಬೇಡುತ್ತಿದ್ದೇನೆ. ಬಂದೂರಿನ ಜನ ನನಗೆ ಪೂರ್ಣ ಪ್ರಮಾಣದಲ್ಲಿ ಆಶೀರ್ವಾದ ಮಾಡುವ ವಿಶ್ವಾಸವಿದೆ ಎಂದು ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ನೇರಳಕಟ್ಟೆ ಸಮೀಪದ ಜಾಡ್ಕಟ್ಟುವಿನಲ್ಲಿ ನಡೆದ ಬಿಜೆಪಿ ಕಾರ‍್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಟಿಕೆಟ್ ಘೋಷಣೆಯಾದ 5 ನಿಮಿಷದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕರೆ ಮಾಡಿ, ಹೆಮ್ಮೆಯ ಬಿಜೆಪಿ ಪಕ್ಷದ ಅಭ್ಯರ್ಥಿ ನೀವು. ನಾವು ನಿಮ್ಮೊಂದಿಗೆ ನಿಂತು, ಗೆಲ್ಲಿಸಿ ಕೊಡುತ್ತೇವೆ. ಊರು ಒಳ್ಳೆಯದು ಮಾಡುವ ಅಂದಿದ್ದರು. ನನ್ನಂತೆ ಅವರು ಸಹ ಸಾಮಾನ್ಯ ಮನೆಯಿಂದ ಬಂದವರು ಎಂದು ಗಂಟಿಹೊಳೆ ಹೇಳಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಪಕ್ಷದ ಜನಸಾಮಾನ್ಯರ ಮುಂದೆ ಓಡಾಟ ಮಾಡಿದವರು. ಸಂಘಟನೆ, ಪಕ್ಷದ ಪರಿಪೂರ್ಣ ಕಲ್ಪನೆ ಇರುವವರು. ಸಾಮಾನ್ಯ ಜನರೊಂದಿಗೆ ಬೆರೆಯುವ ಗುರುರಾಜ್ ಗಂಟಿಹೊಳೆ ಅವರು ವಿಧಾನಸೌಧಕ್ಕೆ ಹೋದರೆ, ಪರಿಣಾಮಕಾರಿ ಕೆಲಸಗಳಾಗುತ್ತವೆ. ಎಲ್ಲ ವರ್ಗದ ಜನರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶಮಿತಾ, ದ್ವಿತೀಯ ಪಿಯು ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರ ಜೊತೆಗೆ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ಶಮಿತಾ ಕನ್ನಡದಲ್ಲಿ 98, ಇಂಗ್ಲಿಷ್ 90, ಎಕನಾಮಿಕ್ಸ್ 96, ಬುಸಿನೆಸ್ ಸ್ಟಡೀಸ್ 92, ಅಕೌಂಟೆನ್ಸಿ 98, ಕಂಪ್ಯೂಟರ್ ಸೈನ್ಸ್ 100 ಅಂಕದೊಂದಿಗೆ ಒಟ್ಟು 574 ಅಂಕ ಪಡೆದಿದ್ದಾಳೆ. ಈಕೆ ಯಡ್ತರೆ ನಿವಾಸಿ ಶಿವರಾಮ ಮತ್ತು ಸುಶೀಲಾ ದಂಪತಿಗಳ ಪುತ್ರಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಡವರು, ದುರ್ಬಲರ ಏಳಿಗೆಗಾಗಿ ಭಾರತೀಯ ಜನತಾ ಪಕ್ಷ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಫಲವಾಗಿ ರಾಜ್ಯದಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರಲಿದ್ದೇವೆ. ಕರಾವಳಿಯಲ್ಲಿ 19 ಸೀಟುಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಸಚಿವ ಕೊಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಬೈಂದೂರು ಕ್ಷೇತ್ರದ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಜನರ ನಡುವೆಯೇ ಸಾಮಾನ್ಯರಂತೆ ಬದುಕಿದವರು. ಅವರ ಬಗ್ಗೆ ಕ್ಷೇತ್ರದ ಜನರು ಪ್ರೀತಿ ತೋರುತ್ತಿದ್ದಾರೆ. ವಿಧಾನಸೌಧದಲ್ಲಿ ಇಂತಹ ವ್ಯಕ್ತಿಗಳು ಇದ್ದರೆ ಸೊಬಗು. ಈ ಭಾರಿ ಗುರುರಾಜ ಗಂಟಿಹೊಳೆ ಅವರ ಗೆಲುವು ನಿಶ್ಚಿತ ಎಂದರು. ಹಾಲಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಪ್ರಚಾರದಲ್ಲಿ ಸಕ್ರಿಯವಾಗಿಲ್ಲದಿರುವ ಬಗ್ಗೆ ಪ್ರತಿಕ್ರಿಯಿಸಿ ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಹಾಗೂ ಕುಂದಾಪು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಜೆಪಿಯ ಅಭ್ಯರ್ಥಿಯನ್ನು ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಅದರಂತೆ ಬೈಂದೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲ ಇದರ 36ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಇವುಗಳ 30ನೇ ವಾರ್ಷಿಕೋತ್ಸವವನ್ನು ಇತ್ತೀಚೆಗೆ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನಿವೃತ್ತ ಪ್ರಾದೇಶಿಕ ಸಾರಿಗೆ ಅಧಿಕಾರಿ ಚಂದ್ರ ಹಂದಾಡಿ ಮಾತನಾಡಿ ಅಂಬೇಡ್ಕರ್ ಅವರ ಆಶಯದಂತೆ ಶಿಕ್ಷಣದ ಮೂಲಕ ಅಭಿವೃದ್ಧಿಯನ್ನು ಹೊಂದುವಂತಾಗಬೇಕು. ಅಂತಹ ಶಿಕ್ಷಣವನ್ನು ಪಡೆಯುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿರಬೇಕು ಎಂದು ಹೇಳಿದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು ಶುಭ ಹಾರೈಸಿದರು. ಪರಿಯಾಳ ಸಮಾಜ ಸುಧಾರಕರ ಸಂಘ ಕುಂದಾಪುರದ ಅಧ್ಯಕ್ಷರಾದ ಮಂಜುನಾಥ ಸಾಲಿಯನ್ ಬಹುಮಾನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ 2021- 22 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯ ರಾಂಕ್ ಪಡೆದ ವಿದ್ಯಾರ್ಥಿನಿ ನೇಹಾ ಎಸ್ ಕೊಡೇರಿ, ಯುವ ಬರಹಗಾರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯ ಸಾಧಿಸಲು ಸಂಘಟಿತರಾಗಿ ಕೆಲಸ ಮಾಡಬೇಕು. ಸಾಮಾನ್ಯ ಕಾರ್ಯಕರ್ತನು ಶಾಸಕನಾಗಿ ಆಯ್ಕೆ ಮಾಡುವ ಜವಾಬ್ದಾರಿ ನಿಮ್ಮೆಲ್ಲರದ್ದೂ ಆಗಿದೆ ಮಹಾರಾಷ್ಟ್ರ ರಾಜ್ಯದ ವಿಧಾನಪರಿಷತ್ ಸದಸ್ಯ ಪ್ರವೀಣ್ ದಾರೇಕರ್ ಹೇಳಿದರು. ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರದಲ್ಲಿ ಮೋದಿ ಸರಕಾರ ಆಡಳಿತಕ್ಕೆ ಬಂದ ಬಳಿಕ ವಿಶ್ವದಲ್ಲೇ ಅಗ್ರಸ್ಥಾನದಲ್ಲಿ ಭಾರತ ಗುರುತಿಸಿಕೊಳ್ಳುವಂತಾಗಿದೆ. ದೇಶದಲ್ಲಿ ಜನಸಾಮಾನ್ಯರು ಸೇರಿದಂತೆ ನಾಗರೀಕರಿಗೆ ಯೋಗ್ಯವಾದ ನೂರಾರು ಯೋಜನೆಗಳು ಜಾರಿಗೆ ತಂದಿದೆ. ಅಭಿವೃದ್ದಿಯಲ್ಲಿ ಬಿಜೆಪಿ ಇತಿಹಾಸ ನಿರ್ಮಿಸಿದೆ ಎಂದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಬೈಂದೂರು ಬಿಜೆಪಿ ಮಂಡಲದ ಉಪಾಧ್ಯಕ್ಷ ಗಣೇಶ ಗಾಣಿಗ ಹಾಜರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವ, ರಥಾರೋಹಣ ಮಂಗಳವಾರ ಬೆಳಿಗ್ಗೆ ಜರುಗಿತು. ಚಾರಿತ್ರಿಕ ಹಿನ್ನೆಲೆಯುಳ್ಳ ರಥೋತ್ಸವದಲ್ಲಿ ಊರ ಪರವೂರ ಭಕ್ತಸಮೂಹ ಪಾಲ್ಗೊಂಡು ಪುನೀತರಾದರು. ಕಲಾವೈಭವಗಳಿಂದ ಕಂಗೊಳಿಸುವ ದೇವಾಲಯ ಈ ಭಾರಿ ಮತ್ತಷ್ಟು ಅಲಂಕೃತಗೊಂಡಿದ್ದು, ವಾರ್ಷಿಕ ರಥೋತ್ಸವ ಇನ್ನಷ್ಟು ಮೆರಗನ್ನು ನೀಡಿತು. ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಇಡಿ ನಗರವೇ ಸಜ್ಜಾಗಿದೆ. ಬೆಳಿಗ್ಗೆ ರಥೋತ್ಸವಕ್ಕೆ ಚಾಲನೆ ನೀಡಿದ್ದು, ಸಂಜೆಯ ವೇಳೆಗೆ ರಥವನ್ನು ರಥಬೀದಿಯಲ್ಲಿ ಏಳೆಯಲಾಗುತ್ತದೆ. ರಥಕ್ಕೆ ಗರ್ನಪಟ್ಟೆ ಕಟ್ಟಿದ ಹನ್ನೊಂದು ದಿನಗಳಿಗೆ ರಥೋತ್ಸವ ನಡೆಯುವುದೆಂಬ ಸೂಚನೆ ದೊರೆಯುತ್ತದೆ. ಒಟ್ಟು ಏಳು ದಿನಗಳ ಕಾಲ ನಡೆಯುವ ಉತ್ಸವವು ಧಾರ್ಮಿಕ ಕಾರ್ಯಗಳಿಂದ ಆರಂಭಗೊಳ್ಳುತ್ತದೆ. ಈ ಮಧ್ಯೆ ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ ನಡೆದ ಬಳಿಕ ರಥೋತ್ಸವ, ಅವಭೃಥೋತ್ಸವ ಕೊನೆಯಲ್ಲಿ ನಗರೋತ್ಸವ ನಡೆಯುತ್ತದೆ. ನಗರೋತ್ಸವದಲ್ಲಿ ಜಾತಿ ಮತ ಭೇದವಿಲ್ಲದೇ ಎಲ್ಲಾ ಧರ್ಮಿಯರೂ ಪಾಲ್ಗೊಂಡು ಸಂಭ್ರಮಿಸುತ್ತಾರೆ. ರಥೋತ್ಸವದ ಸಮಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಬ್ಬಲ್ ಇಂಜಿನ್ ಸರಕಾರದ ಸಾಧನೆಯನ್ನು ಜನರು ಗಮನಿಸುತ್ತಿದ್ದಾರೆ. ಉಭಯ ಸರಕಾರಗಳ ಅಭಿವೃದ್ಧಿ ಕಾರ್ಯಗಳು, ರಾಷ್ಟ್ರೀಯತೆಯೆಡೆಗಿನ ಬದ್ಧತೆ, ಕುಂದಾಪುರ ಕ್ಷೇತ್ರದಲ್ಲಾದ ಅಭಿವೃದ್ಧಿ ಹಾಗೂ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಪ್ರಭಾವ ಕಿರಣ್ ಕೊಡ್ಗಿ ಅವರನ್ನು ದಾಖಲೆಯ ಅಂತರದಲ್ಲಿ ಗೆಲ್ಲಿಸಲಿದೆ ಎಂದು ದೆಹಲಿ ಸರ್ಕಾರದ ವಿಪಕ್ಷದ ನಾಯಕ, ಉಡುಪಿ ಜಿಲ್ಲಾ ಬಿಜೆಪಿ ಉಸ್ತುವಾರಿ ವಿಜೇಂದರ್ ಗುಪ್ತ ಹೇಳಿದರು. ಅವರು ಮಂಗಳವಾರ ಕುಂದಾಪುರ ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಪೂರ್ಣ ಬಹುಮತದ ಸರಕಾರ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಯಾವ ತಂತ್ರಗಾರಿಕೆಯೂ ಈ ಚುನಾವಣೆಯಲ್ಲಿ ಫಲ ಕೊಡುವುದಿಲ್ಲ. ಮತ್ತೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮೂಲಕ ಡಬ್ಬಲ್ ಇಂಜಿನ್ ಸರ್ಕಾರ ಮುಂದುವರಿಯಲಿದೆ ಎಂದರು. ಕೇಂದ್ರ ಸರ್ಕಾರದ ದಿಟ್ಟ ನಿಲುವಿನಿಂದ ದೇಶ, ಕರ್ನಾಟಕದಲ್ಲಿ ಜನ ನಿರ್ಭೀತಿಯಿಂದಿದ್ದಾರೆ. ಶಾಂತಿ ಸುವ್ಯವಸ್ಥತೆಗೆ ಸರ್ಕಾರ ಆಧ್ಯತೆ ನೀಡಿದೆ. ಇವತ್ತು ಬಾಂಬ್ ಸ್ಪೋಟದ ಪ್ರಕರಣಗಳು ಇಲ್ಲ, ವಿದ್ವಾಂಸಕಾರಿ ಚಟುವಟಿಕೆಗಳನ್ನು ನಿಯಂತ್ರಿಸಲಾಗಿದೆ.. ಭದ್ರತೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಾಯಿ ಸ್ಪಂದನಾ ಫೌಂಡೇಶನ್, ಕುಂದಾಪುರ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತದಾನಿಗಳ ಬಳಗ ಕುಂದಾಪುರ, ಜಬ್ ಜಬ್ ಫ್ರೆಂಡ್ಸ್ ಕುಂದಾಪುರ, ಖಾರ್ವಿ ಆನ್ಲೈನ್. ಕಾಂ , ಫ್ರೆಂಡ್ಸ್ ಸರ್ಕಲ್ ಫ್ರೇಂಡ್ಸ್ ಕುಂದಾಪುರ ಹಾಗೂ ರಕ್ತನಿಧಿ ವಿಭಾಗ ಕೆ.ಎಂ.ಸಿ, ಮಣಿಪಾಲ ಇವರ ಸಹಕಾರದಲ್ಲಿ ಕುಂದಾಪುರ ಕಲಾಮಂದಿರದಲ್ಲಿ ‘ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ಶ್ರೀ ಸಾಯಿ ಸ್ಪಂದನಾ ಫೌಂಡೇಶನ್ ಕುಂದಾಪುರ ಸಂಸ್ಥೆಯ ಉದ್ಘಾಟನೆ ಮತ್ತು ಲೋಗೋ ಬಿಡುಗಡೆ ಕಾರ್ಯಕ್ರಮ ಜರುಗಿತು. ವೈದ್ಯ ಡಾ. ಆದರ್ಶ ಹೆಬ್ಬಾರ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಕುಂದಾಪುರದಲ್ಲಿ ದಿನನಿತ್ಯ 15 ರಿಂದ 20 ಯೂನಿಟ್ ರಕ್ತದ ಅವಶ್ಯಕತೆ ಇದ್ದು, ಹೆರಿಗೆ ಹಾಗೂ ಅಪಘಾತದ ತುರ್ತು ಸಂದರ್ಭದಲ್ಲಿ ಸಕಾಲದಲ್ಲಿ ರಕ್ತದ ಪೂರೈಕೆ ಆಗದಿದ್ದ ರೋಗಿಯ ಜೀವಕ್ಕೆ ಅಪಾಯ. ಇಂತಹ ಸಂದರ್ಭದಲ್ಲಿ ತುರ್ತು ರಕ್ತದಾನಿಗಳ ಅವಶ್ಯಕತೆ ಇದ್ದು ಇದರ ಪೂರೈಕೆಗಾಗಿ ಶ್ರೀಸಾಯಿ ಸ್ಪಂದನಾ ಸಂಸ್ಥೆ ಮುಂದಿನ ದಿನಗಳಲ್ಲಿ ಶ್ರಮಿಸಲಿದ್ದು ರೋಗಿಗಳ ಪಾಲಿಗೆ ಆಶದಾಯಕವಾಗಿದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2023ರ ಶೈಕ್ಷಣಿಕ ವರ್ಷದ ‘ಯುವಿಕಾ’ ಕಾರ್ಯಕ್ರಮಕ್ಕೆ ಉಡುಪಿ ಕೇಂದ್ರೀಯ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿ ಶೌರ್ಯ ಎಸ್. ಕಾಡಿಂತಾರ್ ಅವರನ್ನು ಇಸ್ರೋ ಸಂಸ್ಥೆ ಯುವ ವಿಜ್ಞಾನಿಯಾಗಿ ಆಯ್ಕೆ ಮಾಡಿದೆ. ದೇಶದಾದ್ಯಂತ ಇಸ್ರೋ ಪ್ರಸಕ್ತ ವರ್ಷ ಆಯ್ಕೆ ಮಾಡಿದ 350 ವಿದ್ಯಾರ್ಥಿಗಳಲ್ಲಿ ಶೌರ್ಯ. ಎಸ್. ಕಾಡಿಂತಾರ್ ಓರ್ವರಾಗಿದ್ದಾರೆ. ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯು ಶಾಲಾ ವಿದ್ಯಾರ್ಥಿಗಳಿಗಾಗಿ ಯುವಿಕಾ (ಯುವ ವಿಜ್ಞಾನಿ ಕಾಠ್ಯಕ್ರಮ ) ಎಂಬ ವಿಶೇಷ ಕಾಠ್ಯಕ್ರಮವನ್ನು ಆಯೋಜನೆ ಮಾಡುತ್ತಿದೆ. ಇದು ಯುವ ವಿದ್ಯಾರ್ಥಿಗಳಿಗೆ ಬಾಹ್ಯಕಾಶ ವಿಜ್ಞಾನ, ತಂತ್ರಜ್ಞಾನ ಹಾಗೂ ಬಾಹ್ಯಕಾಶ ಅಪ್ಲಿಕೇಶನ್ಗಳ ಕುರಿತು ಮೂಲಭೂತ ಜ್ಞಾನವನ್ನು ನೀಡುತ್ತದೆ. ಈ ಕಾಠ್ಯಕ್ರಮವನ್ನು ಕ್ಯಾಚ್ ದೆಮ್ ಯಂಗ್ ಎಂಬ ಶೀರ್ಷಿಕೆ ಅಡಿಯಲ್ಲಿ ಇಸ್ರೋ ರೂಪಿಸಿದ್ದು 2023 ರ ಮೇ 15ರಿಂದ ಮೇ 26 ರವರೆಗೆ ನಡೆಯಲಿದೆ. ಶೌರ್ಯ ಪ್ರಸ್ತುತ ಬ್ರಹ್ಮಾವರ ತಾಲೂಕಿನ ಯಡ್ತಾಡಿ ನಿವಾಸಿ, ಉಡುಪಿ ಸಶಸ್ತ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ್ ಪೂಜಾರಿ ಹಾಗೂ ಬ್ರಹ್ಮಾವರ…

Read More