ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳೆದ ಚುನಾವಣೆಯಲ್ಲಿ ಬಿಜೆಪಿಯವರು ಅಪಪ್ರಚಾರ ಮೂಲಕ ಧರ್ಮ ರಾಜಕಾರಣ ಮಾಡಿ ಕಾಂಗ್ರೆಸ್ಸನ್ನು ಸೋಲಿಸಿರಬಹುದು. ಆದರೆ ಈ ಬಾರಿ ಯಾವುದೇ ಆಟಗಳು ಬೈಂದೂರಿನಲ್ಲಿ ನಡೆಯುವುದಿಲ್ಲ. ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು. ಬೈಂದೂರು ಬಸ್ಸ್ಟ್ಯಾಂಡ್ ಮೈದಾನದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದರು. ರಾಜ್ಯ ಸರ್ಕಾರದ ದುರಾಡಳಿತದಿಂದ ಜನಸಾಮಾನ್ಯರು ಬದಲಾವಣೆ ಬಯಸಿದ್ದು, ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೋಪಾಲ ಪೂಜಾರಿ ಜಯಗಳಿಸಲಿದ್ದಾರೆ ಎಂದರು. ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಮಾತನಾಡಿ, ಕಳೆದ ಚುನಾವಣೆಯಲ್ಲಿ ಧರ್ಮಾಧಾರಿತ ವಿಷಯಗಳನ್ನು ಮುಂದಿಟ್ಟುಕೊಂಡು ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಜನರಿಗೆ ಅನ್ಯಾಯ ಮಾಡಿದ್ದೀರಿ. ಜನರನ್ನು ಭಾವನಾತ್ಮಕ ವ್ಯೂಹದೊಳಗೆ ಸಿಲುಕಿಸಿ ಮತಗಳಿಸಿದ್ದೀರಿ. ಆದರೆ ಪ್ರತೀ ಬಾರಿಯೂ ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ. ಹಿಂದುತ್ವ ಹಾಗೂ ಕೇಸರಿಶಾಲು ಕೇವಲ ಬಿಜೆಪಿಯವರು ಮಾತ್ರ ಗುತ್ತಿಗೆ ಪಡೆದಿದ್ದಲ್ಲ. ಇದನ್ನು ಸಾಬೀತು ಮಾಡಲು ನಮ್ಮ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಎ.18: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ವರ್ಧಿಸಲಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಇಂದು ಬೈಂದೂರಿನ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ್ ಅವರು ನಾಮಪತ್ರ ಸ್ವೀಕರಿಸಿದರು. ನಾಮಪತ್ರ ಸಲ್ಲಿಸಿ ಮಾತನಾಡಿದ ಕೆ. ಗೋಪಾಲ ಪೂಜಾರಿ ಅವರು ನನ್ನ ನಾಲ್ಕು ಭಾರಿಯ ಶಾಸಕತ್ವದ ಅವಧಿಯ್ಲಲಿ ಬೈಂದೂರು ವಿಧಾನಸಭಾ ಕ್ಷೇತ್ರದಾದ್ಯಂತ ನಡೆಸಿರುವ ಅಭಿವೃದ್ಧಿ ಕಾಮಗಾರಿಗಳು ಮೆಚ್ಚಿ ಜನರು ಮತ್ತೆ ತನ್ನನ್ನು ಬೆಂಬಲಿಸಲಿದ್ದಾರೆಂಬ ವಿಶ್ವಾಸವಿದೆ. ಬಿಜೆಪಿಯ ಸುಳ್ಳು ಭರವಸೆಗಳಿಂದ ಜನರು ಬೇಸತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ವಾಸುದೇವ ಯಡಿಯಾಳ್, ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಎಸ್. ರಾಜು ಪೂಜಾರಿ, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬಿಜೆಪಿ ಪಕ್ಷ ಸಂಘಟಿತ ಹೋರಾಟದ ಮೂಲಕ ನಮ್ಮ ಅಭ್ಯರ್ಥಿಯ ಗೆಲವಿಗೆ ಪಣ ತೊಟ್ಟಿದ್ದು, ಎ.20ರಂದು ನಡೆಯಲಿರುವ ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೈಂದೂರು ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಜರುಗಿದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಎ.20ರ ಬೆಳಿಗ್ಗೆ 9:30ಕ್ಕೆ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ನಾಮಪತ್ರ ಸಲ್ಲಿಸುವ ಮೊದಲು ಕಾರ್ಯಕರ್ತರ ಸಭೆಯ ನಡೆಯಲಿದ್ದು, 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಬಳಿಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಅಭ್ಯರ್ಥಿ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು. ಶಾಸಕ ಸುಕುಮಾರ ಶೆಟ್ಟಿ ಅವರು ಅಭ್ಯರ್ಥಿಯ ಜೊತೆಗೆ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಗಳೊಂದಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ವೆರಿಟೊ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನ ಉದ್ಘಾಟನಾ ಸಮಾರಂಭವು ಇತ್ತಿಚಿಗೆ ಬೆಂಗಳೂರಿನ ಕಲ್ಯಾಣ ನಗರದ ಕಾಸ್ಮೋಪಾಲಿಟನ್ ಕ್ಲಬ್ ನಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಮಾಜಿ ಸಾಲಿಸಿಟರ್ ಜನರಲ್ (ಭಾರತ ಸರ್ಕಾರ) ಮತ್ತು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಮಾತನಾಡಿ, ಮಾಧ್ಯಮಗಳಲ್ಲಿ ಪರಿಶುದ್ಧತೆ ಇದ್ದಾಗ ಸ್ವಚ್ಛ ಮತ್ತು ಸ್ವೀಕಾರಾರ್ಹ ಪ್ರಜಾಪ್ರಭುತ್ವ ಬರುತ್ತದೆ. “ನಾನು ಕರ್ನಾಟಕ ಲೋಕಾಯುಕ್ತಕ್ಕೆ ಬಂದ ನಂತರ ಜನರ ಕಷ್ಟಗಳನ್ನು ತಿಳಿದುಕೊಂಡೆ. ಸಮಾಜದಲ್ಲಿ ನಡೆಯುವ ತಪ್ಪುಗಳಿಗೆ ವ್ಯಕ್ತಿ ಮಾತ್ರ ಅಲ್ಲದೆ ಸುತ್ತ ಇರುವ ಪರಿಸರವೂ ಕಾರಣವಾಗುತ್ತದೆ. ಸುಮಾರು 50-60 ವರ್ಷಗಳ ಹಿಂದೆ ಸಮಾಜದ ಜನರು ದುಷ್ಟ ಕೆಲಸಗಳನ್ನು ಮಾಡಿದ್ದಕ್ಕಾಗಿ ವ್ಯಕ್ತಿ ಮತ್ತು ಇಡೀ ಕುಟುಂಬವನ್ನು ಬಹಿಷ್ಕರಿಸುತ್ತಿದ್ದರು. ಹಾಗಾಗಿ ಜನರು ತಪ್ಪು ಮಾಡಲು ಹೆದರುತ್ತಿದ್ದರು. ಈಗ ಶ್ರೀಮಂತ ಮತ್ತು ಶಕ್ತಿಶಾಲಿಯಾಗಲು ಹುಚ್ಚು ಓಟವಿದೆ, ಅದು ನಿಲ್ಲಬೇಕು ಎಂದರು. ಯುವಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಇತರರ ಜೇಬಿನಿಂದ ಹಣವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಮ್ಮ ಸಮಾಜ ಸೇವೆ, ಸಾಮಾಜಿಕ ಚಟುವಟಿಕೆಗಳಿಂದ ಖ್ಯಾತರಾದ ಬಾಬಣ್ಣ ಎಂದೇ ಕರೆಯಲ್ಪಡುತ್ತಿದ್ದ ಗೆಳೆಯರ ಬಳಗ ಹಂಗ್ಳೂರು ಸಂಸ್ಥೆಯ ಅಧ್ಯಕ್ಷ ವಿ. ಬಾಬು ಶೆಟ್ಟಿ (೮೧) ಇವರು ಕೋಟೇಶ್ವರ ಅಂಕದಕಟ್ಟೆಯ ಸ್ವಗೃಹದಲ್ಲಿ ಸೋಮವಾರ ಎ. ೧೭ರಂದು ನಿಧನರಾದರು. ಗೆಳೆಯರ ಬಳಗ ಹಂಗ್ಳೂರು ಸಂಘ ಸ್ಥಾಪನೆಯಾದ ೧೯೬೫ ರಿಂದ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದ ಇವರು ೫೮ ವರ್ಷಗಳಿಂದ ಸತತವಾಗಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಹಂಗ್ಳೂರು ವಿನಾಯಕ ಟಾಕೀಸ್ ಬಳಿ, ಸಂಘದ ಸ್ವಂತ ಕಟ್ಟಡದ ನಿರ್ಮಾಣಗೊಂಡ ನಂತರ ಶಿಕ್ಷಣ, ಸಂಗೀತ, ನಾಟಕ, ಸಾಹಿತ್ಯ ಎಲ್ಲಾ ಕ್ಷೇತ್ರಗಳಲ್ಲೂ ಚಟುವಟಿಕೆ ನಡೆಸುವ ಕೇಂದ್ರವನ್ನಾಗಿ ಗೆಳೆಯರ ಬಳಗವನ್ನು ರೂಪಿಸಿದವರು ಬಾಬು ಶೆಟ್ಟಿಯವರು. ಸಂಗೀತ ಭಾರತಿ ಸಂಸ್ಥೆಗೆ ೨೦ ವರ್ಷಗಳ ಕಾಲ ಸಂಗೀತ ಶಾಲೆ ನಡೆಸಲು ಅವಕಾಶ ನೀಡಿದ್ದರು. ಮಕ್ಕಳಿಗಾಗಿ ಬಾಲವಾಡಿ ನಡೆಸುತ್ತಿದ್ದರು. ಶಿಶು ಮಂದಿರ ಆರಂಭಿಸಿದರು. ಸಾಹಿತ್ಯಾಸಕ್ತರಿಗಾಗಿ ಗ್ರಂಥಾಲಯ ಮಾಡಿದ್ದರು. ಇವರ ನೇತೃತ್ವದಲ್ಲಿ ರಂಗ ಭೂಮಿ ಚಟುವಟಿಕೆಗೆ ಬಹಳ ಪ್ರೋತ್ಸಾಹ ದೊರೆತು, ಪ್ರತಿಭಾವಂತರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಅರುಣ್ ದೀಪಕ್ ಮೆಂಡೋನ್ಸಾ ನಾಮಪತ್ರ ಸಲ್ಲಿಸಿದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ರಶ್ಮಿ ನಾಮಪತ್ರ ಸ್ವೀಕರಿಸಿದರು. ಈ ವೇಳೆ ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗುರುರಾಜ ಶೆಟ್ಟಿ ಸೋಮವಾರ ನಾಮಪತ್ರ ಸಲ್ಲಿಸಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್ ನಾಮಪತ್ರ ಸ್ವೀಕರಿಸಿದರು. ಈ ವೇಳೆ ಈ ವೇಳೆ ಉಪಚುನಾವಣಾಧಿಕಾರಿ ಪ್ರಭುಸ್ವಾಮಿ, ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು, ಹಿರಿಯರಾದ ಚನ್ನಕೇಶವ ಉಪಾಧ್ಯಾಯ, ಬಿಜೆಪಿ ಹಿಂದುಳಿದ ಮೊರ್ಚಾ ಅಧ್ಯಕ್ಷ ಸಂತೋಷ್ ಪೂಜಾರಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತದ ರಾಜ್ಯಗಳು, ರಾಜಧಾನಿ, ಪ್ರಧಾನಮಂತ್ರಿಗಳ ಹೆಸರು, ಕರ್ನಾಟಕದ ಜಿಲ್ಲೆಗಳು, ನದಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಸೇರಿದಂತೆ ಹಲವು ವಿಷಯಗಳ ಬಗ್ಗೆ ಪಟಪಟನೆ ಉತ್ತರಿಸುವ ಹಾಗೂ ಗುರುತಿಸುವ ಸ್ಕಂದ, ಅಧಿಕ ಜ್ಞಾಪನಾ ಶಕ್ತಿಯ ಕಾರಣಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿ ಈ ದಾಖಲೆ ಮಾಡಿದ್ದಾನೆ. ಮೂಲತಃ ಕುಂದಾಪುರ ತಾಲೂಕಿನ ಉಳ್ತೂರು ನಿವಾಸಿಯಾಗಿರುವ ಪ್ರಸ್ತುತ ಪ್ರಸ್ತುತ ಧಾರವಾಡ ದಲ್ಲಿ ನೆಲೆಸಿರುವ ಉಳ್ತೂರು ಸಾವಂತರಮನೆ ಸುನೀತಾ ಮತ್ತು ಹರೀಶ್ ಶೆಟ್ಟಿ ಇವರ ಪುತ್ರ 5 ವರ್ಷ 11 ತಿಂಗಳು ಪ್ರಾಯದ ಸ್ಕಂದ ಆರ್. ಶೆಟ್ಟಿ ಈ ಸಾಧನೆ ಮಾಡಿದ್ದಾನೆ. ಕರ್ನಾಟಕದ 31 ಜಿಲ್ಲೆಗಳು, 24 ನದಿಗಳು, 8 ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, 28 ಭಾರತದ ರಾಜ್ಯಗಳು ಮತ್ತು ಅದರ ರಾಜಧಾನಿಗಳನ್ನು ಹಾಗೂ ಭಾರತದ 15 ಪ್ರಧಾನ ಮಂತ್ರಿಗಳನ್ನು ಹಾಗೂ 10 ಶ್ಲೋಕಗಳು ಮತ್ತು 10 ಭಜನೆ ಗಳನ್ನು ಪಠಣ ಮಾಡಿದ್ದಕ್ಕಾಗಿ ಸ್ಕಂದ ಹೆಚ್ ಶೆಟ್ಟಿ ಗೆ ಇಂಡಿಯಾ ಬುಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಂ ಜಯರಾಮ ಶೆಟ್ಟಿ ಇನ್ಸಿಟ್ಯೂಟ್ ಆಫ್ ಸೈನ್ಸ್ ಆಂಡ್ ಕಾಮರ್ಸ್, ಮೂಡ್ಲಕಟ್ಟೆ ಸಂಸ್ಥೆಯಲ್ಲಿ ಕಾಲೇಜಿನ ಕ್ರೀಡೋತ್ಸವ “ಐಕ್ಯಂ” ಉದ್ಘಾಟನೆ ಮತ್ತು ತಂಡಗಳ ಹೆಸರು ಮತ್ತು ಲಾಂಛನ ಅನಾವರಣ ಸಮಾರಂಭ ಜರುಗಿತು. ಐಎಂಜೆ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಸಿದ್ಧಾರ್ಥ ಜೆ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯ ಮಹತ್ವವನ್ನು ತಿಳಿಸಿದರು. ಐಎಂಜೆ ವಿದ್ಯಾಸಂಸ್ಥೆಗಳ ನಿರ್ದೇಶಕರಾದ ಪ್ರೋ. ದೋಮ ಚಂದ್ರಶೇಖರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಕ್ರೀಡೆಯು ಮನುಷ್ಯನ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡುವ ಸಾಧನವಾಗಿದೆಯೆಂದು ಹೇಳಿದರು. ಕಾರ್ಯಕ್ರಮದಲ್ಲಿ ಐಎಂಜೆ ವಿದ್ಯಾಸಂಸ್ಥೆಗಳ ಬ್ರ್ಯಾಂಡ್ ಬಿಲ್ಡಿಂಗ್ನ ನಿರ್ದೇಶಕರಾದ ರಾಮಕೃಷ್ಣ ಹೆಗ್ಡೆಯವರು, ಐಎಂಜೆಐಎಸ್ಸಿ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ರವರು, ಐಎಂಜೆಐಎಸ್ಸಿ ಸಂಸ್ಥೆಯ ಉಪಪ್ರಾಂಶುಪಾಲರಾದ ಪ್ರೋ. ಜಯಶೀಲ ಕುಮಾರ್ರವರು, ಐಎಂಜೆ ವಿದ್ಯಾ ಸಂಸ್ಥೆಗಳ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರವೀಣ ಖಾರ್ವಿಯವರು ಉಪಸ್ಥಿತರಿದ್ದರು. ಐಎಂಜೆಐಎಸ್ಸಿ ಸಂಸ್ಥೆಯ ಬಿಕಾಂ ವಿದ್ಯಾರ್ಥಿನಿಗಳಾದ ಕುಮಾರಿ ಮೊಹಿನ್ ಸಭಾ ಸ್ವಾಗತಿಸಿ, ಕುಮಾರಿ ಹನಾ ಶೇಖ್ ವಂದಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಕಾರ್ಯಕರ್ತರ ಪಡೆದ ಸಿದ್ಧವಾಗಿದ್ದು, ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿಯಾಗಿದೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು. ಭಾನುವಾರ ಕುಂದಾಪ್ರ ಡಾಟ್ ಕಾಂನೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳುಗಳಿಂದ ಕಾಂಗ್ರೆಸ್ ಬಿರುಸಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದೆ. ಬೂತ್ ಮಟ್ಟದಲ್ಲಿ ಮತದಾರರನ್ನು ತಲುಪಿದ್ದು, ನಾಮಪತ್ರ ಸಲ್ಲಿಸಿದ ಬಳಿಕ ಮತ್ತೆ ಪ್ರಚಾರ ನಡೆಸಲಿದ್ದೇವೆ ಎಂದರು. ಎಪ್ರಿಲ್ 18ರ ಮಧ್ಯಾಹ್ನ ನಾಮಪತ್ರ ಸಲ್ಲಿಸಲಾಗುತ್ತಿದ್ದು, ಇದಕ್ಕೂ ಪೂರ್ವಭಾವಿಯಾಗಿ ಬೆಳಿಗ್ಗೆ ತ್ರಾಸಿಯಲ್ಲಿ ಸಭೆ ಮೆರವಣಿಗೆ ನಡೆಯಲಿದೆ ಎಂದರು.
