Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಅರಿಸಿ ಬಂದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಚುರುಕುಗಾಗಿ ಕೆಲಸಗಳನ್ನು ಮಾಡಿಕೊಟ್ಟಲ್ಲಿ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂಡ ಶೇಕಡ 17 ರಷ್ಟು ಹೆಚ್ಚು ಮಳೆಯಾಗಿದೆ. ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿ, ಮೂಲಭೂತ ಸೌಕರ್ಯಗಳಾದ ರಸ್ತೆ, ಸರ್ಕಾರಿ ಕಟ್ಟಡಗಳು, ಸೇತುವೆ ಸೇರಿದಂತೆ ಮತ್ತಿತ್ತರ ಆಸ್ತಿ ಪಾಸ್ತಿಗಳಿಗೆ ಹಾನಿವುಂಟಾಗಿದೆ. ಈ ಸಂಬಂಧ ಈಗಾಗಲೇ ಬೆಳೆಹಾನಿ, ಮಾನವನಹಾನಿಗೆ ಸೇರಿದಂತೆ ಮತ್ತಿತರ ಹಾನಿಗಳಿಗೆ ಪರಿಹಾರವನ್ನು ನೀಡಲಾಗಿದೆ ಎಂದರು. ಮೂಲಭೂತ ಸೌಕರ್ಯಗಳ ಹಾನಿಗಳ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಕೃತಿ ವಿಕೋಪ ಅನುದಾನದ ಅಡಿಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಪ್ರಸಕ್ತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಫೂರ್ತಿ, ಆಸಕ್ತಿ ಹಾಗೂ ಇಚ್ಛಾಶಕ್ತಿಯಿಂದ ಪರಿಶ್ರಮ ಪಟ್ಟು ಆಡಿದಾಗ ತಕ್ಕ ಪ್ರತಿಫಲ ಸಿಗುತ್ತದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಿಳಿಸಿದರು. ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯ ಮಹಾಲಿಂಗ ನಾಯ್ಕ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿದ್ಯಾಸಂಸ್ಥೆಗಳ ಕ್ರೀಡಾಕೂಟದ ಸಂಘಟನೆ ಉತ್ತಮವಾಗಿದೆ. ವಿದ್ಯಾರ್ಥಿಗಳ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಗುರಿ, ಪರಿಶ್ರಮ ಅಗತ್ಯವಾಗಿ ಬೇಕು ಎಂದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಸುರೇಂದ್ರ ಶೆಟ್ಟಿ ಕ್ರೀಡಾಕೂಟದ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ, ನಿರಂತರವಾಗಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಬಹುಮಾನ ಪಡೆದುಕೊಂಡರೆ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ. ಸೋಲು ಗೆಲುವು ಮುಖ್ಯವಲ್ಲ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಬಹುಮುಖ್ಯ, ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಸಮಯ ನಿರ್ವಹಣೆ, ಹಿನ್ನಡೆ ಮತ್ತು ಟೀಕೆಗಳನ್ನು ಎದುರಿಸಲು ತಾಳ್ಮೆ ಮತ್ತು ಶಿಸ್ತನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಕುಂದಾಪುರ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ನಿರೂಪಿಸಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸುಹಾಸ್ ಜೆ.ಜಿ. ಅತಿಥಿಗಳನ್ನು ಪರಿಚಯಿಸಿ, ಸತೀಶ್ ಶೆಟ್ಟಿ ಬಹುಮಾನ ವಿತರಣಾ ಪಟ್ಟಿ ವಾಚಿಸಿ, ಪೂಜಾ ವಂದಿಸಿದರು. ದ್ವಿತೀಯ ಬಿ.ಕಾಂ. (ಇ) ವಿಭಾಗದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಉಡುಪಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ  50ರ ಸಂಭ್ರಮಾಚರಣೆಯ ಪ್ರಯಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಕಾಲೇಜಿನ ಶ್ರುತಿಕಾ ಶೆಟ್ಟಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಸಾಧಕವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸತ್ಯನಾರಾಯಣ. ಜಿ ಅವರು ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿ, ಕ್ರೀಡಾಜ್ಯೋತಿಯನ್ನು ಬೆಳಗಿಸುತ್ತಾ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವಿರಬೇಕು, ಸೋಲೇ ಗೆಲುವಿನ ಸೋಪಾನ ಎಂಬ ನುಡಿಯಂತೆ ಪ್ರತಿಯೊಬ್ಬರು ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ನುಡಿಯುತ್ತಾ ವಿದ್ಯಾರ್ಥಿಗಳಿಗೆ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರೆರೇಪಿಸಿದರು.   ಶ್ರೀ ವೆಂಕಟರಮಣ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿ’ಸೋಜಾ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿಪ್ರಮೀಳಾ ಡಿ’ಸೋಜಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೀನಿಧಿ ಪೈ ಕಾರ್ಯಕ್ರಮ ನಿರೂಪಿಸಿ, ಮದೀಹಾ ಮಸೂದ್ ಸ್ವಾಗತಿಸಿ ಹಾಗೂ ಆಯುಷ್ ರಾವ್ ವಂದಿಸಿದರು. ಈ ಸಮಾರಂಭದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರಕಾರ ಕೊಂಕಣ ರೈಲ್ವೆ ಯನ್ನು ಕೇಂದ್ರ ಸರಕಾರಕ್ಕೆ ಹಸ್ತಾಂತ ರಿಸುವ ಮೂಲಕ ಪ್ರಗತಿಗೆ ಸಹಕರಿಸಬೇಕು ಎಂದು ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ. ಕೊಂಕಣ ರೈಲ್ವೆ ನಿಗಮದ ಎರಡನೇ ದೊಡ್ಡ ಆಡಳಿತ ಪಾಲುದಾರನಾಗಿರುವ ಕರ್ನಾಟಕ ಸರಕಾರ ಕೊಂಕಣ ರೈಲ್ವೆ ಡಬ್ಲಿಂಗ್ ಮಾಡಲು ತನ್ನ ಪಾಲಿನ ಹಣಕಾಸು ನೆರವು ನೀಡಲು ಒಪ್ಪದ ಕಾರಣ ಡಬ್ಲಿಂಗ್ ಯೋಜನೆಯೇ ರದ್ದಾಗಿರುವ ಮಾಹಿತಿ ಈಗ ಹೊರಬಿದ್ದಿದೆ ಎಂದು ಸಮಿತಿ ಹೇಳಿದೆ. ಸ್ಟೇಶನ್, ಟರ್ಮಿನಲ್ ಸೌಲಭ್ಯಗಳಿಗೆ ಅಗಾಧ ಹಣಕಾಸಿನ ನೆರವು ಬೇಕಾಗಿದ್ದು ಕೇವಲ ಭಾರತೀಯ ರೈಲ್ವೇ ಮಾತ್ರವೇ ತನ್ನ ಪಾಲಿನ ಹಣ ಬಿಡುಗಡೆ ಮಾಡುತ್ತಿದ್ದು ಕರ್ನಾಟಕ ಸರಕಾರ ಶೇರು ಖರೀದಿ ಬಿಟ್ಟರೆ ಇನ್ನುಳಿದ ಯಾವುದೇ ಪ್ರಮುಖ ಮೂಲ ಸೌಲಭ್ಯಗಳಿಗೆ ಹಣಕಾಸು ನೆರವು ನೀಡುತ್ತಿಲ್ಲ ಎಂದು ಸಮಿತಿ ಆರೋಪಿಸಿದೆ. ಕರ್ನಾಟಕ ರಾಜ್ಯ ನೀಡಬೇಕಾದ ಸುಮಾರು ಐದು ಸಾವಿರ ಕೋಟಿ ಹಣ ನೀಡಲು ಸಾಧ್ಯವಿಲ್ಲವಾದರೆ ಕೇಂದ್ರ ಸರಕಾರವೇ ಆ ಹಣಕಾಸು ಪೂರೈಕೆ ಮಾಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯಡಮೊಗೆ ಗ್ರಾಮದ ತಟ್ಟೆಗುಳಿ ನಿವಾಸಿ ಕುಶಲ (38) ಅವರು ತೆಂಗಿನಮರದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಅವರು ಕೃಷಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು ನ.21ರಂದು ತೆಂಗಿನಮರ ಏರಿ ಕಾಯಿ ಕೊಯ್ಯುತ್ತಿರುವ ವೇಳೆ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಯ ಬಗ್ಗೆ ಅವರನ್ನು ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟಿ ದ್ದಾರೆ. ಮೃತರ ಸಹೋದರ ಚಂದ್ರ ನೀಡಿದ ದೂರಿನಂತೆ ಶಂಕರನಾರಾಯಣ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಟಾಟ್‌ ಕಾಂ ಸುದ್ದಿ.ಉಡುಪಿ: 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಜಿಲ್ಲೆಯ ಕುಂದಾಪುರ ತಾಲೂಕಿನ 45-ಗಂಗೊಳ್ಳಿ ಗ್ರಾಮ ಪಂಚಾಯತಿಯ 33 ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸುವಂತೆ ವೇಳಾಪಟ್ಟಿಯನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿದ್ದು, ಆಯೋಗದ ನಿರ್ದೇಶನದಂತೆ ಡಿಸೆಂಬರ್ 8ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ಡಿಸೆಂಬರ್ 6 ರ ಬೆಳಗ್ಗೆ 6 ಗಂಟೆಯಿAದ ಡಿಸೆಂಬರ್ 8 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಈ ಮೆಲ್ಕಂಡ ತಾಲೂಕಿನ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿನ ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಶ್ವ ಶ್ರೇಷ್ಟ ಸಾಧನೆಗಳ ಮೂಲಕ ತಾಯ್ನಾಡಿಗೆ ಕೀರ್ತಿಯನ್ನು ತರುತ್ತಿರುವ  ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯು 2024ರ ಸ್ಟಾರ್ ಎಜ್ಯುಕೇಷನ್ ರಾಷ್ಟ್ರೀಯ ಮಟ್ಟದ ಗೌರವ ಪುರಸ್ಕಾರಕ್ಕೆ ಭಾಜನವಾಯಿತು. ನ26.ರಂದು ಮುಂಬೈಯ ಎಂ ಎಂ ಆರ್ ಡಿ ಎ ಮೈದಾನದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಮತ್ತು ಆಡಳಿತಾಧಿಕಾರಿ ವೀಣಾ ರಶ್ಮೀ ಎಂ. ಪಾಲ್ಗೊಂಡು ಪ್ರಶಸ್ತಿಯನ್ನು ಸ್ವೀಕರಿಸಿದರು. ಮುಂಬೈನ ಎಫ್ ಎಫ್ ಟಿ ಪ್ರೈವೆಟ್ ಲಿಮಿಟೆಡ್‌ನ ನಿರ್ದೇಶಕರಾದ ಅಲಾಖ್ ಸಿಂಗ್ ಪ್ರಶಸ್ತಿಯನ್ನು ವಿತರಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ತರಲಾಗುತ್ತಿರುವ ಕ್ರಾಂತಿಕಾರಿ ಬದಲಾವಣೆಗಳು-ಸುಧಾರಣೆಗಳು, ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, ಪರಿಸರ ಸ್ನೇಹಿ ಕಾರ್ಯಕ್ರಮಗಳು, ಸಮಾಜಕ್ಕೆ ನೀಡಲಾಗುತ್ತಿರುವ ಕೊಡುಗೆಗಳು ಇತ್ಯಾದಿ ಅಂಶಗಳ ಆಧಾರದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು. ಪ್ರಶಸ್ತಿ ಸ್ವೀಕರಿಸಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣಕುಮಾರ ಮಾತನಾಡುತ್ತಾ, ನಮ್ಮ ಸಂಸ್ಥೆಯ ಸಂಸ್ಥಾಪಕರಾದ ವೇದಮೂರ್ತಿ ಹೆಚ್ ರಾಮಚಂದ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಡ್ರೋನ್ ಆಧಾರಿತ ಫೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ ತರಬೇತಿಗಾಗಿ (ಮೂಲನಿವಾಸಿ, ಅಲೆಮಾರಿ, ಅರೆಅಲೆಮಾರಿ ಸೂಕ್ಷ್ಮ/ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಆದ್ಯತೆ) ಪರಿಶಿಷ್ಟ ಪಂಗಡ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಕಚೇರಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More