Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ  ಖೇಲೋ ಜನತಾ 2024 ಅತ್ಯಂತ ಸಡಗರ, ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರದ ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಅವರು ಮಾತನಾಡಿ, ಜನತಾ ಶಿಕ್ಷಣ ಸಂಸ್ಥೆ ಕ್ರೀಡಾ ರಂಗಕ್ಕೆ ಕೊಡುತ್ತಿರುವ ಪ್ರೋತ್ಸಾಹ ಅದ್ಭುತವಾಗಿದೆ. ವಿದ್ಯಾರ್ಥಿಗಳೇ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧಕರಾಗಬೇಕಾದರೆ ಕಾಲೇಜಿನ ಕ್ರೀಡಾಕೂಟಗಳು ಅಡಿಪಾಯವಾಗಿದೆ. ಧೈರ್ಯವಾಗಿ ಆಡಿ ಎಂದು ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ವಾರ್ಷಿಕ ಕ್ರೀಡಾಕೂಟ ಮಹತ್ವಪೂರ್ಣವಾಗಿದೆ ಆ ಮೂಲಕ ಸಾವಿರಾರು ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗಳನ್ನು ಅನಾವವರಣಗೊಳಿಸಿ ಪ್ರೋತ್ಸಾಹ ನೀಡಲಾಗುತ್ತಿದೆ. ಸೋಲೇ ಗೆಲುವಿನ ಸೋಪಾನ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ ಪೂಜಾರಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮದ ಶ್ರೀ ಅತಿಶಯ ಕ್ಷೇತ್ರ ಬೋಳಂಬಳ್ಳಿ ಪದ್ಮಾವತಿ ದೇವಿ ದೇವಸ್ಥಾನದ ಬಳಿ ಭಗವಾನ್ ಶ್ರೀ ಬಾಹುಬಲಿಯ 28 ಅಡಿ (21 ಅಡಿ ಮೂರ್ತಿ, 7 ಅಡಿ ಪೀಠ) ಎತ್ತರದ ಏಕಶಿಲಾ ಮೂರ್ತಿ ಪ್ರತಿಷ್ಠಾಪನೆಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ನ. 8ರಂದು ಕಂಬದಕೋಣೆಯಿಂದ ಬೋಳಂಬಳ್ಳಿಗೆ ವಿಗ್ರಹದ ಭವ್ಯ ಮೆರವಣಿಗೆ ನಡೆಯಿತು. ಜೈನ ದೇವಸ್ಥಾನದ ಧರ್ಮದರ್ಶಿ ಧರ್ಮರಾಜ್ ಜೈನ್ ದಂಪತಿ ಆರತಿ ಬೆಳಗಿದರು. ಶ್ರೀ ಬಾಹುಬಲಿ ಬೆಟ್ಟದಲ್ಲಿ ಮೂರ್ತಿಯನ್ನು ಕ್ರೇನ್ ಮೂಲಕ ಇಳಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿಷ್ಠಾಪನೆ ಸಮಿತಿಯ ಕಾರ್ಯದರ್ಶಿ ಸುಭಾಷ್ ಜೈನ್, ದೇವಸ್ಥಾನ ಅಭಿವೃದ್ಧಿ ಕಾರ್ಯದರ್ಶಿ ಅಣ್ಣಪ್ಪ ಶೆಟ್ಟಿ‌ ಕಾಲ್ತೋಡು, ಮೂಡುಬಿದಿರೆ 18 ಬಸದಿಗಳ ಮೊಕ್ತೇಸರರಾದ ಆದರ್ಶ್‌ ಎಂ. ಚೌಟರ ಅರಮನೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಚಿರತೆಯೊಂದು ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ದಾಳಿ ನಡೆಸಿ, ಹೊತ್ತೊಯ್ದ ಘಟನೆ ಕಟ್ ಬೆಲ್ತೂರು ದೇವಲಕುಂದ ಎಂಬಲ್ಲಿ ನಡೆದಿದೆ. ಚಿರತೆ ನಾಯಿಯನ್ನು ಹೊತ್ತೊಯ್ಯುವ ಭಯಾನಕ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೇವಲಕುಂದ ಗ್ರಾಮದ ಜಾಡಿ ಕ್ರಾಸ್ ಸುಧೀರ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಗಾಢ ನಿದ್ದೆಯಲ್ಲಿದ್ದ ನಾಯಿಗೆ ಚಿರತೆಯ ಬಾಯಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಕ್ಷಣಾರ್ಧದಲ್ಲಿ ಚಿರತೆ ನಾಯಿಯನ್ನು ಹೊತ್ತುಕೊಂಡು ಕಾಡಿನೊಳಗೆ ಓಡಿ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿರತೆ ಕಾಣಿಸಿಕೊಂಡ ಕಾರಣ ಭಯಗೊಂಡ ದೇವಲಕುಂದ ಗ್ರಾಮಸ್ಥರಿಗೆ ಆತಂಕ ಶುರುವಾಗಿದೆ. ತಕ್ಷಣವೇ ಅಧಿಕಾರಿಗಳು ಬೋನ್ ಇಟ್ಟು ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗರಮಕ್ಕಿ ನಿವಾಸಿ ಸಾಧು (35) ಎಂಬವರ 4 ತಿಂಗಳ ಗಂಡು ಮಗು ಹರ್ಷಿತ್‌ಗೆ ಜ್ವರ ಬಂದು ಗುರುವಾರ ಮೃತಪಟ್ಟಿದೆ. ಮಗುವಿಗೆ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಮಕ್ಕಳ ತಜ್ಞರಿಗೆ ತೋರಿಸಿ ಚಿಕಿತ್ಸೆ ನೀಡಲಾಗಿತ್ತು. ಸುಮಾರು ತಡರಾತ್ರಿ 1.30ರ ವಾಂತಿಬೇಧಿಯಾಗಿದ್ದು, ಕೂಡಲೆ ಚಿಕಿತ್ಸೆಯ ಬಗ್ಗೆ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಬಂದರು ನಿವಾಸಿ ಉದ್ಯಮಿ ಜಗದೀಶ ಭಂಡಾರ್‌ಕಾರ್ ಅವರ ಪತ್ನಿ ಜಯಾ ಭಂಡಾರ್‌ಕಾರ್ (68) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು. ಗಂಗೊಳ್ಳಿ ಜಿ.ಎಸ್.ಬಿ. ಮಹಿಳಾ ಮಂಡಳಿ ಸದಸ್ಯೆಯಾಗಿದ್ದ ಇವರು ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಅವರಿಗೆ ಪತಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕೆನರಾ ಬ್ಯಾಂಕ್ ಉಡುಪಿ ಇವರ ವತಿಯಿಂದ ಕೇಂದ್ರ ಸರಕಾರದ ಸಾಲ ಯೋಜನೆಗಳಾದ ಪಿ.ಎಂ ವಿಶ್ವಕರ್ಮ ಯೋಜನೆ, ಸ್ವನಿಧಿ ಯೋಜನೆ, ಮುದ್ರಾ ಯೋಜನೆ ಮತ್ತು ಇತರ ಸಾಲ ಯೋಜನೆಗಳ ಸಂಪರ್ಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭಾರತ ದೇಶದಲ್ಲಿರುವ ಪರಂಪರೆಯುತವಾದ ಕುಲಕಸುಬುಗಳಿಗೆ ಶಕ್ತಿ ನೀಡುವ ಉದ್ದೇಶದಿಂದ ಪ್ರಧಾನ ಮಂತ್ರಿಗಳು ಪಿ.ಎಂ. ವಿಶ್ವಕರ್ಮ ಯೋಜನೆಯನ್ನು ರೂಪಿಸಿದ್ದು, ಈ ಯೋಜನೆಯಡಿ ಬಡಗಿಗಳು, ಅಕ್ಕಸಾಲಿಗರು, ಕುಂಬಾರಿಕೆ, ಗಾರೆ ಕೆಲಸದವರು ಸೇರಿದಂತೆ ಸುಮಾರು 18 ಪಾರಂಪರಿಕ ವೃತ್ತಿ ನಡೆಸುವವರಿಗೆ ಕೌಶಲ್ಯಾಭಿವೃದ್ಧಿ ಹಾಗೂ ಆರ್ಥಿಕ ಸೌಲಭ್ಯಗಳೊಂದಿಗೆ ಉಪಕರಣಗಳನ್ನು ನೀಡಲಾಗುತ್ತಿದ್ದು, ಸಾಮಾನ್ಯ ಬಡಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:  ನ.6 ರಂದು ಆನಂದತೀರ್ಥ ವಿದ್ಯಾಲಯ ಪಾಜಕದಲ್ಲಿ ನಡೆದ ಎ.ಐ.ಸಿ.ಎಸ್. ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಉತ್ತಮ ಪ್ರದರ್ಶನವನ್ನು ನೀಡಿರುತ್ತಾರೆ. ಹಿಂದಿ ಕಥಾ ಲೇಖನ ಸ್ಪರ್ಧೆಯಲ್ಲಿ 8ನೇ ತರಗತಿಯ ಸಾನ್ವಿಸಾಗರ್ ಬಿಜಾಪುರದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾಳೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಆಕೆಯನ್ನು ಅಭಿನಂದಿಸುತ್ತಾ, ಸಾನ್ವಿಯು ನಮ್ಮ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲಳಾಗಿದ್ದಾಳೆ. ಅಂದದ ಬರವಣಿಗೆ, ಸ್ವತಂತ್ರ ಕಲ್ಪನಾಶಕ್ತಿ ಹಾಗೂ ವಿಚಾರವಿಮರ್ಶೆಯ ಗುಣಗಳನ್ನು ಹೊಂದಿರುತ್ತಾಳೆ. ಹಿಂದಿಭಾಷೆಯಲ್ಲಿ ಕಥಾಲೇಖನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದು ನಮ್ಮೆಲ್ಲರಿಗೂ ಹೆಮ್ಮೆಯಾಗಿದೆ ಎಂದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಕಛೇರಿಯಲ್ಲಿ ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಛೇರಿಯನ್ನು ಶುಕ್ರವಾರ ಉದ್ಘಾಟನೆಗೊಂಡಿತು. ಈ ವೇಳೆ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ದಿನೇಶ ಹೆಗ್ಡೆ ಅವರು ಮಾತನಾಡಿ, ರಾಜ್ಯ ಸರಕಾರದ ಐದು ಗ್ಯಾರಂಟಿಗಳಿಂದ ಜನರಿಗೆ ಬಹಳಷ್ಟು ಪ್ರಯೋಜವಾಗಿದೆ. ಇದನ್ನು ಸಹಿಸಿಕೊಳ್ಳಲಾಗದ ವಿರೋಧ ಪಕ್ಷದವರು ಸರಕಾರದ ಗ್ಯಾರಂಟಿಗಳ ಬಗ್ಗೆ ಲೇವಡಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೆ ಸರಕಾರದ ಐದೂ ಗ್ಯಾರಂಟಿಗಳು ನಿರಂತರವಾಗಿ ನಡೆಯುತ್ತದೆ ಎಂದರು. ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಹರಿಪ್ರಸಾದ ಶೆಟ್ಟಿ ಮಾತನಾಡಿ, ರಾಜ್ಯ ಸರಕಾರ ಗ್ಯಾರೆಂಟಿ ಯೋಜನೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಿದೆ. ಯೋಜನೆಯಿಂದ ವಂಚಿತರಾಗಿರುವ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಗ್ಯಾರಂಟಿ ಯೋಜನೆಗಳ ಪ್ರಯೋಜನ ದೊರೆಕಿಸಿಕೊಡಲು ಶ್ರಮಿಸುವುದಾಗಿ ತಿಳಿಸಿದರು. ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಾಲೂಕು ಪಂಚಾಯತ್‌ ಆವರಣದಲ್ಲಿ ಆರಂಭಿಸಲಾದ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿಯನ್ನು ಶುಕ್ರವಾರ ಪ್ರಗತಿಪರ ಕೃಷಿಕ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಉದ್ಘಾಟಿಸಿದರು. ಈ ವೇಳೆ ಅವರು ಮಾತನಾಡಿ, ರಾಜ್ಯ ಸರ್ಕಾರ ಅಶಕ್ತರಿಗೆ, ದುರ್ಬಲರಿಗೆ ಆರ್ಥಿಕ ಶಕ್ತಿ ಕಲ್ಪಿಸುವ ನಿಟ್ಟಿನಲ್ಲಿ ಪಂಚಗ್ಯಾರಂಟಿ ಯೋಜನೆ ಜಾರಿಗೊಳಿಸಿ, ವಾರ್ಷಿಕವಾಗಿ ಸುಮಾರು 53 ಸಾವಿರ ಕೋಟಿ ರೂ. ಅನುದಾನ ಒದಗಿಸುತ್ತಿದೆ. ರಾಜ್ಯದ ಸುಮಾರು ಶೇ.90ರಷ್ಟು ಜನರು ಒಂದಿಲ್ಲೊದು ರೀತಿಯಲ್ಲಿ ಇದರ ಪ್ರಯೋಜನ ಪಡೆಯುತ್ತಿದ್ದಾರೆ, ಆದರೆ ಕೆಲವು ಫಲಾನುಭವಿಗಳೇ ಈ ಯೋಜನೆಯ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ, ಇದು ವಿಷಾಧನೀಯ ಸಂಗತಿಯಾಗಿದೆ. ರಾಜ್ಯ ಸರ್ಕಾರ ಪಂಚಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕಾಗಿ ಪ್ರತಿ ತಾಲ್ಲೂಕಿನಲ್ಲಿಯೂ ಅನುಷ್ಠಾನ ಸಮಿತಿ ರಚಿಸಿರುವುದು ಶ್ಲಾಘನೀಯವಾಗಿದ್ದು, ಸರ್ಕಾರದ ಗ್ಯಾರಂಟಿ ಅರ್ಹರಿಗೆ ತಲುಪಿಸುವ ಬಹಳ ದೊಡ್ಡ ಜವಾಬ್ದಾರಿ ಅನುಷ್ಠಾನ ಸಮಿತಿ ಮೇಲಿದೆ ಎಂದರು. ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲ್ಲೂಕಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಶ್ರೀ ಮನ್ಮಹಾ ರಥೋತ್ಸವದ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ರಥ ಪೂಜೆ ಮಾಡುವುದರ ಮೂಲಕ ರಥ ಕಟ್ಟುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಪ್ರದಾನ ಅರ್ಚಕರಾದ ವೇದಮೂರ್ತಿ ಪ್ರಕಾಶ್ ಉಡುಪ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸತೀಶ್ ಶೆಟ್ಟಿ,ವ್ಯವಸ್ಥಾಪನಾ ಸಮಿತಿಯ ಸದಸ್ಯರು ಇನ್ನಿತರರು ಉಪಸ್ಥಿತರಿದ್ದರು. ನವೆಂಬರ್ 16ರ ಶನಿವಾರ ಶ್ರೀ ಮನ್ಮಹಾ ರಥೋತ್ಸವ ಜರುಗಲಿದೆ.

Read More