Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸ್ವಾತಂತ್ರ್ಯ  ಹೋರಾಟಗಾರರ ನೆನಪು ಸ್ವಾತಂತ್ರ್ಯೋತ್ಸವ ದಿನಕ್ಕೆ ಸೀಮಿತವಾಗುತ್ತಿರುವುದು ವಿಷಾದನೀಯ. ಸ್ವಾತಂತ್ರ ಹೋರಾಟಗಾರರನ್ನು ಗೌರವಿಸುವುದು ಕುಟುಂಬಸ್ಥರ ತ್ಯಾಗವನ್ನು ಸ್ಮರಿಸಿಕೊಳ್ಳವುದು ಅಗತ್ಯದ ವಿಷಯವಾಗಿದೆ. ಈ ದಿಸೆಯಲ್ಲಿ ಈ ಕಾರ್ಯಕ್ರಮ ಶ್ಲಾಘನೀಯ ಮತ್ತು ಅನುಕರಣೀಯವಾಗಿದೆ ಎಂದು ಕುಂದಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಉಮೇಶ್ ಪುತ್ರನ್ ಹೇಳಿದರು. ಅವರು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಗ್ರಾಮ ಪಂಚಾಯತ್ ಪ್ರಸ್ತುತಿ ರೋಟರಿ ಕ್ಲಬ್ ಕೋಟ – ಸಾಲಿಗ್ರಾಮ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸಮಾವೇಶ, ಜಿಲ್ಲಾಮಟ್ಟದ ಚಿತ್ರರಚನೆ ಮತ್ತು ಕಾರಂತರ ಕೃತಿಗಳ ಹೆಸರು ಬರೆಯುವ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಆನಂದ ಸಿ. ಕುಂದರ್‌ ಅವರು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸಮಸ್ಯೆಗಳಿಗೆ ಸರಕಾರ ಸ್ಪಂದಿಸುವಂತಾಗಲಿ ಎಂದು ಹಾರೈಸಿ ಕುಟುಂಬಸ್ಥರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದೇಶದಲ್ಲಿ ಪ್ರಸ್ತುತ ಬಾಧಿಸುತ್ತಿರುವ ಕ್ಯಾನ್ಸರ್‌ಗಳ ಪಟ್ಟಿಯಲ್ಲಿ ಗರ್ಭಕಂಠದ ಕ್ಯಾನ್ಸರ್ ಎರಡನೇ ಸ್ಥಾನದಲ್ಲಿದ್ದು, ಪ್ರತಿ 8 ನಿಮಿಷಕ್ಕೆ ಒಬ್ಬ ಮಹಿಳೆ ಬಲಿಯಾಗುತ್ತಿದ್ದಾಳೆ ಎಂದು ಎ.ಜೆ. ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕಿ ಡಾ. ಮರಿಯಾ ನೆಲ್ಲಿಯನಿಲ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮೂಡುಬಿದಿರೆ ರೋಟರಿ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಂಡ ’ಗರ್ಭಕಂಠದ ಕ್ಯಾನ್ಸರ್ ಮತ್ತು ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ಬಗ್ಗೆ ಅರಿವುʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಚ್‌ಪಿವಿ ಸೋಂಕು ನಿಯಂತ್ರಣಕ್ಕಾಗಿ ದೇಶದಲ್ಲಿ ಶೇಕಡಾ 1ರಷ್ಟು ಜನ ಲಸಿಕೆ ಪಡೆದುಕೊಳ್ಳುತ್ತಿದ್ದು, ಶೇಕಡಾ 2ರಷ್ಟು ಜನ ಸ್ಕ್ರೀನಿಂಗ್‌ಗೆ ಒಳಪಟ್ಟಿದ್ದಾರೆ ಎಂದರು. ಎಚ್‌ಪಿವಿ ಸೋಂಕು ಮಾತ್ರವಲ್ಲದೇ ಧೂಮಪಾನ, ಅಸುರಕ್ಷಿತ ಲೈಂಗಿಕ ಕ್ರಿಯೆ, ಬಹು ಗರ್ಭಧಾರಣೆ ಇನ್ನಿತರ ಅಂಶಗಳು ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವಾಗುವ ಅಂಶಗಳೆಂದು ಹೇಳಲಾಗುತ್ತದೆ ಎಂದು ವಿಶ್ಲೇಷಿಸಿದರು. ಎಚ್‌ಪಿವಿ ಲಸಿಕೆಯಿಂದ ಮುಂಜಾಗ್ರತೆ ಹಾಗೂ ರಕ್ಷಣೆ ಸಿಗುತ್ತದೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಆರನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರತಿಶತಃ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ಜ್ವರ ರೋಗ ನಿಯಂತ್ರಣಕ್ಕೆ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 20 ರವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ಜಾನುವಾರುಗಳಿಕೆ ಲಸಿಕೆ ಹಾಕಿಸುವುದರೊಂದಿಗೆ, ಯಾವುದೇ ಜಾನುವಾರುಗಳು ಲಸಿಕೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದರು. ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಬಗ್ಗೆ ನಗರ, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಸ ವಿಲೇವಾರಿ ವಾಹನಗಳಲ್ಲಿ ಪ್ರಚಾರ ಕೈಗೊಂಡು, ಸಾರ್ವಜನಿಕರಿಗೆ ಲಸಿಕಾ ಕಾರ್ಯಕ್ರಮದ ಕುರಿತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಪಂಚಾಯತ್‌ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ) ಬೆಳಗಾವಿ, ಶಾಂತಿನಿಕೇತನ ಪದವಿ ಪೂರ್ವ ಕಾಲೇಜು, ಖಾನಾಪೂರ ಇವರ ಸಂಯುಕ್ತ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜಿನ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ 2024 – 25ರಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ. ಶ್ರೀನಿತಾ. ಎಸ್. ಕಾಮತ್ 53 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ, ಸ್ಕಂದ 97 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದು ಅಮೋಘ ಸಾಧನೆ ಮೆರೆದಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಹಾಗೂ ಕುಸ್ತಿ ಪಟು ಕೃಷ್ಣ ಮೊಗವೀರ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ಕಂಬಳ ಸಮಿತಿಯ ಸಹಕಾರದಲ್ಲಿ ಬಿಜೂರು ಗ್ರಾಮದ ಮಿಯ್ಯಾಣಿ ಕಾಡಿನತಾರು ಸೂರ್ಯ ಕಂಬಳೋತ್ಸವ ಸಂಭ್ರಮ ಸಡಗರದಲ್ಲಿ ನೆರವೇರಿತು. ಪ್ರಥಮದರ್ಜೆ ಗುತ್ತಿಗೆದಾರರಾದ ಗೋಕುಲ್ ಶೆಟ್ಟಿ ಕಂಬಳೋತ್ಸವ ಉದ್ಘಾಸಿದರು. ರಘುರಾಮ ಶೆಟ್ಟಿ ಬಿಜೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕಂಬಳದ ಆಯೋಜಕ ಸಂತೋಷ ಪೂಜಾರಿ ಕಾಡಿನತಾರು, ಬೈಂದೂರು ವಲಯ ಕಂಬಳ ಸಮಿತಿಯ ಉಪಾಧ್ಯಕ್ಷ ಪರಮೇಶ್ವರ ಭಟ್ ಬೋಳಂಬಳ್ಳಿ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭ ಹಿರಿಯ ಕಂಬಳ ಓಟಗಾರರಾದ ಹೆರಿಯ ದೇವಾಡಿಗ ಮೆಲ್‌ಮಿಯಾಣಿ, ಉದಯ ದೇವಾಡಿಗ ಮೇಲ್‌ಮಿಯಾಣಿ, ಆನಂದ ಪೂಜಾರಿ ಹರ್ಲಮಕ್ಕಿ, ಚಂದ್ರ ದೇವಾಡಿಗ ಮೇಲ್‌ಮಿಯಾಣಿ ಹಾಗೂ ವಾಸು ದೇವಾಡಿಗ ಮೇಲ್‌ಮಿಯಾಣಿ ಅವರನ್ನು ಸನ್ಮಾನಿಸಲಾಯಿತು. ಕಂಬಳೋತ್ಸವದಲ್ಲಿ ಸುಮಾರು 65ಕ್ಕೂ ಹೆಚ್ಚು ಜೊತೆ ಕೋಣಗಳು ಪಾಲ್ಗೊಂಡಿದ್ದವು. ಫಲಿತಾಂಶ: ಕಂಬಳೋತ್ಸವದಲ್ಲಿ ಹಗ್ಗ ಅತೀ ಕಿರಿಯ, ಹಗ್ಗ ಕಿರಿಯ, ಹಗ್ಗ ಹಿರಿಯ ಹಾಗೂ ಹಲಗೆ ಮುಕ್ತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಚಿನ್ಮಯಿ ಆಸ್ಪತ್ರೆಯ ಲೇಸರ್ ಎಂಡ್ ಕಾಸ್ಮೆಟೋಲಜಿ ವಿಭಾಗದಲ್ಲಿ ಹಾಲಿವುಡ್ ಸ್ಪೆಕ್ಟ್ರಾ ಎಂಬ ಅತ್ಯಾಧುನಿಕ ಲೇಸರ್ ಯಂತ್ರ ಅಳವಡಿಸಲಾಗಿದ್ದು ಅದರ ಉದ್ಘಾಟನೆಯನ್ನು ಐಎಂಎ ಕುಂದಾಪುರ ಘಟಕದ ಅಧ್ಯಕ್ಷೆ, ಖ್ಯಾತ ಪ್ರಸೂತಿ ತಜ್ಞೆ ಡಾ| ಪ್ರಮೀಳಾ ನಾಯಕ್ ಉದ್ಘಾಟಿಸಿ, ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ಸೇವೆಯನ್ನು ಶ್ಲಾಘಿಸಿದರು. ರೋಟರಿ ಜಿಲ್ಲಾ ಮಾಜಿ ಗವರ್ನರ್, ಖ್ಯಾತ ಉದ್ಯಮಿ ಅಭಿನಂದನ್ ಎ. ಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅಭಿನಂದನೆ ಸಲ್ಲಿಸಿದರು. ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ, ಖ್ಯಾತ ಚರ್ಮರೋಗ ತಜ್ಞ ಡಾ| ಉಮೇಶ ಪುತ್ರನ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತ್ವಚೆಯ ಆರೈಕೆಯಲ್ಲಿ ಲೇಸರ್ ಚಿಕಿತ್ಸೆ ಪರಿಣಾಮಕಾರಿಯಾಗಿದ್ದು, ಚರ್ಮದ ಸೌಂದರ್ಯ ವರ್ಧನೆಯಲ್ಲಿ ಅನುಕೂಲಕರ ವಾಗಿದೆ. ಎಂದು ನೂತನ ಲೇಸರ್ ಯಂತ್ರದ ಉಪಯುಕ್ತತೆಯನ್ನು ಡಾ| ಉಮೇಶ ಪುತ್ರನ್ ವಿವರಿಸಿದರು. ತಜ್ಞ ವೈದ್ಯರಾದ ಡಾ| ಬಾಲಕೃಷ್ಣ ಶೆಟ್ಟಿ, ಡಾ| ದಿನೇಶ ಶೆಟ್ಟಿ, ಡಾ| ಮೋಹನ ಕಾಮತ್, ಡಾ| ಶ್ರೀದೇವಿ ಕಟ್ಟೆ, ಡಾ| ಶೇಖರ, ಡಾ. ಲಕ್ಷ್ಮೀನಾರಾಯಣ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಂತರಾಷ್ಟ್ರೀಯ ಶಿಕ್ಷಕ ದಿನಾಚರಣೆ ಪ್ರಯುಕ್ತ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಗಂಗನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಪ್ರಭಾಕರ ಬಿಲ್ಲವ ಅವರಿಗೆ ಪ್ರದಾನ ಮಾಡಲಾಗಿದೆ. ಸವದತ್ತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಭಾಕರ ಬಿಲ್ಲವ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಗ್ರಾಮದ ಪ್ರತೀ ಮನೆಗಳ ಕಸಗಳನ್ನು ಸಂಗ್ರಹಿಸಿ ವಲೇ ಮಾಡಲು ಬೈಂದೂರು ಪಂಚಾಯತ್‌ ವ್ಯಾಪ್ತಿಯ ತಗ್ಗರ್ಸೆ ಗ್ರಾಮದ ಸ.ನಂ.176ರಲ್ಲಿ ಸುಮಾರು 8.06 ಎಕ್ರೆ ಸರ್ಕಾರಿ ಸ್ಥಳದಲ್ಲಿ ಸುಮಾರು 492.99 ಲಕ್ಷ ವೆಚ್ಚದಲ್ಲಿ ಘನತ್ಯಾಜ್ಯ ಸಂಸ್ಕರಣಾ ಮತ್ತು ವಿಲೇವಾರಿ ಘಟಕ ನಿರ್ಮಾಣವಾಗಲಿದೆ. ಇಲ್ಲಿ ಸಂಗ್ರಹಿಸಿದ ಕಸಗಳನ್ನು ವಿಂಗಡಿಸಿ (ಹಸಿ ಮತ್ತು ಒಣ) ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹೇಳಿದರು. ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಪಟ್ಟಣ ಪಂಚಾಯತ್‌ನ ಘಟಕ ನಿರ್ಮಾಣದ ಪ್ರಸ್ತಾವನೆಯಂತೆ ಯೋಜನೆಯ ಸಾಧಕ – ಬಾಧಕಗಳ ಚರ್ಚೆ ಕುರಿತು ನಡೆದ ಸಾರ್ವಜನಿಕ ಪರಿಸರ ಸಭೆಯಲ್ಲಿ ಮಾತನಡಿದರು. ಪ್ರಸ್ತುತ ಯೋಜನೆಯಲ್ಲಿ ಪರಿಸರ ಪರಿಣಾಮ ಮೌಲ್ಯ ಮಾಪನವು ಮುಖ್ಯವಾಗಿ ಪರಿಸರ ನಿರ್ವಹಣಾ ಯೋಜನೆಗೆ ಪ್ರಧಾನ ಒತ್ತು ನೀಡಲಾಗುತ್ತದೆ. ಸಭೆಗೆ ಆಗಮಿಸಿರುವ ಆಸಕ್ತ ಸ್ಥಳೀಯ ಸಾರ್ವಜನಿಕರ ಸಲಹೆ ಮತ್ತು ಅಭಿಪ್ರಾಯ ತಿಳಿದುಕೊಳ್ಳುವುದು ಒಂದು ಮುಖ್ಯ ಉದ್ದೇಶವಾಗಿರುವ ನೆಲೆಯಲ್ಲಿ ಈ ಸಭೆಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷದಂತೆ ಸದ್ಭಾವನಾ 2024 – ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನವೆಂಬರ್ 16 ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಪ್ರತಿವರ್ಷ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು, ಈ ಬಾರಿ ಕನ್ನಡ ನಾಡು ಕಂಡ ಶ್ರೇಷ್ಠ ಉದ್ಯಮಿ ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದೆ. ಪ್ರಶಸ್ತಿ 20 ಸಾವಿರ ಮೌಲ್ಯದ ಬೆಳ್ಳಿ ಫಲಕ, ನಗದು ಒಳಗೊಂಡಿದೆ. ಇದೇ ವೇಳೆ ಸ್ಥಳೀಯ ಸಾಧಕರಿಗೆ ವಿಶೇಷ ಅಭಿನಂದನೆಯನ್ನು ಸಲ್ಲಿಸಲಿದ್ದು , ವಿಶೇಷ ಪುರಸ್ಕಾರವನ್ನು ಪರಿಸರಸ್ನೇಹಿ ಸಂಘಟನೆ ಸ್ವಚ್ಛ ಬ್ರಿಗೇಡ್ ಕಾರ್ಕಳ ತಂಡಕ್ಕೆ ನೀಡಲಿದೆ. ಪ್ರತಿಭಾ ಪುರಸ್ಕಾರ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ವಿದ್ಯಾರ್ಥಿವೇತನ, ಸ್ಥಳೀಯ ಅಂಗನವಾಡಿಗೆ ಸಮವಸ್ತ್ರ, ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,  ಜಿಲ್ಲಾ ಏಡ್ಸ್  ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ರೆಡ್ ಕ್ರಾಸ್ ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಸಾರ್ವಜನಿಕ ಆಸ್ಪತ್ರೆ, ರೋಟರಿ ಕ್ಲಬ್ ಕುಂದಾಪುರ  ಸನ್ ರೈಸ್ ಇವರ ಸಹಯೋಗದಲ್ಲಿ “ವಿದ್ಯಾರ್ಥಿಗಳಲ್ಲಿ ಹೆಚ್.ಐ.ವಿ. ಏಡ್ಸ್ ವಿರುದ್ಧ ಜಾಗೃತಿ ಮತ್ತು ಅರಿವು ಮೂಡಿಸುವಿಕೆ” ಯು ಕುರಿತು ಬೀದಿನಾಟಕ ಪ್ರದರ್ಶನವು ಬುಧವಾರದಂದು ನಡೆಯಿತು. ಕಾರ್ಯಕ್ರಮವನ್ನು ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಇದರ ಅಧ್ಯಕ್ಷ ಜಯಕರ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕಾರ್ಯಕ್ರಮದ ಜಿಲ್ಲಾ ಮೇಲ್ವಿಚಾರಕರಾದ ಮಹಾಬಲೇಶ್ವರ, ಆಪ್ತ ಸಮಾಲೋಚಕರಾದ ಪ್ರಶಾಂತ್ ಶೆಟ್ಟಿ, ಆರ್ಟ್ ಕೇಂದ್ರ, ಕುಂದಾಪುರ ತಾಲುಕು ಆಸ್ಪತ್ರೆಯ ರಾಜು,  ಆಪ್ತ ಸಮಾಲೋಚಕರಾದ ನಳೀನಾಕ್ಷಿ, ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಇದರ ಅಧ್ಯಕ್ಷರಾದ ಪ್ರಶಾಂತ್…

Read More