ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಇಂಗ್ಲಿಷ್ ವಿಭಾಗ ಮತ್ತು ಐಕ್ಯೂಎಸಿ ಇವರ ಸಹಯೋಗದಲ್ಲಿ “ಅಧ್ಯಯನದೊಂದಿಗೆ ಸಾಮಾಜಿಕ ಬದುಕಿನ ಸಮತೋಲನ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಳಾವರ ವರದರಾಜ ಎಂ. ಶೆಟ್ಟಿ ಪ್ರಥಮ ದರ್ಜೆ ಸರ್ಕಾರಿ ಕಾಲೇಜು ಕೊಟೇಶ್ವರ ಇಲ್ಲಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ನಾಯಕ್ ಮಾತನಾಡಿ, ವಿದ್ಯಾರ್ಥಿ ಜೀವನ ಎನ್ನುವುದು ನಮ್ಮ ಭವಿಷ್ಯದ ನಿರ್ಮಾಪಕ. ವಿದ್ಯಾರ್ಥಿ ಜೀವನದಲ್ಲಿ ನಿರಂತರ ಅಧ್ಯಯನಶೀಲತೆಯು ಸಾಮಾಜಿಕವಾಗಿ ಸವಾಲುಗಳನ್ನು ಎದುರಿಸಲು ಅನುಕೂಲ ಮಾಡಿಕೊಡುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲಾ ಕೌಶಲಗಳ ಕಲಿಯುವಿಕೆಯು ನಾವು ಸಾಮಾಜಿಕವಾಗಿ ಉತ್ತಮ ಸ್ಥಾನ ಪಡೆಯಲು ಸಹಕಾರಿಯಾಗುತ್ತದೆ. ಈಗಾಗಲೇ ಯುನೆಸ್ಕೋ ಕೂಡ ಕೆಲವು ಅಂಶಗಳನ್ನು ಈ ನೆಲೆಯಲ್ಲಿ ಪಟ್ಟಿ ಮಾಡಿದೆ. ಹಾಗಾಗಿ ಅನೇಕ ಸವಾಲುಗಳನ್ನು ಎದುರಿಸುವುದಕ್ಕೆ ವಿದ್ಯಾರ್ಥಿ ತಯಾರಾಗಬೇಕು. ಹಾಗಿದ್ದಾಗ ಉನ್ನತ ಯಶಸ್ಸನ್ನು ಪಡೆಯಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ವಹಿಸಿದ್ದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೀರ ಮಾರುತಿ ಸೇವಾ ಟ್ರಸ್ಟ್ ಮೂಡುಬಿದರೆ ಹಾಗೂ ಯೋಗಶ್ರೀ ಯೋಗ ಬಳಗ ಮಂಗಳೂರು ಇವರ ಸಹಯೋಗದಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಶ್ರೀನಿಧಿ ಪ್ರಕಾಶ್ ಗೌಡ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಮೀಸಲಾತಿಯಿಂದಾಗಿ ನಮ್ಮ ಸಮುದಾಯ ಹಂತ ಹಂತವಾಗಿ ಪ್ರಗತಿ ಸಾಧಿಸುತ್ತಿದೆ. ಮರಾಟಿ ಸಮುದಾಯ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಶಿಕ್ಷಣ, ಆರೋಗ್ಯ ಹಾಗೂ ಸಂಘಟನೆಯ ಬಗ್ಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದು ಬೈಂದೂರು ವಲಯ ಮರಾಟಿ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಭೋಜ ನಾಯ್ಕ್ ಹೇಳಿದರು. ಅವರು ಗೋಳಿಹೊಳೆ ಮಹಿಷಾಮರ್ಧಿನಿ ಸಭಾಭವನದಲ್ಲಿ ಇತ್ತೀಚಿಗೆ ಜರುಗಿದ ಬೈಂದೂರು ವಲಯ ಮರಾಟಿ ಸಮಾಜ ಸುಧಾರಕ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮರಾಟಿ ಸಮುದಾಯದವರು ಸಂಘ ಸದಸ್ಯರಾಗುವ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಕೈಜೋಡಿಸಬೇಕಿದೆ. ಸಂಘಕ್ಕೆ ಸ್ವಂತ ನಿವೇಶನ ಹಾಗೂ ಕಟ್ಟಡ ನಿರ್ಮಿಸುವ ಪ್ರಸ್ತಾಪವಿದ್ದು ಈ ಬಗ್ಗೆ ಕ್ರಮವಹಿಸಲಾಗುವುದು ಎಂದರು. ಸಂಘದ ಗೌರವಾಧ್ಯಕ್ಷರಾದ ನಾರಾಯಣ ನಾಯ್ಕ್ ಬಾಚುಗುಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿರ್ದೇಶಕರುಗಳು ಉಪಸ್ಥಿತರಿದ್ದರು. ಈ ವೇಳೆ ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಲಿಂಗ ನಾಯ್ಕ್ ಜೋಗಿಜೆಡ್ಡು, ಯಕ್ಷಗಾನ ಕಲಾವಿದ ನಾರಾಯಣ ನಾಯ್ಕ್ ದೆಮ್ಮೇರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಇನ್ನೋವೇಶನ್ ಮತ್ತು ಎಂಟ್ರಪ್ರಿನಿಯರ್‌ಶಿಪ್ ಡೆವಲಪ್ಮೆಂಟ್ ಸೆಲ್ ಆಶ್ರಯದಲ್ಲಿ, ಭಾರತ ಕಂಡ ಶ್ರೇಷ್ಠ ಉದ್ಯಮಿ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಹಿನ್ನೆಲೆಯಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪ್ರಥಮ ಬಿ.ಕಾಂ. ವಿದ್ಯಾರ್ಥಿ ಕೃಷ್ಣ ಅವರು ರಚಿಸಿದ ಟಾಟ ಅವರ ಭಾವಚಿತ್ರಕ್ಕೆ ವಿದ್ಯಾರ್ಥಿಗಳೇ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಮಾತನಾಡಿ, ಟಾಟಾ ಅವರ ಮೌಲ್ಯಯುತ ಜೀವನ ಯುವ ಪೀಳಿಗೆಗೆ ದೇಶ ಕಟ್ಟುವಲ್ಲಿ ಮಾದರಿಯಾಗಲಿ ಎಂದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಆಶಯ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ಯಶವಂತ್ ಸ್ವಾಗತಿಸಿ, ಜ್ಯೋತಿಕಾ ವಂದಿಸಿ, ಚಂದನ ನಿರೂಪಿಸಿದರು. ರತನ್ ಟಾಟಾರವರ ಜೀವನ ಹಾಗೂ ನಡೆದು ಬಂದ ಹಾದಿಯನ್ನು ನಿದರ್ಶಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಸ್ತುತಿ ಪಡಿಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಸಹಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಅ.14ರ ಸೋಮವಾರ ಇಲ್ಲಿನ ಬಾರ್ ಮುಂಭಾಗದ ಫೈ ಓವರ್ ರಸ್ತೆಯಲ್ಲಿ ನಡೆದಿದೆ. ಅಬ್ದುಲ್ ಮುನೀರ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡಿರುವ ಸವಾರ ಅಬ್ದುಲ್ ನಝೀರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಉಪ್ಪುಂದದಿಂದ ಶಿರೂರಿಗೆ ಹೋಗುತ್ತಿದ್ದ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ರಸ್ತೆಯ ಮಧ್ಯದಲ್ಲಿರುವ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಅಬ್ದುಲ್ ಮುನೀರ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎನ್ನಲಾಗಿದೆ. ಈ ಘಟನೆಯ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT) ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಶನಲ್ ಕೆರಿಯರ್ ಸರ್ವಿಸ್ (NCS) ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ರಾಜಾಜಿನಗರದ ಕೆ.ಎಲ್.ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, ಇಲ್ಲಿ ಅಕ್ಟೋಬರ್ 20 ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿರುತ್ತದೆ. ಈ ಪ್ರಯುಕ್ತ ಎಲ್ಲಾ ರೀತಿಯ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ರಾಜ್ಯದ ಎಲ್ಲಾ ವಲಯಗಳಿಂದ 100 ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಾಧ್ಯಮ /ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದ್ದು ರಾಜ್ಯದ ಯುವಜನತೆಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಉದ್ಯೋಗಾಕಾಂಕ್ಷಿ ಹಾಗೂ ಉದ್ಯೋಗದಾತರು https://jobfair.calicut.nielit.in/ ಗೆ ಭೇಟಿ ನೀಡಿ ತಮ್ಮ ಸ್ವ -ವಿವರಗಳನ್ನು ಉಚಿತವಾಗಿ ನೋಂದಣಿ ಮಾಡಿಕೊಂಡು, ಮೇಳದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಇಂದಿನ ಕಾಲದಲ್ಲಿ ಅರ್ಥಪೂರ್ಣವಾದ ಶ್ರೇಷ್ಠ ಬದುಕನ್ನು ಬದುಕುವುದು ಸವಾಲಿನ ಕೆಲಸ. ಅಂತಹ ಸವಾಲನ್ನು ನಾವೆಲ್ಲ ಸ್ವೀಕರಿಸಬೇಕು ಎಂದು ಮಂಗಳೂರಿನ ಎಂಆರ್‌ಪಿಎಲ್- ಒಎನ್‌ಜಿಸಿ ಪ್ರಧಾನ ವ್ಯವಸ್ಥಾಪಕ (ಕಾರ್ಪೊರೇಟ್ ಸಂವಹನ) ಡಾ. ರೊಡಲ್ ನೊರಾನ್ಹಾ ಅಭಿಪ್ರಾಯಪಟ್ಟರು. ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ಕುವೆಂಪು ಸಭಾಂಗಣ ಮಂಗಳವಾರ ನಡೆದ ’ಸ್ಫಟಿಕ’ ವೇದಿಕೆಯ 2024-25ರ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮೊಳಗಿನ ಬ್ರಹ್ಮಾಂಡವನ್ನು ಅವಲೋಕಿಸುವ ರೀತಿಯಲ್ಲಿ ನಮ್ಮ ಮೌಲ್ಯಯುತ ಜೀವನ ನಿರ್ಧರಿತವಾಗಬೇಕು. ಸಾಮಾನ್ಯರಾಗಿ ಉಳಿಯುವವರು ಋಣಾತ್ಮಕ ವಿಚಾರಗಳಿಗೆ ಒತ್ತು ನೀಡಿದರೆ, ಅಸಾಮಾನ್ಯರು ಧನಾತ್ಮಕ ವಿಚಾರಗಳನ್ನು ಅನುಸರಿಸುತ್ತಾರೆ ಎಂದು ಅವರು ವಿವರಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಸಮಾಜ ಕಾರ್ಯವು ವಿದ್ಯಾರ್ಥಿಗಳಲ್ಲಿ ಅಂತರ್ಗತವಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ದೊರಕುವ ಹಲವಾರು ವಿಷಯಗಳನ್ನು ಸದುಪಯೋಗಗೊಳಿಸಬೇಕು ಎಂದು ಅವರು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಮನುಷ್ಯನ ಬಗ್ಗೆ ಯೋಚಿಸುವ ವೃತ್ತಿಯೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ದಸರಾ ಎಂದೇ ಖ್ಯಾತಿ ಪಡೆದ ಗಂಗೊಳ್ಳಿ ಸೇವಾ ಸಂಘ ಶ್ರೀ ಶಾರದೋತ್ಸವ ಸಮಿತಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವಕ್ಕೆ ಸೋಮವಾರ ಸಂಜೆ ತೆರೆ ಬಿದ್ದಿದೆ. ಶ್ರೀ ಶಾರದಾ ಮಹೋತ್ಸವದ ಸುವರ್ಣ ಮಹೋತ್ಸವ ಪ್ರಯುಕ್ತ ಈ ಬಾರಿಯ ಶ್ರೀ ಶಾರದಾ ಮಹೋತ್ಸವ ವಿಶೇಷ ಆಕರ್ಷಣೆ ಪಡೆದುಕೊಂಡಿತ್ತು. ವಿವಿಧ ಜಿಲ್ಲೆಗಳ ಕಲಾ ತಂಡಗಳು, ಆಕರ್ಷಕ ಸ್ತಬ್ಧಚಿತ್ರಗಳು, ಹುಲಿವೇಷ ತಂಡಗಳು ಶೋಭಾಯಾತ್ರೆಯ ಮೆರಗು ಹೆಚ್ಚಿಸಿದವು. ಗಂಗೊಳ್ಳಿಯ ಶ್ರೀ ಶಾರದಾ ಮಂಟಪದ ಬಳಿಯಿಂದ ಆರಂಭಗೊಂಡ ಶೋಭಾಯಾತ್ರೆಯು ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗೆ ಸಾಗಿ ಬಂದು ಅಲ್ಲಿಂದ ನಾಯಕವಾಡಿ ಸರ್ಕಲ್‌ವರೆಗೆ ಸಾಗಿ ಮರಳಿ ಗಂಗೊಳ್ಳಿ ಮುಖ್ಯರಸ್ತೆ ಮೂಲಕ ಸಾಗಿ ಬಂದು ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ ಕೊನೆಗೊಂಡಿತು. ಶೋಭಾಯಾತ್ರೆಯಲ್ಲಿ ನವದುರ್ಗೆಯರನ್ನು ಕಾಣಲು ಜನತೆ ಸಾವಿರಾರು ಸಂಖ್ಯೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದರು. ಕೇರಳದ ಆಕರ್ಷಕ ಚಂಡೆ ವಾದನ, ಡೊಳ್ಳು ಕುಣಿತ, ಗೊಂಬೆಗಳು, ಛದ್ಮವೇಷಗಳ ತಂಡ ಸೇರಿದಂತೆ ಹಲವು ವೇಷಗಳು ಅದ್ಭುತ ಪ್ರದರ್ಶನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.15: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆಯೆಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರುಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಬೇಕು. ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ಹಾಗೂ ಮರಗಳ ಕೆಳಗೆ ನಿಲ್ಲಬಾರದು. ಈ ಮೇಲ್ಕಂಡ ಅಂಶಗಳನ್ನು ಮಳೆಗಾಲದ ಎಲ್ಲಾ ಸಂದರ್ಭಗಳಲ್ಲಿ ಚಾಚುತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು. ತುರ್ತುಸೇವೆಗೆ ಶುಲ್ಕರಹಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡ ಘಟನೆ ಕೋಟದ ಮಣೂರಿನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿ ಉಡುಪಿ ಮೂಲದ ಗೌತಮ್ ಪಿ. ಪ್ರಭು (35) ಎಂದು ಗುರುತಿಸಲಾಗಿದೆ. ಇನ್ನೋವಾ ಕಾರಿನಲ್ಲಿ ಗಂಗೊಳ್ಳಿಯಿಂದ ಉಡುಪಿ ಕಡೆ ಹೋಗುತ್ತಿದ್ದ ವೇಳೆ ಕೋಟ ಮಣೂರು ಸಮೀಪ ಮುಂಬೈಯಿಂದ ಮಂಗಳೂರು ಹೋಗುತ್ತಿದ್ದ ಸರ್ಕಾರಿ ವೋಲ್ವೋ ಬಸ್ ಹಿಂದಿನಿಂದ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿಯಾಗಿದೆ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ನಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿದೆ. ಗಂಭೀರ ಗಾಯಗೊಂಡ ಕಾರು ಗೌತಮ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಸ್ಸಿನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯಗಳಾಗಿಲ್ಲ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
