ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ವ್ಯಾಪ್ತಿಯ ಮರವಂತೆ ಬಂದರು ಕಾಮಗಾರಿ, ಕೊಡೇರಿ ಕಿರುಬಂದರು ಮಂಜೂರು ಸೇರಿದಂತೆ ಇನ್ನಿತರ ಬೇಡಿಕೆಗೆ ಶೀಘ್ರ ಅನುಮತಿ, ಅನುಮೋದನೆ ನೀಡುವಂತೆ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಸರ್ಬಾನಂದ್ ಸೋನುವಾಲ್ ಅವರನ್ನು ಶುಕ್ರವಾರ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗರಿಗೆ ರೂ 85.00ಕೋಟಿ ಮಂಜೂರಾಗಿದ್ದು, ಸಿ.ಆರ್.ಝಡ್ ಕ್ಲಿಯರೆನ್ಸ್ ಮಾಡಿ ಆದಷ್ಟು ಬೇಗ ಕಾಮಗಾರಿ ಕೈಗೊಳ್ಳಲು ಅನುಕೂಲ ಮಾಡಿಬೇಕಾಗಿ ಕೋರಿದರು. ಉಪ್ಪುಂದದಲ್ಲಿ ದೋಣಿಗಳ ಸುರಕ್ಷಿತ ಇಳಿದಾಣಕ್ಕೆ ಬ್ರೇಕ್ ವಾಟರ್ ಹಾಗೂ ಕಿರು ಬಂದರು ಮಂಜೂರು ಮಾಡುವಂತೆ ಮನವಿ ಮಾಡಿದರು. ಬೈಂದೂರಿನಲ್ಲಿ ರೂ 228.78 ಕೋಟಿ ವೆಚ್ಚದಲ್ಲಿ ಮಲ್ಟಿ ಪರ್ಪಸ್ ಹಾರ್ಬಾರ್ ನಿರ್ಮಾಣ ಮಾಡಲು ಖಾಸಗಿ ಸಹಭಾಗಿತ್ವದಲ್ಲಿ ಟೆಂಡರ್ ಕರೆಯಲಾಗಿತ್ತು, ಆದರೆ ಯಾವುದೇ ಕಂಪನಿ ಸದರಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲಿಲ್ಲ. ಯೋಜನೆಗಳಿಗೆ ಬ್ರೇಕ್ವಾಟರ್ ಮತ್ತು ಬರ್ತಿಂಗ್ ಸೌಲಭ್ಯಗಳ ಮೇಲೆ ಹೆಚ್ಚಿನ ಬಂಡವಾಳ ವೆಚ್ಚದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿರುಗಾಳಿ ಸಹಿತ ಬುಧವಾರ ಬೆಳಗಿನ ಜಾವ ಸುರಿದ ಮಳೆಯಿಂದಾಗಿ ಉಳ್ಳೂರು 74 ಗ್ರಾಮದಲ್ಲಿ ಮನೆ ತೋಟಗಳಿಗೆ ಅಪಾರ ಹಾನಿ ಸಂಭವಿಸಿದೆ. ಬಿರುಗಾಳಿಯಿಂದಾಗಿ ಏಳು ಮನೆಗಳಿಗೆ ಹಾನಿ ಉಂಟಾಗಿದ್ದು, ಒಂದೂವರೆ ಸಾವಿರಕ್ಕೂ ಅಧಿಕ ಅಡಕೆ ಹಾಗೂ ತೆಂಗಿನ ಮರಗಳು ಧರೆಗುರುಳಿದೆ. ಉಳ್ಳೂರು 74 ಗ್ರಾಮದ ಜಯಕರ ಶೆಟ್ಟಿ ಮನೆಗೆ ಹಾನಿಯಾಗಿದ್ದು 2 ಲಕ್ಷ ನಷ್ಟವಾಗಿದೆ. ಪಾರ್ವತಿ ಶೆಡ್ತಿ ಮನೆಗೆ ಹಾನಿಯಾಗಿದ್ದು, 25 ಸಾವಿರ, ಸುಮತಿ ಶೆಡ್ತಿ 50 ಸಾವಿರ, ರತ್ನಾಕರ ಶೆಟ್ಟಿ ಮನೆಗೆ ಹಾನಿಯಾಗಿದ್ದು 20 ನಷ್ಟ ಉಂಟಾಗಿದೆ. ಕೃಷಿ ತೋಟದಲ್ಲಿನ ಫಸಲು ಭರಿತ ಅಡಕೆ- ತೆಂಗು ಮರಗಳು ನೆಲಕಚ್ಚಿದ್ದು, ಅಪಾರ ನಷ್ಟ ಸಂಭವಿಸಿದೆ. ಸುಧಾಕರ ಶೆಟ್ಟಿ ಅವರ 225 ಅಡಿಕೆ ಮರ, ಶಂಕರ ಶೆಟ್ಟಿ 150, ಮಹಾಬಲ ನಾಯ್ಕರ 40, ಉದಯ ಪೂಜಾರಿ ತೋಟದ 15 ಮರ, ವನಜ ಆಚಾರ್ತಿಯವರ 35, ರತ್ನ ಆಚಾರಿ 75, ಲಕ್ಷ್ಮೀನಾರಾಯಣ ಆಚಾರಿ 25, ಕೃಷ್ಣ ಆಚಾರಿ 20, ಪಾರ್ವತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಜೆಪಿ ಬೈಂದೂರು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಬುಧವಾರ ತ್ರಾಸಿ ಕೊಂಕಣ್ ಖಾರ್ವಿ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಉದ್ಘಾಟಿಸಿ ಮಾತನಾಡಿ, ಕಾರ್ಯಕರ್ತರಿಗೆ ಸಿದ್ದಾಂತ ಮತ್ತು ಬದ್ಧತೆ ಮುಖ್ಯ. ಜೊತೆಗೆ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕಾಗಿದೆ. ಕಾರ್ಯಕರ್ತನ ಜೊತೆಗಿದ್ದು ಪಕ್ಷವನ್ನು ಸಂಘಟಿಸುವ ಕೆಲಸವಾಗಬೇಕು. ಈ ವರ್ಷದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಸಿಕ್ಕಿಲ್ಲ ಎಂದು ಹೇಳಿದರು. ಬೈಂದೂರು ಮಂಡಲ ದೀಪಕ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಮುಂದಿನ ಮೂರು ತಿಂಗಳ ಅವಧಿಗೆ ಪಕ್ಷದ ಕಾರ್ಯ ಯೋಜನೆಗಳು ಮತ್ತು ಹೋರಾಟಗಳ ಬಗ್ಗೆ ಚರ್ಚಿಸಲು ಸಭೆ ನಡೆಸುತ್ತೇವೆ. ಕಾರ್ಯಕರ್ತರು ತಮ್ಮ ಗ್ರಾಮಗಳಲ್ಲಿ ಪಕ್ಷದ ಕೆಲಸವನ್ನ ಮಾಡುವ ನಿಟ್ಟಿನಲ್ಲಿ ಶ್ರಮಿಸಬೇಕು. ತಮ್ಮ ತಮ್ಮ ಗ್ರಾಮಗಳಲ್ಲಿ ಆಗಬೇಕಾದಂತ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಆನಂದ ಖಾರ್ವಿ, ಜಿಲ್ಲಾ ಕಾರ್ಯದರ್ಶಿ ಮಾಲತಿ ನಾಯಕ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.02: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆಯಾಗಿದೆ. ಸೋಮವಾರ ಸಮುದ್ರದಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿದ್ದ ಪಟ್ಟೆಬಲೆ ದೋಣಿಯಲ್ಲಿ ಒಟ್ಟು ಎಂಟು ಮಂದಿ ಮೀನುಗಾರರಿದ್ದು, ಈ ಪೈಕಿ ಆರು ಮಂದಿ ಈಜಿ ದಡ ಸೇರಿದ್ದರು. ನಾಗೇಶ್ ಬಾಬು ಖಾರ್ವಿ ಎಂಬವವರು ದುರಂತ ನಡೆದು ಕೆಲಹೊತ್ತಿನಲ್ಲಿಯೇ ಮೃತಪಟ್ಟಿದ್ದರು. ಸತೀಶ್ ಖಾರ್ವಿ ನಾಪತ್ತೆಯಾಗಿದ್ದರು. ಮಂಗಳವಾರ ರಾತ್ರಿ ಕೊಡೇರಿ ಬಂದರು ಸಿ ವಾಕ್ ಬಲಬದಿಯಲ್ಲಿ ಸತೀಶ್ ಖಾರ್ವಿ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಮೀನುಗಾರಿಕಾ ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ ವಿತರಿಸಿದ್ದರು. ಹಾನಿಗೀಡಾದ ದೋಣಿಗೆ 1 ಲಕ್ಷ ರೂ ಪರಿಹಾರ ಒದಗಿಸುವ ಭರವಸೆ ನೀಡಲಾಗಿತ್ತು. ಇದನ್ನೂ ಓದಿ:► ಕರ್ಕಿಕಳಿ ದೋಣಿ ದುರಂತ: ಘಟನಾ ಸ್ಥಳಕ್ಕೆ ಮೀನುಗಾರಿಕಾ ಸಚಿವರು, ಶಾಸಕರ ಭೇಟಿ – https://kundapraa.com/?p=68163 .►…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.01: ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 211 ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿ ಡಿಐಜಿ ಆದೇಶ ಹೊರಡಿಸಿದ್ದಾರೆ. ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಅವರ ಅವರ ಸ್ಥಾನಕ್ಕೆ ಮಂಗಳೂರು ಸಿಟಿ ಸೆನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸವಿತ್ರತೇಜ್ ಅವರನ್ನು ಬೈಂದೂರು ಠಾಣೆಗೆ ವರ್ಗಾವಣೆಗೊಳಿಸಲಾಗಿದೆ. ಬೈಂದೂರು ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಅವರು ನೂತನ ಸ್ಥಳದ ನಿರೀಕ್ಷೆಯಲ್ಲಿದ್ದು, ಆದೇಶ ಕಾಯ್ದಿರಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜನರ ತೆರಿಗೆ ಹಣದಿಂದ ಅಧಿಕಾರಿಗಳಿಗೆ ಸ್ಥಾನ ಮಾನ ಸಂಬಳ ಸವಲತ್ತುಗಳು ಸಿಗುವುದು. ಜಿಲ್ಲಾ ಮಟ್ಟದ ಅಧಿಕಾರಿಗಳು ಕಛೇರಿಯಲ್ಲಿ ಕುಳಿತುಕೊಳ್ಳುವುದಷ್ಟೇ ಅಲ್ಲದೇ ಸ್ಥಳಕ್ಕೆ ಭೇಟಿ ನೀಡಬೇಕು. ಅಧಿಕಾರಿಗಳು ನಿಲಕ್ಷ್ಯ, ಉದಾಸೀನ ತೋರಿಸಿದರೆ ಜನರಿಗೆ ಸ್ಪಂದಿಸದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲ. ಜನ ಸ್ಪಂದನೆಗೆ ಸಿದ್ದರಿಲ್ಲದವರು ಸ್ಥಾನ ತ್ಯಾಗ ಮಾಡಿ. ಜನಸ್ಪಂದನೆಗೆ ಸಾಕಷ್ಟು ಅಧಿಕಾರಿಗಳು ಇದ್ದಾರೆ ಎಂದು ಸಿಎಂ. ಸಿದ್ಧರಾಮಯ್ಯ ಗುಡುಗಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಪಂ.ನ ಡಾ| ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಸೋಮವಾರ ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಪ್ರಕೃತಿ ವಿಕೋಪ ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲಾ ರಕ್ಷಣಾಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಬೇಕು. ದೂರುಗಳು ಬಂದಾಗ ಮೊದಲು ಎಫ್ಐಆರ್ ದಾಖಲಿಸಿಕೊಳ್ಳಿ ಎಂದು ಸಲಹೆ ನೀಡಿದರು. ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿ ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ ರಾಜಕಾರಣ ಚುನಾವಣೆ ವೇಳೆ ಮಾತ್ರ ಎಂದರು. ಆರೋಗ್ಯ ಸೂಚ್ಯಂಕದಲ್ಲಿ ಕುಸಿತಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮಂಗಳವಾರ ಭೇಟಿ ನೀಡಿ ಸಾಂತ್ವಾನ ಹೇಳಿದರು. ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ದೋಣಿ ದುರಂತದ ಬಗ್ಗೆ ನೋವಿದೆ. ಮೀನುಗಾರ ಕುಟುಂಬಕ್ಕೆ 24 ಗಂಟೆಯೊಳಗೆ ಸಂಕಷ್ಟ ಪರಿಹಾರ ನಿಧಿ ದೊರಕಿಸಿಕೊಡಬೇಕೆಂಬುದು ಶ್ರಮವಹಿಸಿದ್ದು, ಮೃತ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ಚೆಕ್ ಹಸ್ತಾಂತರಿಸಲಾಗುತ್ತಿದೆ. ಕೊಡೇರಿ ಬಂದರಿನ ಎರಡು ಬದಿಯಲ್ಲಿ 250 ಮೀಟರ್ ಬ್ರೇಕ್ ವಾಟರ್ ವಿಸ್ತರಿಸುವ ಬಗ್ಗೆ ಶಾಸಕರು ಹಾಗೂ ಮಾಜಿ ಶಾಸಕರು ಬೇಡಿಕೆ ಇರಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕಾಮಗಾರಿ ಅನುಷ್ಠಾನಗೊಳಿಸುವ ಬಗ್ಗೆ ಕ್ರಮವಹಿಸಲಾಗುವುದು ಎಂದರು. ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಡಿಪಿಆರ್ ತಯಾರು ಮಾಡಲಾಗುತ್ತಿದೆ. ಹಂತಹಂತವಾಗಿ ಕಾಮಗಾರಿ ಮಾಡಲಾಗುವುದು ಆದರೆ ಅದಕ್ಕೂ ಮೊದಲು ಬಂದರು ಬ್ರೇಕ್ವಾಟರ್ ವಿಸ್ತರಣೆ ಕಾಮಗಾರಿಯನ್ನು ಮಾಡಲಾಗುವುದು. ಮರವಂತೆ ಬಂದರಿನಂತೆ ಒಟ್ಟು 28 ಕಾಮಗಾರಿಗಳು ಸಿಆರ್ಝಡ್ ನೆಪವೊಟ್ಟು ಸ್ಥಗಿತಗೊಂಡಿದೆ. ಸಿಆರ್ಝಡ್ ಸಮಸ್ಯೆ ನಿವಾರಿಸಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಅಗತ್ಯವಿರುವ ಮೊಬೈಲ್ ಟವರ್ ಹಾಗೂ ಹೆಚ್ಚಿನ ರೈಲು ನಿಲುಗಡೆಗೆ ಸಂಬಂಧಿಸಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ದೂರಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಮಂಗಳವಾರ ಭೇಟಿಯಾಗಿ ಮನವಿ ಸಲ್ಲಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಅಗತ್ಯವಿರುವ ಬಿ.ಎಸ್.ಎನ್.ಎಲ್ ಮೊಬೈಲ್ ಟವರ್ ಮಂಜೂರಾತಿಗೆ ಹಾಗೂ ಬೈಂದೂರು, ಶಿರೂರು, ಬಿಜೂರು ಹಾಗೂ ಸೇನಾಪುರ ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ರೈಲುಗಳು ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಸಂಸದರ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿಯ ಕಾಲೇಜೊಂದರಲ್ಲಿ ನಡೆದ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಉಡುಪಿ ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ ಸಂದರ್ಭ ಪಡುಬಿದ್ರಿಯಲ್ಲಿ ಕಡಲ್ಕೊರೆತದಿಂದ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ಬಳಿಕ ಮಾತನಾಡಿದರು. ವೀಡಿಯೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್.ಐ.ಆರ್ ಆಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದಾರೆ. ಈ ಹೊತ್ತಿನಲ್ಲಿ ಎಸ್ಐಟಿ ಪ್ರಶ್ನೆ ಉದ್ಭವಿಸುವುದಿಲ್ಲ. ತನಿಕೆಯ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ. ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಯ ವೇತನ ಬಿಡುಗಡೆಯಾಗದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಈ ಬಗ್ಗೆ ಮಾಹಿತಿ ಇಲ್ಲ. ಕೂಡಲೇ ಹಣಕಾಸು ಇಲಾಖೆಗೆ ಸೂಚನೆ ನೀಡಲಾಗುವುದು ಎಂದರು. ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರದ ಯೋಜನೆ:ಕರಾವಳಿಯಲ್ಲಿ ಕಡಲ್ಕೊರೆತ ತಡೆ ಕುರಿತಂತೆ ಶಾಶ್ವತ ಪರಿಹಾರ ಒದಗಿಸಲು ಕ್ರಿಯಾ ಯೋಜನೆ ರೂಪಿಸಲಾಗುವುದು, ಇದಕ್ಕೆ ಎಷ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.01: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತದಲ್ಲಿ ಓರ್ವ ಮೀನುಗಾರ ಮೃತಪಟ್ಟು, ಇನ್ನೋರ್ವ ನಾಪತ್ತೆಯಾಗಿದ್ದಾನೆ. ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಮೀನುಗಾರರಿಂದ ಘಟನೆಯ ಮಾಹಿತಿ ಪಡೆದುಕೊಂಡದರು. ಈ ವೇಳೆ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬಿ.ಎಸ್. ಸುರೇಶ್ ಶೆಟ್ಟಿ, ಮೀನುಗಾರ ಮುಖಂಡರಾದ ಆನಂದ ಖಾರ್ವಿ, ಜಗನ್ನಾಥ ಮೊಗವೀರ, ಬಿಎಚ್ಪಿ ನಾಗರಾಜ ಖಾರ್ವಿ, ಪ್ರಜ್ವಲ್ ಶೆಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಪಟ್ಟೆಬಲೆ ದೋಣಿಯ ಮೂಲಕ ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಅವಘಡ ಸಂಭವಿಸಿತ್ತು. ಸಮುದ್ರದಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದು ದುರಂತ ನಡೆದಿದ್ದು, ದೋಣಿಯಡಿಗೆ ಸಿಲುಕಿದ್ದ ನಾಗೇಶ್ ಬಾಬು ಖಾರ್ವಿ [30] ಎಂಬುವವರನ್ನು ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ. ಸತೀಶ್ ಖಾರ್ವಿ [34] ಎಂಬುವವರು ನಾಪತ್ತೆಯಾಗಿದ್ದು ಹುಡುಕಾಟ ನಡೆಸಲಾಗುತ್ತಿದೆ. ಉಪ್ಪುಂದದ ಸಚಿನ್ ಖಾರ್ವಿ ಎಂಬುವವರಿಗೆ ಸೇರಿದ ಮಾಸ್ತಿ ಮರ್ಲಿಚಿಕ್ಕು ಪ್ರಸಾದ ಹೆಸರಿನ…
