Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯ ನಡೆಸಿದ 2024ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ತನಿಶಾ ಎ. ಪೂಜಾರಿ ನಾಯಕವಾಡಿ ಅವರು ಕರ್ನಾಟಕ ಶಾಸ್ತ್ರೀಯ ಸಂಗೀತ ಕಿರಿಯ ದರ್ಜೆ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ಲಾವಣ್ಯ ಶೆಟ್ಟಿಗಾರ್ ಅವರ ಶಿಷ್ಯೆಯಾಗಿದ್ದು, ನಾಯಕವಾಡಿಯ ಅಶೋಕ ಎನ್. ಪೂಜಾರಿ ಮತ್ತು ಶೋಭಾ ದಂಪತಿಯ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತ್ರಾಸಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಸ್ಥಳೀಯ ನಿವಾಸಿ ಗೌರಿ ಶೆಟ್ಟಿಗಾರ್‌ (60) ಅವರಿಗೆ ಕಾರು ಢಿಕ್ಕಿಯಾಗಿ ಗುರುವಾರದಂದು ಗಂಭೀರ ಗಾಯಗೊಂಡಿದ್ದಾರೆ. ಕಾರು ಬೈಂದೂರು ಕಡೆಯಿಂದ ಕುಂದಾಪುರದ ಕಡೆಯಿಂದ ವೇಗವಾಗಿ ಸಂಚರಿಸುತ್ತಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಗಂಗೊಳ್ಳಿಯ 24×7 ಆ್ಯಂಬುಲೆನ್ಸ್‌ನ ಇಬ್ರಾಹಿಂ ಗಂಗೊಳ್ಳಿ ಅವರು ಧಾವಿಸಿ ಗಾಯಾಳುವನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ದೃಶ್ಯಾವಳಿ ಮಳಿಗೆಯೊಂದರ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರು ನಡೆಸಿದ 20ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥಮೆಟಿಕ್ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಪ್ರಶ್ಮಾ ಶೆಟ್ಟಿ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ  ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ನಮೃತಾ ಎಸ್. ಪೂಜಾರಿ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ನಮೃತಾ ಎಸ್. ಪೂಜಾರಿ, ಗಂಗೊಳ್ಳಿಯ ಸುರೇಶ ಪೂಜಾರಿ ಹಾಗೂ ಜ್ಯೋತಿ ದಂಪತಿ ಪುತ್ರ. ಈಕೆಗೆ ಶಿಕ್ಷಕಿ ಸುನೀತಾ ಅವರು ತರಬೇತಿ ನೀಡಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ ಉಚಿತ ಹೊಲಿಗೆ ತರಬೇತಿ ಶಿಬಿರದ ಉದ್ಘಾಟನೆಯು ಗಂಗೊಳ್ಳಿಯ ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆಯ ಟಿ. ವಿಮಲಾ ವಿ. ಪೈ ಸಭಾಂಗಣದಲ್ಲಿ ನಡೆಯಿತು. ರೋಟರಿ ಜಿಲ್ಲೆ 3182ರ ವಲಯ-2ರ ಅಸಿಸ್ಟೆಂಟ್ ಗವರ್ನರ್ ಮಮತಾ ಆರ್. ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ್ ವಹಿಸಿದ್ದರು. ಸಂಪನ್ಮೂಲ ಶಿಕ್ಷಕರಾದ ಶಾಂತಿ ಖಾರ್ವಿ, ಶಾಲಾ ಮುಖ್ಯ ಶಿಕ್ಷಕ ಜಿ. ವಿಶ್ವನಾಥ್ ಭಟ್, ಕ್ಲಬ್‌ನ ಖಜಾಂಚಿ ಜನಾರ್ಧನ್ ಪೂಜಾರಿ ಪೆರಾಜೆ ಹಾಗೂ ರೋಟರಿ ರೋಟರಿ ಸದಸ್ಯರು ಮತ್ತು ಶಿಬಿರಾರ್ಥಿಗಳು ಉಪಸಿತರಿದ್ದರು. ರೋಟರಿ ಸದಸ್ಯೆ ಫಿಲೋಮಿನಾ ಫೆನಾಂಡಿಸ್ ಕಾರ್ಯಕ್ರಮ ನಿರೂಪಿಸಿ, ಕೃಷ್ಣ ಪೂಜಾರಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಅನ್ಸನ್ ಫೇರ್ನಾಂಡಿಸ್ ಗಂಗೊಳ್ಳಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ.   ಗಂಗೊಳ್ಳಿಯ ಸ್ಟೇಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿಯಾಗಿರುವ ಅನ್ಸನ್ ಫೇರ್ನಾoಡಿಸ್, ಪ್ರವೀಣ್ ಫೇರ್ನಾoಡಿಸ್ ಹಾಗೂ ಮೊಂತಿನ್ ಫೇರ್ನಾಂಡಿಸ್ ದಂಪತಿಯ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2025ರ ಪ್ರಯುಕ್ತ ಕುಂದಾಪುರ ಸಂಚಾರ ಪೋಲಿಸ್ ಠಾಣಾ ವತಿಯಿಂದ ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಆಯೋಜಿಸಲಾಯಿತು. ಕುಂದಾಪರ ಸಂಚಾರ ಪೋಲಿಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಸುರೇಶ್ ಕೆ. ಅವರು ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ಮಾಹಿತಿ ನೀಡಿದರು. ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಅವರು ಸರ್ವರನ್ನು ಸ್ವಾಗತಿಸಿ, ವಂದನಾರ್ಪಣೆ ಗೈದರು. ಈ ಸಮಾರಂಭದಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ರಾದ ನರೇಶ್ ಹಾಗೂ ನಾಗಪ್ಪ ಅವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೇವಾ ಚೇತನ ಟ್ರಸ್ಟ್ ರಿ. ಮೂಡುಬಗೆ ಅಂಪಾರು ಇದರ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಅಂಪಾರು ಮೂಡುಬಗೆ ಶಾನ್ಕಟ್ಟು ಮೈದಾನದಲ್ಲಿ ನಡೆದ ‘ನಮ್ಮೂರ ಸಂಭ್ರಮ’ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಚಿಂತಕ, ವಾಗ್ಮಿ ಪ್ರಾಧ್ಯಾಪಕ ಕುಂದಾಪುರದ ಡಾ. ಬಿ. ಬಿ .ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಅವರಿಗೆ 2024ರ ನಮ್ಮೂರ ‘ಶಿಕ್ಷಣ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಿರಿಯ ಉದ್ಯಮಿ ಆನಗಳ್ಳಿ ಕರುಣಾಕರ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಿದರು. ಸೌತ್ ಫೀಲ್ಡ್ ಪೇಂಟ್ಸ್‌ನ ಆಡಳಿತ ನಿರ್ದೇಶಕ ಎಸ್.ಎಸ್. ಹೆಗ್ಡೆ ನಮ್ಮೂರ ಸಂಭ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಸಿ.ಎ. ಅಶೋಕ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಅಧ್ಯಕ್ಷರಾದ ಸುಗ್ಗಿ ಸುಧಾಕರ ಶೆಟ್ಟಿ, ಆಸ್ಟ್ರೇಲಿಯಾದ ಉದ್ಯಮಿ ಆಜ್ರಿ ತಗ್ಗು೦ಜೆ ಮನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಕೆಎಂಸಿ ಮಣಿಪಾಲ ಇದರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸೆ ಶಿಬಿರ ಗಂಗೊಳ್ಳಿ ಎಸ್.ವಿ. ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ಒಳಾಂಗಣ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಗಂಗೊಳ್ಳಿ ರೋಟರಿ ಕ್ಲಬ್‌ನ ಹಿರಿಯ ಸದಸ್ಯ ಉದಯಶಂಕರ ರಾವ್ ಶಿಬಿರವನ್ನು ಉದ್ಘಾಟಿಸಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲದ ತಜ್ಞ ವೈದ್ಯ ಡಾ.ಯಥಾರ್ಥ್ ಕಣ್ಣಿನ ಆರೋಗ್ಯ ಹಾಗೂ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಚಂದ್ರಕಲಾ ಎಸ್. ತಾಂಡೇಲ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ ವಂದಿಸಿದರು. ಮಾಜಿ ಅಧ್ಯಕ್ಷ ಕೆ. ರಾಮನಾಥ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ಸುಮಾರು 158 ಶಿಬಿರಾರ್ಥಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಹಿಳೆಯೋರ್ವರು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಕೂರು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬಳ್ಕೂರು ಸಮೀಪದ ಬಿ.ಹೆಚ್. ರೋಡ್‌ ನಿವಾಸಿ ವಿನಯ್ ಭಂಡಾರಿ ಎಂಬುವರ ಪತ್ನಿ ಶ್ರುತಿ (39) ಎಂದು ಗುರುತಿಸಲಾಗಿದೆ. ಹೇರ್‌ ಸೆಲೂನ್‌ ನಡೆಸುತ್ತಿದ್ದು ವಿನಯ್‌ ಅವರ ಪತ್ನಿ ಶ್ರುತಿ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬಿಕರಿಗೆ ಆಘಾತವನ್ನುಂಟುಮಾಡಿದೆ. ಕೆಲ ವರ್ಷಗಳ ಹಿಂದೆ ಅವರು ಪ್ರೀತಿಸಿ ಮದುವೆಯಾಗಿದ್ದು, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹೊಸದಾಗಿ ಖರೀದಿ ಮಾಡಿದ್ದ ಜಾಗದ ನೊಂದಣಿಗಾಗಿ ಶೃತಿ ಹಾಗೂ ವಿನಯ್‌ ಇಬ್ಬರೂ ಕುಂದಾಪುರಕ್ಕೆ ಹೋಗಿ ಮನೆಗೆ ಮರಳಿದ್ದು, ಬಳಿಕ ವಿನಯ್‌ ಅವರು ಕೆಲಸಕ್ಕೆ ತೆರಳಿದ್ದರು. ಜಾಗದ ಮಾಲಕರಿಗೆ ಹಣ ನೀಡಲು ಶ್ರುತಿ ಅವರ ಖಾತೆಯಿಂದ ಚೆಕ್‌ ನೀಡಲಾಗಿತ್ತು. ಅವರು ಚೆಕ್‌ ವಿತ್‌ ಡ್ರಾ ಮಾಡುವ ವೇಳೆಗೆ ಸ್ವಲ್ಪ ಹಣ ಕಡಿಮೆ ಇರುವುದಾಗಿ ತಿಳಿಸಿದ್ದರು. ಅದನ್ನು ಪರೀಕ್ಷಿಸುವ ಸಲುವಾಗಿ ಶ್ರುತಿ ಅವರು ಕಂಡ್ಕೂರಿನ ಬ್ಯಾಂಕಿಗೆ ಸ್ಕೂಟಿಯಲ್ಲಿ ತೆರಳಿದ್ದರು. ಆದರೆ ಸ್ವಲ್ಪ ಹೊತ್ತಿನ ಬಳಿಕ…

Read More