Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭ ಕ್ರಿಯೇಟಿವ್ ಆವಿರ್ಭವವು “ವಿವಿಧತೆಯಲ್ಲಿ ಏಕತೆ” ಎಂಬ ಪರಿಕಲ್ಪನೆಯೊಂದಿಗೆ ಬಹಳ ವೈಭವಪೂರ್ಣವಾಗಿ ಮೂಡಿಬಂದಿತು. ಪ್ರೇಮಕವಿ ಎಂದೇ ಕರೆಯಲ್ಪಡುವ ಖ್ಯಾತ ಸಾಹಿತಿಗಳಾದ ಬಿ. ಆರ್. ಲಕ್ಷ್ಮಣರಾವ್ ಹಾಗೂ ನಡೆದಾಡುವ ಗ್ರಂಥಾಲಯ ಎಂದೇ ಪ್ರಸಿದ್ಧರಾದ ಡಾ. ಸೋಮೇಶ್ವರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳ ಸಮ್ಮುಖದಲ್ಲಿ ಎರಡು ಹಂತಗಳಲ್ಲಿ ಸಂವಾದ ಕಾರ್ಯಕ್ರಮವು ಖ್ಯಾತ ನಿರೂಪಕ ಅವಿನಾಶ್ ಕಾಮತ್ ಅವರ ಮುಖೇನ ನಡೆಸಲ್ಪಟ್ಟಿತು. ” ಕವಿತೆ ಹುಟ್ಟುವ ಸಮಯ “ಸಂವಾದ ಕಾರ್ಯಕ್ರಮದಲ್ಲಿ ಬಿ. ಆರ್. ಲಕ್ಷ್ಮಣರಾವ್ ಅವರು ಸಂವಾದ ನಡೆಸುತ್ತಾ ವಿದ್ಯಾರ್ಥಿ ಸಮೂಹವನ್ನುದ್ದೇಶಿಸಿ ಹಾಡುಗಳ ನಿರಂತರತೆಗೆ ಕಾರಣ ಮುಂದಿನ ಪೀಳಿಗೆಯಾಗಿರುವ ವಿದ್ಯಾರ್ಥಿಗಳು ಎಂದರು. ಮಜಾ ಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿಂದ ಬಿ ಆರ್ ಲಕ್ಷ್ಮಣರಾವ್ ವಿರಚಿತ ಕವಿತೆಗಳ ಗಾಯನ ಕಾರ್ಯಕ್ರಮ ಜರುಗಿತು. ಪ್ರಖ್ಯಾತ ವೈದ್ಯ, ಕ್ವಿಜ್ ಮಾಸ್ಟರ್, ಲೇಖಕರು ಹಾಗೂ ಅಂಕಣಕಾರರಾದ ಡಾ. ನಾ ಸೋಮೇಶ್ವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪ್ರತಿಯೊಂದು ಸರ್ಕಾರಿ ಶಾಲೆಗಳು ಉನ್ನತ ಮಟ್ಟಕ್ಕೇರಬೇಕಾದರೆ ಆ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಹಾಗೆಯೇ ಈ ಶಾಲೆಯಲ್ಲಿಯೂ ಕೂಡ ಹಳೆವಿದ್ಯಾರ್ಥಿಗಳು ದಾನಿಗಳ ಸಹಕಾರದಿಂದ ಸುಮಾರು ರೂ.15 ಲಕ್ಷದ ವೆಚ್ಚದಲ್ಲಿ ಸಭಾಭವನವನ್ನು ನಿರ್ಮಿಸುವ ಮೂಲಕ ಇತರರಿಗೂ ಮಾದರಿಯಾಗಿದ್ಧಿರಿ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.  ರಾಗಿಹಕ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಮತ್ತು ನೂತನ ಸಭಾಂಗಣ ಉದ್ಘಾಟಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಮಕ್ಕಳಿಗೆ ವಾಹನ ವ್ಯವಸ್ಥೆ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ವಿವಿಧ ಯೋಜನೆ ರೂಪಿಸಿರುವುದು ಕೂಡ ಶ್ಲಾಘನೀಯ ಎಂದರು. ಎಸ್‌ಡಿಎಂಸಿ ಅಧ್ಯಕ್ಷ ರವಿ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ದಾನಿಗಳಿಗೆ ಮತ್ತು ಈ ಹಿಂದೆ ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಸನ್ಮಾನಿಸಲಾಯಿತು.. ಕಲಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ರವೀಂದ್ರ ಪೂಜಾರಿ ಮತ್ತು ತಂಡದವರು ಪ್ರೋತ್ಸಾಹ ಧನವನ್ನು ನೀಡಿ ಗೌರವಿಸಿದರು. ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಹಳೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ದೇಶವು ಅಭಿವೃದ್ಧಿ ಪಥದಲ್ಲಿ ಹೆಜ್ಜೆ ಇಡಬೇಕಾದರೆ ಮಹಿಳಾ ಶಕ್ತಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇಂದಿನ ದಿನಮಾನಗಳಲ್ಲಿ ಸಂಘಟನೆಗಳ ಮೂಲಕ ಮಹಿಳೆಯರು ಒಗ್ಗೂಡಿ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಎಲ್ಲಾ ಮಹಿಳೆಯರಿಗೂ ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗೆಗಿನ ಅರಿವು ಅತೀ ಅಗತ್ಯ. ಅಂತಹ ಅರಿವು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹುಟ್ಟು ಹಾಕುತ್ತದೆ ಎಂದು ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಅವರು ನಾಗೂರು ಶಾಂತೇರಿ ಕಾಮಾಕ್ಷಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರದಂದು ನಡೆದ ಜೆಸಿಐ ಉಪ್ಪುಂದ ಸುಪ್ರಿಂ ಘಟಕದ 2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಗಂಡು ಹೆಣ್ಣು ಎಂಬ ಭೇಧವಲ್ಲದೇ ಪ್ರತಿಯೊಬ್ಬರಲ್ಲಯೂ ಕೂಡ ಒಂದೊಂದು ವಿಶೇಷ ಶಕ್ತಿಯಿದ್ದು, ಅಭಿವೃದ್ಧಿಗೆ ಪೂರಕವಾಗಿ ಮಾನವ ಸಂಪನ್ಮೂಲ ಬಳಸಿಕೊಳ್ಳಬೇಕಿದೆ ಎಂದು ಅವರು ಹೇಳಿದರು. ನಿರ್ಗಮಿತ ಅಧ್ಯಕ್ಷೆ ಸುಮಾ ಆಚಾರ್ ಸ್ವಾಗತಿಸಿ, ಗತವರ್ಷದ ವರದಿ ಮಂಡಿಸಿ, 2025ನೇ ಸಾಲಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರುಗಳು ಸರಿಯಾದ ಮಾಹಿತಿಯೊಂದಿಗೆ ಪಟ್ಟಿಯಲ್ಲಿ ಇವೆಯೇ ಎಂಬುದನ್ನು ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – ಅಂತಿಮ ಮತದಾರರ ಪಟ್ಟಿಯನ್ನು ಹಸ್ತಾಂತರಿಸಿ ಮಾತನಾಡಿದರು. ಜಿಲ್ಲೆಯ ವಿಧಾನಸಭಾವಾರು ಅಂತಿಮ ಮತದಾರರ ಪಟ್ಟಿಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,17,890 ಪುರುಷರು, 1,22,914 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,40,806 ಮತದಾರರು, ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,01,959 ಪುರುಷರು, 1,10,025 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,11,986 ಮತದಾರರು, ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,06,782…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಅಂಪಾರು ಗ್ರಾಮದ ನಿವಾಸಿ ರಾಜು (53) ಅವರು ಮನೆಯ ಒಳಗೆ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ. ಅವರು ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿಯಿಂದ ಮಣಿಪಾಲ್‌ಗೆ ಹೋಗುವ ರಸ್ತೆ ಅಗಲೀಕರಣ ಕಾಮಗಾರಿಯ ಸಂದರ್ಭದಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ರೈಲ್ವೇ ಇಲಾಖೆಯ ಉಕ್ಕಿನ ಸೇತುವೆ ನಿರ್ಮಾಣ ಮಾಡಬೇಕೆಂದು ಸೂಚನೆ ನೀಡಿದ ಹಿನ್ನಲೆಯಲ್ಲಿ, 2018 ನೇ ಸಾಲಿನಲ್ಲಿ ಉಕ್ಕಿನ ಸೇತುವೆ ನಿರ್ಮಾಣ ಕಾಮಗಾರಿ ಪ್ರಕ್ರಿಯೆಯು ಪ್ರಾರಂಭವಾಗಿ, ಕಳೆದ 5 ವರ್ಷ ಕಳೆದರೂ ಪೂರ್ಣಗೊಳ್ಳದೇ ಸಾರ್ವಜನಿಕರ ಸಂಚಾರಕ್ಕೆ ಅವ್ಯವಸ್ಥೆ ಉಂಟಾಗಿ ಸಾರ್ವಜನಿಕರಿಂದ ದೂರುಗಳು ಪ್ರತಿದಿನವೂ ಕೇಳಿಬರುತ್ತಿದೆ. ಆದರೆ, ಗುತ್ತಿಗೆದಾರರುಗಳು ನಿಗಧಿತ ಕಾಲಾವಧಿಯಲ್ಲಿ ಕಾಮಗಾರಿಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.  ಉಡುಪಿ: ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಆತ್ಮಸ್ಥೈರ್ಯದಿಂದ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಯ ಲಾಭ ಪಡೆಯಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಅಲಿಂಕೋ ಸಂಸ್ಥೆಯ ವತಿಯಿಂದ ಜಿಲ್ಲೆಯಲ್ಲಿ ಆಯ್ಕೆ ಮಾಡಲಾದ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಉಚಿತ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಶಕ್ತಿ ತುಂಬುವ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುವುದರೊಂದಿಗೆ ಗುಣಮಟ್ಟದ ಸಲಕರಣೆಗಳನ್ನು ದೊರಕುವಂತೆ ಮಾಡಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜ್ಞಾನಾರ್ಜನೆಯ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿಯನ್ನು ರೂಢಿಸಿಕೊಂಡಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಉಪಪ್ರಧಾನ ವ್ಯವಸ್ಥಾಪಕರು, ಮಾನವ ಸಂಪನ್ಮೂಲ ಇಲಾಖೆ, ಕರ್ಣಾಟಕ ಬ್ಯಾಂಕ್, ಮಂಗಳೂರು ಪ್ರಧಾನ ಕಚೇರಿ ಗೋಪಾಲಕೃಷ್ಣ ಸಾಮಗ ಬಿ. ಹೇಳಿದರು. ಅವರು ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಕ್ರಿಯೇಟಿವ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ. ಎಸ್. ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಾಗಿಬಂದ ಸಾಧನೆಯ ಹಾದಿಯ ಸಮಗ್ರ ಮಾಹಿತಿಗಳನ್ನು ಒದಗಿಸಿದರು. ಮುಖ್ಯ ಅತಿಥಿ ಎನ್ ಸಿ ಎಸ್ ಮತ್ತು ಕೋ. ಸ್ಥಾಪಕರಾದ ಅಂ ನಿತೇಶ್ ಶೆಟ್ಟಿ ಅವರು ಮಾತನಾಡಿ, ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಮತ್ತು ಇದು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು ಎಂದರು. ಪ್ರಧಾನ ಶಿಲ್ಪಿಗಳಾದ ಎಂಡಿ ಸುನಿಲ್ ಕುಮಾರ್ ಅವರು ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಕ್ಕಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಹಕಾರಿ ಎಂದರು. ಹಿರ್ಗಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಡವ ಶ್ರೀಮಂತರೆಂಬ ಹಂಗು ಹಮ್ಮಿಲ್ಲದೇ ಎಲ್ಲರನ್ನೂ ಪ್ರಭಾವಿಸುವ ಶಕ್ತಿಶಾಲಿ ಮಾಧ್ಯಮವೆಂದರೆ ಕಲೆ. ಅದರ ಮೂಲಕವೇ ಸಮುದಾಯವನ್ನು ತಲುಪಲು ಮತ್ತು ಎಚ್ಚರವಾಗಿರಿಸಲು ಸಾಧ್ಯವಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಲಿಂಗ ನಾಯ್ಕ್ ಜೋಗಿಜೆಡ್ಡು ಹೇಳಿದರು. ಅವರು ಸುರಭಿ ರಿ. ಬೈಂದೂರು ಸಂಸ್ಥೆಯ ರಜತಯಾನ ತಿಂಗಳ ತಿರುಳು ಕಾರ್ಯಕ್ರಮದ ಅಂಗವಾಗಿ ಸಮಷ್ಟಿ ಪ್ರತಿಷ್ಠಾನ ರಿ. ಹಾಗೂ ಸ್ನೇಹ ತರಂಗ ಬೈಂದೂರು ಸಹಯೋಗದೊಂದಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಮೂರು ದಿನಗಳ ಕಾಲ ಶಾರದಾ ವೇದಿಕೆಯಲ್ಲಿ ಹಮ್ಮಿಕೊಂಡ ಯಕ್ಷ – ಗೊಂಬೆ ವೈಭವ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಮಹಾಲಿಂಗ ನಾಯ್ಕ್ ಜೋಗಿಜೆಡ್ಡು ಅವರನ್ನು ಸನ್ಮಾನಿಸಲಾಯಿತು. ಸುರಭಿ ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಪಟ್ಟಣ ಪಂಚಾಯತ್ ನಾಮ ನಿರ್ದೇಶಿತ ಸದಸ್ಯ ನಾಗರಾಜ ಶೆಟ್ಟಿ, ಬೈಂದೂರು ರಾಮಕ್ಷತ್ರಿಯ ಸಮಾಜದ ಅಧ್ಯಕ್ಷ ರಾಮಕೃಷ್ಣ ಸಿ,, ಸಮಷ್ಟಿ ಪ್ರತಿಷ್ಟಾನದ ಮ್ಯಾನೇಜಿಂಗ್ ಟ್ರಸ್ಟೀ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಭಾರತೀಯ ಸೇನೆ ಯುವಕರಲ್ಲಿ ದೇಶಭಕ್ತಿಯ ಭಾವವನ್ನು ಮೂಡಿಸುವ ಭರಪೂರ ಪ್ರಯತ್ನ ಮಾಡುತ್ತದೆ. ಅಂತಹ ಅತ್ಯುತ್ತಮ ತರಬೇತಿ ವ್ಯವಸ್ಥೆ ನಮ್ಮ ಸೇನೆಯಲ್ಲಿದೆ. ಅಂತೆಯೇ ಸೈನ್ಯ ಅಧಿಕಾರಿ ಎಷ್ಟೇ ಕರ್ತವ್ಯ ನಿಷ್ಟುರನಾದರೂ, ಗಡಸು ಸ್ವಭಾವದವನಾದರೂ ಆತನೊಳಗೊಂದು ಮಾನವೀಯ ಮುಖ ಇದ್ದೇ ಇರುತ್ತದೆ ಎನ್ನುವುದು ನನ್ನ ನಂಬಿಕೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ನಾಗೂರಿನಲ್ಲಿ ಭಾನುವಾರ ನಿವೃತ್ತ ಯೋಧ ಬೈಂದೂರು ಚಂದ್ರಶೇಖರ ನಾವಡ ಅವರ ಕಂಟೋನ್ಮೆಂಟ್ ಕಥೆಗಳು ಎಂಬ ಕಥಾಸಂಕಲನದ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸೈನಿಕರೂ ಸಹ ನಾಗರಿಕ ಸಮಾಜದಲ್ಲೇ ಹುಟ್ಟಿ ಬೆಳೆದವರು. ಅವರೂ ನಮ್ಮ ಸಮಾಜದ ಭಾಗವೇ ಆಗಿರುವುದರಿಂದ ಅಲ್ಲಿಯೂ ಸಹ ನಾಗರಿಕ ಸಮಾಜದಲ್ಲಿ ಕಾಣಬಹುದಾದ ಕೆಲವು ನ್ಯೂನತೆಗಳಿವೆ, ವ್ಯಕ್ತಿಗಳ ನಡುವಿನ ಸಂಘರ್ಷಗಳೂ ಇವೆ ಎನ್ನುವುದನ್ನು ಅಲ್ಲಗಳೆಯಲಾಗದು. ಆದರೆ ಸೈನ್ಯಶಿಸ್ತು, ಕಠಿಣ ನಿಯಮಗಳು ಇವುಗಳನ್ನೆಲ್ಲಾ ಹದ್ದುಬಸ್ತಿನಲ್ಲಿರಿಸಲು ಸಮರ್ಥವಾಗಿದೆ. ಸೇನೆಯ ನ್ಯಾಯ ತಂತ್ರವೂ ಮಜಬೂತಾಗಿದೆ. ಅವನೊಳಗೊಂದು ದೇಶಭಕ್ತಿಯ ಭಾವ ಇದ್ದೇ ಇರುತ್ತದೆ ಎಂದು…

Read More