ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ.ಡಿ.21: ಶಾರೀರಿಕ, ಆಧ್ಯಾತ್ಮಿಕ, ಭೌದ್ಧಿಕ ಬೆಳವಣಿಗೆ ವಿದ್ಯಾರ್ಥಿಗಳಿಗೆ ದೇಶವನ್ನು ಸಮರ್ಥವಾಗಿ ಮುನ್ನಡೆಸಲು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಹೇಳಿದರು. ಅವರು ಇಲ್ಲಿನ ವಿದ್ಯಾಗಿರಿಯ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಭಾರತ್ ಸ್ಕೌಟ್ಸ್ ಗೈಡ್ಸ್ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ-2022’ ಉದ್ಘಾಟಿಸಿ ಮಾತನಾಡಿ, ಸಮಾಜದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಸ್ಕೌಟ್ಸ್ ಗೈಡ್ಸ್ನ ಸೇವೆ ಅಪಾರ. ದೇಶದ ಅಭಿವೃದ್ದಿಯಲ್ಲಿ ಯುವಕರ ಪಾತ್ರ ದೊಡ್ಡದಿದೆ. ನಾವೆಲ್ಲರೂ ಕೂಡ ವಿಶ್ವ ಶಾಂತಿ ಹಾಗೂ ವಿಶ್ವ ಕಲ್ಯಾಣಕ್ಕಾಗಿ ಶ್ರಮಿಸಬೇಕಿದೆ. ಜೊತೆಗೆ ದೇಶದ ಹಿತರಕ್ಷಣೆ ಮತ್ತು ಬೆಳವಣಿಗೆಯ ಪ್ರಕ್ರಿಯೆಯಲ್ಲಿ ಹೇಗೆ ತೊಡಗಿಸಿಕೊಳ್ಳಬಹುದು ಎಂದು ಆಲೋಚಿಸಿ ಮುಂದಡಿಯಿಟ್ಟರೆ ಮುಂದಿನ 25 ವರ್ಷಗಳ ಅವಧಿಯಲ್ಲಿ ಭಾರತವನ್ನು ಮತ್ತಷ್ಟು ಪ್ರಭಾವೀ ರಾಷ್ಟ್ರವನ್ನಾಗಿ ರೂಪಿಸಬಹುದು ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಸಂದಿಗ್ಧ ಸಂದರ್ಭಗಳನ್ನು ಎದುರಿಸುವ ಧೈರ್ಯ ಮತ್ತು ಸ್ಥೈರ್ಯದ ಮನೋಧರ್ಮವನ್ನು ರೂಪಿಸಿಕೊಳ್ಳುವುದರ ಕಡೆಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಭಾರತ್ ಸ್ಕೌಟ್ಸ್ – ಗೈಡ್ಸ್ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಆರಂಭಗೊಂಡ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಆಯೋಜನೆಗೊಂಡಿರುವ ವಿವಿಧ ಮೇಳಗಳನ್ನು ಸಾಂಕೇತಿಕವಾಗಿ ನೀಟ್ ಲಾಂಗ್ ಟರ್ಮ್ ಕಟ್ಟಡದಲ್ಲಿ ಉದ್ಘಾಟಿಸಲಾಯಿತು. ಕಲಾಮೇಳವನ್ನು ಚಿತ್ರ ಕಲಾವಿದ ಕೆ ಕೆ ಕೃಷ್ಣ ಶೆಟ್ಟಿ, ವಿಜ್ಞಾನ ಮೇಳವನ್ನು ಇಸ್ರೋದ ಮಾಜಿ ವೈಜ್ಞಾನಿಕ ಕಾರ್ಯದರ್ಶಿ ಡಾ. ದಿವಾಕರ್, ಕೃಷಿ ಮೇಳವನ್ನು ಉದ್ಯಮಿ ಶ್ರೀಪತಿ ಭಟ್, ಪುಸ್ತಕ ಮೇಳವನ್ನು ಮೂಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಹಾಗೂ ಆಹಾರ ಮೇಳವನ್ನು ಕೆ. ಪಿ ಮಿಶ್ರಾ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ತದ ನಂತರ ಅರಣ್ಯ ಚಾರಣಕ್ಕೆ ಚಾಲನೆ ನೀಡಲಾಯಿತು. ಸೌಟ್ಸ್-ಗೈಡ್ಸ್ ರಾಜ್ಯ ಆಯುಕ್ತ ಪಿ. ಜಿ. ಆರ್ ಸಿಂದಿಯಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಉಪಸ್ಥಿತರಿದ್ದರು. ಪೂರ್ವಾಹ್ನ ೯.೩೦ರಿಂದ ರಾತ್ರಿ ೯.೦೦ರವರೆಗೆ ಜನಮನ ತಣ ಸುವ ಅಪೂರ್ವ ಕಾರ್ಯಕ್ರಮಗಳೊಂದಿಗೆ ೫ ಬೃಹತ್ ಮೇಳಗಳು ನಡೆಯಲಿವೆ. ಕೃಷಿಮೇಳ :ಎ.ಜಿ.ಕೊಡ್ಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಗಂಗನಾಡು ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದೇವಸ್ಥಾನದ ಸಮಿತಿಯವರು ಪೂಜ್ಯ ವೀರೇಂದ್ರ ಹೆಗ್ಗಡೆಯವರಲ್ಲಿ ವಿನಂತಿಸಿಕೊಂಡಂತೆ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಪೂಜ್ಯರು 10 ಲಕ್ಷ ಮೊತ್ತದ ಡಿಡಿಯನ್ನು ದೇಣಿಗೆಯಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಕ್ತೇಶ್ವರರಾದ ಡಾ. ವೈ. .ರಾಜ್ ಮೋಹನ್ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಕರಾಟೆ ಚಾಂಪಿಯನ್ ಶಿಪ್ ಸೋಮವಾರ ನಡೆಯಿತು. ಭಂಡಾರ್ಕಾರ್ಸ್ ಪದವಿ ಕಾಲೇಜ್ ವಿಶ್ವಸ್ಥ ಪ್ರಕಾಶ್ ಟಿ. ಸೋನ್ಸ್ ಉದ್ಘಾಟಿಸಿ, ಸಾವಿರಾರು ಮಕ್ಕಳು ಕರಾಟೆಯಿಂದ ಶಿಸ್ತು ಕಲಿಯುತ್ತಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಪಡೆದ ಕರಾಟೆ ಪಟುಗಳಿಗೆ ವಿಶ್ವವಿದ್ಯಾಲಯದ ವತಿಯಿಂದ ಆರ್ಥಿಕ ನೆರವು ನೀಡಬೇಕು ಎಂದರು. ಭಂಡಾರ್ಕಾರ್ಸ್ ಪದವಿ ಕಾಲೇಜ್ ಪ್ರಾಂಶುಪಾಲ ಡಾ. ಎನ್.ಪಿ.ನಾರಾಯಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬ್ಲ್ಯಾಕ್ ಬೆಲ್ಟ್ 5 ಡ್ಯಾನ್ ಸಂದೀಪ್ ಪೂಜಾರಿ, ದಕ್ಷಿಣ ಕನ್ನಡ ಉಡುಪಿ ಕರಾಟೆ ಅಧ್ಯಕ್ಷ ಪ್ರವೀಣ್ ಕುಮಾರ್, ಮಂಗಳೂರು ವಿಶ್ವವಿದ್ಯಾಲಯ ಸಹಾಯಕ ದೈಹಿಕ ನಿರ್ದೇಶಕ ಹರಿದಾಸ್ ಕೂಳೂರು ಉಪಸ್ಥಿತರಿದ್ದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ದೈಹಿಕ ನಿರ್ದೇಶಕ ಶಂಕರನಾರಾಯಣ. ಕೆ ಸ್ವಾಗತಿಸಿದರು. ದೈಹಿಕ ನಿರ್ದೇಶಕಿ ವನಿತಾ ವಂದಿಸಿದರು. ವಿದ್ಯಾರ್ಥಿನಿ ಚಂದ್ರಿಕಾ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಸತತ 78ನೇ ತಿಂಗಳ ಕಾರ್ಯಕ್ರಮವು ಇತ್ತೀಚೆಗೆ ಗೊಂಬೆ ಮನೆಯಲ್ಲಿ ಜರುಗಿತು. ಹಿರಿಯರಾದ ಸೀತಾರಾಮ ಭಟ್, ಕಲ್ಯಾಣಪುರ ಅವರು ತಮ್ಮ ಭಾಷಣದಲ್ಲಿ ಭಜನೆ, ಸಂಪ್ರದಾಯಗಳ ಬಗ್ಗೆ ವಿವರವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ಸದಾಶಿವ ಐತಾಳ್, ಪುಂಡಲೀಕ ಶೆಣೈ, ಪುರೋಹಿತರಾದ ದಿವಾಕರ್ ಭಟ್, ಶ್ರೀಕರ ಭಟ್ ಕಲ್ಯಾಣಪುರ, ಶ್ರೀ ಕುಂದೇಶ್ವರ ಭಜನಾ ಮಂಡಳಿಯ ಅಧ್ಯಕ್ಷೆ ಮಂಜುಳಾ ಗೋವಿಂದರಾಜು ಹಾಗೂ ಅಕಾಡೆಮಿಯ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ವೇದಿಕೆಯಲ್ಲಿ ಆಸೀನರಾಗಿದ್ದರು. ಮಂಜುಳಾ ಗೋವಿಂದರಾಜು ಹಾಗೂ ಸೀತಾರಾಮ ಭಟ್ ರವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ಶ್ರೀ ಕುಂದೇಶ್ವರ ಭಜನಾ ಮಂಡಳಿ, ಕುಂದಾಪುರ ಹಾಗೂ ಶ್ರೀ ರಾಮಾಂಜನೇಯ ಭಜನಾ ಮಂಡಳಿ, ಕಲ್ಯಾಣಪುರ ಇದರ ಸದಸ್ಯರು ನಡೆಸಿಕೊಟ್ಟ ಭಕ್ತಿ ಸಂಗೀತ ಕಾರ್ಯಕ್ರಮ ಎಲ್ಲರ ಹೃನ್ಮನ ಸೆಳೆಯಿತು. ಈ ಎಲ್ಲಾ ಕಾರ್ಯಕ್ರಮಗಳು ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ಶೀರ್ಷೀಕೆಯಡಿ ನಡೆಯುತ್ತಿವೆ. ನಾಗೇಶ್ ಶ್ಯಾನುಭಾಗ್ ರವರು ಕಾರ್ಯಕ್ರಮ ನಿರೂಪಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚಿನ ಹದಿಹರೆಯದವರಲ್ಲಿ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಪಾಶ್ರ್ವವಾಯುನಂತಹ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ ನಮಗೆ ಬರುವ ವಿವಿಧ ಕಾಯಿಲೆಗಳು ಜೀವನ ಶೈಲಿಯೇ ಕಾರಣವಾಗಿದೆ. ಇದರಿಂದ ನಮ್ಮ ಜೀವನ ಹಾಗೂ ಜೀವಿತಾವಧಿ ಕುಂಠಿತವಾಗುತ್ತದೆ ಎಂದು ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಉದಯ ಮಡಿವಾಳ ಎಂ ಹೇಳಿದರು. ಅವರು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ಕೋಡಿ ಬ್ಯಾರಿಸ್ ಶಿಕ್ಷಣ ಸಂಸ್ಥೆಯ ಬಿ,ಎಡ್ ಪ್ರಶಿಕ್ಷಣಾರ್ಥಿಗಳ ಸೇವಾ ಪೂರ್ವ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಉತ್ತಮ ಜೀವನಶೈಲಿ ರೂಪಿಸಿಕೊಳ್ಳಲು ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದು ಅತಿಮುಖ್ಯವಾಗಿದೆ ಎಂದರು. ಕಾರ್ಯಕ್ರಮವನ್ನು ಸಂಸ್ಥೆಯ ಉಪಪ್ರಯಾಂಶಪಾಲರಾದ ಕಿರಣ್ ಹೆಗ್ಡೆ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ವಿವಿಧ ಮನೋಲ್ಲಾಸ ಕ್ರೀಡೆಗಳು ಹಾಗೆ ವಿವಿಧ ಪಠ್ಯ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಬಹುಮಾನ ವಿಜೇತರ ಪಟ್ಟಿಯನ್ನು ಮೇಘ ವಾಚಿಸಿದರು. ಸಂಸ್ಥೆಯಲ್ಲಿ ತಾವು ಕಳೆದ 50 ದಿನಗಳ ಅನುಭವವನ್ನು ಪ್ರಶಿಕ್ಷಣಾರ್ಥಿ ವಿನಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.20: ಕರ್ನಾಟಕ ಸರ್ಕಾರಕ್ಕೆ 12,195 ಕೆ.ಎಲ್ ನೈಜ ಹಂಚಿಕೆಯಲ್ಲಿ, ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 5,472 ಕೆ.ಎಲ್ ಮಾತ್ರ ಮಂಜೂರಾಗಿದೆ. ಕರ್ನಾಟಕದ ಬಡ ಮೀನುಗಾರರಿಗೆ ಸಹಾಯ ಮಾಡಲು ಉಳಿದ 6,723 ಕೆಎಲ್ ಸಿಮೇಎಣ್ಣೆಯನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಲು ಹಾಗೂ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ.ರಾಘವೇಂದ್ರ ಅವರು ಸಂಸತ್ ಭವನದಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ವಿನಂತಿಸಿದರು. ಇದೇ ಸಂದರ್ಭ ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 2,472 ಕೆ.ಎಲ್ ಹಿಂದಿನ ಹಂಚಿಕೆಗೆ ಹೆಚ್ಚುವರಿಯಾಗಿ 3,000 ಕೆ.ಎಲ್ ಸಬ್ಸಿಡಿ ರಹಿತ ಪಿಡಿಎಸ್ ಸೀಮೆಎಣ್ಣೆಯನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಿದ್ದಕ್ಕಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದರು. ಕೇಂದ್ರ ಸಚಿವರು, ಸಂಸದರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಅತೀ ಶೀಘ್ರದಲ್ಲಿ ಕರ್ನಾಟಕದ ಉಳಿದ ಕೋಟಾದ ಸೀಮೆಎಣ್ಣೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾಗಿ ಸಂಸದರ ಕಛೇರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.20: ಕರ್ನಾಟಕದ ಜನ ಬದಲಾವಣೆ ಬಯಸುತ್ತಿದ್ದಾರೆ. ಭ್ರಷ್ಟ ಬಿಜೆಪಿ ಸರಕಾರವನ್ನು ಕಿತ್ತೊಗೆಯುವ ಮನಸ್ಸಿನಲ್ಲಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂಘಟನೆಯನ್ನು ಬಲಗೊಳಿಸಿ ಸಜ್ಜಾಗಬೇಕಿದೆ ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ರೋಝಿ ಜಾನ್ ಹೇಳಿದರು. ಅವರು ಇಲ್ಲಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಪಕ್ಷ ಸಂಘಟನೆ ಸಭೆಯಲ್ಲಿ ಅವರು ಮಾತನಾಡಿ ಕಾಂಗ್ರೆಸ್ ಪಕ್ಷದ ಎದುರು ಕಠಿಣ ಸವಾಲುಳಿದ್ದು ಎಲ್ಲವನ್ನೂ ಚುನಾವಣೆಯಲ್ಲಿಯಲ್ಲಿ ಗೆಲುವು ಸಾಧಿಸುವ ಹೊಣೆಗಾರಿಕೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದೆ ಎಂದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಉಡುಪಿ ಜಿಲ್ಲಾ ಉಸ್ತುವಾರಿ ಆರ್. ಧವನಾರಾಯಣ ಮಾತನಾಡಿ ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು ಎಂದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಸನ್ನ ಕುಮಾರ್ ಶೆಟ್ಟಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ ಕುಂದರ್, ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ,ಡಿ.20: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ 4 ಕಳ್ಳತನ ಪ್ರಕರಣಗಳು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ 1 ಕಳವು ಪ್ರಕರಣದ ಆರೋಪಿ ವಿಜಯ ಕುಮಾರ್ ಶೆಟ್ಟಿ (28) ಎಂಬಾತನನ್ನು ಬ್ರಹ್ಮಾವರ ಸಿ.ಪಿ.ಐ ನೇತೃತ್ವದ ವಿಶೇಷ ತಂಡವು ನೀಲಾವರ ಕ್ರಾಸ್ ಬಳಿ ಬಂಧಿಸಿದೆ. ಆರೋಪಿ ವಿಜಯ ಕುಮಾರ್ ಶೆಟ್ಟಿಯ ಮೇಲೆ ಈ ಹಿಂದೆ ದ.ಕ ಜಿಲ್ಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ 4 ಪ್ರಕರಣ, ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ಠಾಣೆಯಲ್ಲಿ 1 ಪ್ರಕರಣ, ಹರಿಹರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಶಿವಮೊಗ್ಗ ಜಿಲ್ಲೆ ಆಗುಂಬೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಹಾಗೂ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣಗಳು ದಾಖಲಾಗಿರುತ್ತದೆ. ಹೆಚ್ಚಿನ ಪ್ರಕರಣಗಳಲ್ಲಿ ಆರೋಪಿಯು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು ಜಾಮೀನು ರಹಿತ ವಾರಂಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಗಾಂಧಿ ಮೈದಾನಕ್ಕೆ ಹೊಂದಿಕೊಂಡು ನಿರ್ಮಾಣವಾಗುತ್ತಿರುವ ಪುರಭವನ ಕಾಮಗಾರಿಯನ್ನು ಬೇರೆ ಕಡೆ ಸ್ಥಳಾಂತರಿಸುವಂತೆ ಆಗ್ರಹಿಸಿ ಮಂಗಳವಾರ ಬೈಂದೂರು ಗಾಂಧಿ ಮೈದಾನ ಉಳಿಸಿ ಧರಣಿ ಮತ್ತು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಯಡ್ತರೆ ಗ್ರಾ.ಪಂ. ಮಾಜಿ ಅಧ್ಯಕ್ಷ ನಾಗರಾಜ ಶೆಟ್ಟಿ, ಕವಿ ಗೋಪಾಲಕೃಷ್ಣ ಹೆಸರಿನಲ್ಲಿ ನಿರ್ಮಾಣವಾಗುತ್ತಿರುವ ಪುರಭವನೆಕ್ಕೆ ನಮ್ಮ ವಿರೋಧವಿಲ್ಲ, ಆದರೆ ಅದಕ್ಕಾಗಿ ವಿಶಾಲವಾದ ಗಾಂಧಿ ಮೈದಾನದಲ್ಲಿ ನಿರ್ಮಿಸವುದು ಸಮಂಜಸವಲ್ಲ, ಹಾಗಾಗಿ ಅದನ್ನು ಹತ್ತಿರದಲ್ಲಿರುವ ಯಾವುದಾದರೂ ಸರ್ಕಾರಿ ಭೂಮಿಯಲ್ಲಿ ನಿರ್ಮಾಣ ಮಾಡುವ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದರು. ಇಲ್ಲಿನ ಗಾಂಧಿ ಮೈದಾನ 4.98 ಎಕ್ರೆ ವಿಸ್ತೀರ್ಣವನ್ನು ಹೊಂದಿದ್ದು, ಅದರಲ್ಲಿ 1.50 ಎಕ್ರೆ ಜಾಗವನ್ನು ನಗರಾಭಿವೃದ್ಧಿ ಇಲಾಖೆಯ ಹೆಸರಿನಲ್ಲಿ ಕಾಯ್ದಿರಿಸಿ ಅದರಲ್ಲಿ ಕವಿ ಮೊಗೇರಿ ಗೋಪಾಲಕೃಷ್ಣ ಹೆಸರಿನಲ್ಲಿ ಸ್ಮಾರಕ ಪುರಭವನ ನಿರ್ಮಿಸಲು ಉದ್ದೇಶಿಸಲಾಗಿದ್ದು ಉಳಿದ ಸುಮಾರು 3.48 ಎಕ್ರೆ ಜಾಗದಲ್ಲಿ ಹೊರಂಗಣ ಕ್ರೀಡಾಂಗಣ ನಿರ್ಮಿಸುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಆದರೆ ಇದರಿಂದಾಗಿ ಕ್ರೀಡಾಂಗಣ ತೀರಾ ಕಿರಿದಾಗಲಿದ್ದು, ಇಲ್ಲಿನ…
