Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಟಿಪ್ಪರ್ ಚಾಲಕನಾಗಿದ್ದ ಕಂದಾವರ ಗ್ರಾಮದ ಕೃಷ್ಣಮೂರ್ತಿ (29) ಅವರು ಕಂಡೂರು ಬಳಿ ಸ್ಕೂಟಿ ನಿಲ್ಲಿಸಿ, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಜು. 31ರ ರಾತ್ರಿ ಅಳಿಯ ಕಾರ್ತಿಕ್‌ಗೆ ಕರೆಮಾಡಿ “ನಾನು ಇಲ್ಲವಾದರೆ ನನ್ನ ಅಮ್ಮನನ್ನು ಚೆನ್ನಾಗಿ ನೋಡಿಕೋ’ ಎಂದು ಹೇಳಿ ಕರೆ ಕಡಿತ ಮಾಡಿದ್ದರು. ಅನಂತರ ಮತ್ತೆ ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ತಕ್ಷಣ ಕಾರ್ತಿಕ್ ಮನೆಯವರಿಗೆ ವಿಷಯ ತಿಳಿಸಿ ಹುಡುಕಾಡಿದಾಗ ಅವರ ಸ್ಕೂಟಿ ಕಂಡೂರು ಸೇತುವೆ ಬಳಿ ಪತ್ತೆಯಾಗಿದೆ. ಫೆ. 1ರ ಮಧ್ಯಾಹ್ನ ಮೃತದೇಹ ಕಂಡೂರು ಸೇತುವೆಯ ಅಡಿಭಾಗದಲ್ಲಿ ಪತ್ತೆಯಾಗಿದೆ. ಸಹೋದರ ಶ್ರೀಕಾಂತ ನೀಡಿದ ದೂರಿನಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಉತ್ತರಖಂಡದ ಡೆಹ್ರಾಡೂನ್‌ನಲ್ಲಿ ಜರುಗಿದ ರಾಷ್ಟ್ರಿಯ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಉಷಾ ಎಸ್. ಆರ್. ಕಂಚಿನ ಪದಕವನ್ನು ಪಡೆದಿದ್ದಾರೆ. ಅವರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ. 87 ಕೆಜಿ ದೇಹ ತೂಕ ವಿಭಾಗದಲ್ಲಿ ಸ್ಪರ್ಧಿಸಿರುವ ಅವರು ಒಟ್ಟು 197 ಕೆಜಿ ಭಾರ ಎತ್ತಿ ಕಂಚಿನ ಪದಕಕ್ಕೆ ಪಾತ್ರರಾಗಿದ್ದಾರೆ. 76 ಕೆಜಿ ದೇಹತೂಕ ವಿಭಾಗದಲ್ಲಿ ಸ್ಪರ್ದಿಸಿದ್ದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ತನುಷಾ ನಾಲ್ಕನೇ ಸ್ಥಾನ ಪಡೆದಿದ್ದಾರೆ. ರಾಷ್ಟ್ರಿಯ ಕ್ರೀಡಾಕೂಟದ ವೇಯ್ಟ್ಲಿಫ್ಟಿಂಗ್ ವಿಭಾಗದಲ್ಲಿ ಅವರು ಇರ್ವರೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದವರು. ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಕ್ರೀಡಾಪಟುಗಳ ಸಾಧನೆಯನ್ನು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿಗೆ ವಾಡಿಕೆ ಮಳೆಯು 4,535 ಮಿ.ಮೀ. ಇದ್ದು, ವಾಸ್ತವಿಕವಾಗಿ 5261 ಮಿ.ಮೀ. ನಷ್ಟು ಮಳೆಯಾಗಿ ಶೇ.16 ರಷ್ಟು ಹೆಚ್ಚು ಮಳೆಯಾಗಿದ್ದು, ನೀರಿನ ಕೊರತೆ ಆಗುವ ಸಾಧ್ಯತೆಗಳಿಲ್ಲದಿದ್ದರೂ ಸಹ ಅಂತರ್ಜಲ ಕುಸಿತಗೊಂಡು ಜಿಲ್ಲೆಯ ಯಾವುದೇ ಗ್ರಾಮ ಹಾಗೂ ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದು. ಈ ಬಗ್ಗೆ ಗಮನಹರಿಸುವುದರೊಂದಿಗೆ ಹತ್ತಿರದಲ್ಲಿ ಲಭ್ಯತೆ ಇರುವ ನೀರಿನ ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ತಿಳಿಸಿದರು. ಕಳೆದ ಸಾಲಿನಲ್ಲಿ ಉಂಟಾದ ಮನೆ ಹಾನಿ, ಮಾನವ ಜೀವ ಹಾನಿ, ಜಾನುವಾರು ಜೀವ ಹಾನಿ, ಬೆಳೆ ಹಾನಿ ಸೇರಿದಂತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ ಗಂಗೊಳ್ಳಿ ಹಾಗೂ ಶಾಲೆಯ ಅಮೃತ ಮಹೋತ್ಸವ ವತಿಯಿಂದ ’ಮನೋದೈಹಿಕ ಬೆಳವಣಿಗೆ ಮತ್ತು ಭಾವನಾತ್ಮಕ ಬುದ್ಧಿಮತ್ತೆಯ ಪಾತ್ರ ’ಎಂಬ ವಿಷಯದ ಬಗ್ಗೆ ಕಾರ್ಯಾಗಾರವು ಶಾಲೆಯ ಸಭಾಂಗಣದಲ್ಲಿ ನಡೆಯಿತು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಮಾಹೆ ಮಣಿಪಾಲ ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ನಿರ್ದೇಶಕಿ ಗೀತಾ ಕೌನ್ಸಿಲರ್ ಸುಜಾತ ದೀಪಕ್, ಶ್ರೀರಾಯನ್ ಮಥಾಯಸ್, ಕೆಲ್ವಿನ್ ಡಿಸೋಜಾ, ಅರವಿಂದ್ ಪಾಂಡೆ, ಕರುಣ ದೇವಾಡಿಗ ಹಾಗೂ ಗಣೇಶ್, ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ದಿವಾಕರ್ ಖಾರ್ವಿ ಉಪಸಿತರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಯಶೋಧ ಸ್ವಾಗತಿಸಿದರು. ಸಹಶಿಕ್ಷಕಿ ರಾಧಿಕಾ ಕೆ. ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ಶಾಂತಿ ಖಾರ್ವಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಇದರ 38ನೇ ‘ಸ್ವಚ್ಛ ಕಡಲತೀರ – ಹಸಿರು ಕೋಡಿ’ ಅಭಿಯಾನವು ಭಾನುವಾರದಂದು ನಡೆಯಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿ ಸದಸ್ಯರಾದ ಡಾ. ಆಸೀಫ್ ಬ್ಯಾರಿ ಅವರು, ಸ್ವಚ್ಛತಾ ಕಾರ್ಯಕ್ಕೆ ಪಣತೊಟ್ಟು ಆಗಮಿಸಿದ ಎಲ್ಲರನ್ನೂ ಉದ್ದೇಶಿಸಿ ಮಾತನಾಡಿ “ನೀವೆಲ್ಲರೂ ನಿಜವಾದ ನಾಯಕರು ಎಂದು ತಿಳಿಸಿ, ಅವರಿಗೆ ಶುಭ ಹಾರೈಸಿದರು” ಈ ಸ್ವಚ್ಛತಾ ಕಾರ್ಯಕ್ಕೆ ನಿರಂತರ ಸಹಕಾರ ನೀಡುತ್ತಿರುವ ಕುಂದಾಪುರ ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಕೋಟೇಶ್ವರ ಪಂಚಾಯತಿ ಅಧ್ಯಕ್ಷರು ಹಾಗೂ ಸಿಬ್ಬಂದಿಗಳಿಗೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ. ಕೆ.ಎಂ ಅಬ್ದುಲ್ ರೆಹಮಾನ್ ಅವರು ಧನ್ಯವಾದ ಸಲ್ಲಿಸಿದರು. ಈ ಸ್ವಚ್ಛತಾ ಕಾಯಕದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗಗಳ ಮುಖ್ಯಸ್ಥರು, ಶಾಲಾಭಿವೃದ್ಧಿ ಮತ್ತು ಸಲಹಾ ಮಂಡಳಿ ಸದಸ್ಯರು, ಹಿತೈಷಿಗಳ ಬಳಗ, ಪೋಷಕರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಬ್ಯಾರೀಸ್ ಪದವಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಅವರವರು ಮಾಡಿದ ಕರ್ಮದ ಫಲವನ್ನು ಅವರವರೇ ಅನುಭವಿಸಬೇಕಾಗಿರುವ ಕಾರಣ ನಾವು ಕೆಟ್ಟ ಕರ್ಮಗಳನ್ನು ಎಂದಿಗೂ ಮಾಡಬಾರದು. ಏಕೆಂದರೆ ಕರ್ಮದ ಫಲ ತನ್ನ ವಿಳಾಸವನ್ನು ಎಂದಿಗೂ ಮರೆಯುವುದಿಲ್ಲ. ಎಂದು ಕೇರಳ ಕಾಸರಗೋಡಿನ ಬ್ರಹ್ಮಕುಮಾರಿ ಈಶ್ವರೀ ವಿದ್ಯಾಲಯದ ಮೇಲ್ವಿಚಾರಕಿ ರಾಜಯೋಗಿನಿ ಬಿ. ಕೆ. ವಿಜಯಲಕ್ಷ್ಮೀ ಅವರು ಹೇಳಿದರು. ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಜೆಸಿಐ ಬೈಂದೂರು ಸಿಟಿ ಘಟಕದ ಈ ವರ್ಷದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಓದಲು ಒಂದು ಕ್ಷಣ ಬೇಕಾಗುತ್ತದೆ. ಯೋಚನೆ ಮಾಡಲು ಒಂದು ನಿಮಿಷ ಬೇಕಾಗುತ್ತದೆ. ತಿಳಿಯಲು ಒಂದು ದಿನ ಬೇಕಾಗುತ್ತದೆ. ಆದರೆ ಉಳಿಸಿಕೊಳ್ಳಲು ಪೂರ್ಣ ಜೀವನವೇ ಬೇಕಾಗುತ್ತದೆ ಅದೇ ವಿಶ್ವಾಸ. ಈ ನೆಲೆಯಲ್ಲಿ ಪರಸ್ಪರ ನಂಬಿಕೆ, ವಿಶ್ವಾಸದಿಂದ ಸಂಘಟನೆ ಮೂಲಕ ಯುವಜನರಲ್ಲಿ ವ್ಯಕ್ತಿತ್ವ ವಿಕಸನದ ಮೂಲಕ ಮಾನವೀಯ ಮೌಲ್ಯ ರೂಪಿಸಿ ಸಮಾಜ ಸೇವಾ ಕಾರ್ಯ ಮಾಡುತ್ತಿರಿ ಎಂದರು. ನಿರ್ಗಮಿತ ಅಧ್ಯಕ್ಷೆ ಅನಿತಾ ಆರ್. ಕೆ. ಇವರು ಸ್ವಾಗತಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ 16ನೇ ವರ್ಷದ ಬ್ರಹ್ಮರಥೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಭಾನುವಾರ ಸಂಪನ್ನಗೊಂಡಿತು. ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಿಗ್ಗೆ ಶ್ರೀದೇವಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ತುಲಾಭಾರ ಸೇವೆ, ಯಜ್ಞವಿಧಿಗಳು, ಮಹಾ ಪ್ರಾರ್ಥನೆ, ಮಹಾಪೂಜೆ, ಮಹಾ ಬಲಿಪ್ರದಾನ, ಸಾಯಂಕಾಲ ರಥಾರೋಹಣ, ಮಹಾಸಮಾರಾಧನೆ ಬಳಿಕ ರಾತ್ರಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಟಿ. ನಾರಾಯಣ ಪೈ, ಡಾ. ಕಾಶೀನಾಥ ಪೈ, ಟಿ. ಗಣೇಶ ಪ್ರಭು, ಡಾ. ವಿಶ್ವನಾಥ ಪೈ, ಪ್ರಭಾಕರ ಪೈ, ದೇವಸ್ಥಾನದ ಧರ್ಮದರ್ಶಿ ಮಂಡಳಿ ಸದಸ್ಯರು, ದೇವಸ್ಥಾನದ ಅರ್ಚಕರು, ಪುರೋಹಿತರು, ಸೇವಾದಾರರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು, ಭಕ್ತರು ಉತ್ಸವದಲ್ಲಿ ಪಾಲ್ಗೊಂಡಯ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಮೊವಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿ ಸುರೇಶ ಮೊಗವೀರ ತ್ರಾಸಿ ಇವರು ಜಿನ್‌ಟೆಕ್ಸ್ ಕಂಪೆನಿಯ ಸಹಯೋಗದೊಂದಿಗೆ ಉಚಿತವಾಗಿ ನೀಡಿದ ಸಮವಸ್ತ್ರಗಳ ವಿತರಣಾ ಕಾರ್ಯಕ್ರಮವು ಶಾಲೆಯ ಸಭಾಂಗಣದಲ್ಲಿ ನಡೆಯಿತು. ಸಮವಸ್ತ್ರವನ್ನು ವಿತರಿಸಿ ಮಾತನಾಡಿದ ಸುರೇಶ ಮೊಗವೀರ, ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಲಾಗಿದೆ. ಶಾಲೆಯ ಅಭಿವೃದ್ಧಿಯಲ್ಲಿ ಕೈಜೋಡಿಸಲಾಗುವುದು ಎಂದರು. ಇದೇ ಸಂದರ್ಭ ದಾನಿ ಸುರೇಶ ಮೊಗವೀರ ಅವರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯತ್ ಸಾಮಾಜಿಕ ಪರಿಷತ್ತಿನ ಕಾರ್ಯಕ್ರಮ ವ್ಯವಸ್ಥಾಪಕ ಸುರೇಂದ್ರ, ಎಸ್‌ಡಿಎಂಸಿ ಅಧ್ಯಕ್ಷೆ ಸಂಧ್ಯಾ ಕಾರಂತ್, ತ್ರಾಸಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹೇಮಾ, ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಖಾರ್ವಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲೆಯ ಮುಖ್ಯ ಶಿಕ್ಷಕಿ ಶರಾವತಿ ಸ್ವಾಗತಿಸಿದರು. ರಜನಿ ದಾನಿಗಳನ್ನು ಪರಿಚಯಿಸಿದರು. ಭಾಗೀರಥಿ ಕಾರ್ಯಕ್ರಮ ನಿರ್ವಹಿಸಿದರು. ವತ್ಸಲಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಸಾಂಪ್ರದಾಯಿಕ ದಿನ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯ ನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಮಾತನಾಡಿ, ಮಕ್ಕಳಿಗೆ ನಮ್ಮ ಸನಾತನ ಧರ್ಮದ ತತ್ವಗಳನ್ನು ತಿಳಿಸುವುದರ ಜೊತೆಗೆ ಎಲ್ಲರೂ ತಮ್ಮಲ್ಲಿ ಅವುಗಳನ್ನು ಅಳವಡಿಸಿ ಕೊಳ್ಳುವ ಮೂಲಕ ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿ, ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ, ಉಳಿದ ಮಕ್ಕಳು ಅವರನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ತಮ್ಮ ಗುರಿ ಸಾಧನೆಯನ್ನು ಸಾಕಾರ ಗೊಳಿಸಿಕೊಳ್ಳಿ ಎಂದು ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ದಿನದ ಪ್ರಯುಕ್ತ ಸಿಹಿ ತಿಂಡಿ ವಿತರಿಸಲಾಯಿತು. ಪೋಷಕರಿಗಾಗಿ ಸಾಂಪ್ರದಾಯಿಕ ವಸ್ತು ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ವಿಶೇಷವಾಗಿ 2024ರ ಕಾರಂತ ಬಾಲ ಪುರಸ್ಕಾರ ಪ್ರಶಸ್ತಿ ಪಡೆದ ವಿದ್ಯಾರ್ಥಿನಿ ಸಾನಿಧ್ಯಳನ್ನು ಗೌರವಪೂರ್ವಕವಾಗಿ ಪೋಷಕರ ಎದುರಿನಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ “ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಅನುಷ್ಠಾನದ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ. ಆರ್ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ರಾಮದಾಸ್, ಜಿಲ್ಲೆಯ ವಿವಿಧ ತಾಲೂಕುಗಳ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೊಪ್ಪಳ ಜಿಲ್ಲೆಯ ಮಕ್ಕಳ ರಕ್ಷಣಾ ಯೋಜನೆ ಯೂನಿಸೆಫ್‌ನ ಪ್ರಾದೇಶಿಕ ಸಂಯೋಜಕ ಡಾ.…

Read More