ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಟೈರ್ ಪಂಕ್ಚರ್ ಶಾಪ್ ಒಂದರಲ್ಲಿ ಬಸ್ಸೊಂದರ ಟೈರ್ಗೆ ಗಾಳಿ ತುಂಬಿಸುತ್ತಿದ್ದ ಸಂದರ್ಭ ಟೈರ್ ಸಿಡಿದು ಯುವಕ ಗಂಭೀರ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ. ಅಬ್ದುಲ್ ರಶೀದ್ (19) ಗಂಭೀರ ಗಾಯಗೊಂಡ ಯುವಕ ಎಂದು ತಿಳಿದುಬಂದಿದೆ. ಕೋಟೇಶ್ವರದಲ್ಲಿರುವ ಟೈರ್ ಪಂಕ್ಚರ್ ಶಾಪ್ ಗೆ ಖಾಸಗಿ ಶಾಲಾ ಬಸ್ಸೊಂದರ ಟೈರ್ ಪ್ಯಾಚ್ ಗೆ ಬಂದಿತ್ತು. ಈ ವೇಳೆ ಅಬ್ದುಲ್ ರಶೀದ್ ಟೈರನ್ನು ಬಸ್ಸಿನಿಂದ ಕೆಳಗಿಳಿಸಿ ಗಾಳಿ ತುಂಬಿಸಿದ್ದಾರೆ. ಗಾಳಿ ತುಂಬಿಸಿ ರಶೀದ್ ಅಲ್ಲಿಂದ ಎದ್ದೇಳುತ್ತಿದ್ದಂತೆ ಟೈರ್ ಏಕಾಏಕಿ ಸ್ಫೋಟಗೊಂಡಿದೆ. ಟೈರ್ ಸಿಡಿದ ರಭಸಕ್ಕೆ ರಶೀದ್ ಗಾಳಿಯಲ್ಲಿ ಹಾರಿ ಗಿರಕಿ ಹೊಡೆದು ಬಿದ್ದಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಫೋಟದ ತೀವ್ರತೆಗೆ ಟೈರ್ ಡ್ರಮ್ ಹಾರಿ ಬಸ್ಸಿನ ಮೇಲ್ಛಾವಣಿಯ ಮೇಲೆ ಬಿದ್ದು ನೆಲಕ್ಕುರುಳಿದೆ. ಘಟನೆಯ ಎಲ್ಲಾ ದೃಶ್ಯಾವಳಿಗಳು ಸ್ಥಳೀಯ ಅಂಗಡಿಯವೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಡಿ. 28 ರಂದು ನೀಡಲಾಗುವ ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಕುಂದಾಪುರದ ಗುರುಕುಲ ಪಬ್ಲಿಕ್ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿ ಸಾನಿಧ್ಯ ಸಂತೋಷ್ ನಾಯ್ಕ್ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಶುಭ ಹಾರೈಸಿ, ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯುವ ಬಂಟರ ಸಂಘದಿಂದ 90 ರ ಸಂಭ್ರಮದಲ್ಲಿರುವ ನಾಡಿನ ಗಣ್ಯಮಾನ್ಯರಾದ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರನ್ನು ಅವರ ಸ್ವಗ್ರಹದಲ್ಲಿ ಸಂಘದ ಗೌರವಾಧ್ಯಕ್ಷರಾದ ವತ್ಸಲ ದಯಾನಂದ ಶೆಟ್ಟಿ , ಸಂಘದ ಪೋಷಕರಾದ ವಿಜಯ ಶೆಟ್ಟಿ ಸಟ್ಟಾಡಿ ಮತ್ತು ಸಂಘದ ಸ್ಥಾಪಕಾಧ್ಯಕ್ಷರು ಮತ್ತು ದಶಮ ಸಂಭ್ರಮದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರು ಸನ್ಮಾನಿಸಿ ಗೌರವಿಸಿದರು. ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಸುಕೇಶ ಶೆಟ್ಟಿ ಹೊಸ್ಮಠ, ಸುನಿಲ್ ಶೆಟ್ಟಿ ಹೇರಿಕುದ್ರು, ಕೋಶಾಧಿಕಾರಿ ಭರತ ಶೆಟ್ಟಿ ಜಾಂಬೂರು, ಉಪಾಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಸುರೇಶ ಶೆಟ್ಟಿ ಕಾರಿಬೈಲ್ ಜೆಡ್ಡು , ಸುಕುಮಾರ ಶೆಟ್ಟಿ ಹೇರಿಕುದ್ರು, ದಿನಕರ ಶೆಟ್ಟಿ ಹರ್ಕಾಡಿ, ಸುರೇಂದ್ರ ಶೆಟ್ಟಿ ಗುಳ್ವಾಡಿ, ರೋಷನ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷರಾದ ಡಾ. ಚೇತನ ಕುಮಾರ್ ಶೆಟ್ಟಿ ಕೊವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದಶಮ ಸಂಭ್ರಮದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಆದ್ಯತಾ ಸಂಸ್ಥೆಯು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಯ್ಕೆಗಾಗಿ ನಡೆಸಿದ ಪರೀಕ್ಷೆಯಲ್ಲಿ ಡಾ. ಕೌಶಿಕ್ ಡಿ. ಎಸ್ ಕ್ರಿಟಿಕಲ್ ಕೇರ್ ಮೆಡಿಸಿನ್ನಲ್ಲಿ ಮೂರು ವರ್ಷಗಳ ಪದವಿಗಾಗಿ ಪ್ರಥಮ ಸ್ಥಾನದಲ್ಲಿ ಆಯ್ಕೆಯಾಗಿರುತ್ತಾರೆ. ಈ ಹಿಂದೆ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಭುವನೇಶ್ವರದಲ್ಲಿ ಎಂಡಿ ಪದವಿ ಮುಗಿಸಿ ನವದೆಹಲಿಯ ಏಮ್ಸ್ನಲ್ಲಿ ಸೇವೆ ಸಲ್ಲಿಸಿದ್ದರು. ಈಗ ಸಂಜಯ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆ ಲಕ್ನೋದಲ್ಲಿ ಸ್ನಾತಕೋತ್ತರ ಲಕ್ನೋದಲ್ಲಿ ಕ್ರಿಟಿಕಲ್ ಕೇರ್ ಮೆಡಿಸಿನ್ ಡಿಪ್ಲೊಮಾ ಕೋರ್ಸ್ಗೆ ಆಯ್ಕೆಪಟ್ಟಿಯಲ್ಲಿ ಪ್ರಥಮವಾಗಿ ಆಯ್ಕೆಯಾಗಿದ್ದರು. ಇವರು ನಿವೃತ್ತ ಉಪನಿರ್ದೇಶಕರಾದ ದಿವಾಕರ ಶೆಟ್ಟಿಯವರ ಪುತ್ರರಾಗಿದ್ದು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡುಗಿಳಿಯಾರಿನ ಹಳೆ ವಿದ್ಯಾರ್ಥಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಗ್ರಾಮದ ಕಯ್ಯಾಣಿ ಎಂಬಲ್ಲಿ ವಿದ್ಯುತ್ ಕಂಬದಿಂದ ಬಿದ್ದು ಶೇಡಿಮನೆ ಗ್ರಾಮದ ನಿವಾಸಿ ಲಕ್ಷ್ಮಣ(30) ಅವರು ಮೃತಪಟ್ಟಿದ್ದಾರೆ. ಕಯ್ಯಾಣಿಗೆ ಹೋಗುವ ರಸ್ತೆಯ ಬಳಿ ರಜನೀಶ್ ಹಾಗೂ ಇತರರೊಂದಿಗೆ ಹೊಸದಾಗಿ ನಿಲ್ಲಿಸಿದ ವಿದ್ಯುತ್ ಕಂಬಗಳಿಗೆ ಲೈನ್ ಕೆಲಸವನ್ನು ಮಾಡಲು ಅವರು ಕಂಬ ಹತ್ತಿದ್ದು ಶನಿವಾರ ಸಂಜೆ ಒಮ್ಮೆಲೆ ಅವರಿಗೆ ಫಿಡ್ಸ್ ಕಾಯಿಲೆ ಕಾಣಿಸಿಕೊಂಡು ಜೋರಾಗಿ ಕಿರುಚಿ ಅಂದಾಜು 21 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದಿದ್ದಾರೆ. ಕೂಡಲೆ ಇತರೆ ಕೆಲಸಗಾರರು ಉಪಚರಿಸಿ 108 ಆಂಬ್ಯುಲೆನ್ಸ್ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಫಿಡ್ಸ್ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಸಹೋದರ ರಾಮ ನೀಡಿದ ದೂರಿನಂತೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಅಂಗವಿಕಲರ ಒಕ್ಕೂಟ,ಹಾಗೂ ಪಾಲಕರ ಉಡುಪಿ ಜಿಲ್ಲಾ ಸಮಿತಿ ಕುಂದಾಪುರ ಹಾಗೂ ಬೈಂದೂರು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಒಕ್ಕೂಟ ಮತ್ತು ವಿವಿಧ ಇಲಾಖೆಗಳ ಸಹಕಾರದೊಂದಿಗೆ ನಡೆದ ದಿವ್ಯಾಂಗರ ಸಮಾವೇಶ, ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪ್ರದರ್ಶನ 2024-25 ಕಾರ್ಯಕ್ರಮದ ಸಮಾರೋಪ ಸಮಾರಂಭವು ಶನಿವಾರದಂದು ಆರ್. ಎನ್. ಶೆಟ್ಟಿ ಸಭಾಭವನದಲ್ಲಿ ಅದ್ದೂರಿಯಾಗಿ ನೆರೆವೇರಿಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಅಧ್ಯಕ್ಷರಾದ ಸಂತೋಷ್ ಜಾಲಾಡಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಿಸೆಂಬರ್ ತಿಂಗಳ ಎರಡದಂದು ಬೈಂದೂರು ಗಾಂಧಿ ಮೈದಾನದಲ್ಲಿ ನಡೆದ ಕ್ರೀಡಾಕೂಟದ ಬಹುಮಾನವನ್ನು ವಿತರಿಸಲಾಯಿತು. ಬಹುಮಾನ ವಿತರಣೆ ಮಾಡಿ ಮುಖ್ಯ ಅತಿಥಿಗಳಾದ ಪುರಸಭೆ ಅಧ್ಯಕ್ಷರಾದ ಮೋಹನದಾಸ ಶೆಣೈ ಅವರು ಮಾತನಾಡಿ, ದಿವ್ಯಾಂಗರಿಗೆ ನ್ಯೂನ್ಯತೆ ಶಾಪವಲ್ಲ ಇಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪ್ರತಿಭೆಗಳು ನಮ್ಮ ಜಿಲ್ಲೆಯಲ್ಲಿದ್ದಾರೆ, ಸರ್ಕಾರ, ಸಂಘ ಸಂಸ್ಥೆಗಳು ದಿವ್ಯಾಂಗರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡಬೇಕೆಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಮುಖ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಾಲಾಡಿ ಗೋಳಿಯಂಗಡಿ ಮಾರ್ಗದ ಭತ್ತಗುಳಿ ಸೇತುವೆ ಬಳಿ ಸ್ಕೂಟರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಡಿ. 21ರಂದು ನಡೆದಿದೆ. ಹರೀಶ್ ಸ್ಕೂಟರ್ನಲ್ಲಿ ಶರತ್ ಅವರನ್ನು ಕುಳ್ಳಿರಿಸಿಕೊಂಡು ಹಾಲಾಡಿಯಿಂದ ಗೋಳಿಯಂಗಡಿ ಕಡೆಗೆ ಹೋಗುತ್ತಿದ್ದಾಗ ಭತ್ತಗುಳಿ ಸೇತುವೆ ಬಳಿ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರರು ರಸ್ತೆಗೆ ಬಿದ್ದು, ಗಂಭೀರವಾಗಿ ಗಾಯಗೊಂಡರು. ಹಾಲಾಡಿ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ನೀಡಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇದರಿಂದ ಸಾಕಷ್ಟು ಪ್ರಯೋಜನಗಳಿದೆ. ಸುಮಾರು ಒಂದು ಶತಮಾನದ ಹಿಂದೆ ಏನೂ ವ್ಯವಸ್ಥೆಗಳಿಲ್ಲದ ದಿನಗಳಲ್ಲಿ ಗಂಗೊಳ್ಳಿಯಂತಹ ಗ್ರಾಮೀಣ ಬಂದರು ಪ್ರದೇಶದಲ್ಲಿ ಸ್ಥಾಪನೆಗೊಂಡ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕಾಗಿದೆ. ಶಾಲೆಯನ್ನು ಸ್ಥಾಪಿಸಿದ ಹಿರಿಯರ ದೂರದೃಷ್ಟಿಯ ಫಲವಾಗಿ ಶಾಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗಳ ಮೂಲಕ ಗುರುತಿಸಿಕೊಳ್ಳುವಂತಾಗಿದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಕೋ-ಆಪರೇಟಿವ್ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಹೇಳಿದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಬೈಲೂರು ರಾಮರಾವ್ ಶ್ಯಾನುಭಾಗ್ ರಂಗ ಮಂಟಪದಲ್ಲಿ ಶನಿವಾರ ನಡೆದ ಜಿಎಸ್ವಿಎಸ್ ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಶಾಲಾ ವಾರ್ಷಿಕೋತ್ಸವದ ಅಧ್ಯಕ್ಷತೆಯನ್ನು ಜಿಎಸ್ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ವಹಿಸಿದ್ದರು. ಶಾಲೆಯ ಹಳೆ ವಿದ್ಯಾರ್ಥಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆ ಶನಿವಾರದಂದು ಜರುಗಿತು. ಸಭೆಯನ್ನು ಉದ್ದೇಶಿಸಿ ಸಹ ಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ವೈಯಕ್ತಿಕ ವಿಷಯಗಳಲ್ಲಿ ವಿದ್ಯಾರ್ಥಿಗಳ ಸಾಧನೆ, ತರಗತಿಗಳಲ್ಲಿ ಶಿಸ್ತು ಮತ್ತು ಅವರ ಹಾಜರಾತಿ ಶೇಖಡಾವಾರು ಬಗ್ಗೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ, ಸಕಾರಾತ್ಮಕ ಚಿಂತನೆ, ಪ್ರೇರಣೆ, ನಿರ್ದಿಷ್ಟ ಗುರಿ ಇತ್ಯಾದಿ ವಾಸ್ತವಾಂಶಗಳನ್ನು ಮನದಟ್ಟು ಮಾಡುವುದು ಅಗತ್ಯ ಎಂದರು. ಸಂಸ್ಥಾಪಕರಲ್ಲಿ ಓರ್ವರಾದ ಡಾ. ಬಿ ಗಣನಾಥ ಶೆಟ್ಟಿ ಅವರು ನಿತ್ಯ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸುವ ಕೌಶಲ ಸಹಿತ ಶಿಕ್ಷಣವೇ ನಮ್ಮ ಗುರಿ ಎಂದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣದ ಜೊತೆಗೆ ಸಿ. ಎ, ಸಿ. ಎಸ್, ಕಂಪ್ಯೂಟರ್ ಸಂಬಂಧಿತ ವಿವಿಧ ಕಲಿಕೆಗಳ ಜೊತೆಗೆ ಎನ್ ಎಸ್ ಎಸ್, ಕೆಸಡೊಂಜಿ ದಿನ, ಕೈಗಾರಿಕಾ ಪ್ರದೇಶಗಳ ಭೇಟಿಯ ಜೊತೆಗೆ ಹಲವಾರು ಕಾರ್ಯಕ್ರಮಗಳ ಆಯೋಜನೆಯ ಮೂಲಕ ನೈತಿಕ ಮತ್ತು ವ್ಯಾವಹಾರಿಕ ಜ್ಞಾನವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಕೌಶಲ್ಯಾಭಿವೃದ್ಧಿ ಪಡೆದ ಅರ್ಹ ಫಲಾನುಭವಿಗಳಿಗೆ ಚಟುವಟಿಕೆಗಳನ್ನು ನಡೆಸಲು ಬ್ಯಾಂಕುಗಳು ಆರ್ಥಿಕ ನೆರವು ನೀಡಲು ಶಿಫಾರಸ್ಸು ಆದ ಎಲ್ಲಾ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಿ ಎಂದು ಬ್ಯಾಂಕಿನ ಅಧಿಕಾರಿಗಳಿಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರದ ಪಿಎಂ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡುವ ಸಂದರ್ಭದಲ್ಲಿ ಸ್ಟ್ಯಾಂಪ್ ಶುಲ್ಕವನ್ನು ಹೆಚ್ಚು ಪಡೆಯುತ್ತಿದ್ದಾರೆ ಎಂದು ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ. ಈ ಯೋಜನೆಯಡಿ ಸಾಲ ಸೌಲಭಕ್ಕೆ 500 ರೂಪಾಯಿ ಸ್ಟ್ಯಾಂಪ್ ಶುಲ್ಕ ಪಡೆಯಬೇಕು ಎಂದರು. ಪಿಎಂ ವಿಶ್ವಕರ್ಮ ಯೋಜನೆಯಡಿ ಆರ್ಥಿಕ ನೆರವು ಕೋರಿ ಬ್ಯಾಂಕುಗಳಿಗೆ ಹೋದ ಸಂದರ್ಭದಲ್ಲಿ ಅಲ್ಲಿನ ಮ್ಯಾನೇಜರ್ ಗಳು…
