Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯಡಮೊಗೆ ಗ್ರಾಮದ ನಿವಾಸಿ ವೆಂಕಟರಮಣ (65) ಅವರು ಸೋಮವಾರ ರಾತ್ರಿ ಮನೆ ಸಮೀಪದ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಂಜೆ ಯಕ್ಷಗಾನ ನೋಡಲು ಹೋಗುವುದಾಗಿ ಮನೆಯಿಂದ ಹೊರಹೋದವರು ವಾಪಸ್ ಬಾರದಿರುವುದನ್ನು ನೋಡಿ ಹುಡುಕಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಶಂಕರನಾರಾಯಣ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆದ  ಗಣರಾಜ್ಯೋತ್ಸವ ಪಥಸಂಚಲನ ಶಿಬಿರ 2025ರಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ (ಎನ್‌ಸಿಸಿ) ಕರ್ನಾಟಕ ಗೋವಾ ನಿರ್ದೇಶನಾಲಯವು ಪ್ರತಿಷ್ಠಿತ ಪ್ರಧಾನಮಂತ್ರಿಗಳ ಬ್ಯಾನರ್‌ನ್ನು ಗೆದ್ದುಕೊಂಡಿತು. ಕರ್ನಾಟಕ ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಆಂಡ್ ಡಿಸೈನ್ ವಿಭಾಗದ ವಾಯುದಳದ ಎನ್‌ಸಿಸಿ ಕೆಡೆಟ್ ಹಾರ್ದಿಕ್ ಶೆಟ್ಟಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಸ್ವೀಕಾರ ಮಾಡುವ ಅವಕಾಶ ಒದಗಿತು. ಎನ್‌ಸಿಸಿ ಕರ್ನಾಟಕ ಗೋವಾ ನಿರ್ದೇಶನಾಲಯವು 124 ಕೆಡೆಟ್‌ಗಳನ್ನು ಈ ಭಾರಿ ಗಣರಾಜ್ಯೋತ್ಸವ ಪಥಸಂಚಲನ ಶಿಬಿರಕ್ಕೆ ಕಳುಹಿಸಿದ್ದು, ಅವರಲ್ಲಿ ಆಳ್ವಾಸ್‌ನ ಹಾರ್ದಿಕ್ ಶೆಟ್ಟಿ ಎಲ್ಲಾ ವಿಭಾಗದಲ್ಲೂ ಉತ್ತಮ ಕಾರ್ಯಕ್ಷಮತೆ ಮೆರೆದಿದ್ದು, ಡ್ರಿಲ್ ಚಟುವಟಿಕೆಯಲ್ಲಿ ಶ್ರೇಷ್ಠ ಮಟ್ಟದ ಪ್ರದರ್ಶನ ತೋರಿದ್ದರಿಂದಾಗಿ ಈ ಅವಕಾಶ ಒದಗಿ ಬಂದಿದೆ. ಪ್ರಧಾನಮಂತ್ರಿಗಳ ಬ್ಯಾನರ್ ಪ್ರಶಸ್ತಿಯನ್ನು ಪಡೆಯುವ ತಂಡವು ಹಲವು ಹಂತದ ಸ್ಪರ್ಧೆಗಳನ್ನು ಗೆದ್ದು, ಈ ಪ್ರಶಸ್ತಿಯನ್ನು ಸ್ವೀಕಾರ ಮಾಡುತ್ತದೆ. ಮುಖ್ಯವಾಗಿ ಅತ್ಯುತ್ತಮ ಗೌರವ ರಕ್ಷೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪರ: ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಶಿರಸಿ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ಇದರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ವಸತಿಯುತ ಪ್ರೇರಣಾ ಶಿಬಿರದ ಉದ್ಘಾಟನಾ ಸಮಾರಂಭವು ಶಿರಸಿಯ ಲಯನ್ಸ್ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ಶಿರಸಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾದ ಎಂ.ಎಸ್ ಪ್ರಸನ್ನಕುಮಾರ್ ಅವರು ಪ್ರೇರಣಾ ಶಿಬಿರ ಸಾಗಿ ಬಂದ ಹಾದಿಯ ಕುರಿತು ಮಾತನಾಡಿದರು. ಕಳೆದ ಬಾರಿಯ ವಾರ್ಷಿಕ ಫಲಿತಾಂಶದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ 39 ವಿದ್ಯಾರ್ಥಿಗಳು ರಾಜ್ಯದ ಮೊದಲ 10 ಅತ್ಯುತ್ತಮ ಅಂಕಗಳೊಂದಿಗೆ ಗುರುತಿಸಿಕೊಂಡಿದ್ದು, ಈ ಪ್ರೇರಣಾ ಶಿಬಿರಕ್ಕೆ ಸಹಕರಿಸುತ್ತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳದ ಸಹಕಾರವನ್ನು ಸ್ಮರಿಸಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್ ರವರು ಎಸ್.ಎಸ್.ಎಲ್.ಸಿ.ಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹೆಚ್ಚು ಅಂಕಗಳನ್ನು ಪಡೆಯುವ ಸಲುವಾಗಿ ವಿಶೇಷ ತರಬೇತಿ ನೀಡುವ ಈ ಪ್ರೇರಣಾ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತಾಗಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ’’ಸೃಜನಾತ್ಮಕ ಸ್ಮರಣೆ’’ ಎಂಬ ವಿಷಯದ ಕುರಿತು ವಿಚಾರ ಸಂಕಿರಣವನ್ನು ಏರ್ಪಡಿಸಲಾಯಿತು. ಮೈಸೂರಿನ ”Mind Power Learning Systems” ನ ಸ್ಥಾಪಕರು ಹಾಗೂ ನಿರ್ದೇಶಕರಾಗಿರುವ ಎಸ್. ಪ್ರಶಾಂತ್ ಅವರು ವಿನಯಚಂದ್ರ ಅವರ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ಜ್ಞಾಪಕ ಶಕ್ತಿಯನ್ನು ವೃದ್ಧಿಸುವ ಕಲೆಯನ್ನು ತಿಳಿಸಿದರು. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡರು. ಶಿಕ್ಷಕಿ ಲೋನಾ ಡಿಸೋಜ ಕಾರ್ಯಕ್ರಮವನ್ನು ನಿರೂಪಿಸಿ, ಮುಖ್ಯೋಪಾಧ್ಯಯರು ಸ್ವಾಗತಿಸಿ, ಶಿಕ್ಷಕಿ ಪ್ರತಿಭಾ ಪೈ ವಂದನಾರ್ಪಣೆಗೈದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾ ಮಿಷನ್ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು, ಉಡುಪಿ ಇವರುಗಳ ಸಹಯೋಗದೊಂದಿಗೆ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಜಿಲ್ಲಾ ಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ ಕಾರ್ಯಕ್ರಮವು ಫೆಬ್ರವರಿ 19ರಂದು ನಗರದ ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು ಹಾಗೂ https://udupi.nic.in/ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಉಚಿತವಾಗಿ ನೋಂದಣಿ ಮಾಡಿಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಛೇರಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ನಂ:201, ಬಿ ಬ್ಲಾಕ್, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 9449943882, 9481456741, 9964428002 ಹಾಗೂ 9481510655 ಅನ್ನು ಸಂಪರ್ಕಿಸಬಹುದಾಗಿದೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೀಜಾಡಿ ಗ್ರಾಮದ ಪಡುಹೆಬ್ರಿ ಮನೆ ನಿವಾಸಿ ಸುನೀಲ್ ಕುಮಾರ್ (40) ಅವರು ಭಾನುವಾರ ರಾತ್ರಿ ಮನೆ ಸಮೀಪದ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದು ಅವರು  ಜೀವನದಲ್ಲಿ ಜಿಗುಪ್ಪೆಗೊಂಡು ಕೃತ್ಯ ಎಸಗಿದ್ದಾರೆ. ಈ ಹಿಂದೆ ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದು, ಬಿಪಿ, ಶುಗರ್, ಕ್ಷಯ ರೋಗದಿಂದಲೂ ಬಳಲುತ್ತಿದ್ದರು. 7-8 ತಿಂಗಳಿನಿಂದ ಕೆಲಸಕ್ಕೆ ಹೋಗದೇ, ಮನೆಯಲ್ಲಿಯೇ ಇದ್ದರು. ಅಣ್ಣ ಸಂತೋಷ್ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ. ಬಿ. ಎಸ್. ಸಿ. ಸ್ಕೂಲ್,  ಪ್ಲೇ  ಸ್ಕೂಲ್,  ಎಲ್. ಕೆ. ಜಿ.  ಹಾಗೂ  ಯು. ಕೆ. ಜಿ. ಮಕ್ಕಳು ಪಿಂಕ್ ಕಲರ್ ಡೇ ಯನ್ನು ಆಚರಿಸಿದರು. ಮಕ್ಕಳಲ್ಲಿ ಬಣ್ಣಗಳನ್ನು ಗುರುತಿಸಿ ನೆನಪಿನಲ್ಲಿಟ್ಟುಕೊಳ್ಳುವ ಕೌಶಲವನ್ನು ವೃದ್ಧಿಸುವ ಸಲುವಾಗಿ ಪ್ರತಿ ತಿಂಗಳು ವಿವಿಧ ಬಣ್ಣಗಳ ದಿನಾಚರಣೆಯನ್ನು ಮಾಡಿ ಮಕ್ಕಳಿಗೆ ಬಣ್ಣಗಳ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಆ ಪ್ರಯುಕ್ತ ವಿದ್ಯಾರ್ಥಿಗಳು ಪಿಂಕ್ ಬಣ್ಣದ ವಿವಿಧ ತಿನಿಸುಗಳು ಹಾಗೂ ವಸ್ತುಗಳನ್ನು ಪ್ರದರ್ಶಿಸಿದರು. ತರಗತಿ ಕೋಣೆಗಳಲ್ಲಿ ಪಿಂಕ್ ಬಣ್ಣದ ವಸ್ತುಗಳ ಅಲಂಕಾರವನ್ನು ಮಾಡಿ ವಿದ್ಯಾರ್ಥಿಗಳು ನಲಿದಾಡಿದರು. ವಿದ್ಯಾರ್ಥಿಗಳು ನೃತ್ಯ ಹಾಗೂ ವಿವಿಧ ಕಾರ್ಯಕ್ರಮಗಳನ್ನು ನಡೆಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಿಂಕ್ ಬಣ್ಣದ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ ಶೆಟ್ಟಿ, ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ್ ಶೆಟ್ಟಿ ಹೆಚ್., ಪ್ರಾಂಶುಪಾಲ ನಿತಿನ್ ಡಿ. ಅಲ್ಮೇಡಾ, ಕಿಂಡರ್ ಗಾರ್ಟನ್ ಸಂಯೋಜಕಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಭಾರತೀಯ  ವೈದ್ಯಕೀಯ ಪರಂಪರೆಯಲ್ಲಿ ಆಯುರ್ವೇದ ವೈದ್ಯ ಪದ್ದತಿಗೆ ಶ್ರೇಷ್ಠ ಸ್ಥಾನಮಾನವಿದೆ. ಆದರೆ ಅದನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಸಾಕ್ಷಾಧಾರದ ಕೊರತೆಯಿದ್ದು ಅದನ್ನು ನೀಗಿಸುವ ನಿಟ್ಟಿನಲ್ಲಿ ಆಯುರ್ವೇದ ವಿಜ್ಞಾನದಲ್ಲಿ ಇನ್ನಷ್ಟು ಸಂಶೋಧನೆಯನ್ನು ಕೈಗೊಳ್ಳಬೇಕಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದ್ದಾರೆ. ಆಳ್ವಾಸ್‌ನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಆಯುರ್ವೇದ ಕಾಲೇಜಿನ ಆಳ್ವಾಸ್ ’ಧನ್ವಂತರಿ ಪೂಜಾ ಮಹೊತ್ಸವ, ಶಿಶ್ಯೋಪನಯನ ಸಂಸ್ಕಾರ ಹಾಗೂ ಆಳ್ವಾಸ್ ಧನ್ವಂತರಿ ಪ್ರಶಸ್ತಿ ವಿತರಣಾ  ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಆಯುವೇದದಲ್ಲಿ ಉಜ್ವಲ ಭವಿಷ್ಯವಿದ್ದು, ಅದನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹೆಚ್ಚು ಹೆಚ್ಚು ಸಂಶೋಧನೆಗೆ ಒತ್ತು ಕೊಡಬೇಕು. ಕಾಲೇಜಿನಲ್ಲಿ ಕಲಿತ ವಿದ್ಯೆ ಕೇವಲ ಮೆದುಳಿಗೆ ಜ್ಞಾನವನ್ನು ಕೊಡುತ್ತದೆ. ತರಗತಿಯ ಹೊರಗೆ ಕಲಿತ ಬಯಲು ಶಿಕ್ಷಣ ಪ್ರಾಯೋಗಿಕತೆಯಿಂದ ಕೂಡಿದ್ದು, ಅದು ಶ್ರೇಷ್ಠ ಜ್ಞಾವನ್ನಾಗಿಸುತ್ತದೆ. ಆಯುರ್ವೇದದಲ್ಲಿರುವ ವಿಫುಲ ಅವಕಾಶಗಳನ್ನು ಅರ್ಥಮಾಡಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಪೆರಂಪಳ್ಳಿಯ ಟ್ರಿನಿಟಿ ಸೆಂಟ್ರಲ್ ಸ್ಕೂಲ್‌ನಲ್ಲಿ ನಡೆದ ಎಐಸಿಎಸ್ ಉಡುಪಿ ಮತ್ತು ದಕ್ಷಿಣ ಕನ್ನಡ ಅಂತರ್ ಶಾಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 17ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗದ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಪಡೆಯಿತು. ವಿದ್ಯಾರ್ಥಿಗಳ ಈ ಅಮೋಘ ಪ್ರದರ್ಶನದ ಕುರಿತಾಗಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಪ್ರತಿಕ್ರಿಯಿಸಿ “2024-25 ನೇ ಸಾಲಿನಲ್ಲಿ ನಮ್ಮ ಸಂಸ್ಥೆಯ  ಕ್ರೀಡಾಪಟುಗಳು ಕಬಡ್ಡಿ, ಬ್ಯಾಡ್ಮಿಂಟನ್, ಅಥ್ಲೆಟಿಕ್  ಸ್ಪರ್ಧೆಗಳಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಪ್ರಶಸ್ತಿ, ಪದಕಗಳನ್ನು ಗೆದ್ದಿರುವುದು ನಮ್ಮ ಸಂತಸವನ್ನು ಇಮ್ಮಡಿಗೊಳಿಸಿದೆ. ಇಂದು ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿಯೂ ತೃತೀಯ ಬಹುಮಾನಕ್ಕೆ ನಾವು ಭಾಜನರಾಗಿರುವುದು ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ. ಮುಂಬರುವ ದಿನಗಳಲ್ಲಿ ಪರಿಣಾಮಕಾರಿ ಶೈಕ್ಷಣಿಕ ಚಟುವಟಿಕೆಗಳ ಜೊತೆಜೊತೆಯಲ್ಲಿ ಕ್ರೀಡಾ ಚಟುವಟಿಕೆಗಳತ್ತಲೂ ಹೆಚ್ಚಿನ ಗಮನ ಕೇಂದ್ರೀಕರಿಸಲಿದ್ದೇವೆ. ನಮ್ಮ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯೇ ನಮ್ಮ ಮೂಲ ಧ್ಯೇಯವಾಗಿದೆ” ಎನ್ನುತ್ತಾ  ಅದ್ಭುತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡAತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆöÊರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ, ಕೊಠಡಿ ಸಂಖ್ಯೆ-204, 1ನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More