ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತಲ್ಲೂರು ಸೇತುವೆ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಬುಧವಾರ ಬೆಳಗಿನ ಜಾವ ಸಂಭವಿಸಿದೆ. ಹೊನ್ನಾವರ ತಾಲೂಕಿನ ಗೇರುಸೊಪ್ಪದ ಮೇಘನಾಥ (39) ಮೃತಪಟ್ಟ ದುರ್ದೈವಿ. ಅವರು ಕೆಲಸ ಮುಗಿಸಿ, ತ್ರಾಸಿಯಲ್ಲಿನ ತನ್ನ ಅಕ್ಕನ ಮನೆಗೆ ತೆರಳಲು ಬಸ್ ಸಿಗದೇ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ಅಪರಿಚಿತ ವಾಹನ ಪರಾರಿಯಾಗಿದೆ. ವ್ಯಕ್ತಿಯ ಮೈ ಕೈಗೆ, ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಸೇರಿ ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವೈದ್ಯರು ಆಸ್ಪತ್ರೆಗೆ ಬರುವಾಗಲೇ ಮೇಘನಾಥ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಶೇಖ್ ಎಮ್. ನಿಹಾನ್ (3ನೇ ತರಗತಿ) ಗ್ರೀಷ್ಮಾ (4ನೇ ತರಗತಿ) ಮತ್ತು ಸಿಂಧು ಮಧ್ಯಸ್ತ (6ನೇ ತರಗತಿ) ಮಹಾರಾಷ್ಟ್ರದ ಪುಣೆಯಲ್ಲಿ ಗುರು ಅಬಾಕಸ್ ಮತ್ತು ವೇದಿಕ್ ಮಾತೆಮಾಟಿಕ್ಸ್ ಆಯೋಜಿಸಿದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿರುತ್ತಾರೆ. ಮಾರ್ಗದರ್ಶನ ನೀಡಿದ ರಾಷ್ಟ್ರಮಟ್ಟದ ಸಂಪನ್ಮೂಲ ತರಬೇತುದಾರರು ಹಾಗೂ ಅಬಾಕಸ್ ಮತ್ತು ವೇದಿಕ್ ಮಾತೆಮಾಟಿಕ್ಸ್ ಉಪನ್ಯಾಸಕರಾದ ಗೀತಾ ಅವರು ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನಾರಾಗಿರುತ್ತಾರೆ. ಅವರಿಗೆ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಶುಭಾಶಯ ಕೋರಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದಿ. ಕೊಲ್ಲೂರು ಮಂಜುನಾಥ ಅಡಿಗರು ಧಾರ್ಮಿಕ ವಿಚಾರವಾಗಿ ಅಪಾರ ಜ್ಞಾನ ಹೊಂದಿದ್ದು ಅವರ ಮಾರ್ಗದರ್ಶನದಿಂದ ಕೊಲ್ಲೂರು ಕ್ಷೇತ್ರ ಹಾಗೂ ಉಪ್ಪುಂದ ಕ್ಷೇತ್ರದ ಬೆಳವಣಿಗೆಯಲ್ಲೂ ಅವರ ಪಾತ್ರ ದೊಡ್ಡದಾಗಿದೆ ಎಂದು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಯು. ಸತೀಶ್ ಶೆಟ್ಟಿ ಹೇಳಿದರು. ಅವರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಇತ್ತೀಚೆಗೆ ನಿಧನರಾದ ಕೊಲ್ಲೂರು ಮುಕಾಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕ ಮತ್ತು ತಂತ್ರಿ ದಿ. ಮಂಜುನಾಥ ಅಡಿಗ ಕೊಲ್ಲೂರು ಹಾಗೂ ಉಪ್ಪುಂದ ದೇವಸ್ಥಾನದ ಅರ್ಚಕ ದಿ. ರಮೇಶ್ ಉಡುಪ ಅವರ ಶೃದ್ಧಾಂಜಲಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಮೂರ್ತಿ ಶಂಕರನಾರಾಯಣ ಭಟ್ ಉಪ್ಪುಂದ ಮೃತರ ಕುರಿತು ಪ್ರಾಸ್ಥಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳಾದ ನಾರಾಯಣ ಖಾರ್ವಿ, ಲಲಿತಾ ಶೆಟ್ಟಿ, ರವೀಂದ್ರ ಪ್ರಭು, ರಾಜೇಶ್ ದೇವಾಡಿಗ ಉಪಸ್ಥಿತರಿದ್ದರು. ಮೃತರ ಆತ್ಮಕ್ಕೆ ಚಿರಶಾಂತಿಗೆ ಒಂದು ನಿಮಿಷದ ಮೌನಾಚರಣೆ ಹಾಗೂ ಭಾವ ಚಿತ್ರಕ್ಕಕ್ಕೆ ಪುರ್ಷ್ಪಾಚನೆ ಮಾಡಲಾಯಿತು. ಓಂಕಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಕೆ.ಯು. ಬೆಳ್ಳಿಯಪ್ಪ ಅವರು ವರ್ಗಾವಣೆಗೊಂಡಿದ್ದು, ನೂತನ ಡಿವೈಎಸ್ಪಿಯಾಗಿ ಎಚ್.ಡಿ ಕುಲಕರ್ಣಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಡಿವೈಎಸ್ಪಿ ಎಚ್.ಡಿ ಕುಲಕರ್ಣಿ ಅವರು 1998ನೇ ಬ್ಯಾಚ್ ಪೊಲೀಸ್ ಅಧಿಕಾರಿಯಾಗಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಕಳೆದ 4 ವರ್ಷಗಳ ಹಿಂದೆ ಡಿವೈಎಸ್ಪಿ ಆಗಿ ಪದೋನ್ನತಿ ಹೊಂದಿ ಬೆಂಗಳೂರು ಗ್ರಾಮಾಂತರ ಸೈಬರ್ ಕ್ರೈಮ್ ವಿಭಾಗದಲ್ಲಿ ಡಿವೈಎಸ್ಪಿ ಆಗಿದ್ದರು. ನಂತರ ಬೆಂಗಳೂರು ಸಿಐಡಿಯಲ್ಲಿ ಡಿವೈಎಸ್ಪಿ ಆಗಿದ್ದರು. ಇದೀಗ ಕುಂದಾಪುರ ಪೊಲೀಸ್ ಉಪವಿಭಾಗದ ಡಿವೈಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ದೆಯಲ್ಲಿ ಆರಾಧ್ಯ ಆರ್. ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಅರಾಟೆ ರಾಘವೇಂದ್ರ ಪೂಜಾರಿ ಮತ್ತು ಶಿಕ್ಷಕಿ ಯಶೋದ ದಂಪತಿ ಪುತ್ರಿ. ಈಕೆ ಪ್ರಸನ್ನ ಕೆ., ಮಹಾಲಕ್ಷ್ಮೀ ಮತ್ತು ಸುನೀತ ಅವರಿಂದ ತರಬೇತಿ ಪಡೆದಿರುತ್ತಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಪಿ.ಯು.ಸಿ/ ಇಂಟರ್ ಜೊತೆಗೆ ಡಿಪ್ಲೋಮಾ ಇನ್ ಜನರಲ್ ನರ್ಸಿಂಗ್ ಮತ್ತು ಮಿಡ್ ವೈಫರಿ (3 ವರ್ಷಗಳು) ಮಾನ್ಯತೆ ಪಡೆದ ಮಂಡಳಿಯಿAದ ಪೂರ್ಣ ಸಮಯದ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ನಾಲ್ಕು ವರ್ಷಗಳ ಅವಧಿಗೆ ಅಧಿಕಾರವಧಿ ಆಧಾರದ ಮೇಲೆ ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜ.22 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-22323005 (ಹೆಚ್.ಏ.ಎಲ್ ಬೆಂಗಳೂರು) ಅಥವಾ ಉದ್ಯೋಗ ವಿನಿಮಯ ಕಛೇರಿ ದೂ.ಸಂಖ್ಯೆ: 0820-2574869 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಕಾಂಪಿಟೇಶನ್ ಸ್ಪರ್ಧೆಯಲ್ಲಿ ವೃಷಭ್ ಶೆಣೈ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಯಾಗಿರುವ ವೃಷಭ್ ಶೆಣೈ, ಉದ್ಯಮಿ ಜಿ. ವಿಠಲ ಭಾಸ್ಕರ ಶೆಣೈ ಮತ್ತು ವೈಷ್ಣವಿ ಶೆಣೈ ದಂಪತಿ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರದ ಅರಿವು, ದೇಶಭಕ್ತಿಯ ಒಳ್ಳೆಯ ಶಿಕ್ಷಣ ನೀಡುವುದು ಪೋಷಕರ ಮುಂದಿರುವ ಇಂದಿನ ದೊಡ್ಡ ಸವಾಲಾಗಿದೆ. ಮಕ್ಕಳ ಮನಸ್ಸು ಬಹಳ ಸೂಕ್ಷ್ಮ ಮತ್ತು ಸಂವೇದನಾಶೀಲ ಆಗಿರುತ್ತದೆ. ಮನೆ ಮತ್ತು ಶಾಲೆಯ ವಾತಾವರಣದಲ್ಲಿ ಕಾಣುವ ಶಿಸ್ತು ಸಂಸ್ಕಾರಗಳನ್ನು ಅವು ಚಾಚೂ ತಪ್ಪದೇ ಅನುಸರಿಸುತ್ತವೆ. ಸಂಸ್ಕಾರಯುತ ಶಿಕ್ಷಣ ನೀಡುವುದರಲ್ಲಿ ಸೇವಾ ಸಂಗಮ ಶಿಶು ಮಂದಿರಗಳು ಸಕಾರಾತ್ಮಕ ಪಾತ್ರ ನಿರ್ವಹಿಸುತ್ತಿವೆ ಎಂದು ಲೇಖಕ ಬೈಂದೂರು ಚಂದ್ರಶೇಖರ ನಾವಡರು ಹೇಳಿದರು. ಅವರು ಬೈಂದೂರು ಶಿವಸಂಗಮ ಶಿಶು ಮಂದಿರದಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ ಮತ್ತು ಸಾಮೂಹಿಕ ಹುಟ್ಟುಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾತೆಯರು ಮತ್ತು ಮಕ್ಕಳು ಬಹಳ ಸಂಭ್ರಮದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸೇವಾ ಸಂಗಮ ಶಿಶುಮಂದಿರ ಬೈಂದೂರು ಇದರ ಅಧ್ಯಕ್ಷ ಮಂಜುನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅವರು ಸಂಕ್ರಾಂತಿ ಹಬ್ಬದ ಆಚರಣೆ ಮತ್ತು ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಆಚರಣೆಯ ಮಹತ್ವ ವಿವರಿಸಿದರು. ಈ ಸಂದರ್ಭದಲ್ಲಿ ಸೇವಾ ಸಂಗಮ ಟ್ರಸ್ಟಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲಾವಣ್ಯ ಬೈಂದೂರು ಇದರ ೨೦೨೫-೨೭ನೇ ಸಾಲಿನ ನೂತನ ಅಧ್ಯಕ್ಷರಾಗಿ ನರಸಿಂಹ ಬಿ. ನಾಯಕ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಚ್. ವಿಶ್ವನಾಥ ಆಚಾರ್ಯ ಪುನರಾಯ್ಕೆಯಾಗಿದ್ದಾರೆ. ಶನಿವಾರ ಸಂಜೆ ಲಾವಣ್ಯ ರಂಗಮನೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು ಗೌರವಾಧ್ಯಕ್ಷರಾಗಿ ಯು. ಶ್ರೀನಿವಾಸ ಪ್ರಭು, ವಿ. ಆರ್. ಬಾಲಚಂದ್ರ, ಉಪಾಧ್ಯಕ್ಷರಾಗಿ ರಾಮ ಕೆ., ರವೀಂದ್ರ ಶ್ಯಾನುಭಾಗ್, ಜತೆಕಾರ್ಯದರ್ಶಿಯಾಗಿ ಗಣೇಶ್ ಪರಮಾನಂದ, ರೋಶನ್ ಕುಮಾರ್, ರಾಜೇಶ್ ನಾಯ್ಕ, ಕೋಶಾಧಿಕಾರಿ ಸುರೇಶ್ ಹುದಾರ್, ಸಂಘಟನಾ ಕಾರ್ಯದರ್ಶಿಯಾಗಿ ಸುಮಂತ್ ಆಚಾರ್ಯ, ಶಶಾಂಕ್ ಕಾರಂತ್, ಶ್ರೀಧರ ವಸ್ರೆ. ವ್ಯವಸ್ಥಾಪಕರಾಗಿ ಹರೆಗೋಡು ಉದಯ್ ಆಚಾರ್ಯ, ಮೂರ್ತಿ ಬೈಂದೂರು, ಸುಬ್ರಹ್ಮಣ್ಯ ಎಸ್., ಗೌರವ ಸಲಹೆಗಾರರಾಗಿ ನಾಕಟ್ಟೆ ನಾಗರಾಜ ಶೆಟ್ಟಿ, ಸದಾಶಿವ ಡಿ. ಪಡುವರಿ, ನಾಗರಾಜ ಗಾಣಿಗ ಬಂಕೇಶ್ವರ, ವಿಶ್ವನಾಥ ಶೆಟ್ಟಿ, ಸುನಿಲ್ ಎಚ್. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಿ. ಗಣೇಶ್ ಕಾರಂತ್, ಬಿ. ರಾಮ ಟೈಲರ್, ಗಣಪತಿ ಎಸ್., ಗಿರೀಶ್ ಬೈಂದೂರು, ಬಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮೈಸೂರಿನ ಕುಂಬಾರಕೊಪ್ಪಲ್ನಲ್ಲಿ ನಡೆದ ಕರ್ನಾಟಕ ರಾಜ್ಯ ಸೀನಿಯರ್ ಬಾಲ್ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್ಶಿಪ್ನಲ್ಲಿ ಮೂಡುಬಿದಿರೆಯ ಆಳ್ವಾಸ್ ತಂಡ ಚಾಂಪಿಯನ್ಶಿಫ್ ಪಟ್ಟವನ್ನು ಮುಡಿಗೇರಿಸಿಕೊಂಡಿತು. ಸೆಮಿಫೈನಲ್ನಲ್ಲಿ ಆಳ್ವಾಸ್ ತಂಡ ಅಂಬಾರಿ ಮೈಸೂರು ತಂಡವನ್ನು 35-30, 35-23 ನೇರ ಸೆಟ್ಗಳಿಂದ ಸೋಲಿಸಿದರೆ, ಬನಶಂಕರಿ ತಂಡವು ಸೆಮಿಫೈನಲ್ನಲ್ಲಿ ವಿಜಯನಗರ ಸ್ಪೋರ್ಟ್ಸ್ ಕ್ಲಬ್ ತಂಡವನ್ನು 35-31, 22-35 ಹಾಗೂ 36-34 ಸೆಟ್ ಗಳಿಂದ ಸೋಲಿಸಿ, ಫೈನಲ್ ಹಂತಕ್ಕೆ ಅರ್ಹತೆ ಪಡೆದಿತ್ತು.ಅಂತಿಮ ಸುತ್ತಿನಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಬನಶಂಕರಿ ತಂಡವನ್ನು 36- 34 ಹಾಗೂ 35-21 ನೇರ ಸೆಟ್ ಗಳಿಂದ ಸೋಲಿಸಿ ಜಯ ಗಳಿಸಿತು.ಟೂರ್ನಿಯ ಉದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಆಳ್ವಾಸ್ನ ಆಕಾಶ್ ‘ಟೂರ್ನಿಯ ಅತ್ಯುತ್ತಮ ಆಟಗಾರ ಪ್ರಶಸ್ತಿ’ಯನ್ನು ಪಡೆದುಕೊಂಡರು. ಜೊತೆಯಲ್ಲಿ ಆಳ್ವಾಸ್ನ ವಿನಯ್ ‘ಬೆಸ್ಟ್ ಸೆಂಟರ್ ಪ್ಲೇಯರ್ ಪ್ರಶಸ್ತಿ’ ಗಳಿಸಿದರು. ವಿಜೇತರ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
