Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ  ವಾರ್ಷಿಕೋತ್ಸವದ ಅಂಗವಾಗಿ ಲೇಖಕ ಮತ್ತು ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅವರ ರಚನೆ ಮತ್ತು ನಿರ್ದೇಶನದಲ್ಲಿ  ಇಲ್ಲಿನ  ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ  ನಾಟಕ ಶ್ರೀ ಶಬರಿಮಲೆ ಸ್ವಾಮಿ ಅಯ್ಯಪ್ಪ ಅತ್ಯಂತ ಆಕರ್ಷಕವಾಗಿ  ಮೂಡಿಬಂದು  ಜನರಿಂದ ಅಪಾರವಾದ ಮೆಚ್ಚುಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಯಿತು. ವಾರ್ಷಿಕೋತ್ಸವದ ವೇದಿಕೆಗಳಲ್ಲಿ ಇಂತಹ ಭಕ್ತಿ ಪ್ರಧಾನ ನಾಟಕಗಳನ್ನು ಭಿನ್ನವಾಗಿ  ನುರಿತ ರಂಗ ತಂಡಗಳ ರೀತಿಯಲ್ಲಿ ಕಟ್ಟಿಕೊಡುವುದು ಬಹಳ ದೊಡ್ಡ ಸವಾಲಿನ ಕೆಲಸ. ಅದರಲ್ಲೂ ಅನಿವಾರ್ಯವಾಗಿ ಕೇವಲ  ಮೂರ್ನಾಲ್ಕು ದಿನಗಳ ಅವಧಿಯಲ್ಲಿ ತರಬೇತಿಯನ್ನು ಪಡೆದು ನುರಿತ ರಂಗ ತಂಡಗಳ ರೀತಿಯಲ್ಲಿ  ಈ ನಾಟಕವನ್ನು ಹುಬ್ಬೇರಿಸುವಂತೆ  ಚಂದಗೆ ಮನ ಮುಟ್ಟುವ ರೀತಿಯಲ್ಲಿ ಪ್ರದರ್ಶಿಸಿದ ರೀತಿ ವೀಕ್ಷಕರಿಗೆ ಅಚ್ಚರಿ ಭರಿತ ಸಂತೋಷ ನೀಡಿತ್ತು.  ಮಹಿಷಾಸುರನ ಸಂಹಾರದಿಂದ ಆರಂಭವಾದ ನಾಟಕ ಮಹಿಷಿಯ ಕೋಪ, ತಪಸ್ಸು, ದುಷ್ಕಾರ್ಯಗಳು, ದೇವಲೋಕದಲ್ಲಿ ನಾರದರ ತಂತ್ರಗಾರಿಕೆ,ಹರಿಹರರ ಸಮಾಗಮ, ಅಯ್ಯಪ್ಪನ ಜನನ, ರಾಣಿಯ ಹೊಟ್ಟೆ ನೋವಿನ ನಾಟಕ, ಮಹಿಷಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಸೇವಾ ಕೇಂದ್ರಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ಹಾಗೂ ಸೇವಾ ಸಿಂಧು / ಗ್ರಾಮ ಒನ್ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಗ್ರಾಮ ಒನ್ ಕೇಂದ್ರಗಳ ನಿರ್ವಾಹಕರ ಗ್ರಾಮ ಒನ್ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 208 ಕ್ಕೂ ಹೆಚ್ಚು ಗ್ರಾಮ ಒನ್ ಕೇಂದ್ರಗಳೂ ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಿದಂತಾಗಿದೆ. ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಗ್ರಾಮ ಒನ್ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಇಲಾಖೆಗಳ ಸಮನ್ವಯೊಂದಿಗೆ ಇನ್ನಷ್ಟು ಉತ್ಸುಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು. ಆಯುಷ್ಮಾನ್ ಭಾರತ, ಗ್ಯಾರಂಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.22: ನಗರದ ವಿಠಲವಾಡಿಗೆ ತೆರಳುವ ಮಾರ್ಗದ ಮನೆಯೊಂದರಲ್ಲಿ ರಾತ್ರಿ‌ ವೇಳೆ ಯಾರೂ ಇಲ್ಲದ ಸಂದರ್ಭ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕುಂದಾಪುರದ ಶಿವರಾಮ ಶೆಟ್ಟಿ ಹಾಗೂ ಅವರ ಪತ್ನಿ ಮಮತಾ ಅವರು ಮನೆಗೆ ಬೀಗ ಹಾಕಿ, ಬೆಂಗಳೂರಿನ ಮಕ್ಕಳ ಮನೆಗೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ. ಶನಿವಾರ ಬೆಳಿಗ್ಗೆ ಕೆಲಸದಾಕೆ ಹೂವಿನ ಗಿಡಕ್ಕೆ ನೀರು ಬಿಡಲು ಬಂದ ಸಂದರ್ಭ ಮನೆಯ ಬಾಗಿಲು ಅರ್ಧ ತೆರೆದಿರುವುದು ಗಮನಕ್ಕೆ ಬಂದಿದೆ. ಅನುಮಾನಗೊಂಡು ಮನೆಯ ಯಜಮಾನರಿಗೆ ಫೋನ್ ಮಾಡಿದ್ದಾಳೆ. ಬಳಿಕ ಮನೆ ಮಾಲಕರ ಸಂಬಂಧಿ ಸ್ಥಳಕ್ಕೆ ಬಂದು ಪರಿಶೀಲಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಘಟನಾ ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ವಜ್ರಾಭರಣ ಹಾಗೂ ಬೆಲೆಬಾಳುವ ರೇಷ್ಮೆ ಸೀರೆಗಳನ್ನು ಕದ್ದೊಯ್ದಿದ್ದಾರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕನ ಪಾತ್ರ ಹಿರಿದು. ಉತ್ತಮ ಶಿಕ್ಷಕರಿದ್ದಲ್ಲಿ ವಿದ್ಯಾರ್ಥಿ ಹಾಗೂ ಶಾಲೆಗೆ ಎಂದಿಗೂ ಹಿನ್ನಡೆ ಎಂಬುದಿಲ್ಲ. ಸಮಾಜದಲ್ಲಿಯೂ ಶಿಕ್ಷಕ ವೃತ್ತಿಗೆ ವಿಶೇಷ ಸ್ಥಾನಮಾನವಿದೆ ಎಂದು ಮಾಜಿ ಶಾಸಕ, ಹೆಮ್ಮಾಡಿ ಶ್ರೀ ವಿ.ವಿ.ವಿ ಮಂಡಳಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಶನಿವಾರ ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯ ರತ್ತೂಬಾಯಿ ವಾರ್ಷಿಕ ಸಂಭ್ರಮ – 2024 ಉದ್ಘಾಟಿಸಿ ಮಾತನಾಡಿ ಶ್ರೀ ವಿ.ವಿ.ವಿ ಮಂಡಳಿ ಸಂಸ್ಥಾಪಕರ ಆಶಯದಂತೆ ನಡೆದುಕೊಂಡು ಬಂದಿದ್ದು, ಕಠಿಣ ಸಂದರ್ಭದಲ್ಲಿಯೂ ಶಿಕ್ಷಣ ಸಂಸ್ಥೆಗಳನ್ನು ಯಾವುದೇ ತೊಂದರೆಯಿಲ್ಲದೇ ಮುನ್ನಡೆಸಲಾಗಿದೆ. ಯಾವುದೇ ಅಡ್ಡಿ ಇಲ್ಲದಂತೆ ಇದು ಮುಂದುವರಿಯಲಿದೆ ಎಂದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ‌ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಬಾಬು ಶೆಟ್ಟಿ ಹಾಗೂ ಇತ್ತೀಚಿಗೆ ಸೇವೆಯಿಂದ ನಿವೃತ್ತರಾದ ಶಿಕ್ಷಕ ಚಂದ್ರ ಕೆ. ದೇವಾಡಿಗ, ಆದರ್ಶ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ನಿರ್ಮಲಾ ಪಿ.ಕೆ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ವಿ.ವಿ.ವಿ ಮಂಡಳಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತ್ರಾಸಿ ಕಡಲ ಕಿನಾರೆಯಲ್ಲಿರುವ ಪ್ರವಾಸಿಗನನ್ನು ಕರೆದೊಯ್ದಿದ್ದ ಜೆಟ್‌ಸ್ಕೀ ಬೋಟ್ ಮಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ಸ್ಕೀ ರೈಡರ್ ರೋಹಿದಾಸ್ (45) ನಾಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಬೀಚ್ನಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗರನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕೀ ಮಗುಚಿ ಬಿದ್ದಿತ್ತು. ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಿ ಕರೆತರಲಾಗಿದೆ. ರೈಡ್ ಮಾಡುತ್ತಿದ್ದ ರೋಹಿದಾಸ್ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ. ಮುರ್ಡೇಶ್ವರ ನಿವಾಸಿಯಾದ ರೋಹಿದಾಸ್ ಕುಟುಂಬದೊಂದಿಗೆ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ಸ್ಕೀ ಮತ್ತಿತರ ಬೋಟ್ ರೈಡ್ ಕಾಯಕ ಮಾಡಿಕೊಂಡಿದ್ದರು. ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಚಿತ್ರ: ಸಾಂದರ್ಭಿಕ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಈ ಸಾಧನೆ ನಿಜಕ್ಕೂ ಶಾಲೆಗೆ ಹೆಮ್ಮೆ ತರುವ ವಿಷಯ. ಎಲ್ಲಾ ವಿದ್ಯಾರ್ಥಿಗಳಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ ಅದನ್ನು ಗುರುತಿಸುವ ಕೆಲಸ ಶಾಲಾ ಶಿಕ್ಷಕರು ಮತ್ತು ಪೋಷಕರಿಂದ ಆಗಬೇಕು ಹಾಗೂ ಇವರಿಬ್ಬರ ಯಶಸ್ಸು ಉಳಿದ ಮಕ್ಕಳಿಗೆ ಸ್ಫೂರ್ತಿ ಆಗಲಿ ಮುಂದಿನ ದಿನಗಳಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರನ್ನು ಗಳಿಸುವಂತಾಗಲಿ ಎಂದು ಅನುಪಮಾ ಎಸ್. ಶೆಟ್ಟಿ ಹೇಳಿದರು ಅವರು ಗುರುಕುಲ ಶಾಲೆಯಲ್ಲಿ ರಾಷ್ಟ್ರಮಟ್ಟದ ಕರಾಟೆ ಸ್ಫರ್ಧೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಿ. 15 ರಂದು ದೆಹಲಿಯ ಕಿಯೋದಲ್ಲಿ ನಡೆದ ಅಖಿಲ ಭಾರತ ಸಬ್ ಜೂನಿಯರ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿಯ ಎಂಟನೇ ತರಗತಿಯ ವಿದ್ಯಾರ್ಥಿನಿ ಝಾರ, ಸಬ್ ಜೂನಿಯರ್ 13 ವಯೋಮಿತಿಯ 52 ಕೆಜಿ ಕುಮಿಟೆ ವಿಭಾಗದಲ್ಲಿ ಕಂಚಿನ ಪದಕ ಪಡೆದರೆ, ಏಳನೇ ತರಗತಿಯ ವಿದ್ಯಾರ್ಥಿನಿ ಸಾನಿಧ್ಯ ಸಂತೋಷ್ ನಾಯ್ಕ್, ಸಬ್ ಜೂನಿಯರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಾಂಸ್ಕೃತಿಕ ಚಟುವಟಿಕೆಗಳು ಕೇವಲ ಆಸಕ್ತಿಗೆ ಮಾತ್ರ ವೇದಿಕೆಯಲ್ಲ. ಬದಲಾಗಿ ಊರಿನ ಅಭಿವೃದ್ದಿಯ ಚಿಂತನೆಗಳು ಕೂಡ ಪುಟಿದೇಳುತ್ತದೆ. ಗ್ರಾಮೀಣ ಭಾಗದಲ್ಲಿ ಸಂಚಲನ ಸಂಸ್ಥೆ ರಂಗಾಸಕ್ತಿಯ ಮೂಲಕ ರಾಜ್ಯಮಟ್ಟದಲ್ಲಿಗುರುತಿಸಿಕೊಂಡಿರುವುದು ಇತರ ಗ್ರಾಮಗಳಿಗೆ ಮಾದರಿಯಾಗಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಸಂಚಲನ ರಿ. ಹೊಸೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ವತಿಯಿಂದ ಹೊಸೂರಿನಲ್ಲಿನಡೆದ ವನಸಿರಿಯಲ್ಲೊಂದು ರಂಗ ಸುಗ್ಗಿ ಮೂರು ದಿನಗಳ ರಾಜ್ಯಮಟ್ಟದ ನಾಟಕೋತ್ಸವದ ಸಮಾರೋಪ ಸಮಾರಂಭದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಈ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಮಹಾದೇವ ಮರಾಠಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕಿ ಪೂರ್ಣಿಮಾ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೆಶಿತ ಸದಸ್ಯರಾದ ನಾಗರಾಜ ಶೆಟ್ಟಿ, ನಾಗರಾಜ ಗಾಣಿಗ, ಪಶುಪಾಲನಾ ಇಲಾಖೆಯ ನಿವೃತ್ತ ಉಪನಿರ್ದೆಶಕ ಶಂಕರ ಶೆಟ್ಟಿ, ಉದ್ಯಮಿ ಮ್ಯಾಥ್ಯ ಕೆ.ಎಸ್. ನಂದರಗದ್ದೆ, ಬೈ.ವ್ಯ. ಸೇವ ಸ. ಸಂಘ ತೂದಳ್ಳಿ ಶಾಖೆಯ ಶಾಖಾಧಿಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಂಡ್ಸೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವದ ಕಾರ್ಯಕ್ರಮಕ್ಕೆ ಶಾಲಾ ಧ್ವಜಾರೋಹ್ಹಣದ ಮೂಲಕ ಚಾಲನೆ ನೀಡಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಡಾ. ಪೂರ್ಣಿಮಾ ಟಿ. ಧ್ವಜಾರೋಹಣ ನೆರವೇರಿಸಿದರು. ವಂಡ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ಧನ್ ಜೋಗಿ ಕಾರ್ಯಕ್ರಮ ಉದ್ದೇಸಿಸಿ ಮಾತನಾಡಿ, ಮನೆ ಹಾಗೂ ಶಾಲೆ ವಿಶ್ವದ ಅತ್ಯಂತ ಸುಂದರ ಸ್ಥಳಗಳು. ಜಾತಿ ಧರ್ಮ ಭೇದ ವಿಲ್ಲದ ಸ್ಥಳವೆಂದರೆ ಅದು ಶಾಲೆ. ಶಾಲೆ ವಾರ್ಷಿಕೋತ್ಸವವೆಂದರೆ ಮಕ್ಕಳ ಹಬ್ಬ ಎಂದರು. ಗ್ರಾಮ ಪಂಚಾಯತ್ ವಂಡ್ಸೆಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಉದಯಕುಮಾರ್ ಶೆಟ್ಟಿ, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ, ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ, ಶ್ರೀಧರ್ ರಾವ್, ವಿದ್ಯಾರ್ಥಿ ಆರಾಧ್ಯ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತತೆಯರು ಉಪಸ್ಥಿತರಿದ್ದರು. ಪ್ರಭಾರ ಮುಖ್ಯ್ಯಪಾಧ್ಯಯರಾದ ಸದಾಶಿವ ಸ್ವಾಗತಿಸಿದರು. ಸಹಶಿಕ್ಷಕ ಸೋಮಯ್ಯ ಜನ್ನು ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ದೈಹಿಕ ಶಿಕ್ಷಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಫ್ರೆಂಡ್ಸ್ ಮಾರಿಕಾಂಬ ಕ್ರಿಕೆಟರ್ಸ್ ಕಳವಾಡಿ ಇದರ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಪೂರ್ಣಚಂದ್ರ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಸುರೇಂದ್ರ ದೇವಾಡಿಗ ಅವರನ್ನು ಆಯ್ಕೆಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಲಾಗಿದೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ (ಈಅI) ಮೈಸೂರು ಹಾಗೂ ಇನ್ಸಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (Iಊಒ) ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ರಾಜ್ಯಾದ್ಯಂತ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಂದ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ  ವಿವರ:ಫುಡ್ ಮತ್ತು ಬಿವರೇಜ್ ಸರ್ವೀಸ್ ಸ್ಟೀವರ್ಡ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ -100 ಹಾಗೂ ಪರಿಶಿಷ್ಟ ಪಂಗಡದ – 49 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು, ರೂಮ್ ಅಟೆಂಡೆಂಟ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ – 30 ಹಾಗೂ ಪರಿಶಿಷ್ಟ ಪಂಗಡದ – 19 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಟ ಐದನೇ…

Read More