Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ದೇಶದ ಅರ್ಹ ಪ್ರತಿಯೊಬ್ಬ ನಾಗರಿಕರು ಮತದಾನದ ಹಕ್ಕನ್ನು ಹೊಂದಿ ಚುನಾವಣಾ ಪ್ರಕ್ರೀಯೆಯಲ್ಲಿ ತಪ್ಪದೇ ಸಕ್ರೀಯವಾಗಿ ಭಾಗವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಿರಣ್ ಎಸ್. ಗಂಗಣ್ಣನವರ್ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಪರಿಕಲ್ಪನೆಯು ನಮ್ಮ ಪ್ರಾಚೀನ ಸಂಸ್ಕೃತಿಯಲ್ಲಿ ರಾಜರುಗಳು ತಮ್ಮ ಆಳ್ವಿಕೆಯಲ್ಲಿ ನಡೆಸುತ್ತಿದ್ದ ಸಭೆ, ಓಲಗ, ಒಡ್ಡಲೊಗಳಲ್ಲಿ ಸಮಾಜ ಕಟ್ಟುವಂತಹ ಜನ ಸಮಾನ್ಯರ ಅನಿಸಿಕೆ ಅಭಿಪ್ರಾಯಗಳನ್ನು ಹೇಳಲು ಅವಕಾಶವಿತ್ತು ಇದು ಪ್ರಜಾಪ್ರಭುತ್ವದ ಒಂದು ಅಂಗ, ಪ್ರಸ್ತತ ಪ್ರಜಾಪ್ರಭುತ್ವದಲ್ಲಿ ಸಹಾ ವಿಧಾನಪರಿಷತ್ತು ವಿಧಾನಸಭೆ ಸಂಸತ್ತು ಮೇಲ್ಮನೆ ಕೆಳಮನೆ ಅಂತಹ ಸಂಸ್ಥೆಗಳು ನಿಯಮಾನುಸಾರ ತಮ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸಹ ಸಂಸ್ಥಾಪಕರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ” ಸಂವಿಧಾನವು ಈ ದೇಶದ ಎಲ್ಲ ಜನರಿಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಸಮಾನತೆಯ ಹಕ್ಕನ್ನು ನೀಡಿ ಸುಭದ್ರ ಜೀವನ ನಡೆಸುವಲ್ಲಿ ಸಹಕಾರಿಯಾಗಿದೆ. ದೇಶ ಸ್ವಾತಂತ್ರ್ಯಗೊಳ್ಳುವಲ್ಲಿ ಅನೇಕ ಭಾರತೀಯರ ತ್ಯಾಗ ಬಲಿದಾನವಿದೆ ಇವರ ಹೋರಾಟದ ಫಲವೇ ನಾವೆಲ್ಲರೂ ಇಂದು ನೆಮ್ಮದಿಯಿಂದ ಜೀವಿಸುವಂತೆ ಮಾಡಿದೆ. ದೇಶ ನನಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾನು ಏನು ಕೊಟ್ಟಿದೆ ಎನ್ನುವುದು ನಾವೆಲ್ಲರೂ ಆತ್ಮಾವಲೋಕನವನ್ನು ಮಾಡಿಕೊಳ್ಳಬೇಕು. ಸಂವಿಧಾನವನ್ನು ರಚಿಸುವಲ್ಲಿ ಶ್ರಮಿಸಿದ ಮಹನೀಯರನ್ನು ನಾವೆಲ್ಲರೂ ಗೌರವಿಸಬೇಕು. ” ಎಂದು ವಿದ್ಯಾರ್ಥಿಗಳನ್ನು ಕುರಿತು ಶುಭನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು , ವಿದ್ಯಾರ್ಥಿಗಳು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರನ್ನು ಅತಿಥಿಗಳಂತೆ ಕಾಣುವುದರೊಂದಿಗೆ ಅವರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಇವರ ವತಿಯಿಂದ ಕೃಷಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾದ ಕೃಷಿ ಪ್ರವಾಸೋದ್ಯಮದ ಕುರಿತು ಕಾರ್ಯಾಗಾರ ವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಗೆ ಕಳೆದ ಸಾಲಿನಲ್ಲಿ 4.5 ಕೋಟಿಗೆ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ವರ್ಷದಿಂದ ವರ್ಷಕ್ಕೆ ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಪ್ರವಾಸಿಗರ ರಕ್ಷಣೆ ಹಾಗೂ ಅನುಕೂಲಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಶೇಕಡ 70ಕ್ಕಿಂತ ಹೆಚ್ಚು ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ. ಕೃಷಿ ಕ್ಷೇತ್ರವನ್ನು ಪ್ರವಾಸೊದ್ಯಮದ ಭಾಗವಾಗಿರಬೇಕು ಎಂಬ ಮುಖ್ಯ ಉದ್ದೇಶದಿಂದ ಅದನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸರಕಾರಿ ಶಾಲೆಯ ಉಳಿವಿಗೆ ಡಾ. ಗೋವಿಂದ ಬಾಬು ಪೂಜಾರಿ ಅವರು ನೀಡಿರುವ ಕೊಡುಗೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಸರಕಾರಿ ಶಾಲೆಗಳ ಪ್ರಾಮುಖ್ಯತೆ ಹೆಚ್ಚಿದೆ ಇದಕ್ಕಾಗಿ ನನ್ನ ವತಿಯಿಂದ ಸಹಕಾರ ನೀಡುತ್ತಿದ್ದು ನಮ್ಮೂರ ಶಾಲೆಯ ಉಳುವಿಗೆ ಸಹಕಾರ ನೀಡುವುದು ನಮ್ಮೆಲ್ಲರ ಜವಬ್ದಾರಿ ಎಂದು ಹಿರಿಯ ಉದ್ಯಮಿ ನಾಗರಿಕರಾದ ನಾಡೋಜ ಷಡಕ್ಷರಿ ಅವರು ಹೇಳಿದರು.  ಅವರು ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡಾ. ಗೋವಿಂದ ಬಾಬು ಪೂಜಾರಿ ಅವರು ಆಡಳಿತ ಕಚೇರಿಗೆ ಕೊಡುಗೆಯಾಗಿ ಸುಮಾರು ರೂ. 3ಲಕ್ಷ ವೆಚ್ಚದ ವಿವಿಧ ಸವಲತ್ತುಗಳ ಉದ್ಘಾಟಿಸಿ ಮಾತನಾಡಿದರು. ಬಳಿಕ ಮಾತನಾಡಿ ಡಾ. ಗೋವಿಂದ ಬಾಬು ಪೂಜಾರಿ ಮಾತನಾಡಿ, ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದತ್ತು ಸ್ವೀಕಾರ ಮಾಡಿದ್ದು ಯಾವುದೇ ಖಾಸಗಿ ಶಾಲೆಯ ವ್ಯವಸ್ಥೆಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಹಮ್ಮಿಕೊಂಡಿದ್ದು ಒಂದೊಂದಾಗಿ ಪೂರ್ಣಗೊಳಿಸಲಾಗುತ್ತಿದೆ ಮಾದರಿ ಶಾಲೆಯನ್ನಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಶಾಲೆಗಳ ಉಳಿವಿನಲ್ಲಿ ಶಿಕ್ಷಕರು, ಎಸ್.ಡಿ.ಎಂ.ಸಿ ಹಾಗೂ ಹಳೆವಿದ್ಯಾರ್ಥಿಗಳ ಪಾತ್ರ ಮಹತ್ವದ್ದು. ಇಲ್ಲಿ ಕಲಿತ ವಿದ್ಯಾರ್ಥಿಗಳು ಯಾವುದೇ ಸ್ಥಾನದಲ್ಲಿದ್ದರೂ ಅಭಿಮಾನದಿಂದ ಶಾಲೆಯತ್ತ ಮತ್ತೆ ಹಿಂದಿರುಗಿ ನೋಡಿದರೆ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಬೇಕಿಲ್ಲ. ಅಂತಹ ವಾತಾವರಣವನ್ನು ರೂಪಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಹೇಳಿದರು. ಅವರು ಇಲ್ಲಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶನಿವಾರ ಸ್ವಯಂಸ್ಪೂರ್ತಿ ಫೌಂಡೇಶನ್ ರಿ. ಬೆಂಗಳೂರು ವತಿಯಿಂದ ಕೊಡುಗೆಯಾಗಿ ನೀಡಿದ ಟೇಬಲ್ ಕುರ್ಚಿ ಸಹಿತ ನಾಲ್ಕು ಕಂಪ್ಯೂಟರ್ ಸೆಟ್, ಬುಕ್ ರ್ಯಾಕ್ ಹಾಗೂ ಆಟದ ಸಾಮಾಗ್ರಿಗಳನ್ನು ಒಳಗೊಂಡ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಲೋಪಾರ್ಪಣೆಗೊಳಿಸಿ ಮಾತನಾಡಿ, ಶಾಲೆ ಹಾಗೂ ದೇವಸ್ಥಾನದ ಆವರಣದಲ್ಲಿ ಅಭಿಮಾನ ಹಾಗೂ ಭಕ್ತಿ ಮಾತ್ರವೇ ಪ್ರಧಾನವಾಗಿರಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಆಲೋಚನಾ ಕ್ರಮವನ್ನು ರೂಪಿಸುವ ಶಕ್ತಿ ಸರಕಾರಿ ಶಾಲೆಗಳಲ್ಲಿದೆ ಎಂದರು. ಸ್ವಯಂಸ್ಪೂರ್ತಿ ಫೌಂಡೇಶನ್ ಸಂಸ್ಥಾಪಕ ಸಿ.ಎಸ್. ನಾಗರಾಜ ಶೆಟ್ಟಿ ಜಡ್ಕಲ್ ಅವರು ಮಾತನಾಡಿ, ಸಂಸ್ಥೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆಯಾದ ಸುರಭಿ ರಿ. ಬೈಂದೂರು ಇದರ ಬೆಳ್ಳಿಹಬ್ಬದ ಸಂಭ್ರಮಾಚರಣೆ – ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 29 ಜನವರಿಯಿಂದ ಆರಂಭಗೊಳ್ಳಲಿದ್ದು, ಫೆಬ್ರವರಿ 02ರ ತನಕ 5 ದಿನಗಳ ಕಾಲ ಬೈಂದೂರಿನ ಶಾರದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ 06:30ರಿಂದ ಅದ್ದೂರಿಯಾಗಿ ನಡೆಯಲಿದೆ. ಸುರಭಿ ಜೈಸಿರಿಗೆ ಚಾಲನೆ:ಜನವರಿ 29ರ ಬುಧವಾರ ಸುರಭಿ ಜೈಸಿರಿಗೆ ಚಾಲನೆ ದೊರೆಯಲಿದ್ದು. ಸಚಿವರಾದ ಮಂಕಾಳ ವೈದ್ಯ ಅವರು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ. ಎಂ. ಮೋಹನ್ ಆಳ್ವ ಅವರು ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಶುಭಶಂಸನೆಗೈಲಿದ್ದಾರೆ. ಈ ವೇಳೆ ವಿವಿಧ ಕ್ಷೇತ್ರದ ಗಣ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಅಂದು ಸುರಭಿಯ ಹಿರಿಯ ಹಿನ್ನೆಲೆ ಕಲಾವಿದ ಚಂದ್ರ ಬಂಕೇಶ್ವರ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಗುತ್ತದೆ. ಬಳಿಕ ಸುರಭಿ ನೃತ್ಯ ಕಲಾವಿದರಿಂದ ನೃತ್ಯ ವೈವಿಧ್ಯ ಪ್ರದರ್ಶನ ಹಾಗೂ ಚಿತ್ರಕಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅತ್ಯಂತ ಹಿಂದುಳಿದ ಪ್ರದೇಶವಾದ ಸೌಪರ್ಣಿಕಾ ನದಿಯ ತಟದ ಬಂಟ್ವಾಡಿಯಲ್ಲಿ ಪ್ರಾರಂಭಗೊಂಡ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು ಕಳೆದ 75 ವರ್ಷಗಳಲ್ಲಿ ಅನೇಕ ಏಳುಬೀಳುಗಳನ್ನು ಕಂಡಿದ್ದರೂ ಬಹಳಷ್ಟು ಅಭಿವೃದ್ಧಿ ಹೊಂದಿದೆ. ಸರಕಾರದಿಂದ ಬರುತ್ತಿರುವ ಅನುದಾನ ಹಾಗೂ ಶಿಕ್ಷಕರ ನೇಮಕಾತಿ ಸ್ಥಗಿತಗೊಂಡಿರುವುದರಿಂದ ಶಾಲೆಯ ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಗೌರವ ಶಿಕ್ಷಕಿಯರನ್ನು ನೇಮಕ ಮಾಡಿಕೊಂಡು ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವ ಪ್ರಯತ್ನ ನಡೆದಿದೆ ಎಂದು ಶಾಲೆಯ ಸಂಚಾಲಕ, ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಬಿ. ಅರುಣ್ ಕುಮಾರ್ ಶೆಟ್ಟಿ ಹೇಳಿದರು. ಸೇನಾಪುರ ಗ್ರಾಮದ ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಶುಕ್ರವಾರ ಮಾತನಾಡಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಶ್ರೀಕಾಂತ ಶ್ಯಾನುಭಾಗ್, ಸಿಆರ್‌ಪಿ ಸತೀಶ್ ಶೆಟ್ಟಿ, ಉದ್ಯಮಿಗಳಾದ ಅಜಿತ್ ಪ್ರಸಾದ್ ಶೆಟ್ಟಿ ಬೆಂಗಳೂರು, ಚಿತ್ತರಂಜನ್ ಹೆಗ್ಡೆ ಹರ್ಕೂರು, ಶಿಕ್ಷಕ-ರಕ್ಷಕ ಸಮಿತಿ ಅಧ್ಯಕ್ಷೆ ಜಯಲಕ್ಷ್ಮೀ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿಯ ಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಬೈರವ ದೇವಸ್ಥಾನದಲ್ಲಿ ದ್ವೀತಿಯ ವರ್ಷದ ವರ್ಧಂತ್ಯುತ್ಸವ, ಶಿರಸಿ ಶ್ರೀ ಮಾರಿಕಾಂಬ ದೇವಿಯ ಪುನರ್ ಪ್ರತಿಷ್ಠೆ- ಕಲಶೋತ್ಸವ, ಶ್ರೀ ಕಾಲಬೈರವ ಸೇವಾ ಸಂಘದ 11ನೇ ವಾರ್ಷಿಕೋತ್ಸವ, ಶ್ರೀ ಶಿವಗೋರಕ್ಷನಾಥ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭವು ಜ.26 ರಿಂದ ಜ.27 ರ ತನಕ ನಡೆಯಲಿದೆ. ಜ. 26ರ ಬೆಳಿಗ್ಗೆ 9.30ರಿಂದ ಚಿತ್ರಕೂಟ ಸಹಿತ ಶ್ರೀ ನಾಗದೇವರಿಗೆ ಪಂಚವಿಂಶತಿ ಕಲಶ, ಅಧಿವಾಸ ಹೋಮ, ಕಲಶಾಭಿಷೇಕ, ಮಹಾ ಪೂಜೆ, ಪ್ರಸಾದ ವಿತರಣೆ ಹಾಗೂ ಸಂಜೆ 5.30ರಿಂದ ಶ್ರೀ ಮಾರಿಕಾಂಬ ದೇವಿಯ ಬಿಂಬ ಪುನರ್ ಪ್ರತಿಷ್ಠೆ, ಬಿಂಬಪ್ರತಿಷ್ಠಾಪನಾಧಿಹೋಮಗಳು, ಚತುಃ ವಿಂಶತಿ ಕಲಶ ಸ್ಥಾಪನಾದಿ ಹೋಮಗಳು, ಕಲಶಾಭೀಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಜ.27ರ ಬೆಳಿಗ್ಗೆ 9.30ರಿಂದ ಶ್ರೀ ಕಾಲಭೈರವ ದೇವರಿಗೆ ದ್ವೀತಿಯ ವರ್ಧಂತ್ಯುತ್ಸವ ಪ್ರಯುಕ್ತ ಅಷ್ಠೋತ್ತರ ಕಲಶ, ತತ್ವ ಹೋಮ, ಅಧಿವಾಸ ಹೋಮ, ವಿಶೇಷ ಪಂಚಾಮೃಭಿಷೇಕ, ಕಲಾಶಭಿಷೇಕ, ಮಹಾಪೂಜೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ, ಗೊಂಬೆಗಳ ಮತ್ತು ಆಟಿಕೆಗಳ ವೈವಿಧ್ಯಮಯ ಪ್ರದರ್ಶನವು ಸಂಸ್ಥೆಯ ಕಾರ್ಯಕರ್ಶಿಗಳಾದ ರಾಧಕೃಷ್ಣ ಶೈಣ್ಯೆ ಅವರ ನೇತೃತ್ವದಲ್ಲಿ ಜರಗಿತು. ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ರಾಧಕೃಷ್ಣ ಶೈಣ್ಯೆ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆಯನ್ನು ನೀಡಿದರು. ಚಿತ್ತಾಕರ್ಷಕವಾದ ಗೊಂಬೆಗಳು ಮತ್ತು ಆಟೆಕೆಗಳೊಂದಿಗೆ, ಪುಟಾಣಿಗಳ ಸಂಗೀತ ನರ್ತನವು ಎಲ್ಲರ ಮನಸೊರೆಗೊಂಡವು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್‌ ಗಾಣಿಗ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಅಶ್ವಿನಿ ಸ್ವಾಗತಿಸಿ, ಸ್ವಪ್ನಾ ವಂದರ್ಪಣೆ ಗೈದರು ಹಾಗೂ ಶ್ರೀಲತಾ ಕಾರ್ಯಕ್ರಮವನ್ನು ಸಯೋಜಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಯುವ ಬಂಟರ ಸಂಘದ ಪೋಷಕರು, ಗೋವಾ ಬಂಟರ ಸಂಘದ ರಜತ ಸಂಭ್ರಮದ ಅಧ್ಯಕ್ಷರಾದ ಕಾವಡಿ ಸದಾಶಿವ ಶೆಟ್ಟಿ ದಂಪತಿ ಅವರನ್ನು ಯುವ ಬಂಟರ ಸಂಘದ ಪರವಾಗಿ ಸಂಘದ ಮಹಾ ನಿರ್ದೇಶಕರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರು ಸನ್ಮಾನಿಸಿ ಗೌರವಿಸಿದರು. ಮೈಸೂರಿನ ಜ್ಞಾನ ಸರೋವರ ರೆಸಿಡೆನ್ಸಿಯಲ್ ಸ್ಕೂಲ್ ನ ಆಡಳಿತ ನಿರ್ದೇಶಕರಾದ ಸುಧಾಕರ ಶೆಟ್ಟಿ, ಡಾ. ಗಣನಾಥ ಎಕ್ಕಾರು, ಉಳ್ತೂರು ಮೋಹನದಾಸ್ ಶೆಟ್ಟಿ, ಯುವ ಬಂಟರ ಸಂಘದ ಪೋಷಕರಾದ ಗಿಳಿಯಾರು ಬಡಾಮನೆ ರತ್ನಾಕರ ಜಿ. ಶೆಟ್ಟಿ, ಚಲನಚಿತ್ರ ನಟರಾದ ದಯಾನಂದ ಶೆಟ್ಟಿ, ಹರೀಶ್ ವಾಸು ಶೆಟ್ಟಿ, ಯುವ ಬಂಟರ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ, ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು, ಉಪಾಧ್ಯಕ್ಷರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಮಾಜಿ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ಕೊಡ್ಲಾಡಿ, ಕಂದಾವರ ರತ್ನಾಕರ ಶೆಟ್ಟಿ, ಹರ್ಷ ಶೆಟ್ಟಿ ಕಾವಡಿ, ಪ್ರವೀಣ್ ಶೆಟ್ಟಿ ಕಾವಡಿ, ಪ್ರಕಾಶ್…

Read More