ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಪ್ರತಿಷ್ಠಿತ ಮದರ್ ತೆರೆಸಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಎರಡು ಪ್ರತ್ಯೇಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಎರಡರಲ್ಲಿಯೂ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನ.15ರಂದು ಆಯೋಜಿಸಿದ ಅಂತರ್ಕಾಲೇಜು ಸ್ಪರ್ಧೆ “ಉಗಮ-2024″ರ ಸಮಗ್ರ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಶಂಕರನಾರಾಯಣದ ಮದರ್ ತೆರೆಸಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘವಾದ ಸಾಧನೆಗೈದಿದ್ದಾರೆ. ಇಂಗ್ಲಿಷ್ ಭಾಷಣದಲ್ಲಿ ಸಾನ್ವಿ ಶೆಟ್ಟಿ ಪ್ರಥಮ, ಪಾತ್ರ ಪ್ರವೀಣ (ಅಣಕು ಸಂದರ್ಶನ)ದಲ್ಲಿ ಸುಮಂತ್ ಶೆಟ್ಟಿ ದ್ವಿತೀಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಮ್ಯಾಡ್ ಆಡ್ ನಲ್ಲಿ ಪ್ರಥಮ ಕ್ಯಾಂಪಸ್ ರೀಲ್ಸ್ ನಲ್ಲಿ ತೃತೀಯ ಸ್ಥಾನವನ್ನು ಪಡೆಯುವುದರ ಮೂಲಕ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಕುಂದಾಪುರದ ಮೂಡ್ಲಕಟ್ಟೆಯ ಐ ಎಮ್ ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಇಲ್ಲಿ ನ.16ರಂದು ನಡೆದ “NAVONMESH” ಅಂತರ್ಕಾಲೇಜು ಸ್ಫರ್ಧೆಯಲ್ಲಿ, ಮದರ್ ತೆರೆಸಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಪ್ರತಿಭಾಭಿವ್ಯಕ್ತಿಯ ಮೂಲಕ ಸ್ಪರ್ಧೆಯ ಸಮಗ್ರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಉಚಿತ ಎನ್. ಎಂ.ಎಂ.ಎಸ್.ತರಬೇತಿ ಕಾರ್ಯಾಗಾರ ವಿದ್ಯಾರಣ್ಯ ಶಾಲೆಯಲ್ಲಿ ನಡೆಯಿತು. ಈ ಕಾರ್ಯಾಗಾರವು ವಿದ್ಯಾರಣ್ಯ ಶಾಲೆಯ ಸಹಕಾರದೊಂದಿಗೆ ಆರು ವಾರಗಳು ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ತರಬೇತಿ ನೀಡಲಿದ್ದಾರೆ. ಕಾರ್ಯಕ್ರಮದ ಉದ್ಘಾಟಿಸಿದ ಎನ್.ಎಂ.ಎಂ.ಎಸ್. ಜಿಲ್ಲಾ ನೋಡೆಲ್ ಆಗಿರುವ ಚಂದ್ರ ನಾಯ್ಕ್ ಮಾತನಾಡುತ್ತ, “ಮಕ್ಕಳು ಈ ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡು ಹೆಚ್ಚು ಮಕ್ಕಳು ಆಯ್ಕೆಯಾಗಿ ತಾಲೂಕಿಗೆ ಕೀರ್ತಿ ತರಬೇಕು. ಪ್ರಸ್ತುತ ವರ್ಷ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಬಡತನವನ್ನು ಹೊಂದಿರುವ ಪ್ರತಿಭಾನ್ವಿತ ಮಕ್ಕಳು ಬಡತನದ ಕಾರಣವಾಗಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸದೆ ಮುಂದುವರಿಸಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈ ಎನ್. ಎಂ.ಎಂ.ಎಸ್.ಯೋಜನೆಯನ್ನು ಜಾರಿಗೆ ತಂದಿದ್ದು,ಇಂದು ಈ ಯೋಜನೆಯಿಂದ ಹಲವಾರು ಪ್ರತಿಭಾನ್ವಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 7ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕಾಲೇಜಿನ ವೈದ್ಯರಿಂದ ಕಾರ್ಯಾಗಾರ ನಡೆಯಿತು. ಹಲವು ಪ್ರಾತ್ಯಕ್ಷಿಕೆಗಳಿಂದ ಡಾI ಶ್ರೀನಿಧಿ, ಡಾI ಸ್ಫೂರ್ತಿ ಮತ್ತು ಡಾI ರಚನ ಅವರು ವಿದ್ಯಾರ್ಥಿಗಳಿಗೆ ಡಯಟ್, ವ್ಯಾಯಾಮ, ಮಾಲಿಶ್, ನಿಯಮಿತ ಆಹಾರ ಸೇವನೆ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ, ಉಪವಾಸ, ಸ್ಮರಣೆ,ಸಮತೋಲಿತ ದೈಹಿಕ ಮತ್ತು ಮಾನಸಿಕ ಆರೋಗ್ಯ ಕ್ಷೇಮ ಇತ್ಯಾದಿಗಳ ಕುರಿತು ಮೂರು ಹಂತಗಳಲ್ಲಿ ವಿವರಣೆ ನೀಡಿ, ನಂತರ ವಿದ್ಯಾರ್ಥಿಗಳೊಂದಿಗೆ ಪ್ರಶ್ನೋತ್ತರದಲ್ಲಿ ಪಾಲ್ಗೊಂಡು ಅವರ ಸಂಶಯವನ್ನು ನಿವಾರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ರವಿದಾಸ್ ಶೆಟ್ಟಿ ಪ್ರಸ್ತಾವಿಸಿ, ಶಿಕ್ಷಕಿ ದೀಪಾ ನಿರೂಪಿಸಿ, ಸ್ವಾಗತಿಸಿದರು. ಶಿಕ್ಷಕಿ ಶಾಂತಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದೌರ್ಜನ್ಯ ಕುರಿತು ಕೇವಲ ನೊಂದ ಮಹಿಳೆ ಮಾತ್ರವಲ್ಲ, ಅವರ ಪರವಾಗಿ ಯಾರು ಬೇಕಾದರೂ ದೂರು ನೀಡಬಹುದು. ಮಹಿಳೆ ಮೇಲೆ ಮಹಿಳೆಯೇ ದೌರ್ಜನ್ಯ ಎಸಗಿದರೂ ಅಪರಾಧ ಎಂದು ಹೊಳ್ಳ ಆ್ಯಂಡ್ ಹೊಳ್ಳ ಅಸೋಸಿಯೇಟ್ಸ್ನ ಮೇಘನಾ ಆರ್. ಬಲ್ಲಾಳ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜು ಆಂತರಿಕ ಗುಣಮಟ್ಟ ಮೌಲ್ಯಮಾಪನ ಘಟಕ (ಐಕ್ಯೂಎಸಿ), ಲೈಂಗಿಕ ದೌರ್ಜನ್ಯ ತಡೆ ಘಟಕ, ಸಮಾಜಕಾರ್ಯ ವಿಭಾಗವು ಬೋಧನಾಂಗ ಅಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ‘ಸಂಸ್ಥೆಯ ಆವರಣದಲ್ಲಿ ಜವಾಬ್ದಾರಿಯುತ ಸಂಸ್ಕೃತಿಯ ನಿರ್ಮಾಣ’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಮೂಡುಬಿದಿರೆ ಮನೆತನದ ಅಬ್ಬಕ್ಕ ನಮ್ಮ ಹೆಮ್ಮೆ. ಆಕೆಯ ಸಾಧನೆ ಎಲ್ಲರಿಗೂ ಮಾದರಿಯಾಗಬೇಕು. ದೇಶದಲ್ಲಿ 1990 ಬಳಿಕ ಮಹಿಳೆಯರು ಕೆಲಸಕ್ಕೆ ಬರುವ ಸಂಖ್ಯೆ ಹೆಚ್ಚಾಯಿತು. ರಾಜಸ್ಥಾನದ ಭವಾರಿ ದೇವಿ ಅತ್ಯಾಚಾರಕ್ಕೆ ಒಳಗಾದ ಸಂದರ್ಭದಲ್ಲಿ ವಿಶಾಖ ಸಂಸ್ಥೆಯ ಹೋರಾಟದ ಫಲವಾಗಿ ಕಾಯಿದೆ ರೂಪಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತು. ಹೀಗಾಗಿ ‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (ತಡೆ, ಮುಂಜಾಗ್ರತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ:ಎಲ್ಲವೂ ಇಂದು ಡಿಜಿಟಲ್ ಆದ ಕಾರಣ ಪುಸ್ತಕ ಓದುಗರ ಸಂಖ್ಯೆ ವಿರಳವಾಗಿದೆ. ಇದು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ವಿಜಯ ಸಂಕೇಶ್ವರ ಹೇಳಿದರು. ಕೋಟದ ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಅಧೀನಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಸದ್ಭಾವನಾ 2024ರ ನಾಡುನುಡಿಗೆ ಭಾವ ನಮನ ಕಾರ್ಯಕ್ರಮದಲ್ಲಿ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಇಂದಿನ ಯುವ ಜನಾಂಗಕ್ಕೆ ನೆನಪಿನ ಶಕ್ತಿ ಕಡಿಮೆಗೊಂಡಿದೆ. ಹಿಂದೆ ಓದಿದ್ದು ಇನ್ನು ನೆನಪಿಸಿದಲ್ಲಿ ನೆನಪಿರಲ್ಲ. ಆದರೆ ಹಿಂದಿನವರು ಯಾವಾಗಲೂ ತಮ್ಮ ಹಳೆಯ ಓದಿದ ಸಂಗತಿಗಳನ್ನು ನೆನಪಿಸಿಕೊಳ್ಳುವ ಶಕ್ತಿಯನ್ನು ಹೊಂದಿದ್ದಾರೆ. ಡಿಜಿಟಲ್ನಿಂದ ಮೆದುಳಿನ ಕಂಟ್ರೋಲ್ನ್ನು ಕಳೆದು ಕೊಂಡಿದ್ದಾರೆ ಎಂದರು. ದೇಶದ 23 ರಾಜ್ಯಗಳಲ್ಲಿ ಗುಟ್ಕಾ ತಂಬಾಕು ನಿಷೇಧ ಮಾಡಿದ್ದರೂ ಕರ್ನಾಟಕದಲ್ಲಿ ಮಾತ್ರ ನಿಷೇಧ ಮಾಡದಿರುವುದು ದುರದೃಷ್ಟಕರ. ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಯುವ ಜನತೆ ನಿಷೇಧದ ಬಗ್ಗೆ ಅಭಿಯಾನ ಪ್ರಾರಂಭಿಸಬೇಕು. ಜನರಲ್ಲಿ ಜಾಗೃತಿ ಮೂಡಿಸಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ಆಧಾರದ ಮೇಲೆ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸದ್ಯದ ಪರಿಸ್ಥಿತಿಯಲ್ಲಿ ಜನರಲ್ಲಿ ಆತಂಕ ಬೇಡ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಮತ್ತು ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಅರಣ್ಯ ಕಾಯಿದೆಗಳು ಅರಣ್ಯ ಇಲಾಖೆಯ ನೀತಿ ನಿಯಮಗಳಿಂದ ನಿರಂತರ ತೊಂದರೆಗೊಳಗಾಗುತ್ತಿರುವ ಕಾಡಂಚಿನ ಭಾಗದ ನಿವಾಸಿಗಳಿಗೆ ಇನ್ನೂ ಕಸ್ತೂರಿ ರಂಗನ್ ವರದಿ ಜಾರಿಯಾದರೆ ವಿದ್ಯುತ್, ರಸ್ತೆ, ಸೇತುವೆ, ಕುಡಿಯುವ ನೀರು, ಜನವಸತಿ ಪ್ರದೇಶ, ವಸತಿ ಪ್ರದೇಶ, ಮನೆಗಳ ನಿರ್ಮಾಣ ಸೇರಿದಂತೆ ಮತ್ತಿತರ ಮೂಲಸೌಕರ್ಯಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ) ಬೆಂಗಳೂರು, ಇದರ ಬೈಂದೂರು ತಾಲೂಕಿನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಿಕ್ಷಕ ಶೇಖರ ಪೂಜಾರಿ ಅವರು ಗೆಲುವು ಸಾಧಿಸಿದ್ದಾರೆ. ಶೇಖರ ಪೂಜಾರಿ ಅವರು ಕಿರಿಮಂಜೇಶ್ವರ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಬೈಂದೂರು ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಖಜಾಂಚಿಯಾಗಿ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಉದಯಕುಮಾರ್ ಎಂ.ಪಿ, ರಾಜ್ಯ ಪರಿಷತ್ ಸದಸ್ಯರಾಗಿ ವೈದ್ಯಾಧಿಕಾರಿ ಡಾ. ರಾಜೇಶ್ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ) ಬೆಂಗಳೂರು, ಇದರ ಬೈಂದೂರು ತಾಲೂಕಿನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಿಕ್ಷಕ ಶೇಖರ ಪೂಜಾರಿ ಅವರು ಗೆಲುವು ಸಾಧಿಸಿದ್ದಾರೆ. ,ಬೈಂದೂರು ತಾಲೂಕು ಸರಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಶೇಖರ್ ಪೂಜಾರಿ ಅವರು ಚುನಾಯಿತರಾದರು. ಇವರು ಕಿರಿಮಂಜೇಶ್ವರ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಬೈಂದೂರು ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಖಜಾಂಚಿಯಾಗಿ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಉದಯಕುಮಾರ್ ಎಂ.ಪಿ, ರಾಜ್ಯ ಪರಿಷತ್ ಸದಸ್ಯರಾಗಿ ವೈದ್ಯಾಧಿಕಾರಿ ಡಾ. ರಾಜೇಶ್ ಆಯ್ಕೆಯಾಗಿದ್ದಾರೆ. ► ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ ಡಾ. ನಾಗೇಶ್ ಆಯ್ಕೆ – https://kundapraa.com/?p=79206 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅತಿ ವೇಗದಿಂದ ಮೀನು ಸಾಗಿಸುವ ಇನ್ಸುಲೇಟರ್ ವಾಹನ ಪಲ್ಟಿಯಾದ ಘಟನೆ ಶಿರೂರು ಕರಿಕಟ್ಟೆ ಬಳಿ ಸಂಭವಿಸಿದೆ. ಆದರೆ ಇದರಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಗುರುವಾರ ರಾತ್ರಿ ಮಿನಿ ಇನ್ಸುಲೇಟರ್ ವಾಹನದೊಳಗೆ ಮೀನು ತುಂಬಿರುವ ಟ್ರೇ ಗಳನ್ನು ಇರಿಸಿಕೊಂಡು ಮಧ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್ ಹತ್ತಿರ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ – ಉಪ್ಪುಂದದ ಕೊಡಿಹಬ್ಬ ಮಂಗಳವಾರ ಸಡಗರ, ಸಂಭ್ರಮದಿಂದ ಜರುಗಿತು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದ್ವಿತೀಯ ಜಾತ್ರೆ ಎಂದು ಪ್ರಸಿದ್ಧಿ ಪಡೆದ ಉಪ್ಪುಂದ ಕೊಡಿಹಬ್ಬ ಈ ಭಾರಿ ಕೋಟೇಶ್ವರ ದೇಗುಲದ ರಥೋತ್ಸವಕ್ಕೆ ಮುಂಚಿತವಾಗಿ ಬಂದಿದೆ. ಇಲ್ಲಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವ ದಿನ ದೇವಳ ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಚಂಡ ಮದ್ದಳೆಗಳ ನಾದ, ನಾಸಿಕ್ ಬ್ಯಾಂಡ್, ಕೀಲು ಕುದುರೆ, ತಟ್ಟಿರಾಯ ರಥೋತ್ಸವದ ಮೆರಗು ಹೆಚ್ಚಿಸಿದ್ದವು. ರಥಬೀದಿಯಲ್ಲಿ ವ್ಯಾಪಾರ ಜೋರಾಗಿಯೇ ನಡೆಯುತ್ತಿದೆ. ಬಳಿಕ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಬಹಿರಂಗ ಹರಾಜು ಮಾಡಲಾಯಿತು. ಸಂಜೆ ನಡೆದ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ರಥ ಎಳೆದು ಸಂಭ್ರಮಿಸಲಿದ್ದಾರೆ. ರಾತ್ರಿ ದೇವರ ಅವಭ್ರತಸ್ನಾನ…
