ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಉಡುಪಿ ಇವರ ಆಸರೆಯಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟವು ಜನತಾ ಪಿಯು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕುಸ್ತಿ ಪಂದ್ಯಾಟವು ಬಾಲಕರ ವಿಭಾಗದ ಫ್ರಿ ಸ್ಟೆಲ್ ಹಾಗೂ ಗ್ರಿಕೋ ರೋಮನ್ ಮತ್ತು ಬಾಲಕಿಯರ ವಿಭಾಗ ದಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಸುಮಾರು 160ವಿದ್ಯಾರ್ಥಿಗಳು ಈ ಪಂದ್ಯಾಟದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡರು. ಈ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ 14ವಿದ್ಯಾರ್ಥಿಗಳು ಚಿನ್ನದ ಪದಕ 2ವಿದ್ಯಾರ್ಥಿಗಳು ಬೆಳ್ಳಿಯ ಪದಕ 8ವಿದ್ಯಾರ್ಥಿಗಳು ಕಂಚಿನ ಪದಕ ಪಡೆದು ಸತತವಾಗಿ 4ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಕೊಂಡರು. ವಿದ್ಯಾರ್ಥಿಗಳಾದ ರತ್ವಿಕ್, ಸೌಲತ್, ಪನ್ನಗ್, ಶಶಾಂಕ್, ಮಂದಿರ್ ಶೆಟ್ಟಿ, ಸ್ವಸ್ತಿಕ್, ಕಿಶನ್, ಆದಿತ್ಯ, ಪ್ರಣಿತ್, ಗಾಯತ್ರಿ, ಆರ್ಯನ್, ವಿಜಯ್, ಮಂಥನ್, ಸೃಜನ್ ಅವರು ಚಿನ್ನದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕಾಗಿದ್ದು, ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ ಎಂದು ಸ್ವರೂಪ ಟಿ.ಕೆ ಹೇಳಿದರು. ಅವರು ಇತ್ತೀಚೆಗೆ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ತೆಲಂಗಾಣ ಹೈದರಾಬಾದ್ ಮೂಲದ ಕುಟುಂಬಕ್ಕೆ ಮಗುವನ್ನು ದತ್ತು ಆದೇಶ ನೀಡಿ ಮಾತನಾಡಿದರು. ದತ್ತು ಪ್ರಕ್ರಿಯೆ ಕಾನೂನು ಬದ್ಧವಾಗಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56 (1) 58 ಮತ್ತು 61 ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ, ಪೋಷಕರನ್ನು ಕಳೆದುಕೊಂಡ, ಪಾಲನೆ ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಮಾತ್ರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ನೀಡಲು ಅರ್ಹರಾಗಿರುತ್ತಾರೆ ಎಂದರು. ದತ್ತು ಪಡೆಯಲು ಇಚ್ಛಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು ಪಡೆಯಬಹುದು. ಮಗು ಬೇಡವಾದಲ್ಲಿ ಕಸದ ತೊಟ್ಟಿ, ಆಸ್ಪತ್ರೆ ಆವರಣ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸದಾ ಸಾಂಸ್ಕೃತಿಕ, ಶೈಕ್ಷಣಿಕ, ವಿನೋದ, ಶುಭ ಕಾರ್ಯಕ್ರಮಗಳಿಗೆ ಸದಾ ಪ್ರೋತ್ಸಾಹಿಸುವ ಸಿಂಗಾಪುರ ಕನ್ನಡ ಸಂಘದ ಆಹ್ವಾನದ ಮೇರೆಗೆ ಆ.30ರಂದು ಅನುಭವಿ ಕಲಾವಿದರಿಂದ ಹಿಡಿದು ಉದಯೋನ್ಮುಕ ಕಲಾವಿದರನ್ನು ಒಳಗೊಂಡ ಕೆ. ಮೋಹನ್ ನಿರ್ದೇಶನದ ಬೆಂಗಳೂರಿನ ಯಕ್ಷದೇಗುಲ ತಂಡದವರಿಂದ ಸಿಂಗಾಪುರದ ಆರ್ಇಎಲ್ಸಿಇಂಟರ್ನ್ಯಾಷನಲ್ ಹೋಟೆಲ್ನ ಸಭಾಂಗಣದಲ್ಲಿ ರತ್ನಾವತಿ ಕಲ್ಯಾಣ ಯಕ್ಷಗಾನ ಪ್ರದರ್ಶನ ನೀಡಿತು. ಈ ಪ್ರದರ್ಶನವು 400ಕ್ಕೂ ಹೆಚ್ಚು ಕನ್ನಡಿಗರ ಉತ್ಸಾಹ ಭರಿತ ಪ್ರೇಕ್ಷಕರನ್ನು ಸೆಳೆಯಿತು. ಇದೇ ಸಂದರ್ಭದಲ್ಲಿ ರತ್ನಾವತಿ ಕಲ್ಯಾಣ ಪ್ರಸಂಗದಲ್ಲಿ ಯಕ್ಷದೇಗುಲವು ಸಿಂಗಾಪುರದಲ್ಲಿ ಹುಟ್ಟಿ, ಬೆಳೆದ 10 ಮಕ್ಕಳಿಗೆ ತಂಡದ ಉಸ್ತುವಾರಿ ಹೊತ್ತ ಗುರು ಪ್ರಿಯಾಂಕ ಕೆ. ಮೋಹನ್ರು ಯಕ್ಷಗಾನ ತರಬೇತಿ ನೀಡಿ ತಂಡದ ಕಾರ್ಯಕ್ರಮದಲ್ಲಿ ಸೇರಿಸಿಕೊಂಡರು. ಇದು ಅಲ್ಲಿನ ಮಕ್ಕಳಿಗೆ ವಿಶಿಷ್ಟ ಸಾಂಸ್ಕೃತಿಕ ಅನುಭವದೊಂದಿಗೆ ಹಿರಿಯ ಕಲಾವಿದರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲು ಅವಕಾಶ ನೀಡಿತು. ಇದರಿಂದ ಸಮೂದಾಯದಿಂದ ಆತ್ಮೀಯ ಮೆಚ್ಚುಗೆಯನ್ನು ಪಡೆದದಲ್ಲದೆ, ಪ್ರೇಕ್ಷಕರು ಈ ಪ್ರದರ್ಶನವು ಅವರ ಸಾಂಸ್ಕೃತಿಕ ಸಂಪರ್ಕ ಮತ್ತು ಹೆಮ್ಮೆಯನ್ನು ಹೆಚ್ಚಿಸಿತು. ಕಲಾವಿದರಾಗಿ ಸುದರ್ಶನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ದೀಪ ಬೆಳಗಿಸಿ ಶುಭ ಹಾರೈಸಿದರು. ಇದೇ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ, ಸಹಾಯಕ ಪ್ರಾಧ್ಯಾಪಕಿ ರೇವತಿ ಡಿ. ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2006-07 ನೇ ಸಾಲಿನಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಾಯಿಸಿ, 18 ವರ್ಷ ಪೂರ್ಣಗೊಂಡಿರುವ ಅರ್ಹ ಫಲಾನುಭವಿಗಳಿಂದ (ಮರಣ ಹೊಂದಿರುವ ಹಾಗೂ ಅನರ್ಹ ಫಲಾನುಭವಿಗಳನ್ನು ಹೊರತುಪಡಿಸಿ) ಪರಿಪಕ್ವ ಮೊತ್ತ ರೂ. 32,351 ಅನ್ನು ಎಲ್.ಐ.ಸಿ ಸಂಸ್ಥೆಯಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 3405 ಫಲಾನುಭವಿಗಳನ್ನು ನೋಂದಾಯಿಸಿಕೊಂಡಿದ್ದು, ಅವರಲ್ಲಿ ಕೆಲವು ಫಲಾನುಭವಿಗಳು ವಲಸೆ ಹೋಗಿರುವುದು ಮತ್ತು ದಾಖಲಾತಿಗಳನ್ನು ತಡವಾಗಿ ಸಲ್ಲಿಸುತ್ತಿರುವುದು ಕಂಡುಬಂದಿದ್ದು, ಅರ್ಹ ಫಲಾನುಭವಿಗಳ ಮಾಹಿತಿಯನ್ನು ಆನ್ಲೈನ್ ನಲ್ಲಿ ಅಳವಡಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುವುದರಿಂದ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ Payment Module ನಲ್ಲಿ ಮಾಹಿತಿಯನ್ನು ಅಳವಡಿಸಿಕೊಳ್ಳಬಹುದಾಗಿದೆ. 2007-08 ನೇ ಸಾಲಿನಲ್ಲಿ ಸದರಿ ಯೋಜನೆಯಡಿ ನೋಂದಾಯಿಸಿ 18 ವರ್ಷ ಪೂರ್ಣಗೊಂಡಿರುವ ಅರ್ಹ ಫಲಾನುಭವಿಗಳಿಂದ ಪರಿಪಕ್ವ ಮೊತ್ತ ಪಾವತಿಗಾಗಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಮಹಿಳಾ ಮತ್ತು ಮಕ್ಕಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಂಸದರು ಮತ್ತು ಕುಂದಾಪುರ ಶಾಸಕರು ಗ್ರಾಮ ಪಂಚಾಯತ್ಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಗಳ ಕುರಿತು ಸಭೆ ಕರೆದಿರುವುದು ಅತ್ಯಂತ ಸ್ವಾಗತಾರ್ಹ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಘನ ತ್ಯಾಜ್ಯ ವಿಲೇವಾರಿ ಮಾಡುವಾಗ ಹಸಿಕಸ ಹಾಗೂ ಒಣಕಸ ವಿಲೆಯನ್ನು ಹೆಚ್ಚಿನ ಎಲ್ಲಾ ಗ್ರಾಮ ಪಂಚಾಯತುಗಳು ಸಾರ್ವಜನಿಕರಲ್ಲಿ ಜಾಗೃತಗೊಳಿಸುವುದರ ಮೂಲಕ ಕಸ ವಿಲೇವಾರಿಯನ್ನು ಕ್ರಮಬದ್ದವಾಗಿ ಹಾಗೂ ಯಶಸ್ವಿಯಾಗಿ ನಡೆಸುತ್ತಿವೆ. ಆದರೆ ಸಂಸದರ ಹಾಗೂ ಶಾಸಕರ ಸಭೆಯಲ್ಲಿ ಗ್ರಾಮ ಪಂಚಾಯತುಗಳಲ್ಲಿ ಎಸ್ ಎಲ್ ಆರ್ ಎಂ ಘಟಕ ಸ್ಥಾಪನೆಗೆ ಇರುವ ಸ್ಥಳದ ಸಮಸ್ಯೆಗಳು ಹೆಚ್ಚಿನ ಗ್ರಾಮ ಪಂಚಾಯತುಗಳಲ್ಲಿ ಇತ್ಯರ್ಥವಾಗಿದೆ ಎನ್ನುವುದು ಅವರ ಮಾಹಿತಿಯ ಕೊರತೆಯಿಂದ ಇರಬಹುದು. ಇಂದಿಗೂ ಅದೆಷ್ಟೋ ಗ್ರಾಮ ಪಂಚಾಯತುಗಳಲ್ಲಿ ವಿಶೇಷವಾಗಿ ಕರಾವಳಿ ಭಾಗದ ಹೆಚ್ಚಿನ ಗ್ರಾಮ ಪಂಚಾಯತುಗಳಲ್ಲಿ ಎಸ್ ಎಲ್ ಆರ್ ಎಂ ಘಟಕ ನಿರ್ಮಾಣಕ್ಕೆ ಸ್ಥಳದ ಸಮಸ್ಯೆಯಿದೆ, ಇನ್ನು ಪುರಸಭೆಯವರು ಕಂದಾವರ ಗ್ರಾಮದಲ್ಲಿ ಘನ ತ್ಯಾಜ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜು ಉಡುಪಿ ಇವರು ಜಂಟಿಯಾಗಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಪಿ.ಯು. ಅಂತರ್ ಕಾಲೇಜು ಬಾಲಕ -ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೊಜಮ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುವ ಮೊಜಮ್, ಕುಂದಾಪುರ ತಾಲೂಕಿನ ಬಸ್ರೂರು ನಿವಾಸಿಯಾದ ಅಬ್ದುಲ್ ಮುಬಿನ್ ಹಾಗೂ ತಸ್ಮಿಯಾ ದಂಪತಿಯ ಪುತ್ರ. ವಿಜ್ಞಾನ ವಿಭಾಗದ ಅನೂಪ್ ಗಾಣಿಗ, ಹಾಗೂ ಶುಭಾ ಇಂಡಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಬಿ. ಶೆಟ್ಟಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಪ್ರಸ್ತುತ ಸಂಸದರಾಗಿರುವ ಜಗದೀಶ್ ಶೆಟ್ಟರ್ ಮಂಗಳವಾರ ಉಡುಪಿ ಜಿಲ್ಲೆಯ ಸಾಸ್ತಾನದ ಐರೋಡಿ ವಾಸುಕೀ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇಗುಲದ ಮುಖ್ಯಸ್ಥರಾದ ಸುಬ್ರಹ್ಮಣ್ಯ ಮಧ್ಯಸ್ಥ ಬರಮಾಡಿಕೊಂಡು ಮುಖ್ಯಮಂತ್ರಿ ಆಗುದಕ್ಕಿಂತ ಮೊದಲು ನಮ್ಮ ದೇಗುಲವನ್ನು ಸಂದರ್ಶಿಸಿದ ಶೆಟ್ಟರ್ ಕೆಲವೆ ದಿನಗಳಲ್ಲಿ ಮುಖ್ಯಮಂತ್ರಿ ಪಟ್ಟವನ್ನಲ್ಲಂಕರಿಸಿದರು.ಈ ಹಿನ್ನಲ್ಲೆಯಲ್ಲಿ ದೇಗುಲವನ್ನು ವಿಶೇಷವಾಗಿ ಆರಾಧಿಸಿಕೊಂಡು ಬರುತ್ತಿದ್ದಾರೆ.ಪ್ರಸ್ತುತ ಭೇಟಿ ನಂತರ ದೇವರ ಅನುಗ್ರಹದಿಂದ ಕೇಂದ್ರ ಸಚಿವರಾಗಿ ಹೊರಹೊಮ್ಮಲ್ಲಿದ್ದಾರೆ ಎಂದು ಪ್ರಾರ್ಥಿಸಿದರು. ಇದೇ ವೇಳೆ ದೇಗುಲದ ವತಿಯಿಂದ ವಿಶೇಷ ಪೂಜಾ ಕಾರ್ಯಕ್ರಮ ಸಲ್ಲಿಸಿದ ಶೆಟ್ಟರ್ ಅವರನ್ನು ಶಾಲು ಹೋದಿಸಿ ಗೌರವಿಸಿದರು. ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ ಸಾಹುಕಾರ್, ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಐರೋಡಿ ವಿಠ್ಠಲ್ ಪೂಜಾರಿ, ಶಕ್ತಿ ಕೇಂದ್ರದ ಆಧ್ಯಕ್ಷ ರಮೇಶ್ ಕಾರಂತ್, ಮುಖಂಡರಾದ ಶಂಕರ್ ಕುಲಾಲ್, ಸಂಜೀವ ಪೂಜಾರಿ, ಸಂಸದರ ಆಪ್ತರಾದ ಜಗನಾಥ್ ಬಂಗೇರ ಬಂಟ್ವಾಳ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ 14ರ ವಯೋಮಾನದ ಕಲಾತ್ಮಕ ಏಕಲ್ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಸಾನಿಧ್ಯ ಎಸ್. ಮೊಗವೀರ (7ನೇ ತರಗತಿ) ಹಾಗೂ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ವಂಶಿತ್ (7ನೇ ತರಗತಿ) ಹಾಗೆಯೇ ತಾಳಾತ್ಮಕ ಯುಗಲ್ ಯೋಗಾಸನ ಸ್ಪರ್ಧೆಯಲ್ಲಿ ಸಾನಿಧ್ಯ ಎಸ್. ಮೊಗವೀರ (7ನೇ ತರಗತಿ) ಹಾಗೂ ಅಮೂಲ್ಯ (7ನೇ ತರಗತಿ) ಇವರ ಜೋಡಿ ಪ್ರಥಮ ಸ್ಥಾನಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ/ ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಭಾರತದ ಕರಾಟೆ ಚಾಂಪಿಯನ್ಶಿಪ್ ಕೋರಮಂಗಲದ ಒಳಾಂಗಣ ಕ್ರೀಡಾಂಗಣ ಬೆಂಗಳೂರಿನಲ್ಲಿ ಆಯೋಜನೆ ಗೊಂಡಿತ್ತು. ಸೌತ್ ಝೋನ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ಕುಮಾರ್ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.
