Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ಮಾಹಿತಿ ಶಿಬಿರ ಕಾರ್ಯಕ್ರಮವನ್ನು ಬೈಂದೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರ ಸಮ್ಮುಖದಲ್ಲಿ ಬುಧವಾರ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಗ್ಯಾರಂಟಿ ಸಮಿತಿ ಅಧ್ಯಕ್ಷರು ಮೋಹನ್ ಪೂಜಾರಿ ಅವರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಯುವನಿದಿ ಬಗ್ಗೆ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಯೋಜನೆಯ ಮಾಹಿತಿ ಹಾಗು ಅದರ ಸದುಪಯೋಗವನ್ನು ವಿಸ್ತಾರವಾಗಿ ತಿಳಿಸಿದರು. ಪದವಿ ನಂತರ ಯೋಜನೆಯಲ್ಲಿ ಅಹ೯ ಅಭ್ಯರ್ಥಿಗಳು ನೋಂದಣಿಯಾಗುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಅಧ್ಯಕ್ಷರು ಮೋಹನ್ ಪೂಜಾರಿ ಸದಸ್ಯರು ಕಾಲೇಜಿನ ಪ್ರಾಂಶುಪಾಲರು ನಾಗರಾಜ್ ಶೆಟ್ಟಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂಧಿ ಪೃಥ್ವಿರಾಜ್ ಹಾಜರಿದ್ದರು. ಕಾರ್ಯಕ್ರಮದಲ್ಲಿ ಬೈಂದೂರು ಗ್ಯಾರಂಟಿ ಸಮಿತಿ ಸದಸ್ಯರಾದ ಮಾಲತಿ, ಸೂರ್ಯಕಾಂತಿ ನಾಗೇಶ್, ರಾಮಚಂದ್ರ ಖಾರ್ವಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಿಬ್ಬಂದಿ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಉಪನ್ಯಾಸಕಿ ಸುಚಿತ್ರ ಸ್ವಾಗತಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಬಜೆಟ್ಅಧಿವೇಶನನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಬಗ್ಗೆ ಹಲವಾರು ದಶಕಗಳಿಂದ ಸಾರ್ವಜನಿಕರಿಂದ ಬೇಡಿಕೆ ಇರುವ ವಿಚಾರ  ಸರಕಾರದ ಗಮನಕ್ಕೆ ಬಂದಿದೆಯೇ, ಬಂದಿದ್ದಲ್ಲಿ  ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಸರಕಾರದ ನಿಲುವೇನು ಎಂದು ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ  ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್  ಆರ್. ಪಾಟೀಲ್ ಅವರು ಉಡುಪಿ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಬೇಡಿಕೆ ಇರುವ ವಿಚಾರ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜನ್ನು ಪ್ರಾರಂಭಿಸಬೇಕೆಂಬುದು ಸರ್ಕಾರದ ನೀತಿಯಾಗಿರುತ್ತದೆ. ಉಡುಪಿ ಜಿಲ್ಲೆಯೂ ಸೇರಿದಂತೆ ವೈದ್ಯಕೀಯ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಬಗ್ಗೆ ಪೂರ್ವ ಭಾವಿ ಸಭೆಯನ್ನು  ನಡೆಸಲಾಗಿದ್ದು, iDECK ಸಂಸ್ಥೆಯನ್ನು Transaction Advisor…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಿಸಿ ಕ್ಯಾಮೆರಾ ಅಳವಡಿಕೆ ವಿಚಾರವಾಗಿ ಉಂಟಾದ ನೆರೆಹೊರೆಯ ಕಲಹ ತೀವ್ರ ಸ್ವರೂಪ ಪಡೆದುಕೊಂಡು, ವೃದ್ಧೆಯೊಬ್ಬರ ಮೇಲೆ ದಾಳಿ ಹಾಗೂ ಜೀವ ಬೆದರಿಕೆ ಹಾಕಿದ ಘಟನೆ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದಲ್ಲಿ ನಡೆದಿದೆ. ರಾಧು ಪೂಜಾರ್ತಿ (65) ಎಂಬುವರ ಮನೆಯ ಎದುರು ವಾಸವಾಗಿರುವ ಪ್ರೇಮ ಪೂಜಾರಿ ಅವರು ಮನೆಗೆ ಮುಖ ಮಾಡಿ ಸಿಸಿ ಕ್ಯಾಮೆರಾ ಅಳವಡಿಸಿದ್ದು, ಇದರಿಂದ ಅಸೌಕರ್ಯ ಉಂಟಾಗುತ್ತಿದೆ ಎಂದು ಅವರು ದಿನಾಂಕ 09/03/2026ರಂದು ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋಪಗೊಂಡ ಆರೋಪಿಗಳಾದ ಪ್ರೇಮ ಪೂಜಾರಿ, ಪ್ರವೀಣ್ ಟಿ. ಪೂಜಾರಿ, ಯಶ್ವಿತಾ, ಪೂರ್ಣಿಮಾ, ಶಾಂತ, ಪ್ರಮೀಳಾ ಮತ್ತು ತಮ್ಮಯ್ಯ ಅವರು ದಿನಾಂಕ 13/03/2026ರಂದು ಬೆಳಿಗ್ಗೆ 08:25 ಗಂಟೆ ಸುಮಾರಿಗೆ ರಾಧು ಪೂಜಾರ್ತಿ ಮನೆಯ ಬಳಿ ಏಕಾಏಕಿ ಪ್ರವೇಶಿಸಿ, ಅವರನ್ನು ಸುತ್ತುವರಿದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಗಳಿಂದ ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೇ ವೇಳೆ, ಮನೆಯ ಸುತ್ತಮುತ್ತ ಸಂಚರಿಸಲು ಬಿಡುವುದಿಲ್ಲ ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ರೀಡೆಯಿಂದ ದೈಹಿಕ ಮಾನಸಿಕ ಸ್ಥೈರ್ಯ ಬೆಳೆಯುತ್ತದೆ ಎಂದು ಉದ್ಯಮಿ ಚಂದ್ರೇಶ್ ಶೆಟ್ಟಿ ಹೇಳಿದರು. ಅವರು ಮಂಗಳವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾಟ (ಉಡುಪಿ ವಲಯ)ವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆ ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ಬೆಳೆಸುತ್ತದೆ. ಶಾರೀರಿಕ ಸದೃಢತೆಯನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ನಿರ್ದೇಶಕರಾದ ಜೆರಾಲ್ಡ್ ಸಂತೋಷ್ ಡಿಸೋಜಾ ಅವರು ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯದ ದ್ವಿತೀಯ ಸೆಮಿಸ್ಟರ್ ನ ಪ್ರಥಮ ಪಂದ್ಯಾಟದಲ್ಲಿ ಭಾಗವಹಿಸಿ. ಕ್ರೀಡೆಯಲ್ಲಿ ಸಾಧನೆ ಮಾಡಿ ಎಂದು ಹೇಳಿದರು. ಇನ್ನೋರ್ವ ಅತಿಥಿ ರಾಘವೇಂದ್ರ ಶೆಟ್ಟಿ ಲೆಕ್ಕ ಪರಿಶೋಧಕರು, ಬೆಂಗಳೂರು ಅವರು ಮಾತನಾಡಿ ಕಾಲೇಜಿನ ಗುರುಗಳನ್ನು ನೆನಪಿಸಿಕೊಂಡರು. ಮತ್ತೋರ್ವ ಅತಿಥಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ ಮೊಬೈಲ್ ಗೆ ಮಾರು ಹೋಗಬೇಡಿ ಎಂದು ಹೇಳಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಂಡು ಉತ್ತಮ ಚಿಂತನೆಗಳತ್ತ ಮುಖ ಮಾಡಬೇಕು. ಶಿಕ್ಷಣದ ಹಾದಿಯಲ್ಲಿ ಎದುರಾಗುವ ಸೋಲುಗಳನ್ನು ಮೆಟ್ಟಿ ನಿಂತು ಯಶಸ್ಸಿನತ್ತ ಸಾಗಬೇಕು. ಸಾಧಕ ವಿದ್ಯಾರ್ಥಿಗಳೇ ಸಮಾಜದ ಅಮೂಲ್ಯ ಆಸ್ತಿಯಾಗಬೇಕು ಎಂದು ಬಾಂಡ್ಯ ಎಜುಕೇಶನಲ್ ಟ್ರಸ್ಟ್‌ನ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಹೇಳಿದರು. ಅವರು ಮಂಗಳವಾರ ಇಲ್ಲಿನ ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ “ಮಧುರಂ ಸ್ಮರಣಂ” ಎಂಬ ವಿನೂತನ ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಟಾಟಿಸಿ ಮಾತನಾಡಿದರು. ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಪ್ರಾಸ್ತಾವಿಕವಾಗಿ ಮಾತನಾಡಿ, ಜೀವನವೆಂಬುದು ದೀರ್ಘ ಪ್ರಯಾಣವಾಗಿದ್ದು, ಅದರಲ್ಲಿನ ಸಿಹಿ-ಕಹಿ ಅನುಭವಗಳು ಸಹಜ. ಕಲಿಕೆಯ ಹಾದಿಯಲ್ಲಿ ಪಡೆದ ಧನಾತ್ಮಕ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ಬೀಳ್ಕೊಡುಗೆ ಒಂದು ಸಿಹಿ ಕ್ಷಣವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಸಮಾಜಕ್ಕೆ ಗೌರವ ತರುವಂತಾಗಲಿ ಎಂದು ಆಶಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಎರಡು ವರ್ಷದ ಶೈಕ್ಷಣಿಕ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆಗೆ ವಿದ್ಯಾರ್ಥಿಗಳಿಂದ ಸುಮಾರು 20 ಸಾವಿರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (IMJISC) ಯೋಗ ಮತ್ತು ಆಧ್ಯಾತ್ಮ ಸಂಘವು ಭಾರತದ ರಾಷ್ಟ್ರಗೀತೆಯಾದ ವಂದೇ ಮಾತರಂನ ಹಿನ್ನೆಲೆ, ಸಾಂಸ್ಕೃತಿಕ ಮತ್ತು ದೇಶಭಕ್ತಿಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ತಮ್ಮ ಪ್ರಸ್ತುತಿಯಲ್ಲಿ, ಅವರು ವಂದೇ ಮಾತರಂ ಗೀತೆಯ ಮೂಲ, ಹಿನ್ನೆಲೆ, ರಚನೆ ಮತ್ತು ಸಾಹಿತ್ಯದ ಆಳವಾದ ಅರ್ಥವನ್ನು ವಿವರಿಸಿದರು. ಭಾರತದ ಸ್ವಾತಂತ್ರ್ಯ ಚಳುವಳಿಯ ಸಮಯದಲ್ಲಿ ಈ ಗೀತೆಯು ಹೇಗೆ ಪ್ರಬಲ ದೇಶಭಕ್ತಿಯ ಭಾವನೆಯೊಂದಿಗೆ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣೆ ನೀಡಿತು ಎಂಬುದನ್ನು ಅವರು ಎತ್ತಿ ತೋರಿಸಿದರು.ಅವರು ಈ ಗೀತೆಯಲ್ಲಿ ಪ್ರತಿಬಿಂಬಿತವಾಗಿರುವ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ವಿವರಿಸಿ, ಅದನ್ನು ಭಾರತದ ಸೌಂದರ್ಯ, ಶ್ರೀಮಂತಿಕೆ ಮತ್ತು ಏಕತೆಯ ಸಂಕೇತವೆಂದು ಬಣ್ಣಿಸಿದರು. ಕಾರ್ಯಕ್ರಮವನ್ನು ತೃತೀಯ ಬಿಸಿಎ ವಿದ್ಯಾರ್ಥಿನಿ ಅಪೂರ್ವ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮನೆ ಕಟ್ಟುವ ಉದ್ದೇಶದಿಂದ ಬ್ಯಾಂಕಿನಿಂದ ಸಾಲ ಸಿಗದಿದ್ದಕ್ಕೆ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳೂರಿನಲ್ಲಿ ಸಂಭವಿಸಿದೆ. ಬಳ್ಳೂರು ಗ್ರಾಮದ ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಭರತ್ ಅವರು ತಮ್ಮ 10 ಸೆಂಟ್ಸ್ ಜಾಗದಲ್ಲಿ ಮನೆ ಕಟ್ಟುವ ಉದ್ದೇಶದಿಂದ ಬ್ಯಾಂಕ್ ಗೆ ಸಾಲಕ್ಕಾಗ ಅರ್ಜಿ ಸಲ್ಲಿಸಿದ್ದರು. ಆದರೆ ಬ್ಯಾಂಕ್ ನವರು ಜಾಗದ ಮೇಲೆ ಸಾಲ ಕೊಡಲು ನಿರಾಕರಿಸಿದ್ದರು. ಇದರಿಂದ ಬೇಸರಗೊಂಡ ಭರತ್ ಮಾ.12 ರಂದು ಮಧ್ಯಾಹ್ನ ಮನೆಯಲ್ಲಿ ಕಳೆ ನಾಶಕ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ಅಸ್ವಸ್ಥಗೊಂಡ ಅವರನ್ನು ಕೂಡಲೇ ಕುಂದಾಪುರದ ಸರಕಾರಿ ಆಸ್ಪತ್ರೆಗೆ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ. 16 ರಂದು ಅಲ್ಲಿಂದ ಬಿಡುಗಡೆಗೊಂಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಮಂಗಳವಾರ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜ್ಞಾನಸುಧಾ ಸಂಸ್ಥೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಜೀವನದಲ್ಲಿ ಕಷ್ಟ ಅಂಥ ಯಾವುದು ಇಲ್ಲ ಅದು ನಾವು ನೋಡುವ ದೃಷ್ಟಿಕೋನದಲ್ಲಿದೆ. ಜ್ಞಾನ ಸಂಪಾದನೆಗೆ ಶ್ರಮಿಸಿದಷ್ಟು ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಉಜ್ವಲ ಭವಿಷ್ಯವನ್ನು ಹೊಂದಲು ನಾಂದಿಯಾಗುತ್ತದೆ ಎಂದರು. ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ತಂದೆ, ತಾಯಿ, ಗುರುಗಳಿಗೆ ಗೌರವ ನೀಡಿ ಸಮಾಜದಲ್ಲಿ ಸತ್ಪ್ರಜೆಯಾಗಿ ಯಶಸ್ವಿ ಬದುಕನ್ನು ಸಾಗಿಸಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾ‌ರ್, ಶ್ರೀ ವೆಂಕಟರಮಣ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾರ್ಚ್ 18 ರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ Udupi.nic.in ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ. ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ  ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ, ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ. ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ – ಕುಟೀರವನ್ನು  ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವ ಉದ್ದೇಶದಿಂದ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ದೈವಾರ್ಷಿಕ ಕಾರ್ಯ ಯೋಜನೆಯನ್ನು ಕೈಗೊಳ್ಳಲಾಗಿದೆ. ಪ್ರತಿಯೊಬ್ಬರೂ ಕುಟುಂಬ ಸಮೇತರಾಗಿ ಕಾಸರಗೋಡು ಕನ್ನಡ ಗ್ರಾಮಕ್ಕೆ ಆಗಮಿಸಿ ಕಾಸರಗೋಡು ಗೋ-ಕುಟೀರದಲ್ಲಿ ಗೋವುಗಳಿಗೆ ಗೋ-ಗ್ರಾಸ ನೀಡಿ, ಗೋ- ಆರತಿಯನ್ನು ಬೆಳಗಿಸಿ, ಗೋ-ಸಂಕೀರ್ತನೆಯನ್ನು ಹಾಡಿ, ಗೋ-ಕುಟೀರದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ತಮ್ಮ ಇಷ್ಟಾರ್ಥವನ್ನು ಶ್ರದ್ಧಾ ಭಕ್ತಿಯಿಂದ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತಮ್ಮ ಮನೆಗಳಲ್ಲಿ ನಡೆಯುವ ಶುಭ ಸಮಾರಂಭಗಳ ನಿಮಿತ್ತ ಕಾಸರಗೋಡು ಗೋ -ಕುಟೀರಕ್ಕೆ ಆಗಮಿಸಿ ಗೋ…

Read More