Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕ್ಷೇತ್ರ ವ್ಯಾಪ್ತಿಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿರುವ ಪ್ರವರ್ಗ ಎ, ಬಿ ಹಾಗೂ ಸಿ ವರ್ಗದ ದೇವಸ್ಥಾನಗಳ ಮುಖ್ಯಸ್ಥರುಗಳೊಂದಿಗೆ ದೇವಸ್ಥಾನಗಳ ಜಲ ಮೂಲಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಸಭೆ ನಡೆಯಿತು.  ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಕ್ಷೇತ್ರ ವ್ಯಾಪ್ತಿಯ ದೇವಸ್ಥಾನಗಳ ವಾಪ್ತಿಯಲ್ಲಿ ಬರುವ ಎಲ್ಲಾ ಕೆರೆಗಳ ಅನ್ವೇಷಣೆಯೊಂದಿಗೆ ದೇವಸ್ಥಾನ, ಊರಿನ ಹಾಗೂ ಸರಕಾರದ ಸಹಕಾರದೊಂದಿಗೆ ಹಾಗೂ ಸರಕಾರೇತರ ಸಂಸ್ಥೆಗಳ ಸಹ ಭಾಗಿತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿ ಪಡಿಸುವುದರ ಮೂಲಕ ಗ್ರಾಮಗಳ ಜಲ ಮೂಲಗಳನ್ನು ಬಲ ಪಡಿಸುವ ಉದ್ದೇಶದೊಂದಿಗೆ ಈ ಸಭೆಯನ್ನು ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಅವಶ್ಯಕ ಇರುವ ದೇವಸ್ಥಾನಗಳ ಸಂಬಂಧಪಟ್ಟ ಎಲ್ಲಾ ಕೆರೆಗಳ ಸರ್ವೇ ಮೂಲಕ ಕೆರೆಗಳ ಅನ್ವೇಷಣೆ ಹಾಗೂ ಅಭಿವೃದ್ಧಿಗೆ ರೂಪು ರೇಷೆ ಹಾಕಿ ಕೊಳ್ಳಲಾಗುವುದು ಎಂದರು. ದೇವಸ್ಥಾನಗಳ ಹೆಸರಿಗೆ ಆರ್ ಟಿಸಿ ದಾಖಲೆ ವರ್ಗಾವಣೆಗೆ…

Read More

ಕುಂದಾಪ್ರ ಡಾಟ್‌ ಕಾಂ ಸದ್ದಿ.ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ ಪ್ರವೇಶಾತಿಗೆ ವೆಬ್ಸೈಟ್ www.uahs.edu.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.  ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು (ಪ.ಜಾ./ಪ.ಪಂ./ಪ್ರವರ್ಗ-1 ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು). 2026ರ ಜೂನ್.12 ಕ್ಕೆ ಅಭ್ಯರ್ಥಿಗಳ ವಯಸ್ಸು 19 ವರ್ಷ ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ. ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯ ಅರುಣಾಚಲಂ ಕಾಲುಸಂಕ ಯೋಜನೆಯಲ್ಲಿ  ಬೆಂಗಳೂರಿನ ಸಮ್ಯತ ಫೌಂಡೇಶನ್ ಇವರ ಸಹಕಾರದಿಂದ ಇಂಡಸ್ಟ್ 555 ಟಿಎಂಟಿ ಇವರ ಸಿಎಸ್ಆರ್ ನಿಧಿಯಿಂದ ಆಜ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕ್ಯಾಕೋಡು ಎಂಬಲ್ಲಿ ಎಸ್. ಆರ್. ಸತಾನಂತಮ್ ಕಾಲು ಸಂಕದ  ಭೂಮಿ ಪೂಜೆಯನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನೆರವೇರಿಸಿದರು. ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಸಿಎಸ್ಆರ್ ಅನುದಾನದಿಂದ ಹಲವು ಸಾಮಾಜಿಕ ಕಾರ್ಯಕ್ರಮಗಳು ಆಯೋಜನೆಯಾಗುತ್ತಿದ್ದು ಈ ಕಾಲು ಸಂಕವನ್ನು ಕೊಡುಗೆಯಾಗಿ ನೀಡಿದ ಇಂಡಸ್ 555 ಟಿಎಂಟಿ ಸಂಸ್ಥೆಯ ಮಾಲಕರಾದ ಎಸ್.ಎಸ್ ಶ್ರೀಕಾಂತ್ ಹಾಗೂ ಸಹಕಾರಿಸಿದ ಸಮ್ಯತ ಫೌಂಡೇಶನ್ ಸ್ಥಾಪಕರಾದ ಮುರುಳಿ ಅವರಿಗೆ ಶಾಸಕರು ಧನ್ಯವಾದವನ್ನು ತಿಳಿಸಿದರು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಸಿಎಸ್ಆರ್ ನಿಧಿಯ ಸದ್ಬಳಕೆ ಕ್ಷೇತ್ರದಲ್ಲಿ ನಡೆಯುತ್ತಿದ್ದು ಕಾರ್ಯಕರ್ತರ ಸಹಕಾರದಿಂದ ಇವೆಲ್ಲವೂ ಸಾಧ್ಯವಾಗುತ್ತಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಬಾಲಚಂದ್ರ ಭಟ್ ಹಾಗೂ ಪ್ರವೀಣ್ ಶೆಟ್ಟಿ ಕೊಡ್ಲಾಡಿ ಶುಭ ಆಶಿಸಿದರು. ಗ್ರಾಮ ಪಂಚಾಯತ್ ನಿಕಟ ಪೂರ್ವ ಸದಸ್ಯರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಡಾ. ಕಾರಂತ ಥೀಂ ಪಾರ್ಕ್ನಲ್ಲಿ ಯಕ್ಷಾಂತರಂಗ ವ್ಯವಸಾಯೀ ಯಕ್ಷ ತಂಡ ಕೋಟ ನೇತೃತ್ವದಲ್ಲಿ ಉಚಿತ ಯಕ್ಷಗಾನ ತರಬೇತಿ ಕೇಂದ್ರದ 2025-26ನೇ ಸಾಲಿನಲ್ಲಿ ತರಬೇತಿ ಪಡೆದ ವಿದ್ಯಾಥಿಗಳ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ಜರಗಿತು. ಕಾರ್ಯಕ್ರಮವನ್ನು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ, ಮಾತನಾಡಿ, ನಮ್ಮ ನಾಡಿನ ಹಿರಿಯರು ಕಂಡು ಹಿಡಿದು ಪೋಷಿಸಿಕೊಂಡು ಬಂದ ಯಕ್ಷಗಾನದಂಥಾ ಶ್ರೇಷ್ಟ ಕಲೆಯ ಪರಿಚಯ ಮಾಹಿತಿಗಳನ್ನು ಇಂದಿನ ಯುವ ಜನತೆ, ವಿದ್ಯಾರ್ಥಿಗಳಿಗೆ ಕಲಿಸುವ ಕಾರ್ಯ ಅಗತ್ಯವಾಗಿದೆ, ಇಂತಹ ಕಾರ್ಯಗಳನ್ನು ಯಕ್ಷಾಂತರಂಗ ಸಂಸ್ಥೆ ಅವರು ಉಚಿತ ತರಬೇತಿ ಕೇಂದ್ರದ ಮೂಲಕ ಈ ಕಾರಂತ ಥೀಂ ಪಾರ್ಕ್ನಲ್ಲಿ ಹನ್ನೊಂದು ವರ್ಷಗಳಿಂದ ನಡೆಸುತ್ತಿರುವುದು ಹೆಮ್ಮೆಯ ವಿಷಯ ಎಂದರಲ್ಲದೆ ಡಾ. ಕಾರಂತರ ಸಾಮಿಪ್ಯದ ಶಿಷ್ಯರಲ್ಲೋರ್ವ ಚಿತ್ರಪಾಡಿ ಕೃಷ್ಣಮೂರ್ತಿ ಉರಾಳರ ನೇತೃತ್ವದಲ್ಲಿ ನಡೆಸಲ್ಪಡುತ್ತಿರುವ ಈ ಕಾರ್ಯ ಯಶಸ್ವಿಯಾಗಿ ಮುಂದುವರಿಯಲಿ ಎಂದು ಶುಭವನ್ನು ಹಾರೈಸಿದರು. ಈ ವೇಳೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025-26ರ ಸಾಲಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮುಂಗಾರು ಮಳೆಗಾಲದಲ್ಲಿ ಅತಿವೃಷ್ಠಿಯಿಂದಾಗಿ ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಅಗತ್ಯ ರೀತಿಯ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಮಾನವ ಹಾಗೂ ಜಾನುವಾರುಗಳಿಗೆ ಪ್ರಾಣಾಪಾಯಗಳು ಹಾಗೂ ಇತರೆ ಯಾವುದೇ ರೀತಿಯ ಹಾನಿಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಬರುವ ಮುಂಗಾರು ಮಳೆಗಾಲದಲ್ಲಿ ಹೆಚ್ಚು ಮಳೆಯಿಂದಾಗಿ ಜನಸಾಮಾನ್ಯರ ದೈನಂದಿನ ಚಟುವಟಿಕೆಗಳಿಗೆ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಮಳೆಯಿಂದ ರಸ್ತೆಗಳು, ಹಾಳಾಗಿ ಜನರ ಸುಗಮ ಸಂಚಾರಕ್ಕೆ ವ್ಯತ್ಯಯ ವಾಗದಂತೆ ಕ್ರಮವಹಿಸಬೇಕು. ಕಾಲುಸಂಕಗಳ ಬಳಕೆಯ ಸಂದರ್ಭದಲ್ಲಿ ಜಾರಿಬಿದ್ದು, ಅನಾಹುತಗಳು ಆಗದಂತೆ ಕ್ರಮವಹಿಸಬೇಕು. ಈಗಿನಿಂದಲೇ ಜಂಗಲ್ ಕ್ಲಿಯರೆನ್ಸ್ ಮಾಡುವುದರೊಂದಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ದಳಿ ಎಂಬಲ್ಲಿ  ಜೀಪು ಹಾಗೂ ಇನ್ಸುಲೆಟರ್ ವಾಹನದ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಕೇರಳದ ಪ್ರವಾಸಿಗರು ಮೃತಪಟ್ಟು, 8 ಮಂದಿ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಕೊಡಚಾದ್ರಿಯಿಂದ ಕೊಲ್ಲೂರಿಗೆ ಹಿಂದಿರುಗುತ್ತಿದ್ದ ಜೀಪಿನಲ್ಲಿ ಮಕ್ಕಳು, ಚಾಲಕ ಸೇರಿದಂತೆ 10 ಮಂದಿ ಪ್ರಯಾಣಿಸುತ್ತಿದ್ದು, ಕೊಲ್ಲೂರು ಕಡೆಯಿಂದ ನಾಗೋಡಿ ಘಾಟಿಯತ್ತ ಸಾಗುತ್ತಿದ್ದ ಇನ್ಸುಲೆಟರ್ ವಾಹನದ ನಡುವೆ ಅಪಘಾತದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಜ್ಯೋತಿ ಹಾಗೂ ಅರಿಯಾ ಅನೂಪ್ ಎಂಬುವವರು ಮೃತಪಟ್ಟಿದ್ದಾರೆ. ಜೀಪು ಚಾಲಕ ಸೇರಿದಂತೆ ಗಾಯಗೊಂಡ ಇತರರನ್ನು ಕುಂದಾಪುರ ಹಾಗೂ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಕೇರಳದ ಪ್ರವಾಸಿಗರಾಗಿದ್ದು ಕೊಲ್ಲೂರಿನಿಂದ ಸ್ಥಳೀಯ ಜೀಪ್ ಮೂಲಕ ಕೊಡಚಾದ್ರಿಗೆ ತೆರಳಿ ಹಿಂದಿರುಗುವ ಸಂದರ್ಭ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೊಲ್ಲೂರು ಠಾಣೆ ಪಿಎಸ್ಐಗಳಾದ ವಿನಯ್ ಎಂ. ಕೊರ್ಲಹಳ್ಳಿ, ಭೀಮಾಶಂಕರ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಇನ್ಸುಲೇಟರ್ ವಾಹನ ಚಾಲಕ ಪರಾರಿಯಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ನಾಡ ಗ್ರಾಮದ ನಿವಾಸಿ ಸೂಲ್ಯಣ್ಣ ಶೆಟ್ಟಿ ಅವರ ಪುತ್ರ ಸುಧಾಕರ ಶೆಟ್ಟಿ ಗುರುವಾರ ಸಂಜೆ ವಂಡ್ಸೆ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿ ಹೋಟೆಲ್ ಕೆಲಸ ಮಾಡಿಕೊಂಡಿದ್ದ ಈತ ವರ್ಷದ ಹಿಂದೆ ಊರಿಗೆ ಬಂದಿದ್ದರು. ಹೆಂಡತಿ ಮನೆಯಾದ ವಂಡ್ಸೆಯಲ್ಲಿ ನೆಲೆಸಿದ್ದರು. ಗುರುವಾರ ಸಂಜೆ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ನನ್ನ ಬಾವ ನಾಗರಾಜ ಮತ್ತು ಹೆಂಡತಿ ಗುಣರತ್ನ ತೊಂದರೆ ನೀಡುತ್ತಿದ್ದು, ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಬರೆದುಕೊಂಡಿದ್ದು ನಂತರ ಬೈಕ್ನಲ್ಲಿ ವಂಡ್ಸೆ ಸೇತುವೆ ಬಳಿ ಹೋಗಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಮೂಡುಬಿರ್ತಿ ನಿವಾಸಿ ಭರತ್ ಜಯರಾಮ್ ದಾಸ (34) ಗಡಿಪಾರು ಶಿಕ್ಷೆಗೆ ಒಳಗಾದ ವ್ಯಕ್ತಿ. ಈತನ ವಿರುದ್ಧ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಒಟ್ಟು 3 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿದ್ದವು. ದಾಖಲಾಗಿರುವ 3 ಪ್ರಕರಣಗಳ ಪೈಕಿ ಈಗಾಗಲೇ ಒಂದು ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆಯಾಗಿದೆ. ಉಳಿದ ಎರಡು ಪ್ರಕರಣಗಳು ಪ್ರಸ್ತುತ ತನಿಖಾ ಹಂತದಲ್ಲಿವೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಗುರುವಾರ (ಮೇ.14) ಈ ಗಡಿಪಾರು ಆದೇಶವನ್ನು ಜಾರಿಗೊಳಿಸಿದ್ದಾರೆ. ಅದರಂತೆ ಆರೋಪಿಯನ್ನು ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ದೆಹಲಿ ಕರ್ನಾಟಕ ಸಂಘದ 2026-28ನೇ ಅವಧಿಗೆ ಅಧ್ಯಕ್ಷರಾಗಿ ಆರ್. ರೇಣುಕುಮಾರ್, ಉಪಾಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ ಹಾಗೂ  ಶೋಭಾ ಗೌಡ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಕುಂದಾಪುರ, ಖಜಾಂಚಿಯಾಗಿ ಎಂ. ಆಶಾಲತಾ, ಜಂಟಿ ಕಾರ್ಯದರ್ಶಿಯಾಗಿ ಜೆ. ಸಂತೋಷ, ಬಿ. ಎಸ್.ಅಶ್ವಿನಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪೂಜಾ ಪಿ.ರಾವ್, ಎಂ.ಶಿವಪ್ಪ, ಡಾ. ವೆಂಕಟಾಚಲ ಜಿ. ಹೆಗಡೆ, ಡಾ. ಎಂ. ಎಸ್. ಶಶಿಕುಮಾರ್, ಬಿ. ನಾರಾಯಣ, ಎಂ. ಕೃಷ್ಣಪ್ಪ, ಬಿ.ಕೆ. ಜಯಶ್ರೀ, ಬಸವರಾಜು, ಶುಭ ದೇವಿ ಪ್ರಸಾದ್ ಅವರು ದೆಹಲಿ ಕರ್ನಾಟಕ ಸಂಘದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ದೆಹಲಿ ಕರ್ನಾಟಕ ಸಂಘದ ನೂತನ ಪದಾಧಿಕಾರಿಗಳ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಕಾಸರಗೋಡು ಕನ್ನಡ ಗ್ರಾಮದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ- 2026- ಕೇರಳ- ಕರ್ನಾಟಕ ಉತ್ಸವ ಸಮಿತಿ, ಕೇರಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಆರ್‌ಟಿಓ ಅಧಿಕಾರಿ ಮಾರುತಿ ನಾಯ್ಕ್,  ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಹಾಗೂ ಸಿಬ್ಬಂದಿಗಳು, ಐ.ಆರ್.ಬಿ ಸಂಸ್ಥೆಯ ಮನೋಜ್ ಮೊದಲಾದವರು ತ್ರಾಸಿ – ಮರವಂತೆ ಬೀಚ್ ಬಳಿ ಪರಿಶೀಲನೆ ನಡೆಸಿ ಹೆದ್ದಾರಿ ಗುತ್ತಿಗೆ ವಹಿಸಿಕೊಂಡಿರುವ ಕಂಪೆನಿಗೆ ಸೂಚನೆ ನೀಡಿದ್ದರು. ಅದರಂತೆ ಸೂಚನಾ ಫಲಕಗಳನ್ನು ಅಳವಡಿಕೆ ಮಾಡಲಾಗಿದೆ.  ತಾಲೂಕಿನ ತ್ರಾಸಿ – ಮರವಂತೆ ಬೀಚ್ ಬಳಿ ಎ.29 ರಂದು ಪ್ರವಾಸಿ ಬಸ್‌ವೊಂದು ನಿಂತಿದ್ದ ಟ್ಯಾಂಕರ್ ಹಾಗೂ ಟ್ರಕ್‌ಗೆ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಆ ಬಳಿಕ ಜಂಟಿ ಪರಿಶೀಲನೆ ನಡೆಸಲಾಗಿತ್ತು. ರಾ.ಹೆ–66ರ ತ್ರಾಸಿ ಮರವಂತೆ ಮಧ್ಯೆ ನೋ ಪಾರ್ಕಿಂಗ್, ಅಪಘಾತ ವಲಯ ಸೂಚಕ ನಾಮಫಲಕಗಳು, ವಾಹನಗಳ ವೇಗ ಮಿತಿ ಸಂಬಂಧಿತ ಸೂಚನೆಗಳು, ರಿಫ್ಲೆಕ್ಟರ್ʼಗಳನ್ನು ಅಳವಡಿಸಲಗಿದೆ. ವಾಹನ ಸವಾರರ ಸುರಕ್ಷತೆ ಹಾಗೂ ಅಪಘಾತ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಗುತ್ತಿಗೆ ಸಂಸ್ಥೆ ಅಗತ್ಯ ಕ್ರಮವಹಿಸಿದೆ…

Read More