ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ಘಟಕಗಳ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ಕುಂದಾಪುರ ಹಾಗೂ ಲಯನ್ಸ್ ಕ್ಲಬ್, ಕುಂದಾಪುರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕುಂದಾಪುರ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ಜಯಕರ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು. ರೆಡ್‌ಕ್ರಾಸ್ ಸೊಸೈಟಿಯ ಕಾರ್ಯವೈಖರಿ ಹಾಗೂ ರಕ್ತದಾನ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲಯನ್ ಇಂಟರ್‌ನ್ಯಾಷನಲ್ ಜಿಲ್ಲೆ 317Cಯ ಪ್ರಥಮ ಉಪ ಗವರ್ನರ್ MJF ಲಯನ್ ರಾಜೀವ ಕೋಟ್ಯಾನ್ ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಅಧ್ಯಕ್ಷ ಲಯನ್ ಸದಾನಂದ ನಾವಡ ಮುಖ್ಯ ಅತಿಥಿ ನೆಲೆಯ ಮಾತುಗಳನ್ನಾಡಿದರು. ಲಯನ್ಸ್ ಕ್ಲಬ್, ಕುಂದಾಪುರ ಇದರ ಕಾರ್ಯದರ್ಶಿ ಕಾಲೇಜು ಆಡಳಿತ ಮಂಡಳಿಯ ಸದಸ್ಯ ಹು0ತ್ರಿಕೆ ಸುಧಾಕರ್ ಶೆಟ್ಟಿ ಆಶಯ ನುಡಿಗಳನ್ನಾಡಿದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಆನಂದ ಮದ್ಯೋಡಿ ಅವರ ಬೀಳ್ಕೊಡುಗೆ ಸಮಾರಂಭ –ಆನಂದಾಭಿನಂದನಾ ಕಾರ್ಯಕ್ರಮದ ನಡುವೆ, ತಮ್ಮ ಬದುನುದ್ದಕ್ಕೂ ಸಹಕಾರಿ ನೀಡಿದವರನ್ನೆಲ್ಲಾ ಗುರುತಿಸಿ ಗೌರವಿಸುವ – ಅಭಿವಂದನೆ ಎಂಬ ಅಪರೂಪದ ಕ್ಷಣಕ್ಕೆ ಭಾನುವಾರ ರತ್ತುಬಾಯಿ ಜನತಾ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸದ ಕಾರ್ಯಕ್ರಮ ಸಾಕ್ಷಿಯಾಯಿತು. ಇದು ನಡೆದದ್ದು ಶ್ರೀ ವಿ.ವಿ.ವಿ ಮಂಡಳಿ ರಿ. ಹೆಮ್ಮಾಡಿ, ರತ್ತುಬಾಯಿ ಜನತಾ ಪ್ರೌಢಶಾಲೆ ಬೈಂದೂರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಬಂಧುಮಿತ್ರರ ವತಿಯಿಂದ ಮತ್ತು ಅಭಿವಂದನಾ ಸಮಾರಂಭದಲ್ಲಿ. ಶ್ರೀ ವಿ.ವಿ.ವಿ ಮಂಡಳಿ ರಿ. ಹೆಮ್ಮಾಡಿ ಅಧ್ಯಕ್ಷರು, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಆನಂದ ಮದ್ಯೋಡಿ ದಂಪತಿಗಳನ್ನು ಶಾಲೆಯ ವತಿಯಿಂದ ಸಮ್ಮಾನಿಸಿ ಮಾತನಾಡಿ, ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿಯಾಗಿದೆ. ನಮ್ಮ ಉತ್ತಮ ನಡವಳಿಕೆ ಜನರ ಮನಸ್ಸಿನಲ್ಲಿ ಸದಾ ಉಳಿಯುತ್ತದೆ. ಸಾರ್ಥಕ ಸೇವೆ ನಿವೃತ್ತಿ ಬಳಿಕವೂ ಸಂತೃಪ್ತಿ ನೀಡುತ್ತದೆ. ಆನಂದ ಮದ್ದೋಡಿಯವರು ಸೇವೆಯಲ್ಲಿರುವಷ್ಟೂ ಕಾಲ ಯಾವುದೇ ನ್ಯೂನತೆಗಳಿಲ್ಲದೇ ಆಡಳಿತ ಮಂಡಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ 6ನೇ ಬ್ಯಾಚ್‌ನ ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ಇತ್ತೀಚಿಗೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ವಿದ್ಯಾರತ್ನ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲಾರಾದ ಡಾ. ಅನಿತಾ ಸಿ. ರಾವ್, ಐಎಂಜೆ ವಿದ್ಯಾ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಜೆನ್ನಿಫರ್ ಫ್ರೀಡಾ ಮೆನೆಜಸ್, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಉಪ ಪ್ರಾಂಶುಪಾಲೆ ರೂಪಶ್ರೀ ಕೆ. ಎಸ್. ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ ಆಧುನಿಕ ನರ್ಸಿಂಗ್‌ಗೆ ಫ್ಲಾರೆನ್ಸ್ ನೈಟಿಂಗೇಲ್ ನೀಡಿದ ಗಮನಾರ್ಹ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣವಚನ ಸ್ವೀಕಾರ ಸಮಾರಂಭವು ಕಾರ್ಯಕ್ರಮದ ಅತ್ಯಂತ ಮಹತ್ವದ ಭಾಗವಾಗಿತ್ತು. ನರ್ಸಿಂಗ್ ವೃತ್ತಿಯ ನೈತಿಕ ಮಾನದಂಡಗಳು, ಮೌಲ್ಯಗಳು ಮತ್ತು ಜವಾಬ್ದಾರಿಗಳನ್ನು ಎತ್ತಿಹಿಡಿಯಲು ವಿದ್ಯಾರ್ಥಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದ ವ್ಯಕ್ತಿ ಚೇತರಿಸಿಕೊಂಡು ಮನೆಗೆ ಬಂದವರು ಮತ್ತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಲ್ಲಿನ ಉಪ್ಪುಂದ ಗ್ರಾಮದಲ್ಲಿ ಸಂಭವಿಸಿದೆ. ಉಪ್ಪುಂದ ಗ್ರಾಮದ ಜನತಾ ಕಾಲೋನಿ ಪುಟ್ಟಮನೆ ಸೀತಾರಾಮ ಖಾರ್ವಿ (52) ಮೃತಪಟ್ಟ ವ್ಯಕ್ತಿ. ಮಾ.2ರಂದು ಬೆಳಗ್ಗೆ ವಾಕಿಂಗ್ ಮುಗಿಸಿ ಮನೆಗೆ ಬಂದಿದ್ದು ಅವರು ಮನೆಯವರಲ್ಲಿ ವಾಕಿಂಗ್ ಮಾಡುವಾಗ ದಾರಿ ಮಧ್ಯೆ ಕುಸಿದು ಬಿದ್ದು ಸುಧಾರಿಸಿಕೊಂಡು ಬಂದಿರುವುದಾಗಿ ತಿಳಿಸಿದ್ದರು. ಮನೆಯವರ ಬಳಿ ಮಾತನಾಡಿದ ಸ್ವಲ್ಪ ಸಮಯದ ಬಳಿಕ ಮತ್ತೆ ಕುಸಿದು ಬಿದ್ದು ತೀವ್ರ ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಬೈಂದೂರು ಸಮುದಾಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಈಗಾಗಲೇ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ಟಿವಿ ಟೆಕ್ನಿಷಿಯನ್ ಹಾಗೂ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಬರ್ಟ್ ರೋಡ್ರಿಗಸ್ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತ್ವರಿತ ಯಶಸ್ಸಿನತ್ತ ಹೆಚ್ಚು ಆತುರಪಡಬಾರದು ಎಂದು ಸಲಹೆ ನೀಡಿದರು. ಕೊರೋನಾ ಸಂದರ್ಭದಲ್ಲಿ ಸಹಬಾಳ್ವೆ ಹಾಗೂ ಜೀವನ ಮೌಲ್ಯಗಳ ಮಹತ್ವವನ್ನು ನಾವು ಕಲಿತಿದ್ದೇವೆ. ಎಷ್ಟೇ ಸಾಧನೆ ಮಾಡಿದರೂ ವ್ಯಕ್ತಿತ್ವವೇ ನಮ್ಮನ್ನು ಗುರುತಿಸುವುದಾಗಿ, ಆದ್ದರಿಂದ ಹಣಕ್ಕಿಂತ ವ್ಯಕ್ತಿತ್ವ, ಶಿಸ್ತು, ಪ್ರಾಮಾಣಿಕತೆ ಮತ್ತು ದೃಢಸಂಕಲ್ಪ ಮುಖ್ಯವೆಂದು ಹೇಳಿದರು. “ಆರೋಗ್ಯಕರ ಬದಲಾವಣೆಗಳಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಆ ಉತ್ತಮ ಬದಲಾವಣೆ ನಿಮ್ಮಿಂದಲೇ ಆರಂಭವಾಗಲಿ,” ಎಂದು ಕರೆ ನೀಡಿದ ಅವರು ಕೃಷಿ ಹಾಗೂ ಟಿವಿ ಟೆಕ್ನಿಷಿಯನ್ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಇನ್ನೋರ್ವ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಬ್ರಹ್ಮಾವರ ಎ.ಎಸ್.ಐ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (ಐಎಂಜೆಐಎಸ್ ಸಿ) ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗವು ಭಾರತ ಸರ್ಕಾರ ಮತ್ತು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಮಾರ್ಗದರ್ಶನದಲ್ಲಿ ಬಿಕಾಂ, ಬಿಬಿಎ ವಿದ್ಯಾರ್ಥಿಗಳಿಗೆ ಹಣಕಾಸು ಸಾಕ್ಷರತಾ ಜಾಗೃತಿಯ ಆನ್ಲೈನ್ ಸಂವಾದಾತ್ಮಕ ಸಂವಹನ ಕಾರ್ಯಾಗಾರವನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ಹಣಕಾಸು ಯೋಜನೆ ಮತ್ತು ಪರಿಣಾಮಕಾರಿ ಉಳಿತಾಯ ತಂತ್ರಗಳನ್ನು ಉತ್ತೇಜಿಸುವುದರ ಮೇಲೆ ಈ ಕಾರ್ಯಕ್ರಮ ಕೇಂದ್ರೀಕರಿಸಿತ್ತು. ಹಣಕಾಸು ಯೋಜನೆ, ಸಂಪತ್ತು ನಿರ್ವಹಣೆ ಮತ್ತು ಕಾರ್ಪೊರೇಟ್ ತರಬೇತಿಯಲ್ಲಿ ವೃತ್ತಿಪರ ತರಬೇತಿಯುಳ್ಳ ನಿಧಿ ಮತೂರ್ಯ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ಭಾಗವಹಿಸುವವರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಜೆಟ್, ವ್ಯವಸ್ಥಿತ ಉಳಿತಾಯ, ಹೂಡಿಕೆ ಯೋಜನೆ ಮತ್ತು ಕ್ರೆಡಿಟ್‌ನ ಪ್ರಜ್ಞಾಪೂರ್ವಕ ಬಳಕೆಯ ಮಹತ್ವವನ್ನು ಎತ್ತಿ ತೋರಿಸಿದರು. ಅವರು ವಿವಿಧ ಬ್ಯಾಂಕಿಂಗ್ ಸೇವೆಗಳನ್ನು ವಿವರಿಸಿದರು ಮತ್ತು ಸಾಮಾನ್ಯ ಹಣಕಾಸು ಅಪಾಯಗಳ ವಿರುದ್ಧ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು. ಪ್ರಾಯೋಗಿಕ ಒಳನೋಟಗಳು ಮತ್ತು ನೈಜ-ಜೀವನದ ಉದಾಹರಣೆಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನದ ವತಿಯಿಂದ ಭಾನುವಾರ ಕೋಟದ ಗಾಂಧಿ ಮೈದಾನದಲ್ಲಿ ವೈಭವದ ಏಕಃಪವಿತ್ರ ನಾಗಮಂಡಲ ಸೇವೆ ಸಂಪನ್ನಗೊಂಡಿತು. ಮಂಡಲೋತ್ಸವದಲ್ಲಿ ಸುಮಾರು 40,000 ಅಧಿಕ ಮಂದಿ ಭಕ್ತಾಧಿಗಳು ಅನ್ನಪ್ರಸಾದ ಸ್ವೀಕರಿಸಿ ನಾಗಮಂಡಲೋತ್ಸವದಲ್ಲಿ ಭಾಗಿಯಾದರು. ಸಂಜೆ 7.00 ಗಂಟೆಗೆ ನಾಗನಿಗೆ ಹಾಲಿಟ್ಟು ಸೇವೆ ನಡೆದು 9:30ರಿಂದ ನಾಗಮಂಡಲೋತ್ಸವಕ್ಕೆ ಚಾಲನೆ ದೊರಕಿದ್ದು ಮಣೂರು ಮಧುಸೂದನ ಬಾಯರಿ ಮತ್ತು ಬಳಗದವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಾಗಮಂಡಲದ ಕೇಂದ್ರದಲ್ಲಿ ನೆರವೇರಿತು. ಮಂಡಲೋತ್ಸವದಲ್ಲಿ ಪಾತ್ರಿಗಳಾಗಿ ಕಾರ್ಕಡ ವೆಂಕಟರಮಣ ಹೊಳ್ಳ ಮತ್ತು ವೈದ್ಯರಾಗಿ ರಾಘವೇಂದ್ರ ವೈದ್ಯ ಮತ್ತು ಬಳಗ ಬಾಗಿಯಾದರು. ಸಹಸ್ರ ಸಂಖ್ಯೆಯಲ್ಲಿ ಮಂಡಲ ಸೇವೆಯನ್ನು ಕಣ್ತುಂಬಿಕೊಂಡರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಆನಂದ ಸಿ.ಕುಂದರ್, ಸದಸ್ಯರಾದ ಕೆ. ಸುಬ್ರಾಯ ಜೋಗಿ, ಸುಭಾಷ್ ಶೆಟ್ಟಿ, ಗಣೇಶ್ ಕೆ. ನೆಲ್ಲಿಬೆಟ್ಟು, ಜ್ಯೋತಿ ದೇವದಾಸ್ ಕಾಂಚನ್, ಸುಧಾ ಎ. ಪೂಜಾರಿ, ರತನ್ ಐತಾಳ, ಶಿವ ಪೂಜಾರಿ, ಚಂದ್ರಶೇಖರ ಆಚಾರ್, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಸೇರಿದಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದಿರೆ: ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಅಂತರ್ ಕಾಲೇಜು ಸ್ಪರ್ಧೆ ‘ಟೆಕ್ಕೋತ್ಸವ್‌ದ’ ಉದ್ಘಾಟನಾ ಕಾರ್ಯಕ್ರಮವು ಮೋಹಿನಿ ಅಪ್ಪಾಜಿ ವೇದಿಕೆ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕೋಡ್‌ಕ್ರಾಫ್ಟ್ ಟೆಕ್ನಾಲಾಜೀಸ್ ಪ್ರೈವೇಟ್ ಲಿಮಿಟೆಡ್‌ನ ಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೀಕ್ಷಿತ್ ರೈ ಮಾತನಾಡಿ, ‘ಟೆಕ್ಕೋತ್ಸವ್ ಕೇವಲ ತಂತ್ರಜ್ಞಾನ ಆಚರಣೆಗಾಗಿ ಮಾತ್ರವಲ್ಲ; ನವೀನತೆ ಮತ್ತು ಆವಿಷ್ಕಾರಗಳನ್ನು ಉತ್ತೇಜಿಸಲು ಆಯೋಜಿಸಲಾದ ವೇದಿಕೆಯಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ಇಂತಹ ತಾಂತ್ರಿಕ ಉತ್ಸವಗಳು ಅತ್ಯಂತ ಮಹತ್ವದ್ದಾಗಿದ್ದು, ಕಾಲೇಜಿನ ಹೊರ ಜಗತ್ತಿನೊಂದಿಗೆ ಸಂಪರ್ಕ ಸಾಧಿಸಲು ಇದು ಉತ್ತಮ ಅವಕಾಶ ಒದಗಿಸುತ್ತದೆ ಎಂದು ಅಭಿಪ್ರಾಯಪಟ್ಟರು.20ಕ್ಕೂ ಅಧಿಕ ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ಸಂಗತಿ. ಇಂತಹ ವೇದಿಕೆಗಳು ಹೊಸ ವಿಷಯಗಳನ್ನು ತಿಳಿಯಲು, ಜ್ಞಾನ ವಿಸ್ತರಿಸಿಕೊಳ್ಳಲು ಮತ್ತು ಅನುಭವ ಹಂಚಿಕೊಳ್ಳಲು ನೆರವಾಗುತ್ತವೆ. ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ಯಾವುದೇ ತಂತ್ರಜ್ಞಾನವನ್ನು ಬಳಸುವ ಮೊದಲು ಮೂಲಭೂತ ಅಂಶಗಳ ಮೇಲೆ ಗಮನಹರಿಸುವುದು ಅಗತ್ಯ. ಪ್ರೋಗ್ರಾಮಿಂಗ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಫಾರ್ಚೂನ್ ಅಕಾಡೆಮಿಕ್ ಮತ್ತು ಚಾರಿಟೇಬಲ್ ಟ್ರಸ್ಟ್ ಪ್ರವರ್ತಿತ ಬ್ರಹ್ಮಾವರ ಹಂಗಾರಕಟ್ಟೆಯ ಫಾರ್ಚುನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಸಂಸ್ಥೆಯ ಬಿಎಸ್ಸಿ ನರ್ಸಿಂಗ್, ಜಿಎನ್ಎಂ ಮತ್ತು ಡಿಎಂ ಎಲ್ ಟಿ, ಡಿಒಟಿ ಮತ್ತು ಎಟಿ ಇದರ ಪದವಿ ಪ್ರದಾನ ಸಮಾರಂಭ- 2026 ಸಂಸ್ಥೆಯ ವಠಾರದಲ್ಲಿ ರವಿವಾರ ನಡೆಯಿತು. ಸಮಾರಂಭದ ಮುಖ್ಯ ಅಬ್ಯಾಗತರಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮೆಡಿಕಲ್ ಸೈನ್ಸ್ ಮತ್ತು ರೀಸರ್ಚ್ ಸೆಂಟರ್ ಡೀನ್ ಡಾ. ಮಹಾಬಲೇಶ್ ಶೆಟ್ಟಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನೆರವೇರಿಸಿ ಮಾತನಾಡಿ, ಮೇ. 12ರಂದು ಆಧುನಿಕ ನರ್ಸಿಂಗ್ ವಿಭಾಗಕ್ಕೆ ಅಡಿಪಾಯ ಹಾಕಿದ ಪ್ಲಾರೆನ್ಸ್ ನೈಂಟಿಂಗೇಲ್ ಅವರ ಜನ್ಮದಿನದಂದು ದಾದಿಯರ ಸೇವೆಯನ್ನು ಸ್ಮರಿಸುತ್ತದೆ. ದಾದಿಯರು ಆರೋಗ್ಯ ಕ್ಷೇತ್ರದ ಬೆನ್ನೆಲುಬು ಅವರು ರೋಗಿಗಳ ಆರೈಕೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ರೋಗಿಗಳಿಗೆ ಮಾನಸಿಕ ಧೈರ್ಯ ಮತ್ತು ಪ್ರೀತಿಯ ಆರೈಕೆಗೆ ಪ್ರಮುಖ ಕಾರಣರಾಗಿರುತ್ತಾರೆ. ಅವರ ನಿಸ್ವಾರ್ಥ ಸೇವೆ ಬೆಲೆ ಕಟ್ಟಲು ಸಾಧ್ಯವಿಲ್ಲ ಆರೋಗ್ಯ ಕ್ಷೇತ್ರಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸ್ ಆಫ್ ಇಂಡಿಯಾದವರು ನಡೆಸಿದ 2026ರ ಸಿಎ ಅಂತಿಮ ಪರೀಕ್ಷೆಯಲ್ಲಿ ಅಕ್ಷಯ ಶೆಟ್ಟಿ ಅವರು ಉತ್ತೀರ್ಣರಾಗಿದ್ದಾರೆ. ಅವರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಹಿಂದಿನ ವಿದ್ಯಾರ್ಥಿ. ಈತ ಹುಂಚನಿ ಹೆಮ್ಮಕ್ಕಿ ವಸಂತಿ ಶೆಟ್ಟಿ ಮತ್ತು ಉಳ್ಳೂರು 74ರ ಕರುಣಾಕರ ಶೆಟ್ಟಿ ಅವರ ಪುತ್ರ.
