ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಿವೃತ್ತಿ ವೃತ್ತಿ ಬದುಕಿಗೆ ಹೊರತು ನಮ್ಮ ಸಾಮಾಜಿಕ ಜೀವನಕ್ಕಲ್ಲ. ವಯಸ್ಸು ಮಾನದಂಡವಾಗಿಸದೇ ಪ್ರತಿಯೊಬ್ಬರಿಗೂ ತಮ್ಮಲ್ಲಿರುವ ಸೂಪ್ತ ಪ್ರತಿಭೆ ಹೊರಹೊಮ್ಮವ ಸಕಾಲವಿದು. ನಿವೃತಿಯ ನಂತರದ ಸ್ವತಂತ್ರ ಬದುಕಿನಲ್ಲಿ ನಮ್ಮ ಪ್ರವೃತ್ತಿಯ ಮೂಲಕ ಇನ್ನಷ್ಟು ಪ್ರಕಾಶಮಾನರಾಗಿ ಜೀವನೋತ್ಸಾಹವನ್ನು ವೃದ್ಧಿಸಿಕೊಳ್ಳಬೇಕು ಎಂದು ಕುಂದಾಪುರ ಹಿರಿಯ ನ್ಯಾಯವಾದಿ ಎಎಸ್ಎನ್ ಹೆಬ್ಬಾರ್ ಅವರು ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಂಗಣದಲ್ಲಿ ಬೈಂದೂರು ಹಿರಿಯ ನಾಗರೀಕರ ವೇದಿಕೆಯ ಈ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಸರ್ಕಾರಿ, ಅರೆ ಸರ್ಕಾರಿ ಮತ್ತು ಸಂಘಟಿತ ವಲಯದ ಉದ್ಯೋಗಸ್ಥರಿಗೆ ನಿವೃತ್ತಿಯ ನಂತರದ ಬದುಕು ಹೊಸಲೋಕದ ಪರಿಚಯ ಮೂಡಿಸುತ್ತದೆ. ಕೆಲವರಿಗೆ ಅದು ಮಧುರವಾದರೆ ಇನ್ನು ಕೆಲವರಿಗೆ ಯಮಯಾತನೆಯಾಗಬಹುದು. ಇದೆಲ್ಲವೂ ಅವರವರು ಜೀವನವನ್ನು ಕಾಣುವ ಮತ್ತು ಸ್ವೀಕರಿಸುವ ವೈಖರಿಯಿಂದ ನಿರ್ಧಾರವಾಗುತ್ತದೆ ಎಂದರು. ನಿರ್ಗಮನ ಅಧ್ಯಕ್ಷ ಕೆ. ಪುಂಡಲೀಕ ನಾಯಕ್ ನೂತನ ಅಧ್ಯಕ್ಷ ಗಿರೀಶ ಶ್ಯಾನುಭಾಗ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನಿವೃತ್ತ ಉಪನ್ಯಾಕ ಎಸ್. ಜನಾರ್ದನ ಮರವಂತೆ, ವೇದಿಕೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ನವದೆಹಲಿಯಲ್ಲಿ ನಡೆಯಲಿರುವ 2025ರ ಗಣರಾಜ್ಯೋತ್ಸವ ದಿನದ ಪಥಸಂಚಲನ ಶಿಬಿರಕ್ಕೆ (ಆರ್‌ಡಿಸಿ) ಆಳ್ವಾಸ್ ಶಿಕ್ಷಣ ಸಂಸ್ಥೆಯ ಎನ್‌ಸಿಸಿ ಘಟಕದ ಐದು ಕೆಡೆಟ್‌ಗಳು ಆಯ್ಕೆಯಾಗಿದ್ದಾರೆ. ವಾಯುದಳ ವಿಭಾಗದಲ್ಲಿ ಎನ್‌ಸಿಸಿ ಕರ್ನಾಟಕ ಹಾಗೂ ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಲಿರುವ ಹಾರ್ದಿಕ್ ಶೆಟ್ಟಿ, ನಿರೂಪ್ ಎಸ್., ಜೇವಿಟಾ ಪರ್ಲ್ ಹಾಗೂ ಪ್ರಶಸ್ತಿ ಪಾಲ್ಗೊಳ್ಳಲಿದ್ದಾರೆ. ಪ್ರಮುಖವಾಗಿ ಪ್ರಶಸ್ತಿ ಈ ಬಾರಿಯ ಪ್ರಧಾನಮಂತ್ರಿ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾಳೆ. ನೌಕಾದಳ ವಿಭಾಗದಲ್ಲಿ 5ನೇ ಕರ್ನಾಟಕ ನೌಕಾ ಘಟಕವನ್ನು ಪ್ರತಿನಿಧಿಸಲಿರುವ ಅಜ್‌ರಾಜ್ ಆಯ್ಕೆಯಾಗಿದ್ದಾರೆ. ಆಳ್ವಾಸ್‌ನಿಂದ ಒಟ್ಟು 49 ಕೆಡೆಟ್‌ಗಳು ಭಾಗಿಇಲ್ಲಿಯವರೆಗೆ ಸಂಸ್ಥೆಯಿಂದ 44 ಕೆಡೆಟ್‌ಗಳು ಗಣರಾಜ್ಯೋತ್ಸವ ದಿನದ ಪಥಸಂಚಲನ ಶಿಬಿರದಲ್ಲಿ ಪಾಲ್ಗೊಂಡಿದ್ದು, ಈ ಬಾರಿಯ 5 ಜನರು ಸೇರಿದಂತೆ ಒಟ್ಟು 49 ವಿದ್ಯಾರ್ಥಿಗಳು ಆಳ್ವಾಸ್ ಒಂದೇ ಸಂಸ್ಥೆಯಿಂದ ಪಾಲ್ಗೊಳ್ಳುತ್ತಿರುವುದು ಉಲ್ಲೇಖಾರ್ಹ ಸಾಧನೆಯಾಗಿದೆ. ಆಳ್ವಾಸ್ ವಿದ್ಯಾರ್ಥಿಗಳ ಕೊಡುಗೆಆಳ್ವಾಸ್ ಸಂಸ್ಥೆಯಲ್ಲಿ ಇಲ್ಲಿಯವರೆಗೆ 57ಕ್ಕೂ ಅಧಿಕ ಸೇನಾ ಶಿಬಿರಗಳು ನಡೆದಿದ್ದು, ಐದು ಸೇನಾ ನೇಮಕಾತಿ ರ್ಯಾಲಿಗಳು, ಅಗ್ನಿಪಥ ನೇಮಕಾತಿ ಪರೀಕ್ಷೆ ಸೇರಿದಂತೆ ಹತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅವರು ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಾಯಿ ಕಡಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಗ್ಗೆ ಅನೇಕ ದೂರುಗಳು ಸಹ ಬರುತ್ತಿವೆ. ನಾಯಿಗಳ ಸಂತಾನ ನಿಯಂತ್ರಣ ಶಸ್ತ್ರ ಚಿಕಿತ್ಸೆಗೆ ನಗರ ಹಾಗೂ ಗ್ರಾಮೀಣ ಮಟ್ಟದ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ಗಳು ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕಾಗಿ ಬಜೆಟ್ ನಲ್ಲಿ ಅನುದಾನ ಮಿಸಲಿರಿಸಿ, ಅವುಗಳ ಸಂತಾನ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು. ಸ್ಥಳೀಯ ಸಂಸ್ಥೆಗಳು ಪ್ರತೀ ಮೂರು ತಿಂಗಳಿಗೊಮ್ಮೆ ಬೀದಿ ನಾಯಿಗಳ ಗಣತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್‌ಟಿಟ್ಯೂಟ್ (ಈಅI) ಮೈಸೂರು ಹಾಗೂ ಇನ್ಸ್‌ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (Iಊಒ) ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ರಾಜ್ಯಾದ್ಯಂತ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಂದ ಫುಡ್ ಮತ್ತು ಬಿವರೇಜ್ ಸರ್ವೀಸ್ ಸ್ಟೀವರ್ಡ್ ತರಬೇತಿ, ರೂಮ್ ಅಟೆಂಡೆಂಟ್ ತರಬೇತಿ, ಫ್ರಂಟ್ ಆಫೀಸ್ ಅಸೋಸಿಯೇಟ್ ತರಬೇತಿ ಹಾಗೂ ಮಲ್ಟಿ ಕ್ಯೂಸೈನ್ ಕುಕ್ ತರಬೇತಿ ಕಾರ್ಯಕ್ರಮಗಳಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿರುತ್ತದೆ. ಮುಂದುವರೆದು ಸದರ ತರಬೇತಿ ಕಾರ್ಯಕ್ರಮಗಳಲ್ಲಿ ಮಲ್ಟಿ ಕ್ಯೂಸೈನ್ ಕುಕ್ ತರಬೇತಿಗೆ ಅಗತ್ಯಕ್ಕಿಂತ ಕಡಿಮೆ ಅರ್ಜಿಗಳು ಬಂದಿರುವುದರಿಂದ ಹಾಗೂ ಮಲ್ಟಿ ಕ್ಯೂಸೈನ್ ಕುಕ್ ತರಬೇತಿ ಪಡೆದವರಿಗೆ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಹಾಗೂ ಸ್ವ-ಉದ್ಯೋಗದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಇರುವ ಹಿನ್ನೆಲೆ, ಜಿಲ್ಲೆಯಲ್ಲಿ ಮಲ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರಿಸ್ ಇನ್ ಇಂಡಿಯಾದವರು ನಡೆಸಿದ ಸಿಎಸ್ಇಇಟಿ (ಕಂಪೆನಿ ಸಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಕ್ರಮವಾಗಿ ಧೀರಜ್ ಶೇಟ್, ಸುಜನ್ ಎಸ್.ಪಿ, ಅರ್ಚನ್ ಕುಮಾರ್, ಮೈತ್ರಿ, ಅಕ್ಷೋಭ್ಯ, ವಿಸ್ಮಿತಾ, ಸ್ಪಂದನ್, ಶಾಶ್ವತ್ ಶೆಟ್ಟಿ, ಕೌಶಿಕ್ ಶೆಟ್ಟಿ ಮತ್ತು ಭುವನ್. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 12 ನೇ ಶತಮಾನವು ವಚನ ಸಾಹಿತ್ಯದಲ್ಲಿ ಬಹು ಮುಖ್ಯವಾದ ಕಾಲಘಟ್ಟವಾಗಿದ್ದು, ವಚನಕಾರರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ತಾರತಮ್ಯವನ್ನು ಹೋಗಲಾಡಿಸಿ, ಸಮಾನತೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಜ್ಜರಕಾಡುವಿನ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ. ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ, ಶ್ರೀ ಮಹಾಯೋಗಿ ವೇಮನ ಮತ್ತು ಶ್ರೀಅಂಬಿಗರ ಚೌಡಯ್ಯರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಹನೀಯರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ವಚನಕಾರರು ಜನರಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸುವುದರೊಂದಿಗೆ ಸಮಾಜದಲ್ಲಿನ ಮೌಢ್ಯ, ಮೇಲು-ಕೀಳು, ಶ್ರೀಮಂತ-ಬಡವ, ಕಂದಾಚಾರದ ವಿರುದ್ಧ ಹೋರಾಡಿದ್ದಾರೆ. ಇಂತಹ ವಚನಕಾರರ ಜಯಂತಿಗಳನ್ನು ಆಚರಿಸುವ ಮೂಲಕ ಅವರುಗಳ ಚಿಂತನೆಗಳನ್ನು, ತತ್ವ ಆದರ್ಶಗಳನ್ನು ಜೀವನದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅವಿಭಕ್ತ ಕುಟುಂಬ ವ್ಯವಸ್ಥೆಯು ನಮ್ಮ ದೇಶದ ಶ್ರೀಮಂತ ಸಂಸ್ಕೃತಿಯ ಭಾಗವಾಗಿದೆ. ಈ ವ್ಯವಸ್ಥೆಯಲ್ಲಿ ಕುಟುಂಬದ ಸದಸ್ಯರಲ್ಲಿ ನಾವು ನಮ್ಮವರು ಎಂಬ ಭಾವನೆ ಮೂಡಿ ಒಬ್ಬರಿಗೊಬ್ಬರು ಹೊಂದಾಣಿಕೆಯಿಂದ ಸಹಕಾರ ಮನೋಭಾವದಿಂದ ಜೀವನ ಸಾಗಿಸುತ್ತಾರೆ. ಇದು ಉತ್ತಮ ಸಮಾಜ ಮುನ್ನಡೆಗೆ ಸಹಾಯವಾಗುತ್ತದೆ. ಇಲ್ಲಿ ಯಾರಿಗಾದರೂ ಸಮಸ್ಯೆ ಎದುರಾದರೇ ಆಡಳಿತ ಮಂಡಳಿ ಮತ್ತು ಎಲ್ಲರೂ ಜೊತೆಗೆ ನಿಂತು ಸಹಕರಿಸುತ್ತಾರೆ ಎಂದು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ರಿ. ಇದರ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು. ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ತ್ರಿಷಿಕಾಳ ಹೃದಯ ಶಸ್ತ್ರ ಚಿಕಿತ್ಸೆಗೆ ಶಾಲಾ ಆಡಳಿತ ಮಂಡಳಿ, ಪೋಷಕರು, ಶಿಕ್ಷಕ – ಶಿಕ್ಷಕೇತರ ವೃಂದದವರು ನೀಡಿದ ದೇಣಿಗೆ ಸಹಾಯಧನ ಒಟ್ಟು 3,01,465 ರೂಪಾಯಿಗಳನ್ನು ಬಾಲಕಿಯ ತಾಯಿಗೆ ಹಸ್ತಾಂತರಿಸಿ ಮಾತನಾಡಿದರು. ಶಾಲೆಯೂ ಕೂಡ ಒಂದು ತುಂಬು ಕುಟುಂಬಕ್ಕೆ ಉದಾಹರಣೆಯಾಗಿದ್ದು, ಇಲ್ಲಿ ಮಕ್ಕಳು, ಪೋಷಕರು, …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈಗಿನ ಔದ್ಯೋಗಿಕ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಪ್ರೌಢ ಶಿಕ್ಷಣದಿಂದಲೇ ವೃತ್ತಿಯ ಬಗ್ಗೆ ಮಾರ್ಗದರ್ಶನ ಪಡೆದು ನಿಖರ ಗುರಿಯೆಡೆ ತಲುಪುವಲ್ಲಿ ಈ ಕಾರ್ಯಕ್ರಮ ಸಹಕರಿಯಾಗಲಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್. ಶೆಟ್ಟಿ ಹೇಳಿದರು. ಅವರು ಕರ್ನಾಟಕ ಸರಕಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಭಿವೃದ್ಧಿ ನಿಗಮ, ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಅನಹತ ಯುನೈಟೆಡ್ ಎಫರ್ಟ್ಸ್ ಬೆಂಗಳೂರು ಇವರ ಸಹಯೋಗದಲ್ಲಿ ರಾಜ್ಯದ 150 ಶಾಲೆಗಳಲ್ಲಿ ಅನುಷ್ಠಾನಗೊಂಡಿರುವ “ನನ್ನ ವೃತ್ತಿ ನನ್ನ ಆಯ್ಕೆ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ., ಪ್ರಭಾರ ಉಪ ಪ್ರಾಂಶುಪಾಲರಾದ ವಿನುತಾ ಗಾಂವಕರ್, ಜಿಲ್ಲಾ ನೋಡಲ್ ಪ್ರಸನ್ನ ಕುಮಾರ್, ನನ್ನ ವೃತ್ತಿ ನನ್ನ ಆಯ್ಕೆ ಮಾರ್ಗದರ್ಶಕ ಶಿಕ್ಷಕರಾದ ಅರುಣ್ ಶೆಟ್ಟಿ ಉಳ್ತೂರು, ಸ್ಪೂರ್ತಿ ಆಚಾರ್ಯ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ. ಬಿ. ಆರ್ ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗೆ 6 ನೇ ತರಗತಿ ದಾಖಲಾತಿಗಾಗಿ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಗಾಗಿ ಹತ್ತಿರದ ವಸತಿ ಶಾಲೆಗಳಲ್ಲಿ ಜನವರಿ 25 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯು ಫೆಬ್ರವರಿ 15 ರಂದು ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರುಗಳಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರೂರು ಮೊ.ನಂ: 9482625925, ಕಳತ್ತೂರು ಮೊ.ನಂ: 9535225409, ಪಟ್ಲ ಹಿರೇಬೆಟ್ಟು ಮೊ.ನಂ; 8970292710, ಹೆರಂಜಾಲು ಮೊ.ನಂ: 8073860074, ಮಿಯ್ಯಾರು ಮೊ.ನಂ: 9686898326 ಹಾಗೂ ಯಡ್ಯಾಡಿ-ಮತ್ಯಾಡಿ ಮೊ.ನಂ: 9901519126, ಶಂಕರನಾರಾಯಣ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಮೊ.ನಂ: 6363120177, ಸಿದ್ದಾಪುರದ ಇಂದಿರಾಗಾAಧಿ ವಸತಿ ಶಾಲೆ ಮೊ.ನಂ: 9482487266 ಮತ್ತು ವಡ್ಡರ್ಸೆ ನಾರಾಯಣ ಗುರು ವಸತಿ ಶಾಲೆ ಮೊ.ನಂ:…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಸಂಸ್ಥೆಯ ಮೂಲಕ ಕಳೆದ 10 ವರ್ಷಗಳಿಂದ ನಾಡಿನ ಸಾಂಸ್ಕೃತಿಕ ಕ್ಷೇತ್ರದ ಖ್ಯಾತನಾಮರಿಗೆ ನೀಡಲಾಗುತ್ತಿರುವ ಬಿಂದುಶ್ರೀ ಪ್ರಶಸ್ತಿಯನ್ನು ಈ ಭಾರಿ ನಾಡಿನ ಖ್ಯಾತ ಸಾಹಿತಿ, ವೈದ್ಯ, ನಿರೂಪಕ ಡಾ. ನಾ. ಸೋಮೇಶ್ವರ ಅವರಿಗೆ ನೀಡಲಾಗುತ್ತಿದೆ. ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಸುರಭಿ, ಜನವರಿ 29ರಿಂದ 5 ದಿನಗಳ ಕಾಲ ಸುರಭಿ ಜೈಸಿರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜನವರಿ 30ರಂದು ಡಾ. ನಾ. ಸೋಮೇಶ್ವರ ಅವರಿಗೆ 11ನೇ ಬಿಂದುಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಡಾ. ನಾ. ಸೋಮೇಶ್ವರ:ಡಾ. ನಾ. ಸೋಮೇಶ್ವರ ಅವರು ವಿದ್ಯುನ್ಮಾನ ಮಾಧ್ಯಮ ಮತ್ತು ಬರವಣಿಗೆಗಳ ಮೂಲಕ ಜನರ ಹೃದಯ ತಟ್ಟಿದವರು. ಚಂದನ ವಾಹಿನಿಯಲ್ಲಿ ಥಟ್ ಅಂತ ಹೇಳಿ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ಅವರು ಕಳೆದ 22 ವರ್ಷಗಳಿಂದ ನಡೆಸುತ್ತಿರುವ ಈ ಕಾರ್ಯಕ್ರಮ 4,800ಕ್ಕೂ ಹೆಚ್ಚು ಸಂಚಿಕೆಗಳನ್ನು ಪೂರೈಸಿದೆ. ಸೋಮೇಶ್ವರ ಅವರು ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ…
