ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ 2024ರ ನವೆಂಬರ್ನಲ್ಲಿ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಉತ್ಕೃಷ್ಟ್ಟ ಸಾಧನೆ ಗೈದಿದ್ದಾರೆ. ವಿದ್ಯಾರ್ಥಿಗಳಾದ ಕೌಶಿಕ್, ಅಕ್ಷೋಭ್ಯ, ಶಾಶ್ವತ್, ಸಿದ್ದಾರ್ಥ, ಸುಷ್ಮಾ, ವರ್ಷಾ, ದರ್ಶನ್, ಮೈತ್ರೆಯಿ ಹಾಗೂ ಕೀರ್ತನಾ ಅವರು ಸಿ. ಎಸ್. ಎಕ್ಸಿಕ್ಯೂಟಿವ್ ಪ್ರೋಗ್ರಾಮ್ ಗೆ ಅರ್ಹತೆ ಪಡೆದಿದ್ದಾರೆ. ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ನುರಿತ ತರಬೇತುದಾರರಿಂದ ವಿದ್ಯಾರ್ಥಿಗಳು ನಿರಂತರ ತರಬೇತಿ ಪಡೆದು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಒತ್ತಡ ನಿರ್ವಹಣೆ ಮತ್ತು ಮಾದಕ ವಸ್ತುಗಳ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಉಡುಪಿಯ ಕ್ಲಿನಿಕಲ್ ಸೈಕೋಲಾಜಿಸ್ಟ್ ಆದ ಕ್ಯಾಥರಿನ್ ಜೆನಿಫರ್ ಮಾಬೆನ್ ಅವರು ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆಯ ಬಗ್ಗೆ ತಿಳಿಸುತ್ತಾ, ಒತ್ತಡವು ಒಂದು ಸಾಮಾನ್ಯ ಭೌತಿಕ, ಮಾನಸಿಕ ಮತ್ತು ಭಾವನಾತ್ಮಕ ಪ್ರತಿಕ್ರಿಯೆಯಾಗಿದೆ. ಬದುಕಿನ ಕಠಿಣ ಪರಿಸ್ಥಿತಿಗಳಲ್ಲಿ ಇವು ಎದುರಾಗುತ್ತವೆ. ಇವು ಧನಾತ್ಮಕ ಮತ್ತು ಋಣಾತ್ಮಕ ರೂಪಗಳಲ್ಲಿ ಕಂಡು ಬರುತ್ತವೆ. ಧನಾತ್ಮಕ ಒತ್ತಡವು ನಮ್ಮಲ್ಲಿನ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ ಮತ್ತು ಸವಾಲುಗಳನ್ನು ಎದುರಿಸಲು ನೆರವು ನೀಡುತ್ತದೆ. ಋಣಾತ್ಮಕ ಒತ್ತಡವು ನಮ್ಮ ಕಾರ್ಯಕ್ಷಮತೆಯನ್ನು ಕುಗ್ಗಿಸುತ್ತದೆ ಹಾಗೂ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಕೌಟುಂಬಿಕ ಸಮಸ್ಯೆಗಳು, ವಿದ್ಯಾಭ್ಯಾಸದ ತೊಂದರೆಗಳು, ಸಾಮಾಜಿಕ ಪರಿಸ್ಥಿತಿಗಳು, ಆತ್ಮಸಂಶಯಗಳು ಒತ್ತಡಗಳಿಗೆ ಕಾರಣಗಳಾಗುತ್ತವೆ. ಯೋಗ, ಧ್ಯಾನ, ಪ್ರಾಣಾಯಾಮಗಳ ಮೂಲಕ ಒತ್ತಡವನ್ನು ನಿಯಂತ್ರಿಸಿಕೊಳ್ಳಬಹುದು ಎಂಬುವುದನ್ನು ವಿವಿಧ ದೃಷ್ಟಾಂತಗಳ ಮೂಲಕ ತಿಳಿಸಿಕೊಟ್ಟರು. ಮನೋವೈದ್ಯರು ಹಾಗೂ ಸಾಮಾಜಿಕ ಕಾರ್ಯಕರ್ತೆಯಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ 2024-25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ತಗ್ಗರ್ಸೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನಾರಾಯಣ ಹೆಗ್ಡೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬೈಂದೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ, ಶಾಲೆಯ ಎಸ್, ಡಿ.ಎಂ.ಸಿ. ಸದಸ್ಯರಾದ ಸುಬ್ರಹ್ಮಣ್ಯ ಪೂಜಾರಿ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಮುತ್ತಯ್ಯ ಪೂಜಾರಿ, ಶಾಲೆ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಸುಧಾಕರ ಮೊಗವೀರ, ಶಾಲೆಯ ಶಿಕ್ಷಕಿಯಾದ ಮಾಲತಿ, ಎನ್ಎಸ್ಎಸ್ ಘಟಕ 1 ಯೋಜನಾಧಿಕಾರಿಗಳಾದ ನವೀನ್ ಹೆಚ್ ಜೆ ಇನ್ನಿತರರು ಉಪಸ್ಥಿತರಿದ್ದರು. ಎನ್ಎಸ್ಎಸ್ ಘಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವಂತಹ 5 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ಮೂಲಸೌಕರ್ಯಗಳ ಹಾನಿಯ ಪುನರ್ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ವಾಡಿಕೆಗಿಂತ ಹೆಚ್ಚು ಮಳೆ ಸುರಿದು ರಸ್ತೆ, ವಿದ್ಯುತ್ ಕಂಬ ಸೇರಿದಂತೆ ಮತ್ತಿತರ ಮೂಲಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಅವುಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದರು. ಯಾವುದೇ ಇಲಾಖೆಗಳು ಈಗಾಗಲೇ ಆಗಿರುವ ಮನೆಹಾನಿ, ಮಾನವ ಜೀವ ಹಾನಿ, ಜಾನುವಾರು ಜೀವ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಬಾಕಿ ಇರಿಸಿಕೊಳ್ಳಬಾರದು. ಶಾಲೆ, ಅಂಗನವಾಡಿ ಹಾಗೂ ರಸ್ತೆ ತುರ್ತು ದುರಸ್ಥಿ ಕಾರ್ಯಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ತ್ವರಿತಗತಿಯಲ್ಲಿ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದ ಅವರು, ತಹಶೀಲ್ದಾರರುಗಳು ಕಾಮಗಾರಿಗಳನ್ನು ಸ್ಥಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಶಿ ರಾ.ಹೆ. 66ರಲ್ಲಿ ಇನ್ನೋವಾ ಕಾರಿಗೆ ಹಿಂದಿನಿಂದ ಅತೀ ವೇಗವಾಗಿ ಬಂದ ಇನ್ಸುಲೇಟರ್ ಲಾರಿ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ಕೇರಳ ಕಡೆಗೆ ಏಳು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಬುಧವಾರ ಮಧ್ನಾಹ್ನದ ವೇಳೆಗೆ ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ಬರುತ್ತಿದ್ದಂತೆ ಕಾರಿನಲ್ಲಿದ್ದವರು ದೇವಸ್ಥಾನಕ್ಕೆ ತೆರಳುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಅದರಂತೆ ಚಾಲಕ ಕಾರನ್ನು ಹಿಂದಕ್ಕೆ ಚಲಾಯಿಸಿಕೊಂಡು ಬರುತ್ತಿದ್ದರು. ಈ ವೇಳೆ ಗೋವಾದಿಂದ ಕೆರಳ ಕಡೆಗೆ ಸಾಗುತ್ತಿದ್ದ ಇನ್ಸುಲೇಟರ್ ವಾಹನ ಇನ್ನೋವಾ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನ್ಸುಲೇಟರ್ ವಾಹನ ಪಲ್ಟಿಯಾಗಿ ಬಿದ್ದಿದೆ. ಸ್ಥಳೀಯರ ಸಹಕಾರದಿಂದ ಗಾಯಾಗಳುಗಳನ್ನು ತಕ್ಷಣ ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಗಂಭೀರ ಗಾಯಗೊಂಡ ನಾಲ್ವರನ್ನು ಮಣಿಪಾಲದ ಆಸ್ಪತ್ರೆಗೆ, ಸಣ್ಣಪುಟ್ಟ ಗಾಯಗೊಂಡವರನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿಜೂರು ಗ್ರಾಮದ ಹೊಳೆತೋಟ ಎಂಬಲ್ಲಿ ದೊಟ್ಟಮ್ಮಜ್ಜಿ ಕುಟುಂಬಕ್ಕೆ ನಿರ್ಮಿಸಿಕೊಡಲಾದ ʼಶ್ರೀ ವರಲಕ್ಷ್ಮೀ ನಿಲಯʼ ಉಚಿತ ಮನೆಯನ್ನು ಬುಧವಾರ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ನೂತನ ಗೃಹವನ್ನು ಹೊಸನಗರ ಶ್ರೀ ಕ್ಷೇತ್ರ ಕಾರ್ತಿಕೇಯ ಪೀಠದ ಯೋಗೀಂದ್ರ ಸ್ವಾಮೀಜಿ ಅವರು ಉದ್ಘಾಟಿಸಿದರು. ಹೊಸದಿಗಂತದ ಸಿಇಓ ಪಿ.ಎಸ್. ಪ್ರಕಾಶ್ ಮನೆಯ ಕೀಲಿಕೈಯನ್ನು ಕುಟುಂಬಿಕರಿಗೆ ಹಸ್ತಾಂತರಿಸಿದರು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಅವರು ಪ್ರಾಸ್ತಾವಿಕ ಮಾತನಾಡಿ, ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಶೈಕ್ಷಣಿಕ, ಸಾಮಾಜಿಕ ಧಾರ್ಮಿಕ ಸೇವಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಈ ತನಕ ಒಟ್ಟು 16 ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಹೊರರಾಜ್ಯಗಳಲ್ಲಿಯೂ ಟ್ರಸ್ಟ್ ಮೂಲಕ ವಿವಿಧ ಸೇವಾ ಕಾರ್ಯವನ್ನು ಮಾಡಲಾಗುತ್ತಿದೆ. ಸೇವೆಯಲ್ಲಿಯೇ ಆತ್ಮತೃಪ್ತಿ ಇದೆ ಎಂಬುದನ್ನು ಕಂಡುಕೊಂಡಿದ್ದೇನೆ ಎಂದರು. ಈ ವೇಳೆ ನಿವೃತ್ತ ಮುಖ್ಯೋಪಧ್ಯಾಯ ವಿಶ್ವೇಶ್ವರ ಅಡಿಗ, ಬಿಜೆಪಿ ಬೈಂದೂರು ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಸಮೃದ್ಧ ಜನಸೇವಾ ಚಾರಿಟೇಬಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಐಸಿಎಸ್ಐ (IಅSI)2024 ನವೆಂಬರ್ನಲ್ಲಿ ನಡೆಸಿದ ಸಿ.ಎಸ್.ಇ.ಇ.ಟಿ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾದ ಕೀರ್ತನ್ ಎಸ್. ಶೆಟ್ಟಿ (126), ಪವಿತ್ರ ಪ್ರಭು (121), ಗಗನ್ ಟಿ.ವೈ (119), ಅದಿತಿ (119), ಗ್ಲೆನಿಶಾ ಎಸ್ (115), ಯಶಸ್ ಆರ್(114), ಸೃಷ್ಟಿ ಎನ್ ಪೂಜಾರಿ (112), ಸೃಷ್ಟಿ ಅಶೋಕ್ (108), ನಿಹಾರಿಕಾ ಎಸ್.ಎಂ (106), ಚಿನ್ಮಯಿ ಹೊಳ್ಳ (104), ಪ್ರಥ್ವಿಕ್ ಶೆಟ್ಟಿ (104), ಚಂದನಾ ವೈ (100), ನಿಶಿತಾ (100), ರಾಹುಲ್ ಹೆಚ್.ಎಸ್ (100), ಶಿವಾತ್ಮಜ (100), ದೀಶ್ಮಾ (100), ಕಾವ್ಯ (100), ಸಂಜನಾ ವಿ. (100), ವೀರವರ್ಧನ್ ರೆಡ್ಡಿ(100) ಮೊದಲ ಪ್ರಯತ್ನದಲ್ಲಿ ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ, ಪ್ರಾಂಶುಪಾಲರು ಡಾ. ಕುರಿಯನ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲರು ಮಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥಅಶೋಕ್ ಹಾಗೂ ಸಿ.ಎಸ್ ಸಂಯೋಜಕರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಬ್ರಹ್ಮಾವರ ತಾಲೂಕಿನ ನಂಚಾರು ಗ್ರಾಮದ ನಿವಾಸಿ, ಸುರೇಂದ್ರ ಅವರ ಪುತ್ರಿ ಶ್ರುತಿ (16) ಭಾನುವಾರದಂದು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಅವರು ಮಧ್ಯಾಹ್ನದ ಬಳಿಕ ತೋಟದಲ್ಲಿರುವ ತೆಂಗಿನಕಾಯಿ ಹೆಕ್ಕಲು ಹೋಗಿದ್ದರು. ಸಂಜೆಯಾದರು ಮನೆಗೆ ಬಂದಿರಲಿಲ್ಲ. ನ.18ರಂದು ಹುಡುಕಾಡಿದಾಗ ತೋಟದ ನಡುವಿನಲ್ಲಿರುವ ಆವರಣವಿಲ್ಲದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರಬಹುದೆಂದು ಹೇಳಿದರು. ಈ ಬಗ್ಗೆ ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ನಡೆದ ಮುಕ್ತ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸಹರಾ ಗಂಗೊಳ್ಳಿ ತಂಡವು ವಾರಿಯರ್ಸ್ ಗಂಗೊಳ್ಳಿ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಸಮಾರಂಭದಲ್ಲಿ ಪತ್ರಕರ್ತ ಬಿ. ರಾಘವೇಂದ್ರ ಪೈ ಮತ್ತು ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಅವರು ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. 6 ಎಎಮ್ ಬ್ಯಾಡ್ಮಿಂಟನ್ ಫ್ರೆಂಡ್ಸ್ನ ಮನೋಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ್ ಮತ್ತು ಎಸ್.ವಿ. ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಅವರನ್ನು ಗೌರವಿಸಲಾಯಿತು. ಸಂಘದ ಸದಸ್ಯರಾದ ಲಿಪ್ಟನ್ ಒಲಿವೇರಾ, ರಾಮ ಪೂಜಾರಿ, ನಿಶಾಕಾಂತ್, ಚೇತನ್ ಆರ್ಕಾಟಿ, ಶಶಿಕಾಂತ್ ಪೂಜಾರಿ, ಕೌಶಿಕ್ ಪೂಜಾರಿ, ಪ್ರಾರ್ಥನಾ ಪೈ, ಶ್ರಾವ್ಯ, ದೀಪ್ತಿ ಮೊದಲಾದವರು ಉಪಸ್ಥಿತರಿದ್ದರು.
