ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥಮೆಟಿಕ್ ಸ್ಪರ್ಧೆಯಲ್ಲಿ ಕುಂದಾಪುರ ವಿಭಾಗದಿಂದ ಸ್ಪರ್ಧಿಸಿದ್ದ 96 ವಿದ್ಯಾರ್ಥಿಗಳಲ್ಲಿ, 10 ವಿದ್ಯಾರ್ಥಿಗಳು ಚಾಂಪಿಯನ್, 12 ವಿದ್ಯಾರ್ಥಿಗಳು ಪ್ರಥಮ ಸ್ಥಾನ, 27 ವಿದ್ಯಾರ್ಥಿಗಳು ದ್ವಿತೀಯ, 23 ವಿದ್ಯಾರ್ಥಿಗಳು ತೃತೀಯ, 16 ವಿದ್ಯಾರ್ಥಿಗಳು ನಾಲ್ಕನೆ ಮತ್ತು 7 ವಿದ್ಯಾರ್ಥಿಗಳು ಐದನೇ ಸ್ಥಾನ ಪಡೆದುಕೊಂಡಿದ್ದಾರೆ. ಲಿಖಿತಾ ಹಂಗಳೂರು ಅವರು ವಿಕಿ ಚಾಂಪಿಯನ್‌ನಲ್ಲಿ ಬಂಗಾರದ ಪ್ರಶಸ್ತಿ ಪಡೆದ್ದಿದ್ದಾರೆ. ಪರ್ವಧಿ ಪಿ. ಎಂ., ಪ್ರಣಮ್ ಖಾರ್ವಿ, ಶರಧಿ ಆರ್., ಪ್ರತ್ವಿಕ್ ಸಿ. ಪೂಜಾರಿ, ಯುಕ್ತಿ ಶೆಟ್ಟಿ, ಅನ್ವಿತ್ ಶೆಟ್ಟಿ, ಆಯುಷ್ ಜಿ. ಖಾರ್ವಿ, ತ್ರಿಷಾ ದೇವಾಡಿಗ, ನಮನ್ ಎನ್., ಭುವನ್ ಬಿ. ಕಾಂಚನ ಅವರು 5 ನಿಮಿಷದಲ್ಲಿ 100 ಕ್ಕೆ 100 ಲೆಕ್ಕ ಮಾಡುವುದರ ಮೂಲಕ ಚಾಂಪಿಯನ್ ಆಗಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ದೇಶದ ವಿವಿಧ ಭಾಗಗಳಿಂದ ಸುಮಾರು 2,600 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸಂಕಲ್ಪ ಶಕ್ತಿ, ಕ್ರಿಯಾ ಶಕ್ತಿ ಹಾಗೂ ಜ್ಞಾನ ಶಕ್ತಿ ಸಮ್ಮಿಳಿತಗೊಂಡಾಗ ಜಗತ್ತಿನಲ್ಲಿ ಯಾವುದು ಅಸಾಧ್ಯವಲ್ಲ. ನಮ್ಮಿಂದ ಅಸಾಧ್ಯ ಎಂಬ ವಿಚಾರವು ಸೃಷ್ಟಿಯಲ್ಲೇ ಇಲ್ಲ. ಸಕಾರತ್ಮಕ ಮನಸ್ಥಿತಿ ಇಂದಿನ ಯುವ ಸಮುದಾಯದ ಮಂತ್ರವಾಗಬೇಕು ಎಂದು ಗದಗದ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಟೀಮ್ ಮ್ಯಾಟ್ರಿಕ್ಸ್ ಸಹಯೋಗದಲ್ಲಿ ಶುಕ್ರವಾರ ನಡೆದ ನಾಯಕನ ಹೆಜ್ಜೆಯಲ್ಲಿ – ಸ್ವಾಮಿ ವಿವೇಕಾನಂದರ ಭೋದನೆಗಳನ್ನು ಜೀವನದಲ್ಲಿ ಹೇಗೆ ಅಳವಡಿಸುವುದುʼಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನನ್ನಿಂದ ಅಸಾಧ್ಯ ಎನ್ನುವುದು ಪ್ರಪಂಚದ ಅತ್ಯಂತ ದೊಡ್ಡ ತಪ್ಪು ಎಂದು ವಿವೇಕಾನಂದರು ಹೇಳಿದ್ದಾರೆ. ನಮ್ಮಲ್ಲಿ ಯಶಸ್ಸಿಗೆ ಬೇಕಾದ ಎಲ್ಲಾ ಸತ್ವಗಳು ಇರುತ್ತವೆ. ಅದನ್ನು ನಾವು ಸರಿಯಾದ ರೀತಿಯಲ್ಲಿ ಆಯೋಜಿಸಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ತಮ್ಮ ಎಲ್ಲಾ ನ್ಯೂನತೆಗಳನ್ನು ಮೀರಿ, ಸಾಧನೆ ಮೆರೆದ ಮೇಡಂ ಕ್ಯೂರಿ, ಥಾಮಸ್ ಅಲ್ವಾ ಎಡಿಸನ್, ನೆಪೋಲಿಯನ್, ಅಬ್ರಹಾಂ ಲಿಂಕನ್ ಮತ್ತಿತರರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯ ಮೈಸೂರು ಇವರ ಆಶ್ರಯದಲ್ಲಿ ನಡೆದ 2024ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಕಿನ್ನಿಮೂಲ್ಕಿಯ ತನಿಷ್ಕ್ ದಾಸ್ ಶೆಟ್ಟಿಗಾರ್ ಅವರು ಭರತನಾಟ್ಯ ಕಿರಿಯ ದರ್ಜೆ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾನೆ. ಈತ ಶ್ರುತಿ ಭಟ್ ಉದ್ಯಾವರ ಅವರಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾನೆ. ಅವರು ಕಿನ್ನಿಮೂಲ್ಕಿಯ ತುಳಸಿದಾಸ್, ಹರಿಣಾಕ್ಷಿ ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯ ನಡೆಸಿದ 2024ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ತನಿಶಾ ಎ. ಪೂಜಾರಿ ನಾಯಕವಾಡಿ ಅವರು ಕರ್ನಾಟಕ ಶಾಸ್ತ್ರೀಯ ಸಂಗೀತ ಕಿರಿಯ ದರ್ಜೆ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ಲಾವಣ್ಯ ಶೆಟ್ಟಿಗಾರ್ ಅವರ ಶಿಷ್ಯೆಯಾಗಿದ್ದು, ನಾಯಕವಾಡಿಯ ಅಶೋಕ ಎನ್. ಪೂಜಾರಿ ಮತ್ತು ಶೋಭಾ ದಂಪತಿಯ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತ್ರಾಸಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಸ್ಥಳೀಯ ನಿವಾಸಿ ಗೌರಿ ಶೆಟ್ಟಿಗಾರ್ (60) ಅವರಿಗೆ ಕಾರು ಢಿಕ್ಕಿಯಾಗಿ ಗುರುವಾರದಂದು ಗಂಭೀರ ಗಾಯಗೊಂಡಿದ್ದಾರೆ. ಕಾರು ಬೈಂದೂರು ಕಡೆಯಿಂದ ಕುಂದಾಪುರದ ಕಡೆಯಿಂದ ವೇಗವಾಗಿ ಸಂಚರಿಸುತ್ತಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಗಂಗೊಳ್ಳಿಯ 24×7 ಆ್ಯಂಬುಲೆನ್ಸ್‌ನ ಇಬ್ರಾಹಿಂ ಗಂಗೊಳ್ಳಿ ಅವರು ಧಾವಿಸಿ ಗಾಯಾಳುವನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ದೃಶ್ಯಾವಳಿ ಮಳಿಗೆಯೊಂದರ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರು ನಡೆಸಿದ 20ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥಮೆಟಿಕ್ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಪ್ರಶ್ಮಾ ಶೆಟ್ಟಿ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ನಮೃತಾ ಎಸ್. ಪೂಜಾರಿ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ನಮೃತಾ ಎಸ್. ಪೂಜಾರಿ, ಗಂಗೊಳ್ಳಿಯ ಸುರೇಶ ಪೂಜಾರಿ ಹಾಗೂ ಜ್ಯೋತಿ ದಂಪತಿ ಪುತ್ರ. ಈಕೆಗೆ ಶಿಕ್ಷಕಿ ಸುನೀತಾ ಅವರು ತರಬೇತಿ ನೀಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ ಉಚಿತ ಹೊಲಿಗೆ ತರಬೇತಿ ಶಿಬಿರದ ಉದ್ಘಾಟನೆಯು ಗಂಗೊಳ್ಳಿಯ ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆಯ ಟಿ. ವಿಮಲಾ ವಿ. ಪೈ ಸಭಾಂಗಣದಲ್ಲಿ ನಡೆಯಿತು. ರೋಟರಿ ಜಿಲ್ಲೆ 3182ರ ವಲಯ-2ರ ಅಸಿಸ್ಟೆಂಟ್ ಗವರ್ನರ್ ಮಮತಾ ಆರ್. ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ್ ವಹಿಸಿದ್ದರು. ಸಂಪನ್ಮೂಲ ಶಿಕ್ಷಕರಾದ ಶಾಂತಿ ಖಾರ್ವಿ, ಶಾಲಾ ಮುಖ್ಯ ಶಿಕ್ಷಕ ಜಿ. ವಿಶ್ವನಾಥ್ ಭಟ್, ಕ್ಲಬ್‌ನ ಖಜಾಂಚಿ ಜನಾರ್ಧನ್ ಪೂಜಾರಿ ಪೆರಾಜೆ ಹಾಗೂ ರೋಟರಿ ರೋಟರಿ ಸದಸ್ಯರು ಮತ್ತು ಶಿಬಿರಾರ್ಥಿಗಳು ಉಪಸಿತರಿದ್ದರು. ರೋಟರಿ ಸದಸ್ಯೆ ಫಿಲೋಮಿನಾ ಫೆನಾಂಡಿಸ್ ಕಾರ್ಯಕ್ರಮ ನಿರೂಪಿಸಿ, ಕೃಷ್ಣ ಪೂಜಾರಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಅನ್ಸನ್ ಫೇರ್ನಾಂಡಿಸ್ ಗಂಗೊಳ್ಳಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ. ಗಂಗೊಳ್ಳಿಯ ಸ್ಟೇಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿಯಾಗಿರುವ ಅನ್ಸನ್ ಫೇರ್ನಾoಡಿಸ್, ಪ್ರವೀಣ್ ಫೇರ್ನಾoಡಿಸ್ ಹಾಗೂ ಮೊಂತಿನ್ ಫೇರ್ನಾಂಡಿಸ್ ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2025ರ ಪ್ರಯುಕ್ತ ಕುಂದಾಪುರ ಸಂಚಾರ ಪೋಲಿಸ್ ಠಾಣಾ ವತಿಯಿಂದ ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಆಯೋಜಿಸಲಾಯಿತು. ಕುಂದಾಪರ ಸಂಚಾರ ಪೋಲಿಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಸುರೇಶ್ ಕೆ. ಅವರು ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ಮಾಹಿತಿ ನೀಡಿದರು. ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಅವರು ಸರ್ವರನ್ನು ಸ್ವಾಗತಿಸಿ, ವಂದನಾರ್ಪಣೆ ಗೈದರು. ಈ ಸಮಾರಂಭದಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ರಾದ ನರೇಶ್ ಹಾಗೂ ನಾಗಪ್ಪ ಅವರು ಉಪಸ್ಥಿತರಿದ್ದರು.
