Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2025ರ ಪ್ರಯುಕ್ತ ಕುಂದಾಪುರ ಸಂಚಾರ ಪೋಲಿಸ್ ಠಾಣಾ ವತಿಯಿಂದ ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಆಯೋಜಿಸಲಾಯಿತು. ಕುಂದಾಪರ ಸಂಚಾರ ಪೋಲಿಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಸುರೇಶ್ ಕೆ. ಅವರು ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ಮಾಹಿತಿ ನೀಡಿದರು. ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಅವರು ಸರ್ವರನ್ನು ಸ್ವಾಗತಿಸಿ, ವಂದನಾರ್ಪಣೆ ಗೈದರು. ಈ ಸಮಾರಂಭದಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ರಾದ ನರೇಶ್ ಹಾಗೂ ನಾಗಪ್ಪ ಅವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೇವಾ ಚೇತನ ಟ್ರಸ್ಟ್ ರಿ. ಮೂಡುಬಗೆ ಅಂಪಾರು ಇದರ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಅಂಪಾರು ಮೂಡುಬಗೆ ಶಾನ್ಕಟ್ಟು ಮೈದಾನದಲ್ಲಿ ನಡೆದ ‘ನಮ್ಮೂರ ಸಂಭ್ರಮ’ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಚಿಂತಕ, ವಾಗ್ಮಿ ಪ್ರಾಧ್ಯಾಪಕ ಕುಂದಾಪುರದ ಡಾ. ಬಿ. ಬಿ .ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಅವರಿಗೆ 2024ರ ನಮ್ಮೂರ ‘ಶಿಕ್ಷಣ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಿರಿಯ ಉದ್ಯಮಿ ಆನಗಳ್ಳಿ ಕರುಣಾಕರ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಿದರು. ಸೌತ್ ಫೀಲ್ಡ್ ಪೇಂಟ್ಸ್‌ನ ಆಡಳಿತ ನಿರ್ದೇಶಕ ಎಸ್.ಎಸ್. ಹೆಗ್ಡೆ ನಮ್ಮೂರ ಸಂಭ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಸಿ.ಎ. ಅಶೋಕ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಅಧ್ಯಕ್ಷರಾದ ಸುಗ್ಗಿ ಸುಧಾಕರ ಶೆಟ್ಟಿ, ಆಸ್ಟ್ರೇಲಿಯಾದ ಉದ್ಯಮಿ ಆಜ್ರಿ ತಗ್ಗು೦ಜೆ ಮನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಕೆಎಂಸಿ ಮಣಿಪಾಲ ಇದರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸೆ ಶಿಬಿರ ಗಂಗೊಳ್ಳಿ ಎಸ್.ವಿ. ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ಒಳಾಂಗಣ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಗಂಗೊಳ್ಳಿ ರೋಟರಿ ಕ್ಲಬ್‌ನ ಹಿರಿಯ ಸದಸ್ಯ ಉದಯಶಂಕರ ರಾವ್ ಶಿಬಿರವನ್ನು ಉದ್ಘಾಟಿಸಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲದ ತಜ್ಞ ವೈದ್ಯ ಡಾ.ಯಥಾರ್ಥ್ ಕಣ್ಣಿನ ಆರೋಗ್ಯ ಹಾಗೂ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಚಂದ್ರಕಲಾ ಎಸ್. ತಾಂಡೇಲ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ ವಂದಿಸಿದರು. ಮಾಜಿ ಅಧ್ಯಕ್ಷ ಕೆ. ರಾಮನಾಥ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ಸುಮಾರು 158 ಶಿಬಿರಾರ್ಥಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಹಿಳೆಯೋರ್ವರು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಕೂರು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬಳ್ಕೂರು ಸಮೀಪದ ಬಿ.ಹೆಚ್. ರೋಡ್‌ ನಿವಾಸಿ ವಿನಯ್ ಭಂಡಾರಿ ಎಂಬುವರ ಪತ್ನಿ ಶ್ರುತಿ (39) ಎಂದು ಗುರುತಿಸಲಾಗಿದೆ. ಹೇರ್‌ ಸೆಲೂನ್‌ ನಡೆಸುತ್ತಿದ್ದು ವಿನಯ್‌ ಅವರ ಪತ್ನಿ ಶ್ರುತಿ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬಿಕರಿಗೆ ಆಘಾತವನ್ನುಂಟುಮಾಡಿದೆ. ಕೆಲ ವರ್ಷಗಳ ಹಿಂದೆ ಅವರು ಪ್ರೀತಿಸಿ ಮದುವೆಯಾಗಿದ್ದು, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹೊಸದಾಗಿ ಖರೀದಿ ಮಾಡಿದ್ದ ಜಾಗದ ನೊಂದಣಿಗಾಗಿ ಶೃತಿ ಹಾಗೂ ವಿನಯ್‌ ಇಬ್ಬರೂ ಕುಂದಾಪುರಕ್ಕೆ ಹೋಗಿ ಮನೆಗೆ ಮರಳಿದ್ದು, ಬಳಿಕ ವಿನಯ್‌ ಅವರು ಕೆಲಸಕ್ಕೆ ತೆರಳಿದ್ದರು. ಜಾಗದ ಮಾಲಕರಿಗೆ ಹಣ ನೀಡಲು ಶ್ರುತಿ ಅವರ ಖಾತೆಯಿಂದ ಚೆಕ್‌ ನೀಡಲಾಗಿತ್ತು. ಅವರು ಚೆಕ್‌ ವಿತ್‌ ಡ್ರಾ ಮಾಡುವ ವೇಳೆಗೆ ಸ್ವಲ್ಪ ಹಣ ಕಡಿಮೆ ಇರುವುದಾಗಿ ತಿಳಿಸಿದ್ದರು. ಅದನ್ನು ಪರೀಕ್ಷಿಸುವ ಸಲುವಾಗಿ ಶ್ರುತಿ ಅವರು ಕಂಡ್ಕೂರಿನ ಬ್ಯಾಂಕಿಗೆ ಸ್ಕೂಟಿಯಲ್ಲಿ ತೆರಳಿದ್ದರು. ಆದರೆ ಸ್ವಲ್ಪ ಹೊತ್ತಿನ ಬಳಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತಲ್ಲೂರು ಸೇತುವೆ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಬುಧವಾರ ಬೆಳಗಿನ ಜಾವ ಸಂಭವಿಸಿದೆ. ಹೊನ್ನಾವರ ತಾಲೂಕಿನ ಗೇರುಸೊಪ್ಪದ ಮೇಘನಾಥ (39) ಮೃತಪಟ್ಟ ದುರ್ದೈವಿ. ಅವರು ಕೆಲಸ ಮುಗಿಸಿ, ತ್ರಾಸಿಯಲ್ಲಿನ ತನ್ನ ಅಕ್ಕನ ಮನೆಗೆ ತೆರಳಲು ಬಸ್‌ ಸಿಗದೇ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ಅಪರಿಚಿತ ವಾಹನ ಪರಾರಿಯಾಗಿದೆ. ವ್ಯಕ್ತಿಯ ಮೈ ಕೈಗೆ, ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಸೇರಿ ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವೈದ್ಯರು ಆಸ್ಪತ್ರೆಗೆ ಬರುವಾಗಲೇ ಮೇಘನಾಥ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಶೇಖ್ ಎಮ್. ನಿಹಾನ್ (3ನೇ ತರಗತಿ) ಗ್ರೀಷ್ಮಾ (4ನೇ ತರಗತಿ) ಮತ್ತು ಸಿಂಧು ಮಧ್ಯಸ್ತ (6ನೇ ತರಗತಿ) ಮಹಾರಾಷ್ಟ್ರದ ಪುಣೆಯಲ್ಲಿ ಗುರು ಅಬಾಕಸ್ ಮತ್ತು ವೇದಿಕ್ ಮಾತೆಮಾಟಿಕ್ಸ್ ಆಯೋಜಿಸಿದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿರುತ್ತಾರೆ. ಮಾರ್ಗದರ್ಶನ ನೀಡಿದ ರಾಷ್ಟ್ರಮಟ್ಟದ ಸಂಪನ್ಮೂಲ ತರಬೇತುದಾರರು ಹಾಗೂ ಅಬಾಕಸ್ ಮತ್ತು ವೇದಿಕ್ ಮಾತೆಮಾಟಿಕ್ಸ್ ಉಪನ್ಯಾಸಕರಾದ ಗೀತಾ ಅವರು ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನಾರಾಗಿರುತ್ತಾರೆ. ಅವರಿಗೆ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಶುಭಾಶಯ ಕೋರಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ದಿ. ಕೊಲ್ಲೂರು ಮಂಜುನಾಥ ಅಡಿಗರು ಧಾರ್ಮಿಕ ವಿಚಾರವಾಗಿ ಅಪಾರ ಜ್ಞಾನ ಹೊಂದಿದ್ದು ಅವರ ಮಾರ್ಗದರ್ಶನದಿಂದ ಕೊಲ್ಲೂರು ಕ್ಷೇತ್ರ ಹಾಗೂ ಉಪ್ಪುಂದ ಕ್ಷೇತ್ರದ ಬೆಳವಣಿಗೆಯಲ್ಲೂ ಅವರ ಪಾತ್ರ ದೊಡ್ಡದಾಗಿದೆ ಎಂದು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ  ಯು. ಸತೀಶ್ ಶೆಟ್ಟಿ ಹೇಳಿದರು. ಅವರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಇತ್ತೀಚೆಗೆ ನಿಧನರಾದ ಕೊಲ್ಲೂರು ಮುಕಾಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕ ಮತ್ತು ತಂತ್ರಿ ದಿ. ಮಂಜುನಾಥ ಅಡಿಗ ಕೊಲ್ಲೂರು ಹಾಗೂ ಉಪ್ಪುಂದ ದೇವಸ್ಥಾನದ ಅರ್ಚಕ ದಿ. ರಮೇಶ್ ಉಡುಪ ಅವರ ಶೃದ್ಧಾಂಜಲಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಮೂರ್ತಿ ಶಂಕರನಾರಾಯಣ ಭಟ್ ಉಪ್ಪುಂದ ಮೃತರ ಕುರಿತು ಪ್ರಾಸ್ಥಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳಾದ ನಾರಾಯಣ ಖಾರ್ವಿ, ಲಲಿತಾ ಶೆಟ್ಟಿ, ರವೀಂದ್ರ ಪ್ರಭು, ರಾಜೇಶ್ ದೇವಾಡಿಗ ಉಪಸ್ಥಿತರಿದ್ದರು. ಮೃತರ ಆತ್ಮಕ್ಕೆ ಚಿರಶಾಂತಿಗೆ ಒಂದು ನಿಮಿಷದ ಮೌನಾಚರಣೆ ಹಾಗೂ ಭಾವ ಚಿತ್ರಕ್ಕಕ್ಕೆ ಪುರ್ಷ್ಪಾಚನೆ ಮಾಡಲಾಯಿತು. ಓಂಕಾರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಕೆ.ಯು. ಬೆಳ್ಳಿಯಪ್ಪ ಅವರು ವರ್ಗಾವಣೆಗೊಂಡಿದ್ದು, ನೂತನ ಡಿವೈಎಸ್ಪಿಯಾಗಿ ಎಚ್.ಡಿ ಕುಲಕರ್ಣಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಡಿವೈಎಸ್ಪಿ ಎಚ್.ಡಿ ಕುಲಕರ್ಣಿ ಅವರು 1998ನೇ ಬ್ಯಾಚ್ ಪೊಲೀಸ್ ಅಧಿಕಾರಿಯಾಗಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಕಳೆದ 4 ವರ್ಷಗಳ ಹಿಂದೆ ಡಿವೈಎಸ್ಪಿ ಆಗಿ ಪದೋನ್ನತಿ ಹೊಂದಿ ಬೆಂಗಳೂರು ಗ್ರಾಮಾಂತರ ಸೈಬರ್ ಕ್ರೈಮ್ ವಿಭಾಗದಲ್ಲಿ ಡಿವೈಎಸ್ಪಿ ಆಗಿದ್ದರು. ನಂತರ ಬೆಂಗಳೂರು‌ ಸಿಐಡಿಯಲ್ಲಿ ಡಿವೈಎಸ್ಪಿ ಆಗಿದ್ದರು. ಇದೀಗ ಕುಂದಾಪುರ ಪೊಲೀಸ್ ಉಪವಿಭಾಗದ ಡಿವೈಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ದೆಯಲ್ಲಿ ಆರಾಧ್ಯ ಆರ್. ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಅರಾಟೆ ರಾಘವೇಂದ್ರ ಪೂಜಾರಿ ಮತ್ತು ಶಿಕ್ಷಕಿ ಯಶೋದ ದಂಪತಿ ಪುತ್ರಿ. ಈಕೆ ಪ್ರಸನ್ನ ಕೆ., ಮಹಾಲಕ್ಷ್ಮೀ ಮತ್ತು ಸುನೀತ ಅವರಿಂದ ತರಬೇತಿ ಪಡೆದಿರುತ್ತಾಳೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಪಿ.ಯು.ಸಿ/ ಇಂಟರ್ ಜೊತೆಗೆ ಡಿಪ್ಲೋಮಾ ಇನ್ ಜನರಲ್ ನರ್ಸಿಂಗ್ ಮತ್ತು ಮಿಡ್ ವೈಫರಿ (3 ವರ್ಷಗಳು) ಮಾನ್ಯತೆ ಪಡೆದ ಮಂಡಳಿಯಿAದ ಪೂರ್ಣ ಸಮಯದ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ನಾಲ್ಕು ವರ್ಷಗಳ ಅವಧಿಗೆ ಅಧಿಕಾರವಧಿ ಆಧಾರದ ಮೇಲೆ ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜ.22 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-22323005 (ಹೆಚ್.ಏ.ಎಲ್ ಬೆಂಗಳೂರು) ಅಥವಾ ಉದ್ಯೋಗ ವಿನಿಮಯ ಕಛೇರಿ ದೂ.ಸಂಖ್ಯೆ: 0820-2574869 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More