ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶೆಪ್ಟಾಕ್ ಫುಡ್ ಮತ್ತು ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈ. ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಗೋವಿಂದ ಬಾಬು ಪೂಜಾರಿ ಹಾಗೂ ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಆರ್ಥೋಪೆಡಿಕ್ ಶಸ್ತ್ರ ಚಿಕಿತ್ಸಕರಾದ ಡಾ. ದಿನೇಶ್ ಕುಮಾರ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ಮಾಡಿ, ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಡಾ. ಗೋವಿಂದ ಬಾಬು ಪೂಜಾರಿ ಸಭೆಯನ್ನುದ್ದೇಶಿಸಿ ಮಾತನಾಡಿ, ಯಾವುದೇ ಕಾರ್ಯ ಸುಗಮವಾಗಿ ಸಾಗಬೇಕಾದರೆ ವ್ಯವಸ್ಥಿತ ಯೋಜನೆ ಅಗತ್ಯ. ಹಾಗೆಯೇ ದೇಶದ ಕಾರ್ಯ ಚಟುವಟಿಕೆಗಳು ವ್ಯವಸ್ಥಿತವಾಗಿ ಸಾಗುವಲ್ಲಿ ಸಂವಿಧಾನ ಅತ್ಯಗತ್ಯ. ವ್ಯವಸ್ಥಿತ ಸಂವಿಧಾನವನ್ನು ರೂಪಿಸುವಲ್ಲಿ ಈ ದೇಶದ ಹಲವಾರು ಮಹನೀಯರ ಕೊಡುಗೆಯಿದೆ. ಅವರೆಲ್ಲ ಕೊಡುಗೆಗಳನ್ನು ಸ್ಮರಿಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜೀವನದಲ್ಲಿ ಯಶಸ್ಸನ್ನು ಗಳಿಸುವುದರೊಂದಿಗೆ ದೇಶದ ಪ್ರಗತಿಯತ್ತಲೂ ನಾವೆಲ್ಲ ಚಿತ್ತ ಹರಿಸಬೇಕು. ದೇಶದಲ್ಲಿನ ಜನರ ಕಷ್ಟಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳು ಉತ್ತಮ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲಾಡಳಿತ, ಜಿ.ಪಂ. ಹಾಗೂ ತೋಟಗಾರಿಕಾ ಇಲಾಖೆ ವತಿಯಿಂದ ಮೂರು ದಿನಗಳ ಕಾಲ ದೊಡ್ಡನಗುಡ್ಡೆಯ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ನಡೆಯುವ ಫಲ ಪುಷ್ಪ ಪ್ರದರ್ಶನವನ್ನು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ.ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಮಾತನಾಡಿ, ರಾಜ್ಯ ಸರಕಾರದ ಪಂಚ ಗ್ಯಾರಂಟಿ ಪರಿಕಲ್ಪನೆಯನ್ನು ಉಡುಪಿಯ ಫಲ ಪುಷ್ಪ ಪ್ರದರ್ಶನದಲ್ಲಿ ಹೂವುಗಳ ಕಲಾಕೃತಿಯನ್ನು ಕಲಾವಿದರು ಸಾಕಾರಗೊಳಿಸಿದ್ದು ಅನಾವರಣ ಮಾಡಲಾಗಿದೆ. ಅವು ಆಕರ್ಷಣೆ ಕೇಂದ್ರಬಿಂದು ಆಗಿದೆ ಸಾರ್ವಜನಿಕರಿಗೆ ಮುಕ್ತ ವೀಕ್ಷಣೆಗೆ ಅವಕಾಶ ಇದೆ ಎಂದರು. ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಹೂವುಗಳ ಕಲಾಕೃತಿಯಿಂದ ಅರಳಿ ಜನರ ಗಮನ ಸೆಳೆಯುತ್ತಿವೆ, ಸೆಲ್ಫಿ ಆಕರ್ಷಣೆ ಕೇಂದ್ರ ಬಿಂದುಗಳಾಗಿವೆ.ಹಳದಿ, ಕೆಂಪು ಗುಲಾಬಿಯಲ್ಲಿ ಮೂಡಿದ ಕರ್ನಾಟಕ ನಕಾಶೆ, ಹೂವಿನಿಂದ ಮಾಡಿದ ಮಾವಿನ ಹಣ್ಣಿನ ಕಲಾಕೃತಿಯ ಸೆಲ್ಫಿ ವಲಯ, ಸ್ಥಳೀಯವಾಗಿ ಬೆಳೆದ ತರಕಾರಿ, ಹಣ್ಣುಹಂಪಲು, 1.27ಲಕ್ಷದಷ್ಟು ಬಣ್ಣಬಣ್ಣದ ಹೂವಿನ ಗಿಡಗಳು ಗಮನ ಸೆಳೆದವು. ಅನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದೇಶದ ಅರ್ಹ ಪ್ರತಿಯೊಬ್ಬ ನಾಗರಿಕರು ಮತದಾನದ ಹಕ್ಕನ್ನು ಹೊಂದಿ ಚುನಾವಣಾ ಪ್ರಕ್ರೀಯೆಯಲ್ಲಿ ತಪ್ಪದೇ ಸಕ್ರೀಯವಾಗಿ ಭಾಗವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಿರಣ್ ಎಸ್. ಗಂಗಣ್ಣನವರ್ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಪರಿಕಲ್ಪನೆಯು ನಮ್ಮ ಪ್ರಾಚೀನ ಸಂಸ್ಕೃತಿಯಲ್ಲಿ ರಾಜರುಗಳು ತಮ್ಮ ಆಳ್ವಿಕೆಯಲ್ಲಿ ನಡೆಸುತ್ತಿದ್ದ ಸಭೆ, ಓಲಗ, ಒಡ್ಡಲೊಗಳಲ್ಲಿ ಸಮಾಜ ಕಟ್ಟುವಂತಹ ಜನ ಸಮಾನ್ಯರ ಅನಿಸಿಕೆ ಅಭಿಪ್ರಾಯಗಳನ್ನು ಹೇಳಲು ಅವಕಾಶವಿತ್ತು ಇದು ಪ್ರಜಾಪ್ರಭುತ್ವದ ಒಂದು ಅಂಗ, ಪ್ರಸ್ತತ ಪ್ರಜಾಪ್ರಭುತ್ವದಲ್ಲಿ ಸಹಾ ವಿಧಾನಪರಿಷತ್ತು ವಿಧಾನಸಭೆ ಸಂಸತ್ತು ಮೇಲ್ಮನೆ ಕೆಳಮನೆ ಅಂತಹ ಸಂಸ್ಥೆಗಳು ನಿಯಮಾನುಸಾರ ತಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸಹ ಸಂಸ್ಥಾಪಕರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ” ಸಂವಿಧಾನವು ಈ ದೇಶದ ಎಲ್ಲ ಜನರಿಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಸಮಾನತೆಯ ಹಕ್ಕನ್ನು ನೀಡಿ ಸುಭದ್ರ ಜೀವನ ನಡೆಸುವಲ್ಲಿ ಸಹಕಾರಿಯಾಗಿದೆ. ದೇಶ ಸ್ವಾತಂತ್ರ್ಯಗೊಳ್ಳುವಲ್ಲಿ ಅನೇಕ ಭಾರತೀಯರ ತ್ಯಾಗ ಬಲಿದಾನವಿದೆ ಇವರ ಹೋರಾಟದ ಫಲವೇ ನಾವೆಲ್ಲರೂ ಇಂದು ನೆಮ್ಮದಿಯಿಂದ ಜೀವಿಸುವಂತೆ ಮಾಡಿದೆ. ದೇಶ ನನಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾನು ಏನು ಕೊಟ್ಟಿದೆ ಎನ್ನುವುದು ನಾವೆಲ್ಲರೂ ಆತ್ಮಾವಲೋಕನವನ್ನು ಮಾಡಿಕೊಳ್ಳಬೇಕು. ಸಂವಿಧಾನವನ್ನು ರಚಿಸುವಲ್ಲಿ ಶ್ರಮಿಸಿದ ಮಹನೀಯರನ್ನು ನಾವೆಲ್ಲರೂ ಗೌರವಿಸಬೇಕು. ” ಎಂದು ವಿದ್ಯಾರ್ಥಿಗಳನ್ನು ಕುರಿತು ಶುಭನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು , ವಿದ್ಯಾರ್ಥಿಗಳು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರನ್ನು ಅತಿಥಿಗಳಂತೆ ಕಾಣುವುದರೊಂದಿಗೆ ಅವರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಇವರ ವತಿಯಿಂದ ಕೃಷಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾದ ಕೃಷಿ ಪ್ರವಾಸೋದ್ಯಮದ ಕುರಿತು ಕಾರ್ಯಾಗಾರ ವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಗೆ ಕಳೆದ ಸಾಲಿನಲ್ಲಿ 4.5 ಕೋಟಿಗೆ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ವರ್ಷದಿಂದ ವರ್ಷಕ್ಕೆ ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಪ್ರವಾಸಿಗರ ರಕ್ಷಣೆ ಹಾಗೂ ಅನುಕೂಲಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಶೇಕಡ 70ಕ್ಕಿಂತ ಹೆಚ್ಚು ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ. ಕೃಷಿ ಕ್ಷೇತ್ರವನ್ನು ಪ್ರವಾಸೊದ್ಯಮದ ಭಾಗವಾಗಿರಬೇಕು ಎಂಬ ಮುಖ್ಯ ಉದ್ದೇಶದಿಂದ ಅದನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಶಾಲೆಯ ಉಳಿವಿಗೆ ಡಾ. ಗೋವಿಂದ ಬಾಬು ಪೂಜಾರಿ ಅವರು ನೀಡಿರುವ ಕೊಡುಗೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಸರಕಾರಿ ಶಾಲೆಗಳ ಪ್ರಾಮುಖ್ಯತೆ ಹೆಚ್ಚಿದೆ ಇದಕ್ಕಾಗಿ ನನ್ನ ವತಿಯಿಂದ ಸಹಕಾರ ನೀಡುತ್ತಿದ್ದು ನಮ್ಮೂರ ಶಾಲೆಯ ಉಳುವಿಗೆ ಸಹಕಾರ ನೀಡುವುದು ನಮ್ಮೆಲ್ಲರ ಜವಬ್ದಾರಿ ಎಂದು ಹಿರಿಯ ಉದ್ಯಮಿ ನಾಗರಿಕರಾದ ನಾಡೋಜ ಷಡಕ್ಷರಿ ಅವರು ಹೇಳಿದರು. ಅವರು ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡಾ. ಗೋವಿಂದ ಬಾಬು ಪೂಜಾರಿ ಅವರು ಆಡಳಿತ ಕಚೇರಿಗೆ ಕೊಡುಗೆಯಾಗಿ ಸುಮಾರು ರೂ. 3ಲಕ್ಷ ವೆಚ್ಚದ ವಿವಿಧ ಸವಲತ್ತುಗಳ ಉದ್ಘಾಟಿಸಿ ಮಾತನಾಡಿದರು. ಬಳಿಕ ಮಾತನಾಡಿ ಡಾ. ಗೋವಿಂದ ಬಾಬು ಪೂಜಾರಿ ಮಾತನಾಡಿ, ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದತ್ತು ಸ್ವೀಕಾರ ಮಾಡಿದ್ದು ಯಾವುದೇ ಖಾಸಗಿ ಶಾಲೆಯ ವ್ಯವಸ್ಥೆಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಹಮ್ಮಿಕೊಂಡಿದ್ದು ಒಂದೊಂದಾಗಿ ಪೂರ್ಣಗೊಳಿಸಲಾಗುತ್ತಿದೆ ಮಾದರಿ ಶಾಲೆಯನ್ನಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಶಾಲೆಗಳ ಉಳಿವಿನಲ್ಲಿ ಶಿಕ್ಷಕರು, ಎಸ್.ಡಿ.ಎಂ.ಸಿ ಹಾಗೂ ಹಳೆವಿದ್ಯಾರ್ಥಿಗಳ ಪಾತ್ರ ಮಹತ್ವದ್ದು. ಇಲ್ಲಿ ಕಲಿತ ವಿದ್ಯಾರ್ಥಿಗಳು ಯಾವುದೇ ಸ್ಥಾನದಲ್ಲಿದ್ದರೂ ಅಭಿಮಾನದಿಂದ ಶಾಲೆಯತ್ತ ಮತ್ತೆ ಹಿಂದಿರುಗಿ ನೋಡಿದರೆ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಬೇಕಿಲ್ಲ. ಅಂತಹ ವಾತಾವರಣವನ್ನು ರೂಪಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಹೇಳಿದರು. ಅವರು ಇಲ್ಲಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶನಿವಾರ ಸ್ವಯಂಸ್ಪೂರ್ತಿ ಫೌಂಡೇಶನ್ ರಿ. ಬೆಂಗಳೂರು ವತಿಯಿಂದ ಕೊಡುಗೆಯಾಗಿ ನೀಡಿದ ಟೇಬಲ್ ಕುರ್ಚಿ ಸಹಿತ ನಾಲ್ಕು ಕಂಪ್ಯೂಟರ್ ಸೆಟ್, ಬುಕ್ ರ್ಯಾಕ್ ಹಾಗೂ ಆಟದ ಸಾಮಾಗ್ರಿಗಳನ್ನು ಒಳಗೊಂಡ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಲೋಪಾರ್ಪಣೆಗೊಳಿಸಿ ಮಾತನಾಡಿ, ಶಾಲೆ ಹಾಗೂ ದೇವಸ್ಥಾನದ ಆವರಣದಲ್ಲಿ ಅಭಿಮಾನ ಹಾಗೂ ಭಕ್ತಿ ಮಾತ್ರವೇ ಪ್ರಧಾನವಾಗಿರಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಆಲೋಚನಾ ಕ್ರಮವನ್ನು ರೂಪಿಸುವ ಶಕ್ತಿ ಸರಕಾರಿ ಶಾಲೆಗಳಲ್ಲಿದೆ ಎಂದರು. ಸ್ವಯಂಸ್ಪೂರ್ತಿ ಫೌಂಡೇಶನ್ ಸಂಸ್ಥಾಪಕ ಸಿ.ಎಸ್. ನಾಗರಾಜ ಶೆಟ್ಟಿ ಜಡ್ಕಲ್ ಅವರು ಮಾತನಾಡಿ, ಸಂಸ್ಥೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆಯಾದ ಸುರಭಿ ರಿ. ಬೈಂದೂರು ಇದರ ಬೆಳ್ಳಿಹಬ್ಬದ ಸಂಭ್ರಮಾಚರಣೆ – ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 29 ಜನವರಿಯಿಂದ ಆರಂಭಗೊಳ್ಳಲಿದ್ದು, ಫೆಬ್ರವರಿ 02ರ ತನಕ 5 ದಿನಗಳ ಕಾಲ ಬೈಂದೂರಿನ ಶಾರದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ 06:30ರಿಂದ ಅದ್ದೂರಿಯಾಗಿ ನಡೆಯಲಿದೆ. ಸುರಭಿ ಜೈಸಿರಿಗೆ ಚಾಲನೆ:ಜನವರಿ 29ರ ಬುಧವಾರ ಸುರಭಿ ಜೈಸಿರಿಗೆ ಚಾಲನೆ ದೊರೆಯಲಿದ್ದು. ಸಚಿವರಾದ ಮಂಕಾಳ ವೈದ್ಯ ಅವರು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ. ಎಂ. ಮೋಹನ್ ಆಳ್ವ ಅವರು ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಶುಭಶಂಸನೆಗೈಲಿದ್ದಾರೆ. ಈ ವೇಳೆ ವಿವಿಧ ಕ್ಷೇತ್ರದ ಗಣ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಅಂದು ಸುರಭಿಯ ಹಿರಿಯ ಹಿನ್ನೆಲೆ ಕಲಾವಿದ ಚಂದ್ರ ಬಂಕೇಶ್ವರ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಗುತ್ತದೆ. ಬಳಿಕ ಸುರಭಿ ನೃತ್ಯ ಕಲಾವಿದರಿಂದ ನೃತ್ಯ ವೈವಿಧ್ಯ ಪ್ರದರ್ಶನ ಹಾಗೂ ಚಿತ್ರಕಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅತ್ಯಂತ ಹಿಂದುಳಿದ ಪ್ರದೇಶವಾದ ಸೌಪರ್ಣಿಕಾ ನದಿಯ ತಟದ ಬಂಟ್ವಾಡಿಯಲ್ಲಿ ಪ್ರಾರಂಭಗೊಂಡ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು ಕಳೆದ 75 ವರ್ಷಗಳಲ್ಲಿ ಅನೇಕ ಏಳುಬೀಳುಗಳನ್ನು ಕಂಡಿದ್ದರೂ ಬಹಳಷ್ಟು ಅಭಿವೃದ್ಧಿ ಹೊಂದಿದೆ. ಸರಕಾರದಿಂದ ಬರುತ್ತಿರುವ ಅನುದಾನ ಹಾಗೂ ಶಿಕ್ಷಕರ ನೇಮಕಾತಿ ಸ್ಥಗಿತಗೊಂಡಿರುವುದರಿಂದ ಶಾಲೆಯ ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಗೌರವ ಶಿಕ್ಷಕಿಯರನ್ನು ನೇಮಕ ಮಾಡಿಕೊಂಡು ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವ ಪ್ರಯತ್ನ ನಡೆದಿದೆ ಎಂದು ಶಾಲೆಯ ಸಂಚಾಲಕ, ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಬಿ. ಅರುಣ್ ಕುಮಾರ್ ಶೆಟ್ಟಿ ಹೇಳಿದರು. ಸೇನಾಪುರ ಗ್ರಾಮದ ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಶುಕ್ರವಾರ ಮಾತನಾಡಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಶ್ರೀಕಾಂತ ಶ್ಯಾನುಭಾಗ್, ಸಿಆರ್ಪಿ ಸತೀಶ್ ಶೆಟ್ಟಿ, ಉದ್ಯಮಿಗಳಾದ ಅಜಿತ್ ಪ್ರಸಾದ್ ಶೆಟ್ಟಿ ಬೆಂಗಳೂರು, ಚಿತ್ತರಂಜನ್ ಹೆಗ್ಡೆ ಹರ್ಕೂರು, ಶಿಕ್ಷಕ-ರಕ್ಷಕ ಸಮಿತಿ ಅಧ್ಯಕ್ಷೆ ಜಯಲಕ್ಷ್ಮೀ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿಯ ಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಬೈರವ ದೇವಸ್ಥಾನದಲ್ಲಿ ದ್ವೀತಿಯ ವರ್ಷದ ವರ್ಧಂತ್ಯುತ್ಸವ, ಶಿರಸಿ ಶ್ರೀ ಮಾರಿಕಾಂಬ ದೇವಿಯ ಪುನರ್ ಪ್ರತಿಷ್ಠೆ- ಕಲಶೋತ್ಸವ, ಶ್ರೀ ಕಾಲಬೈರವ ಸೇವಾ ಸಂಘದ 11ನೇ ವಾರ್ಷಿಕೋತ್ಸವ, ಶ್ರೀ ಶಿವಗೋರಕ್ಷನಾಥ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭವು ಜ.26 ರಿಂದ ಜ.27 ರ ತನಕ ನಡೆಯಲಿದೆ. ಜ. 26ರ ಬೆಳಿಗ್ಗೆ 9.30ರಿಂದ ಚಿತ್ರಕೂಟ ಸಹಿತ ಶ್ರೀ ನಾಗದೇವರಿಗೆ ಪಂಚವಿಂಶತಿ ಕಲಶ, ಅಧಿವಾಸ ಹೋಮ, ಕಲಶಾಭಿಷೇಕ, ಮಹಾ ಪೂಜೆ, ಪ್ರಸಾದ ವಿತರಣೆ ಹಾಗೂ ಸಂಜೆ 5.30ರಿಂದ ಶ್ರೀ ಮಾರಿಕಾಂಬ ದೇವಿಯ ಬಿಂಬ ಪುನರ್ ಪ್ರತಿಷ್ಠೆ, ಬಿಂಬಪ್ರತಿಷ್ಠಾಪನಾಧಿಹೋಮಗಳು, ಚತುಃ ವಿಂಶತಿ ಕಲಶ ಸ್ಥಾಪನಾದಿ ಹೋಮಗಳು, ಕಲಶಾಭೀಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಜ.27ರ ಬೆಳಿಗ್ಗೆ 9.30ರಿಂದ ಶ್ರೀ ಕಾಲಭೈರವ ದೇವರಿಗೆ ದ್ವೀತಿಯ ವರ್ಧಂತ್ಯುತ್ಸವ ಪ್ರಯುಕ್ತ ಅಷ್ಠೋತ್ತರ ಕಲಶ, ತತ್ವ ಹೋಮ, ಅಧಿವಾಸ ಹೋಮ, ವಿಶೇಷ ಪಂಚಾಮೃಭಿಷೇಕ, ಕಲಾಶಭಿಷೇಕ, ಮಹಾಪೂಜೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ…
