ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ ಕುಂಭಾಶಿಯ ಶ್ರೀಧರ್ ಆಚಾರ್ ಮತ್ತು ಹೇಮಲತಾ ಅವರ ಪುತ್ರನಾದ ಸಚಿನ್ ಆಚಾರ್, ದ್ವಿತೀಯ ಬಿ.ಸಿ.ಎ. (ಬಿ) ಅವರು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಅವರಿಗೆಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ದೀಪಾ ಪೂಜಾರಿ ಅವರು ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿದ್ಯಾರ್ಥಿಗಳು ಪಠ್ಯದಷ್ಟೇ ಆಸಕ್ತಿ ಪಠ್ಯೇತರ ಚಟುವಟಿಕೆಯಲ್ಲಿ ವಹಿಸಬೇಕು. ಅದರಲ್ಲೂ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮಾತ್ರವಲ್ಲದೆ ಅವರ ಮಾನಸಿಕ ವಿಕಸನಕ್ಕೂ ಪೂರಕವಾಗಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಸ್ಕೌಟ್ಸ್ ಮತ್ತು ಗೈಡ್‌ನ ದ.ಕ.ಜಿಲ್ಲಾ ಮುಖ್ಯ ಆಯುಕ್ತ ಡಾ. ಎಂ. ಮೋಹನ್ ಆಳ್ವ ನುಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳಿಗಾಗಿ ಸ್ವರಾಜ್ ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡೋತ್ಸವ-2025ನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸೌಹಾರ್ದ, ಸಾಮರಸ್ಯದ ಬದುಕನ್ನು ಕಲಿಸುವುದರ ಜೊತೆಗೆ ಹೋರಾಟ ಮನೋಭಾವವನ್ನು ಮೈಗೂಡಿಸಿಕೊಳ್ಳಲು ಸಹಕರಿಸುತ್ತದೆ. ಇದೇ ಮೊದಲ ಬಾರಿಗೆ ಇಂತಹ ಕ್ರೀಡಾ ಕೂಟ ಆಯೋಜನೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಏರ್ಪಡಿಸುವ ಉದ್ದೇಶವಿದೆ ಎಂದು ಆಶಯ ವ್ಯಕ್ತಪಡಿಸಿದರು. ಜಿಲ್ಲಾ ಸ್ಕೌಟ್ಸ್ ಆಯುಕ್ತ ಬಿ ಮೊಹಮ್ಮದ್ ತುಂಬೆ, ಜಿಲ್ಲಾ ಕಾರ್ಯದರ್ಶಿ ಪ್ರತಿಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ನೋಂದಣಿ, ಉತ್ಪನ್ನದ ಗುಣಮಟ್ಟದ ಮಾರುಕಟ್ಟೆ ಕಲ್ಪಿಸುವ ಕಾರ್ಯಕ್ರಮಗಳಾದ ವೆಬ್‌ಸೈಟ್ ಜಾಹೀರಾತು, ಸಾಮಾಜಿಕ ಜಾಲತಾಣದ ಬಳಕೆ, ಕೃಷಿ ಆಪ್ಸ್ ಬಳಕೆ, ರಫ್ತಿಗೆ ಸಹಾಯಧನ, ವ್ಯಾಪಾರ ಮಳಿಗೆಗಳಲ್ಲಿ ಬಾಡಿಗೆ ಆಧಾರದಲ್ಲಿ ಶೆಲ್ಫ್ ಪಡೆಯುವುದು ಮತ್ತು ಪ್ಯಾಕೇಜಿಂಗ್ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ಆಸಕ್ತ ರೈತ ಉತ್ಪಾದಕ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಗರಿಷ್ಠ 5 ಲಕ್ಷ ರೂ. ವರೆಗೆ ಸಹಾಯಧನ ಪಡೆಯಲು ಅವಕಾಶವಿದೆ. ಈಗಾಗಲೇ ಸ್ಥಾಪಿಸಿ ಚಾಲನೆಯಲ್ಲಿರುವ ಮೌಲ್ಯವರ್ಧನೆ ಸರಪಳಿಯಲ್ಲಿನ ಚಟುವಟಿಕೆಗಳ ಉನ್ನತೀಕರಣ/ ಬಲವರ್ಧನೆ ಚಟುವಟಿಕೆಗಳಿಗೆ ಯೋಜನಾ ವರದಿಯ ಶೇ. 50 ರ ಸಹಾಯಧನದಲ್ಲಿ ಬ್ಯಾಂಕ್ ಸಾಲದ ಮುಖಾಂತರ ಗರಿಷ್ಠ 10 ಲಕ್ಷ ರೂ. ಮೀರದಂತೆ ಅನುಷ್ಠಾನಗೊಳಿಸಲು ಆಸಕ್ತ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು, ರೈತ ಗುಂಪುಗಳು ಮತ್ತು ರೈತ ಸಾವಯವ ಒಕ್ಕೂಟಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮದಡಿ ರೈತ ಉತ್ಪಾದಕ ಸಂಸ್ಥೆಗಳ 2…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕ್ರಿಯೇಟಿವ್ ಪಪೂ ಕಾಲೇಜು, ಕಾರ್ಕಳ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ, ಸಿದ್ಧಾಪುರ, ಶೈಕ್ಷಣಿಕ ಜಿಲ್ಲೆಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪ್ರೇರಣಾ ಶಿಬಿರ – 2025ರ ಉದ್ಘಾಟನೆಗೊಳಿಸಲಾಯಿತು. ಶಿರಸಿಯ ಸಿದ್ಧಾಪುರ ಕಾನಸೂರಿನಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಶಿಬಿರಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಉದ್ಘಾಟಕರಾಗಿ ಆಗಮಿಸಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್. ಮಾತನಾಡಿ, ಹತ್ತನೆಯ ತರಗತಿಯ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಏನಾಗಬೇಕೆಂದು ಕನಸು ಕಾಣುತ್ತಾರೋ ಅದನ್ನು ನನಸು ಮಾಡಲು ಮುಂದಿನ ಪಿ.ಯು.ಸಿ ಶಿಕ್ಷಣ ಅತ್ಯಂತ ಪ್ರಮುಖವಾದದ್ದು. ದೂರದರ್ಶಿತ್ವದೊಂದಿಗೆ ಮುಂದಿನ ಹೆಜ್ಜೆ ಇರಿಸಿ, ಉತ್ತಮ ಫಲಿತಾಂಶವೂ ಇಂತಹ ಶಿಬಿರಗಳಿಂದ ದೊರಕುತ್ತದೆ. ಶಿರಸಿ – ಸಿದ್ಧಾಪುರದ ಭಾಗದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಎಚ್. ನಾಯ್ಕ ಅವರು ಮುಂದಿನ ಶೈಕ್ಷಣಿಕ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಪ್ರಥಮ ಸ್ಥಾನಿಯಾಗಿ ಮೂಡಿಬರುವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಪುವಿನಲ್ಲಿ ನಡೆದ ಶ್ರೀ ನಾರಾಯಣಗುರು ಟ್ರೋಫಿ, ಅಂತರ್ ಜಿಲ್ಲಾ ಮಟ್ಟದ 7ರ ವಯೋಮಿತಿ ವಿಭಾಗದ ಚೆಸ್ ಪಂದ್ಯಾಟದಲ್ಲಿ ಶುಭದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ (ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್) ಪ್ರಮುಖ್ ಬಿ. ಪೂಜಾರಿ (1ನೇ ತರಗತಿ) 5 ಪಂದ್ಯಗಳಲ್ಲಿ ಐದನ್ನು ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇದರ ವತಿಯಿಂದ 2025ರ ಕ್ಯಾಲೆಂಡರ್ ಅನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯಕ್ ಹಾಗೂ ಶಿಕ್ಷಕರ ಸಂಘದ ಅಧ್ಯಕ್ಷರು, ಬೈಂದೂರು ತಾಲೂಕು ನೌಕರ ಸಂಘದ ಅಧ್ಯಕ್ಷರಾದ ಶೇಕರ್ ಜಂಟಿಯಾಗಿ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ನಿವೃತ್ತ ಶಿಕ್ಷಕರಾದ ಆನಂದ ಗಾಣಿಗ, ಶಿಕ್ಷಣ ಸಂಯೋಜಕರಾದ ಚಂದ್ರ ದೇವಡಿಗ, ಸತ್ಯನ ಕೊಡೇರಿ, ಯೋಗೀಶ್, ಶಾಲಾ ಮುಖ್ಯೋಪಾಧ್ಯಾಯರಾದ ಜನಾರ್ಧನ್ ದೇವಾಡಿಗ, ಬಿ. ಆರ್. ಪಿ. ಮಂಜುನಾಥ ದೇವಾಡಿಗ, ಸಂಘದ ಖಜಾಂಚಿ ಅಚ್ಚುತ ಬಿಲ್ಲವ, ಗಣೇಶ್ ಪೂಜಾರಿ, ಸಿಆರ್‌ಪಿ ಲಕ್ಷ್ಮಿ, ಬಿ. ರಾಮನಾಥ ಮೇಸ್ತ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಗಣಪತಿ ಹೋಬಳಿದಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿಐಆರ್‌ಟಿ ನಾಗರತ್ನ ಸರ್ವರನ್ನು ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಗಣೇಶ್ ಪೂಜಾರಿ ಧನ್ಯವಾದ ಸಲ್ಲಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಾಮಕೃಷ್ಣ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರದ ಕಡೆಗೆ ಸಾಗುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇರ್ವರಿಗೆ ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಕಾರಿನಲ್ಲಿದ್ದ ಇರ್ವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿದರು. ಗಾಯಳುಗಳನ್ನು ಸ್ಥಳೀಯರ ಸಹಾಯದಿಂದ ತಕ್ಷಣ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೈಂದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯೂತ್ ಜಿ.ಎಸ್.ಬಿ., ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಷನ್ ಅವರು ಜ. 4 ಹಾಗೂ 5 ರಂದು ಏರ್ಪಡಿಸಿದ ‘ಆಲ್ ಇಂಡಿಯಾ ಜಿ.ಎಸ್.ಬಿ. ಬ್ಯಾಡ್‌ಮಿಂಟನ್ ಲೀಗ್’ ಟೂರ್ನಮೆಂಟ್-2024ರಲ್ಲಿ ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ 225 ಆಟಗಾರರು ಭಾಗವಹಿಸಿದ್ದರು. ಕುಂದಾಪುರದ ಆರ್ಡಿ ಸಂತೋಷ ಕಾಮತ್ ಮಾಲಕತ್ವದ ‘ರೋಶನ್ ಚ್ಯಾಲೆಂಜರ್ಸ್ ಕುಂದಾಪುರ ಜಯಗಳಿಸಿ ಚಾಂಪಿಯನ್ ಆಗಿ ಟ್ರೋಫಿ ಪಡೆದುಕೊಂಡಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಮತ್ತು ಡಾನ್ ಬಾಸ್ಕೊ ಪದವಿ ಪೂರ್ವ ಕಾಲೇಜು ಚಿತ್ತಾಪೂರ, ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ಜ.5 ರಿಂದ ಜ.6 ರವರೆಗೆ ಯಾದಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿಕೋಯಿಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ವೈಷ್ಣವಿ, ರಿಷಾ ಮತ್ತು ಅಂಶು ಉಡುಪಿ ಜಿಲ್ಲಾ ತಂಡದಿಂದ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಉಡುಪಿ ಜಿಲ್ಲಾ ಬಾಲಕರ ತಂಡದಲ್ಲಿ ವಿದ್ಯಾರ್ಥಿಗಳಾದ ದೃಶ್ಯ, ಸಾಕೇತ್, ಅಕ್ಷಯ್ ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗಂಗೊಳ್ಳಿ ಗ್ರಾಮದ ನಿವಾಸಿ ನಾರಾಯಣ ಮೊಗವೀರ (59) ಅವರು ಸರ್ವಮಂಗಲೇ ಮೀನುಗಾರಿಕಾ ಪರ್ಷಿನ್ ಬೋಟ್‌ನಲ್ಲಿ ಜ.2ರಂದು ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿ ಅವರ ಸುಳಿವು ಇನ್ನೂ ಕೂಡ ಪತ್ತೆಯಾಗಿಲ್ಲ. ಸಮುದ್ರದಲ್ಲಿ ನಾಪತ್ತೆಯಾಗಿರುವ ಸಹೋದರನನ್ನು ಹುಡುಕಲು ಜಿಲ್ಲಾಡಳಿತ ಸಹಕಾರ ನೀಡಬೇಕೆಂದು ವಿಶ್ವನಾಥ ಗಂಗೊಳ್ಳಿ ಮನವಿ ಮಾಡಿದ್ದಾರೆ. ನಾರಾಯಣ ಮೊಗವೀರ ಅವರು ತಮ್ಮ ಹೊಟ್ಟೆ ಪಾಡಿಗೆಂದು ಜ. 2 ರಂದು ಪರ್ಷಿನ್ ಬೋಟ್ ಮೂಲಕ ಮೀನುಗಾರಿಕೆಗೆ ತೆರಳಿದ್ದರು. ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದಾರೆ. ಜ.7ರ ತನಕವೂ ಅವರ ಸುಳಿವು ಸಿಗದೆ ಇರುವುದರಿಂದ ಕುಟುಂಬ ಕಂಗಾಲಾಗಿದೆ. ಮುಳುಗು ತಜ್ಞ ದಿನೇಶ್ ಖಾರ್ವಿ ತಂಡ ಮತ್ತು ಗಂಗೊಳ್ಳಿ ಕರಾವಳಿ ಕಾವಲು ಪಡೆ ಪೊಲೀಸರ ಸಹಕಾರದಿಂದ ಹಾಗೂ ಖಾಸಗಿ ಬೋಟ್ ಸಹಾಯದಿಂದ ಕಳೆದ ಆರು ದಿನಗಳಿಂದ ಸಮುದ್ರದಲ್ಲಿ ಹುಡುಕಾಟ ಮಾಡಿದ್ದರೂ ಸುಳಿವು ಸಿಕ್ಕಿಲ್ಲ, ಖಾಸಗಿ ಬೋಟ್ ಗೆ ಡಿಸೆಲ್…
