ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕ್ಯಾಶ್ಯೂ ಫ್ಟಾಕ್ಟರಿಯಿಂದ ರೂ.1.21 ಕೋಟಿ ಮೌಲ್ಯದ ಗೋಡಂಬಿಯನ್ನು ಟ್ರಕ್ ಮೂಲಕ ಕೊಂಡೊಯ್ದಿದ್ದ ಚಾಲಕ ಟ್ರಕ್ ಸಹಿತ ಪರಾರಿಯಾಗಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಹೊರರಾಜ್ಯದಲ್ಲಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ರಹ್ಮಾವರ ತಾಲೂಕಿನ 33ನೇ ಶೀರೂರು ಗ್ರಾಮದ ಮೂಡುಗುಡ ಎಂಬಲ್ಲಿರುವ ಶ್ರೀ ಕೃಷ್ಣ ಕ್ಯಾಶ್ ಪ್ಯಾಕ್ಟರಿಯಿಂದ ಟ್ರಕ್ನಲ್ಲಿ ಗೋಡಂಬಿಯನ್ನು ಸೂರತ್ ಹಾಗೂ ಅಹಮ್ಮದಬಾದಿಗೆ ಕ್ರಮವಾಗಿ 21.24 ಹಾಗೂ 3.450 ಟನ್ ಗೋಂಡಬಿಯನ್ನು ಲೋಡ್ ಮಾಡಿ ಇನ್ವೈಸ್ ಮತ್ತು ಇ-ವೇ ಬಿಲ್ ತಯಾರಿಸಿ ಲಾರಿಯ ಚಾಲಕ ರಮ್ಝಾನ್ ಸೌದಾ ಮತ್ತು ಸಹ ಚಾಲಕ ಮಹೇಂದ್ರಪುರಿ ಲಾಲ್ಪುರಿ ಗುಸ್ಸಾಯಿ ಜೊತೆಯಲ್ಲಿ ಲೋಡ್ ಮಾಡಿಸಿಕೊಂಡು ತೆರಳಿದವರು ಲಾರಿಯಲ್ಲಿದ್ದ 1,21,76,598 ರೂ ಮೌಲ್ಯದ 24.69 ಮೆಟ್ರಿಕ್ ಟನ್ ಗೋಡಂಬಿಯನ್ನು ತಲುಪಿಸಬೇಕಾಗಿದ್ದವರಿಗೆ ತಲುಪಿಸದೇ ಮೋಸ ಮಾಡಿ ವಂಚನೆ ಮಾಡಿದ್ದರು. ಈ ಬಗ್ಗೆ ಮೋಹನ ದಾಸ್ ಶೆಟ್ಟಿ ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಆರೋಪಿ ಮತ್ತು ಸೊತ್ತು ಪತ್ತೆಗೆ ಪಿಎಸೈ ಪವನ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನರೇಂದ್ರ ಮೋದಿಯವರು ವಿಶ್ವವೇ ಪುರಸ್ಕರಿಸುವ ನಾಯಕ. ಅಂತರಾಷ್ಟ್ರೀಯ ಸಂಬಂಧ, ರಾಷ್ಟ್ರದ ಭದ್ರತೆ, ಹಿಂದೂ ಧರ್ಮದ ಉಳಿವು ಇವೆಲ್ಲದಕ್ಕೂ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಪ್ರಧಾನಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನೂ ಕೂಡ ಗೆದ್ದು ಅವರು ಪ್ರಧಾನಿಯಾಗಲು ಬೆಂಬಲಿಸುವುದುದೇ ನನ್ನ ಗುರಿಯಾಗಿದೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಗುರುವಾರ ಉಪ್ಪಂದದ ದೇವಕಿ ಬಿ.ಆರ್. ಸಭಾಂಗಣದಲ್ಲಿ ಜರುಗಿದ ರಾಷ್ಟ್ರಭಕ್ತ ಬಳಗದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ ಕಾಂಗ್ರೆಸ್ ಸೋಲಿಸುವುದು, ಮೋದಿ ಪ್ರಧಾನಿಯಾಗುವುದು ಹಾಗೂ ಬಿಜೆಪಿಯ ಹೊಂದಾಣಿಕೆ ರಾಜಕಾರಣಕ್ಕೆ ಕೊನೆ ಹಾಡಲು ಕಾರ್ಯಕರ್ತರ ನಮ್ಮ ಜೊತೆಗೆ ಬಂದಿದ್ದಾರೆ. ಜಾತೀಯತೆ, ಕುಟುಂಬ ರಾಜಕಾರಣ, ಬಿಜೆಪಿಯ ಹಿರಿಯ ಕಿರಿಯ ಕಾರ್ಯಕರ್ತರ ನೋವು ಈ ಎಲ್ಲದಕ್ಕೂ ಒಂದು ಪರಿಹಾರ ಕಂಡುಕೊಳ್ಳಲು ಚುನಾವಣೆ ಎದುರಿಸುತ್ತಿದ್ದೇನೆ. ರಾಷ್ಟ್ರಭಕ್ತ ಬಳಗ ಸಂಘಟನೆಗೆ ದಿನದಿಂದ ದಿನಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದರು. ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಮಾತನಾಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ಉಪ್ಪುಂದದ ಶ್ರೇಯಸ್ ಜಿ. ರಾವ್ 651ನೇ ರ್ಯಾಂಕ್ ಗಳಿಸಿದ್ದಾರೆ. ಬೈಂದೂರು ತಾಲೂಕು ಉಪ್ಪುಂದದವರಾದ ಶ್ರೇಯಸ್ ಜಿ. ರಾವ್ ಅವರು ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಸಂದೀಪನ್ ಮತ್ತು ಹೆಚ್.ಎಂ.ಎಂ.ಎಸ್ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣವನ್ನು ನಾವುಂದದ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಪೂರೈಸಿ ಬಳಿಕ ಶಿವಮೊಗ್ಗದ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದಾರೆ. ಬಳಿಕ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಬಿಎಂಎಸ್ ರೆಡಿಯೋಲಾಜಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಕಳೆದ ಎರಡೂವರೆ ವರ್ಷದಲ್ಲಿ ಉಡುಪಿ ಅಂಬಲಪಾಡಿಯಲ್ಲಿ ವೃತ್ತಿಯಲ್ಲಿರುವ ಶ್ರೇಯಸ್ ಅವರು ವೃತ್ತಿಯ ಜೊತೆಗೆ ಯುಪಿಎಸ್ಸಿಗೂ ತಯಾರಿ ನಡೆಸಿದ್ದರು. ಶ್ರೇಯಸ್ ಅವರು ಉಪ್ಪುಂದದ ದಿ. ಗಣೇಶ್ ಶ್ರೀನಿವಾಸ ರಾವ್ ಹಾಗೂ ಉಪ್ಪುಂದ ಉರ್ದು ಶಾಲೆಯಲ್ಲಿ ಶಿಕ್ಷಕಿಯಾಗಿರುವ ಸುಶೀಲಾ ಯು.ಎಸ್. ಅವರ ಪುತ್ರರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ (ರಿ) ಶಂಕರನಾರಾಯಣ ಪ್ರವರ್ತಿತ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಗೆ ಸುದೀರ್ಘ 25ವರ್ಷಗಳ ಸೇವಾನುಭವ ಹೊಂದಿರುವ ರವಿದಾಸ್ ಶೆಟ್ಟಿ ನೂತನ ಮುಖ್ಯಶಿಕ್ಷಕರಾಗಿ ನೇಮಕಗೊಂಡಿರುತ್ತಾರೆ ರವಿದಾಸ್ ಶೆಟ್ಟಿ ಅವರು ಎಂಎ, ಎಂಇಡ್ ಪದವೀಧರರಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಯೊಂದಿಗೆ (ಜಿಲ್ಲಾಮಟ್ಟದ ಉತ್ತಮಶಿಕ್ಷಕ ಪ್ರಶಸ್ತಿ ಕಾರವಾರ ಮತ್ತು ಉಡುಪಿ ಜಿಲ್ಲೆ, ಜಿಲ್ಲಾ ಆದರ್ಶ ಶಿಕ್ಷಕ, ಸಾಧಕ ಪ್ರಶಸ್ತಿ, ಜೆಸಿಐ ಉಪ್ಪುಂದ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಶುಭದಾ ಶಾಲೆಗಳು ಹಾಗೂ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇರಳ) ಆಯ್ಕೆಯಾದ ನೂತನ ಮುಖ್ಯ ಶಿಕ್ಷಕರಿಗೆ ಸಂಸ್ಥೆಯ ಆಡಳಿತಮಂಡಳಿ, ಬೋಧಕ ಮತ್ತು ಬೋಧಕೇತರ ವೃಂದ ಪಾಲಕರು ಶುಭಕೋರಿರುತ್ತಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಧಾನಪರಿಷತ್ ಮಾಜಿ ಸಭಾಪತಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೆ.ಪ್ರತಾಪಚಂದ್ರ ಶೆಟ್ಟಿ ಅವರನ್ನು ಭೇಟಿಯಾದ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ಚುನಾವಣಾ ಕಾರ್ಯತಂತ್ರದ ಕುರಿತು ಸಮಾಲೋಚನೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರ ನೇತೃತ್ವದಲ್ಲಿ ಹೈಕಾಡಿಯಲ್ಲಿನ ಪ್ರತಾಪಚಂದ್ರ ಶೆಟ್ಟಿ ಅವರ ನಿವಾಸಕ್ಕೆ ತೆರಳಿದ್ದ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಮುಖರು, ಅವರೊಂದಿಗೆ ಕುಶಲೋಪರಿ ನಡೆಸಿ ಲೋಕಸಭಾ ಚುನಾವಣೆಯ ಬಗ್ಗೆ ಸಮಾಲೋಚನೆ ನಡೆಸಿದರು. ಪಕ್ಷದ ಪ್ರಮುಖರಾದ ಎಂ.ದಿನೇಶ್ ಹೆಗ್ಡೆ ಮೊಳಹಳ್ಳಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಪ್ರಮುಖರಾದ ಪ್ರವೀಣ್ ಬಲ್ಲಾಳ್ ಹೆಬ್ರಿ ಇದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರು ಶಿವಮೊಗ್ಗದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬದುಕು ಕಟ್ಟಿಕೊಡುವವರು ಮತ್ತು ಭಾವನೆಗಳನ್ನು ಕೆರಳಿಸುವವರ ನಡುವೆ ಚುನಾವಣೆ ನಡೆಯುತ್ತಿದೆ. ನಮಗೆ ಯಾವುದು ಮುಖ್ಯ ಎಂಬುದನ್ನು ನಾವು ನಿರ್ಧರಿಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು. ಅವರು ಕೋಟೇಶ್ವರ ಪೇಟೆಯಲ್ಲಿ ಬುಧವಾರ ಜರುಗಿದ ಉಡುಪಿ ಚಿಕ್ಕಮಗಳೂರು ಕಾಂಗ್ರೆಸ್ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೂ ಮೊದಲೂ 5 ಗ್ಯಾರೆಂಟಿಗಳನ್ನು ನೀಡಿದ್ದೆವು. ಈಗ ಎಲ್ಲಾ ಗ್ಯಾರೆಂಟಿಗಳನ್ನು ಪೂರ್ಣಗೊಳಿಸಿ ಉಳಿಸಿಕೊಂಡಿದೆ. ಶೇ.98ರಷ್ಟು ಜನರು ಗ್ಯಾರೆಂಟಿ ಫಲಾನುಭವಿಗಳಾಗಿದ್ದಾರೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆಲ್ಲುವ ಭರವಸೆ ಇದೆ ಎಂದರು. ರಾಜ್ಯ ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮುರೋಳಿ ಅವರು ಮಾತನಾಡಿ ಶೋಷಿತರ, ಬಡವರ, ಮಕ್ಕಳು ಮಹಿಳೆಯರ ರಕ್ಷಣೆಗೆ ಕಾಂಗ್ರೆಸ್ ಯಾವತ್ತೂ ಇರಲಿದೆ. ಸುಳ್ಳು ಬಿಜೆಪಿಯ ಮನೆ ದೇವರು. ಈ ಚುನಾವಣೆ ಸತ್ಯ ಹಾಗೂ ಅಸತ್ಯದ ನಡುವಿನ, ಸಂವಿಧಾನದ ಪರವಾಗಿ ಹಾಗೂ ವಿರುದ್ಧವಾಗಿ ಇರುವವರ ನಡುವಿನ ಚುನಾವಣೆಯಾಗಿದೆ ಎಂದರು. ಉಡುಪಿಯನ್ನು ಜಿಲ್ಲೆ ಮಾಡುವಂತಹ ಚಾರಿತ್ರಿಕ ಕಾರ್ಯವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲೋಕಸಭಾ ಚುನಾವಣೆಯ ದಿನಗಳು ಸಮೀಪಿಸುತ್ತಿದ್ದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಪ್ರಚಾರ ಕಾರ್ಯಗಳು ಭರದಿಂದ ಸಾಗುತ್ತಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿಯೂ ಶಾಸಕ ಗುರುರಾಜ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೈಂದೂರು ಮಂಡಲ ಬಿಜೆಪಿಯ ಪ್ರಮುಖರು ಬೂತ್ ಕಡೆಗೆ ಸಮೃದ್ಧ ನಡಿಗೆ ಎಂಬ ಕಾರ್ಯಕ್ರಮದ ಮೂಲಕ ಕಾರ್ಯಕರ್ತರನ್ನು ಭೇಟಿ ಮಾಡಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಬುಧವಾರ ಕಂಬದಕೋಣೆ ಕಾಲ್ತೋಡು ಹಳಗೇರಿ ಹಾಗೂ ಹೇರೂರು ಭಾಗದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕರು ಬೈಂದೂರು ಕ್ಷೇತ್ರದಿಂದ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಕನಿಷ್ಠ 1 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ ದೊರಕಿಸಿಕೊಡುವುದು, ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡಲು ಶ್ರಮಿಸುವುದು ಹಾಗೂ ಕೊಲ್ಲೂರಿಗೆ ಕರೆತರುವ ಸಂಕಲ್ಪವನ್ನು ಕಾರ್ಯಕರ್ತರೊಂದಿಗೆ ಮಾಡಿದ್ದಾರೆ. ಈ ವೇಳೆ ಅವರು ಮಾತನಾಡಿ ರಾಷ್ಟ್ರೀಯತೆ, ಹಿಂದುತ್ವ ಹಾಗೂ ಕೇಂದ್ರ ಸರಕಾರದ ಅಭಿವೃದ್ಧಿ ಕಾರ್ಯ, ಸಂಸದರಾಗಿ ಬಿ.ವೈ.ರಾಘವೇಂದ್ರ ಅವರು ಮಾಡಿರುವ ಅಭಿವೃದ್ಧಿ ಕಾರ್ಯ, ವಿಶ್ವ ನಾಯಕ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವವೇ ನಮಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸಂಸದರಾಗಿದ್ದವರು ರಾಷ್ಟ್ರೀಯ ನಾಯಕರ ಹೆಸರನ್ನು ಹೇಳಿಕೊಂಡು ಗೆದ್ದು ಕ್ಷೇತ್ರದ ಕಡೆಗೆ ಮುಖ ಮಾಡಿರಲಿಲ್ಲ. ಈಗಿನ ಅಭ್ಯರ್ಥಿಯೂ ಸಂಸದರ ಹಾದಿಯನ್ನೇ ಅನುಸರಿಸುವುದಾಗಿ ಹೇಳಿದ್ದಾರೆ. ಅವರಿಗೆ ಅಭಿವೃದ್ಧಿಯ ಬಗ್ಗೆ ಯಾವುದೇ ಯೋಜನೆ ಇಲ್ಲ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಮಂಗಳವಾರ ಬ್ರಹ್ಮಾವರ ಪೇಟೆಯಲ್ಲಿ ರೋಡ್ ಶೋ ಬಳಿಕ ಬಸ್ ನಿಲ್ದಾಣದ ಬಳಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ಈ ಹಿಂದೆ ಅಧಿಕಾರದಲ್ಲಿದ್ದ ಅವಧಿಯಲ್ಲಿ ಮಾಡಿದ್ದ ಅಭಿವೃದ್ಧಿ ಕಾರ್ಯಗಳನ್ನು ಹೇಳಿದ್ದೇನೆ. ಸಂಸದನಾದರೆ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದರ ಜೊತೆಗೆ ಜನರ ಬದುಕು ಕಟ್ಟುವ ಕಾರ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗವುದು ಎಂದರು. ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರೆಂಟಿಗಳು ಮಹಿಳೆಯರು ಯುವಕರು ಹಾಗೂ ಬಡವರ್ಗದ ಬದುಕು ಕಟ್ಟುವ ಕಾರ್ಯ ಮಾಡುತ್ತಿದೆ. ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಕಾರ್ಯಕರ್ತರು ಮನೆಮನೆಗೆ ತಲುಪಿಸುವ…
ಕುಂದಾಪ್ರ ಡಾಟ್ ಕಾಂಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶದ ಶೆಟ್ಟಿ ಆಜ್ರಿ, ಈ ಬಾರಿ ಮತ್ತೊಂದು ಅಂಥದ್ದೇ ಕಂಟೆಂಟ್ ಆಧಾರಿತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ. ಹೌದು, ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ತಮ್ಮ ಮೂರನೇ ಸಿನಿಮಾಕ್ಕೆ ‘ಗುಂಮ್ಟಿ ಎಂದು ಹೆಸರಿಟ್ಟಿದ್ದು, ಈ ಸಿನಿಮಾದಲ್ಲಿ ಸಂದೇಶ್ ಶೆಟ್ಟಿ ತೆರೆಮೇಲೆ ನಾಯಕನಾಗಿ, ತೆರೆಹಿಂದೆ ನಿರ್ದೇಶಕನಾಗಿ ‘ಡಬಲ್ ರೋಲ್’ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ! ಇನ್ನು ‘ಗುಂಮ್ಟಿ’ ಸಿನಿಮಾದಲ್ಲಿ ಕರ್ನಾಟಕದ ಕರಾವಳಿ ತೀರದ ಕುಡುಬಿ ಜನಾಂಗದ ಕಥೆಯೊಂದು ತೆರೆಮೇಲೆ ಅನಾವರಣವಾಗಲಿದೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ-ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷವನ್ನು ‘ಗುಂಮ್ಟಿ’ ಸಿನಿಮಾದಲ್ಲಿ ಮನಮುಟ್ಟುವಂತೆ ಹೇಳಲು ಹೊರಟಿದೆ ಚಿತ್ರತಂಡ. ಈಗಾಗಲೇ ಸದ್ದಿಲ್ಲದೆ ಉಡುಪಿ, ಕುಂದಾಪುರ, ಶಿರಸಿ, ಬೆಳಗಾವಿ, ಮಹಾರಾಷ್ಟ್ರದ ಸೋಲಾಪುರ ಹೀಗೆ ಕರಾವಳಿ-ಮಲೆನಾಡು ಮತ್ತು ಪಶ್ಚಿಮ ಘಟ್ಟದ ಸುತ್ತಮುತ್ತ ಸುಮಾರು 25ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರತಂಡ ‘ಗುಂಮ್ಟಿ’…
