ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ” ಈ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರನ್ನು ಆಯ್ಕೆ ಮಾಡಲಾಗಿದ್ದಾರೆ. ಅವರು ಇದುವರೆಗೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ. ಏಪ್ರಿಲ್ 11ರಂದು ಗೋವಾದಲ್ಲಿ ನಡೆಯಲಿರುವ ವೈಭವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಆಯ್ಕೆ ಸಮಿತಿಯ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಕೋ ಕ್ಲಬ್ ಕಾರ್ಯಕ್ರಮದಡಿಯಲ್ಲಿ ‘ಅಂಬರ ವಿಹಾರ’ ಆಕಾಶ ಕಾಯಗಳ ವೀಕ್ಷಣೆ ಕಾರ್ಯಕ್ರಮವು ಕಂಚಿಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್‌ಡಿಎಮ್‌ಸಿ ಅಧ್ಯಕ್ಷರಾದ ಪ್ರಭಾಕರ್ ದೇವಾಡಿಗ ಅವರು ವಹಿಸಿದ್ದರು. ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಆಕಾಶ ಕಾಯಗಳ ಬಗ್ಗೆ ಮಕ್ಕಳ ಕುತೂಹಲದ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಪ್ರತ್ಯಕ್ಷವಾಗಿ ತಂತ್ರಜ್ಞಾನಧ ಮೂಲಕ ಪರಿಚಯಿಸಿ , ಮಕ್ಕಳಿಗೆ ಆಕಾಶ ಕಾಯಗಳ ಬಗ್ಗೆ ಒಂದಷ್ಟು ಮಾಹಿತಿ ನೀಡಿದರು. ನಂತರ ಟೆಲಿಸ್ಕೋಪ್ ಮೂಲಕ ಗ್ರಹಗಳ ವೀಕ್ಷಣೆ ಮಾಡಲಾಯಿತು. ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಇಲಾಖೆಯ ಅಧಿಕಾರಿಗಳು ಬೇರೆ ಬೇರೆ ಶಾಲೆಯ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷರಾದ ಲಲಿತಾ ದೇವೇಂದ್ರ ಶೇಟ್, ಸಂಪನ್ಮೂಲ ವ್ಯಕ್ತಿ ಉಪನ್ಯಾಸಕಿ ಶ್ರೀನಯನ ಮತ್ತು ನಿವೃತ್ತ ಮುಖ್ಯ ಶಿಕ್ಷಕರಾದ ಮಹಾಬಲೇಶ್ವರ ಐತಾಳ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಜ್ಞಾನ ಶಿಕ್ಷಕಿ ಗೀತಾ ಪ್ರಾಸ್ತಾವಿಕ ಮಾತನಾಡಿದರು. ವಿಜ್ಞಾನ ಶಿಕ್ಷಕಿ ಜ್ಯೋತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡುತ್ತಿರುವ ಸ್ವಯಂಸ್ಪೂರ್ತಿ ಫೌಂಡೇಶನ್ 3 ಶಾಲೆಗಳಿಗೆ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಕೊಡುಗೆಯಾಗಿ ನೀಡಲಿದೆ. ಈ ಭಾರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ, ಯಳಜಿತ ಹಾಗೂ ಮುಲ್ಲಿಬಾರು ಶಾಲೆಗಳಲ್ಲಿ ಕೌಶಲ್ಯ ಕೇಂದ್ರ ತೆರೆಯಲಾಗುತ್ತಿದೆ. ಜನವರಿ 24 ಹಾಗೂ 25ರಂದು ನಡೆಯುವ ಸಮಾರಂಭವನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಉದ್ಘಾಟಿಸಲಿದ್ದು, ಆಯಾ ಶಾಲಾ ವ್ಯಾಪ್ತಿಯ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸ್ವಯಂಸ್ಪೂರ್ತಿ ಫೌಂಡೇಶನ್ ಮುಖ್ಯಸ್ಥರಾಗಿರುವ ಸಿ.ಎಸ್. ನಾಗರಾಜ ಶೆಟ್ಟಿ ಅವರ ನೇತೃತ್ವದ ಸ್ವಯಂಸ್ಪೂರ್ತಿ ಫೌಂಡೇಶನ್ ಮೂಲಕ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರದಲ್ಲಿ ಕನಿಷ್ಠ ನಾಲ್ಕು ಕಂಪ್ಯೂಟರ್‌ಗಳು, ಕಂಪ್ಯೂಟರ್ ಟೇಬಲ್ – ಖುರ್ಚಿ, ಬುಕ್ ರ್ಯಾಕ್, ಕ್ರೀಡಾ ಸಾಮಾಗ್ರಿಗಳನ್ನು ಗ್ರಾಮೀಣ ಭಾಗದ ಶಾಲೆಗೆ ನೀಡಲಾಗುತ್ತಿದೆ. ಈತನಕ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 12ಕ್ಕೂ ಹೆಚ್ಚು ಶಾಲೆಗಳಿಗೆ ಕೌಶಲ್ಯ ಕೇಂದ್ರ ಒದಗಿಸಿಕೊಡಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದಿರೆ: ಅರೆವಾಹಕ ಚಿಪ್‌ಗಳು (ಸೆಮಿಕಂಡಕ್ಟಡ್ ಚಿಪ್) ಅತ್ಯಂತ ಅಗತ್ಯವಾಗಿದ್ದು ಅದನ್ನು ವಿದೇಶದಿಂದ ಆಮದು ಮಾಡಿಕೊಳ್ಳುವುದು ಇಲ್ಲಿ ತಯಾರಿಸುವುದಕ್ಕಿಂತ ಅಧಿಕವಾಗುತ್ತದೆ. ಪ್ರಸ್ತುತ ಭಾರತ ಸರಕಾರ ಅರೆವಾಹಕ ಚಿಪ್‌ಗಳನ್ನು ತಯಾರಿಸಲು ಎಪ್ಪತ್ತಾರು ಸಾವಿರ ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದು ಇದು ಮುಂಬರುವ ದಿನಗಳಲ್ಲಿ ಭಾರತ ತಂತ್ರಜ್ಞಾನದ ಮಹತ್ವದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಬೆಂಗಳೂರಿನ ಡಿಆರ್‌ಡಿಒ ಹಾಗೂ ಸಿತಾರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರವಿ ಎಂ. ಆರ್. ಹೇಳಿದರು. ಕರ್ನಾಟಕ ಸರಕಾರದ ವಿಜನ್ ಗ್ರೂಪ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿಯ ಅನುದಾನದೊಂದಿಗೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಞ್ರಾನಿಕ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗವು ಆಯೋಜಿಸಿದ ಮೆಮ್ಸ್ ಕ್ಯಾರಕ್ಟರೈಸೇಶನ್ ಟೆಕ್ನಿಕ್ ಎಂಬ ನಾಲ್ಕು ದಿನಗಳ ಉಪನ್ಯಾಸಕರ ಕೌಶಲ್ಯಾಭಿವೃದ್ಧಿ (ಎಫ್‌ಡಿಪಿ) ಕಾರ್ಯಾಗಾರವನ್ನು ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಭಾರತದಲ್ಲಿ ಜ್ಞಾನದ ಸಂಪತ್ತು ಹೇರಳವಾಗಿದ್ದು, ಮೇಮ್ಸ್ ಹಾಗೂ ಸೆಮಿಕಂಡಕ್ಟರ್‌ಗೆ ಸಂಬಂದಿಸಿದ ನೂರೈವತ್ತುಕ್ಕೂ ಅಧಿಕ ಸಂಸ್ಥೆಗಳು ಬೆಂಗಳೂರಿನಲ್ಲಿವೆ. ನಾವು ಅನೇಕ ತಂತ್ರಜ್ಞಾನವನ್ನು ಕಂಡುಕೊಂಡಿದ್ದೇವೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾಟಕ ಮಾಧ್ಯಮದಿಂದ ಮಕ್ಕಳಿಗೆ ಇತಿಹಾಸ ಅರಿಯಲು ಸುಲಭ. ನಾಟಕಗಳು ರಂಜನೆಯ ಜೊತೆಗೆ ಚಿಂತನೆಯನ್ನು ಹಚ್ಚುತ್ತದೆ ಎಂದು ಲಯನ್ಸ್ ಕ್ಲಬ್ ಬೈಂದೂರು ಉಪ್ಪುಂದ ಇದರ ಅಧ್ಯಕ್ಷರಾದ ಸತೀಶ್ ಶೆಟ್ಟಿ ಅವರು ಹೇಳಿದರು. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರಿನಲ್ಲಿ ರೋಟರಿ ಕ್ಲಬ್ ಬೈಂದೂರು, ಲಯನ್ಸ್ ಕ್ಲಬ್ ಬೈಂದೂರು – ಉಪ್ಪುಂದ, ಸೀನಿಯರ್ ಚೇಂಬರ್ ಬೈಂದೂರು ಇವರ ಸಹಯೋಗದಲ್ಲಿ ನಿರ್ದಿಗಂತ ಮೈಸೂರು ತಂಡದ ನಾಟಕ ತಿಂಡಿಗೆ ಬಂದ ತುಂಡೇರಾಯ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ದೇವಾಡಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ವೆಂಕಟರಮಣ ದೇವಾಡಿಗ ಮತ್ತು ದಯಾನಂದ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಾಟಕ ತಂಡದ ನಿರ್ವಾಹಕರಾದ ಗಣೇಶ್ ಅವರನ್ನು ಗೌರವಿಸಲಾಯಿತು. ನೀನಾಸಂ ಪದವೀಧರ ಸತ್ಯನ್ ಕೊಡೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೈಂದೂರು ರೋಟರಿ ಕ್ಲಬ್‌ನ ಕಾರ್ಯದರ್ಶಿ ಸುನಿಲ್ ಹೆಚ್. ಜಿ ಸ್ವಾಗತಿಸಿ, ಶಾಲಾ ಪದವೀಧರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತುಳು – ಕನ್ನಡ ಎನ್ನುವ ಭಾಷಿಕವಾದ ಒಳ ಬಿನ್ನತೆ ಸಂಘಟನೆಯಲ್ಲಿ ಬರಬಾರದು. ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಪ್ರಾದೇಶಿಕ ಭಿನ್ನತೆಯನ್ನು ಮೀರಿ ಬಂಟ ಸಮುದಾಯದ ಹಾಗೂ ಸಮಾಜದ ಶ್ರೇಯೋಭಿವೃದ್ಧಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು. ಗೋವಾದ ಲಕ್ಷ್ಮಿ ಎಂಪೈರ್ ಹೋಟೆಲ್ ನಲ್ಲಿ ಆಯೋಜಿಸಿದ ಗೋವಾ ಬಂಟರ ಸಂಘದ ರಜತ ಸಂಭ್ರಮ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದರು. ಜ್ಞಾನ ಸರೋವರ ರೆಸಿಡೆನ್ಸಿಯಲ್ ಸ್ಕೂಲ್‌ನ ಆಡಳಿತ ನಿರ್ದೇಶಕ ಸುಧಾಕರ ಶೆಟ್ಟಿ ಮಾತನಾಡಿ, ಬಂಟರು ಸ್ವಂತಿಕೆ, ಸ್ವಾಭಿಮಾನದಡಿಯಲ್ಲಿ ಬದುಕಿದವರು ಹಾಗೂ ಸಂಘಟನಾ ಚತುರರು. ಬೇರೆ ಬೇರೆ ಕ್ಷೇತ್ರಗಳಲ್ಲಿ ತಮ್ಮ ಚಾಪನ್ನು ಮೂಡಿಸುವುದರ ಜೊತೆಗೆ ನಾಡಿನ ಕಲೆ, ಸಾಹಿತ್ಯ, ಸಾಂಸ್ಕೃತಿಕ ವಿಷಯಗಳಿಗೆ ತಮ್ಮದೆ ಆದ ಕೊಡುಗೆಯನ್ನು ನೀಡುತ್ತಾ ಬಂದವರು. ಬಂಟರು ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗುವ ಮೂಲಕ ಸಾಮಾಜಿಕವಾಗಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡವರು ಎಂದು ಹೇಳಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಗೋವಾ ಬಂಟರ ಸಂಘದ ರಜತ ಸಂಭ್ರಮದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ ಇರಿಸಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಶೇಕರ ಬಿ. ಅವರನ್ನು ರೆಡ್ ಹ್ಯಾಂಡ್ ಆಗಿ ಉಡುಪಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. 9/11 ಮಾಡಿ ಕೊಡಲು 22 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ದೂರುದಾರರು ನೀಡಿದ ದೂರಿನಂತೆ ಈ ಕಾರ್ಯಾಚರಣೆ ನಡೆಸಲಾಗಿದೆ. ಲೋಕಾಯುಕ್ತ ಅಧೀಕ್ಷಕ ನಟರಾಜ್ ಅವರ ಮಾರ್ಗದರ್ಶನದಲ್ಲಿ ಪ್ರಭಾರ ಪೊಲೀಸ್ ಉಪಾಧೀಕ್ಷಕ ಮಂಜುನಾಥ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಅಮನುಲ್ಲ ಹಾಗೂ ಚಂದ್ರಶೇಖರ್, ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಪುಷ್ಪಲತಾ, ಮಲ್ಲಿಕಾ, ಅಬ್ದುಲ್ ಜಲಾಲ್, ಸತೀಶ್ ಹಂದಾಡಿ, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ರಮೇಶ್, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು, ಸುಧೀರ್ ಹಾಗೂ ಮಂಗಳೂರು ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೀಚ್ ಬಳಿ ಮನೆಯೊಂದರಲ್ಲಿ ಇರಿಸಿದ್ದ ಬ್ಯಾಗ್‌ನಿಂದ ಆಭರಣಗಳನ್ನು ಕದ್ದಿದ್ದ ಇಬ್ಬರು ಆರೋಪಿಗಳನ್ನು ಕ್ಷಿಪ್ರವಾಗಿ ಬಂಧಿಸಲು ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಜ್ಜಾಡಿ ನಿವಾಸಿ ವಿನಾಯಕ ಖಾರ್ವಿ (41), ಪ್ರಮೀಳಾ (30) ಬಂಧಿತರು. ಜ.21 ರಂದು ಉದಯ ಪೂಜಾರಿ ಎಂಬುವವರ ಮನೆಯ ಟೇಬಲ್ ಮೇಲೆ ಇಡಲಾಗಿದ್ದ ಬ್ಯಾಗಿನ ಜೀಪ್ ತೆಗೆದು ಬ್ಯಾಗ್ ನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್, 16 ಗ್ರಾಂ ತೂಕದ ಬಳೆ ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರ ಸಹಿತ 2 ಲಕ್ಷದ ಆಭರಣ ಕಳವಾಗಿದ್ದು ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮನೆ ಕಳ್ಳತನದ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಜ. 21 ರಂದು ರಾತ್ರಿ 8 ಗಂಟೆ ಸುಮಾರಿಗೆ ಆರೋಪಿಗಳಾದ ಗುಜ್ಜಾಡಿ ನಿವಾಸಿ ವಿನಾಯಕ(41), ಪ್ರಮೀಳಾ(30) ಎನ್ನುವರನ್ನು ವಶಕ್ಕೆ ಪಡೆದು ಆರೋಪಿಗಳು ಕಳವುಗೈದ 2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಬಸ್ರೂರು ಮೂರುಕೈ ಸಮೀಪದ ವಡೇರಹೋಬಳಿ ಬಿ.ಸಿ ರೋಡ್ ರಸ್ತೆಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ ವಡೇರಹೋಬಳಿ ಬೆಟ್ಟಾಗರ ಮನೆ ನಿವಾಸಿ ಸೋಮಯ್ಯ (61) ಮೃತ ದುರ್ದೈವಿ. ಸೋಮಯ್ಯ ಅವರು ಬುಧವಾರ ಬೆಳಿಗ್ಗೆ ವಾಕಿಂಗ್ ತೆರಳಿದ್ದ ಸಂದರ್ಭ ರಿಕ್ಷಾ ಡಿಕ್ಕಿಯಾಗಿದ್ದು, ಗಾಯಗೊಂಡು ಅವರು ಗದ್ದೆಗೆ ಬಿದ್ದಿದ್ದರು. ಕೆಲ ಸಮಯದ ಬಳಿಕ ಯಾರೋ ಗದ್ದೆಯಲ್ಲಿ ಬಿದ್ದಿರುವುದನ್ನು ಕಂಡಿದ್ದು ಪರಿಶೀಲಿಸಿದಾಗ ಸೋಮಯ್ಯ ಎಂದು ತಿಳಿದುಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಾಗಲೇ ಸೋಮಯ್ಯ ಮೃತಪಟ್ಟಿರುವುದು ತಿಳಿದುಬಂದಿದೆ. ಕುಂದಾಪುರದ ಮೂಡ್ಲಕಟ್ಟೆ ರೈಲು ನಿಲ್ದಾಣದಿಂದ ಮುಂಜಾನೆ 6 ಗಂಟೆ ಸುಮಾರಿಗೆ ಪ್ರಯಾಣಿಕರನ್ನು ಕರೆದೊಯ್ಯುವಾಗ ಸೋಮಯ್ಯ ಅವರಿಗೆ ರಿಕ್ಷಾ ಡಿಕ್ಕಿಹೊಡೆದಿದೆ. ಅಪಘಾತದ ಬಗ್ಗೆ ತಿಳಿದರೂ ಕೂಡ ರಿಕ್ಷಾ ಚಾಲಕ ನಾರಾಯಣ ಎಂಬಾತನು ರಿಕ್ಷಾ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ತದನಂತರ ಬೆಳಿಗ್ಗೆ 9 ಗಂಟೆ ಬಳಿಕ ಅರೋಪಿ ಚಾಲಕ ಕುಂದಾಪುರ ಸಂಚಾರ ಪೊಲೀಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ “ರಾಷ್ಟ್ರೀಯ ಯುವ ದಿನ”ದಂದು ಸಂಸ್ಥೆಯ ಇನ್ನೋವೇಶನ್ ಕೌನ್ಸಿಲ್ ಮತ್ತು ಮೂಲ ವಿಜ್ಞಾನ ವಿಭಾಗದ ಸಹಯೋಗದೊಂದಿಗೆ NSS-YRC ಘಟಕವು ಪ್ರೇರಣಾದಾಯಕ ಕಾರ್ಯಕ್ರಮ ಆಯೋಜಿಸಲಾಗಿತ್ತು. “ಯುಥ್ ಫಾರ್ ಎ ಸಸ್ಟೆನೇಬಲ್ ಪ್ಯೂಚರ್” ಶೀರ್ಷಿಕೆಯ ಈ ಅಧಿವೇಶನವನ್ನು ಪ್ರಮುಖ ತಂತ್ರಜ್ಞಾನ ಉದ್ಯಮಿ, ಫೋರ್ತ್‌ಫೋಕಸ್‌ನ ಸಂಸ್ಥಾಪಕ ಮತ್ತು ನಿರ್ದೇಶಕ ವಿ. ಗೌತಮ್ ನಾವಡ ಮಾತನಾಡಿ “ಉದ್ಯಮಶೀಲತೆ ಕೇವಲ ಯಶಸ್ಸಿನ ಬಗ್ಗೆ ಅಲ್ಲ. ವೈಫಲ್ಯಗಳನ್ನು ಸ್ವೀಕರಿಸುವುದು, ಅವುಗಳಿಂದ ಕಲಿಯುವುದು ಮತ್ತು ಮುಂದುವರಿಯುವುದರ ಬಗ್ಗೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಸಹಾಯಕ ಪ್ರಾಧ್ಯಾಪಕರಾದ ಸಚಿನ್ ಪ್ರಭು ಕೆ ಮತ್ತು ರಘುನಾಥ್ ಅವರು ಅಲಂಕರಿಸಿದರು.
