ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಹೊರವಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ ರಿಂಗ್ ರೋಡ್ ಕಾಮಗಾರಿಗಾಗಿ ಖಾರ್ವಿಕೇರಿ ಬಳಿ ಶಿಲೆಗಲ್ಲುಗಳನ್ನು ಅನ್‌ಲೋಡ್ ಮಾಡುತ್ತಿದ್ದ ವೇಳೆ ಪಂಚಗಂಗಾವಳಿ ಹೊಳೆಗೆ ಟಿಪ್ಪರ್ ಮಗುಚಿಬಿದ್ದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ರಿಂಗ್‌ರೋಡ್ ಕಾಮಗಾರಿಗಾಗಿ ಖಾರ್ವಿಕೇರಿ ಪ್ರದೇಶದಲ್ಲಿ ಪಂಚಗಂಗಾವಳಿ ಹೊಳೆ ಬದಿಯಲ್ಲಿ ಟಿಪ್ಪರ್ ನಿಲ್ಲಿಸಿ ಶಿಲೆಗಲ್ಲುಗಳನ್ನು ಅನ್‌ಲೋಡ್ ಮಾಡುತ್ತಿದ್ದ ಸಂದರ್ಭ ಬದಿಯ ಮಣ್ಣು ಕುಸಿದಿದ್ದರಿಂದ ನಿಯಂತ್ರಣ ತಪ್ಪಿದ ಟಿಪ್ಪರ್ ಹೊಳೆಗೆ ಮಗುಚಿ ಬಿದ್ದಿದೆ. ತಕ್ಷಣ ಸಮೀಪದಲ್ಲೇ ಇದ್ದ ಸ್ಥಳೀಯರು ಟಿಪ್ಪರ್ ಒಳಗೆ ನೀರಿನಲ್ಲಿದ್ದ ಚಾಲಕನನ್ನು ರಕ್ಷಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿಟಾಚಿ ಸಹಾಯದಿಂದ ಟಿಪ್ಪರ್ ಮೇಲಕ್ಕೆತ್ತಲಾಗುತ್ತಿದೆ. ಚಿತ್ರಗಳು: ಗುರುಪ್ರಸಾದ್ ಯಾದವ್
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯ ನಡೆಸಿದ 2024ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಅದಿತಿ ನಾವಡ 99.5% ಅಂಕಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯದಲ್ಲಿ ದ್ವಿತೀಯ ಸ್ಥಾನಿಯಾಗಿದ್ದಾರೆ. ಹಟ್ಟಿಯಂಗಡಿ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿರುವ ಅದಿತಿ, ಕುಂದಾಪುರದ ಡಾ. ಸಂದೀಪ ನಾವಡ ಹಾಗೂ ಡಾ. ಪ್ರೀತಿ ನಾವಡ ದಂಪತಿಯ ಪುತ್ರಿ. ಈಕೆ ನೃತ್ಯ ವಸಂತ ನಾಟ್ಯಾಲಯ ಕುಂದಾಪುರದಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಅಂಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥಮೆಟಿಕ್ ಹಾಗೂ 16ನೇ ರಾಷ್ಟ್ರ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಛಾಯಾ ವಿಶ್ವನಾಥ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕುಂದಾಪುರದ ಎಚ್‍ಎಮ್‍ಎಮ್ ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯಾಗಿರುವ ಛಾಯಾ, ಛಾಯಾಗ್ರಾಹಕ ವಿಶ್ವನಾಥ ಮುನ್ನ ಹಾಗೂ ರಜನಿ ದಂಪತಿಯ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ವಾಯುಪಡೆಯಲ್ಲಿ ಏರ್‌ಮ್ಯಾನ್ ಮತ್ತು ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಏರ್‌ಮ್ಯಾನ್ ಆಗಿ ಗ್ರೂಪ್ ವೈ (ತಾಂತ್ರಿಕವಲ್ಲದ) (ಎ) ವೈದ್ಯಕೀಯ ಸಹಾಯಕ ವೃತ್ತಿಗೆ ಸೇರಲು 10+2 ವಿದ್ಯಾರ್ಹತೆ ಹೊಂದಿದ ಅವಿವಾಹಿತ ಅಭ್ಯರ್ಥಿಯು 2004 ರ ಜುಲೈ 3 ಮತ್ತು 2008 ರ ಜುಲೈ 03 ರ ನಡುವೆ ಜನಿಸಿರಬೇಕು. (ಬಿ) ವೈದ್ಯಕೀಯ ಸಹಾಯಕ ವೃತ್ತಿಗೆ ಫಾರ್ಮಸಿಯಲ್ಲಿ ಡಿಪ್ಲೋಮಾ/ ಬಿ.ಎಸ್ಸಿ ಆಗಿರುವ ಅವಿವಾಹಿತ ಅಭ್ಯರ್ಥಿಯು 2001 ರ ಜುಲೈ 03 ಮತ್ತು 2006 ರ ಜುಲೈ 03 ನಡುವೆ ಜನಿಸಿರಬೇಕು. ವಿವಾಹಿತ ಅಭ್ಯರ್ಥಿಯು 2001 ರ ಜುಲೈ 03 ಮತ್ತು 2004 ರ ಜುಲೈ 03 ನಡುವೆ ಜನಿಸಿರಬೇಕು. ರ್ಯಾಲಿಯು ಕೇರಳ ಕೊಚ್ಚಿಯ ಎರ್ನಾಕುಲಂ ಪಿ.ಟಿ. ಉಷಾ ರಸ್ತೆಯ ಮಹಾರಾಜ ಕಾಲೇಜು ಮೈದಾನದಲ್ಲಿ ಜನವರಿ 29 ರಿಂದ ಫೆಬ್ರವರಿ 6 ರ ವರೆಗೆ ಮುಂಜಾನೆ 6 ಘಂಟೆ ಯಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೇವಾ ಚೇತನ ಟ್ರಸ್ಟ್ ರಿ. ಮೂಡುಬಗೆ ಅಂಪಾರು ಇದರ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಶನಿವಾರ ಅಂಪಾರು ಮೂಡುಬಗೆ ಶಾನ್ಕಟ್ಟು ಮೈದಾನದಲ್ಲಿ ನಡೆದ ನಮ್ಮೂರ ಸಂಭ್ರಮ ಕಾರ್ಯಕ್ರಮದಲ್ಲಿ ಸಂಘಟಕ, ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ 2024ರ ನಮ್ಮೂರ ಕೀರ್ತಿ ಕಳಶ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯರು, ಜಯದೇವ ಹೃದ್ರೋಗ ಆಸ್ಪತ್ರೆಯ ಆಡಳಿತ ನಿರ್ದೇಶಕರು ಅದ ಡಾ. ಸಿ.ಎನ್. ಮಂಜುನಾಥ್ ಪ್ರಶಸ್ತಿ ಪ್ರದಾನ ಮಾಡಿದರು. ಸೌತ್ ಫೀಲ್ಡ್ ಪೇಂಟ್ಸ್ ನ ಆಡಳಿತ ನಿರ್ದೇಶಕ ಎಸ್. ಎಸ್. ಹೆಗ್ಡೆ ನಮ್ಮೂರ ಸಂಭ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಸಿ.ಎ ಅಶೋಕ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ, ಬೆಂಗಳೂರಿನ ಹಿರಿಯ ಉದ್ಯಮಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ಎಸ್. ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಲಕ್ಷ್ಯ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ತರಬೇತುದಾರರಾಗಿ ಆಗಮಿಸಿದ ಕುಂದಾಪುರ ವಲಯದ ಶಿಕ್ಷಣ ಸಂಯೋಜಕರು ಹಾಗೂ ತಾಲೂಕು ಎಸ್. ಎಸ್.ಎಲ್.ಸಿ ನೋಡೆಲ್ ಶೇಖರ್ ಪಡುಕೋಣೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಬದಲಾಗುತ್ತಿರುವ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಹೊಂದಿಕೊಂಡು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಗುಣಮಟ್ಟದ ಫಲಿತಾಂಶವನ್ನು ಪಡೆಯಲು ನಿರಂತರ ಅಭ್ಯಾಸ, ಮನನ, ಆಸಕ್ತಿಯುತ ಕಲಿಕೆ ಪ್ರಮುಖ ವಾಗಿರುತ್ತದೆ ಆದ್ದರಿಂದ ಮುಂಬರುವ ಎಸ್. ಎಸ್. ಎಲ್.ಸಿ ಪರೀಕ್ಷೆಯಲ್ಲಿ ಕಠಿಣ ಪರಿಶ್ರಮದಿಂದ ಪರೀಕ್ಷಾ ಭಯವನ್ನು ಬಿಟ್ಟು ಗುಣಮಟ್ಟದ ಫಲಿತಾಂಶವನ್ನು ಪಡೆಯಬೇಕು ಎಂದರು. ಪಾಲಕರು ಈ ದಿಸೆಯತ್ತ ತಮ್ಮ ಮಕ್ಕಳಿಗೆ ಸಂಪೂರ್ಣ ಸಹಕಾರವನ್ನು ನೀಡಿ ಮನೆಯಲ್ಲಿ ಪೂರಕ ಕಲಿಕಾ ವಾತಾವರಣವನ್ನು ನಿರ್ಮಿಸಿ ಮಕ್ಕಳನ್ನು ಹಂತ ಹಂತವಾಗಿ ಅವಲೋಕಿಸಿ ಅವರನ್ನು ಕಲಿಕೆಯತ್ತ ಮನವೊಲಿಸುವಂತೆ ಕಿವಿಮಾತು ಹೇಳಿದರು ಹಾಗೂ ಸದಾ ಗುಣಮಟ್ಟದ ಫಲಿತಾಂಶವನ್ನು ಪಡೆಯುತ್ತಿರುವ ಸಂಸ್ಥೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. | ಚಿತ್ರಗಳು – ದಿವಾಕರ ವಂಡ್ಸೆಕುಂದಾಪುರ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದಲ್ಲಿ ಜ.14 ರಿಂದ 16ರ ವರೆಗೆ ನಡೆಯಲಿರುವ ಮಕರ ಸಂಕ್ರಮಣ ಉತ್ಸವಕ್ಕೆ ಮಂಗಳವಾರ ಚಾಲನೆ ದೊರೆತಿದ್ದು, ಬೆಳಿಗ್ಗೆಯಿಂದ ಸಾವಿರಾರು ಭಕ್ತರು ದೇವರ ದರ್ಶನ ಪಡೆದಿದ್ದಾರೆ. ಹಬ್ಬದ ಸಂದರ್ಭ ಭಕ್ತರು ಸೇವಂತಿಗೆ, ಸಿಂಗಾರ ಹೂವನ್ನು ಬುಟ್ಟಿಯಲ್ಲಿಟ್ಟು ತಲೆಯಲ್ಲಿ ಹೊತ್ತು ಹರಕೆ ರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ಪದ್ಧತಿ ಇದ್ದು, ಅದರಂತೆ ಭಕ್ತರು ಸರತಿಸಾಲಿನಲ್ಲಿ ಬಂದು ದೇವರಿಗೆ ಹೂವು ಹರಕೆ ಅರ್ಪಿಸಿದರು. ಧನು ಸಂಕ್ರಮಣದಂದು ಕ್ಷೇತ್ರದ ಚಿಕ್ಕು ದೇವರ ಪಾತ್ರಿ ಇಲ್ಲಿನ ಚಕ್ರ ಉಪನದಿಯನ್ನು ದಾಟಿ ತುಳುನಾಡಿನ ಭಕ್ತರ ಮನೆಯಲ್ಲಿ ಮೈದರ್ಶನ ಮಾಡುತ್ತಾ ಕೊನೆಗೆ ಮಕರ ಸಂಕ್ರಮಣದಂದು ಕ್ಷೇತ್ರಕ್ಕೆ ಆಗಮಿಸುವ ಪದ್ಧತಿ ಇಂದಿಗೂ ನಡೆಯುತ್ತಾ ಬಂದಿದೆ. ಮಾರಣಕಟ್ಟೆ ಕ್ಷೇತ್ರವನ್ನು ಬಡಗಿನ ದೇವರೆಂದು ಭಕ್ತರು ನಂಬಿದ್ದಾರೆ. ಕುಂದಾಪುರ, ಬೈಂದೂರು ಸೇರಿದಂತೆ ತುಳುನಾಡಿನವರು ಭಕ್ತರು ಮಾರಣಕಟ್ಟೆ ಕ್ಷೇತ್ರಕ್ಕೆ ಆಗಮಿಸುತ್ತಾರೆ. ಅಲಂಕಾರಗೊಂಡ ಮಾರಣಕಟ್ಟೆ ಪರಿಸರ:ಚಿತ್ತೂರು ಸ್ವಾಗತ ಗೋಪುರದ ತಿರುವಿನಿಂದ ಮಾರಣಕಟ್ಟೆ ದೇಗುಲದವರೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಂಗಳೂರು ಸಮೀಪ ಚಾಲಕನಿಲ್ಲದೇ ಬಸ್ ಚಲಿಸಿ ಕಾರಿಗೆ ಡಿಕ್ಕಿಯಾದ ಘಟನೆ ಸೋಮವಾರ ನಡೆದಿದೆ. ಸರ್ವಿಸ್ ಸೆಂಟರಿನಲ್ಲಿ ನಿಲ್ಲಿಸಲಾಗಿದ್ದ ಖಾಸಗಿ ಬಸ್ ಚಾಲಕನೇ ಇಲ್ಲದೆ ಬಸ್ ಏಕಾಏಕಿಯಾಗಿ ಎರಡು ಸರ್ವಿಸ್ ರೋಡ್ ಮತ್ತು ರಾಷ್ಟ್ರೀಯ ಹೆದ್ದಾರಿ ದಾಟಿ ಕಾರಿಗೆ ಡಿಕ್ಕಿ ಹೊಡೆದಿದ್ದು. ಕಾರು ಅಪ್ಪಚ್ಚಿಯಾಗಿದೆ. ಈ ಅಪಘಾತವು ವಾಣಿಜ್ಯ ಸಂಕೀರ್ಣದ ಸಿ. ಸಿ. ಟಿ. ವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಚಾಲಕನಿಲ್ಲದ ಬಸ್ಸನ್ನು ಕಂಡು ಸಾರ್ವಜನಿಕರು ಗಾಬರಿಗೊಂಡಿದ್ದು ಅದೃಷ್ಟವಷಾತ್ ಸಾರ್ವಜನಿಕರು ಇತರ ವಾಹನಗಳು ಪಾರಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ವಕ್ವಾಡಿ ಗುರುಕುಲ ಸಮೂಹ ಸಂಸ್ಥೆಯಲ್ಲಿ ಶಾಲಾ ಸಂಸ್ಥಾಪನಾ ದಿನ ಮತ್ತು ವಿವೇಕಾನಂದರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ದಿನದ ವಿಶೇಷ ಎಂಬಂತೆ ಶಾಲಾವರಣದಲ್ಲಿ ಎಲ್ಲರನ್ನೂ ಆಕರ್ಷಿಸುವಂತೆ ನಿಂತಿರುವ ಭರತ ಭೂಮಿಯ ಹೆಮ್ಮೆಯ ಪುತ್ರ ಸ್ವಾಮಿ ವಿವೇಕಾನಂದರ ಮೂರ್ತಿಗೆ ಹಾರವನ್ನು ಹಾಕಿ ಪುಷ್ಪನಮನ ಸಲ್ಲಿಸುವ ಮೂಲಕ ಯುವ ದಿನವನ್ನು ಆರಂಭಿಸಲಾಯಿತು. ವಿದ್ಯಾರ್ಥಿಗಳಿಗೆ ವಿವೇಕಾನಂದರ ಮಹತ್ವದ ಸಂದೇಶಗಳನ್ನು ಮನಮುಟ್ಟುವಂತೆ ತಿಳಿಸಲಾಯಿತು. ಜೊತೆಗೆ ವಿದ್ಯಾರ್ಥಿಗಳು ಹಾಡು ಹಾಡುವ ಮೂಲಕ ವಿವೇಕಾನಂದರ ಗುಣಗಾನ ಮಾಡಿದರು. ಪ್ರಾಥಮಿಕ ವಿಭಾಗದ ವಿದ್ಯಾರ್ಥಿ ವಿವೇಕಾನಂದರ ವೇಷ ಭೂಷಣದಿಂದ ಎಲ್ಲರ ಗಮನ ಸೆಳೆದನು. ಜೊತೆಗೆ ಸಂಸ್ಥಾಪನಾ ದಿನದ ಅಂಗವಾಗಿ ಶಾಲೆ ಬೆಳೆದು ಬಂದ ಹಾದಿಯ ಯಶಸ್ಸನ್ನು ಸಹ ಶಿಕ್ಷಕಿ ಸುಲಕ್ಷಣ ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಜಂಟಿ ಕಾರ್ಯನಿರ್ವಾಹಕ ರಾದ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ವಿವೇಕಾನಂದರ ಧ್ಯೇಯವನ್ನು ನೀವು ನಿಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಬಾಳಿ ಎಂದು ತಿಳಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯುವ ಸಮೂಹ ಪ್ರತಿಯೊಂದು ರಾಷ್ಟ್ರಗಳ ದಿವ್ಯ ಸಂಪತ್ತು ಮತ್ತು ದೇಶದ ಆಶಯ ಕೂಡ ಎಂಬುದು ಯಾರು ಕೂಡ ಅಲ್ಲಗೆಳೆಯುವಂತಿಲ್ಲ. ಯುವ ಸಮೂಹದ ಶಕ್ತಿ, ಸಾಮರ್ಥ್ಯಗಳು ಒಂದು ದೇಶದ ಸವಾಂಗೀಣ ಅಭಿವೃದ್ಧಿಗೆ ಪೂರಕ. ಯುವಕರು ಆಧುನಿಕತೆ ಮತ್ತು ತಾಂತ್ರಿಕತೆಯ ಹರಿಕಾರರು ಹಾಗೂ ವಿಭಿನ್ನ ಕ್ಷೇತ್ರದಲ್ಲಿ ಕನಸುಗಳನ್ನು ಕಾಣುವ ಕನಸುಗಾರರು. ಆತ್ಮವಿಶ್ವಾಸ, ಧೈರ್ಯ, ಸ್ಥೈರ್ಯ ಮತ್ತು ಶ್ರಮಗಳ ಸಂಗಮವೇ ಯುವ ಸಮೂಹ. ಯುವ ಶಕ್ತಿಯ ನಿರ್ವಿವಾದಿತ ಸಂಕೇತವಾಗಿ ಬೆಳೆದವರು ಸ್ವಾಮಿ ವಿವೇಕಾನಂದರು ಎಂದು ಭಾರತೀಯ ಸೇನೆಯ ನಿವೃತ್ತ ಇಂಜಿನಿಯರ್ ಬೆಳ್ಳಾಲ ಗೋಪಿನಾಥ ರಾವ್ ಹೇಳಿದರು. ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳು ಗಂಗೊಳ್ಳಿ ಮತ್ತು ಬಾಲಚಂದ್ರ ನಾಯ್ಕನಕಟ್ಟೆ ಟ್ರಸ್ಟ್ ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಶ್ರೀ ಸರಸ್ವತಿ ವಿದ್ಯಾನಿಧಿ ಗಂಗೊಳ್ಳಿ ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣ ಸಭಾಂಗಣದಲ್ಲಿ ಸೋಮವಾರ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು. ಸ್ವಾಮೀ ವಿವೇಕಾನಂದರು…
