Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಒಲಂಪಿಕ್ಸ್ ಸಂಸ್ಥೆಯು ಉಡುಪಿ ಮತ್ತು ಮಂಗಳೂರಿನಲ್ಲಿ ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟವನ್ನು ನಡೆಯಲಿದ್ದು, ಉಡುಪಿ ನಗರದಲ್ಲಿ ನಡೆಯಲಿರುವ ಕ್ರೀಡೆಗಳಿಗೆ ಅಗತ್ಯವಿರುವ ಮೈದಾನದ ವ್ಯವಸ್ಥೆ, ಕ್ರೀಡಾಪಟುಗಳಿಗೆ ವಸತಿ ಸೇರಿದಂತೆ ಮತ್ತಿತರ ಸೌಲಭ್ಯಗಳ ಕುರಿತು ಪರಿಶೀಲನೆಯನ್ನು ಶಾಸಕ ಯಶ್‌ಪಾಲ್ ಎ ಸುವರ್ಣ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಇಂದು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ, ಜನವರಿ 17ರಿಂದ ನಡೆಯಲಿರುವ ರಾಜ್ಯದ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಉಡುಪಿ ನಗರದಲ್ಲಿಯೇ 11 ಕ್ಕೂ ಹೆಚ್ಚು ಕ್ರೀಡೆಗಳು ಎಂಟು ದಿನಗಳ ಕಾಲ ನಡೆಯಲಿದೆ. ಅಜ್ಜರಕಾಡು ಜಿಲ್ಲಾ ಮಟ್ಟದ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಜೂಡೋ, ಕುಸ್ತಿ, ಬಾಕ್ಸಿಂಗ್, ಕಬ್ಬಡಿ, ಸೈಕ್ಲಿಂಗ್‌ಗಳು ನಡೆದರೆ, ಮಾಹೆ ವಿಶ್ವ ವಿದ್ಯಾನಿಲಯದ ಕ್ರೀಡಾಂಗಣದಲ್ಲಿ ಲಾಂಗ್ ಟೆನ್ನಿಸ್, ಟೇಬಲ್ ಟೆನ್ನಿಸ್ ಹಾಗೂ ಹಾಕಿ ಕ್ರೀಡೆಗಳು ನಡೆಯಲಿದೆ. ಬ್ರಹ್ಮಾವರದ ಬೈಕಾಡಿಯ ಸ್ವರ್ಣಾ ನದಿಯಲ್ಲಿ ಕಯಾಕಿಂಗ್ ನಡೆಯಲಿದ್ದು, ಸುಮಾರು 2500 ಕ್ಕೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಉದ್ದೇಶದಿಂದ ಉಡುಪಿ ನಗರದಲ್ಲಿ ಬೃಹತ್ ಕೌಶಲ್ಯ ರೋಜ್‌ಗಾರ್ ಉದ್ಯೋಗ ಮೇಳವು ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವಜನರಿಗೆ ಉದ್ಯೋಗವನ್ನು ಒದಗಿಸುವ ಬೃಹತ್ ಉದ್ಯೋಗ ಮೇಳವು ಫೆಬ್ರವರಿ ಮೊದಲನೇ ವಾರದಲ್ಲಿ ಉಡುಪಿ ನಗರದ ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಈ ಮೇಳದಲ್ಲಿ ರಾಜ್ಯದ ಹಾಗೂ ಜಿಲ್ಲೆಯ ವಿವಿಧ ಪ್ರತಿಷ್ಠಿತ ಕಂಪನಿಗಳ 100 ಕ್ಕೂ ಹೆಚ್ಚು ಉದ್ಯೋಗದಾತರುಗಳು ಭಾಗವಹಿಸಲಿದ್ದು, 3500 ಕ್ಕೂ ಹೆಚ್ಚು ಉದ್ಯೋಗ ಆಕಾಂಶಿಗಳು ಮೇಳಕ್ಕೆ ಆಗಮಿಸುವ ನಿರೀಕ್ಷೆಯಲಿದ್ದು, ಇದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ, ಯಶಸ್ವಿಗೊಳಿಸಬೇಕು ಎಂದರು. ಜಿಲ್ಲೆಯಲ್ಲಿ ನಡೆಯಲಿರುವ ಉದ್ಯೋಗ ಮೇಳದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಜೇಸಿಐ ವಲಯ 15ರ ಉಪ್ಪುಂದ ಜೇಸಿಐ ಘಟಕವು 2024ನೇ ಸಾಲಿನಲ್ಲಿ ನಡೆಸಿದ ವಿವಿಧ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ – ತರಬೇತಿಗಳು,  ಸಾಮಾಜಿಕ ಅರಿವು, ಆರೋಗ್ಯ – ಜಾಗೃತಿಯ ಕಾರ್ಯಕ್ರಮಗಳು ಹೀಗೆ ವಿವಿಧ ಹಂತದ ಕಾರ್ಯಕ್ರಮಗಳಿಗಾಗಿ ಜೇಸಿಐ ಭಾರತದಿಂದ ಪ್ರತಿಷ್ಠಿತ 100% ಎಫಿಸಿಯೆನ್ಸಿ ಅವಾರ್ಡ್  ಹಾಗೂ ಎಂಪವರಿಂಗ್ ಯೂತ್ ಅವಾರ್ಡ್‌ನ್ನು ನೀಡಿ ಗೌರವಿಸಲಾಯಿತು. ಉಪ್ಪುಂದ ಜೇಸಿಐನ 2024ರ ಅಧ್ಯಕ್ಷರಾದ ಮಂಜುನಾಥ ದೇವಾಡಿಗ ಅವರಿಗೆ ಹೈದರಾಬಾದ್‌ನ ನವಾಟಲ್ ಇಂಟರ್‌ನ್ಯಾಶನಲ್ ಕನ್ವೆನ್ಶನ್ ಸೆಂಟರ್ ಹೋಟಲ್‌ನಲ್ಲಿ ನಡೆದ ಜೇಸಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಜೇಸಿಐ ರಾಷ್ಟ್ರೀಯ ಅಧ್ಯಕ್ಷರಾದ  ಅಡ್ವೋಕೇಟ್ ರಿಕೇಶ್ ಶರ್ಮಾ  ಅವರು ಅವಾರ್ಡ್‌ನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಲೀಡರ್ ಸೀರೀಸ್ ತರಬೇತಿಯನ್ನು ಅತ್ಯುತ್ತಮವಾಗಿ ನಡೆಸಿದ ಬಗ್ಗೆ ಸಿಲ್ವರ್ ಕಾಯಿನ್ ಅವಾರ್ಡ್, ಎಂಪವರಿಂಗ್ ಯೂತ್ ಅತ್ಯುತ್ತಮ ಆಯೋಜನೆಯ ಬಗ್ಗೆ ಎಕ್ಸೆಲೆಂಟ್ ಅವಾರ್ಡ್ ಹಾಗೂ ಎಲ್.ಜಿ.ಬಿ. ಮೀಟಿಂಗ್, ಉದ್ಯೋಗ ಮೇಳ, ಚುನಾವಣಾ ಜಾಗೃತಿ ಕಾರ್ಯಕ್ರಮ, ಮಿಶನ್ ಒನ್ ಲಾಕ್ ,ಇಪಿಎಸ್, ಸಿಎಪಿಪಿ, ಜೇಸಿ ಕೋರ್ಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಾಸ್ಥಾನದ ಪ್ರಧಾನ ಅರ್ಚಕ ಹಾಗೂ ಪ್ರಧಾನ ತಂತ್ರಿಗಳಾದ ಮಂಜುನಾಥ ಅಡಿಗ (64) ಅವರು ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಮಂಜುನಾಥ ಅಡಿಗ ಅವರು ಸ್ನಾನಗೃಹದಲ್ಲಿ ಬಿದ್ದು ಅಸ್ವಸ್ಥಗೊಂಡು ಕುಟುಂಬಸ್ಥರು ನೀರು ಕುಡಿಸುವಷ್ಟರಲ್ಲೇ ಮೃತಪಟ್ಟರು. ಅವರು ಹದಿನೆಂಟು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ ಮೃತರು, ಅನಾರೋಗ್ಯದ ನಿಮಿತ್ತ ದೇಗುಲದ ಪೂಜೆಯನ್ನು ನೆರವೇರಿಸಲು ತನ್ನ ಸ್ಥಾನವನ್ನು ಮಗ ನಿತ್ಯಾನಂದ ಅಡಿಗ ಅವರಿಗೆ ನೀಡಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಈ ನೆಲದ ಸಂಸ್ಕೃತಿಯ ಬೇರಾದ ಯಕ್ಷಗಾನದಂತಹ ಕಲಾ ಪ್ರಕಾರಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಂಡಾಗ ನಮ್ಮ ನೆಲದ ಭಾಷೆ ಸಂಸ್ಕೃತಿಯನ್ನು ಸಂರಕ್ಷಿಸಿ ಬೆಳೆಯುದಕ್ಕೆ ಸಾಧ್ಯ. ನಮ್ಮ ನೆಲದ ಸಂಸ್ಕೃತಿಯ ಪ್ರತೀಕವಾದ ಯಕ್ಷಗಾನ ಕಲೆಯಲ್ಲಿ ವಿದ್ಯಾರ್ಥಿಗಳು ಆಸಕ್ತಿ ಹೊಂದಿ ಈ ನೆಲದ ಭಾಷೆ ಸಂಸ್ಕೃತಿಯ ಏಳಿಗೆಗೆ ಕಟಿಬದ್ದರಾಗಬೇಕು. ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಒಳಗೊಳ್ಳದ ಶಿಕ್ಷಣ ಪರಿಪೂರ್ಣತೆಯನ್ನು ಕಂಡುಕೊಳ್ಳಲು ಸಾಧ್ಯವಿಲ್ಲ. ಎಲ್ಲವೂ ಪೂರವಾಗಿ ಇದ್ದಾಗಲೇ ಮಕ್ಕಳ ಕಲಿಕೆ ಉತ್ತಮವಾಗುತ್ತದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಇಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಬೈಂದೂರು ಯಕ್ಷ ಗುರುಕುಲದ ಸಹಯೋಗದಲ್ಲಿ ಉಡುಪಿಯ ಯಕ್ಷ ಶಿಕ್ಷಣ ಟ್ರಸ್ಟ್ ರಿ. ಆಯೋಜಿಸಿರುವ ಕಿಶೋರ ಯಕ್ಷಗಾನ ಸಂಭ್ರಮ -2024ರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಂತರ ಉಡುಪಿಯ ಯಕ್ಷ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್ ಮಾತನಾಡಿ, ಇದುವರೆಗೂ ಜಿಲ್ಲೆಯಾದ್ಯಂತ ಒಟ್ಟು 91 ಪ್ರೌಢಶಾಲೆಗಳ 2,500 ವಿದ್ಯಾರ್ಥಿಗಳು ಯಕ್ಷಗಾನ ತರಬೇತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.    ಕುಂದಾಪುರ: ಇಲ್ಲಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆಗಸ್ಟ್ 16 ರಂದು ನೇಮಕಾತಿ ಅಧಿಸೂಚನೆ ಹೊರಡಿಸಿ, ಸೆಪ್ಟಂಬರ್ 19 ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 1ನೇ ಹಂತದಲ್ಲಿಯೇ “Application Successfully Uploaded’’ ಎಂಬ ಮೇಸೆಜ್ ಅವರುಗಳ ಮೊಬೈಲ್‌ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 225 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 101 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ. ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸೆಂಬರ್ 26 ರಿಂದ ಜನವರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಬೇಳೂರು ಗ್ರಾಮದ ದೇವಸ್ಥಾನಬೆಟ್ಟು ಎಂಬಲ್ಲಿ ಆಟೋರಿಕ್ಷಾ ಅಡ್ಡ ಬಂದ ನಾಯಿ ತಪ್ಪಿಸುವ ಭರದಲ್ಲಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಮಗುಚಿದ ಪರಿಣಾಮ ಐವರು ಗಾಯಗೊಂಡ ಘಟನೆ ಸೋಮವಾರದಂದು ನಡೆದಿದೆ. ಕೋಟ ಕಡೆಯಿಂದ ಬೇಳೂರು ಕಡೆಗೆ ಆಟೋ ರಿಕ್ಷಾದಲ್ಲಿ ಪ್ರಯಾಣಿಕರನ್ನು ಕುಳ್ಳಿರಿಸಿಕೊಂಡು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು, ರಸ್ತೆಗೆ ಅಡ್ಡ ಬಂದ ನಾಯಿಯನ್ನು ಕಂಡು ಆಟೋ ರಿಕ್ಷಾವನ್ನು ರಸ್ತೆಯ ತೀರಾ ಬಲ ಬದಿಗೆ ಚಲಾಯಿಸಿ, ರಸ್ತೆಯ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದೆ ಪರಿಣಾಮ ಆಟೋ ರಿಕ್ಷಾವು ಪಲ್ಟಿಯಾಗಿ ಬಿದ್ದು ಅದರಲ್ಲಿರುವ ಪ್ರಯಾಣಿಕರಾದ ಶ್ರೀಲತಾ, ಅನುಷಾ, ಗೌತಮಿ, ಶ್ರೀಜನ್ಯ, ರಿಕ್ಷಾ ಚಾಲಕ ಸದಾಶಿವ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ಕೊಡಲೇ ಕೋಟೇಶ್ವರದ ಎನ್‌ ಆರ್‌ ಆಚಾರ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಿಕ್ಷಾ ಚಾಲಕನನ್ನು ಕುಂದಾಪುರದ ಆದರ್ಶ ಆಸ್ಪತ್ರೆಗೆ ದಾಖಲಾಗಿರುವುದಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಮರವಂತೆ ಗ್ರಾಮದ ನಿರೋಣಿ ಬುಕ್ಕಿಮನೆ ಎಂಬಲ್ಲಿ ಜಗನ್ನಾಥ ದೇವಾಡಿಗ (55) ಅವರು ಸೋಮವಾರದಂದು ತನ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಮಧ್ಯಪಾನ ಚಟ ಹೊಂದಿದ್ದು ತನ್ನ ಹೆಂಡತಿ, ಮಕ್ಕಳು ತನ್ನ ಜೊತೆ ಇಲ್ಲದೇ ಇರುವ ವಿಚಾರದಲ್ಲಿ ಕೊರಗಿನಿಂದ ಜಿಗುಪ್ಪೆಗೊಂಡು ಕೃತ್ಯ ಎಸಗಿದ್ದಾರೆ ಎಂದು ಸಹೋದರಿ ಗಿರಿಜಾ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.   ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದ ವತಿಯಿಂದ ಸಕಾಲ ಸಂಬAಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ಸುಪಾಸನ್ನು ಪಡೆಯಲು  ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ನಲ್ಲಿ ಅಗತ್ಯ ದಾಖಲಾತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.  ವಿಕಲಚೇತನರ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ 2024 ನೇ ಸಾಲಿನಲ್ಲಿ ವಿತರಿಸಿರುವ ಬಸ್ಸು ಪಾಸುಗಳ ಅವಧಿಯು 2024 ರ ಡಿಸೆಂಬರ್ 31 ಕ್ಕೆ ಮುಕ್ತಾಯಗೊಂಡಿದ್ದು, 2025 ನೇ ಸಾಲಿಗಾಗಿ ಈ ಬಸ್ಸು ಪಾಸುಗಳನ್ನು ಜನವರಿ 01 ರಿಂದ ನವೀಕರಿಸಲು ಅವಕಾಶ ಕಲ್ಪಿಸಲಾಗಿದೆ. ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ಬಂದು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ 2024 ನೇ ಸಾಲಿನಲ್ಲಿ ವಿತರಿಸಿದ ಪಾಸುಗಳನ್ನು 2025 ರ ಫೆಬ್ರವರಿ 28 ರವರೆಗೆ ಮಾನ್ಯ ಮಾಡಲಾಗುವುದು ಎಂದು ಮಂಗಳೂರು ಕ.ರಾ.ರ.ಸಾ. ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕಾರ್ಕಳ ಯಕ್ಷ ರಂಗಾಯಣವು ತಾನು ಸಿದ್ದಪಡಿಸುವ ನಾಟಕಗಳು ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು 3 ಜನ ತಂತ್ರಜ್ಞರು (ಸಂಗೀತ/ಧ್ವನಿ ಸಂಯೋಜಕರು-1, ಬೆಳಕಿನ ವಿನ್ಯಾಸ-1, ರಂಗಸಜ್ಜಿಕೆ-ಪರಿಕರ-1) ಹಾಗೂ 12 ಮಂದಿ ಕಲಾವಿದರನ್ನು ನೇಮಕ ಮಾಡಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ 18 ರಿಂದ 32 ವರ್ಷದೊಳಗಿನ ಕಲಾವಿದರು ಮತ್ತು 25 ರಿಂದ 40 ವರ್ಷದೊಳಗಿನ ತಂತ್ರಜ್ಞರಿAದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟಿçÃಯ ನಾಟಕ ಶಾಲೆಯ ಪದವಿ, ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದ ರಂಗಶಿಕ್ಷಣ ಪದವಿ ಅಥವಾ ಡಿಪ್ಲೋಮಾ ಹಾಗೂ ರಾಜ್ಯ ಸರ್ಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ನಾಟಕ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರಿಗೆ ಹಾಗೂ ಆಯಾ ತಾಂತ್ರಿಕ ವಿಷಯಗಳಲ್ಲಿ ಪರಿಣಿತಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ರಂಗಭೂಮಿ ಅನುಭವ ಅಪೇಕ್ಷಣೀಯ. ಆಸಕ್ತ ಕಲಾವಿದರು ಬಿಳಿ ಹಾಳೆಯ ಮೇಲೆ ಸ್ವವಿವರದೊಂದಿಗೆ ಜನವರಿ 15 ರ ಒಳಗಾಗಿ ವಿಶೇಷ ಕರ್ತವ್ಯಾಧಿಕಾರಿ, ಯಕ್ಷ ರಂಗಾಯಣ ಕಛೇರಿ, ಕೋಟಿ ಚೆನ್ನಯ ಥೀಂ ಪಾರ್ಕ್, ಕಸಬಾ ಗ್ರಾಮ,…

Read More