Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯಕ್ಷ ಕಾಂತಾರ ಹಾಗೂ ಯಕ್ಷ ಬ್ರಹ್ಮಶ್ರೀ ಇವರ ಸಂಯೋಜನೆಯಲ್ಲಿ ಅಶಕ್ತರ ಹಾಗೂ ಅನಾರೋಗ್ಯ ಪೀಡಿತರ ಸಹಾಯಾರ್ಥವಾಗಿ ಯಕ್ಷಗಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ದಿಸೆಯಲ್ಲಿ ಸೋಮವಾರ ಕಾರ್ಕಡದ ಭಟ್ರಕಟ್ಟೆಯ ಬಡ ಕುಟುಂಬದ ಜ್ಯೋತಿ ವಿಕ್ಟೋರಿಯಾ ಡಿಸಿಲ್ವಾ ಹಾಗೂ ಕಾರ್ಕಡದ ಅನಾರೋಗ್ಯಕ್ಕೆ ತುತ್ತಾದ ದಿನೇಶ್ ಕಾರ್ಕಡ ಇರ್ವರಿಗೆ ಒಟ್ಟು 50,000 ರೂ.ಗಳ ನೆರವಿನ ಸಹಾಯಹಸ್ತ ನೀಡಲಾಯಿತು. ಈ ಸಂದರ್ಭದಲ್ಲಿ ಯಕ್ಷ ಕಾಂತಾರ ಹಾಗೂ ಯಕ್ಷ ಬ್ರಹ್ಮಶ್ರೀ ಸಮಿತಿಯ ಮುಖ್ಯಸ್ಥ ಕೃಷ್ಣಮೂರ್ತಿ ಮರಕಾಲ, ಶ್ರೀನಿವಾಸ ಕಾರ್ಕಡ, ಸಂತೋಷ್ ಕೆ., ಶಶಿಧರ ಕೆ., ಶಶಿರ ಕೆ., ರಮೇಶ್ ಕೆ., ಧರ್ಮಸ್ಥಳ ಗ್ರಾ. ಯೋಜನಾಧಿಕಾರಿ ರಮೇಶ್ ಪಿ.ಕೆ., ಯಕ್ಷಕಾಂತಾರ ತಂಡದ ಸತೀಶ್ ಕೆ., ಸುಧೀರ್ ನೈಲಾಡಿ ಉಪಸ್ಥಿತರಿದ್ದರು. ಈ ಹಿನ್ನಲ್ಲೆಯಲ್ಲಿ ಶನಿವಾರ ಹಮ್ಮಿಕೊಂಡ ಶ್ರೀ ಮಹಿಷಮರ್ದಿನಿ ದಶಾವತಾರ ಯಕ್ಷಗಾನ ಮಂಡಳಿ ಅವರಿಂದ ಶ್ರೀ ಕ್ಷೇತ್ರ ನೀಲಾವರ ಇವರಿಂದ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಕ್ಷೇತ್ರ ಮಹಾತ್ಮಯ ಸರದಾರ ಜ್ಯೋತಿಷ್ಯ ಹಾಗೂ ವಾಸ್ತುತಜ್ಞ ಡಾ. ಬಸವರಾಜ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಿರ್ಮಾಣ ಹಂತದ ಮನೆಯೊಂದರ ಗಾರೆ ಕೆಲಸದ ಮಾಡುತ್ತಿದ್ದ ವೇಳೆ ಕಬ್ಬಿಣದ ಏಣಿಯನ್ನು ಮತ್ತೊಂದೆಡೆ ಸ್ಥಳಾಂತರಿಸುವಾಗ ಮನೆ ಹಿಂಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಏಣಿ ಸ್ಪರ್ಶವಾದ ಪರಿಣಾಮ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಕುಂದಾಪುರದ ಕಡ್ಡಿಮನೆ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಕುಂದಾಪುರ ತಾಲೂಕಿನ ಮೂಡ್ಲಕಟ್ಟೆ ಸಮೀಪದ ಕಂದಾವರ ಸಾಂತಾವರ ನಿವಾಸಿ ಶಿವರಾಜ್ (35) ಮೃತರು ಎಂದು ಗುರುತಿಸಲಾಗಿದೆ. ಅವರು ಕಳೆದ 15 ವರ್ಷಗಳಿಂದ ಗಾರೆ ವೃತ್ತಿಮಾಡಿಕೊಂಡಿದ್ದರು. ಕುಂದಾಪುರ ಹೊರವಲಯದ ಕಡ್ಡಿಮನೆ ರಸ್ತೆಯ ಕೊನೆಯಲ್ಲಿ ಪ್ರವೀಣ್ ಖಾರ್ವಿ ಎನ್ನುವರ ನಿರ್ಮಾಣ ಹಂತದಲ್ಲಿರುವ ಮನೆಯ ಗಾರೆ ಕೆಲಸಕ್ಕೆ ಸೋಮವಾರ ಶಿವರಾಜ್ ಹಾಗೂ ಇತರರು ಬಂದಿದ್ದು ತನ್ನ ಜೊತೆ ಕೆಲಸ ಮಾಡುವ ಇನ್ನಿಬ್ಬರು ಕೆಲಸಗಾರರೊಂದಿಗೆ ಕಬ್ಬಿಣದ ಏಣಿಯನ್ನು ಎತ್ತಿ ಬೇರೆ ಕಡೆಗೆ ಹೊತ್ತೊಯ್ಯು ವಾಗ ಆಕಸ್ಮಿಕವಾಗಿ ಏಣಿಯು ಆಯತಪ್ಪಿ ಅಲ್ಲಿಯೇ ಹಾದು ಹೋಗಿರುವ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್ ತಗುಲಿದ್ದರಿಂದ ಶಿವರಾಜ್‌ ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹನ್ನೊಂದನೇ ಶತಮಾನದ ಆದ್ಯ ವಚನಕಾರ, ನೇಕಾರ ಸಮುದಾಯದ ಆರಾಧ್ಯ ದೈವ ದೇವರ ದಾಸಿಮಯ್ಯ ಅವರು ಸರಳ ಭಾಷೆಯಲ್ಲಿ ಸರ್ವರೂ ಅರಿಯುವಂತೆ ವಚನಗಳನ್ನು ರಚಿಸುವ ಮೂಲಕ ಅಂದಿನ ಕಾಲಘಟ್ಟದಲ್ಲಿ ಸಮಾಜದಲ್ಲಿದ್ದ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಅವಿರತ ಶ್ರಮವಹಿಸಿದ್ದರು ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.   ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ದ.ಕ ಜಿಲ್ಲಾ ಪದ್ಮಶಾಲಿ ಮಹಾಸಭಾ ರಿ. ಉಡುಪಿ ಇವರ ಸಹಯೋಗದಲ್ಲಿ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. 12ನೇ ಶತಮಾನದಲ್ಲಿ ಆರಂಭವಾದ ವಚನ ಚಳವಳಿಗಿಂತ ಮೊದಲೇ ಸರಳ ವಚನಗಳನ್ನು ರಚಿಸಿದ ಆದ್ಯ ವಚನಕಾರ ಎಂಬ ಹೆಗ್ಗಳಿಕೆಗೆ ದಾಸಿಮಯ್ಯ ಪಾತ್ರರಾಗಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಮೂಲವಾಗಿರುವ ವಚನ ಸಾಹಿತ್ಯದಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಮಾಜದ ಬೇರೆ ಬೇರೆ ಸ್ತರಗಳಲ್ಲಿ ತಮ್ಮದೇ ಕೊಡುಗೆಯನ್ನು ನೀಡಿರುವ ಮಹಿಳೆಯರು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಅವರನ್ನು ಗೌರವಿಸಿದರೆ ಸಮಾಜವನ್ನೇ ಗೌರವಿಸಿದಂತೆ. ಆಕೆ ತಾಯಿಯಾಗಿ, ಮಡದಿಯಾಗಿ ಗೆಳತಿಯಾಗಿ ಬೇರೆ ಬೇರೆ ಹುದ್ದೆಗಳನ್ನು ನಿರ್ವಹಿಸಿದಂತ ಕರ್ತವ್ಯ ಶ್ಲಾಘನೀಯವಾದದ್ದು ಎಂದು ಉದ್ಯಮಿ ಆನಂದ ಸಿ. ಕುಂದರ್ ನುಡಿದರು. ಅವರು ಇತ್ತೀಚಿಗೆ ಕೋಟದ ಕಾರಂತ ಥೀಂ ಪಾರ್ಕ್‌ನಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಅಮೃತೇಶ್ವರಿ ಮಹಿಳಾ ಮೀನುಗಾರರ ಸಹಕಾರಿ ಸಂಘ ಕೋಟ, ನೆನಪು ಮೂವೀಸ್ ಮತ್ತು ಉಸಿರು ಕೋಟ ಆಶ್ರಯದಲ್ಲಿ ನಡೆದ ಡಾ. ಶಿವರಾಮ ಕಾರಂತ ಸಾಧಕ ಸ್ತ್ರೀ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ನುಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಪಂಚಾಯತ್ ಕಾರ್ಯದರ್ಶಿ ಸುಮತಿ ಅಂಚನ್‌ ಅವರು ಈ ಗುರುತಿಸುವಿಕೆಯ ಮೂಲಕ ಜವಾಬ್ದಾರಿಯನ್ನು ಹೆಚ್ಚಿಸಿಕೊಂಡು ಇನ್ನಷ್ಟು ಕೃತುಶಕ್ತಿಯಿಂದ ಮಹಿಳೆಯರು ಕಾರ್ಯವೆಸಗಲಿ ಎಂದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕ ಮಹಿಳೆಯರಿಗೆ ಡಾ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಆಯೋಜಿಸಲಾದ ವಿ-ಗ್ರೋ 2026 ಬಿಸಿನೆಸ್ ಡೇ ವಾಣಿಜ್ಯ ಹಬ್ಬವು ಯಶಸ್ವಿಯಾಗಿ ಸಂಪನ್ನಗೊಂಡಿತು. ಅಂತಿಮ ಹಾಗೂ ದ್ವಿತೀಯ ಬಿ.ಕಾಂ. ವಿದ್ಯಾರ್ಥಿಗಳಿಗೆ ಆಯೋಜಿಸಿದ ಈ ಅಂತರ್-ತರಗತಿ ಸ್ಪರ್ಧೆಯನ್ನು ಮೂರು ಹಂತಗಳಲ್ಲಿ ಆಯೋಜಿಸಲಾಯಿತು. ಮೊದಲನೇ ಹಂತದಲ್ಲಿ ವ್ಯವಹಾರ ಯೋಜನೆಯ ಪ್ರಸ್ತುತಿ, ಎರಡನೇ ಹಂತದಲ್ಲಿ ವ್ಯವಹಾರ ಮೇಳದ ಭಾಗವಾಗಿ ವಿದ್ಯಾರ್ಥಿಗಳೇ ತಯಾರಿಸಿದ ಉತ್ಪನ್ನಗಳೊಂದಿಗೆ ಇತರ ವಸ್ತುಗಳ ಮಾರಾಟ, ಹಾಗೂ ಮೂರನೇ ಹಂತದಲ್ಲಿ ಹಣಕಾಸಿನ ಆಯ-ವ್ಯಯ ಪಟ್ಟಿಗಳ ಪ್ರಸ್ತುತಿ ನಡೆಸಲಾಯಿತು. ಮುಖ್ಯ ಅತಿಥಿಗಳಾದ ಶ್ರೀನಿವಾಸ ವಿಶ್ವವಿದ್ಯಾನಿಲಯ ಮಂಗಳೂರು ಇಲ್ಲಿನ ಪ್ರಾಧ್ಯಾಪಕರು ಹಾಗೂ ಸಂಶೋಧನ ಮಾರ್ಗದರ್ಶಕರಾದ ಡಾ| ಗಣೇಶ್ ಭಟ್ ಎಸ್., ಅವರು ಮಾತನಾಡಿ, ವರ್ತಮಾನ ಕಾಲಘಟ್ಟದ ವ್ಯವಹಾರ ಪರಿಸ್ಥಿತಿ ಹಾಗೂ ವಿದ್ಯಾರ್ಥಿಗಳು ಹೊಂದಬೇಕಾದ ವ್ಯವಹಾರಿಕ ಕೌಶಲ್ಯಗಳ ಕುರಿತು ತಿಳಿಸಿದರು. ಇದೇ ಸಂದರ್ಭ ಕರಾವಳಿಯ ವ್ಯವಹಾರಿಕ ಜಗತ್ತಿನಲ್ಲಾದ ಸ್ಥಿತ್ಯಂತರಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳು ಬೆಳೆಯುತ್ತಿದ್ದ ಹಾಗೆ ಭಾವನಾತ್ಮಕ ಸಂಬಂಧಗಳಿಂದ ದೂರವಾಗುತ್ತಾ ಹೋಗುತ್ತಾರೆ. ಶಾಲೆಗಳಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಅನೇಕ ಶಾಲೆಗಳು ಬಹಳಷ್ಟು ಪ್ರಚಾರ ಮಾಡುತ್ತಿದ್ದು, ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತೇವೆ. ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸಿ ಈ ದೇಶಕ್ಕೆ ನೀಡುವ ಶಿಕ್ಷಣ ಶಾಲೆಗಳಲ್ಲಿ ನೀಡುತ್ತೇವೆ ಎಂದು ಯಾವುದೇ ಶಾಲೆಗಳು ಪ್ರಚಾರ ಮಾಡುತ್ತಿಲ್ಲ. ಆದರೆ ಶಿಶು ಮಂದಿರದಲ್ಲಿ ಮಕ್ಕಳಿಗೆ ಬಾಲ್ಯದಲ್ಲಿ ನೀಡಬೇಕಾದ ಸಂಸ್ಕೃತಿ, ಸಂಸ್ಕಾರದ ಶಿಕ್ಷಣವನ್ನು ನೀಡುವ ಮೂಲಕ, ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ಬೆಳೆಸುತ್ತಿದೆ ಎಂದು ಉಡುಪಿ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಸಿಬ್ಬಂದಿ ನಾಗರಾಜ ಖಾರ್ವಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾಭವನದಲ್ಲಿ ಶನಿವಾರ ಜರಗಿದ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇದರ 39ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪುರ ಸೇವಾ ಸಂಗಮ ಟ್ರಸ್ಟ್‌ನ ನಿರ್ವಾಹಕ ವಿಶ್ವಸ್ಥ ಸುಬ್ರಹ್ಮಣ್ಯ ಹೊಳ್ಳ ಬೌದ್ಧಿಕ್ ನೀಡಿದರು. ಗಂಗೊಳ್ಳಿ ಸ.ವಿ. ಆಂಗ್ಲ ಮಾಧ್ಯಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಷ್ಟದ ಆ ಹಿಂದಿನ ದಿನಗಳಲ್ಲಿ ದೇವರ ಮೇಲಿನ ಪ್ರೀತಿ ಭಕ್ತಿಯಿಂದ ಬೆಣ್ಗೇರೆಯಲ್ಲಿ ಶ್ರೀ ನಾಗ ದೇವಸ್ಥಾನ ಸ್ಥಾಪಿಸಿ, ದೇವಸ್ಥಾನವನ್ನು ಇಷ್ಟು ಎತ್ತರಕ್ಕೆ ತಂದು ಸಂಪೂರ್ಣ ವ್ಯವಸ್ಥೆ ಇರುವ ದೇವಸ್ಥಾನವಾಗಿ ಮೂಡಿರುವುದು ಮೇಸ್ತ ಸಮಾಜದ ಹೆಮ್ಮೆ. ಮೇಸ್ತ ಸಮಾಜ ನಂಬಿಕೊಂಡು ಬಂದಿರುವ ನಾಗರಾಧನೆ, ನಾಗ ದೇವಸ್ಥಾನದ ಮೂಲಕ ಈ ಭಾಗದ ಎಲ್ಲರಿಗೂ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಇಂತಹ ಧಾರ್ಮಿಕ ದೇವತಾ ಕಾರ್ಯಗಳು ನಿರಂತರವಾಗಿ ನಡೆದುಕೊಂಡು ಬರುವ ಹಾಗೆ ದೇವರು ಅನುಗ್ರಹಿಸಲಿ ಎಂದು ಬೆಣ್ಗೇರೆ ಶ್ರೀ ನಾಗ ದೇವಸ್ಥಾನದ ಅಧ್ಯಕ್ಷ ಉಮೇಶ ಎಲ್. ಮೇಸ್ತ ಹೇಳಿದರು. ಅವರು ಬೆಣ್ಗೇರೆ ಶ್ರೀ ನಾಗ ದೇವಸ್ಥಾನದಲ್ಲಿ 51ನೇ ನಾಗ ಮಂಡಲೋತ್ಸವ ಹಾಗೂ ಅಷ್ಟಬಂಧ ಪ್ರತಿಷ್ಠಾಪನಾ ವರ್ಧಂತ್ಯುತ್ಸವ ಪ್ರಯುಕ್ತ ಶುಕ್ರವಾರ ಸಂಜೆ ಜರಗಿದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇವಸ್ಥಾನದ ಪ್ರಧಾನ ಪುರೋಹಿತರಾದ ರಾಘವೇಂದ್ರ ಅಡಿಗ, ಪಾಂಡೇಶ್ವರದ ಅಷ್ಟಾಂಗ ಯೋಗ ಗುರುಕುಲದ ಡಾ.ವಿಜಯ ಮಂಜರು, ಅಖಿಲ ಕರ್ನಾಟಕ ಚಾರೋಡಿ ಮೇಸ್ತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಮಹಿಳಾ ವೇದಿಕೆಯ ಜಂಟಿ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸೆಂಟ್ ಮೇರಿಸ್ ಕಾಲೇಜು ಶಿರ್ವ ಇಲ್ಲಿಯ ಸಹಾಯಕ ಪ್ರಾಧ್ಯಾಪಕರಾದ ಡಾ. ಗುಲಾಬಿ ಪೂಜಾರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಹಿಳಾ ದಿನಾಚರಣೆಯ ಮಹತ್ವವನ್ನು ತಿಳಿಸಿ, ಇಂದಿಗೂ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಮಾತನಾಡಿದರು. ಜೊತೆಗೆ ವಿದ್ಯಾರ್ಥಿನಿಯರು ಆಧುನಿಕ ತಂತ್ರಜ್ಞಾನದ ಈ ಕಾಲದಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು., ಮಹಿಳಾ ವೇದಿಕೆಯ ಸಂಚಾಲಕರಾದ ರೋಹಿಣಿ, ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಣೂರು ಹೇರಂಬ ಮಹಾಗಣಪತಿ ಹಾಗೂ ಮಹಾಲಿಂಗೇಶ್ವರ ಸಾನಿಧ್ಯ ಕಾರಣಿಕ ಕ್ಷೇತ್ರವಾಗಿದ್ದು ಇಲ್ಲಿನ ವಾರ್ಷಿಕ ರಥೋತ್ಸವ ಅರ್ಥಪೂರ್ಣವಾಗಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ಭಾಗವಹಿಸುವಿಕೆ ಬಹುಮುಖ್ಯವಾಗಿದೆ ಎಂದು ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಹೇಳಿದರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 295ನೇ ವಾರದ ಪರಿಸರಸ್ನೇಹಿ ಕಾರ್ಯಕ್ರಮದ ಸಲುವಾಗಿ ಮಣೂರು ದೇಗುಲ ಜಾತ್ರೆಯ ಪ್ರಯುಕ್ತ ಮಣೂರು ಫ್ರೆಂಡ್ಸ್ ಮಣೂರು ಇವರ ಸಂಯೋಜನೆಯೊಂದಿಗೆ ದೇಗುಲ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ದೇಗುಲ ಸ್ವಚ್ಛತೆಯಿಂದ ಮನಸ್ಸು ಭಕ್ತಿಭಾವಕ್ಕೆ ಸಾಕ್ಷಿಯಾಗಿದೆ. ಇದಕ್ಕೆ ಇಲ್ಲಿನ ಈ ಸಂಘಟನೆಗಳ ದೇಗುಲ ಸ್ವಚ್ಛತಾ ಕಾರ್ಯಕ್ರಮ ನಿರ್ದಶನವಾಗಿದೆ ಎಂದು ಎಪ್ರಿಲ್ 2 ರಂದು ನಡೆಯುವ ಜಾತ್ರೆಯನ್ನು ಯಶಸ್ವಿಗೊಳಿಸಲು ಕರೆ ನೀಡಿದರು. ಈ ಸಂದರ್ಭದಲ್ಲಿ ಪಂಚವರ್ಣದ ಅಧ್ಯಕ್ಷ ಮನೋಹರ್ ಪೂಜಾರಿ, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಪೂಜಾರಿ, ಪಂಚವರ್ಣ ಮಹಿಳಾ ಅಧ್ಯಕ್ಷೆ ಲಲಿತಾ ಪೂಜಾರಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ತಾಲೂಕಿನ ಜಡ್ಕಲ್ ಗ್ರಾಮದ ಹಯ್ಯಂಗಾರು ಕಾನ್ಕಿ ಕನ್ಯಾಸ್ತಿ ಹೊಳೆಗೆ ಈಜಲು ಹೋದ ಗೋಳಿಹೊಳೆ ಗ್ರಾಮದ ಅರೆಶಿರೂರು ನಿವಾಸಿ ರಿಕ್ಷಾ ಚಾಲಕ ಸಂದೀಪ್ ನಾಯ್ಕ (32) ರವಿವಾರ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಗೋಳಿಹೊಳೆಯ ಹೊಟೇಲ್ ಉದ್ಯಮಿ ಬಾಬಣ್ಣ ಅವರ ಪುತ್ರರಾಗಿರುವ ಸಂದೀಪ್ ಸ್ನೇಹಿತರೊಂದಿಗೆ ತೆರಳಿದ್ದರು ಎನ್ನಲಾಗಿದೆ. ಮೃತರು ಅವಿವಾಹಿತರಾಗಿದ್ದು ಬಾಬಣ್ಣ ಅವರ ಮೂವರು ಗಂಡುಮಕ್ಕಳಲ್ಲಿ ಒಬ್ಬರಾಗಿದ್ದಾರೆ. ಸುದ್ದಿ ತಿಳಿದೊಡನೆ ಕೊಲ್ಲೂರು ಎಸ್.ಐ. ವಿನಯ ಅವರ ನೇತೃತ್ವದಲ್ಲಿ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೈಲೇಶ ಅವರು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ಅನಂತರ ವಾರಸುದಾರರಿಗೆ ಮೃತ ದೇಹ ಹಸ್ತಾಂತರಿಸಿದರು.

Read More