Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಭಾರತೀಯ  ವೈದ್ಯಕೀಯ ಪರಂಪರೆಯಲ್ಲಿ ಆಯುರ್ವೇದ ವೈದ್ಯ ಪದ್ದತಿಗೆ ಶ್ರೇಷ್ಠ ಸ್ಥಾನಮಾನವಿದೆ. ಆದರೆ ಅದನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಸಾಕ್ಷಾಧಾರದ ಕೊರತೆಯಿದ್ದು ಅದನ್ನು ನೀಗಿಸುವ ನಿಟ್ಟಿನಲ್ಲಿ ಆಯುರ್ವೇದ ವಿಜ್ಞಾನದಲ್ಲಿ ಇನ್ನಷ್ಟು ಸಂಶೋಧನೆಯನ್ನು ಕೈಗೊಳ್ಳಬೇಕಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದ್ದಾರೆ. ಆಳ್ವಾಸ್‌ನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಆಯುರ್ವೇದ ಕಾಲೇಜಿನ ಆಳ್ವಾಸ್ ’ಧನ್ವಂತರಿ ಪೂಜಾ ಮಹೊತ್ಸವ, ಶಿಶ್ಯೋಪನಯನ ಸಂಸ್ಕಾರ ಹಾಗೂ ಆಳ್ವಾಸ್ ಧನ್ವಂತರಿ ಪ್ರಶಸ್ತಿ ವಿತರಣಾ  ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಆಯುವೇದದಲ್ಲಿ ಉಜ್ವಲ ಭವಿಷ್ಯವಿದ್ದು, ಅದನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹೆಚ್ಚು ಹೆಚ್ಚು ಸಂಶೋಧನೆಗೆ ಒತ್ತು ಕೊಡಬೇಕು. ಕಾಲೇಜಿನಲ್ಲಿ ಕಲಿತ ವಿದ್ಯೆ ಕೇವಲ ಮೆದುಳಿಗೆ ಜ್ಞಾನವನ್ನು ಕೊಡುತ್ತದೆ. ತರಗತಿಯ ಹೊರಗೆ ಕಲಿತ ಬಯಲು ಶಿಕ್ಷಣ ಪ್ರಾಯೋಗಿಕತೆಯಿಂದ ಕೂಡಿದ್ದು, ಅದು ಶ್ರೇಷ್ಠ ಜ್ಞಾವನ್ನಾಗಿಸುತ್ತದೆ. ಆಯುರ್ವೇದದಲ್ಲಿರುವ ವಿಫುಲ ಅವಕಾಶಗಳನ್ನು ಅರ್ಥಮಾಡಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಪೆರಂಪಳ್ಳಿಯ ಟ್ರಿನಿಟಿ ಸೆಂಟ್ರಲ್ ಸ್ಕೂಲ್‌ನಲ್ಲಿ ನಡೆದ ಎಐಸಿಎಸ್ ಉಡುಪಿ ಮತ್ತು ದಕ್ಷಿಣ ಕನ್ನಡ ಅಂತರ್ ಶಾಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 17ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗದ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಪಡೆಯಿತು. ವಿದ್ಯಾರ್ಥಿಗಳ ಈ ಅಮೋಘ ಪ್ರದರ್ಶನದ ಕುರಿತಾಗಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಪ್ರತಿಕ್ರಿಯಿಸಿ “2024-25 ನೇ ಸಾಲಿನಲ್ಲಿ ನಮ್ಮ ಸಂಸ್ಥೆಯ  ಕ್ರೀಡಾಪಟುಗಳು ಕಬಡ್ಡಿ, ಬ್ಯಾಡ್ಮಿಂಟನ್, ಅಥ್ಲೆಟಿಕ್  ಸ್ಪರ್ಧೆಗಳಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಪ್ರಶಸ್ತಿ, ಪದಕಗಳನ್ನು ಗೆದ್ದಿರುವುದು ನಮ್ಮ ಸಂತಸವನ್ನು ಇಮ್ಮಡಿಗೊಳಿಸಿದೆ. ಇಂದು ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿಯೂ ತೃತೀಯ ಬಹುಮಾನಕ್ಕೆ ನಾವು ಭಾಜನರಾಗಿರುವುದು ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ. ಮುಂಬರುವ ದಿನಗಳಲ್ಲಿ ಪರಿಣಾಮಕಾರಿ ಶೈಕ್ಷಣಿಕ ಚಟುವಟಿಕೆಗಳ ಜೊತೆಜೊತೆಯಲ್ಲಿ ಕ್ರೀಡಾ ಚಟುವಟಿಕೆಗಳತ್ತಲೂ ಹೆಚ್ಚಿನ ಗಮನ ಕೇಂದ್ರೀಕರಿಸಲಿದ್ದೇವೆ. ನಮ್ಮ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯೇ ನಮ್ಮ ಮೂಲ ಧ್ಯೇಯವಾಗಿದೆ” ಎನ್ನುತ್ತಾ  ಅದ್ಭುತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡAತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆöÊರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ, ಕೊಠಡಿ ಸಂಖ್ಯೆ-204, 1ನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮನುಷ್ಯರಲ್ಲಿ ಪರಿಪೂರ್ಣತೆಯನ್ನು ತರುವುದೇ ಶಿಕ್ಷಣ ಎನ್ನುತ್ತಾರೆ ಸ್ವಾಮಿ ವಿವೇಕಾನಂದರು. ನೈತಿಕ ಮೌಲ್ಯಗಳಿಲ್ಲದ ಆಧುನಿಕ ಶಿಕ್ಷಣ ವಿದ್ಯಾರ್ಥಿಗಳನ್ನು ಸ್ವಾರ್ಥಿಯಾಗಿಸುತ್ತಿದೆ. ಸಂಸ್ಕಾರವಿಲ್ಲದ ಶಿಕ್ಷಣ ಮನುಷ್ಯನಲ್ಲಿ ಗುರು ಹಿರಿಯರ ಅನಾದರ, ಧಾರ್ಮಿಕ ರಿವಾಜುಗಳ ಅವಹೇಳನ, ಸದಾ ಸ್ವಹಿತ ಚಿಂತನೆಗೆ ಪ್ರಾಮುಖ್ಯತೆ ನೀಡುವಂತೆ ಮಾಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಯಳಜಿತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಸವಿನೆನಪಿನ ನೂತನ ರಂಗಮಂದಿರ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಹಾಪುರುಷರ, ಸಾಧಕರ ಬಾಲ್ಯವನ್ನು ಗಮನಿಸಿದಾಗ ಬಾಲ್ಯದ ಬದುಕು ಅವರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ವಿಷಯ ಗೊತ್ತಾಗುತ್ತದೆ. ಮಕ್ಕಳ ವಯಸ್ಸಿಗೆ ಅನುಗುಣವಾದ ಹಾಗೂ ಮುಂದೆ ಉತ್ತಮ ಬದುಕು ಕಟ್ಟಿಕೊಳ್ಳಲು ಬೇಕಾದಂತಹ ಅವಶ್ಯಕತೆಗಳಿಗೆ ಪೂರಕವಾದ ಶಿಕ್ಷಣ ದೊರೆಯಬೇಕು. ಜಾತಿ, ಧರ್ಮ, ಬದುಕು, ಪ್ರಾಣಕ್ಕಿಂತ ನನ್ನ ದೇಶ ದೊಡ್ಡದು ಎನ್ನುವಂತಹ ರಾಷ್ಟ್ರಭಕ್ತರ ನಿಮಾಣ ಕೇಂದ್ರಗಳು ಸ್ಥಾಪನೆಯಾಗಬೇಕು ಎಂದರು. ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ರಮಣಶ್ರೀ ಪ್ರತಿಷ್ಠಾನದ ಅಧ್ಯಕ್ಷ ನಾಡೋಜ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ದೇಶದ ಗಡಿಯಲ್ಲಿ ಎದುರಿನಿಂದ ಶತ್ರುಗಳು, ಆಂತರಿಕವಾಗಿ ಉಗ್ರವಾದಿಗಳ ಜತೆ ಜತೆಯಲ್ಲಿ ಹವಾಮಾನ ವೈಪರೀತ್ಯದ  ಕಠಿಣ ಸವಾಲನ್ನು ಎದುರಿಸುವ ಸೈನಿಕರಿಗೆ ನಾಗರಿಕ ಸಮಾಜದ ಪ್ರೀತ್ಯಾದರಗಳಿಂದ ಸೈನಿಕರ ಮನೋಬಲ ಹೆಚ್ಚಿಸುತ್ತದೆ. ಸರ್ಕಾರದ ಬೆನ್ನೆಲುಬಾಗಿ ನಿಂತಿರುವ ಭಾರತೀಯ  ಸೇನೆಯಿಂದಾಗಿ ಸಾಮಾನ್ಯ ನಾಗರಿಕರ  ಬದುಕು ನೆಮ್ಮದಿಯುತವಾಗಿದೆ ಮತ್ತು ನಮ್ಮ ಗಣತಂತ್ರ ಯಶಸ್ವಿ ಎನಿಸಿದೆ ಎಂದು ಲೇಖಕ,ಮಾಜಿ ಸೈನಿಕ ಬೈಂದೂರು ಚಂದ್ರಶೇಖರ ನಾವಡ ಅಭಿಪ್ರಾಯ ಪಟ್ಟರು.  ಅವರು ಬೈಂದೂರು ತಾಲೂಕು ಶಿರೂರಿನ ಜೋಗೂರು ಗ್ರಾಮದಲ್ಲಿ ಸಮರ ಭೈರವ ವೀರ ಸೈನಿಕ ಸ್ಮರಣ ಸಮಿತಿ ವತಿಯಿಂದ ಸೈನಿಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಿತಿಯ ವತಿಯಿಂದ ಮಾಜಿ ಸೈನಿಕರಾದ ಗಣಪತಿ ಗೌಡ, ಮಹಾಬಲ ಮದ್ದೋಡಿ, ಬಾಬು ಪೂಜಾರಿ ಪ್ರಭಾಕರ ನಾಯಕ್, ಜಾನ್ಸಿ ಥಾಮಸ್, ಗಣಪತಿ ಖಾರ್ವಿ, ರಾಘವೇಂದ್ರ ಖಾರ್ವಿ, ಚಂದ್ರಶೇಖರನಾವಡ, ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ರಕ್ತದಾನ ಶಿಬಿರ ಏರ್ಪಡಿಸಾಗಿತ್ತು. ಸೈನಿಕರನ್ನು ಗೌರವಿಸುವ ಈ ಅದ್ದೂರಿಯ ಕಾರ್ಯಕ್ರಮದಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ಹೋದಂತಾಗಿದೆ ಎಂದು ಸನ್ಮಾನಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ದ್ವಿತೀಯ ಪಿಯುಸಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆಯನ್ನು ನಡೆಸಲಾಯಿತು. ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ. ಎಸ್. ಅವರು ಶೈಕ್ಷಣಿಕ ಮಾಹಿತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಕೂಲಂಕುಷವಾಗಿ ವಿವರಿಸಿದರು. ಸಂಸ್ಥಾಪಕರಲ್ಲಿ ಓರ್ವರಾದ ಡಾ. ಬಿ. ಗಣನಾಥ ಶೆಟ್ಟಿ ಅವರು ವಿದ್ಯಾರ್ಥಿ – ಪೋಷಕರ ಜವಾಬ್ದಾರಿಯ ಜೊತೆಗೆ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಬಗ್ಗೆ ಸಂಸ್ಥೆಯ ಕಾಳಜಿಗಳ ಕುರಿತು ಸಮಗ್ರ ವಿವರಗಳನ್ನು ನೀಡಿದರು. ಈ ಸಂದರ್ಭದಲ್ಲಿ ಆಪಲ್ ಸರ್ವಿಸ್ ಶಿವಮೊಗ್ಗದ ವಿಜಯಕುಮಾರ್ ಅವರು ಮುಂದಿನ ಶಿಕ್ಷಣಕ್ಕೆ ದೊರಕುವ ವಿದ್ಯಾರ್ಥಿವೇತನಗಳ ಸಂಕ್ಷಿಪ್ತ ಮಾಹಿತಿಗಳನ್ನು ಒದಗಿಸಿದರು. ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಿಸಿಎಕ್ಸ್‌ ಸಿಸ್ಟಮ್ಸ್ ಲಿಮಿಟೆಡ್ ಅರ್ಪಿಸುವ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯದ ಪರಮ ಪೂಜ್ಯ ಪೀಠಾದಿಪತಿಗಳಾದ ಡಾ. ಪರಮಪೂಜ್ಯ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡಮಾಡುವ ಪ್ರತಿಷ್ಠಿತ ಶ್ರೀ ಪರಿಮಳ ಪ್ರಶಸ್ತಿ 2025 ಈ ಪ್ರಶಸ್ತಿಗೆ ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ರೂವಾರಿ, ಶಿಕ್ಷಣ ಕ್ಷೇತ್ರದ ಕನಸುಗಾರರಾದ ಗಣೇಶ್ ಮೊಗವೀರ ಅವರನ್ನು ಆಯ್ಕೆ ಮಾಡಲಾಗಿದೆ. ಅವರು ಇದುವರೆಗೆ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಮಾರ್ಚ್ 7 ರಂದು ಮಂತ್ರಾಲಯದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಆಯ್ಕೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗಣತಂತ್ರ ರಾಷ್ಟ್ರ ಭಾರತದ ಸೈನ್ಯದ ಬಲ ಮತ್ತು ಅಗಾಧತೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬಿಂಬಿಸುವ ಸರಕಾರದ ಪ್ರಯತ್ನಕ್ಕೆ ನಾವು ಬೆಂಬಲ ಸೂಚಿಸಬೇಕು. ಹಾಗೆಯೇ ದೇಶದ ವೈವಿಧ್ಯಮಯ ಕಲೆ, ಸಂಸ್ಕೃತಿಯನ್ನು ಅನಾವರಣಗೊಳಿಸುವ ದಿನವಾದ ಗಣರಾಜ್ಯೋತ್ಸವದ ಆಚರಣೆಯ ಮಹತ್ವವನ್ನು ಎಲ್ಲ ನಾಗರೀಕರು ವಿಶೇಷವಾಗಿ‌‌ ಪರಿಗಣಿಸಬೇಕು ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವದಂದು ಧ್ವಜಾರೋಹಣಗೈದ ಕಾಲೇಜಿನ‌ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಕರೆ ನೀಡಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೀತೇಶ್ ಶೆಟ್ಟಿ ಅವರು ಗಣತಂತ್ರ ದಿನದ ಶುಭಾಶಯಗಳನ್ನು ಕೋರಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ರಾಮ್ ಶೆಟ್ಟಿ ಅವರು ಉಪಸ್ಥಿತರಿದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ‌ಸಂದೀಪ್ ಪೂಜಾರಿ ಅವರು ಧ್ವಜಾರೋಹಣ ಪ್ರಕ್ರಿಯೆಯನ್ನು ನಿರ್ದೇಶಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ. ಬಿ ಅವರು ಭಾರತದ ಸಂವಿಧಾನ ರಚನೆಯ ಅರ್ಥ ವಿಸ್ತಾರವನ್ನು ತಿಳಿಸಿ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಜನಕನೆಂದು ಕರೆಯಲ್ಪಡುವ ಡಾ. ಬಿ.ಆರ್. ಅಂಬೇಡ್ಕರ್ ಅವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಸಮಿತಿ ಇದರ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸಲಾಗಿರುವ ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಮಹಾಭಿಯಾನ ಗಂಗೊಳ್ಳಿಯ ಸಮುದ್ರ ಕಿನಾರೆಯಲ್ಲಿ ಭಾನುವಾರ ನಡೆಯಿತು. ಸಮುದ್ರಕ್ಕೆ ಕ್ಷೀರಾರ್ಘ್ಯ ಸಲ್ಲಿಸಿ ಪ್ರಾರ್ಥಿಸಿದ ಬಳಿಕ ಏಕಕಾಲದಲ್ಲಿ 108 ಜನರ ಗುಂಪುಗಳಿಂದ ಗಂಗೊಳ್ಳಿಯ ಮಲ್ಯರಬೆಟ್ಟು, ಖಾರ್ವಿಕೇರಿ ಹಾಗೂ ಲೈಟ್‌ಹೌಸ್ ಸಮೀಪ ಸಮುದ್ರ ಕಿನಾರೆಯ ಮೂರು ಸ್ಥಳಗಳಲ್ಲಿ ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರವನ್ನು ಪಠಿಸಲಾಯಿತು. ಸಂಜೆ 4 ಗಂಟೆಯಿಂದ ನಿರಂತರವಾಗಿ 7 ಬಾರಿ ಶ್ರೀ ವಿಷ್ಣು ಸಹಸ್ರನಾಮ ಪಠಿಸಲಾಯಿತು. ಈ ಸಂದರ್ಭ ಮಾತನಾಡಿದ ಉಮಾನಾಥ ದೇವಾಡಿಗ, ವಿಷ್ಣುತತ್ತ್ವ ವಿಶ್ವವ್ಯಾಪಿ. ವಿಶ್ವದ ಆಗುಹೋಗುಗಳ ಮೇಲೆ ಇದರ ಪ್ರಭಾವವಿದೆ. ವಿಶ್ವದುದ್ದಗಲಕ್ಕೂ ಸಮಷ್ಟಿಯ ಒಳಿತಿಗಾಗಿ ವಿಷ್ಣು ಸಹಸ್ರನಾಮ ಪಠಿಸುವ ಪರಿಪಾಠವಿದೆ. ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಾಧ್ಯವೆಂಬುದನ್ನು ಪ್ರಯೋಗಗಳ ಮೂಲಕ ದೃಢಪಟ್ಟಿದೆ. ಸಮುದ್ರೋತ್ಪಾತ, ಪ್ರಕೃತಿ ವಿಕೋಪ, ರಾಷ್ಟ್ರ ಕ್ಷೋಭೆ ಮುಂತಾದ ವಿಕೃತಿಯನ್ನು ಆಧ್ಯಾತ್ಮದ ಹಿನ್ನಲೆಯಲ್ಲಿ ತಡೆಯುವುದು. ವ್ಯಕ್ತಿಗತ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಾಗಿ ಬಂದ ಹಾದಿ ಅದ್ಭುತ. ಗ್ರಾಮೀಣ ಪ್ರದೇಶದಲ್ಲಿ ಶಾಲೆಯನ್ನು ಪ್ರಾರಂಭಿಸಿದ ಈ ಭಾಗದ ಹಿರಿಯರ ಶ್ರಮ ಸಾರ್ಥಕವಾದಂತಿದೆ. ಅಧ್ಯಾಪಕ ವೃತ್ತಿ ನಡೆಸಲು ನಾಚಿಕೆ ಪಡುತ್ತಿದ್ದ ಅಂದಿನ ದಿನಗಳಲ್ಲಿ ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ನಾಲ್ವರು ಶಿಕ್ಷಕರು ಪ್ರಾತ: ಸ್ಮರಣೀಯರು. ದಾನಿಗಳ, ಹಳೆ ವಿದ್ಯಾರ್ಥಿಗಳ ಹಾಗೂ ವಿದ್ಯಾಭಿಮಾನಿಗಳ ಸಹಕಾರದಿಂದ ಶಾಲೆ ಅದ್ಭುತವಾಗಿ ಬೆಳೆದು ನಿಂತಿದೆ. ಕನ್ನಡ ಮಾಧ್ಯಮ ಶಾಲೆಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದ್ದು, ಸಹಸ್ರಾರು ವಿದ್ಯಾರ್ಥಿಗಳ ಪಾಲಿಗೆ ವರದಾನವಾಗಿರುವ ಈ ಶಾಲೆಯನ್ನು ಬೆಳೆಸಬೇಕಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಚಂದ್ರಶೇಖರ ಶೆಟ್ಟಿ ಹೇಳಿದರು. ಸೇನಾಪುರ ಗ್ರಾಮದ ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಅಮೃತ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಶ್ರೀಕಾಂತ ಶ್ಯಾನುಭಾಗ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉದ್ಯಮಿ ಮಂಜುನಾಥ ಪೂಜಾರಿ ಸೇನಾಪುರ,…

Read More