ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜ. 02 ರಂದು ಶ್ರೀ ದುರ್ಗಾ ಆಂಗ್ಲ ಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಸಂಸ್ಕೃತ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಯ ಪಥ ನಿರಂತರವಾಗಿರಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಹಾರೈಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಸಾಮರ್ಥ್ಯ ಹಾಗೂ ಪ್ರತಿಭೆ ಅಡಗಿರುತ್ತದೆ. ಅದನ್ನು ನಿರೇರೆದು ಪೋಷಿಸಿದಾಗ ಮಾತ್ರ ಆ ಮಗುವು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ. ಇದಕ್ಕೆ ಎಲ್ಲರೂ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ಬ್ರಹ್ಮಾವರ ವಲಯದ ಕೊಕ್ಕರ್ಣೆ ದುರ್ಗಾ ಆಂಗ್ಲಮಾಧ್ಯಮ ಶಾಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಹಾಗೂ ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೈದೆಬೆಟ್ಟು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ವಿಶೇಷ ಪ್ರತಿಭೆಗಳನ್ನು ಗುರುತಿಸಿ, ಅದನ್ನು ಬೆಳೆಯುವಂತೆ ಮಾಡುವುದು ಪೋಷಕರು, ಶಿಕ್ಷಕರು ಹಾಗೂ ಸಮಾಜದ ಜವಾಬ್ದಾರಿಯಾಗಿದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣ ಮಾಡುವ ಉದ್ದೇಶದಿಂದ ಸರಕಾರ ಪ್ರತೀ ವರ್ಷ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿದ್ದು, ಪ್ರತಿಭೆ ಹೊಂದಿರುವ ಎಲ್ಲಾ ಮಕ್ಕಳಿಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಭವಿಷ್ಯದ ಹೊಸ ಮತದಾರರಿಗಾಗಿ ರೂಪುಗೊಂಡಿರುವ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ಚುನಾವಣಾ ಸಾಕ್ಷರತಾ ಕ್ಲಬ್ ತರಗತಿ ಆಧಾರಿತ ಚಟುವಟಿಕೆಯಡಿ ಶಂಕರನಾರಾಯಣ ಗ್ರಾಮ ಪಂಚಾಯತ್ಗೆ ಭೇಟಿ ನೀಡಿ ಚುನಾವಣಾ ಹಕ್ಕುಗಳ ಬಗ್ಗೆ ಅರಿವು, ಮತದಾನದ ಪ್ರಕ್ರಿಯೆ, ಸಮಾಜದಲ್ಲಿ ಮತಹಕ್ಕು ಜಾಗೃತಿಯನ್ನು ಉತ್ತೇಜಿಸುವಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮೇಶ್ ಶೆಟ್ಟಿ ಕಲ್ಗದ್ದೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ವೇತಾ ಲತಾ ಎಚ್. ಜಿ., ಕಾರ್ಯದರ್ಶಿ ನಾಗೇಶ್ ಬಿ. ಮತ್ತು ಸಿಬ್ಬಂದಿಗಳು, ಶಾಲೆಯ ಚುನಾವಣಾ ಸಾಕ್ಷರತಾ ಕ್ಲಬ್ನ ನೋಡೆಲ್ ಶಿಕ್ಷಕರಾದ ಉಮೇಶ್ ಶೆಟ್ಟಿ ಮತ್ತು ರೇಷ್ಮಾ ಡಿ. ರೆಬೆಲ್ಲೋ, ಶಿಕ್ಷಕಿ ಬೇಬಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲಾ ಸಂಸ್ಥೆಗಳು ಊರನ್ನು ಸಾಂಸ್ಕೃತಿಕವಾಗಿ ಸಮೃದ್ಧವನ್ನಾಗಿಸುತ್ತದೆ. ದಿನವೂ ದಣಿಯುವ ದೇಹ ಹಾಗೂ ಮನಸ್ಸಿಗೆ ಮತ್ತೆ ಚೈತನ್ಯ ತುಂಬುವ ಕಾರ್ಯವನ್ನು ಕ್ರೀಡೆ, ಕಲೆ, ಸಾಹಿತ್ಯದಂತಹ ಸದಭಿರುಚಿಯ ಚಟುವಟಿಕೆಗಳು ಮಾಡುತ್ತದೆ ಎಂದು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ ಪಿ. ನಾಯ್ಕ್ ಹೇಳಿದರು. ಅವರು ಸುರಭಿ ರಿ. ಬೈಂದೂರು ಇದರ ರಜತಯಾನದ ತಿಂಗಳ ತಿರುಳು ಕಾರ್ಯಕ್ರಮದ ಅಂಗವಾಗಿ ಸಮಷ್ಟಿ ಪ್ರತಿಷ್ಠಾನ ರಿ. ಹಾಗೂ ಸ್ನೇಹ ತರಂಗ ಬೈಂದೂರು ಸಹಯೋಗದೊಂದಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಜನವರಿ 05ರಿಂದ 07ರ ತನಕ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಯಕ್ಷ – ಗೊಂಬೆ ವೈಭವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಬುಧವಾರ ಬಿಡುಗಡೆಗೊಳಿಸಿ ಮಾತನಾಡಿದರು. ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮೊದಲ ದಿನದಂದು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ ಉಪ್ಪಿನಕುದ್ರು ಇವರಿಂದ ಚೂಡಾಮಣಿ – ಲಂಕಾದಹನ ಗೊಂಬೆಯಾಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗ್ರಾಮ ಪಂಚಾಯತ್ ಕೊರ್ಗಿ ಇವರ ಬೆಂಬಲದೊಂದಿಗೆ ಹೊಸವರ್ಷದ ದಿನದಂದು ಕೊರ್ಗಿ ಗ್ರಾಮದ ಹೆಸ್ಕೂತ್ತೂರರಿಂದ ಹೊಸಮಠದವರೆಗೆ ಸುಮಾರು 8 ಕಿಲೊಮೀಟರ್ ನಷ್ಟು ದೂರ ರಸ್ತೆಯ ಎರಡೂ ಬದಿಯ ಪ್ಲಾಸ್ಟಿಕ್ ಮತ್ತು ಇತರ ತ್ಯಾಜ್ಯಗಳನ್ನು ಸ್ವಚ್ಚಗೊಳಿಸುವ ಮೂಲಕ ಮಾದರಿಯಾದರು. ಕೊರ್ಗಿ ಗ್ರಾಮದ ಅಲ್ಲಲ್ಲಿ ಈ ನನ್ನ ಗ್ರಾಮವನ್ನು ಸ್ವಚ್ಚವಾಗಿಡಲು ಹೇಳುವುದರ ಜೊತೆಗೆ ನಾನು ಸ್ವಚ್ಚತೆಯಲ್ಲಿ ಕೊರ್ಗಿ ಗ್ರಾಮವನ್ನು ಇಡುತ್ತೇನೆ ಎಂಬ ಬಿತ್ತಿ ಪತ್ರ ಅಂಟಿಸುವ ಮೂಲಕ ಜಾಗ್ರತಿ ಮೂಡಿಸಿದರು. ಸುಮಾರು 20 ಕ್ವಿಂಟಲ್ಗೂ ಹೆಚ್ಚು ಪ್ಲಾಸ್ಟಿಕ್ ಮತ್ತು ಇತರ ತ್ಯಾಜ್ಯಗಳನ್ನು ಹೆಕ್ಕಿ ವಿಲೇವಾರಿ ಮಾಡುವುದರ ಮೂಲಕ ಟೀಮ್ ಊರ್ಮನಿ ಮಕ್ಕಳ ಸಮಾಜ ಸೇವಾ ತಂಡವು ಇತರರಿಗೂ ಮಾದರಿ. ಹೊಸವರ್ಷಕ್ಕೆ ಈ ಕಾಲದ ಹುಡುಗರಿಗೆ ಟೀಮ್ ಊರ್ಮನಿ ಮಕ್ಕಳ ತಂಡದ ಹುಡುಗರ ಈ ಕಾರ್ಯಕ್ಕೆ ಮೆಚ್ಚಲೆಬೇಕು. ಕೊರ್ಗಿ ಗ್ರಾಮದ ಸ್ವಚ್ಚತೆಗಾಗಿ ಬೆಳಿಗ್ಗೆ 9:00 ರಿಂದ ಸಂಜೆ 6:30 ತನಕ ಒಂದು ನಿಮಿಷವೂ ಬಿಡುವಿಲ್ಲದೆ ಮಾಡಿದ ಈ ಕಾರ್ಯಕ್ಕೆ ಗ್ರಾಮಸ್ಥರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಕ್ಷಗಾನ ಮತ್ತು ಇನ್ನಿತರ ಕಲೆಯ ಮೂಲಕ ವಿದ್ಯಾರ್ಥಿಗಳನ್ನು ಒಬ್ಬ ಶ್ರೇಷ್ಠ ನಾಗರಿಕನಾಗಿ ರೂಪುಗೊಳ್ಳುವಂತೆ ಮಾಡಲು ಸಾಧ್ಯವಿದೆ. ಕಲೆಯ ಮೂಲಕ ಸಮಾಜಕ್ಕೆ ಯಕ್ಷ ಶಿಕ್ಷಣ ಟ್ರಸ್ಟ್ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ಅವರು ಇಲ್ಲಿನ ಕಲಾಮಂದಿರದಲ್ಲಿ ಬುಧವಾರ ಪ್ರದರ್ಶನ ಸಂಘಟನಾ ಸಮಿತಿ ಕುಂದಾಪುರ ಯಕ್ಷ ಶಿಕ್ಷಣ ಟ್ರಸ್ಟ್ ರಿ. ಉಡುಪಿ ಇವರು ಆಯೋಜಿಸಿರುವ ಕಿಶೋರ ಯಕ್ಷಗಾನ ಸಂಭ್ರಮ ಪ್ರದರ್ಶನಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿ 22 ಪ್ರೌಢಶಾಲಾ ವಿಭಾಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು ಕರಾವಳಿಯ ಕಲೆಯಾದ ಯಕ್ಷಗಾನದಲ್ಲಿ ಕುಣಿತ, ಹಾಡುಗಾರಿಕೆ, ಸಂಭಾಷಣೆ ಮತ್ತು ತಾಳ ವಾದ್ಯಗಳ ತರಬೇತಿ ನೀಡಲಾಗುತ್ತಿದೆ. ಎಲ್ಲ ರೀತಿಯ ದೈಹಿಕ ಹಾಗೂ ಮಾನಸಿಕವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಬ್ರಿ ತಾಲೂಕಿನ ಶೇಡಿಮನೆ ಗ್ರಾಮದ ಅರಸಮ್ಮಕಾನು ಅಂಚೆ ಕಚೇರಿ ಬಳಿ ಡಿ.29ರಂದು ಎದುರು ಕಡೆಯಿಂದ ಅತೀ ವೇಗವಾಗಿ ಬಂದ ಬಲೇನೋ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಬೈಕ್ ಸವಾರ ರಂಜಿತ್ ಅವರು ಗಂಭೀರವಾಗಿ ಗಾಯಗೊಂಡರು. ಸವಾರ ನವೀನ್ (21) ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡ ರಂಜೀತ್ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನವೀನ್ ನೀಡಿರುವ ದೂರಿನಂತೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಜಿಲ್ಲೆಯಲ್ಲಿ ನಡೆದ ಮೌಲ್ಯಮಾಪನಾ ಶಿಬಿರದಲ್ಲಿ 426 ವಿಕಲಚೇತನರು ಹಾಗೂ 283 ಹಿರಿಯ ನಾಗರಿಕರು ವಿವಿಧ ಸಾಧನ ಸಲಕರಣೆಗಳನ್ನು ಪಡೆಯಲು ಅಲಿಂಕೋ ಸಂಸ್ಥೆಯಿಂದ ಆಯ್ಕೆ ಮಾಡಲಾಗಿರುತ್ತದೆ. ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಮಾತ್ರ ಅಲಿಂಕೋ ಸಂಸ್ಥೆ ವತಿಯಿಂದ ಜಿಲ್ಲಾಡಳಿತ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಸಾಧನ-ಸಲಕರಣೆಗಳ ವಿತರಣಾ ಕಾರ್ಯಕ್ರಮವು ಜನವರಿ 6 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಹಾಜರಾಗುವ ವಿಕಲಚೇತನ ಮತ್ತು ಹಿರಿಯ ನಾಗರಿಕರ ಫಲಾನುಭವಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಾರ್ಯಕ್ರಮಕ್ಕೆ ಬರುವ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತಿಯ ಮೊದಲ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಜಯಂತಿ ಖಾರ್ವಿ ಮತ್ತು ಉಪಾಧ್ಯಕ್ಷರಾಗಿ ಎಸ್ಡಿಪಿಐ ಬೆಂಬಲಿತ ಸದಸ್ಯ ತಬ್ರೇಜ್ ಆಯ್ಕೆಯಾಗಿದ್ದಾರೆ. ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ (ಮಹಿಳೆ) ಮೀಸಲಾಗಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಗಂಗೊಳ್ಳಿ-6 ಕ್ಷೇತ್ರದಿಂದ ಗೆದ್ದ ಕಾಂಗ್ರೆಸ್ ಬೆಂಬಲಿತ ಜಯಂತಿ ಖಾರ್ವಿ ಮತ್ತು ಗಂಗೊಳ್ಳಿ-1 ಕ್ಷೇತ್ರದಿಂದ ಗೆದ್ದ ಬಿಜೆಪಿ ಬೆಂಬಲಿತ ರೇಖಾ ಖಾರ್ವಿ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರಿಂದ ಉಪಾಧ್ಯಕ್ಷ ಸ್ಥಾನಕ್ಕೆ ಗಂಗೊಳ್ಳಿ-2 ಕ್ಷೇತ್ರದಿಂದ ಗೆದ್ದ ಎಸ್ಡಿಪಿಐ ಬೆಂಬಲಿಕ ತಬ್ರೇಜ್ ಮತ್ತು ಗಂಗೊಳ್ಳಿ-1 ಕ್ಷೇತ್ರದಿಂದ ಗೆದ್ದ ಬಿಜೆಪಿ ಬೆಂಬಲಿತ ನಾಗರಾಜ ಖಾರ್ವಿ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜಯಂತಿ ಖಾರ್ವಿ 19 ಮತಗಳನ್ನು ಪಡೆದರೆ ರೇಖಾ ಖಾರ್ವಿ 13 ಮತಗಳನ್ನು ಪಡೆದರು. ಒಂದು ಮತ ಅಸಿಂಧುವಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ತಬ್ರೇಜ್ 18 ಮತಗಳನ್ನು ಮತ್ತು ನಾಗರಾಜ ಖಾರ್ವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರ್ಯರು ಕರ್ನಾಟಕದಲ್ಲಿ ಶಿಲ್ಪಕಲೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಬೇಲೂರು ಹಾಗೂ ಹಳೇಬೀಡು ದೇವಸ್ಥಾನಕ್ಕೆ ಅವರ ಶಿಲ್ಪಕಲೆಯ ಕೊಡುಗೆಯು ಅಪಾರವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಭಾಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಶೋಕಾಚರಣೆ ಹಿನ್ನೆಲೆ, ಸಾಂಕೇತಿಕವಾಗಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ಜಕಣಾಚಾರಿ ಅವರ ಮಗ ಡಂಕಣಾಚಾರಿ ಕೂಡ ಶಿಲ್ಪಕಲೆಗೆ ಹೆಚ್ಚಿನ ಒತ್ತು ನೀಡಿದ್ದರು. ರಾಜ್ಯದ ಶಿಲ್ಪಕಲೆ ಕ್ಷೇತ್ರದಲ್ಲಿ ಜಕಣಾಚಾರಿ ಬಿಟ್ಟರೆ ಬೇರೆ ಯಾವ ಶಿಲ್ಪಿಯೂ ಅವರನ್ನು ಮೀರಿಸುವವರಿಲ್ಲ. ರಾಜ್ಯ ಸರ್ಕಾರವು ಶಿಲ್ಪಕಲೆಗೆ ಅತಿ ಹೆಚ್ಚು ಕೊಡುಗೆ ನೀಡುವ ಶಿಲ್ಪಿಗಳಿಗೆ “ಜಕಣಾಚಾರಿ ಪ್ರಶಸ್ತಿ” ನೀಡಿ ಗೌರವಿಸಲಾಗುತ್ತದೆ ಎಂದರು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ…
