Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮ ಪಂಚಾಯಿತಿಗಳಲ್ಲಿನ ಜಲ್ ಜೀವನ್ ಮಿಷನ್ ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ, ಮೊಬೈಲ್ ಟವರ್ ಲೈಸೆನ್ಸ್ ನೀಡುವ ಬಗ್ಗೆ ಹಾಗೂ ಸಾರ್ವಜನಿಕರಿಗೆ ಕ್ಲಪ್ತ ಸಮಯದಲ್ಲಿ ಸೇವೆಯನ್ನು ಒದಗಿಸಿ ಕ್ರಮ ಕೈಗೊಳ್ಳುವ ಬಗ್ಗೆ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ಬಗ್ಗೆ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಪ್ರತಿಕಿಯಿಸಿ, ಸಮಸ್ಯೆ ಪರಿಹಾರಕ್ಕಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಾ,ಪಂ ಕಾರ್ಯನಿರ್ವಹಣಾಧಿಕಾರಿ, ಇಂಜಿನಿಯರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ  ಕುಂದಾಪುರ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಜರೂರು ಸಭೆ ನಡೆಸಿ ಸಮಸ್ಯೆ ಪರಿಹರಿಸುವ ಬಗ್ಗೆ ತಿಳಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಆರ್.ಎನ್. ಶೆಟ್ಟಿ ಹಾಲ್ ನಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ನಡೆದ ಜನಸ್ಪಂದನ ಕಾರ್ಯಕ್ರಮ ಕೇವಲ ಕಾಟಚಾರದ ಸಭೆಯಂತಾಗಿದೆ. ಮುಖ್ಯಮಂತ್ರಿಯವರ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ಜನಸ್ಪಂದನ ಕಾರ್ಯಕ್ರಮವನ್ನು ಕಾಟಚಾರಕ್ಕೆ ಮಾಡಿದ ಸಂಬಂಧಿತ ಅಧಿಕಾರಿಗಳ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ. ಪತ್ರಿಕೆಯವರನ್ನು, ವಿವಿಧ ಸ್ಥರದ ಜನಪ್ರತಿನಿದಿನಗಳನ್ನು ಕಾಟಚಾರಕ್ಕೆ ಸಭೆಗೆ ಆಹ್ವಾನ ನೀಡಿ, ಸಭೆಯಲ್ಲಿ ಅರ್ಜಿಗಳ ವಿಲೇವಾರಿ ಹೆಸರಲ್ಲಿ ಮಾಧ್ಯಮದವರನ್ನು, ಜನಪ್ರತಿನಿದಿನಗಳನ್ನು, ಸಾರ್ವಜನಿಕರನ್ನು ಕತ್ತಲೆಯಲ್ಲಿ ಇಟ್ಟು ಅವರಷ್ಟಕ್ಕೆ ಅವರು ಸಭೆ ನಡೆಸಿದ್ದು ಸರ್ಕಾರದ ಜನಪರ ಕಾರ್ಯಕ್ರಮವಾದ ಜನ ಸ್ಪಂದನ ಕಾರ್ಯಕ್ರಮಕ್ಕೆ ಮಾಡಿದ ಅವಮಾನವಾಗಿದೆ. ಈ ಬಗ್ಗೆ ಕುಂದಾಪುರ ಹಾಗೂ ಬೈಂದೂರು ಶಾಸಕರ ಎದುರಲ್ಲಿ ಧ್ವನಿ ಎತ್ತಿದ ಸಾರ್ವಜನಿಕರು ಹಾಗೂ ಮಾಧ್ಯಮದವರ ವಿರುದ್ಧ ಜಿಲ್ಲಾಡಳಿತ ಬಾಯಿಮುಚ್ಚಿಸುವ ಪ್ರಯತ್ನ ಮಾಡಿದ್ದು ಜನವಿರೋಧಿ ಕ್ರಮವಾಗಿದೆ. ಸರಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ಜನಸ್ಪಂದನ ಕಾರ್ಯಕ್ರಮವನ್ನು ಕಾಟಚಾರಕ್ಕೆ ಮಾಡಿದ ಸಂಬಂಧಿತ ಅಧಿಕಾರಿಗಳ ಮೇಲೆ…

Read More

ಕುಂದಾಪುರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ನೀಟ್‌ನಲ್ಲಿ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ. ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯದಂತಹ ಕೋರ್ಸುಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ನಿಗಮದ ವೆಬ್‌ಸೈಟ್ kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 7 ಕೊನೆಯ ದಿನ. ನಿಗಮದ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ದಾಖಲಾತಿಗಳನ್ನು ಜುಲೈ 8 ರ ಒಳಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, 1ನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂಖ್ಯೆ: 0820-2574990 ಅಥವಾ ಉಡುಪಿ ದೂ.ಸಂ: 0820-2574596, ಕಾರ್ಕಳ ದೂ.ಸಂ: 08258-231101 ಹಾಗೂ ಕುಂದಾಪುರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ರಾಜ್ಯಾದ್ಯಂತ ಕಬಾಬ್, ಮೀನು ಫ್ರೈಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿದರೆ 7 ವರ್ಷಗಳವರೆಗೆ ಗರಿಷ್ಠ ಶಿಕ್ಷೆ ಹಾಗೂ 10 ಲಕ್ಷ ರೂ.ವರೆಗೆ ದಂಡ ವಿಧಿಸಲು ಸರ್ಕಾರ ಮುಂದಾಗಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ರಾಸಾಯನಿಕ ಮಾದರಿ ಕಂಡುಬಂದಿದೆ. ಈ ಎರಡು ಅಂಶಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಎಂದು ವರದಿ ಬಂದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತ ಈ ತೀರ್ಮಾನ ಕೈಗೊಂಡಿದೆ. ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಈ ಹಿಂದೆ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿ ಬಳಸುವ ಕೃತಕ ಬಣ್ಣಗಳಲ್ಲಿ ಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿತ್ತು. ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನ FSSAI…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮೊದಲ ಭಾರಿಗೆ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದರು. ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣವಚನ ತೆಗೆದುಕೊಂಡ ಕೋಟ ಈ ವೇಳೆ ಅವರು ಕನ್ನಡದ ಶಾಲು ಧರಿಸಿದ್ದು ವಿಶೇಷವಾಗಿತ್ತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿನ್ನು ಸಾಸ್ತಾನದಲ್ಲಿ ಸನ್ಮಾನಿಸಿದ ಬಳಿಕ ಅಭಿನಂದನಾ ಭಾಷಣದಲ್ಲಿ ಸಂಸತ್ತಿನ ಪ್ರಮಾಣ ಮಾಡುವಾಗ ಕನ್ನಡದ ಶಾಲು ಹಾಕಿಕೊಂಡು ಕನ್ನಡದಲ್ಲಿ ಪ್ರಮಾಣ ವಚನ ಮಾಡಬೇಕೆಂದು ಉಡುಪಿ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ವಿನಂತಿಸಿದ್ದರು. ಅಂದು ಹೊದಿಸಲಾಗಿದ್ದ ಕನ್ನಡ ಶಾಲನ್ನು ಧರಿಸಿ ಕೋಟ ಅವರು ಪ್ರಮಾಣವಚನ ಸ್ವೀಕರಿಸಿದರು. ► ಕಬಾಬ್, ಫಿಶ್ ಫ್ರೈಗೆ ಕೃತಕ ಬಣ್ಣ ಬಳಕೆಗೆ ನಿರ್ಬಂರ್ಧ. ಉಲ್ಲಂಘಿಸಿದ್ರೆ ಕಠಿಣ ಶಿಕ್ಷೆ, ದಂಡ – https://kundapraa.com/?p=73504 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 18ನೇ ಲೋಕಸಭೆಗೆ ನಾಲ್ಕನೇ ಭಾರಿ ಸಂಸತ್‌ ಸದಸ್ಯರಾಗಿ ಬಿ.ವೈ. ರಾಘವೇಂದ್ರ ಅವರು ಪ್ರಮಾಣ ವಚನವನ್ನು ಸ್ವೀಕರಿಸಿದರು. ಸಂಸತ್‌ ಸದಸ್ಯರಾಗಿ ಪ್ರಮಾಣ ವಚನ ತೆಗೆದುಕೊಳ್ಳುವ ಸಂದರ್ಭದಲ್ಲಿ ಬಹುತೇಕ ಸಂಸದರು ದೇವರಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಬಿ ವೈ ರಾಘವೇಂದ್ರರವರು ಮತದಾರ ದೇವರು ಎಂದು ಪ್ರಮಾಣ ವಚನವನ್ನು ಸ್ವೀಕರಿಸಿದರು. ► ಕಬಾಬ್, ಫಿಶ್ ಫ್ರೈಗೆ ಕೃತಕ ಬಣ್ಣ ಬಳಕೆಗೆ ನಿರ್ಬಂರ್ಧ. ಉಲ್ಲಂಘಿಸಿದ್ರೆ ಕಠಿಣ ಶಿಕ್ಷೆ, ದಂಡ – https://kundapraa.com/?p=73504 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗೋ ಕಳ್ಳತನ ಹಾಗೂ ಗೋ ಕಳ್ಳತನಕ್ಕೆ ಯತ್ನಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ದಸ್ತಗಿರಿ ಮಾಡಿದ್ದಾರೆ. ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ಕಳವಿಗೆ ಯತ್ನ:ಕಮಲಶಿಲೆ ದೇವಸ್ಥಾನ ದಲ್ಲಿ ಜೂ. 15ರ ತಡರಾತ್ರಿ ಗೋ ಕಳ್ಳತನಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಶನಿವಾರ ಗೋಳಿಯಂಗಡಿ ಸಮೀಪ ಬಂಧಿಸಿದ್ದಾರೆ. ಮಂಗಳೂರು ಬಜ್ಜೆಯ ವಾಜೀದ್ ಜೆ. (26) ಹಾಗೂ ಫೈಜಲ್ (40) ಬಂಧಿತರು. ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ಮೊಹಮ್ಮದ್‌ ಶರೋಝ್‌ ಎಂಬಾತನ ಪತ್ತೆಗೆ ಬಲೆ ಬೀಸಲಾಗಿದೆ.ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಿರೂರು ರಸ್ತೆ ಬದಿಯ ಗೋವುಗಳನ್ನು ಕದ್ದೊಯ್ದಿದ್ದ ಕಳ್ಳರ ಬಂಧನ:ಶಿರೂರು ಪೇಟೆಯ ಮಂಜುನಾಥ ಹೊಟೇಲ್ ಎದುರುಗಡೆ ಖಾಲಿ ಜಾಗದಲ್ಲಿ ಮಲಗಿದ್ದ ಗೋವುಗಳನ್ನು ಕದ್ದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಡಿ ನಿವಾಸಿಗಳಾದ ಅಬ್ದುಲ್ ಸಮಾದ್ (27 ) ಹಾಗೂ ಅಬ್ದುಲ್ ರೆಹಮಾನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಾಲಾಡಿಯಲ್ಲಿ ಅಪ್ತಾಪ್ತ ವಯಸ್ಸಿನ ಯುವತಿಗೆ ತೊಂಬಟ್ಟು ಗ್ರಾಮದ ಯುವಕನೊಂದಿಗೆ ನಡೆದ ಬಾಲ್ಯ ವಿವಾಹದ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಲಾಡಿ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಮೇ 21ರಂದು ನಡೆದ ಬಾಲ್ಯ ವಿವಾಹದ ಬಗ್ಗೆ ಕುಂದಾಪುರ ಸಹಾಯಕ ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿಗೆ ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಿ, ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಬಾಲ್ಯ ವಿವಾಹ ಪ್ರಕರಣದಲ್ಲಿ ತೊಂಬಟ್ಟು ನಿವಾಸಿ ಭರತ್ ಶೆಟ್ಟಿ, ಯುವತಿಯ ತಂದೆ ಸಂತೋಷ್ ಶೆಟ್ಟಿ ಹಾಗೂ ಆಕೆಯ ಬಾವ ರಾಜೇಶ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಹಾಲಾಡಿಯ ಅಪ್ರಾಪ್ತ ವಯಸ್ಸಿನ ಯುವತಿ ಹಾಗೂ ತೊಂಬಟ್ಟಿನ ಭರತ್ ಶೆಟ್ಟಿ ಪರಸ್ಪರ ಪ್ರೀತಿಸುತ್ತಿದ್ದರು. ಯುವಕ ಮದುವೆಯಾಗುವಂತೆ ಬಾಲಕಿಯನ್ನು ಒತ್ತಾಯಿಸುತ್ತಿದ್ದ. ಬಾಲಕಿ ಕೂಡ ಆತನೊಂದಿಗೆ ಮದುವೆ ಮಾಡಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದ್ದಾಗಿ ಹೇಳಿದ್ದಾಳೆ.ಬಾಲಕಿಯ ತಂದೆಯು ಮಗಳ ಬೆದರಿಕೆಗೆ ಹೆದರಿ ಮದುವೆ ಮಾಡಿಸಿಕೊಟ್ಟಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಸ್ತೆ ದುರಸ್ತಿಗಾಗಿ ಪಂಚಾಯತಿಗೆ ಹಲವು ಭಾರಿ ಬೇಡಿಕೆ ಇರಿಸಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ, ಭಾನುವಾರ ಗ್ರಾಮದ ಯುವಕರೇ ಒಟ್ಟಾಗಿ ರಸ್ತೆ ಹೊಂಡಗಳನ್ನು ಮುಚ್ಚಿ ದುರಸ್ತಿಗಳಿಸಿದ್ದಾರೆ. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ದುರ್ಮಿಯ ತಿರಂಗಾ ಫ್ರೆಂಡ್ಸ್ ಸದಸ್ಯರು ಈ ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ರಾಹುತನಕಟ್ಟೆಯಿಂದ ದುರ್ಮಿಗೆ ತೆರಳುವ ಮಾರ್ಗ ಬಹುಪಾಲು ಸಿಮೆಂಟ್ ರಸ್ತೆಯಿದ್ದು, ಮಧ್ಯದಲ್ಲಿ ಡಾಂಬಾರು ರಸ್ತೆ ಮಾಡಲಾಗಿದೆ. ಕೆಲ ವರ್ಷದ ಹಿಂದೆ ಮಾಡಲಾಗಿದ್ದ ಡಾಂಬಾರು ರಸ್ತೆ ಕ್ರಮೇಣ ಕಿತ್ತು ಹೋಗಿದ್ದು, ಇದನ್ನು ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಬೈಂದೂರು ಪಟ್ಟಣ ಪಂಚಾಯತಿಗೆ ಬೇಡಿಕೆ ಇರಿಸಿದ್ದರು. ಆದರೆ ಸತತ ಮನವಿಯ ಬಳಿಕವೂ ಸ್ಪಂದಿಸದ ಕಾರಣ ಸುಮಾರು 15 ಮಂದಿ ದುರ್ಮಿಯ ತಿರಂಗಾ ಫ್ರೆಂಡ್ಸ್ ಸದಸ್ಯರು ಹಾಗೂ ಗ್ರಾಮಸ್ಥರು ಒಂದುಗೂಡಿ ತಾತ್ಕಾಲಿಕವಾಗಿ ರಸ್ತೆಯ ಹೊಂಡಗಳನ್ನು ಮುಚ್ಚಿದ್ದಾರೆ. ಸಿಮೆಂಟ್ ಮಿಕ್ಸ್ ಬಳಸಿ ಸುಮಾರು ಒಂದು ಕಿ.ಮೀ ತನಕದ ರಸ್ತೆಗೆ ತೆಪೆ ಹಾಕಲಾಗಿದೆ. ಈ ಹಿಂದೆಯೂ ಯುವಕರು ದುರ್ಮಿ ಮಾರ್ಗದಲ್ಲಿ ತಾತ್ಕಾಲಿಕ ದುರಸ್ತಿ ಕಾರ್ಯ ನಡೆಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ (ರಿ) ಬೈಂದೂರು, ನಾಟಿ ಯಂತ್ರ ಬ್ಯಾಂಕ್ ಬೈಂದೂರು ಹಾಗೂ ಶ್ರೀ ಮುಕಾಂಭಿಕಾ ಭತ್ತ ಬೆಳೆಗರಾರ ಒಕ್ಕೂಟ ಬೈಂದೂರು ಇವರ ಸಹಯೋಗದಲ್ಲಿ ಯಾಂತ್ರಿಕ್ರತ ಭತ್ತ ಬೇಸಾಯ ಯಂತ್ರಶ್ರೀ ನಾಟಿಗೆ ಉತ್ತರ ಕನ್ನಡ ಜಿಲ್ಲೆಯ ನಿರ್ದೇಶಕ ಮಹೇಶ್ ಎಂ.ಡಿ ಚಾಲನೆ ನೀಡಿ ಮಾತನಾಡಿದರು. ಮಯ್ಯಾಡಿ, ಕಳವಾಡಿ ವೆಂಕಟ ಪೂಜಾರಿ ಯವರ ಗದ್ದೆಯಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಬೈಂದೂರು ತಾಲೂಕಿನ ಹಲವು ಗ್ರಾಮದಲ್ಲಿ ಹಲವಾರು ರೈತರು ‘ಯಂತ್ರಶ್ರೀ’ ಪದ್ಧತಿ ಅಡಿ ಭತ್ತದ ನಾಟಿ ಮಾಡುತ್ತಿದ್ದಾರೆ. ಭತ್ತದ ಸಸಿ ಮಡಿ ತಯಾರಿಯಿಂದ ಕೊಯ್ಲಿನವರೆಗೂ ಸಂಸ್ಥೆಯಿಂದಲೇ ಅಗತ್ಯ ಪರಿಕರ ಹಾಗೂ ಯಂತ್ರ ಒದಗಿಸಲಾಗುತ್ತಿದೆ. ಯೋಜನೆಯ ಕೃಷಿ ಮೇಲ್ವಿಚಾರಕರು, ಹಾಗೂ ಯಂತ್ರಶ್ರೀ ಯೋಧರು ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ ಈ ವರ್ಷ ಮುಂಗಾರು ಹಂಗಾಮಿನಲ್ಲಿ ಮೂರು ಸಾವಿರ ಎಕರೆ ಯಾಂತ್ರಿಕ್ರತ ಭತ್ತ ಬೇಸಾಯ ಮಾಡುವ ಯೋಜನೆ ಹೊಂದಿದ್ದೇವೆ ಎಂದು…

Read More