Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಅ.03: ವಿಧಾನ ಪರಿಷತ್ ಸ್ಥಳಿಯಾಡಳಿತ ಕ್ಷೇತ್ರದ ಉಪಚುನಾವಣೆ ಅ.21ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಬಿಜೆಪಿ, ಕಾಂಗ್ರೆಸ್ ಮತ್ತು ಎಸ್ಡಿಪಿಐ ಪಕ್ಷದ ಅಭ್ಯರ್ಥಿಗಳು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಿದರು. ಬಿಜೆಪಿಯಿಂದ ಕಿಶೋರ್ ಕುಮಾರ್ ಪುತ್ತೂರು, ಕಾಂಗ್ರೆಸ್ ನಿಂದ ರಾಜು ಪೂಜಾರಿ ಮತ್ತು ಎಸ್ಡಿಪಿಐನಿಂದ ಅನ್ವರ್ ಸಾದತ್ ಬಜತ್ತೂರು ನಾಮಪತ್ರ ಸಲ್ಲಿಸಿದರು. ಮಂಗಳವಾರ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು. ಇಂದು ಮೂರು ಅಭ್ಯರ್ಥಿಗಳ ನಾಮಪತ್ರ ಸೇರಿ ಒಟ್ಟು ನಾಲ್ಕು ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ. ಮಂಗಳೂರು ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೆ ನಾಮಪತ್ರ ಸಲ್ಲಿಸಲಾಗಿದೆ. ನಾಮಪತ್ರ ಸಲ್ಲಿಕೆಗೆ ಮುನ್ನ ಮಾತನಾಡಿದ ಬಿಜೆಪಿ‌ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ ಸಾಮಾನ್ಯ ಕಾರ್ಯಕರ್ತನಿಗೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ದೊಡ್ಡ ಜವಾಬ್ದಾರಿ ಸಿಕ್ಕಿದೆ. ಜವಾಬ್ದಾರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಮಾತನಾಡಿ, 20 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ , ಗುರುವಾರ ಧಾರ್ಮಿಕ ಕಾರ್ಯಕ್ರಮಳಿಗೆ ಚಾಲನೆ ನೀಡಲಾಯಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ನಾಗರಾಜ ಶೆಟ್ಟಿ , ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕರಾದ ಕೃಷ್ಣ ಮೂರ್ತಿ ನಾವಡ , ಸದಸ್ಯರುಗಳಾದ ನಾಗರಾಜ ಗಾಣಿಗ, ಪ್ರಸನ್ನ, ಎಸ್. ಮಣಿಕಂಠ ಬೈಂದೂರು, ಶಂಕರ, ಅಣ್ಣಪ್ಪ ಪೂಜಾರಿ ಉಪಸ್ಥಿತರಿದ್ದರು. ದೇವಸ್ಥಾನದಲ್ಲಿ ನವೆಂಬರ್ 3 ರಿಂದ ನವೆಂಬರ್ 12ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಹಾಗೂ  ನಿಟ್ಟೆ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಫುಟ್ಬಾಲ್  ಪಂದ್ಯಾಟದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ . ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ಶಿಕ್ಷಣ ಇಲಾಖೆ ) ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇದರ ವತಿಯಿಂದ “ಜೀವವಿರೋಧಿ ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಿ, ಲಿಂಗ ಸಮಾನತೆ ಸಾಧಿಸಿ” ಎಂಬ ಶೀರ್ಷಿಕೆಯಡಿಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು – ಪ್ರೌಢಶಾಲೆ ವಿಭಾಗ, ಬಜಗೋಳಿಯಲ್ಲಿ ಅಕ್ಟೋಬರ್ 2ರಿಂದ 8 ರವರೆಗೆ ನಡೆಯುವ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರವು ಜ್ಯೋತಿ ಪ್ರಜ್ವಲನದ ಮೂಲಕ ವಿದ್ಯುಕ್ತವಾಗಿ ಉದ್ಘಾಟನೆಗೊಂಡಿತು. ಉದ್ಘಾಟಕರಾಗಿ ಆಗಮಿಸಿದ ರಾಜ್ಯ ಕ್ರಷರ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಉದ್ಯಮಿಯಾದ ಡಾ. ರವೀಂದ್ರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಿಂದಲೇ ವ್ಯಕ್ತಿತ್ವವನ್ನು ಅರಳಿಸುವ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕೇವಲ ನಮಗಾಗಿ ಬದುಕದೆ ಇತರರಿಗಾಗಿ, ಸಮಾಜ ಕಾರ್ಯಕ್ಕಾಗಿ ಜೀವನವನ್ನು ಮೀಸಲಿಡಬೇಕು. ಎನ್‌ಎಸ್‌ಎಸ್ ವಿದ್ಯಾರ್ಥಿಗಳಲ್ಲಿ ನಾಗರಿಕ ಜವಾಬ್ದಾರಿಯ ಪ್ರಜ್ಞೆ ಬೆಳೆಸುತ್ತದೆ ಎಂದು ನುಡಿದರು. ದಿಕ್ಸೂಚಿ ಭಾಷಣಗೈದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಶಾಲೆಯಲ್ಲಿ ಮಹಾತ್ಮಗಾಂಧೀಜಿ ಅವರ 155ನೇ ಮತ್ತು ಲಾಲ್ ಬಹದ್ದೂರ್  ಶಾಸ್ತ್ರಿ ಅವರ 120ನೇ ಜನ್ಮದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮ ಶಾಲಾ ಆವರಣ ಸ್ವಚ್ಛತೆಯೊಂದಿಗೆ ಆರಂಭಗೊಂಡಿತು ಮಹಾನ್ ಚೇತನರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಲಾಯಿತು. ಎಲ್ಲರೂ ಸಾಮೂಹಿಕವಾಗಿ ಸರ್ವಧರ್ಮ ಪ್ರಾರ್ಥನೆ ಮತ್ತು ಭಜನೆಯಲ್ಲಿ ಪಾಲ್ಗೊಂಡರು. ಸಭೆಯಲ್ಲಿ ಆಡಳಿತ ಮಂಡಳಿ ಅಧಿಕಾರಿ ರೆನಿಟಾ ಲೋಬೊ, ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ, ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ತರವಾದ ಪಾತ್ರ ವಹಿಸಿದ್ದ ಗಾಂಧೀಜಿಯವರನ್ನು ದೇವರಂತೆಯೇ ಆರಾಧಿಸುತ್ತಿದ್ದೆವು. ಆದರೆ ಬದಲಾದ ಕಾಲಘಟ್ಟದಲ್ಲಿ ರಾಜಕೀಯ ದ್ವೇಷಗಳಿಂದಾಗಿ ಮಹಾತ್ಮ‌ಗಾಂಧೀಜಿ ಅವರನ್ನು ಖಳನಾಯಕನಾಗಿ ಬಿಂಬಿಸಲಾಗುತ್ತಿರುವುದು ಅತ್ಯಂತ ಕಳವಳಕಾರಿ ಬೆಳವಣಿಗೆ ಎಂದು ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಹೇಳಿದರು. ಅವರು ವಿವಿಧ ಮಂಡಳಿ ಆಡಳಿತದ ಹೆಮ್ಮಾಡಿ ಜನತಾ ಪ್ರೌಢ ಶಾಲೆಯಲ್ಲಿ ಬುಧವಾರ ಜರುಗಿದ ಗಾಂಧಿ ಜಯಂತಿ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು‌. ಧರ್ಮ ರಾಜಕಾರಣದ ಕೆಟ್ಟ ಶಕ್ತಿಗಳು ಯುವ ಸಮುದಾಯದ ಮಧ್ಯೆ ಗಾಂಧೀಜಿಯ ಬಗ್ಗೆ ಅಪಪ್ರಚಾರಗಳು, ಅಸಹನೀಯ ಬರಹಗಳನ್ನು ಭಿತ್ತರಿಸಿ ಈ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವಮಾನದ ಪೂರ್ತಿ ಸಮಯವನ್ನು ಮೀಸಲಿಟ್ಟ ಗಾಂಧೀಜಿಯವರ ವ್ಯಕ್ತಿತ್ವ ಹರಣ ಮಾಡುತ್ತಿದೆ. ಈ ದೇಶದ ಮುಂದಿನ ಪ್ರಜೆಗಳಾದ ನೀವೆಲ್ಲರೂ ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳು, ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳನ್ನು ತಿಳಿದುಕೊಳ್ಳುವ ಮೂಲಕ ಗಾಂಧೀಜಿಯವರ ವಿಚಾರಧಾರೆ, ಆದರ್ಶ, ಚಳವಳಿಗಳನ್ನು ಸದಾ ಜೀವಂತವಾಗಿರಿಸುವ ಕಾಯಕದಲ್ಲಿ ತೊಡಗಿಕೊಳ್ಳಬೇಕು ಎಂದರು. ಕುಂದಾಪುರ ಸಿಟಿ ಜೆಸಿಐ ಅಧ್ಯಕ್ಷ ರಾಘವೇಂದ್ರ ಕುಲಾಲ್‌…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರ ಕಛೇರಿ (ಆಡಳಿತ) ಮಂಗಳೂರು ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಮತ್ತು ಮಂಗಳೂರು ದಕ್ಷಿಣ ವಲಯ, ಎಸ್‌ಡಿಎಮ್ ಮಂಗಳಜ್ಯೋತಿ ಸಮಗ್ರ ಶಾಲೆ ವಾಮಂಜೂರು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 06 ಚಿನ್ನ, 01 ಬೆಳ್ಳಿ, 01 ಕಂಚು ಒಟ್ಟು 08 ಪದಕಗಳೊಂದಿಗೆ 17 ವರ್ಷ ವಯೋಮಿತಿಯ ಬಾಲಕರ ತಂಡ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುತ್ತಾರೆ. ಮುಂದಿನ ತಿಂಗಳು ನಡೆಯುವ ರಾಜ್ಯಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯಿಂದ 07 ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ. ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಆ.1ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಡಾ. ಎನ್.ಎಸ್.ಎ.ಎಂ ಪದವಿ ಪೂರ್ವ ಕಾಲೇಜು ನಿಟ್ಟೆ, ಕಾರ್ಕಳ ಇವರ ಸಹಭಾಗಿತ್ವದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಕುಂದಾಪುರ ವಲಯವು ಉಡುಪಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಮುಂದೆ ನಡೆಯುವ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಆಯ್ಕೆಗೊಂಡಿದೆ. ಎಕ್ಸಲೆಂಟ್ ವಿದ್ಯಾಸಂಸ್ಥೆಯ ಪುಟ್ಬಾಲ್ ಪ್ರತಿಭೆಗಳಾದ ಪ್ರಥಮ್ ಎಸ್. ಶೆಟ್ಟಿ ಮತ್ತು ಎಲಿಕ್ ಅಬ್ರಾನ್ ದಾಲ್‌ಮೇದಾ ಅವರು ಜಿಲ್ಲಾತಂಡದ ಅತ್ಯುತ್ತಮ ಆಟಗಾರರಾಗಿ ಹೊರಹೊಮ್ಮಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಕ್ಸಲೆಂಟ್ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದದ್ದಲ್ಲದೆ, ಸಾಂಸ್ಕೃತಿಕ, ಪ್ರತಿಭಾ ಕಾರಂಜಿ ಹಾಗೂ ಕ್ರೀಡಾಕ್ಷೇತ್ರದಲ್ಲೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ತನ್ನ ಹಿರಿಮೆಯ ಛಾಪನ್ನು ಮೂಡಿಸಿ ಅದೆಷ್ಟೊ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡಿದೆ. ಅವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕಥೋಲಿಕ್ ಸಭಾ ಉಡುಪಿ ಪ್ರದೇಶ, ಕೊಸೆಸಾಂವ್ ಮಾತೆಯ ಚರ್ಚ್ ಘಟಕ ಗಂಗೊಳ್ಳಿ, ಕಥೋಲಿಕ್ ಸ್ತ್ರೀ ಸಂಘಟನೆ ಗಂಗೊಳ್ಳಿ, ಯುವ ಆಯೋಗ, ಭಾರತೀಯ ಕಥೋಲಿಕ್ ಯುವ ಸಂಚಾಲನ ಗಂಗೊಳ್ಳಿ ಇವರ ಆಶ್ರಯದಲ್ಲಿ ಸ್ವಸ್ಥ ಹಾಗೂ ನಿರ್ಮಲ ಪರಿಸರ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಗಂಗೊಳ್ಳಿಯಲ್ಲಿ ಬುಧವಾರ ನಡೆಯಿತು. ಗಂಗೊಳ್ಳಿಯ ಬಂದರು ಬಸ್ ನಿಲ್ದಾಣದಿಂದ ಗಂಗೊಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದವರೆಗೆ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿರುವ ಕಸಕಡ್ಡಿ ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಿದ ಸಂಘಟನೆಗಳ ಕಾರ್ಯಕರ್ತರು, ಸ್ವಸ್ಥ ಹಾಗೂ ನಿರ್ಮಲ ಪರಿಸರಕ್ಕೆ ಜನರು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕಥೋಲಿಕ್ ಸಭಾ ಗಂಗೊಳ್ಳಿ ಘಟಕದ ಅಧ್ಯಕ್ಷ ಎಡ್ವರ್ಡ್ ಫೆರ್ನಾಂಡಿಸ್, ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಸ್ಥಾಪಕ ಅಧ್ಯಕ್ಷ ಕಿರಣ್ ಕ್ರಾಸ್ತಾ, ಗಂಗೊಳ್ಳಿ ಚರ್ಚಿನ ಧರ್ಮಗುರು ರೆ.ಫಾ. ರೋಶನ್ ಥಾಮಸ್ ಡಿಸೋಜ ಮತ್ತು ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಧಾನ ಪರಿಷತ್ ದ.ಕ – ಉಡುಪಿ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಎಸ್‌. ರಾಜು ಪೂಜಾರಿಯವರಿಗೆ ಟಿಕೆಟ್ ಲಭಿಸಿದೆ. ಟಿಕೇಟಿಗಾಗಿ ಹಲವಾರು ಸ್ಪರ್ಧಿಗಳು ಆಕಾಂಕ್ಷಿಗಳಿದ್ದರೂ ಪೈಪೋಟಿ ನಡೆದಿದ್ದರೂ ಕೊನೆಯ ಗಳಿಗೆಯಲ್ಲಿ ಎಸ್. ರಾಜು ಪೂಜಾರಿ ಅವರಿಗೆ ಟಿಕೆಟ್ ಲಭಿಸಿದೆ. ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗುರುತಿಸಿಕೊಂಡಿರುವ ಎಸ್. ರಾಜು ಪೂಜಾರಿಯವರು ವಿದ್ಯಾರ್ಥಿ ದಿಸೆಯಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡವರು. ಮರವಂತೆ ಗ್ರಾಮ ಪಂಚಾಯತ್ ಸದಸ್ಯರಾಗಿ ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ, ಉಡುಪಿ ಜಿಲ್ಲಾ ಪಂಚಾಯಿತಿನ ಸದಸ್ಯರಾಗಿ, ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾಗಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಕರ್ತವ್ಯವನ್ನು ನಿರ್ವಹಿಸಿದರು. ರಾಜಕೀಯ ಸಹಕಾರ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಎಸ್‌.ರಾಜು ಪೂಜಾರಿ ಅವರಿಗೆ ಪರಿಷತ್ತಿನ ಉಪಚುನಾವಣೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟದೆ.

Read More