Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ ಮಟ್ಟದ ಅಬಾಕಸ್ ಸ್ಪರ್ದೆಯಲ್ಲಿ ಕುಂದಾಪುರದ ಓಕ್‌ವುಡ್ ಇಂಡಿಯನ್ ಸ್ಕೂಲ್‌ನ 4ನೇ ತರಗತಿಯ ವಿದ್ಯಾರ್ಥಿ ಲಕ್ಷ್ ರಾಜೇಶ್ ಪ್ರಥಮ ಸ್ಥಾನ ಪಡೆದಿದ್ದಾನೆ. ಇತ್ತೀಚಿಗೆ ಚಿತ್ರದುರ್ಗದಲ್ಲಿ ನಡೆದ 19ನೇ ರಾಜ್ಯಮಟ್ಟದ ಐಡಿಯಲ್ ಪ್ಲೇ ಅಬಾಕಸ್ ಮೆಂಟಲ್ ಅರಿಥಮೆಟಿಕ್‌ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದನು. ಈತನಿಗೆ ಕುಂದಾಪುರದ ಸೆಂಟರ್ ಮುಖ್ಯಸ್ಥರಾದ ಪ್ರಸನ್ನ ಕೆ. ಬಿ. ಮತ್ತು ಮಹಾಲಕ್ಷ್ಮಿ ಅವರು ತರಬೇತಿ ನೀಡಿರುತ್ತಾರೆ. ಈತ ಅರಾಟೆಯ ರೇಷ್ಮಾ ಮತ್ತು ರಾಜೇಶ್ ದಂಪತಿಯ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ (ಎಫ್.ಎನ್.ಎಸ್) ಯೋಜನೆಯಡಿ ತಾಂತ್ರಿಕ ಸಹಾಯಕರ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಬಿ.ಎಸ್.ಸಿ (ಕೃಷಿ) ಪದವೀಧರರಾಗಿರುವ, ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರುವ ಹಾಗೂ ಕೃಷಿ ಸಂಶೋಧನೆ ಮತ್ತು ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವ ಇರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2 ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಹಾಗೂ ಮಾಹೆ ವಿ.ವಿ ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಕ್ರೀಡಾ ಪ್ರದರ್ಶನವನ್ನು ನೀಡಲಿದ್ದಾರೆ. ಸಾರ್ವಜನಿಕರು ಈ ಕ್ರೀಡಾಸ್ಪರ್ಧೆಗಳನ್ನು ವೀಕ್ಷಿಸುವುದರೊಂದಿಗೆ ಕ್ರೀಡಾಪಟುಗಳನ್ನು ಉತ್ತೇಜಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭದ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಕ್ರೀಡಾ ಚಟುವಟಿಕೆಯಲ್ಲಿ ಉತ್ತಮ ಪ್ರದರ್ಶನ ನೀಡಿ, ಉನ್ನತ ಸ್ಥಾನ ಪಡೆದ 8 ಕ್ರೀಡಾ ಸ್ಪರ್ಧಿಗಳು ಅಥವಾ ತಂಡಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾ ಸ್ಪರ್ಧೆಗಳನ್ನು ವೀಕ್ಷಿಸಲು ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ. ಜಿಲ್ಲೆಯ ಕ್ರೀಡಾಭಿಮಾನಿಗಳು, ಕ್ರೀಡಾ ಪಟುಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕ್ರೀಡೆಗಳನ್ನು ಪ್ರೋತ್ಸಾಹಿಸಬೇಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕೆಡಿಎಫ್‌ ರಾಜ್ಯ ಮಟ್ಟದ ಇಂಟರ್‌ ಡೊಜೋ ಕರಾಟೆ ಚಾಂಪಿಯನ್‌ಶಿಪ್‌ 2025ರಲ್ಲಿ ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್‌ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಅನ್ಸನ್‌ ಫರ್ನಾಂಡಿಸ್‌ ದ್ವಿತೀಯ ಸ್ಥಾನ ಪಡದಿದ್ದಾನೆ. ಈತ ಗಂಗೊಳ್ಳಿಯ ಪ್ರವೀಣ್‌ ಫೆರ್ನಾಂಡಿಸ್‌ ಮತ್ತು ಮೊಂತಿನ್‌ ಫೆರ್ನಾಂಡಿಸ್‌ ದಂಪತಿಯ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ ಹಾಗೂ ಮಣಿಪಾಲ್ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿಯ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸ್ಥಳಕ್ಕೆ ಭೇಟಿ ಮಾಡಿ, ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ನಿರ್ಮಾಣದ ವೆಲ್ಡಿಂಗ್ ಕಾಮಗಾರಿಯ ವೇಗವು ನಿರೀಕ್ಷಿತ ಮಟ್ಟದಲ್ಲಿ ಆಗದೇ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಅದರ ವೇಗವನ್ನು ಮತ್ತಷ್ಟು ಹೆಚ್ಚಿಸಲು ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು. ಕಬ್ಬಿಣದ ಗಡರ್ಸ್‌ ನಿರ್ಮಾಣದ ಕಾಮಗಾರಿಯು ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಅದನ್ನು ರೈಲ್ವೇ ಹಳಿಗಳ ಮೇಲ್ಭಾಗದಲ್ಲಿ ಸೇತುವೆಯಾಗಿ ನಿರ್ಮಿಸಲು ಅಗತ್ಯವಿರುವ ಸಿವಿಲ್ ಕಾಮಗಾರಿಗಳನ್ನು ಸಹ ತ್ವರಿತವಾಗಿ ಕೈಗೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಕೊಂಕಣ ರೈಲ್ವೆಯ ಸೀನೀಯರ್ ಇಂಜಿನಿಯರ್ ಗೋಪಾಲ ಕೃಷ್ಣ, ಗುತ್ತಿಗೆದಾರರು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮಾನವ ಸಂಘಜೀವಿಯಾಗಿದ್ದು, ಸಂಘಟನೆಗಳು ಪ್ರಾಮಾಣಿಕ, ಸತ್ಯ, ನಿಷ್ಠೆ ಮತ್ತು ಸಮಾಜಮುಖಿ ಚಿಂತನೆಗಳನ್ನು ಅಳವಡಿಸಿಕೊಂಡಾಗ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಂಘಟಿತ ಸಮಾಜ ನಿರ್ಮಾಣವಾಗಬೇಕಾದರೆ, ಸಂಘ ಸಂಸ್ಥೆಗಳ ಪಾತ್ರ ಮಹತ್ವದಾಗಿದೆ ಎಂದು ಲಯನ್ಸ್ ಪ್ರಾಂತೀಯ ಅಧ್ಯಕ್ಷ ಕುದ್ರುಕೋಡು ಜಗದೀಶ್‌ ಶೆಟ್ಟಿ ಹೇಳಿದರು. ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್‌ಗೆ ಅಧೀಕೃತ ಭೇಟಿಯ ಬಳಿಕ ಉಪ್ಪುಂದ ನಂದನವನದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಲಯನ್ಸ್ ಜಿಲ್ಲೆ 317ಸಿ, ಪ್ರಾಂತ್ಯ 6ರ ವ್ಯಾಪ್ತಿಯಲ್ಲಿ ಬರುವ ಹತ್ತು ಕ್ಲಬ್‌ಗಳು ಈ ವರ್ಷ ವಿವಿಧ ಭಾಗಗಳಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಸಂತಸ ತಂದಿದೆ. ಪ್ರಸಕ್ತ ವರ್ಷ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸುವುದರ ಮೂಲಕ ಸಾಮಾಜಿಕ ಕೈಂಕರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಸಮಾಜದ ದುರ್ಬಲರ ಸೇವೆಯಲ್ಲಿ ಕೈಜೋಡಿಸಿರುವುದು ಅರ್ಥಪೂರ್ಣವಾಗಿದೆ ಎಂದು ಎಲ್ಲಾ ಕ್ಲಬ್‌ಗಳ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಸತೀಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಸೇವೆಗಾಗಿ ಕ್ಲಬ್‌ನ ಪೂರ್ವಾಧ್ಯಕ್ಷರಾದ ಜಯಶೀಲ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮವು ಇತ್ತೀಚಿಗೆ ಜರುಗಿತು. ಈ ಕಾರ್ಯಕ್ರಮಕ್ಕೆ ಕುಂದಾಪುರದ ವಕೀಲರಾದ ಟಿ. ಬಾಲಚಂದ್ರ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಿ, ಈ ಸಂಸ್ಥೆಯಲ್ಲಿನ ವಿದ್ಯಾರ್ಥಿಗಳ ಶಿಸ್ತು ಮತ್ತು ಸಾಧನೆಯನ್ನು ನೋಡಿದಾಗ ದೇಶದ ಭವಿಷ್ಯದ ಬಗ್ಗೆ ಆಶಾಭಾವನೆ ಮೂಡುತ್ತಿದೆ. ದೇಶದ ಭವಿಷ್ಯವು ಶಿಸ್ತನ್ನು ಅವಲಂಬಿಸಿರುತ್ತದೆ. ಎಲ್ಲಾ ವಿದ್ಯಾಸಂಸ್ಥೆಗಳೂ ಈ ಮಾದರಿಯ ಶಿಸ್ತನ್ನು ತಮ್ಮೆಲ್ಲ ಕಾರ್ಯಚಟುವಟಿಕೆಗಳಲ್ಲಿ ಅಳವಡಿಸಿಕೊಂಡರೆ ದೇಶದ ಭವಿಷ್ಯ ಉಜ್ವಲಗೊಳ್ಳಲಿದೆ. ಯೋಗ, ಧ್ಯಾನ ಮತ್ತು ವ್ಯಾಯಾಮಗಳು ಮನಸ್ಸನ್ನು ಪ್ರಫುಲ್ಲಗೊಳಿಸುತ್ತವೆ. ರೋಗಗಳಿಂದ ನಮ್ಮನ್ನು ದೂರ ಉಳಿಸುತ್ತವೆ. ಎಷ್ಟೇ ಯೋಗ್ಯತೆ ಇದ್ದರೂ ಉತ್ತಮ ಆರೋಗ್ಯ ಹೊಂದಿಲ್ಲ್ಲದಿದ್ದರೆ ಬದುಕು ನಿರರ್ಥಕವಾಗುತ್ತದೆ. ದೇಶದ ಭಾವಿ ಪ್ರಜೆಗಳು ದೇಶ ಮತ್ತು ಜಗತ್ತಿನ ಬಗ್ಗೆ ಚಿಂತನೆ ನಡೆಸುತ್ತಾ, ಒಳಿತು ಕೆಡುಕುಗಳನ್ನು ಗುರುತಿಸುತ್ತಾ ದೇಶವನ್ನು ಉತ್ತಮ ಪ್ರಜಾಸತ್ತಾತ್ಮಕ ದೇಶವನ್ನಾಗಿ ರೂಪಿಸಬೇಕು ಎಂದು ಕರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ ಕುಂದಾಪುರ ವತಿಯಿಂದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ 2024-25ರ ರಕ್ಷಕ – ಶಿಕ್ಷಕ ಸಭೆಯ ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಡಾ. ಎ. ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಆಪ್ತ ಸಮಾಲೋಚಕಿ ವಿದ್ಯಾಶ್ರೀ ನಾಗರಾಜ್ ಅವರು ಮಾತನಾಡಿ, ಇವರು ನಮ್ಮ ಮಕ್ಕಳೇ ನಮ್ಮ ಅಮೂಲ್ಯವಾದ ಆಸ್ತಿ. ನಮ್ಮನ್ನು ಬಿಂಬಿಸುವ ಅವರನ್ನು ಬಾಲ್ಯದಿಂದಲೇ ತಿದ್ದುತ್ತಾ, ಸನ್ಮಾರ್ಗದಲ್ಲಿ ನಡೆಸುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಎಂದು ತಿಳಿಸಿದರು. ಸಭೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ರೇಷ್ಮಾ ಡಿಸೋಜ ಅವರು ಉಪಸ್ಥಿತರಿದ್ದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜ ಸರ್ವರನ್ನು ಸ್ವಾಗತಿಸಿದರು. ಶಿಕ್ಷಕಿಯರಾದ ಪದ್ಮಾ ಅವರು ವಂದನಾರ್ಪಣೆ ಗೈದರು ರೂಪಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Read More

ಕುಂದಾಪ್ರ  ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ ಮಟ್ಟದ ಅಬಾಕಸ್ ಸ್ಪರ್ದೆಯಲ್ಲಿ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿಯ ವಿದ್ಯಾರ್ಥಿ ಆರುಶ್ ಜಿ.ಪಿ. ದ್ವಿತೀಯ ಸ್ಥಾನ ಪಡೆದಿದ್ದಾನೆ. ಈತನಿಗೆ ಪ್ರಸನ್ನ ಕೆ., ಮಹಾಲಕ್ಷ್ಮೀ ಹಾಗೂ ಸುನೀತ ಅವರು ತರಬೇತಿ ನೀಡಿದ್ದರು. ಈತ ಗಂಗೊಳ್ಳಿಯ ಪ್ರಕಾಶ ಆಚಾರ್ಯ ಮತ್ತು ಶಿಕ್ಷಕಿ ಸವಿತಾ ಆಚಾರ್ಯ ದಂಪತಿ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಸ್ಕಾರ ಭರಿತ ಸೃಜನಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮಾಜಕ್ಕೆ ಉತ್ತಮವಾದ ಸಂದೇಶವನ್ನು ನೀಡಲು ಖಂಡಿತ ಸಾಧ್ಯವಿದೆ . ಅದಕ್ಕೆ ತಕ್ಕ ಇಚ್ಚಾ ಶಕ್ತಿಯನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಸಕಲೇಶಪುರದ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು ಅಭಿಪ್ರಾಯಪಟ್ಟರು. ಅವರು ನಾಯಕವಾಡಿ ಗುಜ್ಜಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ  ಮಾತನಾಡಿ, ನಮ್ಮಲ್ಲಿರುವ ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡು ಆ ನಿಟ್ಟಿನಲ್ಲಿ ಬೆಳೆದರೆ ಇಡೀ ಸಮಾಜ ತಿರುಗಿ ನೋಡುವಂತಹ ಅದ್ಭುತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಿದೆ. ಅದಕ್ಕೆ ಶ್ರೀ ಚೆನ್ನಬಸವೇಶ್ವರ ಯುವಕಮಂಡಲದವರು ಸಾಕ್ಷಿಯಾಗಿದ್ದಾರೆ ಎಂದು ಹೇಳಿದರು. ಕೊಲ್ಲೂರು ಆರಕ್ಷಕ ಠಾಣಾ ಸಬ್ ಇನ್ಸ್ಪೆಕ್ಟರ್  ಸುಧಾರಾಣಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಿಗ್ಮ ಇನ್ಫೋ ಟೆಕ್‌ನ ವಿನೋದ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.  ಮುಖ್ಯ ಅತಿಥಿಯಾಗಿ ಉದ್ಯಮಿ ಶಿವ ಆರ್. ಪೂಜಾರಿ, ಉದ್ಯಮಿ ರಾಮನಾಥ್ ನಾಯಕ್  ಗಂಗೊಳ್ಳಿ,…

Read More